Tag: bengaluru siddaramaiah

  • ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ವಿಶೇಷ ನಿರ್ವಹಣೆ ವ್ಯವಸ್ಥೆ: ಸಿದ್ದರಾಮಯ್ಯ

    ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ವಿಶೇಷ ನಿರ್ವಹಣೆ ವ್ಯವಸ್ಥೆ: ಸಿದ್ದರಾಮಯ್ಯ

    ಬೆಂಗಳೂರು: ಬೆಂಗಳೂರಿನಲ್ಲಿ (Bengaluru) 5,500 ರಸ್ತೆ ಗುಂಡಿಗಳು ಇದ್ದು, ಒಂದು ತಿಂಗಳಲ್ಲಿ ರಸ್ತೆ (Road) ಗುಂಡಿ ಮುಚ್ಚಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah)  ಬಿಬಿಎಂಪಿ (BBMP) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಬೆಂಗಳೂರು ನಗರ ಪ್ರದಕ್ಷಿಣೆ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು. ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿ ಕೇಂದ್ರದ ಕರ್ತವ್ಯ: ಜಿ.ಪರಮೇಶ್ವರ್

    ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ಮುಚ್ಚಬೇಕು. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಫೋನ್ ಟ್ಯಾಪ್‌ನಂತಹ ನೀಚ ಕೆಲಸ ಮಾಡಲ್ಲ: ಸಿದ್ದರಾಮಯ್ಯ ತಿರುಗೇಟು

    ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು. ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

  • ಹೆಚ್ಚು ಜನ್ರನ್ನು ಟೆಸ್ಟ್‌ಗೆ ಒಳಪಡಿಸಿದ್ರೆ ಇನ್ನೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರ್ಬೋದು: ಸಿದ್ದರಾಮಯ್ಯ

    ಹೆಚ್ಚು ಜನ್ರನ್ನು ಟೆಸ್ಟ್‌ಗೆ ಒಳಪಡಿಸಿದ್ರೆ ಇನ್ನೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರ್ಬೋದು: ಸಿದ್ದರಾಮಯ್ಯ

    ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೆಚ್ಚು ಜನರಿಗೆ ಕೊರೊನಾ ಪರೀಕ್ಷೆ ನಡೆಸಿದರೆ ಇನ್ನೂ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶಾಸಕರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಆದರೆ ಶಾಸಕರನ್ನು ಯಾಕೆ ಕರೆದಿದ್ದಾರೋ ಗೊತ್ತಿಲ್ಲ. ಐ ಡುನಾಟ್ ನೋ. ಅಕಾಲಿಕವಾಗಿ ಲಾಕ್ ಡೌನ್ ಘೋಷಣೆ ಮಾಡಿದ್ದರು. ಅದರಿಂದ ಆರೋಗ್ಯ ಹಾಳಾಯ್ತು, ಆರ್ಥಿಕತೆಯೂ ಹಾಳಾಯ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಯಾವ ಮುಂಜಾಗೃತಾ ಕ್ರಮವನ್ನು ಕಟ್ಟುನಿಟ್ಟಾಗಿ ತಗೆದುಕೊಳ್ಳದಿರುವುದರಿಂದ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೆಚ್ಚು ಜನರನ್ನು ಟೆಸ್ಟ್ ಗೆ ಒಳಪಟಿಸಿದರೆ ಇನ್ನೂ ಹೆಚ್ಚಿನ ಪ್ರಕರಣಗಳು ಕಂಡು ಬರಬಹುದು. ಆದರೆ ಸರ್ಕಾರ ಕೊರೊನಾ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ. ಆಗ ಲಾಕ್ ಡೌನ್ ಮಾಡಿದ್ದು ತಪ್ಪು. ನಿಜವಾಗಲೂ ಈಗ ಲಾಕ್ ಡೌನ್ ಮಾಡಬೇಕಿತ್ತು ಎಂದರು.

    ಆಗ ಅಕಾಲಿಕವಾಗಿ ಲಾಕ್ ಡೌನ್ ಮಾಡಿದ್ದರು. ಜುಲೈ, ಆಗಸ್ಟ್ ಜಾಸ್ತಿ ಆಗುತ್ತೆ ಅಂತ ತಜ್ಞರು ಹೇಳಿದ್ದಾರೆ. ಇವರ ತಪ್ಪು ಏನು ಅನ್ನೊದನ್ನು ಆಲ್ ಪಾರ್ಟಿ ಮೀಟಿಂಗ್ ಕರೆಯಲಿ ಅಲ್ಲಿ ಹೇಳುತ್ತೇವೆ. ಸುಮ್ನೆ ಹೇಳಲ್ಲ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗರಂ ಆದರು.