Tag: bengaluru university

  • ವಿಶ್ವಾದ್ಯಂತ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ 8 ಪ್ರಾಧ್ಯಾಪಕರು

    ವಿಶ್ವಾದ್ಯಂತ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ 8 ಪ್ರಾಧ್ಯಾಪಕರು

    – ಬೆಂಗಳೂರು ವಿಶ್ವವಿದ್ಯಾಲಯದಿಂದ ಮತ್ತೊಂದು ಜಾಗತಿಕ ಮೈಲಿಗಲ್ಲು

    ಬೆಂಗಳೂರು: 2024ರಲ್ಲಿ ವಿಶ್ವಾದ್ಯಂತದ ಟಾಪ್ 2% ವಿಜ್ಞಾನಿಗಳ ಪ್ರತಿಷ್ಠಿತ ಪಟ್ಟಿಯಲ್ಲಿ (Top Scientists List) ಬೆಂಗಳೂರು ವಿಶ್ವವಿದ್ಯಾನಿಲಯದ (Bengaluru University) ಎಂಟು ಪ್ರಾಧ್ಯಾಪಕರು (Professors) ಸ್ಥಾನ ಪಡೆದುಕೊಂಡಿದ್ದಾರೆ. ಯುಎಸ್‌ಎ, ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ಲ್ಯಾಂಡ್‌ನ ಎಲ್ಸೆವಿಯರ್ ಪಬ್ಲಿಷಿಂಗ್‌ನಿಂದ ವಾರ್ಷಿಕವಾಗಿ ಸೂಚ್ಯಂಕಗಳನ್ನು ಸಂಕಲಿಸಿ ಅದರ ಆಧಾರದ ಮೇಲೆ ಪ್ರಾಧ್ಯಾಪಕರನ್ನು ಗುರುತಿಸಲಾಗಿದೆ.

    ಬೆಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ, ಭೌತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಗಣಿತ ವಿಭಾಗಗಳಿಗೆ ಸೇರಿದ ಪ್ರಾಧ್ಯಾಪಕರುಗಳನ್ನು ಗುರುತಿಸಿ ಗೌರವಿಸಲಾಗಿದೆ. ಚಂದ್ರಶೇಖರಯ್ಯ ಡಿ.ಎಸ್, ದೇವಿ ಎಲ್.ಗೋಮತಿ, ರುದ್ರಯ್ಯ ಎನ್, ಶಿವಕುಮಾರ್, ಸಿ.ಶ್ರೀನಿವಾಸ್, ಕುಂಬಿನರಸಯ್ಯ ಎಸ್, ಈರಯ್ಯ ಬಿ, ಮತ್ತು ವಿಷ್ಣು ಕಾಮತ್ ಅವರು ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಚೆನ್ನೈ ರಸ್ತೆಯಲ್ಲಿ ಪೀಸ್ ಪೀಸ್ ಮಾಡಿದ ಮಹಿಳೆಯ ಶವ ತುಂಬಿದ ಸೂಟ್‍ಕೇಸ್ ಪತ್ತೆ – ಕೊಲೆಯಾಗಿದ್ದು ಸೆಕ್ಸ್ ವರ್ಕರ್!

    ವಿಶ್ವವಿದ್ಯಾನಿಲಯಗಳ ಪೈಕಿ ಬೆಂಗಳೂರು ವಿಶ್ವವಿದ್ಯಾನಿಲಯ ರಾಜ್ಯದ ವಿಶ್ವವಿದ್ಯಾನಿಲಯಗಳಿಂದ ಹೆಚ್ಚಿನ ಸಂಖ್ಯೆಯ ಪ್ರಾಧ್ಯಾಪಕರನ್ನು ಹೊಂದಿದ್ದು, ಮತ್ತೊಮ್ಮೆ ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿದೆ. ಇದನ್ನೂ ಓದಿ: ಕರ್ನಾಟಕದ ಹಳ್ಳಿಹಳ್ಳಿಗಳಲ್ಲೂ ಜಿಯೋ – ಗಾಜನೂರು, ಪೆದ್ದನಪಾಳ್ಯ, ಹುಗ್ಯಂನಂಥ ಗ್ರಾಮಗಳಲ್ಲೂ ಟವರ್‌

    ಈ ಸಾಧನೆ ಕುರಿತು ಉಪಕುಲಪತಿ ಡಾ.ಜಯಕರ ಎಸ್.ಎಂ. ಪ್ರತಿಕ್ರಿಯಿಸಿ, ಬೆಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತವಾಗಿ ಮನ್ನಣೆಯನ್ನು ಗಳಿಸಿದೆ ಮತ್ತು ಇದು ನಮ್ಮ ಪುರಸ್ಕಾರಗಳಿಗೆ ಮತ್ತೊಂದು ಹೆಮ್ಮೆಯ ಸೇರ್ಪಡೆಯಾಗಿದೆ. ವಿಶ್ವವಿದ್ಯಾನಿಲಯವು ವಿಜ್ಞಾನ ಮತ್ತು ಸಂಶೋಧನೆಗೆ ಹೆಚ್ಚಿನ ಒತ್ತು ನೀಡುತ್ತದೆ. ಈ ಗೌರವ ಆ ಪ್ರಯತ್ನಗಳ ಫಲವಾಗಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ವಿಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪ್ರಭಾವ ಬೀರಿದ್ದಾರೆ. ಇದು ಭವಿಷ್ಯದಲ್ಲಿ ನಮ್ಮ ವಿದ್ಯಾರ್ಥಿಗಳ ಅಭಿವೃದ್ಧಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಮುಂದಿನ ದಿನಗಳಲ್ಲಿ ವಿಶ್ವವಿದ್ಯಾನಿಲಯವು ವಿಜ್ಞಾನ ಮತ್ತು ಸಂಶೋಧನೆಯನ್ನು ಇನ್ನಷ್ಟು ಉತ್ತೇಜಿಸುತ್ತದೆ ಎಂದರು. ಇದನ್ನೂ ಓದಿ: ಮನೆಯಲ್ಲಿದ್ದ 5 ವರ್ಷದ ಮಗು ಸಾವು- ಸಾವಿನ ಸುತ್ತ ಅನುಮಾನದ ಹುತ್ತ!

  • ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜ ಸೇವಕ ರಾಜಣ್ಣಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

    ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜ ಸೇವಕ ರಾಜಣ್ಣಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

    ಬೆಂಗಳೂರು: ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಮತ್ತು ಸಮಾಜಸೇವಕ ಕೆ.ಎಸ್ ರಾಜಣ್ಣನವರಿಗೆ ಬೆಂಗಳೂರು ವಿಶ್ವವಿದ್ಯಾಲಯವು (Bengaluru University) ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

    59ನೇ ವಾರ್ಷಿಕ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. 21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು, 5,861 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1,289 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ. ಒಟ್ಟು 308 ಚಿನ್ನದ ಪದಕಗಳನ್ನು (Gold Medal) ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು.

    59ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

    ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ಗಣ್ಯರಿಗೂ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕರಿಸುವ ಸಂದರ್ಭದಲ್ಲಿ ಗುರುಕಿರಣ್ ಕುಟುಂಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್‌ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು. ಇದನ್ನೂ ಓದಿ: Devara Trailer: ರಕ್ತದಿಂದ ಸಮುದ್ರವೇ ಕೆಂಪಾದ ಕಥೆ ಹೇಳೋಕೆ ಬರುತ್ತಿದ್ದಾರೆ ಜ್ಯೂ.ಎನ್‌ಟಿಆರ್‌, ಜಾನ್ವಿ ಕಪೂರ್‌

    ಇನ್ನೂ ಬೆಂಗಳೂರು ವಿಶ್ವವಿದ್ಯಾಲಯ 59ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷರಾದ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವದ ಭಾಷಣ ಮಾಡಿದರು.

    ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಸೇರಿದಂತೆ ಸಿಂಡಿಕೇಟ್ ಸದಸ್ಯರು, ಡೀನರ್ ಉಪಸ್ಥಿತರಿದ್ದರು.  ಇದನ್ನೂ ಓದಿ: ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ HD ಕುಮಾರಸ್ವಾಮಿ ಭರವಸೆ 

  • ಬೆಂಗಳೂರು ವಿವಿಗೆ ಪಿಎಂ ಉಷಾ ಯೋಜನೆಯಡಿ 100 ಕೋಟಿ ಅನುದಾನ ಘೋಷಣೆ

    ಬೆಂಗಳೂರು ವಿವಿಗೆ ಪಿಎಂ ಉಷಾ ಯೋಜನೆಯಡಿ 100 ಕೋಟಿ ಅನುದಾನ ಘೋಷಣೆ

    ಬೆಂಗಳೂರು: ಪಿಎಂ-ಯುಎಸ್‌ಎಚ್‌ಎ ಯೋಜನೆಯಡಿ 100 ಕೋಟಿ ರೂ. ಅನುದಾನ ಘೋಷಿಸುವುದರೊಂದಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗಮನಾರ್ಹ ಉತ್ತೇಜನವನ್ನು ಪಡೆದುಕೊಂಡಿದೆ ಎಂದು ವಿವಿಯ ಉಪಕುಲಪತಿ ಜಯಕರ ಎಸ್.ಎಂ ಹೇಳಿದ್ದಾರೆ.

    ದೇಶದ 1,472 ವಿಶ್ವವಿದ್ಯಾಲಯಗಳಲ್ಲಿ ಕೇವಲ 26 ವಿಶ್ವವಿದ್ಯಾಲಯಗಳು ಮಾತ್ರ PM USHA (MERU ) ಮಲ್ಟಿ-ಡಿಸಿಪ್ಲೀನರಿ ಎಜುಕೇಶನ್ ಆಂಡ್ ರಿಸರ್ಚ್ ಯೂನಿವರ್ಸಿಟಿ ಮಾನದಂಡದ ಅಡಿಯಲ್ಲಿ ಸ್ಥಾನ ಪಡೆದಿದೆ. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಕೂಡ ಒಂದಾಗಿದೆ. ಈ ಮೂಲಕ ಬೆಂಗಳೂರು ವಿಶ್ವವಿದ್ಯಾಲಯ ಸಂಶೋಧನೆ, ಅನ್ವೇಷಣೆ, ಅಭಿವೃದ್ಧಿ ಕಾರ್ಯಕ್ಕೆ ಮತ್ತಷ್ಟು ಬಲ ತಂದಿದೆ ಎಂದು ತಿಳಿಸಿದ್ದಾರೆ.

    ವಿಶ್ವವಿದ್ಯಾಲಯದ ನಿರಂತರ ಶ್ರಮ ಮತ್ತು ಸಂಶೋಧನೆಗೆ ಈ ಅನುದಾನ ಲಭಿಸಿದೆ‌. ಶಿಕ್ಷಣ, ಸಂಶೋಧನೆ, ಅನ್ವೇಷಣೆ, ವಿದ್ಯಾರ್ಥಿ ಸ್ನೇಹಿ ವಾತಾವರಣಗಳನ್ನು ನಿರ್ಮಿಸಿದ ಗಮನಾರ್ಹ ಸಾಧನೆಗೆ ವಿವಿಗೆ ಅನುದಾನ ದೊರೆತಿದೆ. ಈ ಸಾಧನೆಗೆ ವಿವಿಯ ಪ್ರಾಧ್ಯಾಪಕರು, ನಿರ್ದೇಶಕರು, ಅಧಿಕಾರಿಗಳು ನಿರಂತರ ಪ್ರಯತ್ನವೇ ಕಾರಣವಾಗಿದೆ ಎಂದು ಶ್ಲಾಘಿಸಿದ್ದಾರೆ.

    ಯಾವೆಲ್ಲ ಮಾನದಂಡದಡಿ ವಿವಿಗೆ ಅನುದಾನ ಲಭ್ಯ?
    ಸಂಶೋಧನೆ, ಶೈಕ್ಷಣಿಕ ಅಭಿವೃದ್ಧಿ, ಕೌಶಲ್ಯ-ಆಧಾರಿತ ವೃತ್ತಿಪರ ಶಿಕ್ಷಣ, ಉದ್ಯೋಗಾವಕಾಶ, ಉದಯೋನ್ಮುಖ ಕೋರ್ಸ್‌ಗಳು, ಉದ್ಯಮ – ಸಹಭಾಗಿತ್ವ, ಶೈಕ್ಷಣಿಕ ಸುಧಾರಣೆಗಳು, ಗುಣಮಟ್ಟ ಶಿಕ್ಷಣ.

    ಇದಲ್ಲದೇ, ಗುಣಮಟ್ಟದ ಶಿಕ್ಷಣ ಮತ್ತು ಸಂಶೋಧನೆಗೆ ವಿಶ್ವವಿದ್ಯಾನಿಲಯದ ಅನುಸರಣೆ ಈ ಗಮನಾರ್ಹ ಸಾಧನೆಯನ್ನು ನೀಡಿದೆ ಎಂದು ಉಪಕುಲಪತಿ ಡಾ. ಜಯಕರ ಎಸ್.ಎಂ ಒತ್ತಿ ಹೇಳಿದರು. ಡಾ.ಜಯಕರ್ ಅವರು ಸಂಶೋಧನೆ ಮತ್ತು ಅನ್ವೇಷಣೆಯನ್ನು ಮುಂದುವರೆಸಲು ವಿಶ್ವವಿದ್ಯಾನಿಲಯದ ನಿರಂತರ ಸಮರ್ಪಣೆಯನ್ನು ಒತ್ತಿ ಹೇಳಿದರು. ಅನುದಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ, ಸಂಶೋಧನಾ ಪ್ರಯತ್ನಗಳು ಮತ್ತು ಒಟ್ಟಾರೆ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತದೆ ಎಂದು ಒತ್ತಿ ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡರಿಂದಲೂ ಸಹಕಾರಿ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.

    ಬೆಂಗಳೂರು ವಿಶ್ವವಿದ್ಯಾಲಯ ದೇಶಕ್ಕೆ ಮಾತ್ರ ಸೀಮಿತವಾಗದೆ ವಿಶ್ವದರ್ಜೆಯ ಮಾನ್ಯತೆಯನ್ನು ಪಡೆದಿದೆ. ಈ ಅನುದಾನದ ಮೂಲಕ ವಿವಿ ಅಭಿವೃದ್ಧಿಗೆ ಮತ್ತಷ್ಟು ಪೂರಕವಾಗಿದೆ. ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ, ಪೂರಕ ವಾತವರಣ ನಿರ್ಮಿಸುವ ಕೆಲಸವನ್ನು ಮಾಡಲಾಗುತ್ತದೆ. ಈ ಅನುದಾನ ಘೋಷಣೆಗೆ ಕಾರಣವಾದ ಎಲ್ಲರಿಗೂ ಅಭಿನಂದನೆ ತಿಳಿಸುವುದಾಗಿ ಕುಲಸಚಿವ ಶೇಕ್ ಲತೀಫ್ ತಿಳಿಸಿದ್ದಾರೆ.

  • ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಘೋಷಣೆ

    ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಘೋಷಣೆ

    ಬೆಂಗಳೂರು: ಈ ಬಾರಿಯ ಬೆಂಗಳೂರು ವಿಶ್ವವಿದ್ಯಾಲಯ ಕೊಡಮಾಡುವ ಗೌರವ ಡಾಕ್ಟರೇಟ್‌ ಪದವಿಗೆ (Honorary Doctorate) ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು (HD DeveGowda) ಭಾಜನರಾಗಿದ್ದಾರೆ.

    ಬೆಂಗಳೂರು ವಿಶ್ವವಿದ್ಯಾಲಯ (Bengaluru University) ತನ್ನ 58ನೇ ಘಟಿಕೋತ್ಸವದ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದೆ. ಮುಂದೆ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುತ್ತದೆ.  ಇದನ್ನೂ ಓದಿ: ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆಯಾಗಿದ್ದ ತಮಿಳುನಾಡಿನ ಡಾ. ಸಿಂಧುಜಾ ಅನುಮಾನಾಸ್ಪದ ಸಾವು

    ಜೆಡಿಎಸ್‌ನ ಕಟ್ಟಾಳು ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಇಳಿ ವಯಸ್ಸಿನಲ್ಲೂ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಇಂದಿಗೂ ಕನ್ನಡಿಗರ ಪರ ಸಂಸತ್ತಿನಲ್ಲಿ ಧ್ವನಿ ಎತ್ತುತ್ತಿದ್ದಾರೆ. ಇನ್ನು ಕರ್ನಾಟಕ ಕಂಡ ಏಕೈಕ ಪ್ರಧಾನಿ ಎಂಬ ಹೆಗ್ಗಳಿಕೆಯೂ ಇವರಿಗಿದೆ. ಇದನ್ನೂ ಓದಿ: ಯಡಿಯೂರಪ್ಪರಂತೆ ಅವರ ಪುತ್ರ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು: ರೇಣುಕಾಚಾರ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿನ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಚಿರತೆ ಆತಂಕ

    ಬೆಂಗಳೂರಿನ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಚಿರತೆ ಆತಂಕ

    ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ (Bengaluru University) ಚಿರತೆ (Leopard) ಕಾಣಿಸಿಕೊಂಡಿದೆ ಅನ್ನೋ‌ ಮಾತುಗಳು ಒಬ್ಬರಿಂದ ಒಬ್ಬರಿಗೆ ಹರಡಿ ಆತಂಕ‌ ಸೃಷ್ಟಿಯಾಗಿದೆ.

    ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಜಿಂಕೆ ಭೇಟೆಯಾಡಿದ ಬಳಿಕ ಬೆಂಗಳೂರು ಮತ್ತು ಬೆಂಗಳೂರಿನ (Bengaluru) ‌ಹೊರವಲಯದಲ್ಲಿ ಚಿರತೆಗಳ ಸಂಚಾರವಾಗ್ತಿರೋ ಬಗ್ಗೆ ಅನೇಕ‌ ಕಡೆ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದನ್ನೂ ಓದಿ: ಗುಜರಾತಿನಲ್ಲಿ ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

    ಈಗ ಬೆಂಗಳೂರಿನ ಜ್ಞಾನ ಭಾರತಿ ಆವರಣದಲ್ಲಿ ಚಿರತೆ ಬಂದಿದೆ ಅನ್ನೋ ಕಾರಣಕ್ಕೆ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯೂನಿವರ್ಸಿಟಿಯಲ್ಲಿ ಪ್ರವೇಶ ಬಂದ್ ಮಾಡಲಾಗಿದೆ. ನಾಗರಭಾವಿಯಿಂದ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸೋ ರಸ್ತೆ ಬಂದ್ ಮಾಡಿದ್ದಾರೆ.

    ಯಾರನ್ನೂ ರಸ್ತೆಯಲ್ಲಿ ಬಿಡದಂತೆ ಸೂಚನೆ ನೀಡಿದ್ದು, ಯಾವ ಗಾಡಿಗಳನ್ನು ಬಿಡದೆ ಪೊಲೀಸರು ಗೇಟೆ ಅನ್ನು ಕ್ಲೋಸ್ ಮಾಡಿದ್ದಾರೆ. ಜ್ಞಾನ ಭಾರತಿ ಪೊಲೀಸರಿಂದ ಗೇಟ್ ಬಂದ್ ಮಾಡಿ ವಾಹನ ಸಂಚಾರಕ್ಕೆ ನಿಷೇಧವನ್ನ ಹಾಕಿದ್ದಾರೆ. ಇದನ್ನೂ ಓದಿ: BJPಯಿಂದ ರಿಪೋರ್ಟ್‌ ಕಾರ್ಡ್ ಪಾಲಿಟಿಕ್ಸ್; ಜನರ ಮುಂದೆ ಡಬಲ್ ಇಂಜಿನ್ ಸರ್ಕಾರಗಳ ಸಾಧನಾ ವರದಿ ಅನಾವರಣಕ್ಕೆ ಮುಹೂರ್ತ ಫಿಕ್ಸ್

    ಜೊತೆಗೆ ಸಂಜೆ ವೇಳೆಯಲ್ಲಿ ಒಂಟಿಯಾಗಿ ಕ್ಯಾಂಪಸ್‌ನಲ್ಲಿ ಓಡಾಡದಂತೆ ಸಾರ್ವಜನಿಕರಿಗೆ ಸೂಚನೆ ಸಹ ನೀಡಲಾಗಿದೆ. ಕ್ಯಾಂಪಸ್‌ನಲ್ಲಿ ಚಿರತೆ‌ ಇದೆಯಾ ಇಲ್ವಾ ಅನ್ನೋ ಅನುಮಾನ‌ ಕೂಡ ಶುರುವಾಗಿದೆ. ಇಲ್ಲಿವರೆಗೆ ಯಾರು ಸಹ ಚಿರತೆಯನ್ನ ನೋಡಿಲ್ಲ. ಅರಣ್ಯ ಸಿಬ್ಬಂದಿಗೂ ಚಿರತೆ ಸಂಚಾರ ಮಾಡಿದೆ ಅನ್ನೋ ಕುರುಹುಗಳು ಪತ್ತೆಯಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ಜಯಕರ ಎಸ್.ಎಂ ನೇಮಕ

    ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ. ಜಯಕರ ಎಸ್.ಎಂ ನೇಮಕ

    ಬೆಂಗಳೂರು: ಮಾರುತಿ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಆಂಡ್ ರಿಸರ್ಚ್, ಪ್ರಾಸ್ಥೋಡೆಂಟಿಕ್ಸ್ ವಿಭಾಗದ ಪ್ರಾಂಶುಪಾಲ ಹಾಗೂ ಮುಖ್ಯಸ್ಥರಾಗಿರುವ ಡಾ. ಜಯಕರ ಎಸ್.ಎಂ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಯನ್ನಾಗಿ ಸೋಮವಾರ ನೇಮಿಸಲಾಗಿದೆ.

    ಜಯಕರ ಅವರನ್ನು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಯನ್ನಾಗಿ 4 ವರ್ಷಗಳ ಅವಧಿಗೆ ನೇಮಿಸಿದ್ದಾರೆ. ನಿರ್ಗಮಿಸುತ್ತಿರುವ ಪ್ರಭಾರ ಕುಲಪತಿಗಳಾದ ಪ್ರೊ. ಸಿಂಥಿಯಾ ಮೆನೆಜಸ್ ಅವರಿಂದ ಜಯಕರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಬಗ್ಗೆ ರಾಜಭವನದಿಂದ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನೂ ಓದಿ: ಸುಪ್ರೀಂನಿಂದ ಮಹಾರಾಷ್ಟ್ರದ ಎರಡೂ ಬಣದ ಶಾಸಕರಿಗೆ ತಾತ್ಕಾಲಿಕ ರಿಲೀಫ್‌

    ಜಯಕರ ಅವರನ್ನು ಕುಲಪತಿಯನ್ನಾಗಿ ನೇಮಿಸುವ ಸಂದರ್ಭ ಕುಲಸಚಿವರಾದ ಪ್ರೊ.ಎಂ. ಕೊಟ್ರೇಶ್, ಕುಲಸಚಿವ(ಮೌಲ್ಯಮಾಪನ) ಪ್ರೊ.ಜೆ.ಟಿ ದೇವರಾಜು ಹಾಗೂ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಎಐಎಡಿಎಂಕೆ ಕಿತ್ತಾಟ – ಪಳನಿಸ್ವಾಮಿ ತಾತ್ಕಾಲಿಕ ಬಾಸ್‌, ಪನ್ನೀರ್‌ಸೆಲ್ವಂ ಉಚ್ಛಾಟನೆ

    Live Tv
    [brid partner=56869869 player=32851 video=960834 autoplay=true]

  • ವಿವಿಧ ಕಚೇರಿಗಳಿಗೆ ಜಾಗ ನೀಡಿದರೆ ಬೆಂಗಳೂರು ವಿವಿಯ ಜೀವ ವೈವಿಧ್ಯ ತಾಣಕ್ಕೆ ಕುತ್ತು: ಎಚ್‍ಡಿಕೆ

    ವಿವಿಧ ಕಚೇರಿಗಳಿಗೆ ಜಾಗ ನೀಡಿದರೆ ಬೆಂಗಳೂರು ವಿವಿಯ ಜೀವ ವೈವಿಧ್ಯ ತಾಣಕ್ಕೆ ಕುತ್ತು: ಎಚ್‍ಡಿಕೆ

    – ಯೋಗ ವಿವಿ, ಇತರೆ ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ಕ್ರಮ ಖಂಡನೀಯ
    – ಕೂಡಲೇ ಜಾಗವನ್ನು ಮರಳಿ ನೀಡಬೇಕು

    ಬೆಂಗಳೂರು: ಜೀವ ವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ. ಹಿರಿಯ ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಯೋಗ ವಿವಿಗೆ 15 ಎಕರೆ, ಗುಲ್ಬರ್ಗಾ ವಿವಿಗೆ 15 ಎಕರೆ, ಸಿಬಿಎಸ್‍ಸಿ ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿದಂತೆ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಈ ಜೀವವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕು. ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ 20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವ ವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವ ವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರ, ಪರಿಸರ ವಿಜ್ಞಾನ, ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ. ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು, ಬೆಳೆಸಬೇಕು ಎಂದು ಆಗ್ರಹಿಸಿದ್ದಾರೆ.

  • ಬೆಂಗ್ಳೂರು ವಿವಿಯಿಂದ ಸಿಹಿ ಸುದ್ದಿ- ಪದವಿ ಪಡೆಯಲು ಮತ್ತೊಂದು ಅವಕಾಶ!

    ಬೆಂಗ್ಳೂರು ವಿವಿಯಿಂದ ಸಿಹಿ ಸುದ್ದಿ- ಪದವಿ ಪಡೆಯಲು ಮತ್ತೊಂದು ಅವಕಾಶ!

    ಬೆಂಗಳೂರು: ಪದವಿ ಪೂರ್ಣಗೊಳಿಸಲು ಸಾಧ್ಯವಾಗದೆ ಸಮಸ್ಯೆ ಎದುರಿಸಿದ್ದ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಮತ್ತೊಮ್ಮೆ ಪರೀಕ್ಷೆ ಬರೆಯಲು ಒಂದು ಸುವರ್ಣ ಅವಕಾಶ ನೀಡಲು ಚಿಂತನೆ ನಡೆಸಿದೆ. ವಿವಿಯ ಹಳೆಯ ವಿದ್ಯಾರ್ಥಿಗಳಿಗೆ ಪದವಿ ಪಡೆದುಕೊಳ್ಳಲು ಅವಕಾಶವನ್ನು ಮಾಡಿಕೊಡಲಿದೆ.

    ಹಳೆಯ ವಿದ್ಯಾರ್ಥಿಗಳು ಪಾಸ್ ಆಗದ ವಿಷಯಗಳನ್ನು ಮತ್ತೆ ಪರೀಕ್ಷೆ ಬರೆದು ಪಾಸ್ ಮಾಡಿಕೊಳ್ಳುವ ಸುವರ್ಣ ಅವಕಾಶವನ್ನು ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾಡಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಣೆ ಹೊರಡಿಸಲಿದೆ ಎಂಬ ಮಾಹಿತಿ ಲಭಿಸಿದೆ.

    2004ರಿಂದ 2019ರವರೆಗೆ ಇಂಜಿನಿಯರಿಂಗ್ ಒಳಗೊಂಡಂತೆ ಎಲ್ಲಾ ಪದವಿ ಕೋರ್ಸ್‌ಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬಹುದಾಗಿದೆ. ಇಂತಹ ಸಾವಿರಾರು ವಿದ್ಯಾರ್ಥಿಗಳ ಪೈಕಿ ಕೆಲವರು ಮತ್ತೊಮ್ಮೆ ಅವಕಾಶ ನೀಡುವಂತೆ ಬೆಂ.ವಿ.ವಿ.ಗೆ ಪತ್ರ ಬರೆದು ಮನವಿ ಮಾಡಿದ್ದರು. ಒಂದಾದ ಮೇಲೆ ಒಂದರಂತೆ ಸಾಕಷ್ಟು ಮನವಿ ಪತ್ರಗಳು ವಿವಿಗೆ ಬಂದ ಹಿನ್ನಲೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಕುರಿತು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

    ಅದಷ್ಟು ಬೇಗ ಪ್ರಕಟಣೆ ಹೊರಡಿಸಿ 2004 ರಿಂದ 2019 ರ ನಡುವೆ ವ್ಯಾಸಂಗ ಮಾಡಿ ಪದವಿ ಪಡೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸುವ ಅವಕಾಶ ಮಾಡಿಕೊಡಲು ಬೆಂಗಳೂರು ವಿಶ್ವವಿದ್ಯಾಲಯ ಮುಂದಾಗಿದೆ. ಅನುತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸುವ ಆಶಾಕಿರಣ ಮತ್ತೊಮ್ಮೆ ಮೂಡಿದೆ.

  • ಬಿಕಾಂನಲ್ಲಿ ಬಿಬಿಎಂಪಿ ಕಾಲೇಜು ವಿದ್ಯಾರ್ಥಿನಿಗೆ ಪ್ರಥಮ ರ‌್ಯಾಂಕ್ – ಆಯುಕ್ತರಿಂದ ಸನ್ಮಾನ

    ಬಿಕಾಂನಲ್ಲಿ ಬಿಬಿಎಂಪಿ ಕಾಲೇಜು ವಿದ್ಯಾರ್ಥಿನಿಗೆ ಪ್ರಥಮ ರ‌್ಯಾಂಕ್ – ಆಯುಕ್ತರಿಂದ ಸನ್ಮಾನ

    ಬೆಂಗಳೂರು: ಬಿಬಿಎಂಪಿ ವತಿಯಿಂದ ನಡೆಸುತ್ತಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರಹಮತುನ್ನೀಸಾ ಬಿಕಾಂ ಪದವಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೇ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ. ಈ ಸಂಬಂಧ ಇಂದು ಪಾಲಿಕೆ ಆಯುಕ್ತರಾದ ಬಿ.ಹೆಚ್.ಅನಿಲ್ ಕುಮಾರ್ ಪಾಲಿಕೆ ಕೇಂದ್ರ ಕಚೇರಿಯಲ್ಲಿ ರಹಮತುನ್ನೀಸಾ ರವರನ್ನು ಸನ್ಮಾನಿಸಿದರು.

    ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಅಡಿಯಲ್ಲಿನ 475 ಪದವಿ ಕಾಲೇಜುಗಳಲ್ಲಿ 7 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು 2016-19ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಪೈಕಿ ಬಿಬಿಎಂಪಿ ವ್ಯಾಪ್ತಿಗೊಳಪಡುವ 4 ಪದವಿ ಕಾಲೇಜುಗಳಲ್ಲಿ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಎ, ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ ಬಿಕಾಂ ಪರೀಕ್ಷೆಯಲ್ಲಿ ರೆಹಮತುನ್ನೀಸಾ 4,600 ಅಂಕಗಳಿಗೆ 4,226 (ಶೇ.91.87) ಅಂಕ ಪಡೆದು ಬೆಂಗಳೂರು ವಿಶ್ವವಿದ್ಯಾಲಯಕ್ಕೇ ಮೊದಲ ಸ್ಥಾನ ಪಡೆದಿದ್ದಾರೆ.

    ಬಡತನದ ಹಿನ್ನೆಲೆ ಹೊಂದಿರುವ ರಹಮಾತುನ್ನೀಸಾ ಐಎಎಸ್ ಆಗುವ ಕನಸನ್ನು ಕಂಡಿದ್ದು, ಅವರ ಕನಸಿನ ಸಾಧನೆಗೆ ಪಾಲಿಕೆ ವತಿಯಿಂದ ಶುಭವನ್ನು ಕೋರುತ್ತಾ, ಅವಶ್ಯಕ ಸೌಲಭ್ಯಗಳನ್ನು ಪಾಲಿಕೆಯಿಂದ ಒದಗಿಸುವ ಭರವಸೆಯೂ ಇಂದು ನೀಡಲಾಯಿತು.

    ರೆಹಮತುನ್ನೀಸಾ 4,600 ಅಂಕಗಳಿಗೆ 4,226 (ಶೇ.91.87) ಅಂಕ ಪಡೆದು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಅದಲ್ಲದೆ ಹರಿಜ ಸುಲ್ತಾನ (ಶೇ.91.8), ಉಮ್ಮೆ ಹನಿ(ಶೇ.89.7), ಉಮ್ಮೆ ಕುಲ್ಸಮ್(ಶೇ.84.8), ಅರ್ಷಿಯಾ ತಾಜ್(ಶೇ.83.8), ಅನೀಸ (ಶೇ.83.4), ಪಾಥಿಮುನ್ನೀಸಾ (ಶೇ.82.5), ಸಮ್ರೀನ್ ಬಾನು (ಶೇ.82.1), ಉಮ್ಮೆ ಅಸ್ಮಾ(ಶೇ.80.4), ಅಲ್ಮಸ್ ತಾಜ್ (ಶೇ.80.1) ಅಂಕ ಪಡೆದು ತೆರ್ಗಡೆಯಾಗಿದ್ದಾರೆ.

  • ಜೈಲಿನಲ್ಲಿ ಕನ್ನಡ ಕಲಿಯಲು ಮುಂದಾದ ಶಶಿಕಲಾ

    ಜೈಲಿನಲ್ಲಿ ಕನ್ನಡ ಕಲಿಯಲು ಮುಂದಾದ ಶಶಿಕಲಾ

    ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣ ಸಂಬಂಧ  ಪರಪ್ಪನ ಅಗ್ರಹಾರ ಸೇರಿರುವ ತಮಿಳುನಾಡಿ ಶಶಿಕಲಾ ಕನ್ನಡ ಕಲಿಯಲು ಆಸಕ್ತಿ ತೋರಿದ್ದಾರೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು, ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ಕನ್ನಡ ಕಲಿಯಬೇಕೇಂಬ ಆಸೆಯನ್ನು ಹೊಂದಿದ್ದು, ಜೈಲಿನಿಂದಲೇ ಕನ್ನಡ ಸರ್ಟಿಫಿಕೇಟ್ ಕೋರ್ಸ್ ಮಾಡಲು ಆಸಕ್ತಿ ತೋರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಈಗಾಗಲೇ ಈ ಬಗ್ಗೆ ಬೆಂಗಳೂರು ವಿಶ್ವವಿದ್ಯಾನಿಲಯದ ದೂರು ಶಿಕ್ಷಣ ನಿರ್ದೇಶನಾಲಯಕ್ಕೆ ಜೈಲಾಧಿಕಾರಿಗಳು ಮಾಹಿತಿಯನ್ನು ಕಳುಹಿಸಿಕೊಟ್ಟಿದ್ದಾರೆ. ಅಲ್ಲದೇ ಶಶಿಕಲಾ ಸೇರಿದಂತೆ ಪರಪ್ಪನ ಅಗ್ರಹಾರದ 200 ಕ್ಕೂ ಹೆಚ್ಚು ಖೈದಿಗಳು ಕನ್ನಡ ಸರ್ಟಿಫಿಕೇಟ್ ಕೋರ್ಸ್ ಪಡೆಯುವುದಕ್ಕೆ ಆಸಕ್ತಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ.

    ಇದೇ ಶನಿವಾರದಿಂದ ಬೆಂಗಳೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ತೆರಳಿ ಶಶಿಕಲಾ ಸೇರಿದಂತೆ ಇತರೆ ಖೈದಿಗಳಿಂದ ಅರ್ಜಿಯನ್ನು ಭರ್ತಿ ಮಾಡಿಸಿಕೊಂಡು ಸಹಿ ಪಡೆದುಕೊಳ್ಳಲಿದ್ದಾರೆ. ದೂರ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ನೋಂದಣಿ ಮಾಡಲು ಜೈಲಿನಲ್ಲಿರುವ ಖೈದಿಗಳನ್ನು ಉತ್ತೇಜಿಸಲು ನಿರ್ದೇಶನಾಲಯದ ಅಧಿಕಾರಿಗಳು ಜೈಲಿಗೆ ತೆರಳಿದ್ದಾಗ ಈ ವಿಷಯ ತಿಳಿದು ಶಶಿಕಲಾ ಕೂಡ ಕೋರ್ಸ್ ಮಾಡಲು ಆಸಕ್ತಿ ವಹಿಸಿದ್ದಾರೆ ಎನ್ನಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ದೂರಶಿಕ್ಷಣ ನಿರ್ದೇಶಕ ಪ್ರೊ.ಬಿ.ಸಿ.ಮೈಲಾರಪ್ಪ, ಶಶಿಕಲಾರವರು ಜೈಲು ಸೇರಿದಾಗ ಕನ್ನಡ ಗೊತ್ತಿರಲಿಲ್ಲ. ಈಗ ಸ್ವಲ್ಪ ಸ್ವಲ್ಪ ಕನ್ನಡ ಪದವನ್ನು ಬಳಸುತ್ತಿದ್ದಾರೆ. ಕನ್ನಡ ಕಲಿಯಲು ಆಸಕ್ತಿ ತೋರಿಸಿರುವುದರಿಂದ ಶಶಿಕಲಾ ಸೇರಿದಂತೆ 200ಕ್ಕೂ ಹೆಚ್ಚು ಖೈದಿಗಳಿಗೆ ಜೈಲಿನಲ್ಲೇ ಕನ್ನಡ ಶಿಕ್ಷಣ ಪಾಠ ಮಾಡಲಾಗುತ್ತದೆ. ಅಲ್ಲದೇ ಇದೇ ಶನಿವಾರ ಶಶಿಕಲಾರ ಅರ್ಜಿಯನ್ನು ಸಹ ಭರ್ತಿಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv