Tag: bengaluru university

  • NIRF ಶ್ರೇಯಾಂಕದಲ್ಲಿ 65ನೇ ಸ್ಥಾನ ಪಡೆದ ಬೆಂಗಳೂರು ವಿಶ್ವವಿದ್ಯಾಲಯ

    NIRF ಶ್ರೇಯಾಂಕದಲ್ಲಿ 65ನೇ ಸ್ಥಾನ ಪಡೆದ ಬೆಂಗಳೂರು ವಿಶ್ವವಿದ್ಯಾಲಯ

    ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ. ರಾಷ್ಟ್ರೀಯ ಸಂಸ್ಥೆ ಶ್ರೇಯಾಂಕ ಚೌಕಟ್ಟು National Institute Ranking Framework (NIRF) ಶ್ರೇಯಾಂಕದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ರಾಷ್ಟ್ರಮಟ್ಟದ ಎಲ್ಲಾ ಪ್ರವರ್ಗಗಳಲ್ಲಿ 65ನೇ ಅಗ್ರಸ್ಥಾನಕ್ಕೆ ಭಾಜನವಾಗಿದೆ.

    ರಾಷ್ಟ್ರಮಟ್ಟದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 26ನೇ ಸ್ಥಾನ ಪಡೆದಿದೆ. ಈ ಮೂಲಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ತನ್ನ ಸಾಧನೆ ಮುಂದುವರೆಸಿದೆ. 2024ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು 81ನೇ ಸ್ಥಾನದಲ್ಲಿತ್ತು. ಇದೀಗ ಬೆಂಗಳೂರು ವಿಶ್ವವಿದ್ಯಾಲಯವು ಗಮನಾರ್ಹವಾಗಿ ಸುಧಾರಿಸಿದೆ. ವಿದ್ಯಾರ್ಥಿ ಸ್ನೇಹಿ ವಾತವರಣ, ಅನುಭವಿ ಶಿಕ್ಷಕ ವರ್ಗ, ಅತ್ಯುತ್ತಮ ಪಠ್ಯಾಧಾರಿತ ಶಿಕ್ಷಣ, ತಂತ್ರಜ್ಞಾನಕ್ಕೆ ಆದ್ಯತೆ, ಕ್ರಿಯಾಶೀಲತೆ, ನಾವೀನ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವಾತವರಣ ಒದಗಿಸಿರುವ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಈ ಶ್ರೇಯಾಂಕ ದಕ್ಕಿರುವುದು ವಿವಿ ಬದ್ದತೆ ಮತ್ತು ಪರಿಶ್ರಮಕ್ಕೆ ಸಾಕ್ಷಿಯಾಗಿದೆ.ಇದನ್ನೂ ಓದಿ: ಮೋದಿ ಸರ್ಕಾರ GST ಸರಳೀಕರಣ ಮಾಡಿ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ – ಮಹೇಶ್ ತೆಂಗಿನಕಾಯಿ

    ವಿಶ್ವದಲ್ಲೇ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅತ್ಯುತ್ತಮ ವಿಶ್ವವಿದ್ಯಾಲಯ ಎಂದು ಗುರುತಿಸಿಕೊಂಡಿದ್ದು, NAAC A++ ಮತ್ತು ಪಿಎಂ – ಉಷಾ ಯೋಜನೆಯಡಿ 100 ಕೋಟಿ ರೂ. ಅನುದಾನವನ್ನು ಪಡೆದುಕೊಂಡಿತ್ತು. ಮುಂದುವರೆದ ಭಾಗವಾಗಿ NIRF ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಬೆಂಗಳೂರು ವಿವಿ ಶೈಕ್ಷಣಿಕ ಸಾಧನೆಯ ಪರಂಪರೆಯನ್ನು ಮುಂದುವರೆಸಿದೆ.

    ಈ ಸಂದರ್ಭದಲ್ಲಿ ಕುಲಪತಿಗಳು ಕರ್ನಲ್ ಡಾ.ಜಯಕರ.ಎಸ್.ಎಂ ಪ್ರತಿಕ್ರಿಯಿಸಿದ್ದು, NIRF ಶ್ರೇಯಾಂಕದಲ್ಲಿ ಸ್ಥಾನ ಪಡೆದಿರುವುದು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯ. ಶಿಕ್ಷಣ, ಸಂಶೋಧನೆ, ತಂತ್ರಜ್ಞಾನ, ಮೂಲಭೂತ ಸೌಕರ್ಯ ಮತ್ತು ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಬಲ ಬಂದಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ವಿಶ್ವವಿದ್ಯಾಲಯ ಮತ್ತಷ್ಟು ಶ್ರಮಿಸಲಿದೆ. ಈ ಸಾಧನೆಗೆ ಕಾರಣಕರ್ತರಾದ ಸರ್ವರಿಗೂ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 2,200ಕ್ಕೆ ಏರಿಕೆ

  • ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru University) ದಲಿತ ಅಧಿಕಾರಿಗಳು, ಪ್ರೊಫೆಸರ್‌ಗಳು, ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ ವಿಚಾರ ಹಾಗೂ ವಿವಿ ಬಗ್ಗೆ ಅನೇಕ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಜ್ಞಾನಭಾರತಿ ಕ್ಯಾಂಪಸ್‌ಗೆ ಭೇಟಿ ನೀಡಿ ಪರಿಶೀಲನೆ ಮಾಡಿ, ವಿಸಿ, ಕುಲಸಚಿವರ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ವಿದ್ಯಾ ದೇಗುಲ. ನಾವು ಇದರ ಆಶ್ರಯದಲ್ಲಿ ಬಂದವರು. ಹಲವು ಕಾರಣಗಳಿಗೆ ಈ ವಿವಿ ನ್ಯೂಸ್ ಆಗ್ತಿತ್ತು. ಇತ್ತೀಚೆಗೆ ಯಾವುದೇ ಗೊಂದಲ ಇರಲಿಲ್ಲ. 2 ತಿಂಗಳ ಹಿಂದೆ ಕೆಲವು ಗೊಂದಲ ಆಗಿತ್ತು‌. SC ಸಮುದಾಯದ ಪ್ರೊಫೆಸರ್‌ಗಳು ರಾಜೀನಾಮೆ ಕೊಟ್ಟಿದ್ದರು. ಅದರ ಬಗ್ಗೆ ತಿಳಿದುಕೊಂಡಿದ್ದೇನೆ. ಅಂಬೇಡ್ಕರ್ ಅವರ ಅಧ್ಯಯನ ಪೀಠ ಸರಿಯಾಗಿ ಬಳಕೆ ಆಗಬೇಕು. ಬಸವ ಲಿಂಗಪ್ಪ ಪೀಠ ಇದುವರೆಗೂ ಸ್ಥಾಪನೆ ಆಗಿಲ್ಲ. ಅಂಬೇಡ್ಕರ್ ಬಗ್ಗೆ ಕಳೆದ ವಾರದಲ್ಲಿ ದೊಡ್ಡ ಗೊಂದಲದ ವಾತಾವರಣ ಸೃಷ್ಟಿ ಆಗಿತ್ತು. ಇದು ವಿವಿಯಲ್ಲಿ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ

    ಪ್ರೊಫೆಸರ್ ಒಬ್ಬರು ಬ್ಯಾಕ್ ಲ್ಯಾಗ್‌ನಲ್ಲಿ ಬಂದಿದ್ದರು. ಅಂಬೇಡ್ಕರ್ ಫೋಟೋವನ್ನು ಅವರು ಕಾಲಿಗೆ ತಾಗುವ ರೀತಿ ಇಟ್ಟುಕೊಂಡಿದ್ದರು. ಈ ಬಗ್ಗೆ ನಾನು ವಿಸಿ ಜೊತೆ ಮಾತಾಡಿದ್ದೇನೆ. ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ. ವಿವಿಯಲ್ಲಿರೋ ಇರೋ ಬ್ಯಾಕ್ ಲ್ಯಾಗ್ ಹುದ್ದೆ ಭರ್ತಿ ಮಾಡಬೇಕು. 1-2 ತಿಂಗಳಲ್ಲಿ ಎಲ್ಲಾ ಸಮಸ್ಯೆ ಪರಿಹಾರ ಮಾಡೋ ಭರವಸೆ ವಿಸಿ ಕೊಟ್ಟಿದ್ದಾರೆ. ವಿಸಿ ಬಗ್ಗೆ ಎಲ್ಲರೂ ಉತ್ತಮ ಅಭಿಪ್ರಾಯ ಕೊಟ್ಡಿದ್ದಾರೆ. ಒಂದು ವೇಳೆ ಸಮಸ್ಯೆ ಪರಿಹಾರ ಆಗದೇ ಹೋದ್ರೆ ಹೋರಾಟ ಮಾಡ್ತೀವಿ. ಸರ್ಕಾರದ ಗಮನಕ್ಕೆ ತರುತ್ತೇವೆ‌ ಎಂದರು.

    ವಿಶ್ವವಿದ್ಯಾಲಯದಲ್ಲಿ SC ಸಮುದಾಯಗಳಿಗೆ ಉನ್ನತ ಹುದ್ದೆ ಸಿಗುತ್ತಿಲ್ಲ ಅಂತ ಆರೋಪ ಇದೆ‌. ಅನುಭವ ಇರೋರನ್ನು ಅತಿಥಿ ಉಪನ್ಯಾಸಕರನ್ನು ಕೈ ಬಿಡಲಾಗಿದೆ. ಅವರನ್ನು ವಾಪಸ್ ತೆಗೆದುಕೊಳ್ಳಬೇಕು. ಸರ್ಕಾರಕ್ಕೆ ಒತ್ತಾಯ ಮಾಡ್ತೀನಿ, ಬೇರೆ ರಾಜ್ಯದ ಪ್ರೊಫೆಸರ್‌ಗಳಿಗೆ ನಮ್ಮ ವಿವಿಯಲ್ಲಿ ಅವಕಾಶ ಕೊಡಬೇಕು. ಬೇರೆ ವಿವಿ ಅವರಿಗೆ ಇಲ್ಲಿ ಅವಕಾಶ ಕೊಡಬಾರದು. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದ ಗಮನಕ್ಕೂ ನಾನು ತರುತ್ತೇನೆ ಎಂದರು.

    ಜಾತಿ ಪ್ರಭಾವ ವಿವಿಗಳಲ್ಲಿ ನಡೆಯಬಾರದು‌. ಇದು ರಾಜಕೀಯ ಮಾಡೋ ಜಾಗ ಅಲ್ಲ. ಇಲ್ಲಿ ಜಾತಿ ಪ್ರಭಾವ ಮಾಡೋದು, ಜಾತಿ ಒಡೆಯೋ ಕೆಲಸ ಯಾರು ಮಾಡಬಾರದು. ಬೇರೆ ಕಡೆಯಿಂದ ಪ್ರೊಫೆಸರ್‌ಗಳು ಉನ್ನತ ಹುದ್ದೆಗೆ ಬರೋದನ್ನ ಸರ್ಕಾರವೇ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ವಿಶ್ವಾದ್ಯಂತ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ 8 ಪ್ರಾಧ್ಯಾಪಕರು

  • ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ

    ನಮ್ಮ ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿ ಇಲ್ಲ – ಬೆಂಗಳೂರು ವಿವಿಯಿಂದ ಸ್ಪಷ್ಟನೆ

    ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru University) ದಲಿತರಿಗೆ ಅನ್ಯಾಯ ಆಗ್ತಿದೆ ಅಂತ ಆರೋಪಿಸಿ ರಾಜೀನಾಮೆ ನೀಡಿದ್ದ ದಲಿತ ಪ್ರೊಫೆಸರ್‌ಗಳ ಪತ್ರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದೆ. ಪತ್ರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಯಾವುದೇ ದಲಿತ ವಿರೋಧಿ ನೀಡಿ ಮಾಡ್ತಿಲ್ಲ. ಜೊತೆಗೆ ಯಾವೆಲ್ಲ ಕ್ರಮಗಳು ಆಗಿವೆ ಅಂತ ಸ್ಪಷ್ಟನೆ ನೀಡಲಾಗಿದೆ.

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದ್ದು, ದಲಿತ ವಿರೋಧಿ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾಗಿದೆ ಎಂದು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಶಿಕ್ಷಕರ ಸಂಘಕ್ಕೆ ವಿಶ್ವವಿದ್ಯಾಲಯ ಪತ್ರದ ಮೂಲಕ ಸ್ಪಷ್ಟನೆ ನೀಡಿದೆ. ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ, ಸರ್ಕಾರದ ಮೀಸಲಾತಿ ನಿಯಮಗಳ ಉಲ್ಲಂಘನೆ ಮತ್ತು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಕುರಿತು ಬೆಂಗಳೂರು ವಿವಿ ಪತ್ರದ ಮೂಲಕ ಉತ್ತರಿಸಿದೆ. ಇದನ್ನೂ ಓದಿ: 2 ಬಾರಿ ಟಿಕೆಟ್‌ ಕ್ಯಾನ್ಸಲ್‌ ಮಾಡಿದ್ರೂ ಡಿಕೆಶಿ ಭೇಟಿಗೆ ಅವಕಾಶ ನೀಡದ ರಾಹುಲ್‌!

    ಪತ್ರದಲ್ಲೇನಿದೆ?
    ಕುಲಪತಿ, ಕುಲಸಚಿವರು, ವಿತ್ತಾಧಿಕಾರಿಗಳು ಮತ್ತು ಕುಲಸಚಿವರು (ಮೌಲ್ಯಮಾಪನ) ಶಾಸನಬದ್ಧ ಹುದ್ದೆಗಳಿಗೆ ಸರ್ಕಾರವೇ ನೇರವಾಗಿ ನೇಮಕಾತಿ ಮಾಡುತ್ತಾ ಬಂದಿರುವುದರಿಂದ ಈ ನೇಮಕಾತಿಯಲ್ಲಿ ಬೆಂಗಳೂರು ವಿವಿಯ ಅಥವಾ ಕುಲಪತಿಗಳ ಪಾತ್ರವೇನೂ ಇರುವುದಿಲ್ಲ. ಹಾಗಿದ್ದಾಗಿಯೂ ತಾರತಮ್ಯ ನೀತಿ ಎಂದು ತಿಳಿಸಿರುವುದು ವಿಷಾದನೀಯ. ಇದನ್ನೂ ಓದಿ: 24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನ ಸ್ಫೋಟಿಸುತ್ತೇವೆ – ಪೊಲೀಸ್‌ ಠಾಣೆಗೆ ಬೆದರಿಕೆ ಸಂದೇಶ

    ಬೆಂಗಳೂರು ವಿವಿಯ ಆಡಳಿತ ಹುದ್ದೆಗಳಾದ ನಿರ್ದೇಶಕರು, ಸಂಯೋಜಕರು, ವಿಶೇಷಾಧಿಕಾರಿ ಮತ್ತು ನೋಡೆಲ್ ಅಧಿಕಾರಿಗಳ 30 ಹುದ್ದೆಗಳ ಪೈಕಿ 22 ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರನ್ನೇ ನೇಮಿಸಲಾಗಿದೆ. ಉಳಿದ 8 ಹುದ್ದೆಗಳಿಗೆ ಇತರ ವರ್ಗದ ಶಿಕ್ಷಕರನ್ನು ನೇಮಿಸಲಾಗಿದೆ. ವಿಶ್ವವಿದ್ಯಾಲಯ ಹಂತದಲ್ಲೇ ನೇಮಕಾತಿ ಮಾಡಬಹುದಾದ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರಾಧ್ಯಾಪಕರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ನೇಮಕ ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಇನ್ನೂ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಯೊಂದಿಗೆ 4 ಶಿಕ್ಷಕರನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆಯಿಂದ ಮತ್ತು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವ ದೃಷ್ಟಿಯಿಂದ ಅಂತರ್ ವಿಶ್ವವಿದ್ಯಾಲಯ ವರ್ಗಾವಣೆ ಮಾಡಿದೆ. ಆದ್ದರಿಂದ ದಲಿತ ವಿರೋಧ ನೀತಿ ಅನುಸರಿಸಿದೆ ಎಂಬ ವಿಷಯವು ಸತ್ಯಕ್ಕೆ ದೂರವಾದುದ್ದು.ಬೆಂಗಳೂರು ವಿವಿಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 126 ಶಿಕ್ಷಕರ ಪೈಕಿ 80 ಜನ ಶಿಕ್ಷಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಶಿಕ್ಷಕರಾಗಿರುತ್ತಾರೆ. ಅಂದರೆ 63.5%ರಷ್ಟು ಶಿಕ್ಷಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರುತ್ತಾರೆ. ಇದನ್ನೂ ಓದಿ: ಭಾರತದ ಹಾನಿಯ ಒಂದೇ ಒಂದು ಫೋಟೋ ತೋರಿಸಿ – ವಿದೇಶಿ ಮಾಧ್ಯಮಗಳ ವಿರುದ್ಧ ದೋವಲ್‌ ಕೆಂಡಾಮಂಡಲ

    ಬೆಂಗಳೂರು ವಿವಿಯಲ್ಲಿ ಹೊರತುಪಡಿಸಿ ರಾಜ್ಯದ ಯಾವುದೇ ಇತರೇ ಸಾರ್ವಜನಿಕ ವಿಶ್ವವಿದ್ಯಾಲಯಗಳು ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆ ಗುರುತಿಸಿದ್ದ 55 ಬ್ಯಾಕ್‌ಲಾಗ್ ಹುದ್ದೆಗಳಲ್ಲಿ 35 ಬ್ಯಾಕ್‌ಲಾಗ್ ಹುದ್ದೆಗಳನ್ನು ಈಗಾಗಲೇ ತುಂಬಲಾಗಿರುತ್ತದೆ. ಉಳಿದ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

    2024-25 ಸಾಲಿನಲ್ಲಿ ಸುಮಾರು 44 ಪ್ರಾಧ್ಯಾಪಕರಿಗೆ ಹಿರಿಯ ಪ್ರಾಧ್ಯಾಪಕರಾಗಿ ಮುಂಬಡ್ತಿ ನೀಡಲಾಗಿದ್ದು, ಇವರ ಪೈಕಿ 29 ಪ್ರಾಧ್ಯಾಪಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವಾಗಿರುತ್ತಾರೆ. ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

  • ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ

    ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ

    – ಕನ್ನಡಿಗರಿಗೆ ಕಾಂಗ್ರೆಸ್‌ನಿಂದ ಮಹಾದ್ರೋಹ ಎಂದು ಕಿಡಿ

    ಬೆಂಗಳೂರು: ಇಲ್ಲಿನ ಕೇಂದ್ರ ವಿಶ್ವವಿದ್ಯಾಲಯಕ್ಕೆ (Bengaluru University) ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ (Manmohan Singh) ಹೆಸರು ಇಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನ ಜೆಡಿಎಸ್ (JDS) ಖಂಡಿಸಿದೆ.

    ಈ ಕುರಿತು ಎಕ್ಸ್‌ನಲ್ಲಿ  (X) ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ಕಾಂಗ್ರೆಸ್ ಕನ್ನಡಿಗರಿಗೆ ಮಹಾದ್ರೋಹ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.ಇದನ್ನೂ ಓದಿ: ಸಿದ್ದರಾಮಯ್ಯ ಲಾಟರಿ ಸಿಎಂ, ಅವ್ರ ಕುರ್ಚಿ ಅಲುಗಾಡ್ತಿದೆ – ಜೆಡಿಎಸ್ ಲೇವಡಿ

    ಎಕ್ಸ್‌ನಲ್ಲಿ ಏನಿದೆ?
    ರಾಜ್ಯದಲ್ಲಿ ಗುಲಾಮಿ ಕಾಂಗ್ರೆಸ್ (Congress) ಸರ್ಕಾರದ ತೊಘಲಕ್ ಆಡಳಿತ ಹೇಗಿದೆ ನೋಡಿ ಕರ್ನಾಟಕದ ಮಹಾಜನತೆ. ರಾಮನ ಹೆಸರಿನ “ರಾಮನಗರ” (Ramanagar) ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ” (Bengaluru South) ಎಂದು ವಿರೋಧವನ್ನು ಲೆಕ್ಕಿಸದೇ ಮರುನಾಮಕರಣ ಮಾಡಲಾಗಿದೆ. “ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ”ಕ್ಕೆ ಮಾಜಿ ಪಿಎಂ “ಮನಮೋಹನ್ ಸಿಂಗ್ ವಿವಿ ಬೆಂಗಳೂರು” ಎಂದು ಹೆಸರಿಡಲು ಈಗ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.

    ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ವಿಶ್ವಮಟ್ಟದಲ್ಲಿ ಬ್ರ‍್ಯಾಂಡ್ ಆಗಿದೆ. “ಬೆಂಗಳೂರು” ಹೆಸರನ್ನೇ ವಿಶ್ವವಿದ್ಯಾಲಯಕ್ಕೂ ಇಡಲಾಗಿತ್ತು. ಪರ್ಯಾಯಾವಾಗಿ ಮರುನಾಮಕರಣ ಮಾಡುವ ಅವಶ್ಯಕತೆ, ಜರೂರು ಏನಿತ್ತು? ಅಧಿಕಾರದ ಮದ, ದರ್ಪ, ದುರಹಂಕಾರದಲ್ಲಿ ಮೆರೆಯುತ್ತಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಹೈಕಮಾಂಡ್ ಮೆಚ್ಚಿಸಲು ಬೆಂಗಳೂರಿನ ಘನತೆ, ಗೌರವಕ್ಕೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ವಿರೋಧದ ನಡುವೆಯೂ ಮಾಡುತ್ತಿರುವುದು ಅಕ್ಷಮ್ಯ ಎಂದು ಆಕ್ರೋಶ ಹೊರಹಾಕಿದೆ.ಇದನ್ನೂ ಓದಿ: ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿ ಸ್ಥಿತಿ ಗಂಭೀರ

  • ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

    ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

    – 3,400 ಕೋಟಿ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ

    ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿಂದು (Nandi Hills) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಅಂತ ಮರು ನಾಮಕರಣ ಮಾಡಲಾಗಿದೆ. ಇದರೊಂದಿಗೆ ಜೊತೆಗೆ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ (Bengaluru University) ಡಾ. ಮನಮೋಹನ್ ಸಿಂಗ್ ಹೆಸರಿಡಲಾಗಿದೆ.

    3,400 ಕೋಟಿ ರೂ. ಮೊತ್ತದ ಆಡಳಿತಾತ್ಮಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ (Chikkaballapura), ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ಕುಡಿಯುವ ನೀರು ಯೋಜನೆಗೆ 23,251 ಕೋಟಿ ವೆಚ್ಚಕ್ಕೆ ಸರ್ಕಾರ ಮುಂದಾಗಿದೆ. ಇದುವರೆಗೆ 17,147 ಕೋಟಿ ವೆಚ್ಚವಾಗಿದ್ದು, ಹೆಚ್ಚುವರಿಯಾಗಿ 6,103 ಕೋಟಿ ಖರ್ಚಿಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

    ಚಿಂತಾಮಣಿಯಲ್ಲಿ ಮೊರಾರ್ಜಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಯೋಜನೆ ಪೂರ್ಣಕ್ಕೆ ಸರ್ಕಾರ ಉದ್ದೇಶಿಸಿದೆ. ಇದನ್ನೂ ಓದಿ: 5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ

    ಪ್ರಮುಖ ನಿರ್ಣಯಗಳೇನು?
    * ಆರೋಗ್ಯ ಇಲಾಖೆ ವತಿಯಿಂದ 46 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಹಾಗೂ 21.40 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯೆಲ್ಲಿನ ಮೆಡಿಕಲ್‌ ಕಾಲೇಜುಗಳಿಗೆ ಎಂಆರ್‌ಐ ಯಂತ್ರಗಳನ್ನು ಖರೀದಿಸಲು ಅನುಮತಿ.
    * 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಹೆಚ್‌ಸಿ ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ.
    * ಕೋಲಾರದ ಬಾಲಕ ಹಾಗೂ ಬಾಲಕಿಯರ ಕಾಲೇಜಿನ ಅವಶ್ಯಕ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕ್ರಮವಾಗಿ 40 ಕೋಟಿ ಮತ್ತು 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ನಿರ್ಧಾರ.
    * ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 123 ಕೋಟಿ ರೂ. ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.
    * ನಬಾರ್ಡ್ ಸಾಲದ ನೆರವಿನೊಂದಿಗೆ 10 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಬೆಂಗಳೂರು (IFAB) ನಿಯಮಿತ ಸಂಸ್ಥೆಯನ್ನು ಬಲಪಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
    * ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಭಕ್ತರಹಳ್ಳಿ ಅರಸೀಕೆರೆಯ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿಯನ್ನು 36 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮದ ಸಮೀಪ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು 34 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭದ್ರಾ ನದಿಯ ಎಡ ಮತ್ತು ಬಲ ದಂಡೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ರಕ್ಷಿಸಲು ತಡೆಗೋಡೆ ನಿರ್ಮಾಣಕ್ಕೆ 50 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮತ್ತು ದೊಣಬಘಟ್ಟ, ಕಾಗೆಕೊಡಮಗ್ಗೆ, ಹೊಳೆಹೊನ್ನೂರು – ಭದ್ರಾವತಿ ಮುಖ್ಯ ರಸ್ತೆಯ ನಡುವೆ ಸಂಪರ್ಕ ರಸ್ತೆ ಸುಧಾರಣೆ ಕಾಮಗಾರಿಯನ್ನು 35 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಡಗೊಪ್ಪ ಗ್ರಾಮದ ಹತ್ತಿರ ದಂಡಾವತಿ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಿಸಿ ಸುಮಾರು 15 ಕೆರೆಗಳನ್ನು ತುಂಬಿಸುಔ 38 ಕೋಟಿ ರೂ. ವೆಚ್ಚದ ಯೋಜನೆಗೆ ಅಡಳಿತಾತ್ಮಕ ಅನುಮೋದನೆ.
    * ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದಂಡಾವತಿ ಮತ್ತು ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್‌ ಕಂ ಬ್ಯಾರೇಜ್‌ಗಳನ್ನು ನಿರ್ಮಿಸುವ 54.70 ಕೋಟಿ ರೂ. ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
    * ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ತುಂಗಾಭದ್ರಾ ನದಿಯಿಂದ ನೀರೆತ್ತಿ ಚನ್ನಗಿರಿ ತಾಲೂಕಿನ 41 ಕೆರೆಗಳನ್ನು ತುಂಬಿಸುವ 365 ಕೋಟಿ ರೂ. ವೆಚ್ಚದ ಯೋಜನೆಯಡಿ ಮೊದಲ ಹಂತದಲ್ಲಿ 100 ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ ಸೇರಿದಂತೆ ಹಲವು ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು.

  • ಬೆಂಗಳೂರು ವಿವಿಗೆ ಡಾ. ಮನಮೋಹನ್‌ ಸಿಂಗ್‌ ಹೆಸರಿಡಲು ಜೆಡಿಎಸ್‌ ವಿರೋಧ

    ಬೆಂಗಳೂರು ವಿವಿಗೆ ಡಾ. ಮನಮೋಹನ್‌ ಸಿಂಗ್‌ ಹೆಸರಿಡಲು ಜೆಡಿಎಸ್‌ ವಿರೋಧ

    – ಮೈಸೂರಲ್ಲಿ ಕಟ್ಟುತ್ತಿರೋ ನಿಮ್ಮ ಹೊಸ ಮನೆಗೆ ‘ಮನಮೋಹನ್‌ ಸಿಂಗ್’‌ ಅಂತ ಹೆಸರಿಡಿ
    – ನಿಮ್ಮ ಸೊಸೆ ಒಡೆತನದ ಕ್ಲಬ್‌ಗೆ ಮರುನಾಮಕರಣ ಮಾಡಿ ಅಂತ ಸಿದ್ದರಾಮಯ್ಯಗೆ ಟಾಂಗ್‌

    ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ (Bengaluru University) ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ (Manmohan Singh) ಅವರ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್‌, ಸಿಎಂ ಸಿದ್ದರಾಮಯ್ಯ ಅವರೇ, ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ ಎಂದು ಟಾಂಗ್‌ ಕೊಟ್ಟಿದೆ. ಇದನ್ನೂ ಓದಿ: ಹಠಾತ್‌ ಎದೆನೋವು – ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

    ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
    ಸಿಎಂ ಸಿದ್ದರಾಮಯ್ಯ ಅವರೇ ಬೆಂಗಳೂರು ವಿಶ್ವವಿದ್ಯಾಲಯ ನಿಮ್ಮ ಮನೆತನದ ಆಸ್ತಿಯಲ್ಲ. ಕಾಂಗ್ರೆಸ್ ಪಕ್ಷದ ಆಸ್ತಿಯೂ ಅಲ್ಲ. ‘ಬೆಂಗಳೂರು’ ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ. ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.

    ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ, ‘ಬೆಂಗಳೂರು ನಗರ ವಿವಿ’ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್‌ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.

    ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ?

    ಸಿದ್ದರಾಮಯ್ಯನವರೇ.. ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್‌ಗೆ ಮರುನಾಮಕರಣ ಮಾಡಿಕೊಳ್ಳಿ.

    ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್‌ ಕಚೇರಿಗೆ ‘ಇಂದಿರಾ ಭವನ’ ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್‌ ಸಿಂಗ್‌ ಹೆಸರಿಡಲು ಇಟಲಿ ಕಾಂಗ್ರೆಸ್‌ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ ‘ಗುಲಾಮಿ ಕಾಂಗ್ರೆಸ್‌’ ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ. ಇದನ್ನೂ ಓದಿ: ಏ.4ರಿಂದ 14ರವರೆಗೆ ಬೆಂಗಳೂರು ಕರಗ – 20 ಲಕ್ಷ ಜನ ಭಾಗಿ ನಿರೀಕ್ಷೆ

    ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ. ಹೈಕಮಾಂಡ್‌ ಗುಲಾಮಗಿರಿಗೆ ಸದಾ ‘ಸಿದ್ಧ’ರಾಮಯ್ಯ ಎಂದು ಜೆಡಿಎಸ್‌ ಕಾಲೆಳೆದಿದೆ.

  • ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

    ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಯಲವನ್ನು ಡಾ.ಮನಮೋಹನ್ ಸಿಂಗ್ (Manmohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ (CM Siddaramaiah) 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

    ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು. ಇದನ್ನೂ ಓದಿ: Karnataka Budget 2025 LIVE: ಆಯುಷ್ಮಾನ್‌ ಭಾರತದಡಿ 5 ಲಕ್ಷ ಚಿಕಿತ್ಸಾ ವೆಚ್ಚ

    ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

    ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.ಇದನ್ನೂ ಓದಿ: ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ

     

  • ಶೈಕ್ಷಣಿಕ, ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ – ಗುದ್ದಲಿ ಪೂಜೆ ಮಾಡಿದ ಡಿಕೆಶಿ, ಮುನಿರತ್ನ

    ಶೈಕ್ಷಣಿಕ, ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ – ಗುದ್ದಲಿ ಪೂಜೆ ಮಾಡಿದ ಡಿಕೆಶಿ, ಮುನಿರತ್ನ

    ಬೆಂಗಳೂರು: ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ ಸಂದರ್ಭ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಮತ್ತು ಶಾಸಕ ಮುನಿರತ್ನ (Munirathna) ಹಾರೆ ಹಿಡಿದು ಗುದ್ದಲಿ ಪೂಜೆ ಮಾಡಿದ್ದಾರೆ.

    ಜ್ಞಾನಭಾರತಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನ ಕಟ್ಟಡಗಳ ಶಂಕುಸ್ಥಾಪನೆ ನಡೆಯಿತು. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಂಗನಾ ರಣಾವತ್ ಭೇಟಿ

    ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅಧ್ಯಕ್ಷತೆ ವಹಿಸಿದ್ದು, ಶಂಕುಸ್ಥಾಪನೆ ನೆರವೇರಿಸಲು ಡಿಕೆಶಿ ಅವರನ್ನ ಆಹ್ವಾನಿಸಿದ್ದರು. ಈ ವೇಳೆ ಇಬ್ಬರು ಸೇರಿ ಶಂಕುಸ್ಥಾಪನೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಕೆಲಸ ನಿಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

    ಇತ್ತೀಚಿನ ದಿನಗಳಲ್ಲಿ ಡಿಕೆ ಬ್ರದರ್ಸ್ ಮತ್ತು ಮುನಿರತ್ನ ನಡುವೆ ರಾಜಕೀಯ ಜಟಾಪಟಿ ಜೋರಾಗಿತ್ತು. ಇದೀಗ ಇಬ್ಬರು ಸೇರಿ ಗುದ್ದಲಿ ಪೂಜೆ ಮಾಡಿರುವುದು ನಾನಾ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

  • ಬೆಂಗಳೂರು ವಿವಿಯ ಜ್ಞಾನಭಾರತಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಬೆಂಗಳೂರು ವಿವಿಯ ಜ್ಞಾನಭಾರತಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

    ಬೆಂಗಳೂರು: ನಗರದ ಜ್ಞಾನಭಾರತಿ (Jnanabharathi) ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಜನರು ಅವರನ್ನು ಘೋಷಣೆ ಕೂಗಲು ಕಳುಹಿಸಿದ್ದರೆ ಕೂಗಲು ಬಿಡಿ – ವಿಪಕ್ಷಗಳ ವಿರುದ್ಧ ಸ್ಪೀಕರ್ ಗರಂ

    ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.

    ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ರೈಲು ನಿಲ್ಲೋದಕ್ಕೂ ಮುನ್ನ ಇಳಿಯಲು ಹೋಗಿ ಅವಘಡ – ಹಳಿಗೆ ಸಿಲುಕಿ 2 ಕಾಲು ಕಟ್, ಯುವಕ ಸಾವು

  • ಬೆಂಗಳೂರು ವಿವಿ ಆವರಣದಲ್ಲಿ ಇನ್ಮುಂದೆ ಕಸ ಹಾಕಿದ್ರೆ ಬೀಳುತ್ತೆ ದಂಡ

    ಬೆಂಗಳೂರು ವಿವಿ ಆವರಣದಲ್ಲಿ ಇನ್ಮುಂದೆ ಕಸ ಹಾಕಿದ್ರೆ ಬೀಳುತ್ತೆ ದಂಡ

    ಬೆಂಗಳೂರು: ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸನ್ನ ಸ್ವಚ್ಛವಾಗಿಡಲು ಬೆಂಗಳೂರು ವಿಶ್ವವಿದ್ಯಾಲಯ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ದಂಡ ಪ್ರಯೋಗಕ್ಕೆ ಮುಂದಾಗಿದೆ.

    ಈ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನ ಈಗಾಗಲೇ ಕಸ ಮುಕ್ತ ಮತ್ತು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದೆ. ಆದರೆ ವಿವಿ ಆವರಣದಲ್ಲಿ ಓಡಾಡುವ ಸಾರ್ವಜನಿಕರು ಮತ್ತು ವಾಹನ ಸವಾರರು ಕಸ ಹಾಕುವುದು, ಪ್ಲಾಸ್ಟಿಕ್ ಹಾಕುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕಸ ಹಾಕೋ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಸ್ಥಳದಲ್ಲಿ ದಂಡ ಹಾಕುವ ನಿರ್ಧಾರಕ್ಕೆ ವಿವಿ ಬಂದಿದೆ.

    ಕಸ ಹಾಕುವ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಇನ್ನು ಮುಂದೆ ಸ್ಥಳದಲ್ಲೆ ದಂಡ ಹಾಕಲಾಗುತ್ತದೆ. ಒಂದು ವೇಳೆ ದಂಡದ ನಂತರವೂ ಕಸ ಹಾಕೋದು ಮುಂದುವರೆಸಿದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ವಿಶ್ವವಿದ್ಯಾಲಯ ನೀಡಿದೆ.