Tag: BEO Office

  • ಶಿಥಿಲಾವಸ್ಥೆಯಲ್ಲಿ ರಾಯಚೂರು ಬಿಇಒ ಕಚೇರಿ – ಜೀವಭಯದಲ್ಲೇ ಸಿಬ್ಬಂದಿ ಕೆಲಸ

    ಶಿಥಿಲಾವಸ್ಥೆಯಲ್ಲಿ ರಾಯಚೂರು ಬಿಇಒ ಕಚೇರಿ – ಜೀವಭಯದಲ್ಲೇ ಸಿಬ್ಬಂದಿ ಕೆಲಸ

    ರಾಯಚೂರು: ಜಿಲ್ಲೆಯ ಸರ್ಕಾರಿ ಶಾಲೆಗಳ ಸುವ್ಯವಸ್ಥೆ ಕಾಪಾಡಿ ಅಗತ್ಯ ಸೌಲಭ್ಯ ಒದಗಿಸಬೇಕಾದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಲ್ಲೇ (BEO Office) ಅವ್ಯವಸ್ಥೆ ಹಾಗೂ ಭಯದಲ್ಲಿ ಕೆಲಸ ಮಾಡಬೇಕಾದ ಪರಸ್ಥಿತಿ ಎದುರಿಸುತ್ತಿದ್ದಾರೆ. ಈಗಲೋ ಆಗಲೋ ಬಿದ್ದು ಹೋಗಬಹುದಾದ ಕಟ್ಟಡದಲ್ಲಿ ಬಿಇಒ ಕಚೇರಿ (BEO Office) ಸಿಬ್ಬಂದಿ ಕೆಲಸಮಾಡುತ್ತಿದ್ದಾರೆ.

    ರಾಯಚೂರು (Raichur) ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಎಷ್ಟು ಬಾರಿ ರಿಪೇರಿ ಮಾಡಿದರೂ ಆಗಾಗ ಮೇಲ್ಚಾವಣಿ ಕುಸಿದು ಬೀಳುತ್ತಲೇ ಇದೆ. ಮಳೆ ಬಂದಾಗಲೆಲ್ಲಾ ಬಿಇಒ ಕಚೇರಿ ಸೋರುತ್ತಲೇ ಇದೆ. ಹೀಗಾಗಿ ಇಲ್ಲಿನ ಸಿಬ್ಬಂದಿ ಜೀವಭಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳೇ ಶಿಥಿಲಾವಸ್ಥೆಯ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರೆ, ನಗರ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸುಧಾರಣೆ, ಗುಣಮಟ್ಟದ ಶಿಕ್ಷಣ ಹೇಗೆ ಅನ್ನೋದು ಸಾರ್ವಜನಿಕರ ಪ್ರಶ್ನೆಯಾಗಿದೆ.

    ಎಷ್ಟೋ ಶಾಲೆಗಳಲ್ಲಿ ಅಗತ್ಯಕ್ಕನುಗುಣವಾಗಿ ಕೊಠಡಿಗಳಿಲ್ಲ, ಶೌಚಾಲಯಗಳಿಲ್ಲ. ಆದ್ರೆ ಸ್ವತಃ ಬಿಇಒ ಕಚೇರಿಯೇ ಮಳೆಗೆ ಸೋರುತ್ತಿದ್ದರೆ ಶಾಲಾ ಮುಖ್ಯಶಿಕ್ಷಕರು, ವಿದ್ಯಾರ್ಥಿಗಳು ಯಾರ ಬಳಿ ಕಷ್ಟ ಹೇಳೋದು ಅನ್ನೋ ಪರಸ್ಥಿತಿ ಬಂದೊದಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿ, ದ್ವೇಷದಿಂದ ಬಿಜೆಪಿ ವಿರುದ್ಧ ಹಗರಣ ಆರೋಪ: ಕಾರಜೋಳ ಕಿಡಿ

    1995 ರಲ್ಲಿ ನಿರ್ಮಾಣವಾದ ಸುಮಾರು 30 ವರ್ಷಗಳ ಹಳೆಯ ಕಟ್ಟಡ ಈಗ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಾಮರ್ಥ್ಯ ಸೌಧ ನಿರ್ಮಾಣಕ್ಕಾಗಿ 5 ಕೋಟಿ 50 ಲಕ್ಷ ರೂ. ಅಂದಾಜು ಪಟ್ಟಿಯನ್ನ ತಯಾರಿಸಿ ಕೆಕೆಆರ್‌ಡಿಬಿಗೆ ಶಿಕ್ಷಣ ಇಲಾಖೆ ಈಗಾಗಲೇ ಕಳುಹಿಸಿದೆ. ಆದಾಗ್ಯೂ ಯಾವುದೇ ಪ್ರಯೋಜವಾಗಿಲ್ಲ. ಇದರಿಂದ ಪಕ್ಕದ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿಗೆ ಸ್ಥಳಾಂತರಗೊಳ್ಳಲು ಅನುಮತಿ ಪಡೆದಿದ್ದಾರೆ. ದುರಂತ ಅಂದ್ರೆ ಆ ಕಾಲೇಜು ಸಹ ಮಳೆ ಬಂದಾಗ ಸೋರುತ್ತಿದೆ. ಹೀಗಾಗಿ ಯಾವುದಾದರೂ ಶಾಲೆಗೆ ಕಚೇರಿ ಸ್ಥಳಾಂತರ ಮಾಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಕಚೇರಿಯ 13 ಸಿಬ್ಬಂದಿ ಈಗ ಹೊಸ ಕಟ್ಟಡ ಕಟ್ಟಿಕೊಡಿ ಅಂತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹೆಚ್ಚಿದ ತುಂಗಭದ್ರಾ ನೀರಿನ ಮಟ್ಟ – ಜಾನುವಾರು ಮೈತೊಳೆಯಲು ತೆರಳಿದ್ದ ಯುವಕ ನೀರುಪಾಲು

    ಒಟ್ಟಿನಲ್ಲಿ, ರಾಯಚೂರು ತಾಲೂಕಿನ ಸರ್ಕಾರಿ ಶಾಲೆಗಳ ಸುರಕ್ಷತೆ ಕಾಪಾಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸುರಕ್ಷತೆಯಿಲ್ಲದಂತಾಗಿದೆ. ಯಾವಾಗ ಎಲ್ಲಿ ಚಾವಣಿ ಕುಸಿದು ಬೀಳುತ್ತೋ ಏನ್ ಅಪಾಯ ಕಾದಿದೆಯೋ ಅನ್ನೋ ಭಯ ಸಿಬ್ಬಂದಿಯಲ್ಲಿ ಮನೆ ಮಾಡಿದೆ. ಕನಿಷ್ಠ ಈಗಲಾದ್ರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಕಂಡಲ್ಲಿ ಗುಂಡು ಹಾರಿಸಲು ಸೂಚನೆ

  • ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ

    ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ

    ಚಿಕ್ಕಮಗಳೂರು: ಬಿಇಓ ಕಚೇರಿಯ (BEO Office) ವ್ಯವಸ್ಥಾಪಕ ಅಧಿಕಾರಿ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

    ಕಡೂರು ತಾಲೂಕು ಮೂಲದ ನಿಂಗನಾಯಕ (57) ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ. ಸೋಮವಾರ (ಜ.1) ಬೆಳಿಗ್ಗೆ ಬಿಇಓ ಕಚೇರಿಯಲ್ಲೇ ಡೆತ್ ನೋಟ್ (Death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ ಅತ್ಯಾಚಾರಿ ಆರೋಪಿ ಮೌಲ್ವಿ- ಸ್ಫೋಟಕ ಸತ್ಯ ಬಯಲು

    ಕಳೆದ ಎರಡು ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದ ನಿಂಗನಾಯಕ ಕೆಲಸದ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಸೋಮವಾರ ಬೆಳಗ್ಗೆ ಮನೆಗೆ ಹಾಲು ತಂದುಕೊಟ್ಟ ನಿಂಗನಾಯಕ ಮನೆಯಲ್ಲಿ ವಾಕಿಂಗ್‌ ಹೋಗಿ ಬರ್ತೀನಿ ಅಂತ ಕಚೇರಿ ಕೀ ತೆಗೆದುಕೊಂಡು ಹೋಗಿದ್ದರು. ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬನ್ನೇರುಘಟ್ಟಕ್ಕೆ ಹೊಸ ಅತಿಥಿಯ ಆಗಮನ- ಹೆಣ್ಣು ಮರಿಗೆ ಜನ್ಮ ನೀಡಿದ ಆನೆ ರೂಪಾ

    ಶಿಕ್ಷಣ ಇಲಾಖೆಯಲ್ಲಿ (Education Department) ಕೆಲಸದ ಒತ್ತಡ ಅಧಿಕವಾಗಿತ್ತು. ಡಿ-ಗ್ರೂಪ್‌ ನೌಕರರು ಕಡಿಮೆ ಇದ್ದರು. ಇದರಿಂದ ಕೆಲಸಗಳು ಆಗದೇ ಭಾನುವಾರವೂ ಕೆಲಸ ಮಾಡುವ ಪರಿಸ್ಥಿತಿ ಇತ್ತು. ಭಾನುವಾರ (ಡಿ.31) ಸಹ ಕಚೇರಿಗೆ ಹೋಗಿ ಕೆಲಸ ಮಾಡಿದ್ದರು. ಆದರೂ ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ರೆ ಬರುತ್ತಿರಲಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆ – ಮಂತ್ರಾಲಯ ರಾಯರ ಮಠಕ್ಕೆ ಹರಿದು ಬಂದ ಭಕ್ತಸಾಗರ

  • ಶಿಕ್ಷಕರ ಕೈಯಲ್ಲಿ ಅರಳಿದ ಚಿತ್ತಾರ- ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಚಿತ್ರಣವೇ ಬದಲು

    ಶಿಕ್ಷಕರ ಕೈಯಲ್ಲಿ ಅರಳಿದ ಚಿತ್ತಾರ- ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಚಿತ್ರಣವೇ ಬದಲು

    ಕಾರವಾರ: ಒಬ್ಬ ಶಿಕ್ಷಕ ಮನಸ್ಸು ಮಾಡಿದರೆ ವಿದ್ಯಾರ್ಥಿಯ ಬದುಕೇ ಬದಲಾಗುತ್ತದೆ. ಶಿಕ್ಷಕನ ಪಾತ್ರ ಅಂತಹ ಮಹತ್ವದ್ದಾಗಿದೆ. ಆದರೆ ಶಿಕ್ಷಣಾಧಿಕಾರಿ  ಕಚೇರಿಗಳು ಮಾತ್ರ ಹಾಳು ಕೊಂಪೆಯಂತೆ ಇರುವುದು ನಮ್ಮ ಅಧಿಕಾರಿಗಳ ನಿರ್ಲಕ್ಷಕ್ಕೆ ಕೈಗನ್ನಡಿಯಾಗಿದೆ. ಇದೀಗ ಶಿಕ್ಷಕರ ಕೈಚಳಕದಿಂದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಚಿತ್ರಣವೇ ಬದಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿಕ್ಷಕರು ತಮ್ಮ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಲು ಹೆದರುವಂತಿತ್ತು. ಬಣ್ಣವಿಲ್ಲದ ಗೋಡೆಗಳು, ಜೋತು ಬಿದ್ದ ಕಿಟಕಿಗಳು, ಕಚೇರಿಯಲ್ಲಿ ಎಲ್ಲಿ ಬೇಕೆಂದರಲ್ಲಿ ಬಿದ್ದಿರುತ್ತಿದ್ದ ಕಡತಗಳು, ಕಚೇರಿಯ ಆವರಣದ ತುಂಬ ತುಂಬಿದ ಮಟ್ಟಿಗಳು ಹೀಗೆ ಸ್ಮಷಾನದಲ್ಲಿ ನೇತು ಹಾಕಿದ ದೃಷ್ಟಿ ಗೊಂಬೆಯಂತೆ ಗೋಚರಿಸುತಿತ್ತು. ಆದರೆ ಇತ್ತೀಚೆಗೆ ವರ್ಗವಾಗಿ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ್ ಮೊಗೇರ್ ಅವರು ತಮ್ಮ ಕಚೇರಿಯನ್ನು ಬದಲಿಸುವ ಪ್ರಯತ್ನಕ್ಕೆ ಕೈ ಹಾಕಿದರು. ಇದಕ್ಕೆ ಶಿಕ್ಷಕರ ಸಂಘ ಸಹ ಸಹಕಾರ ನೀಡಿತು.

    ಸರ್ಕಾರದ ಅನುದಾನವಿಲ್ಲ, ದಾನಿಗಳ ಸಹಕಾರದಲ್ಲಿ ಕೇವಲ ಸುಣ್ಣ ಬಣ್ಣ ಮಾಡಿ ಬಿಟ್ಟರೆ ಸಾಕಾಗದು, ಇಡೀ ಜಿಲ್ಲೆಗೆ ಮಾದರಿಯಾಗಬೇಕು ಎಂಬ ಹಂಬಲದಿಂದ ಲಾಕ್‍ಡೌನ್ ಸಂದರ್ಭದಲ್ಲಿ ಕಾಲಿ ಕುಳಿತಿದ್ದ ತಮ್ಮ ಕ್ಷೇತ್ರದ ಪ್ರೌಢ ಶಾಲಾ ಚಿತ್ರಕಲಾ ಶಿಕ್ಷರನ್ನು ಕರೆಸಿ ಈ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಚಿತ್ರಕಲಾ ಶಿಕ್ಷಕರಾದ ಸಂಜಯ್ ಗುಡಿಗಾರ್, ಮಹೇಶ್ ನಾಯ್ಕ, ನಾರಾಯಣ ಮೊಗೇರ, ಸಾದಿಕ್ ಶೇಖ್, ಮಂಜುನಾಥ ದೇವಾಡಿಗ, ಚನ್ನವೀರ ಹೊಸಮುನಿ ಅವರ ತಂಡ ಕೇವಲ ಕೆಂಪು ಮತ್ತು ಬಿಳಿಯ ಬಣ್ಣವನ್ನು ಬಳಸಿ ಇಡೀ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಕಂಗೊಳಿಸುವಂತೆ ಮಾಡಿದೆ.

    ಜಿಲ್ಲೆಯ ಸಂಪ್ರದಾಯಿಕ ಜನಪದ ಕಲೆ ವರ್ಲಿ ಮತ್ತು ಕಾಲ್ಪನಿಕ ಚಿತ್ರಗಳು ಬಿರುಕು ತುಂಬಿದ್ದ ಗೋಡೆಗಳನ್ನು ಕಳೆಗಟ್ಟಿಸಿದೆ. ಹತ್ತು ದಿನಗಳ ಕಾಲ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ಯಾವುದೇ ಅಪೇಕ್ಷೆ ಇಲ್ಲದೆ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸುಂದರವಾಗಿಸಿದ್ದಾರೆ. ಸರ್ಕಾರದ ಅನುದಾನ ಬೇಡದ ಶಿಕ್ಷಕರ ಸಂಘ ಬಣ್ಣ ನೀಡಿ ಬೆಳಕಾಗುವಂತೆ ಮಾಡಲಾಗಿದೆ. ಕಚೇರಿಯ ಒಳಗೆ ಶಿಕ್ಷಕ ಸದಾಶಿವ ದೇಶಭಂಡಾರಿಯವರು ತಮ್ಮ ಸ್ವಂತ ಖರ್ಚಿನಲ್ಲಿ ಸುಂದರಗೊಳಿಸಿದ್ದಾರೆ.

    ಕಚೇರಿಯ ಒಳ ಗೇಟನ್ನು ಪ್ರವೇಶಿಸುತಿದ್ದಂತೆ ಶಿಕ್ಷಣವೇ ಜೀವನ, ಜಿವನವೇ ಶಿಕ್ಷಣ ಎಂಬ ಉಕ್ತಿ ಸ್ವಾಗತಿಸುತ್ತದೆ. ಗೋಡೆಗಳಲ್ಲಿ ಯೋಗ ಮುದ್ರೆಗಳು, ಅಕ್ಷರ ದಾಸೋಹ, ನಾಡಹಬ್ಬ ಮುಂತಾದ ಚಿತ್ರಗಳು ಬರುವ ಜನರ ಮನಸ್ಸನ್ನು ಕದಿಯದೇ ಇರದು. ಸರ್ಕಾರಿ ಕಚೇರಿ ಎಂದರೆ ಸರ್ಕಾರವೇ ಎಲ್ಲ ಮಾಡಬೇಕು ಎಂಬ ಧೋರಣೆ ಹೊಂದಿದ ಈ ದಿನಗಳಲ್ಲಿ ಯಾವ ಪ್ರತಿಫಲ ಹಂಬಲವಿಲ್ಲದೇ ಸರ್ಕಾರಿ ಕಚೇರಿಯನ್ನು ಬದಲಿಸಿದ ಈ ಶಿಕ್ಷಕರು ಸಮಾಜಕ್ಕೆ ಮಾದರಿಯಾಗಿದ್ದಾರೆ.