Tag: bengaluru rural

  • ರಂಗೇರಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬೃಹತ್ ಮೆರವಣಿಗೆ ಮೂಲಕ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

    ರಂಗೇರಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರ – ಬೃಹತ್ ಮೆರವಣಿಗೆ ಮೂಲಕ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

    – ರಾಮನಗರದಲ್ಲಿ ಡಿಕೆ ಬ್ರದರ್ಸ್ ಶಕ್ತಿ ಪ್ರದರ್ಶನ
    – ಅಣ್ಣ, ಅತ್ತಿಗೆ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿ.ಕೆ.ಸುರೇಶ್

    ರಾಮನಗರ: ಲೋಕಸಭಾ ಚುನಾವಣೆಗೆ ರಣಕಣ ರಂಗೇರಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ (D.K.Suresh) ಗುರುವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ರಾಮನಗರದಲ್ಲಿ (Ramanagara) ಬೃಹತ್ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶಿಸಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಮನೆದೇವರಿಗೆ ಡಿ.ಕೆ.ಸುರೇಶ್ ಪೂಜೆ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಕನಕಪುರದ ಕೆಂಕೆರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ರಾಮನಗರದ ಚಾಮುಂಡೇಶ್ವರಿ ದೇವರ ದರ್ಶನ ಪಡೆದರು. ನಗರದ ಪ್ರಮುಖ ಮಸೀದಿ, ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಮನೆಯಲ್ಲಿ ಅಣ್ಣ ಡಿ.ಕೆ.ಶಿವಕುಮಾರ್ ಹಾಗೂ ಅತ್ತಿಗೆ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

    ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಡಿ.ಕೆ.ಸುರೇಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮಟೆ, ವಾದ್ಯ, ಪಟ್ಟದ ಕುಣಿತ, ವೀರಗಾಸೆ ಮೂಲಕ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್‌ಗೆ ಸ್ವಾಗತ ಕೋರಿದರು.

    ನಂತರ ಬೃಹತ್ ಮೆರವಣಿಗೆ ಹೊರಟರು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಡಿ.ಕೆ.ಸುರೇಶ್‌ಗೆ ಸಚಿವ ರಾಮಲಿಂಗಾರೆಡ್ಡಿ, ಎಂಎಲ್‌ಸಿ ರವಿ, ಕುಣಿಗಲ್ ಶಾಸಕ ರಂಗನಾಥ್, ಶಾಸಕ ಬಾಲಕೃಷ್ಣ ಸಾಥ್ ನೀಡಿದರು. ಇದನ್ನೂ ಓದಿ: ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ

    ಮೆರವಣಿಗೆ ಡಿಸಿ ಕಚೇರಿ ವರೆಗೂ ಸಾಗಿತು. ನಂತರ ಚುನಾವಣಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರಗೆ ಡಿ.ಕೆ.ಸುರೇಶ್ ಎರಡು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಗೆ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಬಾಲಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಆನೆಕಲ್ ಶಾಸಕ ಶಿವಣ್ಣ ಸಾಥ್ ನೀಡಿದರು.

  • Exclusive: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಕುಕ್ಕರ್‌, ಸೀರೆ ಆರೋಪಕ್ಕೆ ಡಿ.ಕೆ.ಸುರೇಶ್‌ ಟಾಂಗ್‌

    Exclusive: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಕುಕ್ಕರ್‌, ಸೀರೆ ಆರೋಪಕ್ಕೆ ಡಿ.ಕೆ.ಸುರೇಶ್‌ ಟಾಂಗ್‌

    – ಹೆಚ್‌ಡಿಕೆ ಆರೋಗ್ಯ ಸರಿಯಿಲ್ಲ.. ಅವರು ಬೇಗ ಗುಣಮುಖರಾಗಲಿ
    – ಕೋವಿಡ್‌ ವೇಳೆ ಇಡೀ ರಾಜ್ಯವೇ ಮಲಗಿದ್ದಾಗ ನಾನೊಬ್ಬನೇ ಓಡಾಡಿದ್ದೇನೆ

    ಬೆಂಗಳೂರು: ಕುಮಾರಸ್ವಾಮಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಹೇಳುವುದೇ ಅವರ ಉದ್ಯೋಗ ಎಂದು ಸಂಸದ ಡಿ.ಕೆ.ಸುರೇಶ್‌ ಟಾಂಗ್‌ ಕೊಟ್ಟರು.

    ಲೋಕಸಭಾ ಚುನಾವಣೆ ಹಿನ್ನೆಲೆ ‘ಪಬ್ಲಿಕ್‌ ಟಿವಿ’ ಜೊತೆ ಮಾಡಿದ ಅವರು, ಜೆಡಿಎಸ್‌ ನಾಯಕರ ಮನೆಗೆ ಹೋಗುವುದು, ಪಕ್ಷಕ್ಕೆ ಅವರನ್ನು ಸೆಳೆಯುವುದು, ಬೆದರಿಕೆ ಹಾಕುವ ಅಭ್ಯಾಸ ಡಿ.ಕೆ.ಶಿವಕುಮಾರ್‌ಗಾಗಲಿ ಅಥವಾ ಡಿ.ಕೆ.ಸುರೇಶ್‌ಗಾಗಲಿ ಇಲ್ಲ. ಆರೋಪ ಮಾಡುವುದು ರಾಜಕೀಯದ ಹುಟ್ಟು ಗುಣ. ಹೆಚ್‌.ಡಿ.ಕುಮಾರಸ್ವಾಮಿ ಅವರು ವೈದ್ಯಕೀಯ ಸೇವೆಯಲ್ಲಿದ್ದಾರೆ. ಆರೋಗ್ಯ ಸರಿಯಿಲ್ಲ. ಅವರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: Exclusive: ಕ್ಷೇತ್ರದ ಜನರ ನಾಡಿಮಿಡಿತ ನನಗೆ ಗೊತ್ತು.. ಡಾ.ಮಂಜುನಾಥ್‌ ಮಿಡಿತ ಬೇಕಾಗಿಲ್ಲ: ಡಿ.ಕೆ.ಸುರೇಶ್‌

    ಭಯ ಅನ್ನೋದು ಭಗವಂತನ ಸೃಷ್ಟಿ. ಜನ ನನ್ನ ಹಿಂದೆ ಇರೋವರೆಗೂ ಯಾರಿಗೂ ಹೆದರುವ ಪ್ರಶ್ನೆ ಇಲ್ಲ ಎಂದರು. ಕುಕ್ಕರ್‌, ಸೀರೆ ಹಂಚುವ ಆರೋಪ ಕುರಿತು ಮಾತನಾಡಿ, ಅದನ್ನು ಯಾರು ಹಂಚಿದ್ದಾರೆ ಎಂಬುದನ್ನು ನೀವೇ ಕೇಳಿಕೊಳ್ಳಬೇಕು. ಕೆಲವರು ಹಂಚುತ್ತಿರುತ್ತಾರೆ. ಕೆಲವರು ಒಳಗೊಳಗೆ ಏನೇನೊ ಮಾಡ್ತಿರುತ್ತಾರೆ. ಕುಮಾರಸ್ವಾಮಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಹೇಳುವುದೇ ಅವರ ಉದ್ಯೋಗ ಎಂದು ತಿರುಗೇಟು ನೀಡಿದರು.

    ಈಗ ರಂಜಾನ್‌ ಹಬ್ಬ ಇದೆ. ಷರಿಯತ್‌ ಗೋಸ್ಕರ ಆ ಕ್ಷೇತ್ರದ ಶಾಸಕರು ಪ್ರತಿ ವರ್ಷ ಉಡುಗೊರೆ ಕೊಡ್ತಾರೆ. ಅದನ್ನು ಬುಕ್‌ ಮಾಡಿ ತಂದಿಟ್ಟಿದ್ದಾರೆ. ಈ ಸಂದರ್ಭದಲ್ಲೇ ಚುನಾವಣೆ ಬಂದಿದೆ. ಅದರಲ್ಲಿ ಸಿಂಬಲ್‌ ಏನು ಇಲ್ಲ. ಚುನಾವಣಾ ಆಯೋಗಕ್ಕೆ ಏನು ಸಲ್ಲಿಕೆ ಮಾಡಬೇಕೊ ಅದನ್ನ ಮಾಡ್ತಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲಾ ಇದ್ದಾರೆ; ಕುಟುಂಬ ರಾಜಕಾರಣ ಆರೋಪಕ್ಕೆ ಡಾ.ಮಂಜುನಾಥ್‌ ತಿರುಗೇಟು

    100% ಗ್ಯಾರಂಟಿ ನಮ್ಮ ಕೈ ಹಿಡಿಯುತ್ತೆ. ಮಹಿಳೆಯರಷ್ಟೇ ಅಲ್ಲ, ಕುಟುಂಬದ ಎಲ್ಲಾ ಸದಸ್ಯರು ನಮ್ಮ ಪರ ನಿಲ್ಲುತ್ತಾರೆ. 5 ಗ್ಯಾರಂಟಿಗಳು ರಾಜ್ಯದ ಮುಂದಿನ ಚಿತ್ರಣವನ್ನು ಬದಲಾಯಿಸುತ್ತೆ. ಯಾವ ರೀತಿ ಆರ್ಥಿಕ ಬದಲಾವಣೆ ಆಗುತ್ತೆ ಎಂಬುದನ್ನ ನೀವೇ ನೋಡ್ತೀರಿ ಎಂದು ಭರವಸೆ ವ್ಯಕ್ತಪಡಿಸಿದರು.

    ಮುನಿರತ್ನ ಅವರು ನನ್ನ ಜೊತೆ ಇದ್ದ ಸಂದರ್ಭದಲ್ಲಿ ಸರ್ಕಾರದ ಮಟ್ಟದಲ್ಲಿ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿಸಿಕೊಟ್ಟಿದ್ದೇನೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದೇನೆ. ನೂರಾರು ಕೋಟಿ ಅನುದಾನ ಅವರಿಗೆ ಸಿಗುವಂತೆ ಮಾಡಿದ್ದೇನೆ. ಇವತ್ತೇನಾದರು ಮುನಿರತ್ನ ಅವರು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿಕೊಂಡರೆ, ಅದರಲ್ಲಿ ನನ್ನ 50% ಪಾಲಿದೆ. ನಾನು ಅವರ ಜೊತೆ ಕೈಜೋಡಿಸಿ ಕೆಲಸ ಮಾಡಿದ್ದೇನೆ. ಅದು ಕಾಂಗ್ರೆಸ್‌ ಕೊಟ್ಟ ಕೊಡುಗೆ. ಮುನಿರತ್ನ ಅವರ ವೈಯಕ್ತಿಕ ಅಲ್ಲ. ನಾನು ಕೂಡ ಅದರಲ್ಲಿ ಪಾಲುದಾರ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

    ಕೋವಿಡ್‌ ಸಂದರ್ಭದಲ್ಲಿ ಇಡೀ ರಾಜ್ಯ ಮಲಗಿತ್ತು. ಈ ಡಿ.ಕೆ.ಸುರೇಶ್‌ ಒಬ್ಬನೇ ರಸ್ತೆಯಲ್ಲಿ ಓಡಾಡುತ್ತಿದ್ದದ್ದು. ದೇಶದಲ್ಲಿ ಎಲ್ಲರೂ ತಮ್ಮ ಭಾಷಣಗಳನ್ನು ಆನ್‌ಲೈನ್‌ ಮುಖಾಂತರ ಮಾಡುತ್ತಾ ಅವರ ಕೆಲಸ ಕಾರ್ಯ ನಿರ್ವಹಿಸುತ್ತಿದ್ದರು. ನಾನು ರೈತರು, ರೋಗಿಗಳ ಪರ ನಿಂತಿದ್ದೇನೆ. ನನ್ನ ಜೀವ ಹೋದರೂ ಚಿಂತೆಯಿಲ್ಲ ಅಂತಾ ಐಸಿಯುಗೆ ಹೋಗಿ ರೋಗಿಗಳ ಕಷ್ಟ ಆಲಿಸಿದ್ದೇನೆ. ಕೋವಿಡ್‌ ಸಂದರ್ಭದಲ್ಲಿ ನಾನು ಮಾಡಿದ ಕೆಲಸಗಳ ಬಗ್ಗೆ ಹೆಮ್ಮೆ ಇದೆ ಎಂದು ಕರಾಳ ಸನ್ನಿವೇಶದಲ್ಲಿ ತಮ್ಮ ಬದ್ಧತೆ ನೆನಪಿಸಿಕೊಂಡರು.

  • Exclusive: ಕ್ಷೇತ್ರದ ಜನರ ನಾಡಿಮಿಡಿತ ನನಗೆ ಗೊತ್ತು.. ಡಾ.ಮಂಜುನಾಥ್‌ ಮಿಡಿತ ಬೇಕಾಗಿಲ್ಲ: ಡಿ.ಕೆ.ಸುರೇಶ್‌

    Exclusive: ಕ್ಷೇತ್ರದ ಜನರ ನಾಡಿಮಿಡಿತ ನನಗೆ ಗೊತ್ತು.. ಡಾ.ಮಂಜುನಾಥ್‌ ಮಿಡಿತ ಬೇಕಾಗಿಲ್ಲ: ಡಿ.ಕೆ.ಸುರೇಶ್‌

    ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆಗೆ (Lok Sabha Election 2024) ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ದೇಶದ ಗಮನ ಸೆಳೆಯುವಂತಿದೆ. ಹ್ಯಾಟ್ರಿಕ್‌ ಗೆಲುವು ಸಾಧಿಸಿರುವ ಸಂಸದ ಡಿ.ಕೆ.ಸುರೇಶ್‌ (D.K.Suresh) ವಿರುದ್ಧ ವೈದ್ಯಲೋಕದಲ್ಲಿ ಖ್ಯಾತನಾಮರಾದ ಡಾ. ಸಿ.ಎನ್.ಮಂಜುನಾಥ್‌ (Dr. C.N.Manjunath) ಕಣಕ್ಕಿಳಿದಿದ್ದಾರೆ. ಜಿದ್ದಾಜಿದ್ದಿ ಕಣದ ಬಗ್ಗೆ ‘ಪಬ್ಲಿಕ್‌ ಟಿವಿ’ ಜೊತೆ ಸಂಸದ ಡಿ.ಕೆ.ಸುರೇಶ್‌ ಮಾತನಾಡಿದ್ದಾರೆ.

    ಚುನಾವಣಾ ಹಿನ್ನೆಲೆಯಲ್ಲಿ ಪಬ್ಲಿಕ್‌ ಟಿವಿಯ ‘ಹಾಟ್‌ ಸೀಟ್‌’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಬಲ ವ್ಯಕ್ತಿ ನನ್ನ ವಿರುದ್ಧ ಸ್ಪರ್ಧಿಸುತ್ತಾರೆ ಅಂದುಕೊಂಡಿದ್ದೆ. ಆದರೆ ಡಾ. ಮಂಜುನಾಥ್‌ ಅವರನ್ನು ನಿಲ್ಲಿಸಿದ್ದಾರೆ. ಇಡೀ ಕ್ಷೇತ್ರದ ಜನರ ಮಿಡಿತ ನನಗೆ ಗೊತ್ತು. ಮಂಜುನಾಥ್‌ ಅವರ ಮಿಡಿತ ನನಗೆ ಬೇಕಾಗಿಲ್ಲ. ಅವರನ್ನ ನಾನು ವೈದ್ಯರಾಗಿ ನೋಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲಾ ಇದ್ದಾರೆ; ಕುಟುಂಬ ರಾಜಕಾರಣ ಆರೋಪಕ್ಕೆ ಡಾ.ಮಂಜುನಾಥ್‌ ತಿರುಗೇಟು

    ರಾಜಕೀಯ ಬಂದಾದ ಮೇಲೆ ಚುನಾವಣೆಗಳು ಸಹಜ. ಯಾವತ್ತಿನಿಂದ ಜನರು ನನ್ನನ್ನು ಆಶೀರ್ವದಿಸಿ ಕಳುಹಿಸಿಕೊಟ್ಟರೋ ಅವತ್ತಿನಿಂದ ಜನರ ಸೇವೆಯಲ್ಲಿದ್ದೇನೆ. ಹೀಗಾಗಿ ನನಗೆ ಚುನಾವಣೆ ಹೊಸದೇನಲ್ಲ. ಚುನಾವಣೆ ಕಾವು ಏರಿದೆ ಅಂತ ನನಗೆ ಅನಿಸುತ್ತಿಲ್ಲ. ಚುನಾವಣೆ ಇದೆ ಅಂತ ನಾನು ತಯಾರಿ ಆಗಲ್ಲ. ಗೆದ್ದಾದ ಮೇಲೆ ಅವತ್ತಿನಿಂದ ನನ್ನ ಕಾರ್ಯಕ್ರಮ ಪ್ರಾರಂಭವಾಗುತ್ತೆ. ಒಬ್ಬ ಅಭ್ಯರ್ಥಿಯಾಗಿ ನನ್ನ ಕೆಲಸಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನಷ್ಟೇ ಮಾಡ್ತೀನಿ ಎಂದು ಹೇಳಿದರು.

    ಡಿ.ಕೆ.ಸುರೇಶ್‌ ಸೈಲೆಂಟಾಗಿದ್ದಾರೆ ಅಂತ ಏನು ಇಲ್ಲ. ಚುನಾವಣೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಕಾದು ನೋಡುತ್ತಿದ್ದೇನೆ. ನಾನು ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಜನರ ವಿಶ್ವಾಸ ಗಳಿಸಿದ್ದೇನೆ. ಕ್ಷೇತ್ರದ ಉದ್ದಗಲಕ್ಕೂ ನನ್ನದೇ ರೀತಿಯಲ್ಲಿ ರೈತರ ಸಮಸ್ಯೆ, ಯುವಕರು, ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದೇನೆ. ಆರೋಗ್ಯ, ಶಿಕ್ಷಣ ಕ್ಷೇತ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಒಂದಷ್ಟು ಕೆಲಸಕಾರ್ಯ ಮಾಡಿದ ತೃಪ್ತಿ ನನಗಿದೆ. ಆ ನಿಟ್ಟಿನಲ್ಲಿ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡುವಂತೆ ಕೇಳುತ್ತಿದ್ದೇನೆ ಎಂದು ಮಾತನಾಡಿದರು. ಇದನ್ನೂ ಓದಿ: ನಾವು ಗಂಡಸರನ್ನ ನಂಬಲ್ಲ, ಹೆಣ್ಣುಮಕ್ಕಳನ್ನ ನಂಬುತ್ತೇವೆ: ಡಿಕೆಶಿ

    2013 ರಲ್ಲಿ ದೇವೇಗೌಡರ ಸೊಸೆ ವಿರುದ್ಧ ಸ್ಪರ್ಧಿಸಿ ಗೆಲುವು, 2024 ರಲ್ಲಿ ದೇವೇಗೌಡರ ಅಳಿಯನ ಜೊತೆ ಫೈಟ್‌ ಬಗ್ಗೆ ಮಾತನಾಡಿದ ಡಿ.ಕೆ.ಸುರೇಶ್‌, ಇದು ಹೊಸದಲ್ಲ. 1985 ರಿಂದಲೂ ನಡೆದುಕೊಂಡು ಬಂದಿರುವಂಥದ್ದು. ದೇವೇಗೌಡರ ಕುಟುಂಬದ ಜೊತೆಗಿನ ಜಿದ್ದಾಜಿದ್ದಿ ನಿರೀಕ್ಷಿಸಿರಲಿಲ್ಲ. ಇದನ್ನ ಅವರು ಮುಂದುವರಿಸುತ್ತಿದ್ದಾರೆ. ಬಹಳ ಸಂತೋಷದಿಂದ ಅದನ್ನು ಸ್ವಾಗತಿಸುತ್ತೇನೆ ಎಂದರು.

  • ಕಾಂಗ್ರೆಸ್‌ನಲ್ಲಿ ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲಾ ಇದ್ದಾರೆ; ಕುಟುಂಬ ರಾಜಕಾರಣ ಆರೋಪಕ್ಕೆ ಡಾ.ಮಂಜುನಾಥ್‌ ತಿರುಗೇಟು

    ಕಾಂಗ್ರೆಸ್‌ನಲ್ಲಿ ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲಾ ಇದ್ದಾರೆ; ಕುಟುಂಬ ರಾಜಕಾರಣ ಆರೋಪಕ್ಕೆ ಡಾ.ಮಂಜುನಾಥ್‌ ತಿರುಗೇಟು

    ರಾಮನಗರ: ಕಾಂಗ್ರೆಸ್‌ ಕುಟುಂಬ ರಾಜಕಾರಣ ಆರೋಪಕ್ಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿ.ಎನ್‌ ಮಂಜುನಾಥ್‌ (Dr. CN Manjunath) ತಿರುಗೇಟು ನೀಡಿದ್ದಾರೆ.

    ರಾಮನಗರದಲ್ಲಿ (Ramanagara) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಟುಂಬ ರಾಜಕಾರಣ (Family Politics) ಅನ್ನೋದು ರಾಜ್ಯ, ದೇಶದಲ್ಲಿ ಅಪ್ರಸ್ತುತ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ (Congress Candidates List) ತೆಗೆದು ನೋಡಿದ್ರೆ ಗೊತ್ತಾಗುತ್ತೆ. ಮಗ-ಮಗಳು, ಸೊಸೆ-ಅಳಿಯ, ಅಣ್ಣ ಎಲ್ಲರೂ ಇದ್ದಾರೆ. ಅವರ ಟೀಕೆಗಳ ಬಗ್ಗೆ ಚರ್ಚೆ ಈಗ ಅಪ್ರಸ್ತುತ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಣವಿಲ್ಲದೇ ರಾಜಕೀಯ ಪಕ್ಷ ನಡೆಸುವುದು ಸುಲಭವಲ್ಲ: ನಿತಿನ್‌ ಗಡ್ಕರಿ

    ಕಳೆದ 10 ದಿನಗಳಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸರಣಿ ಸಭೆಗಳನ್ನ ಮಾಡ್ತಿದ್ದಾರೆ. ನಿನ್ನೆ ಬೆಂಗಳೂರು ದಕ್ಷಿಣ, ಆರ್‌.ಆರ್‌ ನಗರ, ಕುಣಿಗಲ್‌ಗೆ ಹೋಗಿದ್ದೆ. ಬಹುಮುಖ್ಯವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಎರಡೂ ಹೃದಯ ಒಟ್ಟಾಗಿದೆ‌. ಇದನ್ನೆಲ್ಲ ನೋಡ್ತಿದ್ರೆ ನಮ್ಮ ಗೆಲುವು 100% ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇದು ಧರ್ಮ ಮತ್ತು ಅಧರ್ಮ ನಡುವೆ ಈ ಚುನಾವಣೆ ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ವ್ಯಾಖ್ಯಾನ ಮಾಡೋದಕ್ಕೆ ಹೋಗೋದಿಲ್ಲ. ಪ್ರತಿಯೊಂದು ಚುನಾವಣೆ ಆರೋಗ್ಯಕರವಾಗಿ ನಡೆಯಬೇಕು. ಮತದಾರರನ್ನ ಯಾವುದೇ ರೀತಿಯ ಅಡ್ಡ ದಾರಿಗೆ ಎಳೆಯಬಾರದು ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ – ಜೋಶಿ ಭವಿಷ್ಯ

  • Bengaluru Rural Lok Sabha 2024: ಡಿಕೆ ಬ್ರದರ್ಸ್‌ ಕಟ್ಟಿ ಹಾಕುತ್ತಾ ‘ಮೈತ್ರಿ’?

    Bengaluru Rural Lok Sabha 2024: ಡಿಕೆ ಬ್ರದರ್ಸ್‌ ಕಟ್ಟಿ ಹಾಕುತ್ತಾ ‘ಮೈತ್ರಿ’?

    – ಡಿ.ಕೆ.ಸುರೇಶ್‌ ವಿರುದ್ಧ ಡಾ. ಸಿ.ಎನ್.ಮಂಜುನಾಥ್‌ ಕಣಕ್ಕೆ; ಗ್ರಾಮಾಂತರ ಯಾರ ವಶಕ್ಕೆ?

    ಲೋಕಸಭೆ ಚುನಾವಣೆಗೆ (Lok Sabha Election 2024) ಅಖಾಡ ಸಿದ್ಧವಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ (Congress) ಲೋಕಸಭೆಗೆ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಸಾರ್ವತ್ರಿಕ ಚುನಾವಣೆ ಅಖಾಡಕ್ಕಿಳಿದಿರುವುದು ಕುತೂಹಲ ಮೂಡಿಸಿದೆ.

    2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿತ್ತು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ‘ಕೈ’ ಹಿಡಿದಿದ್ದು ಬೆಂಗಳೂರು ಗ್ರಾಮಾಂತರ ಏಕೈಕ ಕ್ಷೇತ್ರ ಮಾತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಿ.ಕೆ.ಸುರೇಶ್ (D.K.Suresh) ಗೆಲುವು ಸಾಧಿಸಿ ಪಾರ್ಲಿಮೆಂಟ್ ಪ್ರವೇಶಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ 3 ಬಾರಿ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ. ಡಿಕೆ ಬ್ರದರ್ಸ್‌ ಭದ್ರಕೋಟೆಯನ್ನು ಹೇಗಾದರು ಮಾಡಿ ಭೇದಿಸಬೇಕು ಎಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಪಣ ತೊಟ್ಟಂತಿದೆ. ಹೀಗಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಡಾ. ಸಿ.ಎನ್.ಮಂಜುನಾಥ್‌ (Dr. C.N.Manjunath) ಅವರನ್ನು ಮೈತ್ರಿ ಪಕ್ಷಗಳು ಕಣಕ್ಕಿಳಿಸಿದೆ. ಇದನ್ನೂ ಓದಿ: Raichuru Lok Sabha 2024: ರಾಜರ ಊರಲ್ಲಿ ಪಟ್ಟಕ್ಕೇರೋದು ಯಾರು?

    ಕ್ಷೇತ್ರ ಪರಿಚಯ
    ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರ 2008 ರಲ್ಲಿ ರಚನೆಯಾಯಿತು. ಸಂಸದೀಯ ಕ್ಷೇತ್ರಗಳ ವಿಂಗಡಣೆಯ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು. ಕನಕಪುರ ವಿಧಾನಸಭಾ ಕ್ಷೇತ್ರದಿಂದ ಬೇರ್ಪಟ್ಟು 2009 ರಲ್ಲಿ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಸಂಸದರಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ 2013 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಹೆಚ್‌ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ವಿರುದ್ಧ ಪ್ರಪ್ರಥಮ ಬಾರಿಗೆ ಸ್ಪರ್ಧೆಗಿಳಿದಿದ್ದ ಡಿ.ಕೆ.ಸುರೇಶ್ ಗೆಲುವು ದಾಖಲಿಸಿದ್ದರು. 1.27 ಮತಗಳ ಅಂತರದಿಂದ ಗೆದ್ದು ಬೀಗಿದ್ದರು. ನಂತರ 2014 ಮತ್ತು 2019 ರಲ್ಲಿ ನಡೆದ ಚುನಾವಣೆಯಲ್ಲೂ ಡಿ.ಕೆ.ಸುರೇಶ್ ಗೆಲುವು ಸಾಧಿಸಿದ್ದರು.

    ಕ್ಷೇತ್ರದಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರಗಳಿವೆ?
    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್, ರಾಜರಾಜೇಶ್ವರಿನಗರ, ಆನೇಕಲ್, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ಇದರ ವ್ಯಾಪ್ತಿಗೆ ಒಳಪಡುತ್ತವೆ. ಇದನ್ನೂ ಓದಿ: Shivamogga Lok Sabha 2024: ಬಿಎಸ್‌ವೈ v/s ಬಂಗಾರಪ್ಪ ಫ್ಯಾಮಿಲಿ – ಯಾರಿಗೆ ಮಣೆ ಹಾಕ್ತಾರೆ ಮಲೆನಾಡ ಜನ?

    ಒಟ್ಟು ಮತದಾರರು ಎಷ್ಟು?
    ಈ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 27,63,910 ಇದೆ. ಅವರ ಪೈಕಿ ಪುರುಷರು 14,06,042 ಹಾಗೂ 13,57,547 ಮಹಿಳಾ ಮತದಾರರಿದ್ದಾರೆ. ತೃತೀಯಲಿಂಗಿ ಮತದಾರರು 321 ಮಂದಿ ಇದ್ದಾರೆ.

    ಕಳೆದ ಚುನಾವಣೆಯಲ್ಲಿ ಏನಾಗಿತ್ತು?
    2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಿ.ಕೆ.ಸುರೇಶ್ ಗೆಲುವು ದಾಖಲಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಈ ಅವಧಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ರಾಜ್ಯದಲ್ಲಿ ಚುನಾವಣೆ ಎದುಸಿದ್ದವು. ಡಿ.ಕೆ.ಸುರೇಶ್ 2,06,870 ಮತಗಳ ಅಂತರದಿಂದ ಜಯಗಳಿಸಿದ್ದರು. ಇವರ ವಿರುದ್ಧ ಬಿಜೆಪಿಯಿಂದ ಅಶ್ವಥ್ ನಾರಾಯಣಗೌಡ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದನ್ನೂ ಓದಿ: Chamarajanagara Lok Sabha 2024: ಕಾಂಗ್ರೆಸ್ ಕೋಟೆಗೆ ಎಂಟ್ರಿ ಕೊಟ್ಟಿರೋ ಬಿಜೆಪಿ ಮತ್ತೆ ಸಿಂಹಾಸನ ಏರುತ್ತಾ?

    ಡಿ.ಕೆ.ಸುರೇಶ್‌ ‘ಕೈ’ ಅಭ್ಯರ್ಥಿ
    2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿದ್ದವು. ಆದರೆ ಈ ಸಲ ಉಲ್ಟಾ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ನಿಂದ ಮತ್ತೆ ಡಿ.ಕೆ.ಸುರೇಶ್ ಕಣಕ್ಕಿಳಿದಿದ್ದಾರೆ. ಅವರನ್ನು ಸೋಲಿಸಲು ತಂತ್ರ ಹೆಣೆಯಲಾಗುತ್ತಿದೆ.

    ಡಿಕೆ ಬ್ರದರ್ಸ್ ಪಾರುಪತ್ಯ
    ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಡಿಕೆ ಬ್ರದರ್ಸ್ ಎಂದೇ ಖ್ಯಾತಿಯಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಪಾರುಪತ್ಯ ಜೋರಾಗಿದೆ. ರಾಮನಗರದಲ್ಲೂ ಕಾಂಗ್ರೆಸ್ ಬಲಿಷ್ಠವಾಗಿದೆ. ಈಗ ತಮ್ಮದೇ ಪಕ್ಷ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವುದು ಮತ್ತಷ್ಟು ಬಲತುಂಬಿದಂತಾಗಿದೆ. ಕಾಂಗ್ರೆಸ್‌ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಪ್ಲಸ್‌ ಆಗಬಹುದು ಎಂಬ ಲೆಕ್ಕಾಚಾರವೂ ಇದೆ. ಇದನ್ನೂ ಓದಿ: Dakshina Kannada Lok Sabha 2024: ಬಿಜೆಪಿ ಭದ್ರಕೋಟೆ ಭೇದಿಸುತ್ತಾ ಕಾಂಗ್ರೆಸ್?‌

    ಡಾ. ಸಿ.ಎನ್.ಮಂಜುನಾಥ್‌ಗೆ ಮೈತ್ರಿ ಟಿಕೆಟ್‌
    ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಮೈತ್ರಿ ಪಕ್ಷಗಳು ಕಣಕ್ಕಿಳಿಸಿವೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ.ಎನ್.ಮಂಜುನಾಥ್‌ ಅವರು ಟಿಕೆಟ್‌ ಗಿಟ್ಟಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಿಕೆಟ್‌ ಸಿಕ್ಕ ಬಳಿಕ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

    ಮೈತ್ರಿಯಿಂದ ಬಿಜೆಪಿಗೆ ಲಾಭ?
    ಕಾಂಗ್ರೆಸ್‌ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ-ಜೆಡಿಎಸ್‌ ರಣತಂತ್ರ ರೂಪಿಸಿವೆ. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಇದುವರೆಗೂ ಖಾತೆ ತೆರೆದಿಲ್ಲ. ಆದರೆ ಬಿಜೆಪಿಗೆ ತನ್ನದೇ ಆದ ಮತಬ್ಯಾಂಕ್‌ ಈ ಕ್ಷೇತ್ರದಲ್ಲಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡುತ್ತಲೇ ಬಂದಿತ್ತು. ಆದರೆ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದು, ʼಕಮಲʼಕ್ಕೆ ಇದು ವರದಾನವಾಗುವ ಸಾಧ್ಯತೆಯಿದೆ. ಅಲ್ಲದೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿಯಿದ್ದರೂ ಡಿ.ಕೆ.ಸುರೇಶ್‌ ಹೆಚ್ಚು ಅಂತರದಿಂದ ಗೆದ್ದಿರಲಿಲ್ಲ. ಗ್ರಾಮಾಂತರದಲ್ಲಿ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ಗೆ ಈ ಸಲ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

    ಯಾವ ಅವಧಿಯಲ್ಲಿ ಯಾವ ಪಕ್ಷ ಗೆದ್ದಿತ್ತು?
    2009: ಹೆಚ್‌.ಡಿ.ಕುಮಾರಸ್ವಾಮಿ – ಜೆಡಿಎಸ್‌ (1,30,275 ಗೆಲುವಿನ ಅಂತರ)
    2013: ಡಿ.ಕೆ.ಸುರೇಶ್‌ – ಕಾಂಗ್ರೆಸ್‌ (1,37,007 )
    2014: ಡಿ.ಕೆ.ಸುರೇಶ್‌ – ಕಾಂಗ್ರೆಸ್‌ (2,31,480)
    2019: ಡಿ.ಕೆ.ಸುರೇಶ್‌ – ಕಾಂಗ್ರೆಸ್‌ (2,06,870)

    ಜಾತಿವಾರು ಲೆಕ್ಕಾಚಾರ
    ಒಕ್ಕಲಿಗರು – 7.10 ಲಕ್ಷ
    ಎಸ್‌ಸಿ/ಎಸ್‌ಟಿ – 5.20 ಲಕ್ಷ
    ಲಿಂಗಾಯತರು – 2.6 ಲಕ್ಷ
    ಕುರುಬರು – 1 ಲಕ್ಷ
    ಮುಸ್ಲಿಂ – 2.5 ಲಕ್ಷ
    ಇತರೆ – 4 ಲಕ್ಷ

  • ಚುನಾವಣೆಗೆ ಹಂಚೋದಕ್ಕೆ 8 ಲಕ್ಷ ಕುಕ್ಕರ್ ಇಟ್ಟಿದ್ದಾರೆ, ದುಡ್ಡು ಕೊಡ್ತಿದ್ದಾರೆ: ಮುನಿರತ್ನ ಗಂಭೀರ ಆರೋಪ

    ಚುನಾವಣೆಗೆ ಹಂಚೋದಕ್ಕೆ 8 ಲಕ್ಷ ಕುಕ್ಕರ್ ಇಟ್ಟಿದ್ದಾರೆ, ದುಡ್ಡು ಕೊಡ್ತಿದ್ದಾರೆ: ಮುನಿರತ್ನ ಗಂಭೀರ ಆರೋಪ

    – ಬಿಜೆಪಿ ಕಾರ್ಯಕರ್ತರಿಗೆ 20 ರಿಂದ 30 ಲಕ್ಷ ರೂ. ಆಮಿಷ ಒಡ್ಡುತ್ತಿದ್ದಾರೆ
    – ಡಿಕೆ ಸುರೇಶ್ ವಿರುದ್ಧ ಮುನಿರತ್ನ ಪರೋಕ್ಷ ವಾಗ್ದಾಳಿ

    ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಚುನಾವಣೆಗೆ ಹಂಚೋದಕ್ಕಾಗಿ ಕಾಂಗ್ರೆಸ್‌ನವರು 8 ಲಕ್ಷ ಕುಕ್ಕರ್‌ ಸಂಗ್ರಹಿಸಿದ್ದಾರೆ. ಮನೆ-ಮನೆಗಳಿಗೆ ಹೋಗಿ ದುಡ್ಡು ಕೊಡ್ತಿದ್ದಾರೆ. ಈ ಅಕ್ರಮಗಳನ್ನು ತಡೆಯಲು ಪ್ಯಾರಾ ಮಿಲಿಟರಿ ಫೋರ್ಸ್ ಬರಬೇಕು ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ಆಗ್ರಹಿಸಿದ್ದಾರೆ.

    ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆಗೆ ಹಂಚಲು ಕಾಂಗ್ರೆಸ್‌ನವರು ಕುಕ್ಕರ್, ಸೀರೆ ಸಂಗ್ರಹ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಳ್ತಿಲ್ಲ. ದಾಳಿ ಮಾಡಿದ್ರೆ ತೊಂದರೆ ಆಗುತ್ತೆ ಅಂತಾ ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತರಿಗೆ ಲಕ್ಷ ಲಕ್ಷ ಆಮಿಷ:
    ಡಾ.ಸಿ.ಎನ್ ಮಂಜುನಾಥ್ ಅವರು ಪ್ರಾಮಾಣಿಕ ವ್ಯಕ್ತಿ, ಅಂತಹ ವ್ಯಕ್ತಿ ನಮ್ಮ ಗ್ರಾಮಾಂತರಕ್ಕೆ ಅಭ್ಯರ್ಥಿಯಾಗಿ ಸಿಕ್ಕಿದ್ದಾರೆ. ಒಳ್ಳೆಯ ರೀತಿಯ ಚುನಾವಣೆ ಮಾಡೋದನ್ನು ಬಿಟ್ಟು, ಇಂತಹ ಕೆಲಸ ಮಾಡ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯವರು ಕಂಡರೆ ಹೊಡೆಯಿರಿ ಅಂತ ಕರೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ಹೋಗಿ 10-20-25 ಲಕ್ಷ ರೂ. ಕೊಟ್ಟು ಬಲವಂತವಾಗಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಕೆಲಸ ಮಾಡ್ತಿದ್ದಾರೆ ಎಂದು ದೂರಿದ್ದಾರೆ.

    ನಮ್ಮ ಕ್ಷೇತ್ರದಲ್ಲಿ ಕುಕ್ಕರ್, ಸೀರೆಗಳು, ದುಡ್ಡನ್ನು ಶೇಖರಣೆ ಮಾಡಿ ಇಡ್ತಿದ್ದಾರೆ. ಈ ಬಗ್ಗೆ ಯಾವ ಅಧಿಕಾರಿಗಳು ಗಮನ ಹರಿಸಿಲ್ಲ, ಅಧಿಕಾರಿಗಳನ್ನ ಕೇಳಿದ್ರೆ ಅವರು ಭಯದಲ್ಲೇ ಮಾತನಾಡ್ತಿದ್ದಾರೆ. ಇಂತಹ ಅಧಿಕಾರಿಗಳು ಬೇಡ ಅಂತ ಆಯೋಗಕ್ಕೆ ಪತ್ರ ಬರೆದರೂ ಅವರನ್ನು ವರ್ಗಾವಣೆ ಮಾಡುತ್ತಿಲ್ಲ. ಈ ಚುನಾವಣೆ ಪಾರದರ್ಶಕವಾಗಿ ನಡೆಯಬೇಕಿದ್ದರೆ, ಕೇಂದ್ರ ಸರ್ಕಾರವೇ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಗೋಮಾಂಸ ವ್ಯಾಪಾರಿಗಳೇ ರಸ್ತೆ ತೆರವು ಮಾಡಿಸಿದ್ದಾರೆ:
    ಯಶವಂತಪುರ ರೈಲು ನಿಲ್ದಾಣಕ್ಕೆ ಎಲ್ಲ ಭಾಗಗಳಿಂದಲೂ ರೈಲುಗಳು ಬರುತ್ತವೆ. ನಮ್ಮ ಸರ್ಕಾರ ಇದ್ದಾಗ ಜನರು ಓಡಾಡಲು ಅಲ್ಲಿ ಅಲ್ಲಿ ಒಂದು ರಸ್ತೆ ಮಾಡಲಾಗಿತ್ತು. ಪಕ್ಕದಲ್ಲೇ ಹೆರಿಗೆ ಆಸ್ಪತ್ರೆ, ಕೋವಿಡ್ ಆಸ್ಪತ್ರೆ ಇದೆ. ಜನರು ಸಹ ಈ ರಸ್ತೆಯನ್ನು ಹೆಚ್ಚಾಗಿಯೇ ಸದ್ಬಳಕೆ ಮಾಡಿಕೊಳ್ಳುತ್ತಿದ್ದರು. ಆದ್ರೆ ಅಲ್ಲಿರುವ ಗೋಮಾಂಸ ವ್ಯಾಪಾರಿಗಳು ಈ ರಸ್ತೆಯಿಂದ ತೊಂದರೆ ಆಗ್ತಿದೆ. ತೆರವು ಮಾಡಿಸಿಕೊಡಿ ಅಂತಾ ಮನವಿ ಮಾಡಿದ್ರು. ಅವರ ಮನವಿಗೆ ಒಪ್ಪಿ ಸಂಸದರು ರಸ್ತೆಯ ಪರಿಶೀಲನೆ ಮಾಡಿದ್ರು. ಈಗ ಜನರಿಗೆ ಅನುಕೂಲ ಆಗುವ ಈ ರಸ್ತೆಯನ್ನೇ ತೆರವು ಮಾಡಲು ಹೊರಟಿದ್ದಾರೆ. ಗೋಮಾಂಸ ವ್ಯಾಪಾರಿಗಳಿಗೆ ಅನುಕೂಲವಾಗಲು ರಸ್ತೆ ತೆರವು ಮಾಡುವಂತೆ ಅಧಿಕಾರಿಗಳಿಗೆ ಸಂಸದರು ಮೌಖಿಕ ಆದೇಶ ಮಾಡ್ತಾರೆ. ಅಧಿಕಾರಿಗಳು ಈ ರಸ್ತೆ ತೆರವು ಮಾಡಕ್ಕಾಗಲ್ಲ ಅಂತ ಹೇಳಿದ್ದಾರೆ. ಈ ಮಧ್ಯೆ ದನದ ಮಾಂಸ ವ್ಯಾಪಾರಿಗಳೇ ಜೆಸಿಬಿ ತಂದು ರಸ್ತೆ ತೆರವು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

  • ಸೋಮವಾರ ಬಿಜೆಪಿ ಸೇರ್ಪಡೆ: ಡಾ. ಮಂಜುನಾಥ್‌

    ಸೋಮವಾರ ಬಿಜೆಪಿ ಸೇರ್ಪಡೆ: ಡಾ. ಮಂಜುನಾಥ್‌

    ನವದೆಹಲಿ: ಸೋಮವಾರ ಬೆಂಗಳೂರಲ್ಲಿ ಅಧಿಕೃತವಾಗಿ ಬಿಜೆಪಿ (BJP) ಸೇರುತ್ತಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರದ (Bengaluru Rural) ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್‌ (Dr. Manjunath) ಹೇಳಿದ್ದಾರೆ.

    ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದುವರೆಗೂ ಅವರನ್ನು ಭೇಟಿಯಾಗಿರಲಿಲ್ಲ. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಚುನಾವಣೆಗೆ ಸಹಕಾರ ಕೇಳಿ ಧನ್ಯವಾದ ಹೇಳಿದ್ದೇನೆ ಎಂದರು.  ಇದನ್ನೂ ಓದಿ: WPL 2024: ಅಂಪೈರ್‌ ಎಡವಟ್ಟು – ಫಿಕ್ಸಿಂಗ್‌ ಹಣೆಪಟ್ಟಿ ಕಟ್ಟಿಕೊಂಡ ಮುಂಬೈ ಇಂಡಿಯನ್ಸ್‌

     

    ವೈಯಕ್ತಿಕವಾಗಿ ಯಾರನ್ನು ಟೀಕೆ ಮಾಡಬಾರದು. ಇದೊಂದು ಧರ್ಮ ಯುದ್ಧ. ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡಲು ಅಲ್ಲ. ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿದ್ದಾರೆ ಒಟ್ಟು 5.42 ಕೋಟಿ ಮತದಾರರು – ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರು?

    ಕಾಂಗ್ರೆಸ್‌ನ ಡಿಕೆ ಸುರೇಶ್‌ (DK Suresh) ಅವರನ್ನು ಮಣಿಸಲು ಬಿಜೆಪಿ, ಜೆಡಿಎಸ್‌ (BJP, JDS) ಒಂದಾಗಿ ಡಾ. ಮಂಜುನಾಥ್‌ ಅವರನ್ನು ಕಣಕ್ಕೆ ಇಳಿಸಿದೆ.

     

  • ಧರ್ಮಯುದ್ಧದಲ್ಲಿ ನನ್ನನ್ನು ಗೆಲ್ಲಿಸಿ, ಸತ್ಯಕ್ಕೆ ಜಯಸಿಗಬೇಕು: ಡಾ.ಮಂಜುನಾಥ್

    ಧರ್ಮಯುದ್ಧದಲ್ಲಿ ನನ್ನನ್ನು ಗೆಲ್ಲಿಸಿ, ಸತ್ಯಕ್ಕೆ ಜಯಸಿಗಬೇಕು: ಡಾ.ಮಂಜುನಾಥ್

    ರಾಮನಗರ: ಬೆಂಗಳೂರು ಲೋಕಸಭಾ ಚುನಾವಣೆ ಗರಿಗೆದರಿದ್ದು, ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ರಾಮನಗರಕ್ಕೆ (Ramanagara) ಆಗಮಿಸಿದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ (Dr Manjunath) ಇಂದು ಬಿಜೆಪಿ (BJP) ಕಾರ್ಯಕರ್ತರ ಸಭೆ ನಡೆಸಿದ್ದಾರೆ.

    ಲೋಕಸಭಾ ಚುನಾವಣೆ ಯುದ್ಧದಲ್ಲಿ ಡಿಕೆ ಬ್ರದರ್ಸ್‌ಗೆ ಟಕ್ಕರ್ ಕೊಡಲು ಕಣಕ್ಕಿಳಿದಿರುವ ಮಂಜುನಾಥ್ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಗೆಲುವಿಗೆ ತಂತ್ರ ರೂಪಿಸಿದರು. ಇದೇ ವೇಳೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರಕ್ಕೆ ನಾನು ಸ್ಪರ್ಧೆ ಮಾಡಿದ್ದೇನೆ. ನಿಮ್ಮೆಲ್ಲರ ಸಹಕಾರ, ಸಲಹೆ ಮುಖ್ಯ. ಇಲ್ಲಿನ ಜನ ಎಷ್ಟು ಪ್ರೀತಿ ಮಾಡುತ್ತಾರೆ ಎಂದರೆ ನಾನು ಬಂದಾಗ ಪ್ರೀತಿಯ ಸಂಕೇತವಾದ ಗುಲಾಬಿ ಹೂ ನೀಡಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ನಿಸ್ವಾರ್ಥ ಸೇವೆ ಮೂಲಕ ಹೊಸ ಭಾರತ ಕಟ್ಟಲು ಮುಂದಾಗಿದ್ದಾರೆ. ಅವರ ಕೆಲಸಕ್ಕೆ ನಾವು ಕೈಜೋಡಿಸಬೇಕು ಎಂದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಒಂದು ಮತ ಜಾಸ್ತಿ ಪಡೆದರೂ ರಾಜೀನಾಮೆ ಕೊಡ್ತೀರಾ? – ಪ್ರದೀಪ್‌ ಈಶ್ವರ್‌ಗೆ ಸುಧಾಕರ್‌ ಮರು ಸವಾಲ್‌!

    ನಾವು ಈ ಚುನಾವಣೆಯಲ್ಲಿ ಒಳ್ಳೆಯ ಈಜುಗಾರರಾಗಬೇಕು. ಆಗಲೇ ಸಮುದ್ರದಲ್ಲಿ ಮುತ್ತು ಸಿಗೋದು. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ದಶಪಥ ಹೆದ್ದಾರಿ, ರಸ್ತೆ, ರೈಲ್ವೆ, ವಿಮಾನ ಸೇವೆ ಅಭಿವೃದ್ಧಿ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ಕೊಡುವ ಕೆಲಸ ಆಯಿತು. ದೇಶದ ಕೋವಿಡ್ ನಿಯಂತ್ರಣದ ಬಗ್ಗೆ ವಿಶ್ವಸಂಸ್ಥೆ ಕೂಡ ಹೊಗಳಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನನಗೆ ಪ್ರೇಮಿಗಳ ರೀತಿ ಕಾಣುತ್ತಿದ್ದಾರೆ. ನಾನು ಹೃದ್ರೋಗ ತಜ್ಞನಾಗಿ ಕೆಲಸ ಮಾಡಿದ್ದೇನೆ. ಬಡವರನ್ನು ಕಂಡರೆ ನನಗೆ ಬಹಳ ಪ್ರೀತಿ. ಈಗ ನಡೆಯುತ್ತಿರುವುದು ಧರ್ಮ ಯುದ್ದ. ಈ ಯುದ್ಧದಲ್ಲಿ ನಾವು ಜಯಶೀಲರಾಗಬೇಕು. ಈ ಯುದ್ಧದಲ್ಲಿ ಸತ್ಯಕ್ಕೆ ಜಯ ಸಿಗಬೇಕು. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ – ಬಿಎಸ್‌ವೈ ವಿರುದ್ಧ ಗುಡುಗಿದ ಈಶ್ವರಪ್ಪ

  • ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಿ – ಜೆಡಿಎಸ್‌ ನಾಯಕರಿಗೆ ಹೆಚ್‌ಡಿಡಿ ಕರೆ

    ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಿ – ಜೆಡಿಎಸ್‌ ನಾಯಕರಿಗೆ ಹೆಚ್‌ಡಿಡಿ ಕರೆ

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿಯ ಅಭ್ಯರ್ಥಿಗಳ ಪರ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು (Devegowda) ಜೆಡಿಎಸ್ ಶಾಸಕರು, ಮುಖಂಡರು, ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

    ಜೆಡಿಎಸ್ ಕಚೇರಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ (BJP-JDS) ಇಬ್ಬರು ಒಗ್ಗಟ್ಟಾಗಿದ್ದೇವೆ‌. ಕೋಲಾರ, ಮಂಡ್ಯ, ಹಾಸನ ನಮಗೆ ಕೊಟ್ಟಿದ್ದಾರೆ. ಉಳಿದ 25 ಕ್ಷೇತ್ರದಲ್ಲಿ ನೀವು ನಮ್ಮವರು ಬಿಜೆಪಿ ಚಿಹ್ನೆಗೆ ಮತ ಹಾಕಬೇಕು. ಚಾಚೂ ತಪ್ಪದೇ ಮತ ಹಾಕಬೇಕು. ಮರೆಯದೇ 25 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಕರೆ ಕೊಟ್ಟರು.
    ಇದನ್ನೂ ಓದಿ: ಕಾಫಿನಾಡಲ್ಲಿ ವರ್ಷದ ಮೊದಲ ಮಳೆ – ಕಾದ ಕಾವಲಿಯಂತಾದ ನೆಲಕ್ಕೆ ತಂಪು ಸುರಿದ ವರುಣ

     
    ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ಮಾಡುತ್ತಾರೆ. 3 ಜೆಡಿಎಸ್ ಕ್ಷೇತ್ರಕ್ಕೂ ಹೋರಾಟ ಮಾಡುತ್ತಾರೆ. ನಮ್ಮ ಅಳಿಯ ಮಂಜುನಾಥ್ (Dr. Manjunath) ಅವರನ್ನು ಬಿಜೆಪಿಯಿಂದ ನಿಲ್ಲಿಸಬೇಕು ಎಂದು ಕೇಂದ್ರದ ನಾಯಕರು ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿದರು.ಇವತ್ತು ಡಾ. ಮಂಜುನಾಥ್ ಒಪ್ಪಿಗೆ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಚುನಾವಣಾ ಆಯೋಗದ ಆಯುಕ್ತರಾಗಿ ಇಬ್ಬರ ನೇಮಕ

    ಬುಧವಾರ ಮಂಜುನಾಥ್‌ ಅವರು ಯಡಿಯೂರಪ್ಪ ಅವರ ಆಶೀರ್ವಾದ ಪಡೆದಿದ್ದಾರೆ. ಡಾ.ಮಂಜುನಾಥ್ ರಾಜಕೀಯಕ್ಕೆ ಬರುವ ವ್ಯಕ್ತಿ ಅಲ್ಲ.ಇಡೀ ಇಂಡಿಯಾದಲ್ಲಿ 2 ಸಾವಿರ ಹೃದಯದ ರೋಗದ ಚಿಕಿತ್ಸೆ ಮಾಡುವ ಆಸ್ಪತ್ರೆ ಮಾಡಿದ್ದಾರೆ. ನನಗೆ ಈ ಬಗ್ಗೆ ಹೆಮ್ಮೆ ಇದೆ. ಖಾಸಗಿಯಲ್ಲೂ ಇಲ್ಲದ ಕೆಲಸ ಮಾಡಿ ಮಂಜುನಾಥ್ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಣ್ಣೀರು ಹಾಕಿದ ಬಡವನಿಗೆ ಡಾ. ಮಂಜುನಾಥ್ ಉಚಿತವಾಗಿ ಚಿಕಿತ್ಸೆ ನೀಡಿದ್ದಾರೆ. ಹೀಗಾಗಿ ಮಂಜುನಾಥ್‌ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

    ಕೋಲಾರ, ಮಂಡ್ಯದಲ್ಲಿ ನಮ್ಮವರನ್ನು ಗೆಲ್ಲಿಸಿಕೊಂಡು ಬರಬೇಕು. ಮೈಸೂರಿನಿಂದ ರಾಜರು ನಿಂತಿದ್ದು ಅವರು ಒಳ್ಳೆಯ ವ್ಯಕ್ತಿ. ತುಮಕೂರಿನಿಂದ ಸೋಮಣ್ಣ ನಿಂತಿದ್ದಾರೆ. ಎಲ್ಲರೂ ಸಹಕಾರ ಕೊಡಬೇಕು ಎಂದು ಜೆಡಿಎಸ್ ನಾಯಕರಿಗೆ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

  • ಡಿಕೆಸು Vs ಡಾ.ಮಂಜುನಾಥ್‌ ಸ್ಪರ್ಧೆ ಫಿಕ್ಸ್‌, ಅಧಿಕೃತ ಘೋಷಣೆ ಮಾತ್ರ ಬಾಕಿ – ಜೆಡಿಎಸ್‌ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

    ಡಿಕೆಸು Vs ಡಾ.ಮಂಜುನಾಥ್‌ ಸ್ಪರ್ಧೆ ಫಿಕ್ಸ್‌, ಅಧಿಕೃತ ಘೋಷಣೆ ಮಾತ್ರ ಬಾಕಿ – ಜೆಡಿಎಸ್‌ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

    ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bengaluru Rural) ಡಿಸಿಎಂ ಡಿಕೆ ಶಿವಕುಮಾರ್‌ ಸಹೋದರ ಡಿಕೆ ಸುರೇಶ್‌ (DK Suresh) ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್‌ (Dr Manjunath) ಕಣಕ್ಕೆ ಇಳಿಯುವುದು ಬಹುತೇಕ ಪಕ್ಕಾ ಆಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

    ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧೆ ಸಂಬಂಧ ಇಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ಜೆಪಿ ನಗರ ನಿವಾಸದಲ್ಲಿ ಬೆಂಗಳೂರು ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಮಾಗಡಿ ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಭಾಗಿಯಾಗಿದ್ದರು.  ಇದನ್ನೂ ಓದಿ: ನಾಯಿಗಳು ಎಷ್ಟೇ ಬೊಗಳಿದರೂ ಏನು ಮಾಡಲು ಆಗಲ್ಲ, ಆನೆ ನಡೆದಿದ್ದೇ ಹಾದಿ : ಹೆಗಡೆ ಕಿಡಿ

    ಈ ವೇಳೆ ಮಾತನಾಡಿದ ಹೆಚ್‌ಡಿಕೆ, ಇವತ್ತು ಕಾಂಗ್ರೆಸ್‌ನವರು ಯಾವ ರೀತಿ ನಡೆದುಕೊಳ್ಕುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ. ಸಿ.ಎನ್.ಮಂಜುನಾಥ್ ಅವರನ್ನೇ ನಿಲ್ಲಿಸಬೇಕು ಎಂದು ನನ್ನ ಮೇಲೆ ಬಿಜೆಪಿ ಹೈಕಮಾಂಡ್ (BJP High Command) ಒತ್ತಾಸೆ ಇದೆ. ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರು ಎಲ್ಲರೂ ಮಂಜುನಾಥ್ ಅವರನ್ನೇ ಒಮ್ಮತ ಅಭ್ಯರ್ಥಿ ಮಾಡಬೇಕು ಎಂದು ಬಯಸಿದ್ದಾರೆ. ಅವರು ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಹೇಳಿದರು.

    ಡಾ. ಸಿ.ಎನ್.ಮಂಜುನಾಥ್ ಅವರೇ ಎನ್‌ಡಿಎ (NDA) ಅಭ್ಯರ್ಥಿ ಆಗಬೇಕು ಎನ್ನುವುದು ಬಿಜೆಪಿ ಒತ್ತಾಸೆ. ಆದರೆ ನಾನು ಸಿ.ಪಿ.ಯೋಗೇಶ್ವರ್ (CP Yogeshwar) ಅವರ ಹೆಸರನ್ನು ಸೂಚಿಸಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಎಂದಿದ್ದೆ. ಸಿ.ಪಿ.ಯೋಗೇಶ್ವರ್ ಅವರು ಕೂಡ ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ. ಭಾನುವಾರ ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ವೃದ್ಧಮಾವನಿಗೆ ಮನಸೋ ಇಚ್ಛೆ ಥಳಿಸಿದ KEB ಅಧಿಕಾರಿ ಸೊಸೆ

     

    ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ. ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ನನ್ನ ತಂಗಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾಳೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ ಆ ಕಿರಾತಕರನ್ನು ಮಣಿಸಲೇಬೇಕು. ಇದು ನನ್ನ ಗುರಿ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಕಾರ್ಯಕರ್ತರಲ್ಲಿ ಹೆಚ್‌ಡಿಕೆ ವಿನಂರಿಸಿದರು.