Tag: bennehalla

  • ಬೆಣ್ಣೆ ಹಳ್ಳ ನೀರಿಗೆ ಸಿಲುಕಿದ ಮೂವರು, 150 ಕುರಿಗಳು- ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣೆ

    ಬೆಣ್ಣೆ ಹಳ್ಳ ನೀರಿಗೆ ಸಿಲುಕಿದ ಮೂವರು, 150 ಕುರಿಗಳು- ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣೆ

    – ಧಾರಾಕಾರ ಮಳೆಗೆ ಬೆಣ್ಣೆ ಹಳ್ಳ ಪ್ರವಾಹ ಪರಿಸ್ಥಿತಿ ನಿರ್ಮಾಣ

    ಹುಬ್ಬಳ್ಳಿ: ಧಾರಾಕಾರ ಮಳೆಗೆ ದೇವನೂರು ಬಳಿಯ ಬೆಣ್ಣೆ ಹಳ್ಳದಲ್ಲಿ (Bennehalla) ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಣ್ಣೆ ಹಳ್ಳದ ನೀರಿಗೆ ಸಿಲುಕಿ ಹಾಕಿಕೊಂಡಿದ್ದ ಮೂವರನ್ನು ಹಾಗೂ 150 ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಘಟನೆ ಧಾರವಾಡ (Dharawada) ಜಿಲ್ಲೆಯ ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಬಳಿ ನಡೆದಿದೆ.

    ಕುರಿಗಳನ್ನು ಮೇಯಿಸಲು ಹೋದ ಹನುಮಂತ ಬೆನಕನಹಳ್ಳಿ, ಮಂಜಪ್ಪ ಬೆನಕನಹಳ್ಳಿ ಮತ್ತು ಇನ್ನೋರ್ವ ವ್ಯಕ್ತಿ ಸೇರಿ 150 ಕುರಿಗಳು ನೀರಿನ ಪ್ರವಾಹಕ್ಕೆ ಸಿಲುಕಿದ್ದನ್ನು ಕಂಡು ಸ್ಥಳೀಯರು ತಾಲೂಕು ಆಡಳಿತಕ್ಕೆ ಕರೆ ಮಾಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯ ಪ್ರವೃತ್ತವಾಗಿ ರಭಸದಿಂದ ಹರಿಯುತ್ತಿರುವ ನೀರಿನ ಮಧ್ಯೆ ಹಗ್ಗ ಕಟ್ಟಿ ಮೂವರು ವ್ಯಕ್ತಿಗಳು ಮತ್ತು ಕುರಿಗಳ ರಕ್ಷಣೆ ಮಾಡಿದ್ದಾರೆ. ಮತ್ತೊಂದು ಕಡೆ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಇದನ್ನೂ ಓದಿ: ಅಮಿತ್ ಶಾ ಮಾತು ಕೇಳಿದ್ದೇ ತಪ್ಪಾಯ್ತಾ? – ಈಶ್ವರಪ್ಪ ಬೇಸರ

    ಕುಂದಗೋಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಿರೇಹರಕುಣಿ ಹಾಗೂ ಶಿಶುನಾಳ ಗ್ರಾಮದ ನಡುವೆ ಸಂಚಾರ ಸ್ಥಗಿತಗೊಂಡಿದೆ. ಸೊಟ್ಟ ಹಳ್ಳದ ನೀರಿನಿಂದಾಗಿ ಗ್ರಾಮಸ್ಥರು ಹಾಗೂ ರೈತರು ಪರದಾಟ ನಡೆಸಿದ್ದಾರೆ. ಶಿಗಿ ಹುಣ್ಣಿಮೆ ಹಿನ್ನೆಲೆ ಜಮೀನಿಗೆ ತೆರಳಬೇಕಿದ್ದ ರೈತರು ಹಳ್ಳದ ದಡದಲ್ಲಿಯೇ ಪೂಜೆ ಸಲ್ಲಿಸಿ ಮರಳಿದ್ದಾರೆ. ಕುಂದಗೋಳ ತಾಲೂಕಿನ ಹಿರೇಹರಕುಣಿ ಹಾಗೂ ಶಿಶುನಾಳ ಗ್ರಾಮದ ನಡುವೆ ಬರುವ ಸೊಟ್ಟ ಹಳ್ಳದಲ್ಲಿ ಮಳೆ ನೀರು ತುಂಬಿ ಬಂದು ಎರಡು ಗ್ರಾಮದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದನ್ನೂ ಓದಿ: Russia – Ukraine War | ರಷ್ಯಾ ಪರ 12,000 ಸೈನಿಕರನ್ನು ಕಳುಹಿಸಿದ ಉತ್ತರ ಕೊರಿಯಾ

  • ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

    ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

    – ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಾಶ

    ಗದಗ/ಧಾರವಾಡ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಬೆಣ್ಣೆಹಳ್ಳ (Bennehalla) ಭೋರ್ಗರೆಯುತ್ತಿದೆ. ರೋಣ ತಾಲೂಕಿನ ಯಾವಗಲ್ ಬಳಿ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಪ್ರವಾಹದಿಂದ (Flood) ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

    ನರಗುಂದನಿಂದ ಯಾವಗಲ್ ಮಾರ್ಗವಾಗಿ ರೋಣ, ಗಜೇಂದ್ರಗಡ, ಕುಷ್ಟಗಿ ಮಾರ್ಗವಾಗಿ ಸಿಂಧನೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಸೇತುವೆ ಮೇಲ್ಭಾಗದಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ. ಇದರಿಂದ ಕಳೆದ ಮೂರು-ನಾಲ್ಕು ದಿನಗಳಿಂದ ಪ್ರಯಾಣಿಕರು, ರೈತರು ಪರದಾಡುವಂತಾಗಿದೆ. ಜನರು ಹಳ್ಳ ದಾಟದಂತೆ ಭದ್ರತಾ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

    1971-72ರಲ್ಲಿ ನಿರ್ಮಾಣವಾದ ಈ ಕಿರಿದಾದ ಸೇತುವೆ ಮೇಲ್ದರ್ಜೆಗೆ ಏರಿಸಬೇಕು. ಬೆಣ್ಣೆಹಳ್ಳ ಒತ್ತುವರಿ ತೆರವುಗೊಳಿಸಬೇಕು. ಪದೇಪದೆ ಪ್ರವಾಹ ಹಾಗೂ ಬೆಳೆ ಹಾನಿ ಆಗುವುದನ್ನು ತಪ್ಪಿಸಬೇಕು ಎಂಬುದು ಈ ಭಾಗದ ಜನರ ಕೂಗಾಗಿದೆ. ಬೆಣ್ಣೆಹಳ್ಳ ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ವೈದ್ಯೆಯ ಯಡವಟ್ಟಿಗೆ ಬಾಣಂತಿ ಬಲಿ!

  • ಗದಗ| ಭಾರೀ ಮಳೆಗೆ ಮಲಪ್ರಭಾ ನದಿ, ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

    ಗದಗ| ಭಾರೀ ಮಳೆಗೆ ಮಲಪ್ರಭಾ ನದಿ, ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

    ಗದಗ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೆಣ್ಣೆಹಳ್ಳ (Bennehalla) ಹಾಗೂ ಮಲಪ್ರಭಾ ನದಿಯಲ್ಲಿ (Malaprabha River) ಪ್ರವಾಹ ಎದುರಾಗಿದೆ. ರೋಣ ತಾಲೂಕಿನ ಮೆಣಸಗಿ ಬಳಿ ಅನೇಕ ಜಮೀನುಗಳು ಜಲಾವೃತವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.

    ಮೆಕ್ಕೆಜೋಳ, ಕಬ್ಬು, ಸೂರ್ಯಕಾಂತಿ, ಶೇಂಗಾ, ಜೋಳ ಸೇರಿದಂತೆ ಅನೇಕ ಬೆಳೆಗಳು ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆನಾಶದಿಂದ ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಫಸಲು ಕಟಾವಿಗೆ ಬಂದ ಸಂದರ್ಭದಲ್ಲಿ ನೀರಲ್ಲಿ ಮುಳುಗಡೆಯಾಗಿದೆ. ನೀರಲ್ಲಿ ಹಾನಿಯಾದ ಫಸಲು ಹೊರ ತೆಗೆಯಲು ರೈತರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರ ಬದುಕನ್ನು ಹಾಳು ಮಾಡೋರಿಗೆ ಸದ್ಬುದ್ಧಿ ಬರಲಿ: ಸಿಎಂ

    ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಪ್ರವಾಹ ಬಂದು 3 ಬಾರಿಯೂ ಬೆಳೆ ಹಾನಿಯಾಗಿದೆ. ಸರ್ಕಾರದಿಂದ ನಯಾಪೈಸೆ ಪರಿಹಾರ ಬಂದಿಲ್ಲ. ಎಕರೆಗೆ ಹತ್ತಾರು ಸಾವಿರ ರೂಪಾಯಿ ಖರ್ಚುಮಾಡಿ ಸಾಲದ ಸುಳಿಗೆ ಸಿಲುಕುವಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಬೆಳೆಯೂ ಇಲ್ಲ. ಇತ್ತ ಸರ್ಕಾರದಿಂದ ಪರಿಹಾರವೂ ಇಲ್ಲ ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್‌ ಭಾಗವತ್‌

  • ಬೆಣ್ಣೆಹಳ್ಳ ಪ್ರವಾಹಕ್ಕೆ ಕೊಚ್ಚಿ ಹೋದ್ರು ನಾಲ್ವರು

    ಬೆಣ್ಣೆಹಳ್ಳ ಪ್ರವಾಹಕ್ಕೆ ಕೊಚ್ಚಿ ಹೋದ್ರು ನಾಲ್ವರು

    – ಇಬ್ಬರ ರಕ್ಷಣೆ, ಇನ್ನಿಬ್ಬರು ನಾಪತ್ತೆ

    ಗದಗ: ಭಾರೀ ಮಳೆಯಿಂದ ಮತ್ತೆ ಬೆಣ್ಣೆಹಳ್ಳದಲ್ಲಿ ಪ್ರವಾಹ ಉಂಟಾಗಿದ್ದು, ಹಳ್ಳ ದಾಟುವಾಗ ನಾಲ್ವರು ಯುವಕರು ಕೊಚ್ಚಿಹೋಗಿದ್ದರು. ಅವರಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ.

    ಜಿಲ್ಲೆಯ ರೋಣ ತಾಲೂಕಿನ ಮಾಳವಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ನರಗುಂದ ತಾಲೂಕಿನ ಹದ್ಲಿ ಗ್ರಾಮದ ಕಳಸಪ್ಪ(30), ಈರಣ್ಣ(15), ಅಮೃತ್ ಹಾಗೂ ಇನ್ನೋರ್ವ ಯುವಕ ಮಾಳವಾಡ ಗ್ರಾಮದ ಬಳಿ ಬೆಣ್ಣೆಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಅವರಲ್ಲಿ ಈರಪ್ಪ ಹಾಗೂ ಅಮೃತ್‍ನನ್ನು ಸ್ಥಳೀಯರು ಹಾಗೂ ಪೊಲೀಸರು ಸೇರಿ ರಕ್ಷಣೆ ಮಾಡಿದ್ದಾರೆ. ಆದರೆ ಉಳಿದ ಇಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಇತ್ತ ನಾಪತ್ತೆಯಾದ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಇತ್ತ ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಹೊಳೆಆಲೂರ ನಿಂದ ಹೊಳೆಹಡಗಲಿ, ಬಸರಕೋಡ-ಬಾದಾಮಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಛಿದ್ರಗೊಂಡಿದೆ. ಸುಮಾರು ನೂರಾರು ಮೀಟರ್‍ನಷ್ಟು ರಸ್ತೆ ಕಿತ್ತುಹೋಗಿದೆ. ನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ರೈತರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಇತ್ತ ರಸ್ತೆಯಿಲ್ಲದೆ ಅತ್ತ ವಾಹನ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

    ಈ ರಸ್ತೆಯಲ್ಲಿ ರಾತ್ರಿ ಸಂಚರಿಸುವ ಪ್ರಯಾಣಿಕರು ಬಹಳ ಜಾಗೃತೆಯಿಂದ ಸಂಚರಿಸಬೇಕಿದೆ. ಸ್ವಲ್ಪ ಯಾಮಾರಿದರೂ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ರಸ್ತೆಯಲ್ಲಿ ಟಂಟಂ ವಾಹನ ಬರಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಆದಷ್ಟು ಬೇಗ ರಸ್ತೆ ಸರಿಪಡಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದರು.

  • ಮಲಪ್ರಭಾ, ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ರಸ್ತೆಗಳು ಛಿದ್ರ ಛಿದ್ರ

    ಮಲಪ್ರಭಾ, ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ರಸ್ತೆಗಳು ಛಿದ್ರ ಛಿದ್ರ

    ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಸರಕೋಡ ಬಳಿ ರಸ್ತೆಗಳೆಲ್ಲಾ ಛಿದ್ರ ಛಿದ್ರವಾಗಿದೆ.

    ಹೊಳೆಆಲೂರ ನಿಂದ ಹೊಳೆಹಡಗಲಿ, ಬಸರಕೋಡ ಬಾದಾಮಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಪ್ರವಾಹದ ರುದ್ರನರ್ತನಕ್ಕೆ ಛಿದ್ರಗೊಂಡಿದೆ. ಸುಮಾರು ನೂರಾರು ಮೀಟರ್ ನಷ್ಟು ರಸ್ತೆ ಕಿತ್ತುಹೋಗಿದೆ. ನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ರೈತರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಇತ್ತ ರಸ್ತೆಯಿಲ್ಲದೆ ಅತ್ತ ವಾಹನ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

    ಈ ರಸ್ತೆಯಲ್ಲಿ ರಾತ್ರಿ ಸಂಚರಿಸುವ ಪ್ರಯಾಣಿಕರು ಬಹಳ ಜಾಗೃತೆಯಿಂದ ಸಂಚರಿಸಬೇಕಿದೆ. ಸ್ವಲ್ಪ ಯಾಮಾರಿದರೂ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ರಸ್ತೆಯಲ್ಲಿ ಟಂಟಂ ವಾಹನ ಬರಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಆದಷ್ಟು ಬೇಗ ರಸ್ತೆ ಸರಿಪಡಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.