Tag: Bengaluru Weather

  • ರಾಜ್ಯದ ಹವಾಮಾನ ವರದಿ: 23-05-2024

    ರಾಜ್ಯದ ಹವಾಮಾನ ವರದಿ: 23-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದಿನಿಂದ (ಮೇ 23) ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ಮುಖ್ಯಸ್ಥರಾದ ಡಾ.ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.

    ರಾಜದಲ್ಲಿ ಹವಾಮಾನ ವಾತಾವರಣ ಹೇಗಿರಲಿದೆ?

    ಮೇ 23: ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಬಳ್ಳಾರಿ, ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (40-45 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-45 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

    ಮೇ 24: ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಹಲವೆಡೆ ಗುಡುಗು ಸಹಿತ ಗಾಳಿ ಸಹಿತ (ಗಂಟೆಗೆ 40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.
    * ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    ಮೇ 25: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಬೀದರ್, ಕಲಬುರ್ಗಿ, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 26: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    •ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ರಾಮನಗರ, ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ರಾಯಚೂರು, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
    * ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬೀದರ್, ಕಲಬುರ್ಗಿ, ಬಾಗಲಕೋಟೆ, ಕಲಬುರ್ಗಿ ಜಿಲ್ಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 27: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
    * ಕೊಡಗು ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
    * ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 28: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
    * ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ.
    * ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-22
    ಮಂಗಳೂರು: 31-26
    ಶಿವಮೊಗ್ಗ: 34-23
    ಬೆಳಗಾವಿ: 33-23
    ಮೈಸೂರು: 30-22

    ಮಂಡ್ಯ: 32-23
    ಮಡಿಕೇರಿ: 25-18
    ರಾಮನಗರ: 32-22
    ಹಾಸನ: 31-22
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 33-22

    ಕೋಲಾರ: 32-22
    ತುಮಕೂರು: 33-23
    ಉಡುಪಿ: 31-26
    ಕಾರವಾರ: 32-28
    ಚಿಕ್ಕಮಗಳೂರು: 30-21
    ದಾವಣಗೆರೆ: 35-24

    ಹುಬ್ಬಳ್ಳಿ: 36-24
    ಚಿತ್ರದುರ್ಗ: 34-23
    ಹಾವೇರಿ: 36-24
    ಬಳ್ಳಾರಿ: 28-26
    ಗದಗ: 36-24
    ಕೊಪ್ಪಳ: 36-25

    ರಾಯಚೂರು: 38-28
    ಯಾದಗಿರಿ: 38-28
    ವಿಜಯಪುರ: 39-27
    ಬೀದರ್: 38-27
    ಕಲಬುರಗಿ: 39-28
    ಬಾಗಲಕೋಟೆ: 38-26

  • ಬೆಂಗಳೂರಿನ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ ತಾಪಮಾನ

    ಬೆಂಗಳೂರಿನ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ ತಾಪಮಾನ

    ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು (Bengaluru Temperature) ಇತಿಹಾಸದಲ್ಲೇ ದಾಖಲೆಯ ತಾಪಮಾನ ದಾಖಲಾಗಿದೆ. ಭಾನುವಾರ 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

    ಇದು ಬೆಂಗಳೂರಿನ ಇದುವರೆಗಿನ ಗರಿಷ್ಠ ತಾಪಮಾನವಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇದನ್ನೂ ಓದಿ: SC-ST ಸಮುದಾಯಗಳಿಗೆ ಸೇರಬೇಕಿದ್ದ 11,000 ಕೋಟಿ ಹಣವನ್ನ ಕಾಂಗ್ರೆಸ್ ನುಂಗಿ ನೀರು ಕುಡಿದಿದೆ: ಮೋದಿ ಕೆಂಡ

    ದಾಖಲೆಗಳ ಪ್ರಕಾರ 1996ರ ಮಾರ್ಚ್ 27ರಂದು ಅತ್ಯಧಿಕ 37.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಅದೇ ರೀತಿ 2017 ರಲ್ಲಿ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ನಂತರ ದಾಖಲಾದ ಗರಿಷ್ಠ ತಾಪಮಾನ ಇದಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಮುಂಗಾರು ಕೊರತೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಬೇಸಿಗೆಯ ಬಿಸಿಲ ಝಳ ಜನರನ್ನು ಹೈರಾಣಾಗಿಸಿತ್ತು. ನಂತರ ಒಂದೊಂದು ಜಿಲ್ಲೆಗಳೂ ದಾಖಲೆಯ ಪ್ರಮಾಣದ ತಾಪಮಾನವನ್ನು ದಾಖಲಿಸುತ್ತ ಬಂದಿವೆ. ಈಗ ಬೇಸಿಗೆ ಬೇಗೆ ಮತ್ತಷ್ಟು ಕಾಡುತ್ತಿದೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಪೀಠ 7ನೇ ಆವೃತ್ತಿಗೆ ಅದ್ದೂರಿ ತೆರೆ

    ಇತ್ತ ಬರ ಪರಿಸ್ಥಿತಿ ಕೂಡ ಜನರ ನಿದ್ದೆಗೆಡಿಸಿದೆ. ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಲವೆಡೆ ಮಳೆಯಾಗಿ ಜನ ಕೊಂಚ ನಿಟ್ಟುಸಿರು ಬಿಡುವಂತಾಗಿತ್ತು. ಈಗ ಮತ್ತೆ ಬಿಸಿಲ ತಾಪಮಾನ ಹೆಚ್ಚಾಗಿದೆ.

  • ರಾಜ್ಯದ ಹವಾಮಾನ ವರದಿ: 13-03-2024

    ರಾಜ್ಯದ ಹವಾಮಾನ ವರದಿ: 13-03-2024

    ಬೇಸಿಗೆ ಆರಂಭವಾಗುತ್ತಿದ್ದಂತೆ ರಾಜಧಾನಿ ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ಝಳ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದ್ದು, ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-24
    ಮಂಗಳೂರು: 31-26
    ಶಿವಮೊಗ್ಗ: 36-21
    ಬೆಳಗಾವಿ: 35-22
    ಮೈಸೂರು: 37-23

    ಮಂಡ್ಯ: 37-23
    ಮಡಿಕೇರಿ: 33-19
    ರಾಮನಗರ: 36-24
    ಹಾಸನ: 33-21
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 33-23

    Weather

    ಕೋಲಾರ: 34-23
    ತುಮಕೂರು: 34-23
    ಉಡುಪಿ: 31-24
    ಕಾರವಾರ: 32-23
    ಚಿಕ್ಕಮಗಳೂರು: 32-19
    ದಾವಣಗೆರೆ: 37-23

    ಹುಬ್ಬಳ್ಳಿ: 37-22
    ಚಿತ್ರದುರ್ಗ: 36-23
    ಹಾವೇರಿ: 38-21
    ಬಳ್ಳಾರಿ: 39-26
    ಗದಗ: 37-23
    ಕೊಪ್ಪಳ: 38-24

    ರಾಯಚೂರು: 39-28
    ಯಾದಗಿರಿ: 39- 28
    ವಿಜಯಪುರ: 37- 24
    ಬೀದರ್: 37- 25
    ಕಲಬುರಗಿ: 39-26
    ಬಾಗಲಕೋಟೆ: 38-24

  • ಇನ್ನೂ ಮೂರೇ ಗಂಟೆಗಳಲ್ಲಿ ಬೆಂಗ್ಳೂರಿನಲ್ಲಿ ಭಾರೀ ಮಳೆ – ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ

    ಇನ್ನೂ ಮೂರೇ ಗಂಟೆಗಳಲ್ಲಿ ಬೆಂಗ್ಳೂರಿನಲ್ಲಿ ಭಾರೀ ಮಳೆ – ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ

    ಬೆಂಗಳೂರು: ನಗರದಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ (Heavy Rain) ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಸಿದೆ.

    ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ (Bengaluru City), ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ (Mandya) ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ. ಈಗಾಗಲೇ ಮಳೆ ಆವರಿಸಿದ್ದು, ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಇದನ್ನೂ ಓದಿ: ಸೈಬರ್ ಕಳ್ಳರ ಕೈಚಳಕ – ಪೊಲೀಸ್ ಇಲಾಖೆ ಹೆಸರಿನಲ್ಲೇ ಫೇಕ್ ಫೇಸ್‍ಬುಕ್ ಅಕೌಂಟ್ ಸೃಷ್ಠಿ

    ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದ್ದು, ಸೋಮವಾರದಿಂದ (ಮೇ 29) ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಕರಾವಳಿ, ದಕ್ಷಿಣ ಒಳನಾಡಿನ ಕೆಲವಡೆ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರ ವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಕೆಶಿ

    ಇನ್ನೂ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

  • ರಾಜ್ಯದ ಹವಾಮಾನ ವರದಿ: 12-08-2022

    ರಾಜ್ಯದ ಹವಾಮಾನ ವರದಿ: 12-08-2022

    ರಾಜ್ಯದಲ್ಲಿ ಕೊಂಚ ಮಳೆ ತಗ್ಗಿದೆ. ಆದ್ರೆ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು. ಪ್ರವಾಹ, ನೆರೆ ಭೀತಿ ಹೆಚ್ಚಾಗುತ್ತಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ರೈನ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದು ಜಿಲ್ಲೆಯಲ್ಲಿ ಎಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

    ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

    ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಮಳೆ ಸುರಿಯಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 24-20
    ಮೈಸೂರು: 28-19

    ಮಂಡ್ಯ: 29-20
    ಕೊಡಗು: 22-17
    ರಾಮನಗರ: 29-20
    ಹಾಸನ: 24-18
    ಚಾಮರಾಜನಗರ: 28-20

    ಚಿಕ್ಕಬಳ್ಳಾಪುರ: 28-19
    ಕೋಲಾರ: 39-20
    ತುಮಕೂರು: 28-19
    ಉಡುಪಿ: 28-24
    ಚಿಕ್ಕಮಗಳೂರು: 23-18

    ದಾವಣಗೆರೆ: 28-21
    ಚಿತ್ರದುರ್ಗ: 27-21
    ಹಾವೇರಿ: 27-21
    ಬಳ್ಳಾರಿ: 32-23
    ಗದಗ: 28-21

    ಕೊಪ್ಪಳ: 29-22
    ರಾಯಚೂರು: 32-23
    ಯಾದಗಿರಿ: 29-22
    ವಿಜಯಪುರ: 29-22
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 26-22

    Live Tv
    [brid partner=56869869 player=32851 video=960834 autoplay=true]

  • ದಾಖಲೆ ಸೃಷ್ಟಿಸಿದ ಬೆಂಗಳೂರು ವೆದರ್ – 54 ವರ್ಷದ ಬಳಿಕ ಕೂಲೆಸ್ಟ್ ಡೇ ರಿಪೀಟ್

    ದಾಖಲೆ ಸೃಷ್ಟಿಸಿದ ಬೆಂಗಳೂರು ವೆದರ್ – 54 ವರ್ಷದ ಬಳಿಕ ಕೂಲೆಸ್ಟ್ ಡೇ ರಿಪೀಟ್

    ಬೆಂಗಳೂರು: ಮೇ ತಿಂಗಳಿನಲ್ಲಿ ನಿಗಿ, ನಿಗಿ ಕೆಂಡದಂತೆ ಸೂರ್ಯನ ಬಿಸಿಲು ಇರುವುದು ಕಾಮನ್. ಆದರೆ ಈ ಬಾರಿ ಅಸಾನಿ ಚಂಡಮಾರುತದ ಪರಿಣಾಮ ವರುಣನ ಆರ್ಭಟ ತಂಪು ಗಾಳಿ, ಚುಮು, ಚುಮು ಚಳಿಯಿಂದಾಗಿ ಬೆಂಗಳೂರಿನ ವಾತಾವರಣ ಕಳೆದ ಮೂರು ದಿನದಿಂದ ಊಟಿಯನ್ನು ಮೀರಿಸುತ್ತಿದೆ.

    bengaluru weather

    ಬೆಂಗಳೂರಿನ ಈ ವಾತಾವರಣ ದಾಖಲೆಯನ್ನು ಸೃಷ್ಟಿಸಿದೆ. ಅಸಾನಿ ಚಂಡಮಾರುತ ಬೆಂಗಳೂರಿನಲ್ಲಿ 54 ವರ್ಷದ ಹಿಂದಿನ ದಾಖಲೆ ರಿಪೀಟ್ ಮಾಡಿದೆ. 54 ವರ್ಷದ ಬಳಿಕ ಗುರುವಾರ ಬೆಂಗಳೂರಿನ ವೆದರ್ ಸೆಕೆಂಡ್ ಕೂಲೆಸ್ಟ್ ಡೇ ದಾಖಲೆ ಸೃಷ್ಟಿಯಾಗಿದೆ. ಇದನ್ನೂ ಓದಿ: ದೇಶದಲ್ಲಿ ಬಿಜೆಪಿ ತಾಲಿಬಾನ್ ವ್ಯವಸ್ಥೆ ರಚಿಸಲು ಬಯಸುತ್ತಿದೆ: ಶೀವಸೇನೆ

    1972ರಲ್ಲಿ ಮೇ 14 ರಂದು 22.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಆದರೆ ಗುರುವಾರ ಬೆಂಗಳೂರಿನಲ್ಲಿ 23.00 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಲ್ಲದೇ ಇದು ಎರಡನೇ ಅತ್ಯಂತ ಕೂಲೆಸ್ಟ್ ಡೇ ಅಂತ ದಾಖಲೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು