Tag: bhairathi rangal film

  • ಆ.10ರಂದು ರಿಲೀಸ್ ಆಗಲಿದೆ ‘ಭೈರತಿ ರಣಗಲ್’ ಚಿತ್ರದ ಮೊದಲ ಹಾಡು

    ಆ.10ರಂದು ರಿಲೀಸ್ ಆಗಲಿದೆ ‘ಭೈರತಿ ರಣಗಲ್’ ಚಿತ್ರದ ಮೊದಲ ಹಾಡು

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ ‘ಭೈರತಿ ರಣಗಲ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಇಂಟರೆಸ್ಟಿಂಗ್ ಮಾಹಿತಿ ಸಿಕ್ಕಿದೆ. ಇದೇ ಆಗಸ್ಟ್ 10ರಂದು ಶಿವಣ್ಣ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಮುಹೂರ್ತ ಫಿಕ್ಸ್‌ ಆಗಿದೆ. ಇದನ್ನೂ ಓದಿ:Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ

    ‘ಮಫ್ತಿ’ ಸಿನಿಮಾದ ಸೀಕ್ವೆಲ್ ಆಗಿರುವ ‘ಭೈರತಿ ರಣಗಲ್’ (Bhairathi Rangal) ಸಿನಿಮಾದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ಲಾಯರ್ ಆಗಿ ಶಿವಣ್ಣ ಖದರ್‌ ತೋರಿಸಲು ರೆಡಿಯಾಗಿದ್ದಾರೆ. ಇದೀಗ ‘ಬಡವರ ಬದುಕನು ಕಾಯಲು ನಿಂತ ಸಿಂಹ ಕೇಸರಿ ಬಾ’ ಎಂಬ ಟೈಟಲ್ ಸಾಂಗ್ ಆ.10ರಂದು ಸಂಜೆ 5 ಗಂಟೆಗೆ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

    ಇತ್ತೀಚೆಗೆ ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಶಿವಣ್ಣ ಮಾಸ್ ಆಗಿ ಕಾಣಿಸಿಕೊಂಡಿದ್ದರು. ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲಾ ತುಂಬಾ ಜನ ತಲೆಗಳನ್ನು ಕಳೆದುಕೊಂಡಿದ್ದಾರೆ ಎಂದು ಖಡಕ್ ಆಗಿ ಶಿವಣ್ಣ ಡೈಲಾಗ್ ಹೇಳಿದ್ದರು. ಈಗ ಚಿತ್ರದ ಮೊದಲ ಹಾಡನ್ನು ರಿಲೀಸ್ ಮಾಡಲು ತೆರೆಮರೆಯಲ್ಲಿ ಕೆಲಸ ನಡೆಯುತ್ತಿದೆ.

    ಇನ್ನೂ ಶಿವರಾಜ್‌ಕುಮಾರ್‌ಗೆ ಜೋಡಿಯಾಗಿ ರುಕ್ಮಿಣಿ ವಸಂತ್ (Rukmini Vasanth) ನಟಿಸಿದ್ದಾರೆ. ಇವರ ಜೊತೆ ಬಹುಭಾಷಾ ನಟಿ ಛಾಯಾ ಸಿಂಗ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಸೆಪ್ಟೆಂಬರ್‌ನಲ್ಲಿ ಸಿನಿಮಾ ರಿಲೀಸ್ ಮಾಡಲು ತಯಾರಿ ನಡೆಯುತ್ತಿದೆ. ‘ವೇದ’ ಸಕ್ಸಸ್‌ ನಂತರ ಈ ಚಿತ್ರವನ್ನು ಗೀತಾ ಶಿವರಾಜ್‌ಕುಮಾರ್‌ ನಿರ್ಮಾಣ ಮಾಡುತ್ತಿದ್ದಾರೆ.

  • ಖಡಕ್ ಡೈಲಾಗ್ ಹೊಡೆದ ಶಿವಣ್ಣ- ‘ಭೈರತಿ ರಣಗಲ್’ ಚಿತ್ರದ ಟೀಸರ್ ಔಟ್

    ಖಡಕ್ ಡೈಲಾಗ್ ಹೊಡೆದ ಶಿವಣ್ಣ- ‘ಭೈರತಿ ರಣಗಲ್’ ಚಿತ್ರದ ಟೀಸರ್ ಔಟ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ (Shivarajkumar) ಇಂದು (ಜು.12) ಹುಟ್ಟುಹಬ್ಬ ಸಂಭ್ರಮ. ಈ ದಿನ ‘ಭೈರತಿ ರಣಗಲ್’ (Bhairathi Rangal) ಸಿನಿಮಾ ಟೀಸರ್ ರಿಲೀಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗಿಫ್ಟ್ ಕೊಟ್ಟಿದೆ ಚಿತ್ರತಂಡ. ಸಖತ್ ರಗಡ್ ಆಗಿ ಶಿವಣ್ಣ ಎಂಟ್ರಿ ಕೊಟ್ಟಿದ್ದಾರೆ. ರಿಲೀಸ್ ಆದ ಕೆಲವೇ ಗಂಟೆಯಲ್ಲಿ ಟೀಸರ್ ಟ್ರೆಂಡಿಂಗ್‌ನಲ್ಲಿದೆ.

    ನರ್ತನ್ ನಿರ್ದೇಶನದ ‘ಭೈರತಿ ರಣಗಲ್’ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಶಿವಣ್ಣ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ನಾನು ತಾಳ್ಮೆ ಕಳೆದುಕೊಂಡಾಗಲೆಲ್ಲಾ ತುಂಬಾ ಜನ ತಲೆಗಳನ್ನು ಕಳೆದುಕೊಂಡಿದ್ದಾರೆ ಎಂದು ಖಡಕ್ ಆಗಿ ಶಿವಣ್ಣ ಡೈಲಾಗ್ ಹೊಡೆದಿದ್ದಾರೆ. ಶಿವಣ್ಣ ಕಣ್ಣೋಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

     

    View this post on Instagram

     

    A post shared by DrShivaRajkumar (@nimmashivarajkumar)

    ಅಂದಹಾಗೆ, ಈ ಸಿನಿಮಾವನ್ನು ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶಿವಣ್ಣಗೆ ರುಕ್ಮಿಣಿ ವಸಂತ್ (Rukmini Vasanth) ಜೋಡಿಯಾಗಿದ್ದಾರೆ. ಈ ಚಿತ್ರ ಸೆಪ್ಟೆಂಬರ್‌ನಲ್ಲಿ ರಿಲೀಸ್ ಆಗಲಿದೆ.

    ಇನ್ನೂ ಶಿವಣ್ಣ ಹುಟ್ಟುಹಬ್ಬದಂದು ‘ಭೈರತಿ ರಣಗಲ್’ ಚಿತ್ರದ ಅಪ್‌ಡೇಟ್ ಜೊತೆ ‘ಘೋಸ್ಟ್ 2′, ’45’ ಸಿನಿಮಾದ ಪೋಸ್ಟರ್ ರಿಲೀಸ್‌ ಆಗಿಸದೆ. ಶ್ರೀನಿ ಜೊತೆ ‘ದಳವಾಯಿ’ ಸಿನಿಮಾ ಮಾಡೋದಾಗಿ ಅಧಿಕೃತವಾಗಿ ಅನೌನ್ಸ್‌ಮೆಂಟ್‌ ಹೊರಬಿದ್ದಿದೆ.

  • ‘ಭೈರತಿ ರಣಗಲ್’ ಚಿತ್ರತಂಡ ಕಡೆಯಿಂದ ಶಿವಣ್ಣ ಫ್ಯಾನ್ಸ್‌ಗೆ ಸರ್ಪ್ರೈಸ್

    ‘ಭೈರತಿ ರಣಗಲ್’ ಚಿತ್ರತಂಡ ಕಡೆಯಿಂದ ಶಿವಣ್ಣ ಫ್ಯಾನ್ಸ್‌ಗೆ ಸರ್ಪ್ರೈಸ್

    ರ್ತನ್ ನಿರ್ದೇಶನದ ‘ಭೈರತಿ ರಣಗಲ್’ (Bhairathi Rangal) ಸಿನಿಮಾದ ಬಗ್ಗೆ ಇದೀಗ ಬಿಗ್‌ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ಶಿವಣ್ಣ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಜು.12ರಂದು ಶಿವರಾಜ್‌ಕುಮಾರ್‌ ಅವರ (Shivarajkumar) ಹುಟ್ಟುಹಬ್ಬವಾಗಿದ್ದು, ಅಂದೇ ‘ಭೈರತಿ ರಣಗಲ್’ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ.

    ಗೀತಾ ಪಿಕ್ಚರ್ಸ್ ಅಡಿಯಲ್ಲಿ ‘ಭೈರತಿ ರಣಗಲ್’ ಸಿನಿಮಾವನ್ನು ಗೀತಾ ಶಿವರಾಜ್‌ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.’ವೇದ’ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದಾಗಿದೆ.

    ಅಂದಹಾಗೆ, ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ. ಕಥೆ ಮತ್ತು ಪಾತ್ರ ಎರಡು ವಿಭಿನ್ನವಾಗಿದ್ದು, ಸಿನಿಮಾಗಾಗಿ ಫ್ಯಾನ್ಸ್‌ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:‘ಕೃಷ್ಣಂ ಪ್ರಣಯ ಸಖಿ’ ನನ್ನ ಕೆರಿಯರ್‌ನ ಬಿಗ್ ಬಜೆಟ್ ಚಿತ್ರ: ನಟ ಗಣೇಶ್

    ಆನಂದ್ ಆಡಿಯೋ ಸಂಸ್ಥೆ ‘ಭೈರತಿ ರಣಗಲ್’ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು. ಇದೀಗ ಚಿತ್ರದ ಜೊತೆ ಕೈ ಜೋಡಿಸಿರುವುದು ನಮಗೂ ಖುಷಿ ತಂದಿದೆ. ಪ್ರಚಾರ ಕೆಲಸವೂ ದೊಡ್ಡ ಮಟ್ಟದಲ್ಲಿಯೇ ಸಾಗಲಿದೆ ಎಂದಿದ್ದಾರೆ ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ.

    ಕೆಲ ಮೂಲಗಳ ಪ್ರಕಾರ, ‘ಭೈರತಿ ರಣಗಲ್’ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.

  • ಹ್ಯಾಟ್ರಿಕ್ ಹೀರೋ ಶಿವಣ್ಣ ಫ್ಯಾನ್ಸ್‌ಗೆ ಸಿಹಿಸುದ್ದಿ- ಏನದು?

    ಹ್ಯಾಟ್ರಿಕ್ ಹೀರೋ ಶಿವಣ್ಣ ಫ್ಯಾನ್ಸ್‌ಗೆ ಸಿಹಿಸುದ್ದಿ- ಏನದು?

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಅಭಿಮಾನಿಗಳಿಗೆ ಇದೀಗ ಸಿಹಿಸುದ್ದಿ ಸಿಕ್ಕಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಿರುವ ಶಿವಣ್ಣ ಸದ್ಯ ‘ಭೈರತಿ ರಣಗಲ್’ (Bhairathi Rangal) ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಜುಲೈ 12ರಂದು ಶಿವಣ್ಣ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್ ನೀಡಲು ಚಿತ್ರತಂಡ ಸಜ್ಜಾಗಿದೆ.

    ಬಹುನಿರೀಕ್ಷಿತ ಸಿನಿಮಾ ‘ಭೈರತಿ ರಣಗಲ್’ ಸಿನಿಮಾದ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಎದುರು ನೋಡಿದ್ದಾರೆ. ಹೀಗಿರುವಾಗ ಇಂದು (ಜು.1) ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮತ್ತೊಂದೆಡೆ ಶಿವಣ್ಣ 62ನೇ ವರ್ಷದ ಜನ್ಮದಿನ ಆಚರಣೆ ಭರ್ಜರಿ ಪ್ಲ್ಯಾನ್ ಕೂಡ ನಡೆಯುತ್ತಿದೆ.

    ಹಾಗಾಗಿ ಜುಲೈ 12ರಂದು ಶಿವಣ್ಣ ಪಾತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ವಿಶೇಷವಾಗಿ ಶುಭಕೋರಲಿದೆಯಂತೆ. ಚಿತ್ರದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಶಿವಣ್ಣ ಖದರ್ ನೋಡಲು ಅವಕಾಶ ಸಿಗಲಿದೆ. ಈ ಮೂಲಕ ಫ್ಯಾನ್ಸ್‌ಗೆ ಸರ್ಪ್ರೈಸ್ ಸಿಗಲಿದೆ.

    ಅಂದಹಾಗೆ, ಗೀತಾ ಪಿಕ್ಚರ್ಸ್ ಬ್ಯಾನರ್‌ನ ‘ಭೈರತಿ ರಣಗಲ್’ (Bharaithi Rangal) ಸಿನಿಮಾ ನಿರ್ಮಾಣವಾಗುತ್ತಿದೆ. ಗೀತಾ ಶಿವರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಸ್ಪೆಷಲ್ ಮೇಕಿಂಗ್ ವೀಡಿಯೋ ರಿಲೀಸ್ ಮಾಡಿ ಶುಭಕೋರಿದೆ. ಮಫ್ತಿಗಿಂತ ಬಹಳ ಅದ್ಧೂರಿಯಾಗಿ ಪ್ರೀಕ್ವೆಲ್ ಬರಲಿದೆ. ಮಾಫಿಯಾ ಡಾನ್ `ಭೈರತಿ ರಣಗಲ್’ ಹಿನ್ನೆಲೆ ಏನು ಎನ್ನುವುದನ್ನು ಈ ಚಿತ್ರದಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ.

    ವಕೀಲನಾಗಿದ್ದ ಭೈರತಿ ರಣಗಲ್ ದೊಡ್ಡ ಡಾನ್ ಆಗಿ ಬದಲಾಗಿದ್ದು ಯಾಕೆ ಎನ್ನುವ ಪ್ರಶ್ನೆಗೆ ಚಿತ್ರಮಂದಿರದಲ್ಲೇ ಉತ್ತರ ಸಿಗಲಿದೆ. ನೂರಾರು ಜನ ಕಲಾವಿದರು, ತಂತ್ರಜ್ಞರು ಚಿತ್ರಕ್ಕಾಗಿ ಹಗಳಿರುಲು ಕೆಲಸ ಮಾಡುತ್ತಿದ್ದಾರೆ. ಇಲ್ಲೂ ಗಣಿ ಪ್ರದೇಶ, ಹೆಲಿಕ್ಯಾಪ್ಟರ್ ಶಾಟ್ಸ್ ಇದೆ. ಇನ್ನೂ ಪೊಲೀಸ್ ಠಾಣೆಯನ್ನೇ ರಣಗಲ್ ಸುಟ್ಟು ಬಿಡುವ ಸನ್ನಿವೇಶ ಕೂಡ ಚಿತ್ರದಲ್ಲಿರುವಂತೆ ಕಾಣುತ್ತಿದೆ. ಒಟ್ನಲ್ಲಿ ಈ ವಿಡಿಯೋ ನೋಡಿ ಫ್ಯಾನ್ಸ್ ಚಿಂದಿ ಆಗಿದೆ ಎಂದು ಹಾಡಿಹೊಗಳಿದ್ದಾರೆ.

    ಶಿವರಾಜ್‌ಕುಮಾರ್‌ಗೆ ಜೋಡಿಯಾಗಿ ರುಕ್ಮಿಣಿ ವಸಂತ್(Rukmini Vasanth) ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಹುಲ್ ಬೋಸ್, ದೇವರಾಜ್, ಛಾಯಾ ಸಿಂಗ್, ಮಧು ಗುರುಸ್ವಾಮಿ, ವಸಿಷ್ಠ ಸಿಂಹ ಚಿತ್ರದ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ಚಿತ್ರಕ್ಕಿದೆ. ಅಂದಹಾಗೆ, ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ.

  • ಲಾಯರ್ ಆಗಿ ಶಿವಣ್ಣ ಖಡಕ್ ಎಂಟ್ರಿ- ಮೇಕಿಂಗ್ ವಿಡಿಯೋ ಚಿಂದಿ ಎಂದ ಫ್ಯಾನ್ಸ್

    ಲಾಯರ್ ಆಗಿ ಶಿವಣ್ಣ ಖಡಕ್ ಎಂಟ್ರಿ- ಮೇಕಿಂಗ್ ವಿಡಿಯೋ ಚಿಂದಿ ಎಂದ ಫ್ಯಾನ್ಸ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ ‘ಭೈರತಿ ರಣಗಲ್’ (Bhairathi Rangal) ಸಿನಿಮಾ ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದೆ ಚಿತ್ರತಂಡ. ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಸಖತ್ ಖಡಕ್ ಆಗಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಮೇಕಿಂಗ್ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ಗೀತಾ ಪಿಕ್ಚರ್ಸ್ ಬ್ಯಾನರ್‌ನ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣವಾಗುತ್ತಿದೆ. ಗೀತಾ ಶಿವರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಸ್ಪೆಷಲ್ ಮೇಕಿಂಗ್ ವೀಡಿಯೋ ರಿಲೀಸ್ ಮಾಡಿ ಶುಭಕೋರಿದೆ. ‘ಮಫ್ತಿ’ಗಿಂತ ಬಹಳ ಅದ್ಧೂರಿಯಾಗಿ ಪ್ರೀಕ್ವೆಲ್ ಬರಲಿದೆ. ಮಾಫಿಯಾ ಡಾನ್ ಭೈರತಿ ರಣಗಲ್ ಹಿನ್ನೆಲೆ ಏನು ಎನ್ನುವುದನ್ನು ಈ ಚಿತ್ರದಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ:‘ಚೌಕಿದಾರ್’ ಅಡ್ಡಾಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

     

    View this post on Instagram

     

    A post shared by Geetha Pictures (@geethapictures)

    ವಕೀಲನಾಗಿದ್ದ ಭೈರತಿ ರಣಗಲ್ ದೊಡ್ಡ ಡಾನ್ ಆಗಿ ಬದಲಾಗಿದ್ದು ಯಾಕೆ ಎನ್ನುವ ಪ್ರಶ್ನೆಗೆ ಚಿತ್ರಮಂದಿರದಲ್ಲೇ ಉತ್ತರ ಸಿಗಲಿದೆ. ನೂರಾರು ಜನ ಕಲಾವಿದರು, ತಂತ್ರಜ್ಞರು ಚಿತ್ರಕ್ಕಾಗಿ ಹಗಳಿರುಲು ಕೆಲಸ ಮಾಡುತ್ತಿದ್ದಾರೆ. ಇಲ್ಲೂ ಗಣಿ ಪ್ರದೇಶ, ಹೆಲಿಕ್ಯಾಪ್ಟರ್ ಶಾಟ್ಸ್ ಇದೆ. ಇನ್ನೂ ಪೊಲೀಸ್ ಠಾಣೆಯನ್ನೇ ರಣಗಲ್ ಸುಟ್ಟು ಬಿಡುವ ಸನ್ನಿವೇಶ ಕೂಡ ಚಿತ್ರದಲ್ಲಿರುವಂತೆ ಕಾಣುತ್ತಿದೆ. ಒಟ್ನಲ್ಲಿ ಈ ವಿಡಿಯೋ ನೋಡಿ ಫ್ಯಾನ್ಸ್ ಚಿಂದಿ ಆಗಿದೆ ಎಂದು ಹಾಡಿಹೊಗಳಿದ್ದಾರೆ.

    ಶಿವರಾಜ್‌ಕುಮಾರ್‌ಗೆ ಜೋಡಿಯಾಗಿ ರುಕ್ಮಿಣಿ ವಸಂತ್ (Rukmini Vasanth) ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಹುಲ್ ಬೋಸ್, ದೇವರಾಜ್, ಛಾಯಾ ಸಿಂಗ್, ಮಧು ಗುರುಸ್ವಾಮಿ, ವಸಿಷ್ಠ ಸಿಂಹ ಚಿತ್ರದ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ಚಿತ್ರಕ್ಕಿದೆ. ಅಂದಹಾಗೆ, ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ.