Tag: Bengaluru Temple

  • ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

    ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

    ಬೆಂಗಳೂರು: ಖಗ್ರಾಸ ರಕ್ತಚಂದ್ರಗ್ರಹಣ (Lunar Eclipse) ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೇವಾಲಯಗಳಿಗೆ ದಿಗ್ಬಂಧನ ಹಾಕಲಾಗಿತ್ತು. ಆದ್ರೆ ಚಿಕ್ಕಮಗಳೂರಿನ (Chikkamagaluru) ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ನಿರಂತರ ಜಲಾಭಿಷೇಕ ಮಾಡಲಾಗಿತ್ತು. ಗ್ರಹಣದ ಆರಂಭದಿಂದ ಅಂತ್ಯದವರೆಗೂ ಅನ್ನಪೂಣೇಶ್ವರಿಗೆ ವಿಶೇಷ ಪೂಜೆ ಮತ್ತು ಜಲಾಭಿಷೇಕ ಮಾಡಲಾಯ್ತು.

    ಗ್ರಹಣ ಕಾಲದಲ್ಲಿ ಉತ್ತರ ಕನ್ನಡ (Uttarakannada) ಜಿಲ್ಲೆ ಗೋಕರ್ಣ ಮಹಾಬಲೇಶ್ವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು. ಗ್ರಹಣ ಕಾಲದಲ್ಲಿ ಮಹಾಬಲೇಶ್ವರನ ಆತ್ಮಲಿಂಗ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. ಗ್ರಹಣ ಮೋಕ್ಷ ಕಾಲದವರೆಗೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನೂ ಓದಿ: ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

    ರಾಯಚೂರಿನ (Raichur) ದೇವದುರ್ಗ ತಾಲ್ಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ಗ್ರಾಮಸ್ಥರು ಭಜನೆ ಮೊರೆ ಹೋಗಿದ್ದರು. ಆಂಜನೇಯ ದೇವಾಲಯದಲ್ಲಿ ಕೊಣಚಪ್ಪಳಿ ಗ್ರಾಮಸ್ಥರು ಲೋಕದ ಒಳಿತಿಗಾಗಿ ಭಜನೆ ಕೈಗೊಂಡರು. ನಗರದ ಜವಾಹರನಗರದಲ್ಲಿನ ಗುರು ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ಗ್ರಹ ದೋಷಗಳ ಪರಿಹಾರಕ್ಕೆ ಭಕ್ತರಿಂದ ಜಪ ತಪ ನೆರವೇರಿಸಲಾಯಿತು. ನೂರಾರು ಭಕ್ತರು ತುಪ್ಪ, ಎಳ್ಳನ್ನ ಬಳಸಿ ಗ್ರಹಣ ಮುಕ್ತಾಯದವರೆಗೂ ಶಾಂತಿ ಹೋಮ ನೆರವೇರಿಸಿದರು.

    ಬಾಗಲಕೋಟೆಯ ಬಾದಾಮಿಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮಹಾಕೂಟದಲ್ಲಿ ಚಂದ್ರಗ್ರಹಣ ಪ್ರಯುಕ್ತ ನೀರಿನಲ್ಲಿ ಧ್ಯಾನ ಮಾಡಲಾಯ್ತು. ಪುಷ್ಕರಣಿಯಲ್ಲಿ ಸಾವಿರಾರು ಜನರು, ಸಾಧು ಸಂತರು ಧ್ಯಾನ ಮಾಡಿದ್ರು. ಇದನ್ನೂ ಓದಿ: Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

    ದಾವಣಗೆರೆ ಶ್ರೀರಾಘವೇಂದ್ರ ಮಠದಲ್ಲಿ ಗ್ರಹಣ ಶಾಂತಿ ಹೋಮ ನೆರವೇರಿಸಲಾಯಿತು. ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ನಿರಂತರ ಜಲಾಭಿಷಕದೊಂದಿಗೆ ಮುಖ್ಯ ಅರ್ಚಕರಿಂದ ಪೂಜಾ ಕೈಂಕರ್ಯ ಮಾಡಲಾಯಿತು. ಪೂಜೆಗೂ ಮುನ್ನ ಗುರು ರಾಘವೇಂದ್ರ ನಾಮ ಜಪ ಮೂಲಕ ನವಗ್ರಹ ದೇವತೆಗಳ ಆಹ್ವಾನ ನಡೆಯಿತು. ಹೋಮದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

  • ಚಂದ್ರಗ್ರಹಣ: ಗವಿಗಂಗಾಧರ ದೇವಾಲಯ ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್

    ಚಂದ್ರಗ್ರಹಣ: ಗವಿಗಂಗಾಧರ ದೇವಾಲಯ ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್

    – ಬೆಂಗ್ಳೂರಿನ ಬಹುತೇಕ ದೇವಸ್ಥಾನಗಳ ದರ್ಶನ ಸಮಯದಲ್ಲಿ ಬದಲಾವಣೆ

    ಬೆಂಗಳೂರು: ಇದೇ ಭಾನುವಾರ (ಸೆ.7) ರಕ್ತಚಂದ್ರಗ್ರಹಣ ಸಂಭವಿಸಲಿದ್ದು, ನಗರದ ಗವಿಗಂಗಾಧರ ದೇವಾಲಯ (Gavi Gangadhareshwara Temple) ಬೆಳಗ್ಗೆ 11 ಗಂಟೆಗೆ ಬಂದ್ ಆಗಲಿದೆ.

    ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್‌ ಅವರು ಮಾತನಾಡಿ, ಸೂರ್ಯಗ್ರಹಣವಾದರೆ ಗ್ರಹಣಕ್ಕೂ ಸ್ವಲ್ಪ ಹೊತ್ತಿನ ಮೊದಲು ದೇವಸ್ಥಾನ ಬಂದ್ ಮಾಡುತ್ತಿದ್ದೆವು. ಆದರೆ ಚಂದ್ರಗ್ರಹಣದಲ್ಲಿ ಹಾಗೇ ಮಾಡಲು ಬರುವುದಿಲ್ಲ. ಗ್ರಹಣಕ್ಕೂ ಮೊದಲು ಸುಮಾರು 6 ಗಂಟೆ ದೇವಾಲಯ ಬಂದ್ ಮಾಡಬೇಕಾಗುತ್ತದೆ. ಹೀಗಾಗಿ ಬೆಳಗ್ಗೆ ಗಂಗಾಧರನಿಗೆ ಕ್ಷೀರ ನೈವೇದ್ಯ ನೀಡುತ್ತೇವೆ. ಕ್ಷೀರ ಬಿಟ್ಟು ಬೇರೆ ಪ್ರಸಾದ ನೀಡಲ್ಲ. ಬೆಳಗ್ಗೆ 11 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಬಳಿಕ ಬಾಗಿಲು ಬಂದ್ ಮಾಡಲಾಗುತ್ತದೆ. ಗ್ರಹಣ ಮೋಕ್ಷಗೊಂಡ ಕೂಡಲೇ ಶುದ್ಧೀಕರಣ ಮಾಡಲು ಆಗಲ್ಲ, ಮರುದಿನ ಬೆಳಗ್ಗೆ ಶುದ್ಧೀಕರಣ ಮಾಡಿದ ಬಳಿಕ ದರ್ಶನಕ್ಕೆ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಸೆಪ್ಟೆಂಬರ್ 7, 8 ರಂದು ಸಂಭವಿಸಲಿದೆ ಚಂದ್ರಗ್ರಹಣ

    ಇನ್ನೂ ರಕ್ತಚಂದ್ರಗ್ರಹಣ ಹಿನ್ನೆಲೆ ನಗರದ ಬಹುತೇಕ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆಯಾಗಲಿದೆ. ಯಾವ ದೇವಸ್ಥಾನ, ದರ್ಶನ ಸಮಯ ಯಾವಾಗ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

    ಬನಶಂಕರಿ ದೇವಾಲಯ:
    ಬನಶಂಕರಿ ದೇವಿ ಜನ್ಮೋತ್ಸವದ ದಿನವೇ ರಕ್ತಚಂದ್ರಗ್ರಹಣ ಸಂಭವಿಸುತ್ತಿದೆ. ಗ್ರಹಣದ ದಿನ ಬೆಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆ ನಡೆಯುತ್ತದೆ. ಜೊತೆಗೆ ದೇವಿಯ ಜನ್ಮೋತ್ಸವವಿರುವುದರಿಂದ ಚಂಡಿಕಾ ಹೋಮ ನಡೆಸಲಾಗುತ್ತದೆ. ಸಂಜೆ 4 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದ್ದು, ಬಳಿಕ 4:30ಕ್ಕೆ ದೇವಾಲಯ ಬಂದ್ ಮಾಡಲಾಗುತ್ತದೆ. ಮರುದಿನ ಬೆಳಗ್ಗೆ 6 ಗಂಟೆಗೆ ದೇವಾಲಯ ಹಾಗೂ ಆವರಣ ಶುದ್ಧೀಕರಣ ಮಾಡಲಾಗುತ್ತದೆ. ನಂತರ ಪೂಜೆ ಮಾಡಿ, ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ.

    ಗಾಳಿ ಆಂಜನೇಯ ದೇವಸ್ಥಾನ:
    ಗ್ರಹಣದ ದಿನ ಮಧ್ಯಾಹ್ನ 3 ಗಂಟೆಗೆ ದೇವಾಲಯವನ್ನು ಬಂದ್ ಮಾಡಲಾಗುತ್ತದೆ. ಹೀಗಾಗಿ 2:30ರ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. 2:30ರಿಂದ 3ಗಂಟೆವರೆಗೆ ದೇವಾಲಯದ ಒಳಗೆ ದರ್ಬೆ ಇಡಲಾಗುತ್ತದೆ. ಗ್ರಹಣ ಮುಗಿದ ಬಳಿಕ ಬೆಳಗ್ಗೆ ಶಾಂತಿ ಪೂಜೆ ಮಾಡಿ, ಎಂದಿನಂತೆ ಭಕ್ತರಿಗೆ ದರ್ಶನ ವ್ಯವಸ್ಥೆ ಇರುತ್ತದೆ.

    ಕಾಡು ಮಲ್ಲೇಶ್ವರ ದೇವಾಲಯ:
    ಗ್ರಹಣದ ದಿನ ಬೆಳಗ್ಗೆ 4 ಗಂಟೆಗೆ ದೇವಾಲಯ ತೆರೆಯಲಿದ್ದು, ಮಧ್ಯಾಹ್ನ 2:30ವರೆಗೆ ಮಾತ್ರ ಭಕ್ತರಿಗೆ ದರ್ಶನ ವ್ಯವಸ್ಥೆ ಇರುತ್ತದೆ. ಗ್ರಹಣದ ಸಮಯದಲ್ಲಿ ಎಲ್ಲಾ ದೇವರುಗಳ ಮೇಲೆ ದರ್ಬೆ ಇಡಲಾಗುತ್ತದೆ. ಗ್ರಹಣ ಮುಗಿದ ಮರುದಿನ ಬೆಳಿಗ್ಗೆ 4 ಗಂಟೆಗೆ ದೇವಾಲಯ ತೆರೆಯಲಿದ್ದು, ಶುದ್ಧೀಕರಣ ಮಾಡಿ, ನಂತರ ಗ್ರಹಣ ಶಾಂತಿಗಾಗಿ ರುದ್ರ ಹೋಮ, ಪ್ರಸಾದ ಸೇವೆ ಇರಲಿದೆ. ನಂತರ ದರ್ಶನಕ್ಕೆ ಅವಕಾಶವಿರುತ್ತದೆ.ಇದನ್ನೂ ಓದಿ: ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

  • Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ

    Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ

    ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಹಿನ್ನೆಲೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜಕೀಯ ನಾಯಕರೂ ಫುಲ್ ಅಲರ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದೇವಸ್ಥಾನಗಳಿಗೂ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ (Private School) ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ತುಷ್ಠೀಕರಣ ಪರಿಣಾಮ ಮುಸ್ಲಿಮರಿಗೆ ನಮ್ಮದೇ ರಾಜ್ಯ ಎನ್ನುವ ಭ್ರಮೆ: ಮುತಾಲಿಕ್

    ಈ ಪ್ರಕರಣವನ್ನು ನಮ್ಮ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ (Government) ಬದ್ಧವಾಗಿದೆ. ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹಾ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

    35 ಶಾಲೆಗಳ ಇ-ಮೇಲ್‌ ಪರಿಶೀಲನೆ:
    ಪೊಲೀಸರ ತನಿಖೆ (Police Investigation) ವೇಳೆ 15 ಅಲ್ಲ ಒಟ್ಟು 35 ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದುರುವುದು ಕಂಡುಬಂದಿದೆ. ʻಪಬ್ಲಿಕ್‌ ಟಿವಿʼ ವರದಿ ನೋಡಿ ಎಚ್ಚೆತ್ತ ಅಧಿಕಾರಿಗಳು ಶಾಲೆಗಳಲ್ಲಿ ಮೇಲ್‌ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಶಾಲೆಗಳ ಇಂಚಿಂಚೂ ಆವರಣಗಳನ್ನು ತಪಾಸಣೆ ನಡೆಸುಲಾಗುತ್ತಿದೆ. ಇದನ್ನೂ ಓದಿ: Bomb Threat: ಅಪ್ಪ-ಅಮ್ಮನಿಗೆ ಕಷ್ಟ ಆಗ್ತಿದೆ; ಪೊಲೀಸ್ ಕಂಪ್ಲೇಂಟ್ ಕೊಟ್ಟೇ ಕೊಡ್ತೀನಿ – ಪುಟ್ಟ ಬಾಲಕನ ಆಕ್ರೋಶ

    ಹುಸಿ ಬಾಂಬ್‌ ಕರೆ:
    ಆರಂಭಿಕ ತನಿಖೆಯಲ್ಲಿ ಬೆಂಗಳೂರು ಹೊರವಲಯದ ಹಲವು ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್‌ ಬೆದರಿಕೆ ಕರೆ ಎಂಬುದು ಗೊತ್ತಾಗಿದೆ. ಅವು ಈ ಕೆಳಗಿನಂತಿವೆ.

    ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ 7 ಶಾಲೆಗಳಿಗೆ ಹುಸಿ ಬಾಂಬ್ ಕರೆ

    *ಗ್ರೀನ್ ಹುಡ್ ಹೈಸ್ಕೂಲ್, ದಿನ್ನೇಪಾಳ್ಯ
    *ಗ್ಲೋಬಲ್ ಇಂಟರ್ನ್ಯಾಷನಲ್ ಶಾಲೆ
    *ರಾಯನ್ ಇಂಟರ್ನ್ಯಾಷನಲ್ ಶಾಲೆ
    *ಆಲ್ ಬಷೀರ್ ಶಾಲೆ
    *ದೀಕ್ಷಾ ಹೈಟ್ ಶಾಲೆ
    *ಕಾಂಡರ್ ಇಂಟರ್ನ್ಯಾಷನಲ್ ಶಾಲೆ
    *ಬಿವಿಎಂ ಗ್ಲೋಬಲ್ ಶಾಲೆ

    ಹೆಬ್ಬಗೋಡಿಯ ಪೊಲೀಸ್ ಠಾಣಾ ವ್ಯಾಪ್ತಿಯ 4 ಶಾಲೆಗಳು

    *ಡಿವೈನ್ ಇಂಟರ್ನ್ಯಾಷನಲ್ ಶಾಲೆ
    *ಟ್ರೀಮೈಸ್ ಇಂಟರ್ನ್ಯಾಷನಲ್ ಶಾಲೆ
    *ಫ್ಲಾರೆನ್ಸ್ ಇಂಟರ್ನ್ಯಾಷನಲ್ ಶಾಲೆ
    *ಎಬೆನ್ಸರ್ ಇಂಟರ್ನ್ಯಾಷನಲ್ ಶಾಲೆ

    ಸರ್ಜಾಪುರದ ಸರ್ಜಾಪುರ ಪೊಲೀಸ್ ಠಾಣೆ 5 ಶಾಲೆಗಳು

    *ಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್
    *ಗ್ಲೋಬಲ್ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ
    *ಓಕರಿಡ್ಜ್ ಶಾಲೆ
    *ಟಿ ಐ ಎಸ್ ಬಿ ಶಾಲೆ
    *ಇನ್ವೆಂಚರ್ ಅಕಾಡೆಮಿ