Tag: BF7 Variant

  • ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ಬೆಂಗಳೂರು: ಚೀನಾದಲ್ಲಿ ಡೆಡ್ಲಿ ಕೊರೊನಾ (Corona Virus) ರೂಪಾಂತರಿಯ ಅಬ್ಬರ ಜೋರಾಗಿದ್ದು ಚೀನಾ ಅಕ್ಷರಶಃ ನಲುಗಿ ಹೋಗಿದೆ. ಈಗಾಗಲೇ ಭಾರತದಲ್ಲೂ (India) ಚೀನಾದ ಬಿಎಫ್.7 ಉಪತಳಿ (BF7 Variant) ಪತ್ತೆಯಾಗಿದ್ದು, ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ (Government Of Karnataka) ಹಲವು ಕ್ರಮಗಳನ್ನ ಜಾರಿಗೊಳಿಸಿದೆ.

    ಮುಂದಿನ 3 ತಿಂಗಳು ಅಲರ್ಟ್ ಆಗಿರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳನ್ನ ಎಚ್ಚರಿಸಿದ್ದು, ನಮ್ಮ ರಾಜ್ಯವೂ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಹೊಸ ವರ್ಷಕ್ಕೆ ಮಾತ್ರವಲ್ಲದೇ ವೈಕುಂಠ ಏಕಾದಶಿ ಸಂಕ್ರಾಂತಿ ಸಂಭ್ರಮದ ಮೇಲೂ ಕೊರೊನಾ ಕರಿನೆರಳು ಆವರಿಸಿದೆ. ಪ್ರತಿ ವಾರವೂ ಕೊರೊನಾ ಮಾರ್ಗಸೂಚಿಗಳ (Covid Guidelines) ಅವಲೋಕನ ಮಾಡಿಕೊಳ್ಳಲಾಗುತ್ತಿದ್ದು, ಕೊಂಚ ಕೇಸ್ ಏರಿಕೆಯಾದ್ರೂ ಮುಂದಿನ 90 ದಿನಗಳಿಗೆ ನಿಯಮಗಳು ನಿರ್ಣಾಯಕವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

    ಧಾರ್ಮಿಕ ಕಾರ್ಯಕ್ರಮಗಳ ಮೇಲೂ ನಿಗಾ: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮಾತ್ರವಲ್ಲದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಜನ ಸೇರುವುದನ್ನು ಕಡಿವಾಣ ಹಾಕಲು ದೇವಸ್ಥಾನಗಳಿಗೂ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ- ಹೋಟೆಲ್‌ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಕೊಲೆ

    ಕ್ರಮಗಳು ಏನೇನು ಬರಲಿವೆ?: ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ (Sankranti Festival) ಜನಜಂಗುಳಿ ತಡೆಯಲು ಈಗಿನಿಂದಲೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

    Live Tv
    [brid partner=56869869 player=32851 video=960834 autoplay=true]

  • ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬಸ್, ಸಿನಿಮಾ ಥಿಯೇಟರ್, ಪಬ್ ಬಾರ್‌ಗಳಲ್ಲೂ ಮಾಸ್ಕ್ ಅಗತ್ಯ – ರಾಜ್ಯ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ನಲ್ಲಿ ಏನೇನಿದೆ?

    ಬೆಂಗಳೂರು: ಚೀನಾ (China) ಸೇರಿ ಹಲವು ದೇಶಗಳಲ್ಲಿ ಕೋವಿಡ್ (Covid) ಆರ್ಭಟ ಜೋರಾಗಿದ್ದು, ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳೂ ಅಲರ್ಟ್ ಆಗಿವೆ. ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ (Karnataka Covid Guidelines) ಬಿಡುಗಡೆ ಮಾಡಿದೆ.

    ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ. ಇದನ್ನೂ ಓದಿ: ಕೋವಿಡ್ ಪರೀಕ್ಷೆ ಹೆಚ್ಚಿಸಿ.. ಎಲ್ಲರೂ ಮಾಸ್ಕ್ ಧರಿಸಿ – ಮೋದಿ ಸಲಹೆ

    ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಬೂಸ್ಟರ್ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಠಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು.

    ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಪ್ರೇಮಿಗಳ ಸ್ವರ್ಗ ತಾಜ್‌ಮಹಲ್ ಭೇಟಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

    ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟೂ ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು. ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]