Tag: bhagirath

  • ಕುತೂಹಲ ಮೂಡಿಸುವ ‘ಭಗೀರಥ’ನ ಟೀಸರ್ ರಿಲೀಸ್

    ಕುತೂಹಲ ಮೂಡಿಸುವ ‘ಭಗೀರಥ’ನ ಟೀಸರ್ ರಿಲೀಸ್

    ರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು ‘ಭಗೀರಥ. ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು  ಭಗೀರಥ (Bhagirath) ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು  ವಿಭಿನ್ನ ಕಥೆಯನ್ನಿಟ್ಟಿಕೊಂಡು ಭಗೀರಥ ಸಿನಿಮಾ ಬರುತ್ತಿದೆ. ಮಾನ್ಸೂನ್ ವೇಳೆನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

    ಕಳೆದ ಸೆಪ್ಟೆಂಬರ್ ನಲ್ಲಿ ನಮ್ಮ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಈಗ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರಲು ಅಣಿಯಾಗಿದೆ. ಮಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ‌. ಚಿತ್ರತಂಡದ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. “ಬಾಯ್ ಫ್ರೆಂಡ್” ಚಿತ್ರದಿಂದ ನಾನು ನಿರ್ದೇಶಕನಾದೆ. ಭಗೀರಥ ನನ್ನ ನಿರ್ದೇಶನದ ಐದನೇ ಚಿತ್ರ. ಇದೊಂದು ಪ್ರಸ್ತುತ ರಾಜಕಾರಣದ ಕಥಾಹಂದರ ಹೊಂದಿರುವ ಹಾಗೂ ಪತ್ರಕರ್ತರೊಬ್ಬರ ಸುತ್ತ ನಡೆಯುವ ಕಥೆ.  ಇಂದು ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಎನ್ ಎಂ ಸುರೇಶ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ರಾಮ್ ಜನಾರ್ದನ್‌.

    ಜರ್ನಿಲಿಸಂ ಮಾಡಿ ಪತ್ರಕರ್ತನಾಗಿದ್ದ ನಾನು, ಜಮಾನ ಚಿತ್ರದ ಮೂಲಕ ನಟನಾದೆ ಎಂದು ಮಾತನಾಡಿದ ನಾಯಕ ಜಯಪ್ರಕಾಶ್ ಅವರು, ಭಗೀರಥ ನನ್ನ ಮೂರನೇಯ ಚಿತ್ರ. ಸೂರ್ಯಪ್ರಕಾಶ್ ನನ್ನ ಪಾತ್ರದ ಹೆಸರು. ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಭಗೀರಥ ಹೆಸರಿಗೆ ತಕ್ಕಂತೆ ನೀರಿಗೆ ಸಂಬಂಧಿಸಿದ ಕಥೆಯೂ ಈ ಚಿತ್ರದಲ್ಲಿದೆ ಎಂದರು.

    ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ಸದ್ಯದಲ್ಲೇ ಚಿತ್ರ ಬಿಡುಗಡೆ ಮಾಡುತ್ತೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕರಾದ ಕೆ.ರಮೇಶ್ ಹಾಗೂ ಬಿ.ಭೈರಪ್ಪ. ನಾನು ನಾಯಕನ ಸೋದರತ್ತೆಯ ಮಗಳ ಪಾತ್ರದಲ್ಲಿ ನಟಿಸಿದ್ದೇನೆ ಎಂದು ನಟಿ ಶ್ರೀಯಾ ಪಾವನಿ ತಿಳಿಸಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ ಹಾಗೂ ಛಾಯಾಗ್ರಹಣದ ಕುರಿತು ಸೂರಿ ಚಿತ್ತೂರು ಮಾಹಿತಿ ನೀಡಿದರು. ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ, ಸುರಭಿ ರವಿ, ಶ್ರೀಯಾ ಪಾವನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಮೊದಲ ಹಂತದ ಶೂಟಿಂಗ್ ಮುಗಿಸಿದ ಭಗೀರಥ

    ಮೊದಲ ಹಂತದ ಶೂಟಿಂಗ್ ಮುಗಿಸಿದ ಭಗೀರಥ

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ‘ಭಗೀರಥ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.   ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣವಾಗಿದೆ. ಸದ್ಯ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ “ಭಗೀರಥ” ಚಿತ್ರಕ್ಕಿದೆ.

    ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ,  ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಗೀರಥನಿಗೆ ಬಿರುಸಿನ ಚಿತ್ರೀಕರಣ: ಮೈಸೂರು ಸುಂದರ ತಾಣ ಸೆರೆ ಹಿಡಿದ ಟೀಮ್

    ಭಗೀರಥನಿಗೆ ಬಿರುಸಿನ ಚಿತ್ರೀಕರಣ: ಮೈಸೂರು ಸುಂದರ ತಾಣ ಸೆರೆ ಹಿಡಿದ ಟೀಮ್

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಭಗೀರಥ (Bhagirath) ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್ (Jayaprakash), ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.

    ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ ,  ಮೋಹನ್ ರಾಸು ಸಹ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಭಗೀರಥ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಭಗೀರಥ’ ಚಿತ್ರಕ್ಕೆ ಚಾಲನೆ: ಮಠಾಧಿಪತಿ ಪಾತ್ರದಲ್ಲಿ ನಿರ್ದೇಶಕ ಸಾಯಿ ಪ್ರಕಾಶ್

    ‘ಭಗೀರಥ’ ಚಿತ್ರಕ್ಕೆ ಚಾಲನೆ: ಮಠಾಧಿಪತಿ ಪಾತ್ರದಲ್ಲಿ ನಿರ್ದೇಶಕ ಸಾಯಿ ಪ್ರಕಾಶ್

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ‘ಭಗೀರಥ’ (Bhagirath) ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ‌ಮೊದಲ ಸನ್ನಿವೇಶಕ್ಕೆ ಹೆಸರಾಂತ ನಿರ್ದೇಶಕ ಸಾಯಿಪ್ರಕಾಶ್ (Sai Prakash) ಆರಂಭ ಫಲಕ ತೋರಿದರು. ರಾಜೇಶ್ ರಾಜಘಟ್ಟ ಕ್ಯಾಮೆರಾ ಚಾಲನೆ ಮಾಡಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ‘ನಾನು 2005 ರಲ್ಲಿ ಬಾಯ್ ಫ್ರೆಂಡ್ ಮೂಲಕ ನನ್ನ ಚಿತ್ರರಂಗದ ಜರ್ನಿ ಆರಂಭವಾಯಿತು. ನಂತರ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ ಹಾಗೂ ನಿರ್ದೇಶಿಸಿದ್ದೇನೆ. ಈಗ ಭಗೀರಥ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಯಾವುದಾದರೂ ಒಂದು ಕೆಲಸವನ್ನು ಬಿಡದೇ ಸಾಧಿಸುವುದನ್ನು ಭಗೀರಥ ಪ್ರಯತ್ನ ಎನ್ನುತ್ತಾರೆ. ಈ ಪದಕ್ಕೂ ನಮ್ಮ ಚಿತ್ರಕ್ಕೂ ಸಂಬಂಧವಿದೆ‌. ಇಂದು ಮುಹೂರ್ತ ಸಮಾರಂಭ ನೆರವೇರಿದೆ. ಹತ್ತನೇ ತಾರೀಖಿನಿಂದ ಮೈಸೂರಿನಲ್ಲಿ ಚಿತ್ರೀಕರಣ ಒಂದೇ ಹಂತದಲ್ಲಿ ನಡೆಯಲಿದೆ.  ಜಯಪ್ರಕಾಶ್(Jaya Prakash) , ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿ ಕಾಳೆ, ಬಾಲ ರಾಜವಾಡಿ, ಸುರಭಿ ರವಿ, ನಯನ, ನಿಖಿತ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಅವರು ಮಠಾಧಿಪತಿಗಳ ಪಾತ್ರ ನಿರ್ವಹಿಸುತ್ತಿದ್ದಾರೆ. ಕಥೆ ಮೆಚ್ಚಿ, ರಮೇಶ್ ಹಾಗೂ ಭೈರಪ್ಪ ಮೈಸೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಜನಾರ್ದನ್ (Ram Janardhan) ತಿಳಿಸಿದರು‌.

    ಜಮಾನ ಚಿತ್ರದಲ್ಲಿ ನಟಿಸಿದ್ದೆ ಎಂದು ಮಾತು ಆರಂಭಿಸಿದ ಜಯಪ್ರಕಾಶ್, ಈಗ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದೇನೆ. ನಿರ್ದೇಶಕರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು. ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿರುವುದಾಗಿ ನಾಯಕಿ ಚಂದನ ರಾಘವೇಂದ್ರ ತಿಳಿಸಿದರು‌. ನಾನು ನಿರ್ದೇಶನ ಮಾಡಿರುವುದು ಹೆಚ್ಚು. ಅಭಿನಯಿಸಿರುವುದು ಕಡಿಮೆ. ನಿರ್ದೇಶಕರು ಮಠಾಧಿಪತಿ ಪಾತ್ರವನ್ನು ನೀವೇ ಮಾಡಬೇಕೆಂದರು ಮಾಡುತ್ತಿದ್ದೇನೆ ಎಂದು ಸಾಯಿಪ್ರಕಾಶ್ ಹೇಳಿದರು.

    ನಿರ್ಮಾಪಕರಾದ ರಮೇಶ್ ಹಾಗೂ ಭೈರಪ್ಪ ಮೈಸೂರು ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು.‌ ಚಿತ್ರದಲ್ಲಿ ನಟಿಸುತ್ತಿರುವ ನಯನ ಹಾಗೂ ಚೇತನ್ ತಮ್ಮ ಪಾತ್ರದ ಕುರಿತು ಮಾತನಾಡಿದರು. ನಾನು ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಜನಾರ್ದನ್ ಅವರ ಜೊತೆ ಇದು ಮೊದಲ ಚಿತ್ರ. ಮಾಧ್ಯಮ ಹಾಗೂ ಉದ್ಯಮದ ನಡುವೆ ಭಗೀರಥ ಚಿತ್ರದ ಕಥೆ ಸಾಗುತ್ತದೆ ಎನ್ನುತ್ತಾರೆ  ಸಂಭಾಷಣೆಕಾರ ಜೆ.ಎಂ.ಪ್ರಹ್ಲಾದ್.

    ಪ್ರದೀಪ್ ವರ್ಮ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಭಗೀರಥ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ

    ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ

    ದಾವಣಗೆರೆ: ಉಕ್ರೇನ್ ಯುದ್ಧಭೂಮಿಯಿಂದ 572 ಕನ್ನಡಿಗರನ್ನು ಕರೆತರುವ ಮೂಲಕ ವಿಶ್ವದಾದ್ಯಂತ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸು ಎಷ್ಟಿದೆ ಎಂಬುದು ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧಭೂಮಿಯಲ್ಲಿ ಸೈನಿಕರನ್ನು ಕರೆತರುವುದೇ ಕಷ್ಟಸಾಧ್ಯ. ಅಂತಹದ್ದರಲ್ಲಿ ಸಂಬಂಧವಿಲ್ಲದ ದೇಶದಿಂದ 572 ಕನ್ನಡಿಗರನ್ನು ಹೊರತಂದಿರುವುದು ಸಾಮಾನ್ಯ ಕೆಲಸವಲ್ಲ. ಜೊತೆಗೆ ಇದು ಮೋದಿ ಅವರ ವರ್ಷಸ್ಸು ಹಾಗೂ ಅಂತಾರಾಷ್ಟ್ರೀಯ ಸಂಬಂಧವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.

    ಅಮೇರಿಕಾ ಕೂಡಾ ತನ್ನ ನಾಗರಿಕರನ್ನು ಕೈ ಬಿಟ್ಟಿದೆ. ಆದರೆ, ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ 572 ಕನ್ನಡಿಗರನ್ನು ವಾಪಾಸ್ ತರಲಾಗಿದೆ. ದುರ್ದೈವ ನವೀನ್ ಒಬ್ಬರು ಮೃತಪಟ್ಟಿದ್ದಾರೆ. ಇದು ಮೋದಿಯವರ ಭಗೀರಥ ಪ್ರಯತ್ನ. ಉಕ್ರೇನ್‍ನಿಂದ ಕರೆತರುವಾಗ ಭಾರತೀಯರಿಗೇ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇಂಡಿಯನ್ ಫ್ಲ್ಯಾಗ್ ಹಿಡಿದರೆ ಸಾಕು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದರು. ನಾವು ವಿದೇಶಾಂಗ ಸಚಿವರೊಂದಿಗೆ, ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೆವು ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ

    ನವೀನ್ ಮೃತಪಟ್ಟಾಗ ಘಟನೆ ನಡೆದಿದ್ದೇ ಒಂದು ಕಡೆ, ನವೀನ್ ಮೃತದೇಹ ಸಂರಕ್ಷಿಸಿ ಇಟ್ಟಿದ್ದೇ ಮತ್ತೊಂದು ಕಡೆ. ಇನ್ನೂ ಶೆಲ್ಲಿಂಗ್ ದಾಳಿ ನಡೆಯುತ್ತಿದ್ದರೂ ಈ ನಡುವೆ ನವೀನ್ ಪಾರ್ಥೀವ ಶರೀರವನ್ನು ತರಲಾಗಿದೆ. ಈಗ ನವೀನ್ ಬಾಡಿ ಹುಟ್ಟೂರು ತಲುಪಿದೆ ಎಂದ ಸಿಎಂ ನವೀನ್ ಸಾವು ನೆನೆದು ಭಾವುಕರಾದರು. ಇದನ್ನೂ ಓದಿ: ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ