Tag: Bengaluru Tech Summit

  • ಸೆಮಿಕಂಡಕ್ಟರ್ ವಹಿವಾಟು 100 ಶತಕೋಟಿ ಡಾಲರ್ ನತ್ತ: ಟಾಟಾ ಎಲೆಕ್ಟ್ರಾನಿಕ್ಸ್‌ನ ಮೂರ್ತಿ ದಸಾಕ

    ಸೆಮಿಕಂಡಕ್ಟರ್ ವಹಿವಾಟು 100 ಶತಕೋಟಿ ಡಾಲರ್ ನತ್ತ: ಟಾಟಾ ಎಲೆಕ್ಟ್ರಾನಿಕ್ಸ್‌ನ ಮೂರ್ತಿ ದಸಾಕ

    – ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಮೂರ್ತಿ ದಸಾಕ ಭಾಗಿ

    ಬೆಂಗಳೂರು: ಸೆಮಿಕಂಡಕ್ಟರ್ (Semiconductor) ಕ್ಷೇತ್ರದಲ್ಲಿ ಸ್ಥಳೀಯ ಬೇಡಿಕೆ ಹೆಚ್ಚಾಗುತ್ತಿದ್ದು, 5-6 ವರ್ಷಗಳಲ್ಲಿ ದೇಶವು ಈ ಕ್ಷೇತ್ರದಲ್ಲಿ ವಾರ್ಷಿಕವಾಗಿ 100 ಬಿಲಿಯನ್ ಡಾಲರ್ ವಹಿವಾಟು ನಡೆಸುವ ಹಂತ ಮುಟ್ಟಲಿದೆ ಎಂದು ಟಾಟಾ ಎಲೆಕ್ಟ್ರಾನಿಕ್ಸ್‌ನ (Tata Electronics) ಉಪಾಧ್ಯಕ್ಷ ಮೂರ್ತಿ ದಸಾಕ (Murty Dasaka) ಮಂಗಳವಾರ ಹೇಳಿದರು.

    ಇಲ್ಲಿ ಆರಂಭವಾದ 27ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶ (Bengaluru Tech Summit)ದಲ್ಲಿ ಏರ್ಪಡಿಸಿದ್ದ ʻಸೆಮಿಕಂಡಕ್ಟರ್ ಉತ್ಪಾದನೆ: ತಾಂತ್ರಿಕ ಮತ್ತು ವಾಣಿಜ್ಯಿಕ ಯಶಸ್ಸಿನ ದಾರಿʼ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ವಿದ್ಯುತ್‌ ಬಿಲ್ ಬಾಕಿ, ದೆಹಲಿಯ ಹಿಮಾಚಲ ಭವನ ಮುಟ್ಟುಗೋಲು ಹಾಕಲು ಹೈಕೋರ್ಟ್ ಆದೇಶ

    ದೇಶವು 5 ಟ್ರಿಲಿಯನ್ ಡಾಲರ್ (USD) ಮೌಲ್ಯದ ಆರ್ಥಿಕತೆಯ ಗುರಿ ಸಾಧಿಸಬೇಕು ಅಂದ್ರೆ, ಸ್ಥಳೀಯವಾಗಿ ಸೆಮಿಕಂಡಕ್ಟರ್ ಉತ್ಪಾದನೆಗೆ ಒತ್ತು ಕೊಡಬೇಕು. ಇದಕ್ಕೆ ಬೇಕಾದ ಸಮರ್ಪಕ ಕಾರ್ಯ ಪರಿಸರವನ್ನು ನಾವು ಅಭಿವೃದ್ಧಿ ಪಡಿಸಬೇಕು. ಇದರಿಂದ ದೇಶವು ಸುಸ್ಥಿರ ಅಭಿವೃದ್ಧಿಯ ಕನಸನ್ನು ನನಸು ಮಾಡಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಂಗಳೂರಿನ ಸಮಸ್ಯೆಗಳನ್ನ ಪರಿಹರಿಸೋವರೆಗೂ ನಾನು ವಿರಮಿಸೋದಿಲ್ಲ: ಡಿಕೆಶಿ

    ಮಾರುಕಟ್ಟೆ ಮತ್ತು ಜಾಗತಿಕ ರಾಜಕಾರಣ ಎರಡೂ ಈಗ ಭಾರತಕ್ಕೆ ಅನುಕೂಲಕರವಾಗಿದ್ದು, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಈಗ ನಮ್ಮ ಸಮಯ ಕೂಡಿಬಂದಿದೆ. ಕಳೆದ 15 ವರ್ಷಗಳಲ್ಲಿ ಭಾರತವು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ತನ್ನ ಶಕ್ತಿ ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಗಮನಾರ್ಹವಾಗಿ ಸುಧಾರಿಸಿಕೊಂಡಿದೆ. ಈಗ ಇದನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ ಎಂದು ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಸೂರಜ್ ರಂಗರಾಜನ್ ಹೇಳಿದರು.

    ಮೈಕ್ರಾನ್ ಟೆಕ್ನಾಲಜಿಯ ಹಿರಿಯ ನಿರ್ದೇಶಕ ಗೋಕುಲಕುಮಾರ್ ಮಾತನಾಡಿ, ಭಾರತವು ಈಗಾಗಲೇ ಸೆಮಿಕಂಡಕ್ಟರ್ ಉತ್ಪಾದನೆಗೆ ಧುಮುಕಿದೆ. ಇನ್ಮುಂದೆ ಇದಕ್ಕೆ ತಕ್ಕ ಉತ್ತೇಜನ ಕೊಡುವುದು ಆಗತ್ಯವಾಗಿದೆ. ಇದು ಸಾಧ್ಯವಾಗಬೇಕು ಎಂದರೆ, ದೇಶದಲ್ಲಿ ಇರುವ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಮತ್ತು ದಕ್ಷವಾದ ಮೂಲಸೌಕರ್ಯವನ್ನು ಸೃಷ್ಟಿಸಬೇಕು. ಭಾರತಕ್ಕೆ ಇದನ್ನು ಸಾಧಿಸುವ ಶಕ್ತಿ ಇದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ

    ಸಿ.ಜಿ.ಸೆಮಿ ಪ್ರೈವೇಟ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಜೆರ್ರಿ ಅರುಕಾನ್ ಆಗ್ನೇಸ್ ಅವರು, ಸೆಮಿಕಂಡಕ್ಟರ್ ಕ್ಷೇತ್ರವು ವಾಣಿಜ್ಯಿಕ ಯಶಸ್ಸನ್ನು ಕಾಣಬೇಕೆಂದರೆ ಗುಣಮಟ್ಟ, ಭದ್ರತೆ ಮತ್ತು ಸರಿಯಾದ ಸಂವಹನಗಳು ನಿರ್ಣಾಯಕವಾಗಿವೆ ಎಂದು ನುಡಿದರು. ಇದನ್ನೂ ಓದಿ: ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ-ಐಸಿಯುಗಳತ್ತ ಚಿತ್ತ: ದಿನೇಶ್ ಗುಂಡೂರಾವ್

    ಏಕಗವಾಕ್ಷಿ ವ್ಯವಸ್ಥೆ ಬರಬೇಕು:
    ಗೋಷ್ಠಿಯನ್ನು ನಿರ್ವಹಿಸಿದ ಲ್ಯಾಮ್ ರೀಸರ್ಚ್‌ನ ಉಪಾಧ್ಯಕ್ಷ ರಂಗೇಶ್ ರಾಘವನ್, ʻಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಒಳ್ಳೆಯ ನೀತಿಗಳಿವೆ. ಆದ್ರೆ ಖಾಸಗಿ ಉದ್ಯಮಿಗಳು ನಿಜಕ್ಕೂ ಏನು ಮಾಡುತ್ತಿದ್ದಾರೆ ಎನ್ನುವ ತಿಳಿವಳಿಕೆ ಸ್ಥಳೀಯ ಮಟ್ಟದಲ್ಲಿ ಹಲವು ಇಲಾಖೆಗಳಿಗೆ ಇರುವುದಿಲ್ಲ. ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಾಕಷ್ಟನ್ನು ಮಾತನಾಡಲಾಗುತ್ತಿದೆ. ಆದರೆ ಒಂದು ಗವಾಕ್ಷಿಯ ಹಿಂದೆ ಇನ್ನೂ 27 ಗವಾಕ್ಷಿಗಳಿವೆ. ಇದು ಉದ್ಯಮಿಗಳು ಎದುರಿಸುತ್ತಿರುವ ವಾಸ್ತವವಾಗಿದೆ. ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಬಂದರೆ ಮಾತ್ರ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದರು.

  • ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ-ಐಸಿಯುಗಳತ್ತ ಚಿತ್ತ: ದಿನೇಶ್ ಗುಂಡೂರಾವ್

    ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ-ಐಸಿಯುಗಳತ್ತ ಚಿತ್ತ: ದಿನೇಶ್ ಗುಂಡೂರಾವ್

    ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್, ಟೆಲಿ ಐಸಿಯುಗಳ ಮೂಲಕ ಅತ್ಯಾಧುನಿಕ ಗುಣಮಟ್ಟದ ಆರೋಗ್ಯ ಸೇವೆ ನೀಡುವತ್ತ ನಮ್ಮ ಸರ್ಕಾರ ಚಿತ್ತ ಹರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

    ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್‌ಅಪ್ ಸ್ಪ್ರಿಂಗ್ ಬೋರ್ಡ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿನೇಶ್ ಗುಂಡೂರಾವ್, ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. ಈ ಕಾರಣಕ್ಕಾಗಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ-ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.

    ಲೆಟ್ಸ್ ವೆಂಚರ್‌ನ ಸಂಸ್ಥಾಪಕಿ ಶಾಂತಿ ಮೋಹನ್ ಮಾತನಾಡಿ, ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮದ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳು ತಜ್ಞರೊಂದಿಗೆ ಸಂಪರ್ಕಿಸಿ ಮಾರ್ಗದರ್ಶನವನ್ನು ಪಡೆಯಲು ಹಾಗೂ ಆರ್ಥಿಕ ನೆರವು ಪಡೆಯಲು ಇದು ವೇದಿಕೆಯಾಗಿದೆ ಎಂದು ಹೇಳಿದರು.

    ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿ ಡಾ. ಎಕ್ರೂಪ್ ಕೌರ್ ಮಾತನಾಡಿ, ರಾಜ್ಯದಲ್ಲಿ ನವೀನ ತಂತ್ರಜ್ಞಾನಗಳ ಆವಿಷ್ಕಾರಕ್ಕೆ ಒತ್ತು ನೀಡುವುದರ ಜೊತೆಗೆ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದ್ದೇವೆ. ಕ್ವಾಂಟಮ್ ಎಐ, ಹವಾಮಾನ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನದ ಆವಿಷ್ಕಾರಗಳ ಮೇಲೆ ಕೇಂದ್ರೀಕರಿಸಲು ಇನ್ನೋವೇಟಿವ್ ಕ್ಯಾಂಪಸ್ ಅನ್ನು ಉತ್ತೇಜಿಸುತ್ತಿದ್ದೇವೆ. ಇದು ಸ್ಟಾರ್ಟ್‌ಅಪ್‌ಗಳು, ಕಾರ್ಪೊರೇಷನ್‌ಗಳು ಮತ್ತು ಜಾಗತಿಕ ಸವಾಲುಗಳನ್ನು ಎದುರಿಸಲು ನೆರವಾಗುತ್ತದೆ. ಈ ಶೃಂಗಸಭೆಯಲ್ಲಿ 1೦೦ ಕ್ಕೂ ಹೆಚ್ಚು ಹೂಡಿಕೆದಾರರು ಮತ್ತು 2೦೦ ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಭಾಗವಹಿಸುತ್ತಿದ್ದು, ಸ್ಟಾರ್ಟ್‌ಅಪ್‌ಗಳಿಗೆ ಅನುಭವಿ ತಜ್ಞರಿಂದ ಮಾರ್ಗದರ್ಶನ ಬಂಡವಾಳ ಹೂಡಿಕೆ ಲಭಿಸಲಿದೆ. ಈ ಶೃಂಗಸಭೆ ಮೂಲಕ ರಾಜ್ಯದ ಸ್ಟಾರ್ಟ್‌ಅಪ್‌ಗಳ ಬಲವರ್ಧನೆಗೆ ಕ್ರಮ ವಹಿಸುತ್ತಿದ್ದೇವೆ ಎಂದು ತಿಳಿಸಿದರು.

    ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಸೇರಿದಂತೆ ಪ್ರಮುಖ ಸಮಿತಿಯ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡು ವಿಚಾರ ಮಂಡಿಸಿದರು.

  • ಬೆಂಗಳೂರಿನ ಸಮಸ್ಯೆಗಳನ್ನ ಪರಿಹರಿಸೋವರೆಗೂ ನಾನು ವಿರಮಿಸೋದಿಲ್ಲ: ಡಿಕೆಶಿ

    ಬೆಂಗಳೂರಿನ ಸಮಸ್ಯೆಗಳನ್ನ ಪರಿಹರಿಸೋವರೆಗೂ ನಾನು ವಿರಮಿಸೋದಿಲ್ಲ: ಡಿಕೆಶಿ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಇದರಿಂದಾಗಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿವೆ. ಈ ಸಮಸ್ಯೆಗಳು ಬೃಹದಾಕಾರವಾಗಿ ಬೆಳಯುವ ಮೊದಲು ನಾವೆಲ್ಲರೂ ಸೇರಿ ಅದನ್ನು ಸರಿಪಡಿಸಬೇಕಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ತಿಳಿಸಿದ್ದಾರೆ.

    ಬೆಂಗಳೂರಲ್ಲಿ ನಡೆಯುತ್ತಿರುವ 27ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್ (Bengaluru Tech Summit) ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಇದರಿಂದ ಅನೇಕ ಸಮಸ್ಯೆಗಳು ಉದ್ಭವ ಆಗುತ್ತಿವೆ. ಬೆಂಗಳೂರು ಉಸ್ತುವಾರಿ ಹೊತ್ತಿರುವ ನಾನು ಈ ಸಮಸ್ಯೆಗಳನ್ನು ಸರಿಪಡಿಸುವ ತನಕ ವಿರಮಿಸುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಕ್ಫ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ; ನ.21, 22ರಂದು ರಾಜ್ಯಾದ್ಯಂತ ಪ್ರತಿಭಟನೆ: ಅಶ್ವಥ್‌ ನಾರಾಯಣ್

    ನಾವು ಅಧಿಕಾರಕ್ಕೆ ಬಂದ ಕಡಿಮೆ ಅವಧಿಯಲ್ಲಿಯೇ ಬೆಂಗಳೂರಿನ (Bengaluru) ಅಭಿವೃದ್ದಿಗೆ ಅನೇಕ ಬೃಹತ್ ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಸುರಂಗ ರಸ್ತೆ ಯೋಜನೆ ಹಾಗೂ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ಬಿಜಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದೇವೆ. ಮುಂದಿನ 6 ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಯೋಜನೆಯಿಂದ ನಗರದ ಸಂಚಾರ ದಟ್ಟಣೆಗೆ ಪರಿಹಾರ ದೊರೆಯಲಿದೆ. ಸುರಂಗ ರಸ್ತೆ ಯೋಜನೆಗೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಆದಷ್ಟು ಬೇಗ ಈ ಕನಸನ್ನು ನನಸು ಮಾಡಲಾಗುವುದು ಎಂದರು. ಇದನ್ನೂ ಓದಿ: ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ

    ಹಲವಾರು ಯೋಜನೆಗಳ ಮೂಲಕ ಬೆಂಗಳೂರನ್ನು ಭವಿಷ್ಯದಲ್ಲಿ ವ್ಯಾಪಾರಿ, ನಾಗರಿಕ ಸ್ನೇಹಿ, ವಾಸಿಯಾಗಿಸಲು ಯೋಗ್ಯವಾದ ನಗರವನ್ನಾಗಿ ಮಾಡಲು ನಮ್ಮ ಕರ್ನಾಟಕ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಟೆಕ್ ಸಮ್ಮಿಟ್ ವಿಶ್ವದ ಅತ್ಯಂತ ಮಹತ್ವದ ಟೆಕ್ ಸಮ್ಮಿಟ್‌ಗಳಲ್ಲಿ ಒಂದು. ಎಲ್ಲಾ ಸರ್ಕಾರಗಳು, ಐಟಿ ಉದ್ಯಮ, ಅಧಿಕಾರಿಗಳು, ರಾಜಕೀಯ ಮುಖಂಡರು ಈ ಕಾರ್ಯಕ್ರಮ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಶ್ರಮಪಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್

  • ಬೆಂಗಳೂರು ಟೆಕ್ ಸಮ್ಮಿಟ್‌ಗೆ ಸರ್ಕಾರ ಸಿದ್ಧತೆ – ಉದ್ಯಮಿಗಳ ಜೊತೆ ಸಿಎಂ, ಡಿಸಿಎಂ ಸಂವಾದ

    ಬೆಂಗಳೂರು ಟೆಕ್ ಸಮ್ಮಿಟ್‌ಗೆ ಸರ್ಕಾರ ಸಿದ್ಧತೆ – ಉದ್ಯಮಿಗಳ ಜೊತೆ ಸಿಎಂ, ಡಿಸಿಎಂ ಸಂವಾದ

    ಬೆಂಗಳೂರು: ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಿಳಿಸಿದರು.

    ಸೋಮವಾರ ಅವರು ಬೆಂಗಳೂರು ಟೆಕ್ ಸಮ್ಮೇಳನದ (Bengaluru Tech Summit) ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಭಾಗವಹಿಸಿ ಮಾತನಾಡಿದರು. ತಂತ್ರಜ್ಞಾನದ ಅಭಿವೃದ್ಧಿ ಎಲ್ಲರನ್ನು ಒಳಗೊಂಡು ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ. ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ ಬೆಂಗಳೂರು ಟೆಕ್ ಸಮ್ಮಿಟ್ ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವಾಖ್ಯಾನಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದರು.

    ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆ:
    80ರ ದಶಕದ ಅಂತ್ಯ ಹಾಗೂ 90 ರ ದಶಕದಲ್ಲಿಯೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಟಿ/ಬಿಟಿ ಗೆ ಭದ್ರ ಬುನಾದಿಯನ್ನು ಹಾಕಿತ್ತು. ನೀತಿ ನಿರೂಪಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊಟ್ಟ ಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ 1992 ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಸರ್ಕಾರ ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆಯನ್ನು ತಂದುಕೊಟ್ಟಿದ್ದು, ಆಡಳಿತದಲ್ಲಿ ಸುಸ್ಥಿರತೆ ತರಲು ಹಾಗೂ ದೀರ್ಘಾವಧಿ ಹೂಡಿಕೆಗಳನ್ನು ಕೈಗೊಳ್ಳಲು ಶ್ರಮಿಸಿದೆ ಎಂದರು.

    ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಸಮರ್ಥ:
    ಬೆಂಗಳೂರು ಐಟಿ ರಾಜಧಾನಿಯಾಗಿದ್ದು ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದೆ. ಬೆಂಗಳೂರು ಐಟಿ/ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲಾ ಸಾಮರ್ಥ್ಯವನ್ನು ಹೊಂದಿದ್ದು ನಮ್ಮ ಸರ್ಕಾರ ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ. ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು ಅತ್ಯಂತ ಸೂಕ್ತವಾಗಿದೆ. ಐಒಟಿ, ಕೃತಕ ಬುದ್ಧಿಮತ್ತೆ, ಕ್ವಾಂಟಮ್ ಕಂಪ್ಯೂಟರಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ. ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕೃಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಇದನ್ನೂ ಓದಿ: ರಾಮನಗರ, ಕನಕಪುರ ಎರಡೂ ಕಡೆಯೂ ಮೆಡಿಕಲ್ ಕಾಲೇಜು ಆಗುತ್ತೆ, ರಾಜಕೀಯಕ್ಕಾಗಿ ಗೊಂದಲ ಮಾಡಲಾಗ್ತಿದೆ: ಡಿಕೆ ಸುರೇಶ್

    ಕೌಶಲ್ಯ ಮಂಡಳಿ ರಚನೆ:
    ಉದ್ಯಮಶೀಲತೆ ಹಾಗೂ ಶಿಕ್ಷಣವನ್ನು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ರೂಪಿಸಿ ಭವಿಷ್ಯದ ಬೇಡಿಕೆಗಳನ್ನು ಪರಿಣಾಮಕಾರಿಯಾಗಿ ಪೂರೈಸುವಂತೆ ಮಾಡಲಾಗಿದೆ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ರಚಿಸಿದ ಮೊದಲ ರಾಜ್ಯ ಕರ್ನಾಟಕ. ಸಂಬಂಧ ಪಟ್ಟ ಎಲ್ಲಾ ಪಾಲುದಾರರ ಸಹಯೋಗದೊಂದಿದೆ ಕೌಶಲ್ಯ ಮಂಡಳಿ ರಚನೆಯತ್ತಲೂ ನಮ್ಮ ರಾಜ್ಯ ಕಾರ್ಯನಿರ್ವಹಿಸುತ್ತಿದೆ. ಉದ್ಯಮ ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಲಿದೆ ಎಂದರು. ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದ ಸಹಯೋಗದಲ್ಲಿ ಭವಿಷ್ಯಕ್ಕೆ ಸಿದ್ಧರಾಗಿರುವ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ನೆರವಾಗಲಿದೆ. ಜಾಗತಿಕ ತಾಪಮಾನ, ಹಾವಾಮಾನ ಬದಲಾವಣೆ, ಸೈಬರ್ ಸೆಕ್ಯೂರಿಟಿ ಮುಂತಾದ ಜಾಗತಿಕ ಸಮಸ್ಯೆಗಳನ್ನು ಎದುರಿಸಲು ನಮ್ಮ ಶಕ್ತಿಯನ್ನು ಬಳಸಲು ನಾವು ಬದ್ಧರಾಗಿದ್ದೇವೆ ಎಂದರು.

    ನಾವೀನ್ಯತಾ ವಲಯದಲ್ಲಿ ಸ್ಟಾರ್ಟ್ಅಪ್ ಹಾಗೂ ಯುವ ಸಂಸ್ಥೆಗಳು ಜೀವನಾಡಿಯಾಗಿವೆ. ಈ ವಲಯದ ಬೆಳವಣಿಗೆಗೆ ಅಗತ್ಯವಿರುವ ಅನುದಾನ ಹಾಗೂ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ. ತಂತ್ರಜ್ಞಾನ ನಾಯಕತ್ವದಲ್ಲಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಿ, ನಾವೀನ್ಯತೆ ಹಾಗೂ ಸುಸ್ಥಿರ ಐಟಿ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿ. ಈ ಕುರಿತಂತೆ ಸಲಹೆ ಹಾಗೂ ಸಂವಾದಗಳನ್ನು ಕೈಗೊಳ್ಳಲು ಕರ್ನಾಟಕಕ್ಕಿಂತಲೂ ಉತ್ತಮವಾದ ರಾಜ್ಯವಿಲ್ಲ ಎಂದರು.

    ಮೂಲಸೌಕರ್ಯ ಅಭಿವೃದ್ಧಿ:
    ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು, ವಿಮಾನನಿಲ್ದಾಣಕ್ಕೆ ಮೆಟ್ರೋ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು. ಇದನ್ನೂ ಓದಿ: G20 ಸಭೆ ದೆಹಲಿಯಲ್ಲಿ ಹೈ ಅಲರ್ಟ್ – ಆನ್‌ಲೈನ್ ಫುಡ್, ಅಮೆಜಾನ್, ಪ್ಲಿಪ್‌ಕಾರ್ಟ್ ಹೋಂ ಡೆಲಿವರಿ ಬಂದ್

    ದೇವನಹಳ್ಳಿ ಪ್ರದೇಶದಲ್ಲಿ ತೈವಾನ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಫಾಕ್ಸ್ಕಾನ್ ಸದ್ಯದಲ್ಲಿಯೇ ತನ್ನ ಉತ್ಪಾದನಾ ಘಟಕವನ್ನು ತೆರೆಯುವುದಾಗಿ ಘೋಷಿಸಿದೆ. ಆನೇಕಲ್, ದೊಡ್ಡಬಳ್ಳಾಪುರ ಮತ್ತಿತರ ನಗರಗಳು ಹೂಡಿಕೆಯ ವಿಸ್ತರಣೆಗೆ ಅವಕಾಶಗಳನ್ನು ಹೊಂದಿದ್ದು ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ಪ್ರಯೋಜನಕಾರಿಯಾಗಿದೆ ಎಂದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಈಗಾಗಲೇ ವಿವಿಧ ಸಂಸ್ಥೆಗಳು ಆಸಕ್ತಿ ಹೊಂದಿವೆ. ಇದಕ್ಕಾಗಿ ಈಗಾಗಲೇ ಇರುವ ಹೆದ್ದಾರಿಗಳ ಸುಧಾರಣೆ ಹಾಗೂ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡದಲ್ಲಿ ಮಾತಾಡಿ, ಬೆಂಗಳೂರು ಹೊಗಳಿದ ಪ್ರಧಾನಿ ಮೋದಿ

    ಕನ್ನಡದಲ್ಲಿ ಮಾತಾಡಿ, ಬೆಂಗಳೂರು ಹೊಗಳಿದ ಪ್ರಧಾನಿ ಮೋದಿ

    ಬೆಂಗಳೂರು : 25ನೇ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ (Bengaluru Tech Summit) ಇಂದು ಕನ್ನಡದ (Kannada) ಕಲರವ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ, ಕನ್ನಡದಲ್ಲಿ ಭಾಷಣ ಶುರು‌ ಮಾಡಿ ಬೆಂಗಳೂರನ್ನು (Bengaluru) ಹಾಡಿ ಹೊಗಳಿದರು.

    ಎಲ್ಲರಿಗೂ ಕರ್ನಾಟಕಕ್ಕೆ ಸ್ವಾಗತ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಬೆಂಗಳೂರಿಗೆ ಸ್ವಾಗತ ಎಂದು ಮಾತು ಆರಂಭಿಸಿದರು. ಬೆಂಗಳೂರು ಎಲ್ಲರನ್ನೂ ಒಳಗೊಳ್ಳುವ (ಇನ್‌ಕ್ಲೂಸಿವ್‌) ಮತ್ತು ನಾವೀನ್ಯತೆಯ ಸಂಸ್ಕೃತಿಯ ನಗರವಾಗಿದೆ. ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ನಗರವು ಎಷ್ಟೋ ವರ್ಷಗಳಿಂದ ಪ್ರಥಮ ಸ್ಥಾನದಲ್ಲಿ ವಿರಾಜಿಸುತ್ತಿದೆ ಎಂದರು. ಇದನ್ನೂ ಓದಿ: ನಾನು ನಿನ್ನನ್ನ ಸುಮ್ಮನೆ ಬಿಡಲ್ಲ- ಶ್ರೀನಿವಾಸ್ ಪ್ರಸಾದ್‍ಗೆ ರಮೇಶ್ ತಿರುಗೇಟು

    ನಮ್ಮೆಲ್ಲರ ಭವಿಷ್ಯ ಮತ್ತಷ್ಟು ವ್ಯಾಪಕವೂ ಉಜ್ವಲವೂ ಆಗಿರಲಿದೆ. ಬೆಂಗಳೂರು ಸಂಶೋಧನೆಯ ತಾಣವಾಗಿದ್ದು, ಇಲ್ಲಿ ತಂತ್ರಜ್ಞಾನ ಕ್ರಾಂತಿ ಸಂಭವಿಸುತ್ತಿದೆ ಎಂದು ಬೆಂಗಳೂರನ್ನು ಹಾಡಿ ಹೊಗಳಿದರು. ಇದನ್ನೂ ಓದಿ: ಹಿಂದೂ ಹುಡುಗಿಯರು ಎಚ್ಚರಿಕೆಯಿಂದ ಡೇಟಿಂಗ್ ಮಾಡಿ – ಪ್ರಮೋದ್ ಮುತಾಲಿಕ್

    Live Tv
    [brid partner=56869869 player=32851 video=960834 autoplay=true]