Tag: Bernard N Marak

  • ವೇಶ್ಯಾವಾಟಿಕೆ ಆರೋಪ – ಮೇಘಾಲಯದ ಬಿಜೆಪಿ ನಾಯಕ ಉತ್ತರಪ್ರದೇಶದಲ್ಲಿ ಬಂಧನ

    ವೇಶ್ಯಾವಾಟಿಕೆ ಆರೋಪ – ಮೇಘಾಲಯದ ಬಿಜೆಪಿ ನಾಯಕ ಉತ್ತರಪ್ರದೇಶದಲ್ಲಿ ಬಂಧನ

    ಲಕ್ನೋ: ಫಾರ್ಮ್‌ಹೌಸ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೇಘಾಲಯದ ಉಪಾಧ್ಯಕ್ಷ ಬೆರ್ನಾಡ್ ಎನ್ ಮರಕ್ ಅವರನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿದೆ.

    ಶನಿವಾರ ಪೊಲೀಸರು ನಡೆಸಿದ ದಾಳಿಯಲ್ಲಿ ಮರಕ್ ಅವರ ಫಾರ್ಮ್‌ಹೌಸ್‌ನಿಂದ 6 ಅಪ್ರಾಪ್ತರನ್ನು ರಕ್ಷಿಸಿ, 73 ಜನರನ್ನು ಬಂಧಿಸಲಾಗಿತ್ತು. ಘಟನೆಯ ಬೆನ್ನಲ್ಲೇ ಮರಕ್ ಪರಾರಿಯಾಗಿದ್ದರು. ಅವರನ್ನು ತನಿಖೆಗೆ ಸಹಕರಿಸುವಂತೆ ಕೇಳಿಕೊಳ್ಳಲಾಯಿತಾದರೂ ತನಿಖಾಧಿಕಾರಿಗಳಿಂದ ಅವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. ಇದನ್ನೂ ಓದಿ: ಪ್ರತಿಭಟನೆ ವೇಳೆ ಕಾಂಗ್ರೆಸ್‌ ಮುಖಂಡನ ಕೂದಲು ಹಿಡಿದು ಜೀಪಿನೊಳಗೆ ದಬ್ಬಿದ ಪೊಲೀಸರು

    ಸೋಮವಾರ ತುರಾ ನ್ಯಾಯಾಲಯ ಮರಕ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಇಂದು ಮೇಘಾಲಯ ಪೊಲೀಸರು ಅವರಿಗೆ ಲುಕ್‌ಔಟ್ ನೋಟಿಸ್ ನೀಡಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ – ಚಟರ್ಜಿ ಆಪ್ತೆಯ ಮನೆಯಲ್ಲಿ ಸ್ಫೋಟಕ ಮಾಹಿತಿಯಿರುವ ಡೈರಿ ಪತ್ತೆ

    ಪೊಲೀಸರು ಫಾರ್ಮ್‌ಹೌಸ್‌ನಿಂದ 47 ಯುವಕರು ಹಾಗೂ 26 ಮಹಿಳೆಯರನ್ನು ಬಂಧಿಸಿದ್ದರು. 6 ಅಪ್ರಾಪ್ತರನ್ನು ಕೊಳಕಾದ ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. 30 ಸಣ್ಣ ಕೊಠಡಿಗಳಿದ್ದ ಫಾರ್ಮ್‌ಹೌಸ್‌ ಅನ್ನು ಅಕ್ರಮವಾಗಿ ವೇಶ್ಯಾವಾಟಿಕೆಗೆ ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೇಶ್ಯಾವಾಟಿಕೆ ಆರೋಪ – ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ

    ವೇಶ್ಯಾವಾಟಿಕೆ ಆರೋಪ – ಮೇಘಾಲಯ ಬಿಜೆಪಿ ನಾಯಕನ ರೆಸಾರ್ಟ್ ಮೇಲೆ ಪೊಲೀಸ್ ದಾಳಿ

    ಶಿಲ್ಲಾಂಗ್: ಮೇಘಾಲಯದ ಬಿಜೆಪಿ ಉಪಾಧ್ಯಕ್ಷ ಬೆರ್ನಾರ್ಡ್ ಎನ್ ಮರಕ್ ಅವರ ತುರಾದಲ್ಲಿರುವ ರೆಸಾರ್ಟ್‌ಗೆ ಶನಿವಾರ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿಂದ 6 ಮಕ್ಕಳನ್ನು ರಕ್ಷಿಸಲಾಗಿದೆ ಹಾಗೂ 73 ಜನರನ್ನು ಬಂಧಿಸಲಾಗಿದೆ.

    ಮೇಘಾಲಯದ ಪೊಲೀಸರು ಕೆಲವು ಸುಳಿವಿನ ಆಧಾರದ ಮೇಲೆ ಮರಕ್ ಮಲೀಕತ್ವದ ಬಗಾನ್ ಎಂಬ ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಿದ್ದಾರೆ. ಫಾರ್ಮ್‌ಹೌಸ್ ಅನ್ನು ಅಕ್ರಮ ವೇಶ್ಯಾವಾಟಿಕೆಗೆ ಬಳಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಘಟನೆಯಿಂದ ಇದೀಗ ಬಿಜೆಪಿಗೆ ಒಂದು ದೊಡ್ಡ ಕಳಂಕ ತಂದಿದೆ.

    ನಾವು 4 ಹುಡುಗರು ಹಾಗೂ ಇಬ್ಬರು ಹುಡುಗಿಯರು ಸೇರಿದಂತೆ ಒಟ್ಟು 6 ಅಪ್ರಾಪ್ತರನ್ನು ಸ್ಥಳದಿಂದ ರಕ್ಷಿಸಿದ್ದೇವೆ. ಈ ರೆಸಾರ್ಟ್ ಅನ್ನು ವೇಶ್ಯಾವಾಟಿಕೆಯ ಉದ್ದೇಶಕ್ಕೆ ಬಳಸಲಾಗುತ್ತಿದ್ದು, ಅಪ್ರಾಪ್ತರನ್ನು ಕೊಳಕಾದ ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು ಎಂದು ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!

    ಎಲ್ಲಾ ಅಪ್ರಾಪ್ತರನ್ನು ಸುರಕ್ಷಿತವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ(ಡಿಸಿಪಿಒ) ಕೈಗೆ ಒಪ್ಪಿಸಿದ್ದೇವೆ. ದಾಳಿಯಲ್ಲಿ 27 ವಾಹನಗಳು, 8 ದ್ವಿಚಕ್ರ ವಾಹನಗಳು, ಸುಮಾರು 400 ಮದ್ಯದ ಬಾಟಲಿಗಳು, 500ಕ್ಕೂ ಹೆಚ್ಚು ಬಳಕೆಯಾಗದ ಕಾಂಡೋಮ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ವಶಪಡಿಸಿಕೊಂಡಿರುವ ವಸ್ತುಗಳಿಂದಲೇ ಇಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂಬುದು ತಿಳಿದುಬಂದಿದೆ. ಫಾರ್ಮ್‌ಹೌಸ್‌ನಲ್ಲಿ 30 ಸಣ್ಣ ಕೊಠಡಿಗಳು ಇವೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ 73 ಜನರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಝೀರೋ ಟ್ರಾಫಿಕ್‍ನಲ್ಲಿ ರಸ್ತೆ ದಾಟಿದ ಹುಲಿರಾಯನ ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]