Tag: Bengaluru VV

  • ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಮಾರಾಮಾರಿ – ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

    ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಮಾರಾಮಾರಿ – ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

    ಬೆಂಗಳೂರು: ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

    ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನವಾದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರೆ ಇತ್ತ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.

    ಪ್ರತಿಭಟನೆ ವೇಳೆ ಎಬಿವಿಪಿ ವಿದ್ಯಾರ್ಥಿಗಳೊಂದಿಗೆ ಸಂಶೋಧನಾ ವಿದ್ಯಾರ್ಥಿಗಳು ವಾಗ್ವಾದ ಇಳಿದಿದ್ದು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರವೇ ದೊಡ್ಡದು. ದೇಶಕ್ಕಾಗಿ ನೀವು ಬರುವುದಿಲ್ಲ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗುವುದು ಇದೆಲ್ಲ ಮಾಮೂಲಿಯಾಗಿದೆ. ಇವತ್ತು ನಮ್ಮ ಪ್ರತಿಭಟನೆ ಇದೆ. ನೀವು ನಾಳೆ ಬನ್ನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ

    ಗಲಾಟೆ ವೇಳೆ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳು, ಮನ ಬಂದಂತೆ ತಮ್ಮ ಸ್ನೇಹಿತರನ್ನ ಹಾಸ್ಟೆಲ್‍ನಲ್ಲಿ ಉಳಿಸಿಕೊಳ್ಳುತ್ತಿದ್ದರು. ಇದರಿಂದ ಉಳಿದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿತ್ತು. ಕೆಲ ಸಂಶೋಧನಾ ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಿದರೆ ನೀವು ಜೂನಿಯರಗಳು ಅಂತ ದರ್ಪ ಮಾಡುತ್ತಿದ್ದಾರೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ಈ ವೇಳೆ ಎರಡೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರ ವಾಗ್ವಾದ ನಡೆದು ಜಗಳ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ: ನಲಪಾಡ್ ಅಧಿಕಾರ ಸ್ವೀಕಾರ

    ಕಳೆದ ಎರಡು ದಿನಗಳಿಂದ ಈ ಕುರಿತು ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯುತ್ತಿದೆ. ಆದರೆ ಇಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದ ವೇಳೆ ಗಲಾಟೆ ನಡೆದಿದೆ.

  • ಮದುವೆ ದಿನವೇ ಪರೀಕ್ಷೆ ಬರೆದ ಮಧುಮಗಳು – ಉದಾರತೆ ಮೆರೆದ ಕುಲಸಚಿವರು

    ಮದುವೆ ದಿನವೇ ಪರೀಕ್ಷೆ ಬರೆದ ಮಧುಮಗಳು – ಉದಾರತೆ ಮೆರೆದ ಕುಲಸಚಿವರು

    ಬೆಂಗಳೂರು: ಮದುವೆ ಮಂಟಪದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಗೆ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ ಶಿವರಾಜುರವರು ಧೈರ್ಯ ತುಂಬಿ ಪರೀಕ್ಷೆ ಮುಗಿಯುವರೆಗೂ ಸ್ಥಳದಲ್ಲೇ ಇದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಬೆಂಗಳೂರು ವಿ.ವಿ ವ್ಯಾಪ್ತಿಯ ಸ್ನಾತಕೋತ್ತರ ಕೇಂದ್ರ ಏಮ್ಸ್ ಆಚಾರ್ಯ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಜ.30 ರಂದು ಪರೀಕ್ಷೆ ದಿನವೇ ವಿದ್ಯಾರ್ಥಿನಿಯೋರ್ವಳ ಮದುವೆ ಸಹ ನಡೆದಿತ್ತು. ಮದುವೆಯ ಮುಹೂರ್ತ ಕಾರ್ಯ ಮುಗಿಯುತ್ತಿದ್ದಂತೆ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಬಂದಿದ್ದಾರೆ. ಈ ವೇಳೆ ಒತ್ತಡಕ್ಕೆ ಸಿಲುಕಿದ್ದ ಮದುಮಗಳಿಗೆ ಸ್ವತಃ ಕುಲಸಚಿವರೇ ಧೈರ್ಯ ತುಂಬಿ ಆಕೆಯ ಆತಂಕವನ್ನು ದೂರವಾಗಿಸಿ ಪರೀಕ್ಷೆ ಮುಗಿಯುವವರೆಗೆ ಅಲ್ಲಿಯೇ ಹಾಜರಿದ್ದು ಉದಾರತೆ ಮೆರೆದಿದ್ದಾರೆ.

    ಪರೀಕ್ಷೆ ಬರೆಯುತ್ತಿದ್ದ ನವವಧುವಿನ ಪತಿಯೂ ಸಹ ಆಕೆ ಪರೀಕ್ಷೆ ಬರೆದು ಮುಗಿಯುವವರೆಗೂ ಸಹ ಕಾಲೇಜಿನ ಹೊರಗೆ ಕುಳಿತು ಆಕೆಯ ಶೈಕ್ಷಣಿಕ ಪರೀಕ್ಷೆಗೆ ಪ್ರೋತ್ಸಾಹ ನೀಡಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರು ವಿವಿಯ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರೋ. ಶಿವರಾಜುರವರ ಈ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರಶಂಸೆಗೆ ಕಾರಣವಾಗಿದೆ.