Tag: BESCOM

  • ಬೆಂಗಳೂರಿನಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ

    ಬೆಂಗಳೂರಿನಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ

    ಬೆಂಗಳೂರು: ರಾಜಧಾನಿಯಲ್ಲಿ ಜಾತಿಗಣತಿ (Caste Census) ನಡೆಸಲು ತಾಂತ್ರಿಕ ಸಮಸ್ಯೆ (Technical Problem) ಎದುರಾಗಿದೆ.

    ಜಾತಿಗಣತಿಗೂ ಮುನ್ನ ಬೆಸ್ಕಾ (Bescom) ರೀಡರ್‌ಗಳು ಮನೆ ಮನೆಗೆ ತೆರಳಿ ಯುಹೆಚ್‌ಐಡಿ (UHID) ಸಂಖ್ಯೆಯನ್ನು ಅಂಟಿಸಿದ್ದರು. ಈ ಸಂಖ್ಯೆ ಹಾಕಿದರೆ ಸೈಟ್‌ ತೆರೆಯುತ್ತಿಲ್ಲ. ಹೀಗಾಗಿ ಈಗ ಗಣತಿದಾರರೇ ಮನೆ ನಂಬರ್‌ ಸೃಷ್ಟಿಸಿ ಸಮೀಕ್ಷೆಗೆ ಮುಂದಾಗಿದ್ದಾರೆ.

    ಗಣತಿದಾರರಿಗೆ ಮನೆ ರಿಜಿಸ್ಟ್ರೇಷನ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ಗ್ರೇಟರ್‌ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಈಗ ತರಬೇತಿ ನೀಡಲು ಮುಂದಾಗಿದ್ದಾರೆ.

    ಮುಖ್ಯವಾಗಿ ಬಿಟಿಎಂ ಲೇಔಟ್‌ ಬಹುತೇಕ ಕಡೆ ತಾಂತ್ರಿಕ ಸಮಸ್ಯೆ ಎದುರಾಗಿದ್ದು ಈಗ ಸಮೀಕ್ಷಾ ಸಿಬ್ಬಂದಿಗೆ ಮತ್ತೆ ತರಬೇತಿ ನೀಡಲಾಗುತ್ತಿದೆ.

     

    ಏನೇನು ತಾಂತ್ರಿಕ ಸಮಸ್ಯೆಯಾಗುತ್ತಿದೆ?
    ಯುಹೆಚ್ ಐಡಿ ನಂಬರ್ ಜನರೇಟರ್ ಆಗುತ್ತಿಲ್ಲ, ಓಟಿಪಿ ಬರುತ್ತಿಲ್ಲ , ಸರ್ವರ್‌ ಡೇಟಾ ತೆಗೆದುಕೊಳ್ಳುತ್ತಿಲ್ಲ , ಸರ್ವೆ ಮಾಡಲು ಆಪ್ ಲಾಗಿನ್ ಆಗುತ್ತಿಲ್ಲ, ಐಪೋನ್ ನಲ್ಲಿ ಆಪ್ ಲಾಗಿನ್ ಆಗುತ್ತಿಲ್ಲ… ಹೀಗೆ ಹಲವು ತಾಂತ್ರಿಕ ಸಮಸ್ಯೆಯ ಬಗ್ಗೆ ಸಮೀಕ್ಷೆ ಮಾಡುತ್ತಿರುವವರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ:  ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ನಗರ ಪೊಲೀಸ್ ಆಯುಕ್ತರ ಸೂಚನೆ

    ರಜೆ ಇದ್ದರೂ ಸಮೀಕ್ಷೆ
    ಇಂದು ವಾಲ್ಮಿಕಿ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ರಜೆ ಇದ್ದರೂ ಸಿಬ್ಬಂದಿ ಸಮೀಕ್ಷೆ ಮಾಡುತ್ತಿದ್ದಾರೆ. ಮೂರು ದಿನದಿಂದ ಬೆಂಗಳೂರಿನಲ್ಲಿ ಶುರುವಾಗಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಇಂದು ಮುಂದುವರಿದಿದೆ.

     

  • ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ 3.85 ಕೋಟಿ ಮೌಲ್ಯದ ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು!

    ಹರಿಹರದ ಬೆಸ್ಕಾಂ ಉಗ್ರಾಣದಲ್ಲಿ ಗೋಲ್ಮಾಲ್‌ – ರೈತರಿಗೆ ಸೇರಬೇಕಿದ್ದ 3.85 ಕೋಟಿ ಮೌಲ್ಯದ ವಿದ್ಯುತ್ ಪರಿಕರಗಳು ಭ್ರಷ್ಟರ ಪಾಲು!

    ದಾವಣಗೆರೆ: ಬೆಸ್ಕಾಂ (BESCOM) ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ರೈತರಿಗೆ (Farmers) ಸೇರಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಪರಿಕರಗಳು ನಾಪತ್ತೆಯಾಗಿದ್ದು ಇದ್ದ ಮೂವರಲ್ಲಿ ಕದ್ದವರು ಯಾರು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ.

    ದಾವಣಗೆರೆಯ (Davanagere) ಹರಿಹರದ (Harihara) ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ ಆಂತರಿಕ ಲೆಕ್ಕಪರಿಶೋಧನೆ ವೇಳೆ ಅಧಿಕಾರಿಗಳ ಕಳ್ಳಾಟ ಬಯಲಿಗೆ ಬಂದಿದೆ.ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ಆದರೂ ಸಹ ಅಲ್ಲಿನ ಅಧಿಕಾರಿಗಳು ಯಾವುದೇ ತನಿಖೆಗೆ ಮುಂದಾಗಿಲ್ಲ. ಕನಿಷ್ಠ ಠಾಣೆಗೆ ದೂರು ಸಹ ದಾಖಲಿಸದೇ ಇರುವುದು ಭಾರೀ ಅನುಮಾನಕ್ಕೆ ಕಾರಣವಾಗಿದೆ. ಇನ್ನೇನು ನನ್ನ ತಲೆ ಬಂದರೆ ಕಷ್ಟ ಆಗಬಹುದು ಎಂದು ಭಾವಿಸಿ ಈಗ ಅಧಿಕಾರಿಗಳು ತುರ್ತಾಗಿ ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ತನಿಖೆಯ ವೇಳೆ ಉಗ್ರಾಣದಿಂದ ಬರೋಬರಿ 72.58 ಲಕ್ಷ ರೂ. ಮೌಲ್ಯದ 102 ಪರಿವರ್ತಕಗಳೇ (TC) ಮಾಯವಾಗಿವೆ ಎಂಬುದು ಆಂತರಿಕ ಲೆಕ್ಕ ಪರಿಶೋಧನೆಯಿಂದ ಗೊತ್ತಾಗಿದೆ ಎಂದು ದಾವಣಗೆರೆ ಎಸ್‌ಪಿ ಉಮಾಪ್ರಶಾಂತ್ ತಿಳಿಸಿದ್ದಾರೆ.

    ಇಲ್ಲಿ ನಾಪತ್ತೆಯಾಗಿರುವುದು ಒಂದೇರಡಲ್ಲ. 89,270 ಲೀಟರ್ ಟಿ.ಸಿ. ಆಯಿಲ್‌ನ ಲೆಕ್ಕವಂತೂ ಇಲ್ವೇ ಇಲ್ಲ. ಒಟ್ಟು 3.85 ಕೋಟಿ ಮೌಲ್ಯದ 42 ವಿವಿಧ ಸಾಮಗ್ರಿಗಳ ದುರುಪಯೋಗ ಮಾಡಿಕೊಳ್ಳಲಾಗಿದೆ. ವಿದ್ಯುತ್ ಪರಿವರ್ತಕ, ಪೋಲ್, ವಯರ್‌,  ಲೈನ್ ಮಟೇರಿಯಲ್ಸ್ ಪಿವಿಸಿ ಅಲ್ಯುಮಿನಿಯಮ್ ರೀಡ್ ವೈರ್, ಆಯಿಲ್ ಸೇರಿ 42 ಸಾಮಗ್ರಿಗಳನ್ನು ದುರುಪಯೋಗ ಮಾಡಲಾಗಿದೆ.

    2018 ರ ಜೂನ್ 19 ರಿಂದ 2025 ರ ಸೆಪ್ಟೆಂಬರ್ 16 ರವರೆಗೆ ಹರಿಹರ ಬೆಸ್ಕಾಂ ಉಗ್ರಾಣದಲ್ಲಿ ಸಹಾಯಕ ಉಗ್ರಾಣ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅರುಣಕುಮಾರ್ ಅವರು ಸಾಮಾಗ್ರಿಗಳು ಉಗ್ರಣದಲ್ಲೇ ಇರುವಂತೆ ಕಡತದಲ್ಲಿ ನಮೂದಿಸಿ ಅವುಗಳನ್ನು ಹೊರಕ್ಕೆ ಸಾಗಿಸಿ ದುರುಪಯೋಗ ಮಾಡಿಕೊಂಡಿದ್ದು, ಇನ್ ವಾಯ್ಸ್ ಸಂಖ್ಯೆಗಳನ್ನು ಮಾತ್ರ ಕಡತದಲ್ಲಿ ದಾಖಲಿಸಿ ವಂಚಿಸಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    2025 ರ ಏಪ್ರಿಲ್ ನಲ್ಲಿ ತ್ರೈಮಾಸಿಕ ಪರಿಶೀಲನೆ ನಡೆಸಿದ್ದು, ಪರಿವರ್ತನೆ ತೈಲದಲ್ಲಿ 89,270 ಲೀಟರ್ ಕೊರತೆ ಕಂಡು ಬಂದಿದ್ದು 56,67,864 ರೂ. ನಷ್ಟ ಉಂಟಾಗಿದೆ. ಅಷ್ಟೇ ಅಲ್ಲದೇ 72.58 ಲಕ್ಷ ರೂ.ಮೌಲ್ಯದ 102 ಪರಿವರ್ತಕಗಳು ಬಫರ್ ಸ್ಟಾಕ್ ನಿಂದ ಕಣ್ಮರೆಯಾಗಿದ್ದವು. ಇದರಲ್ಲದೇ 12.75 ಲಕ್ಷ ರೂ. ಮೌಲ್ಯದ 21 ಪರಿವರ್ತಕಗಳನ್ನು ಲೆಡ್ಜರ್ ನಲ್ಲಿ ದುರಸ್ಥಿದಾರರಿಗೆ ಇನ್ ವಾಯ್ಸ್ ಮಾಡಿದಂತೆ ದಾಖಲಾಗಿದ್ದರೂ ವಾಸ್ತವದಲ್ಲಿ ದುರಸ್ಥಿದಾರರಿಗೆ ಹಸ್ತಾಂತರವಾಗಿರಲಿಲ್ಲ. ಈ ರೀತಿಯಲ್ಲಿ ಒಟ್ಟು 3.85 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ದುರುಪಯೋಗ ಮಾಡಲಾಗಿದೆ ಎಂಬುದು ಪರಿಶೀಲನೆಯಿಂದ ದೃಢಪಟ್ಟಿದ್ದು ಕಾನೂನು ಕ್ರಮ ಜರುಗಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರವಿಕಿರಣ್ ಇದೀಗ ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಎಫ್‌ಐಆರ್ ದಾಖಲಾಗುತ್ತಿದ್ದಂತೆ ಬೆಸ್ಕಾಂ ಹರಿಹರ ಉಗ್ರಾಣಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರುದಾರ ಇಇ ರವಿಕುಮಾರ್ ನಿಂದ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಇದೇ ರೀತಿ ಗೋಲ್‌ಮಾಲ್ ಆಗಿದೆ ಎಂಬ ಆರೋಪ ಕೂಡಾ ಕೇಳಿ ಬಂದಿದೆ.

    ಕೆಪಿಟಿಸಿಎಲ್ ಅಡಿಯಲ್ಲಿ ಬರುವ ಬೆಸ್ಕಾಂ, ಎಸ್ಕಾಂ ಜೆಸ್ಕಾಂ ಸೇರಿದಂತೆ ಎಲ್ಲಾ ನಿಗಮಗಳಲ್ಲಿ ಕೂಡ ತನಿಖೆ ನಡೆಸಿದರೆ ಇನ್ನು ಹೆಚ್ಚಿನ ಅವ್ಯವಹಾರ ಬೆಳಕಿಗೆ ಬರುತ್ತದೆ ಎಂದು ಸಾಮಾಜಿಕ ಹೋರಾಟಗಾರ ಗಿರೀಶ್ ಎಸ್ ದೇವರಮನಿ ತಿಳಿಸಿದ್ದಾರೆ.

  • ಸಮೀಕ್ಷೆಯಿಂದ ವಿದ್ಯುತ್ ಬಿಲ್ ವ್ಯತ್ಯಯವಾಗದು, ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ

    ಸಮೀಕ್ಷೆಯಿಂದ ವಿದ್ಯುತ್ ಬಿಲ್ ವ್ಯತ್ಯಯವಾಗದು, ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ

    ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (Caste Survey) ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ(Gruha Jyothi) ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ (BESCOM)  ಸ್ಪಷ್ಟಪಡಿಸಿದೆ.

    ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್‌ ರೀಡಿಂಗ್‌ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್‌ ಬಿಲ್‌ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು.

     
    ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್‌ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್‌ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

  • ಬೆಂಗಳೂರಿನ ಈ ಭಾಗದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರಿನ ಈ ಭಾಗದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸೆ.26 (ಶುಕ್ರವಾರ) ಹಾಗೂ 27 (ಶನಿವಾರ) ರಂದು ವಿದ್ಯುತ್ ಪೂರೈಕೆಯಲ್ಲಿ (Current Supply) ವ್ಯತ್ಯಯ ಉಂಟಾಗಲಿದೆ.

    ಇಸ್ಕಾನ್ ಉಪಕೇಂದ್ರ ಮತ್ತು ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯಲ್ಲಿ ಶುಕ್ರವಾರ ಮತ್ತು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (Bescom) ಪ್ರಕಟಣೆಯಲ್ಲಿ ತಿಳಿಸಿದೆ.

    ಸೆ.26 ರಂದು ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯ ಮಂತ್ರಿ ಅಪಾರ್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರುವುದಿಲ್ಲ.

    ಸೆ.26 ರಂದು ಯಾವ ಪ್ರದೇಶದಲ್ಲಿ ವ್ಯತ್ಯಯ?
    ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯ ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್‌ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್‌ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್‌ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ.

  • ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್ ಮಾಡಿ?

    ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್ ಮಾಡಿ?

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸೆ.23 ರಂದು ವಿದ್ಯುತ್ ಪೂರೈಕೆಯಲ್ಲಿ (Power Supply) ವ್ಯತ್ಯಯ ಉಂಟಾಗಲಿದೆ.

    ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಒಂದೂವರೆ ಕೋಟಿ, 50 ಗ್ರಾಂ ಚಿನ್ನಾಭರಣ ದೋಚಿದ ʻಸರ್ಕಾರಿ ಅಧಿಕಾರಿಗಳುʼ

    ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಎಲಿಟ ಪ್ರೋಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್.ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು. ಎ.ಕೆ.ಅಶ್ರಮ್ ರಸ್ತೆ, ದೇವೇಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಸೈನಿಕ ಪ್ರದೇಶ (ಮಿಲಿಟರಿ ಏರಿಯಾ), ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿಡಬ್ಲ್ಯೂಎಸ್‌ಎಸ್‌ಬಿ ಮಲಮೂತ್ರ ಶುದ್ಧೀಕರಣ ಘಟಕ (ಸೆವೇಜ್ ಪ್ಲಾಂಟ್), ಮರಿಯಣ್ಣಪಾಳ್ಯ.

    ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕಾರ್ಪೊರೇಶನ್ ಕಚೇರಿ, ಚಾಣಕ್ಯ ಲೇಔಟ್, ನಾಗವಾರಾ, ಎಂ.ಎಸ್.ರಾಮಯ್ಯ ನಾರ್ತ್ ಸಿಟಿ, ತಾಣಿಸಂದ್ರ ಮುಖ್ಯ ರಸ್ತೆ, ಆರ್ಶೀವಾದ ನಗರ, ಅಮರಜ್ಯೋತಿ ಲೇಔಟ್, ರಾಚೆನಹಳ್ಳಿ ಮುಖ್ಯ ರಸ್ತೆ, ಮೆಸ್ತ್ರಿ ಪಾಳ್ಯ, ರಾಯಲ್ ಎಂಕ್ಲೇವ್, ಶ್ರೀರಾಂಪುರ ಗ್ರಾಮ, ವಿಹೆಚ್‌ಬಿಸಿಎಸ್ ಲೇಔಟ್, ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, ಗೋವಿಂದಪುರ 17ನೇ ಕ್ರಾಸ್, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

  • ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಇರಲ್ಲ?

    ಬೆಂಗಳೂರಿನ ಹಲವೆಡೆ ಮಂಗಳವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಇರಲ್ಲ?

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗ್ಳೂರು (Bengaluru) ನಗರದ ಹಲವೆಡೆ ಸೆ.23 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

    66/11ಕೆ.ವಿ. ಯಲ್ಲಾರ್ ಬಂಡೆ ಉಪಕೇಂದ್ರ (ಉತ್ತರ) ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ (Power Supply) ವ್ಯತ್ಯಯ ಉಂಟಾಗಲಿದೆ.

    ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಕಾವಲ್ಬೈರಸಂದ್ರ, ಎಲ್‌ಆರ್ ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆಎಚ್‌ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಮಠಾಧೀಶ ಸಭಾಂಗಣ, ಮಠಾಧೀಶ ಸಭಾಂಗಣ ನಗರ, ವಿ ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಂಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಉದ್ಯಾನ, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸಕ್ಕರೆ ಮಂಡಿ, ಉಪ್ಪಿನ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

  • ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿಕೊಳ್ಳಿ

    ಇಂದು ಬೆಂಗಳೂರಿನ ಹಲವಡೆ ವಿದ್ಯುತ್‌ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿಕೊಳ್ಳಿ

    ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ (Bengaluru) ಮಹಾಲಕ್ಷ್ಮೀ ಲೇಔಟ್ (Mahalakshmi Layout) ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

    ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.


    ಯಾವ ಪ್ರದೇಶದಲ್ಲಿ ವ್ಯತ್ಯಯ?
    ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ. ಇದನ್ನೂ ಓದಿ: ರಷ್ಯಾ ಡ್ರೋನ್‌ ದಾಳಿ ಮುಳುಗಿತು ಉಕ್ರೇನ್‌ ಅತಿ ದೊಡ್ಡ ನೌಕಾ ಹಡಗು

    ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಲಕ್ಷ್ಮೀ ನಗರ, HVKಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, VJSSಲೇಔಟ್, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖ ಹೋಮ್ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್.

    ESI ಹಾಸ್ಪಿಟಲ್, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಇಸ್ಕಾನ್, BNES ಕಾಲೇಜು, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

  • Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

    Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

    ಬೆಂಗಳೂರು: ಪಿಜಿಯಲ್ಲಿದ್ದ ಬೆಸ್ಕಾಂ ಅಸಿಸ್ಟೆಂಟ್ ಎಂಜಿನಿಯರ್ (BESCOM Assistant Engineer) ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದೋಚಿದ (Gold Theft) ಘಟನೆ ಯಲಹಂಕ (Yelahanka) ಪೊಲೀಸ್ ಠಾಣಾ ವ್ಯಾಪ್ತಿಯ ಜುಡಿಷಿಯಲ್ ಲೇಔಟ್‌ನಲ್ಲಿ ನಡೆದಿದೆ.

    ಆ.11ರಂದು ಮಧ್ಯಾಹ್ನ 3ಗಂಟೆ ಸುಮಾರಿಗೆ ಲೇಡಿಸ್ ಪಿಜಿಯಲ್ಲಿ (Ladies PG) ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳ ಹಿಂದಷ್ಟೇ ಪಿಜಿಗೆ ಸೇರಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ರೂಮಿಗೆ ಬಂದಿದ್ದಾರೆ. ಪಿಜಿಯಲ್ಲಿನ ಮೂರನೇ ಮಹಡಿಯಲ್ಲಿರೋ ತನ್ನ ರೂಮಿಗೆ ಬಂದಾಗ, ಡೋರ್ ಬಡಿದ ಶಬ್ದ ಕೇಳಿ ಪಿಜಿಯವರು ಇರಬಹುದು ಎಂದು ಡೋರ್ ಓಪನ್ ಮಾಡಿದ್ದರು. ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಆರೋಪಿ ಆಕೆಯ ಅಂಗಾಂಗಗಳನ್ನ ಮುಟ್ಟಿ, ಆಕೆ ಮೈಮೇಲಿದ್ದ ಚಿನ್ನಾಭರಣಗಳನ್ನ ಬಿಚ್ಚಿಸಿಕೊಂಡು ಆಕೆಯ ಬೆಡ್ ಮೇಲಿದ್ದ ಎರಡು ಮೊಬೈಲ್‌ಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

    ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

  • ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ ಲಕ್ಷ ಲಕ್ಷ ವಸೂಲಿ – ಡೆತ್‌ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

    ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ ಲಕ್ಷ ಲಕ್ಷ ವಸೂಲಿ – ಡೆತ್‌ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

    ರಾಮನಗರ: ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಕೆ ಹಾಕಿ ಲಕ್ಷ ಲಕ್ಷ ಹಣ ದೋಚಿದ್ದಲ್ಲದೇ, ಮತ್ತೆ ಹಣ ಕೊಡುವಂತೆ ಬೆದರಿಕೆ ಹಾಕಿದ ಹಿನ್ನೆಲೆ ಬೆಸ್ಕಾಂ (BESCOM) ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ. ಸೈಬರ್ ವಂಚಕರ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನೇಣಿಗೆ ಶರಣಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

    ಬೆಸ್ಕಾಂ ಸಿಬ್ಬಂದಿ 42 ವರ್ಷದ ಕುಮಾರ್ ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಕುಮಾರ್ ಡೆತ್‌ನೋಟ್‌ನಲ್ಲಿ ಡಿಜಿಟಲ್ ಅರೆಸ್ಟ್ ಕಿರುಕುಳದ ಬಗ್ಗೆ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

    ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಬೆಸ್ಕಾಂ ಹೊರಗುತ್ತಿಗೆ ನೌಕರರನಾಗಿ ಕುಮಾರ್ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕಾಲ್ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿದ್ದ. ಕೇಸ್‌ನಿಂದ ಕೈಬಿಡಲು ಅಕೌಂಟ್‌ಗೆ ಹಣ ಹಾಕು ಎಂದು ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಅಕೌಂಟ್‌ಗೆ ಹಾಕಿಸಿಕೊಂಡಿದ್ದ. ಆದರೆ ಮತ್ತೆ ಹಣ ನೀಡುವಂತೆ ಬೆದರಿಸಿದ್ದ. ಕಿರುಕುಳಕ್ಕೆ ಬೇಸತ್ತ ಕುಮಾರ್ ಡೆತ್‌ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಅನಾರೋಗ್ಯದ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

    ಡೆತ್‌ನೋಟ್‌ನಲ್ಲಿ ಏನಿದೆ?
    ವಿಕ್ರಂ ಗೋಸ್ವಾಮಿ, ಸಿಬಿಐ ಅಂತ ನನಗೆ 8109931663ರ ನಂಬರ್‌ನಿಂದ ಫೋನ್ ಮಾಡಿ ನಿನ್ನ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿ ನನ್ನ ಅಕೌಂಟಿಗೆ 1,95,000 ರೂ. ಹಾಕು ಎಂದು ಅಕೌಂಟ್ ನಂಬರ್ ಕಳುಹಿಸಿದ್ದು, ನಾನು ಭಯಪಟ್ಟು ಹಣವನ್ನು ಹಾಕಿದೆ. ನಂತರ ಮತ್ತೆ ಫೋನ್ ಮಾಡಿ ಆ ಅಕೌಂಟ್‌ಗೆ ಹಾಕು, ಈ ಅಕೌಂಟ್‌ಗೆ ಹಾಕು ಎಂದು ನನ್ನಿಂದ ಸುಮಾರು 11 ಲಕ್ಷ ಹಾಕಿಸಿಕೊಂಡಿರುತ್ತಾರೆ. ನಂತರ ನನ್ನ ಪರ್ಸನಲ್ ನಂಬರ್ ಹಾಗೂ ವಾಟ್ಸಪ್ ನಂಬರ್‌ಗೆ 9752140613 ಹಾಗೂ 9812177540ರ ನಂಬರಿಗೆ 2,75,000 ರೂ. ಕಳುಹಿಸು ಎಂದು ಕಾಡಿಸುತ್ತಿದ್ದಾರೆ. ಆದ ಕಾರಣ ನನ್ನ ಸಾವನ್ನ ನಾನೇ ತಂದುಕೊಂಡಿದ್ದೇನೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

    ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡೆತ್‌ನೋಟ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಸದ್ಯ ಈ ಪ್ರಕರಣ ಸೈಬರ್ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ. ಇದನ್ನೂ ಓದಿ: ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

  • ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

    ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ, ಚಾಲಕ ಗ್ರೇಟ್‌ ಎಸ್ಕೇಪ್‌

    – ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ

    ಬೆಂಗಳೂರು: ನಗರದ ಹಲವೆಡೆ ತಡರಾತ್ರಿ ಭಾರೀ ಮಳೆ (Bengaluru Rain) ಸುರಿದು, ಪ್ರಮುಖ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ ಎಂದು ತಿಳಿದುಬಂದಿದೆ.

    ಮಳೆಯೊಂದಿಗೆ ಭಾರೀ ಗಾಳಿಗೆ ಅಲ್ಲಲ್ಲಿ ಅವಾಂತರಗಳೂ ಸಂಭವಿಸಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಈ ನಡುವೆ ನಿನ್ನೆ ರಾತ್ರಿ ಬಿದ್ದ ಮರಗಳನ್ನ ಈವರೆಗೂ ತೆರವು ಮಾಡದ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇಡೀ ಶಾಪ ಹಾಕಿದ್ದಾರೆ. ಇದನ್ನೂ ಓದಿ: Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

    ಕಾರಿನ ಮೇಲೆ ಬಿದ್ದ ಬೃಹತ್ ಮರ; ಚಾಲಕ ಗ್ರೇಟ್ ಎಸ್ಕೇಪ್
    ಇನ್ನೂ ನಿನ್ನೆ ಸಂಜೆ 6:10ರ ಸುಮಾರಿಗೆ ಮಳೆ ಸಂದರ್ಭದಲ್ಲಿ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ 3 ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಆದ್ರೆ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನ ಈವರೆಗೂ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ತೆರವು ಮಾಡಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಲ್ಲದೇ ಎಂಜಿ ರೋಡ್ ಬಳಿಯ ಶಾಂತಲಾ ರಸ್ತೆಯಲ್ಲಿ ಮುಖ್ಯರಸ್ತೆಯಲ್ಲೂ ಬೃಹತ್‌ ಗಾತ್ರದ ಮರ ಬಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಇದನ್ನೂ ಓದಿ: ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

    ಮುಂದಿನ 4 ದಿನ ಭಾರೀ ಮಳೆ ಎಚ್ಚೆರಿಕೆ
    ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳ ಕಾಲ ಅಂದ್ರೆ ಜುಲೈ 15ರ ವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನೈಋತ್ಯ ಮುಂಗಾರು ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ