Tag: bengauru

  • ಇಂದಿರಾನಗರ ಪಾರ್ಕ್‌ನಲ್ಲಿ ಹೊಸ ರೂಲ್ಸ್ – ಎದುರು ಬದುರು ವಾಕಿಂಗ್ ನಿಷೇಧ

    ಇಂದಿರಾನಗರ ಪಾರ್ಕ್‌ನಲ್ಲಿ ಹೊಸ ರೂಲ್ಸ್ – ಎದುರು ಬದುರು ವಾಕಿಂಗ್ ನಿಷೇಧ

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಣ್ಮಕ್ಕಳನ್ನು ಚೂಡಾಯಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಇಂದಿರಾನಗರ ಪಾರ್ಕ್‌ನಲ್ಲಿ (Indiranagar Park) ಮಹಿಳೆಯರ ಹಾಗೂ ಹಿರಿಯರ ಸುರಕ್ಷತೆಗಾಗಿ ಹೊಸ ರೂಲ್ಸ್‌ಗಳನ್ನು ಜಾರಿ ಮಾಡಿದೆ.

    ಟ್ರಾಫಿಕ್ ಜಂಜಾಟ, ರಣ ಬಿಸಿಲಿಗೆ ಬೆಂಗಳೂರಿಗರು ರೋಸಿ ಹೋಗಿದ್ದಾರೆ. ಜನರಿಗೆ ಆರೋಗ್ಯ ಸಮಸ್ಯೆ ಕಾಡ್ತಿದೆ. ಹೊಟ್ಟೆ ಬೊಜ್ಜು ಕರಗಿಸಲು ಜನರು ಬೆಳಗ್ಗೆ ಮತ್ತು ಸಂಜೆ ಪಾರ್ಕ್‌ನಲ್ಲಿ ಜಾಗಿಂಗ್ ಮಾಡೋದು ಸಾಮಾನ್ಯ. ಆದರೆ ಇಂದಿರಾನಗರದ ಬಿಬಿಎಂಪಿಯ ಪಾರ್ಕ್‌ನಲ್ಲಿ ಜಾಗಿಂಗ್ ನಿಷೇಧ ಹೇರಲಾಗಿದ್ದು, ವಾಕಿಂಗ್‌ಗೂ ರೂಲ್ಸ್ ಮಾಡಲಾಗಿದೆ. ಪಾರ್ಕ್‌ನಲ್ಲಿ `ಜಾಗಿಂಗ್, ಆಟ ಆಡುವುದು, ಪಾಶ್ಚಿಮಾತ್ಯ ಉಡುಪು, ಎದುರು ಬದುರು ಜಾಗಿಂಗ್ ನಿಷೇಧ’ ಎಂದು ಬೋರ್ಡ್ ಹಾಕಲಾಗಿದೆ. ಇದನ್ನೂ ಓದಿ: ಅಭಿಮಾನಿಗಳ ಪ್ರೀತಿ ನೋಡಿದ್ರೆ ಅಪ್ಪು ಚಿಕ್ಕಪ್ಪ ಇಲ್ಲೇ ಇದ್ದಾರೆ ಅನಿಸುತ್ತೆ: ಯುವ

    ಇಂದಿರಾನಗರ ಪಾರ್ಕ್ನಲ್ಲಿ ಹೆಣ್ಣುಮಕ್ಕಳು ವಾಕ್ ಮಾಡುವಾಗ ಕೆಲ ಪುರುಷರು ಕೆಟ್ಟ ಉದ್ದೇಶದಿಂದಲೇ ವಿರುದ್ಧ ದಿಕ್ಕಿನಲ್ಲಿ ವಾಕ್ ಮಾಡುತ್ತಿದ್ದರು. ಹೆಣ್ಣುಮಕ್ಕಳು ಮುಖಕ್ಕೆ ನೇರವಾಗಿ ವಾಕಿಂಗ್ ಮಾಡುತ್ತಿದ್ದರು. ಇದರಿಂದ ಹೆಣ್ಣಮಕ್ಕಳಿಗೆ ಅಭದ್ರತೆ ಕಾಡುತ್ತಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಕೂಡ ಕೆಲವರು ಅಳಲು ತೋಡಿಕೊಂಡಿದ್ದರು. ಹಾಗಾಗಿ ಎದುರು ಬದುರಾಗಿ ವಾಕಿಂಗ್‌ಗೆ ನಿಷೇಧ ಹೇರಲಾಗಿದೆ. ಪಾರ್ಕ್‌ನಲ್ಲಿ ಕ್ಲಾಕ್ ವೈಸ್ ಡೈರೆಕ್ಷನ್‌ನಲ್ಲಿ ಮಾತ್ರ ವಾಕ್ ಮಾಡುವಂತೆ ನಿಯಮ ಮಾಡಲಾಗಿದೆ. ಜೊತೆಗೆ ವೆಸ್ಟರ್ನ್ ಡ್ರೆಸ್ ಸಹ ಹಾಕದಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಜಾತಿನಿಂದನೆ, ಲೈಂಗಿಕ ಕಿರುಕುಳ ಆರೋಪ – ಗ್ರಾಮ ಪಂಚಾಯತಿ ಸದಸ್ಯ ಅರೆಸ್ಟ್

    ಈ ಪಾರ್ಕ್‌ಗೆ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು. ಹಿರಿಯರು ವಾಕ್ ಮಾಡುವಾಗ, ಬೇರೆಯವರು ಜಾಗಿಂಗ್ ಮಾಡಿದರೆ ಸಮಸ್ಯೆಯಾಗುತ್ತದೆ ಎನ್ನುವ ಕಾರಣಕ್ಕೆ ಜಾಗಿಂಗ್‌ಗೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಆಸ್ತಿ ಬರೆಸಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿದ್ದಾರೆ ಮಕ್ಕಳು!

    ಪಾರ್ಕ್‌ನಲ್ಲಿ ಬಂದು ಕಾರ್ಡ್ ಆಡ್ತಾರೆ ಎನ್ನುವ ಕಾರಣಕ್ಕೆ ಪಾರ್ಕಿಂಗ್‌ನಲ್ಲಿ ಗೇಮಿಂಗ್ ಆಕ್ಟಿವಿಟೀಸ್‌ಗೆ ನಿಷೇಧ ಹೇರಲಾಗಿದೆ. ಸದ್ಯ ಬಿಬಿಎಂಪಿ ಹಾಗೂ ಇಂದಿರಾನಗರದ ಸಾಮಾಜಿಕ ಸೌಲಭ್ಯಗಳ ಸಂಘ ಮಾತುಕತೆ ಮಾಡಿ ಈ ರೀತಿಯ ನಿಯಮ ಮಾಡಿದೆ. ಹೊಸ ರೂಲ್ಸ್‌ನಿಂದ ಪಾರ್ಕ್‌ನಲ್ಲಿ ನೆಮ್ಮದಿಯಾಗಿ ವಾಕ್ ಮಾಡಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತೆ: ಶಿಂಧೆಗೆ ಡಿಕೆಶಿ ಟಾಂಗ್

    ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತೆ: ಶಿಂಧೆಗೆ ಡಿಕೆಶಿ ಟಾಂಗ್

    ಬೆಂಗಳೂರು: ಮಹಾರಾಷ್ಟ್ರ (Maharashtra) ಸರ್ಕಾರ ಎಲೆಕ್ಷನ್ ಬಳಿಕ ಪತನ ಆಗಬಹುದು. ಕಾಂಗ್ರೆಸ್ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಏಕನಾಥ ಶಿಂಧೆಗೆ ಟಾಂಗ್ ನೀಡಿದ್ದಾರೆ.

    ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುತ್ತೆ ಎಂಬ ಏಕನಾಥ ಶಿಂಧೆ (Eknath Shinde) ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಸರ್ಕಾರದ ಬಗ್ಗೆ ಅವರಿಗೆ ಅನಮಾನವಿದೆ. ಎಲೆಕ್ಷನ್ ಆದ ಬಳಿಕ ರಾಜ್ಯದಲ್ಲಿ ಯಾವುದೇ ಭಯವಿಲ್ಲ. ಮಹಾರಾಷ್ಟ್ರ ಸರ್ಕಾರ ಉಳಿಯುತ್ತಾ ಎಂನ ಅನುಮಾನವಿದೆ. ಅಲ್ಲಿ ಶಾಸಕರು ಯೂಟರ್ನ್ ಹೊಡೆಯುತ್ತಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಅಲ್ಲಿ ನಮ್ಮ ಪಕ್ಷದ ಸರ್ಕಾರ ಬರಲಿದೆ. ಅಲ್ಲಿ ಮೈತ್ರಿ ಸರ್ಕಾರ ಬರಲಿದೆ. ಎನ್‌ಸಿಪಿ, ಶಿವಸೇನೆಯ ಶಾಸಕರು ವಾಪಸ್ ಆಗುತ್ತಿದ್ದಾರೆ. ಅದಕ್ಕೆ ಅಲ್ಲಿ ಸರ್ಕಾರ ಬದಲಾವಣೆ ಆಗಲಿದೆ. ನಮ್ಮ ಸರ್ಕಾರದಲ್ಲಿ ಯಾವುದೇ ಶಿಂಧೆ ಇಲ್ಲ. ನಮಗೆ ಯಾವ ಭಯ ಇಲ್ಲ. ಮಹಾರಾಷ್ಟ್ರದಲ್ಲಿ ಪಾರ್ಲಿಮೆಂಟ್ ಚುನಾವಣೆ ಬಳಿಕ ನಮ್ಮ ಸರ್ಕಾರ ಬರುತ್ತೆ ಎಂದರು. ಇದನ್ನೂ ಓದಿ: 400 ಸ್ಥಾನಗಳನ್ನು ಗೆಲ್ಲುವ ಗುರಿ ಕೇವಲ ಘೋಷಣೆಯಲ್ಲ, ವಾಸ್ತವದಲ್ಲೂ ಅದು ನಿಜವಾಗುತ್ತೆ: ಮೋದಿ

    ಎರಡು ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ್ದೇವೆ. 6 ಜನ ಒಳ್ಳೆಯ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಆರು ಕ್ಷೇತ್ರಗಳನ್ನು ಗೆಲ್ಲುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಪದವೀಧರರ ಸಮಸ್ಯೆಗಳನ್ನು ಅರಿತಿದ್ದೇವೆ. ಅವರ ಬದುಕಿನ ಬಗ್ಗೆ ವೃತ್ತಿಯ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಅವರಿಗೆ ಕೆಲಸ ಆಗಬೇಕು. ಕೆಲಸದ ಜವಾಬ್ದಾರಿ ನಮ್ಮದು. ಯುವಕರು, ನಿರುದ್ಯೋಗಿಗಳಿಗೆ ಸಹಕರಿಸಿದ್ದೇವೆ. ಬಿಜೆಪಿಯವರು ಏನೂ ಕೊಟ್ಟಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ: ಪ್ರೀತಂಗೌಡ