Tag: Bhagavad Gita

  • ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಗಾಂಧೀನಗರ: ಟೇಕಾಫ್‌ ಆದ ಕೆಲಹೊತ್ತಿನಲ್ಲೇ ಹಾಸ್ಟೆಲ್‌ಗೆ ಡಿಕ್ಕಿಯಾಗಿ ಪತನಗೊಂಡ ಏರ್‌ ಇಂಡಿಯಾದ ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನ ಪತನಗೊಂಡಿತು. ವಿಮಾನದ ಜೊತೆ 241 ಪ್ರಯಾಣಿಕರು ಸಹ ಸುಟ್ಟು ಕರಕಲಾದರು. ಆದರೆ, ವಿಮಾನದ ಅವಶೇಷಗಳಲ್ಲಿ ಸಿಕ್ಕ ಭಗವದ್ಗೀತೆ ಪುಸ್ತಕ ಏನೂ ಆಗದೇ ಸುರಕ್ಷಿತವಾಗಿ ಸಿಕ್ಕಿದೆ.

    ಗುರುವಾರ ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯ ಒಂದು ಆವೃತ್ತಿಯು ಹಾನಿಗೊಳಗಾಗದೇ ಉಳಿದಿದೆ. ಅಹಮದಾಬಾದ್ ವಿಮಾನ ಅಪಘಾತದ ಅವಶೇಷಗಳ ನಡುವೆ ಪತ್ತೆಯಾದ ಭಗವದ್ಗೀತೆಯ ಹಾನಿಯಾಗದ ಪುಟಗಳನ್ನು ವ್ಯಕ್ತಿಯೊಬ್ಬ ಪ್ರದರ್ಶಿಸುತ್ತಿರುವ ದೃಶ್ಯ ವೀಡಿಯೊದಲ್ಲಿದೆ. ಇದನ್ನೂ ಓದಿ:

    242 ಪ್ರಯಾಣಿಕರಿದ್ದ ವಿಮಾನವು ಟೇಕಾಫ್ ಆದ 40 ಸೆಕೆಂಡ್‌ಗಳಲ್ಲೇ ಪತನಗೊಂಡಿತು. ಇದರಿಂದಾಗಿ 241 ಜನರು ಸಾವನ್ನಪ್ಪಿದರು. ವಿಮಾನದ 11A ನಲ್ಲಿ ಕುಳಿತಿದ್ದ ವಿಶ್ವಶ್ ಕುಮಾರ್ ರಮೇಶ್ ಎಂಬ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದರು.

    ವಿಮಾನವು ವೈದ್ಯಕೀಯ ವಿಶ್ವವಿದ್ಯಾಲಯದ ಮೇಲೆ ಅಪ್ಪಳಿಸಿತು. ಇದರ ಪರಿಣಾಮವಾಗಿ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ತನಿಖೆಯನ್ನು ಪ್ರಾರಂಭಿಸಿದೆ. ಬೋಯಿಂಗ್ 787-8 ಬಗ್ಗೆ ಪ್ರಸ್ತುತ ಯಾವುದೇ ಸುರಕ್ಷತಾ ಕಾಳಜಿಗಳಿಲ್ಲ ಎಂದು ಯುಎಸ್ ಸಾರಿಗೆ ಕಾರ್ಯದರ್ಶಿ ಸೀನ್ ಡಫಿ ತಿಳಿಸಿದ್ದಾರೆ.

    ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ವಿಮಾನ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು. ಅವಘಡದಲ್ಲಿ ಬದುಕುಳಿತದ ಹಾಗೂ ಹಾಸ್ಟೆಲ್‌ ವಾಸಿಗಳಾಗಿದ್ದ ಗಾಯಾಳುಗಳ ಆರೋಗ್ಯವನ್ನು ಪ್ರಧಾನಿಗಳು ವಿಚಾರಿಸಿದರು.

  • ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    – ಪ್ರಧಾನಿ ನರೇಂದ್ರ ಮೋದಿ ಸಂತಸ

    ನವದೆಹಲಿ: ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣ ಇಂದು ಬಂದೊದಗಿದೆ. ಹೌದು. ಯುನೆಸ್ಕೋದ ವಿಶ್ವ ನೋಂದಣಿಯ ಸ್ಮರಣಿಕೆಯಲ್ಲಿ ಭಗವದ್ಗೀತೆ ಮತ್ತು ಭರತ ಮುನಿಯ ನಾಟ್ಯಶಾಸ್ತ್ರವನ್ನು ಸೇರ್ಪಡೆಗೊಳಿಸಲಾಗಿದೆ.

    ಈ ಮಾಹಿತಿಯನ್ನು ಕೇಂದ್ರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

    ಭರತ ಮುನಿ ಭಾರತದ ಖ್ಯಾತ ನಾಟ್ಯಶಾಸ್ತ್ರಜ್ಞ. ಇವರನ್ನು ಭಾರತದ ರಂಗಭೂಮಿಯ ಪಿತಾಮಹ ಎನ್ನಬಹುದು. ಇವರು ಬರೆದ ನಾಟ್ಯಶಾಸ್ತ್ರ ಎಂಬ ಗ್ರಂಥವು ಭಾರತದಲ್ಲಿ ನಾಟ್ಯ ಮತ್ತು ರಂಗಭೂಮಿಗೆ ಹೊಸ ದಿಶೆಯನ್ನು ತೋರಿದ ಗ್ರಂಥವಾಗಿದೆ. ನಾಟ್ಯಶಾಸ್ತ್ರ, ಕಾವ್ಯ ತತ್ವ ವಿವೇಚನೆಗೆ ಮಾತ್ರ ಸೀಮಿತವಾದ ಕೃತಿಯಲ್ಲ, ಇಡೀ ನಾಟಕ ಕಲೆಯ ಕುರಿತು ಒಂದು ಸಂಕ್ಷಿಪ್ತ ವಿಶ್ವಕೋಶವಾಗಿದೆ.

    ಇಂತಹ ಮಹತ್ವದ ಗ್ರಂಥವನ್ನು ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼನಲ್ಲಿ ಸೇರ್ಪಡೆಗೊಳಿಸಲಾಗಿದೆ. ಇದು ಅತ್ಯುತ್ತಮ ಮೌಲ್ಯದ ಸಾಕ್ಷ್ಯಚಿತ್ರ ಪರಂಪರೆಯನ್ನು ಸಂರಕ್ಷಿಸುವ ಜಾಗತಿಕ ಉಪ್ರಕಮವೂ ಇದಾಗಿದೆ. ಇದನ್ನೂ ಓದಿ: ನಾವು ಹಿಂದೂಗಳಿಗಿಂತ ವಿಭಿನ್ನ – ಎರಡು ರಾಷ್ಟ್ರ ಥಿಯರಿ ಹೇಳಿ ಪಾಠ ಮಾಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ

    ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ:
    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಸ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಈ ಸೇರ್ಪಡೆ ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆ ಮತ್ತು ಪ್ರಜ್ಞೆಯನ್ನು ಪೋಷಿಸಿವೆ. ಅವರ ಒಳನೋಟಗಳು ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆಗೊಳಿಸಿರುವುದು ಭಾರತದ ನಾಗರಿಕ ಪರಂಪರೆಗೆ ಐತಿಹಾಸಿಕ ಕ್ಷಣ. ಈ ಜಾಗತಿಕ ಗೌರವವು ಭಾರತದ ಶಾಶ್ವತ ಬುದ್ಧಿವಂತಿಕೆ ಮತ್ತು ಕಲಾತ್ಮಕ ಪ್ರತಿಭೆಗೆ ಸಾಕ್ಷಿಯಾಗಿದೆ. ಇದು ಭಾರತದ ವಿಶ್ವದೃಷ್ಟಿಕೋನ, ನಾವು ಯೋಚಿಸುವ, ಅನುಭವಿಸುವ, ಬದುಕುವ ತಾತ್ವಿಕ ಮತ್ತು ಸೌಂದರ್ಯಕ್ಕೆ ಅಡಿಪಾಯಗಳಾಗಿವೆ. ನಾವೀಗ ಅಂತಾರಾಷ್ಟ್ರೀಯ ನೋಂದಣಿಯಲ್ಲಿ ನಮ್ಮ ದೇಶದಿಂದ 14 ಶಾಸನಗಳನ್ನು ಹೊಂದಿದ್ದೇವೆ ಎಂದು ಮಾಹಿತಿಯನ್ನೂ ನೀಡಿದ್ದಾರೆ.  ಇದನ್ನೂ ಓದಿ: UK | ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಭಾರತೀಯ ಮೂಲದ ಮುಮ್ತಾಜ್‌ ಆಯ್ಕೆ

  • ಎಫ್‌ಬಿಐ ನಿರ್ದೇಶಕನಾದ ಭಾರತೀಯ – ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ಸ್ವೀಕರಿಸಿದ ಕಾಶ್ ಪಟೇಲ್

    ಎಫ್‌ಬಿಐ ನಿರ್ದೇಶಕನಾದ ಭಾರತೀಯ – ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ಸ್ವೀಕರಿಸಿದ ಕಾಶ್ ಪಟೇಲ್

    ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಕಾಶ್ ಪಟೇಲ್ (Kash Patel) ಅವರಿಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI)ನ 9ನೇ ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷವೆಂದರೆ ಅಮೆರಿಕದಲ್ಲೂ ಹಿಂದೂ ಸಂಸ್ಕೃತಿ ಮರೆಯದ ಕಾಶ್‌ ಪಟೇಲ್ ಭಗವದ್ಗೀತೆ (Bhagavad Gita) ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದಾರೆ.

    ಶ್ವೇತಭವನದ ಕ್ಯಾಂಪಸ್‌ನಲ್ಲಿರುವ ಐಸೆನ್‌ಹೋವರ್ ಕಾರ್ಯನಿರ್ವಾಹಕ ಕಚೇರಿ ಭವನದಲ್ಲಿ (EEOB) ಪ್ರಮಾಣ ವಚನ ಸ್ವೀಕರಿಸಿದರು. ಯುಎಸ್ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರು ಪ್ರಮಾಣ ವಚನ ಬೋಧಿಸಿದರು. ಇದನ್ನೂ ಓದಿ: ಅಮೆರಿಕದ ಎಫ್‌ಬಿಐಗೆ ಗುಜರಾತ್‌ ಮೂಲದ ಕಾಶ್‌ ಪಟೇಲ್‌ ಬಾಸ್‌ – ನೇಮಕವಾದ ಬೆನ್ನಲ್ಲೇ ಬಿಗ್‌ ವಾರ್ನಿಂಗ್‌

    ಪಟೇಲ್ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಗೆಳತಿ ಮತ್ತು ಕುಟುಂಬ ಸದಸ್ಯರು ಅವರ ಪಕ್ಕದಲ್ಲಿ ನಿಂತಿದ್ದರು ಮತ್ತು ಕುಟುಂಬ ಇತರ ಸದಸ್ಯರು ಮುಂದಿನ ಸಾಲಿನಲ್ಲಿ ಕುಳಿತಿದ್ದರು. ಇದೀಗ ಎಫ್‌ಬಿಐನ ನಿರ್ಗಮಿತ ನಿರ್ದೇಶಕ ಕ್ರಿಸ್ಟೋಫರ್ ವ್ರೇ ಅವರ ನಂತರ ಎಫ್‌ಬಿಐನ 9ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ ಮುಂದುವರಿಯಲಿದ್ದಾರೆ.

    ಟ್ರಂಪ್‌ ಶ್ಲಾಘನೆ:
    ಇನ್ನೂ ಕಾಶ್‌ ಪಟೇಲ್‌ ಅವರ ನೇಮಕಾತಿಯನ್ನು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ನಾನು ಕಾಶ್‌ ಪಟೇಲ್‌ರನ್ನ ಗೌರವಿಸುತ್ತೇನೆ. ಎಫ್‌ಬಿಐನ ಸಿಬ್ಬಂದಿ ಅವರ ಮೇಲೆ ಗೌರವ ಹೊಂದಿದ್ದರಿಂದಲೇ, ಹಾಗಾಗಿಯೇ ಅವರ ಆಯ್ಕೆಯನ್ನು ಸಮ್ಮತಿಸಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತುಂಬಾ ಅನ್ಯಾಯ: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಟ್ರಂಪ್‌ ಅಪಸ್ವರ

    ಪ್ರಮಾಣ ಸ್ವೀಕಾರಕ್ಕೂ ಮುನ್ನವೇ ಬಿಗ್‌ ವಾರ್ನಿಂಗ್‌:
    ಎಫ್‌ಬಿಐ ನಿರ್ದೇಶಕರಾಗಿ ನೇಮಕ ಮಾಡಿ ಟ್ರಂಪ್‌ ಆದೇಶದ ಬೆನ್ನಲ್ಲೇ ಕಾಶ್‌ ಪಟೇಲ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಎಚ್ಚರಿಕೆಯೊಂದನ್ನ ನೀಡಿದ್ದರು. ಎಫ್‌ಬಿಐ ಒಂದು ಪರಂಪರೆಯನ್ನು ಹೊಂದಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ನಮ್ಮ ನ್ಯಾಯ ವ್ಯವಸ್ಥೆಯು ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಂಡಿದೆ, ಈ ಬೆಳವಣಿಗೆ ಇಂದೇ ಕೊನೆಗೊಳ್ಳಬೇಕು. ಅಮೆರಿಕನ್ನರು (American people) ಹೆಮ್ಮೆ ಪಡುವಂತೆ ಎಫ್‌ಬಿಐ ಅನ್ನು ಮರುನಿರ್ಮಾಣ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಂಕಲ್ಪ ಮಾಡೋಣ. ಅಲ್ಲದೇ ಇದನ್ನು ನಮ್ಮ ಎಚ್ಚರಿಕೆ ಎಂದೇ ಭಾವಿಸಿ ಅಮೆರಿಕನ್ನರಿಗೆ ಹಾನಿ ಮಾಡಲು ಬಯಸುವವರು ಯಾವುದೇ ಮೂಲೆಯಲ್ಲಿದ್ದರೂ ಹುಡುಕಿ ಬೇಟೆಯಾಡುತ್ತೇವೆ ಎಂದು ಎಚ್ಚರಿಸಿದ್ದರು.

    ಕಾಶ್ ಪಟೇಲ್ ಯಾರು?
    ಕಾಶ್ ಪಟೇಲ್ ತಂದೆ-ತಾಯಿ ಗುಜರಾತ್ ಮೂಲದವರು. ಪಟೇಲ್ ಪೋಷಕರು ಅಮೆರಿಕದಲ್ಲಿ ನೆಲೆಸುವುದಕ್ಕಿಂತ ಮೊದಲು ಉಗಾಂಡದಲ್ಲಿದ್ದರು. ಅಲ್ಲಿಂದ ಕೆನಡಾಗೆ ಬಂದರು. ಈ ವೇಳೆ ಕಾಶ್ ಪಟೇಲ್ ತಂದೆಗೆ ಅಮೆರಿಕ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿ ಕೆಲಸ ಸಿಕ್ಕಿದ್ದರಿಂದ ಅವರು ಕುಟುಂಬ ಸಮೇತರಾಗಿ ಅಮೆರಿಕಾಗೆ ಬಂದು ನೆಲೆಸಿದರು.

    ನ್ಯೂಯಾರ್ಕ್‌ನ ಗಾರ್ಡನ್ ಸಿಟಿಯಲ್ಲಿ 1980ರಲ್ಲಿ ಕಾಶ್ ಪಟೇಲ್ ಜನಿಸಿದರು. ಇಲ್ಲಿಯೇ ಅವರು ಕಾಲೇಜು ಶಿಕ್ಷಣ ಪಡೆದರು. ನಂತರ ರಿಚ್ಚಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ನಲ್ಲಿ ಪದವಿ ಪಡೆದರು. ಸಾರ್ವಜನಿಕ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ನಂತರ ಅವರು ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳಲ್ಲಿ ಕೆಲಸ ಮಾಡಿದರು. ಇದನ್ನೂ ಓದಿ: ಬೋನಿ ದಾಖಲೆ ಮುರಿಯಲು ಸಜ್ಜಾದ ಸ್ನೇಹಿತೆ – 1,000 ಪುರುಷರೊಟ್ಟಿಗೆ ಸೆಕ್ಸ್‌ ಮಾಡಲು ಅನ್ನಿ ನೈಟ್ ತಯಾರಿ

    ಕಾಶ್ ಪಟೇಲ್‌ ಒಬ್ಬ ಪ್ರತಿಭಾವಂತ ವಕೀಲ, ತನಿಖಾಧಿಕಾರಿ ಹಾಗೂ ಅಮೆರಿಕದ ಹೋರಾಟಗಾರ. ಭ್ರಷ್ಟಾಚಾರವನ್ನು ಬಯಲಿಗೆಳೆಯಲು, ನ್ಯಾಯ ರಕ್ಷಿಸಲು ಹಾಗೂ ಅಮೆರಿಕದ ಜನರ ಪರವಾಗಿ ತಮ್ಮ ಜೀವನ ಸವೆಸಿ ಸುದೀರ್ಘ ಹೋರಾಟ ನಡೆಸಿದ್ದಾರೆ. ಪಟೇಲ್‌ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ (ಎನ್‌ಎಸ್‌ಸಿ) ಭಯೋತ್ಪಾದನಾ ನಿಗ್ರಹದ ಹಿರಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಹಲವಾರ ಉಗ್ರಗಾಮಿ ಸಂಘಟನೆಗಳ ಭಯೋತ್ಪಾದಕರ ಹತ್ಯೆ ಸೇರಿದಂತೆ ಅಮೆರಿಕದ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತಂದಿದ್ದಾರೆ.

  • ಭಗವದ್ಗೀತೆಯನ್ನು ಹಿಡಿದುಕೊಂಡು ಪ್ರಮಾಣವಚನ ಸ್ವೀಕರಿಸಿದ ಭಾರತೀಯ ಮೂಲದ UK ಸಂಸದೆ

    ಭಗವದ್ಗೀತೆಯನ್ನು ಹಿಡಿದುಕೊಂಡು ಪ್ರಮಾಣವಚನ ಸ್ವೀಕರಿಸಿದ ಭಾರತೀಯ ಮೂಲದ UK ಸಂಸದೆ

    ಲಂಡನ್‌: ಯುಕೆ ಸಂಸತ್ತಿನಲ್ಲಿ (UK Parliament) ಭಾರತೀಯ ಮೂಲದ ಭಾರತೀಯ ಮೂಲದ ಶಿವಾನಿ ರಾಜಾ (Shivani Raja) ಅವರು ಭಗವದ್ಗೀತೆಯನ್ನು (Bhagavad Gita) ಹಿಡಿದುಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಗುಜರಾತ್‌ ಮೂಲದ 29 ವರ್ಷದ ಶಿವಾನಿ ಅವರು ಉದ್ಯಮಿಯಾಗಿದ್ದು, ಲೀಸೆಸ್ಟರ್ ಪೂರ್ವ ಕ್ಷೇತ್ರದಿಂದ ಕನ್ಸರ್ವೇಟಿವ್ ಪಕ್ಷದಿಂದ ಕಣಕ್ಕೆ ಇಳಿದು ಐತಿಹಾಸಿಕ ಗೆಲುವು ಸಾಧಿಸಿದ್ದರು. 27 ವರ್ಷಗಳಿಂದ ಈ ಕ್ಷೇತ್ರ ಲೇಬರ್‌ ಪಕ್ಷದ ಹಿಡಿತದಲ್ಲಿತ್ತು. ಆದರೆ ಶಿವಾನಿ ಅವರು ಭಾರತೀಯ ಮೂಲದ ರಾಜೇಶ್‌ ಅಗರ್‌ವಾಲ್‌ ಅವರನ್ನು ಸೋಲಿಸಿ ಸಂಸತ್ತಿಗೆ ಆಯ್ಕೆ ಆಗಿದ್ದರು. ಇದನ್ನೂ ಓದಿ: ಮುಂದಿನ 25 ವರ್ಷದಲ್ಲಿ ಕಾವೇರಿ ಕೊಳ್ಳದಲ್ಲಿ ನೀರಿನ ತೀವ್ರ ಕೊರತೆ: ನೀತಿ ಆಯೋಗ

    2022ರ ಭಾರತ ಮತ್ತು ಪಾಕಿಸ್ತಾನ ಮಧ್ಯೆ ನಡೆದ ಟಿ20 ಏಷ್ಯಾ ಕಪ್ ಪಂದ್ಯದ ನಂತರ ಭಾರತೀಯ ಹಿಂದೂ ಸಮುದಾಯ ಮತ್ತು ಮುಸ್ಲಿಮರ ನಡುವೆ ಲೀಸೆಸ್ಟರ್ ಸಿಟಿಯ ದೊಡ್ಡ ಸಂಘರ್ಷವೇ ನಡೆದಿತ್ತು. ಶಿವಾನಿ ರಾಜಾ 14,526 ಮತಗಳನ್ನು ಪಡೆದರೆ ಲಂಡನ್‌ನ ಮಾಜಿ ಉಪಮೇಯರ್ ಅಗರವಾಲ್ ಅವರನ್ನು 10,100 ಮತಗಳನ್ನು ಪಡೆದರು.

    ಯುನೈಟೆಡ್ ಕಿಂಗ್‌ಡಂನಲ್ಲಿ ಜುಲೈ 4 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶಿವಾನಿ ಅವರನ್ನು ಹೊರತುಪಡಿಸಿ 27 ಭಾರತೀಯ ಮೂಲದ ಸದಸ್ಯರು ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಉದ್ದೇಶಪೂರ್ವಕಾಗಿ ಪತ್ನಿಯ ಆಸ್ತಿ ವಿವರ ಮರೆ ಮಾಚಿದ್ದಾರೆ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

     

  • `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ – ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

    `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ – ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

    ಇಸ್ಲಮಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಅತೀ ವೇಗದ ಬೌಲಿಂಗ್ ದಾಖಲೆ ಬರೆದ ಪಾಕ್ ತಂಡದ ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ (Bhagavad Gita) ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

    ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಲೋಕಸಭೆಯಿಂದ ಅಭಿನಂದನೆ

    ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ.

    ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

  • ಆಸ್ಟ್ರೇಲಿಯಾ ಸೆನೆಟರ್‌ ಆಗಿ ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ವರುಣ್‌

    ಆಸ್ಟ್ರೇಲಿಯಾ ಸೆನೆಟರ್‌ ಆಗಿ ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ವರುಣ್‌

    ಕ್ಯಾನ್‌ಬೆರಾ: ಬ್ಯಾರಿಸ್ಟರ್ ವರುಣ್ ಘೋಷ್ ಅವರು ಆಸ್ಟ್ರೇಲಿಯಾ ಸಂಸತ್‌ಗೆ ಭಾರತ ಮೂಲದ ಮೊದಲ ಸೆನೆಟರ್‌ ಆಗಿ ಆಯ್ಕೆಯಾಗಿದ್ದಾರೆ. ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

    ಪಶ್ಚಿಮ ಆಸ್ಟ್ರೇಲಿಯಾದ ವರುಣ್‌ ಘೋಷ್‌ ಅವರನ್ನು ಫೆಡರಲ್‌ ಸಂಸತ್ತಿನ ಸೆನೆಟ್‌ನಲ್ಲಿ ಆಸ್ಟ್ರೇಲಿಯಾ ರಾಜ್ಯವನ್ನು ಪ್ರತಿನಿಧಿಸಲು ವಿಧಾನಸಭೆ ಮತ್ತು ವಿಧಾನ ಪರಿಷತ್‌ ನೇಮಕಗೊಳಿಸಿದ ನಂತರ ನೂತನ ಸೆನೆಟರ್‌ ಆಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಟ್ರಕ್‌ನಿಂದ ಕೆಳಗೆ ಬಿದ್ದ ವ್ಯಕ್ತಿ ವಿಮಾನ ಡಿಕ್ಕಿ ಹೊಡೆದು ಸಾವು

    ವರುಣ್ ಘೋಷ್ ಅವರನ್ನು ಸ್ವಾಗತಿಸಿದ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವಾಂಗ್, ನೀವು ಲೇಬರ್ ಸೆನೆಟ್ ತಂಡದಲ್ಲಿ ಇರುವುದು ಅದ್ಭುತವಾಗಿದೆ ಎಂದು ಅಭಿನಂದಿಸಿದ್ದಾರೆ.

    ಪಶ್ಚಿಮ ಆಸ್ಟ್ರೇಲಿಯಾದ ನಮ್ಮ ನೂತನ ಸೆನೆಟರ್ ವರುಣ್ ಘೋಷ್ ಅವರಿಗೆ ಸುಸ್ವಾಗತ. ಸೆನೆಟರ್ ಘೋಷ್ ಅವರು ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಆಸ್ಟ್ರೇಲಿಯಾದ ಸೆನೆಟರ್ ಆಗಿದ್ದಾರೆ ಎಂದು ಎಕ್ಸ್‌ನಲ್ಲಿ ಪೆನ್ನಿ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಬ್ರಿಟನ್ ಮೂರನೇ ಚಾರ್ಲ್ಸ್‌ಗೆ  ಕ್ಯಾನ್ಸರ್ ದೃಢ – ಶೀಘ್ರವೇ ಗುಣಮುಖರಾಗುವಂತೆ ಹಾರೈಸಿದ ಮೋದಿ

    ವರುಣ್ ಘೋಷ್ ಒಬ್ಬ ವಕೀಲ. ಅವರು ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದರು. ಅವರು ಹಿಂದೆ ನ್ಯೂಯಾರ್ಕ್‌ನಲ್ಲಿ ಹಣಕಾಸು ವಕೀಲರಾಗಿ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಿಶ್ವ ಬ್ಯಾಂಕ್‌ನ ಸಲಹೆಗಾರರಾಗಿ ಕೆಲಸ ಮಾಡಿದ್ದರು.

  • ಒಂದೇ ವೇದಿಕೆಯಲ್ಲಿ 1 ಲಕ್ಷ ಜನರಿಂದ ಭಗವದ್ಗೀತೆ ಶ್ಲೋಕ ಪಠಣ

    ಒಂದೇ ವೇದಿಕೆಯಲ್ಲಿ 1 ಲಕ್ಷ ಜನರಿಂದ ಭಗವದ್ಗೀತೆ ಶ್ಲೋಕ ಪಠಣ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನರು ಸಾಮೂಹಿಕವಾಗಿ ಭಗವದ್ಗೀತೆಯ (Bhagavad Gita) ಪವಿತ್ರ ಶ್ಲೋಕಗಳನ್ನು ಪಠಿಸಿ, ದಾಖಲೆ ಬರೆದಿದ್ದಾರೆ.

    ಸಾಂಪ್ರದಾಯಿಕ ವೇಷಭೂಷಣಗಳಲ್ಲಿ ಪಾಲ್ಗೊಂಡಿದ್ದ ವಿವಿಧ ವಯೋಮಾನದ ಜನರು ಸಾಂಪ್ರದಾಯಿಕ ಸ್ಥಳದಲ್ಲಿ ಸಮಾವೇಶಗೊಂಡು, ಪೂಜ್ಯ ಋಷಿಗಳೊಂದಿಗೆ ಪವಿತ್ರ ಪುಸ್ತಕದ ಶ್ಲೋಕಗಳನ್ನು ಪಠಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇಪಾಳದಿಂದ ಬರ್ತಿದೆ ಚಿನ್ನಾಭರಣ, ವಸ್ತ್ರ, ಸಿಹಿತಿನಿಸು

    ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ‘ಭಗವದ್ಗೀತೆ ಜಗತ್ತಿಗೆ ಭಾರತ ನೀಡಿದ ಬಹುದೊಡ್ಡ ಕೊಡುಗೆ. ಈ ಕಾರ್ಯಕ್ರಮವನ್ನು ಅಪಹಾಸ್ಯ ಮಾಡುವವರಿಗೆ ಹಿಂದೂ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ಗೌರವವಿಲ್ಲ. ಹಿಂದೂಗಳನ್ನು ವಿಭಜಿಸಿದರೆ ಅವರ ಪ್ರಯತ್ನಗಳು ವಿಫಲವಾಗುತ್ತವೆ ಎಂದು ತಿಳಿಸಿದ್ದಾರೆ.

    ಬಂಗಾಳದ ಬಿಜೆಪಿ ಘಟಕ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕತ್ವದ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 1,20,000 ವ್ಯಕ್ತಿಗಳು ನೋಂದಾಯಿಸಿಕೊಂಡಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೂ ಮುನ್ನ ಸಿಂಗಾರಗೊಳ್ಳಲಿದೆ ರಾಮನ ಮೆಟ್ಟಿಲು! – ಏನಿದರ ಮಹತ್ವ? ಈ ಹೆಸರು ಯಾಕೆ ಬಂತು?

    ಕೋಲ್ಕತ್ತಾದಲ್ಲಿ ಭಾನುವಾರ ನಡೆದ ‘ಲೋಕೇ ಕೊಂಥೆ ಗೀತಾ ಪಥ’ ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿವಿಧ ಹಿನ್ನೆಲೆಯ ಜನ ಸೇರಿ ಭಗವದ್ಗೀತೆ ಪಠಣ ಮಾಡಿರುವುದು ಸಾಮಾಜಿಕ ಸೌಹಾರ್ದತೆಯನ್ನು ಹೆಚ್ಚಿಸುವುದಲ್ಲದೆ ಶಕ್ತಿ ತುಂಬಿದೆ ಎಂದು ಬಣ್ಣಿಸಿದ್ದಾರೆ.

  • ಭಗವದ್ಗೀತೆ ಅತ್ಯಂತ ಅಶ್ಲೀಲ, ಅಸಹ್ಯಕರ – ತತ್ವಜ್ಞಾನಿಯಿಂದ ವಿವಾದಿತ ಹೇಳಿಕೆ

    ಭಗವದ್ಗೀತೆ ಅತ್ಯಂತ ಅಶ್ಲೀಲ, ಅಸಹ್ಯಕರ – ತತ್ವಜ್ಞಾನಿಯಿಂದ ವಿವಾದಿತ ಹೇಳಿಕೆ

    ವಾಷಿಂಗ್ಟನ್: ಹೀಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆಯನ್ನು (Bhagavad Gita) ಹಲವು ಮಂದಿ ವಿಮರ್ಷಿಸಿದ್ದಾರೆ. ಇತಿಹಾಸದುದ್ದಕ್ಕೂ ವಿವಿಧ ವ್ಯಾಖ್ಯಾನಗಳು ಮತ್ತು ವಿಶ್ಲೇಷಣೆಗಳಿಗೂ ಇದು ಒಳಪಟ್ಟಿದೆ. ಆದರೆ ಇತ್ತೀಚೆಗೆ ಪ್ರಸಿದ್ಧ ಸ್ಲೋವೇನಿಯನ್ ತತ್ವಜ್ಞಾನಿ (Philosopher) ಸ್ಲಾವೊಜ್ ಜಿಜೆಕ್ (Slavoj Zizek) ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಅದರಲ್ಲಿ ಜಿಜೆಕ್ ಭಗವದ್ಗೀತೆಯನ್ನು ಹರಿದು ಹಾಕಿದ್ದು ಮಾತ್ರವಲ್ಲದೇ ಅದು ಅತ್ಯಂತ ಅಶ್ಲೀಲ ಹಾಗೂ ಅಸಹ್ಯಕರ ಪವಿತ್ರ ಪುಸ್ತಕಗಳಲ್ಲಿ ಒಂದಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೇ ಜರ್ಮನಿಯ ನಾಝಿ ರಾಜಕಾರಣಿ ಹೆನ್ರಿಕ್ ಹಿಮ್ಲರ್ ಯಹೂದಿಗಳ ಮೇಲಿನ ನರಹತ್ಯೆಯನ್ನು ಸಮರ್ಥಿಸಿಕೊಳ್ಳಲು ಭಗವದ್ಗೀತೆಯನ್ನು ಬಳಸಿದ್ದಾಗಿ ತತ್ವಜ್ಞಾನಿ ಹೇಳಿದ್ದಾರೆ.

    ಭಗವದ್ಗೀತೆ 700 ಶ್ಲೋಕಗಳುಳ್ಳ ಹಿಂದೂಗಳ ಪವಿತ್ರ ಗ್ರಂಥ. ಅದರ ತಾತ್ವಿಕ ಆಳ ಮತ್ತು ಆಧ್ಯಾತ್ಮಿಕ ಬೋಧನೆಗಳಿಗೆ ಪೂಜ್ಯವಾಗಿದೆ. ಇದು ಮಹಾಭಾರತದಲ್ಲಿ ಬರುವ ಪಾತ್ರಗಳಾದ ಅರ್ಜುನ ಮತ್ತು ಭಗವಾನ್ ಶ್ರೀಕೃಷ್ಣನ ನಡುವಿನ ಸಂಭಾಷಣೆಯಾಗಿದೆ. ಇದರ ವಿಷಯಗಳು ಕರ್ತವ್ಯ (ಧರ್ಮ), ನೈತಿಕ ಸಂದಿಗ್ಧತೆಗಳು ಮತ್ತು ಆಧ್ಯಾತ್ಮಿಕ ಸಾಕ್ಷಾತ್ಕಾರದ ಹಾದಿಯ ಸುತ್ತ ಸುತ್ತುತ್ತವೆ. ಇದನ್ನೂ ಓದಿ: ಪ್ರಧಾನಿ ಮೋದಿ ಅತ್ಯುತ್ತಮ ನಾಯಕ – ಹಾಡಿ ಹೊಗಳಿದ ಅಮೆರಿಕ ಗಾಯಕಿ

    ಜಿಜೆಕ್ ಅವರ ಈ ಹೇಳಿಕೆ ಕಳೆದ ಕೆಲ ದಿನಗಳ ಹಿಂದೆ ಭಾರೀ ವಿವಾದಕ್ಕೆ ಕಾರಣವಾದ ಒಪ್ಪೆನ್‌ಹೈಮರ್ (Oppenheimer) ಚಿತ್ರದಲ್ಲಿನ ದೃಶ್ಯಕ್ಕೆ ನೀಡಿದ ವಿವರಣೆಯಾಗಿದೆ. ಈ ಚಿತ್ರದಲ್ಲಿ ಪಾತ್ರಧಾರಿಗಳು ಭಗವದ್ಗೀತೆಯನ್ನು ಓದುವ ಸಂದರ್ಭ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದನ್ನು ತೋರಿಸಲಾಗಿದೆ. ಇದನ್ನು ವಿರೋಧಾಭಾಸವೆಂದು ವಿವರಿಸಿದ ಅವರು, ಅಶ್ಲೀಲ, ಅಸಹ್ಯಕರ ಪಠ್ಯದಿಂದ ಆಯ್ದ ಭಾಗಗಳ ಜೊತೆ ಸುಂದರವಾದ ಲೈಂಗಿಕ ಕ್ರಿಯೆಯನ್ನು ಚಿತ್ರಿಸಿದ್ದಾಗಿ ಹೇಳಿದ್ದಾರೆ.

    ಒಪ್ಪೆನ್‌ಹೈಮರ್ ಒಂದು ಉತ್ತಮ ಚಿತ್ರವಾಗಿದೆ. ಆದರೆ ನಾನು ಭಗವದ್ಗೀತೆಯ ಆಧ್ಯಾತ್ಮಿಕ ಭಾಗವನ್ನು ದ್ವೇಷಿಸುತ್ತೇನೆ ಎಂದು ಜಿಜೆಕ್ ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಹೇಳಿದ್ದಾರೆ. ಇದೀಗ ಹಿಜೆಕ್ ಹೇಳಿಕೆ ಭಾರೀ ಟೀಕೆಗೆ ಒಳಗಾಗಿದೆ. ಇದನ್ನೂ ಓದಿ: ರಣದೀಪ್ ಸುರ್ಜೇವಾಲಗೆ ಸುಪ್ರೀಂಕೋರ್ಟ್ ರಿಲೀಫ್

  • Oppenheimer: ಸೆಕ್ಸ್ ಮಾಡುವ ವೇಳೆ ಭಗವದ್ಗೀತೆ ಓದುವ ದೃಶ್ಯ ನನಗಿಷ್ಟವಾಯಿತು : ನಟಿ ಕಂಗನಾ

    Oppenheimer: ಸೆಕ್ಸ್ ಮಾಡುವ ವೇಳೆ ಭಗವದ್ಗೀತೆ ಓದುವ ದೃಶ್ಯ ನನಗಿಷ್ಟವಾಯಿತು : ನಟಿ ಕಂಗನಾ

    ಹಾಲಿವುಡ್‌ನ ‘ಆಪನ್‌ಹೈಮರ್’ (Oppenheimer) ಸಿನಿಮಾದ ಒಂದು ದೃಶ್ಯಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚಿತ್ರದಲ್ಲಿ ಸೆಕ್ಸ್ ಮಾಡುವಾಗ ಕಥಾನಾಯಕ ಭಗವದ್ಗೀತೆಯ (Bhagavad Gita) ಸಾಲುಗಳನ್ನು ಓದುವ ದೃಶ್ಯ ಈ ಸಿನಿಮಾದಲ್ಲಿದೆ. ಈ ದೃಶ್ಯ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಕುರಿತು ನಟಿ ಕಂಗನಾ ರಣಾವತ್ (Kangana Ranaut) ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಈ ದೃಶ್ಯ ನನಗೆ ಸಖತ್ ಇಷ್ಟವಾಯಿತು ಎಂದು ಹೇಳಿದ್ದಾರೆ.

    ಆಪನ್ ಹೈಮರ್ ಒಂದೊಳ್ಳೆ ಸಿನಿಮಾ. ಎಲ್ಲರೂ ನೋಡಬೇಕು. ಯಾವ ದೃಶ್ಯವನ್ನು ವಿವಾದ ಎಂದು ಪರಿಗಣಿಸಲಾಗಿತ್ತೋ, ಅದು ನನ್ನಿಷ್ಟದ ದೃಶ್ಯ ಎಂದು ಕಂಗನಾ ರಣಾವತ್ ಬರೆದುಕೊಂಡಿದ್ದಾರೆ. ಅಲ್ಲದೇ, ಈ ಸಿನಿಮಾ ತಮಗೆ ಯಾವ ಕಾರಣಕ್ಕಾಗಿ ಇಷ್ಟವಾಯಿತು ಎನ್ನುವುದನ್ನೂ ಅವರು ವಿವರಿಸಿದ್ದಾರೆ. ಇದನ್ನೂ ಓದಿ:ಎಲ್ಲವೂ ಗಾಸಿಪ್ : ಐಶ್ವರ್ಯ 2ನೇ ಮದುವೆ, ಅಪ್ಪನೊಂದಿಗೆ ಮುನಿಸು

    ಈ ಸೆಕ್ಸ್ ದೃಶ್ಯದ  ಬಗ್ಗೆ ಈ ಹಿಂದೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಪ್ರತಿಕ್ರಿಯೆ ನೀಡಿದ್ದರು. ರಿಲೀಸ್ ಆಗುವ ಮುನ್ನವೇ ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್‌ಹೈಮರ್’ (Oppenheimer) ಸಿನಿಮಾ, 2 ಸಾವಿರ ರೂಪಾಯಿಗೆ ಟಿಕೆಟ್ ಸೇಲ್ ಆಗಿತ್ತು. ರಿಲೀಸ್ ಬಳಿಕ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಈ ಬೆನ್ನಲ್ಲೇ ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಅವಮಾನವಾಗಿದೆ ಎಂದು ಚಿತ್ರತಂಡದ ವಿರುದ್ಧ ಭಾರತೀಯರು ಗರಂ ಆಗಿದ್ದಾರೆ. ಹೀರೋ ಸೆಕ್ಸ್ ಮಾಡುವಾಗ ಭಗವದ್ಗೀತೆ ಹೇಳುವ ಸಂಭಾಷಣೆ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್ ಮಹುರ್ಕರ್ ಅವರು ಗರಂ ಆಗಿದ್ದರು. ಈ ಸಿನಿಮಾದ ಬಗ್ಗೆ ಆರ್‌ಜಿವಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದರು.

    ಆಪನ್‌ಹೈಮರ್ (Oppenheimer) ಸಿನಿಮಾದಲ್ಲಿ ಭಗವದ್ಗೀತೆಗೆ ಅವಮಾನ ಆಗಿದೆ ಎಂದು ಕೆಲವರು ಹೇಳಿರುವುದಕ್ಕೆ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದರು. ಅಮೆರಿಕದ ನ್ಯೂಕ್ಲಿಯರ್ ವಿಜ್ಞಾನಿ ಆಪನ್‌ಹೈಮರ್ ಅವರು ಭಗವದ್ಗೀತೆ ಓದಿದ್ದರು. ವಿಪರ್ಯಾಸ ಏನೆಂದರೆ, ಭಾರತದ ಶೇಕಡ 0.0000001ರಷ್ಟು ಮಂದಿ ಕೂಡ ಭಗವದ್ಗೀತೆ ಓದಿದ್ದಾರೆ ಎಂಬ ಬಗ್ಗೆ ನನಗೆ ಅನುಮಾನ ಇದೆ ಎಂದು ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದರು. ಆರ್‌ಜಿವಿ ಮಾತಿಗೆ ಇದೀಗ ಪರ-ವಿರೋಧದ ಟೀಕೆಗಳು ಎದುರಾಗಿದ್ದವು.

    ಅಣುಬಾಂಬ್ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್ ಆಪನ್‌ಹೈಮರ್ ಅವರ ಜೀವನದ ಕಥೆ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗಿದೆ. ಆಪನ್‌ಹೈಮರ್ ಪಾತ್ರವನ್ನು ಕಿಲಿಯನ್ ಮರ್ಫಿ ಮಾಡಿದ್ದಾರೆ. ರಿಯಲ್ ಲೈಫ್‌ನಲ್ಲಿ ಆಪನ್‌ಹೈಮರ್ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ.

     

    ಆಪನ್‌ಹೈಮರ್ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅವರ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ಇದು ಏನು ಅಂತ ಆಕೆ ಪ್ರಶ್ನಿಸುತ್ತಾಳೆ. ಇದು ಭಗವದ್ಗೀತೆ ಎಂದು ಆಪನ್‌ಹೈಮರ್ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್ ಮಂಡಳಿಯವರು ಹೇಗೆ ಅನುಮತಿ ನೀಡಿದರು. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸೇವ್ ಕಲ್ಚರ್ ಸೇವ್ ಇಂಡಿಯಾ ಪ್ರತಿಷ್ಠಾನದ ಕಡೆಯಿಂದ ಉದಯ್ ಮಹುರ್ಕರ್ ನಿರ್ದೇಶಕ ಕ್ರಿಸ್ಟೋಫರ್‌ಗೆ ಪತ್ರ ಬರೆದಿದ್ದರು. ಸಿನಿಮಾದಿಂದ ಆ ದೃಶ್ಯ ತೆಗೆಯುವಂತೆ ಕೋರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಆಪನ್‌ಹೈಮರ್’ ಚಿತ್ರದಲ್ಲಿ ಸೆಕ್ಸ್ ಮಾಡುವಾಗ ಭಗವದ್ಗೀತೆ ಓದು: ಸೆನ್ಸಾರ್ ಮಂಡಳಿ ಪ್ರಶ್ನೆ ಮಾಡಿದ ಸಚಿವ ಠಾಕೂರ್

    ‘ಆಪನ್‌ಹೈಮರ್’ ಚಿತ್ರದಲ್ಲಿ ಸೆಕ್ಸ್ ಮಾಡುವಾಗ ಭಗವದ್ಗೀತೆ ಓದು: ಸೆನ್ಸಾರ್ ಮಂಡಳಿ ಪ್ರಶ್ನೆ ಮಾಡಿದ ಸಚಿವ ಠಾಕೂರ್

    ಹಾಲಿವುಡ್ ನ ಆಪನ್ ಹೈಮರ್ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ಸೆಕ್ಸ್ (Sex) ಮಾಡುವಾಗ ಕಥಾನಾಯಕ ಭಗವದ್ಗೀತೆಯ ಸಾಲುಗಳನ್ನು ಓದುವ ದೃಶ್ಯವಿದೆ. ಈ ದೃಶ್ಯವು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ಕುರಿತಂತೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಕೂಡ ಪ್ರತಿಕ್ರಿಯೆ ನೀಡಿದ್ದು, ‘ಈ ದೃಶ್ಯವನ್ನು ಸಿನಿಮಾದಲ್ಲಿ ಹೇಗೆ ಬಿಡಲಾಯಿತು ಎಂದು ಸೆನ್ಸಾರ್ ಮಂಡಳಿಯ ಅಧಿಕಾರಿಯನ್ನು ಕೇಳಲಾಗುವುದು. ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

    ಹಾಲಿವುಡ್‌ನ ‘ಆಪನ್‌ಹೈಮರ್’ (Oppenheimer) ಸಿನಿಮಾದ ರಿಲೀಸ್‌ಗೂ ಮುನ್ನವೇ ಭರ್ಜರಿ ಡಿಮ್ಯಾಂಡ್ ಶುರುವಾಗಿತ್ತು. ಜುಲೈ 21ರಂದು ರಿಲೀಸ್ ಆಗಿರೋ ಹಾಲಿವುಡ್‌ನ ಈ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೌಸ್‌ಫುಲ್ ಪ್ರದರ್ಶನ ಕೂಡ ಕಾಣುತ್ತಿದೆ. ಆದರೆ ಈ ಸಿನಿಮಾದಲ್ಲಿನ ಆ ಒಂದು ದೃಶ್ಯಕ್ಕೆ ಭಾರೀ ವಿರೋಧ  ವ್ಯಕ್ತವಾಗಿದೆ.

    ರಿಲೀಸ್ ಆಗುವ ಮುನ್ನವೇ ಕ್ರಿಸ್ಟೋಫರ್ ನೋಲನ್ ನಿರ್ದೇಶನದ ‘ಆಪನ್‌ಹೈಮರ್’ ಸಿನಿಮಾ, 2 ಸಾವಿರ ರೂಪಾಯಿಗೆ ಟಿಕೆಟ್ ಸೇಲ್ ಆಗಿತ್ತು. ರಿಲೀಸ್ ಬಳಿಕ ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಈ ಬೆನ್ನಲ್ಲೇ ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಅವಮಾನವಾಗಿದೆ ಎಂದು ಚಿತ್ರತಂಡದ ವಿರುದ್ಧ ಭಾರತೀಯರು ಗರಂ ಆಗಿದ್ದಾರೆ. ಹೀರೋ ಸೆಕ್ಸ್ ಮಾಡುವಾಗ ಭಗವದ್ಗೀತೆ ಹೇಳುವ ಸಂಭಾಷಣೆ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್ ಮಹುರ್ಕರ್ ತಕರಾರು ತೆಗೆದಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ‘ಆಪನ್‌ಹೈಮರ್’ ಚಿತ್ರತಂಡಕ್ಕೆ ಪ್ರಶ್ನೆ ಮಾಡಿದ್ದಾರೆ. ಈ ದೃಶ್ಯಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಇದನ್ನೂ ಓದಿ:ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ‌’ಬುದ್ಧಿವಂತ 2′ ಬಿಗ್ ಅಪ್‌ಡೇಟ್

    ಅಣುಬಾಂಬ್ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್ ಆಪನ್‌ಹೈಮರ್ ಅವರ ಜೀವನದ ಕಥೆ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗಿದೆ. ಆಪನ್‌ಹೈಮರ್ ಪಾತ್ರವನ್ನು ಕಿಲಿಯನ್ ಮರ್ಫಿ ಮಾಡಿದ್ದಾರೆ. ರಿಯಲ್ ಲೈಫ್‌ನಲ್ಲಿ ಆಪನ್‌ಹೈಮರ್ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ (Bhagavad Gita) ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ.

     

    ಆಪನ್‌ಹೈಮರ್ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅವರ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ಇದು ಏನು ಅಂತ ಆಕೆ ಪ್ರಶ್ನಿಸುತ್ತಾಳೆ. ಇದು ಭಗವದ್ಗೀತೆ ಎಂದು ಆಪನ್‌ಹೈಮರ್ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್ ಮಂಡಳಿಯವರು ಹೇಗೆ ಅನುಮತಿ ನೀಡಿದರು. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ‘ಸೇವ್ ಕಲ್ಚರ್ ಸೇವ್ ಇಂಡಿಯಾ ಪ್ರತಿಷ್ಠಾನ’ದ ಕಡೆಯಿಂದ ಉದಯ್ ಮಹುರ್ಕರ್ ನಿರ್ದೇಶಕ ಕ್ರಿಸ್ಟೋಫರ್‌ಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ.  ಸಿನಿಮಾದಿಂದ ಆ ದೃಶ್ಯ ತೆಗೆಯುವಂತೆ ಹೇಳಿದ್ದಾರೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನೂ ರೆಸ್ಪಾನ್ಸ್ ಬಂದಿಲ್ಲ. ಮುಂದೆ ಏನೆಲ್ಲಾ ಬೆಳವಣಿಗೆ ಆಗಬಹುದು ಕಾಯಬೇಕಿದೆ.
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]