ಶಿವರಾಜ್ ಕುಮಾರ್ (Shivaraj Kumar) ನಟನೆಯ ಭೈರತಿ ರಣಗಲ್ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ. ‘ಮಾಯದಿರೋ ಮನದ ಗಾಯಕೆ, ಮಮತೆ ಮದ್ದು ಹಚ್ಚೊ ಸೇವಕ’ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಇತ್ತೀಚೆಗಷ್ಟೇ (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿತ್ತು.
ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಭೈರತಿ ರಣಗಲ್” (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿದೆ.
ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.
ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.
ಭೈರತಿ ರಣಗಲ್ (Bhairati Rangal) ಚಿತ್ರ ಆರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಎಂದು ಈಗಾಗಲೇ ಸಾಕಷ್ಟು ಸುದ್ದಿಯಾಗಿದೆ. ಆದರೆ, ‘ಮಫ್ತಿ’ ಚಿತ್ರ ಮಾಡುವಾಗ ಈ ಚಿತ್ರದಲ್ಲಿ ನಟಿಸಬೇಕಾ? ಎಂಬ ಗೊಂದಲ ನನ್ನಗಿತ್ತು. ‘ಏಕೆಂದರೆ, ಆ ಚಿತ್ರದಲ್ಲಿ ನನ್ನ ಪಾತ್ರ ಬರುವುದೇ ಇಂಟರ್ ವೆಲ್ ನಂತರ. ಶ್ರೀಮುರಳಿ ಈ ಚಿತ್ರದಲ್ಲಿ ಇನ್ನೊಂದು ಪಾತ್ರವನ್ನು ಮಾಡುತ್ತಿದ್ದರು. ಮುರಳಿ ನನ್ನ ಮಾವನ ಮಗ. ಇಲ್ಲ ಎನ್ನುವಂತೆಯೂ ಇರಲಿಲ್ಲ. ಹಾಗಿರುವಾಗ, ಏನು ಮಾಡುವುದು ಎಂಬ ಪ್ರಶ್ನೆ ಇದ್ದೇ ಇತ್ತು. ಅಂತಹ ಸಂದರ್ಭದಲ್ಲಿ ನಿರ್ದೇಶಕ ನರ್ತನ್ (Narthan) ಬಂದು ನೀವು ಈ ಪಾತ್ರ ಮಾಡಿ ಎಂದರು. ನನಗೊಂದು ಧೈರ್ಯ ಬಂತು. ಆನಂತರ “ಮಫ್ತಿ” ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಅಭಿನಯಿಸುವಾಗಲೇ ಅದೇನೋ ಆ ಪಾತ್ರವನ್ನು ಇಷ್ಟಪಡತೊಡಗಿದೆ. ಅದಕ್ಕೆ ಆ ಹೆಸರು ಸಹ ಕಾರಣ. ಈ ತರಹದ ಹೆಸರು ಕೇಳೋಕೆ ಸಾಧ್ಯ ಇಲ್ಲ. ಇನ್ನು, ಸಂಭಾಷಣೆ ಚೆನ್ನಾಗಿತ್ತು. ಅಲ್ಲಿದ್ದ ಭೈರತಿ ರಣಗಲ್‍ನ ಸಣ್ಣ ಕಥೆಯನ್ನು ಇಲ್ಲಿ ಬೆಳೆಸಿದ್ದಾರೆ. ಯಾಕೆ ಅವನು ಭೈರತಿ ರಣಗಲ್ ಆಗುತ್ತಾನೆ. ಜನರಿಗೆ ಯಾಕೆ ಅವನನ್ನು ಕಂಡರೆ ಅಷ್ಟು ಪ್ರೀತಿ ಎಂದು ಹೇಳಲಾಗಿದೆ. ಹೆಚ್ಚು ಆಡಂಬರವಿಲ್ಲದೆ, ಸರಳವಾಗಿ ಈ ವಿಷಯವನ್ನು ಹೇಳಲಾಗಿದೆ. ಇಲ್ಲಿ ಎಷ್ಟು ಮಾತು ಬೇಕೋ, ಅಷ್ಟಿದೆ. ಬಹಳ ಚೆನ್ನಾಗಿದೆ ಕಥೆ ಮಾಡಿಕೊಂಡಿದ್ದಾರೆ ನಿರ್ದೇಶಕ ನರ್ತನ್’ ಎಂದರು ಶಿವಣ್ಣ.
ಶಿವಣ್ಣ (Shivaraj Kumar) ಈ ಚಿತ್ರದಲ್ಲಿ ಆ ಡ್ರೆಸ್ ಯಾಕೆ ಹಾಕುತ್ತಾರೆ? ಎನ್ನುವುದೇ ಚಿತ್ರದ ಕಥೆ ಎಂದು ಮಾತನಾಡಿದ ನಿರ್ದೇಶಕ ನರ್ತನ್, ‘‘ಮಫ್ತಿ’ ಚಿತ್ರ ಮಾಡುವಾಗಲೇ, ಆ ಪಾತ್ರದ ತೂಕ ಹೆಚ್ಚಿತ್ತು. ಚಿತ್ರ ನೋಡಿದಾಗ ಜನರಿಗೆ ಸಾಕಾಗಲಿಲ್ಲ. ಏಕೆಂದರೆ, ಶಿವಣ್ಣ ಅವರ ಪಾತ್ರ ಇಂಟರ್‍ವೆಲ್ ನಂತರ ಬರುತ್ತದೆ. ಈ ಪಾತ್ರವನ್ನು ಇಷ್ಟಕ್ಕೇ ಮುಗಿಸಬಾರದು, ಇದರ ಹಿನ್ನೆಲೆ ಏನಾದರೂ ಬರೆಯಬೇಕು ಎಂದಾಗ ರಣಗಲ್ ಹಿಂದಿನ ಕಥೆ ಸೃಷ್ಟಿಯಾಯಿತು. ಪೆನ್ ಹಿಡಿದಾಗ ಬಹಳ ಸಲೀಸಾಗಿ ಕಥೆ ಸೃಷ್ಟಿಯಾಯಿತು. “ಭೈರತಿ ರಣಗಲ್” ಗ್ಯಾಂಗ್‍ಸ್ಟರ್ ಆಗಿದ್ದು ಹೇಗೆ? ಆ ಬ್ಲಾಕ್ ಡ್ರೆಸ್ ಯಾಕೆ ಹಾಕುತ್ತಾರೆ ಎನ್ನುವುದೇ ಚಿತ್ರದ ಕಥೆ. ಈ ಸಿನಿಮಾ ಬರೆದುಕೊಂಡು ಕಥೆ ಹೇಳಿದಾಗ, ಶಿವಣ್ಣ ಹಾಗೂ ಗೀತಕ್ಕ ಅವರು ಬೇರೇನೂ ಕೇಳಲಿಲ್ಲ. ಮಾಡು ಎಂದು ಹುರಿದುಂಬಿಸಿದರು.ಈಗಾಗಲೇ 70 ರಷ್ಟು ಚಿತ್ರ ಮುಗಿದಿದೆ. ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು.
ನಮ್ಮ ಚಿತ್ರ ಆಗಸ್ಟ್ 15 ರಂದು ತೆರೆಗೆ ಬರುತ್ತಿದೆ. ಆಗಸ್ಟ್ ನಲ್ಲಿ ಸಾಲುಸಾಲು ರಜೆಗಳಿದೆ. ಸಾಮಾನ್ಯವಾಗಿ ಸತತವಾಗಿ ರಜೆ ಸಿಕ್ಕರೆ, ಜನ ಚಿತ್ರಮಂದಿರಕ್ಕೆ ಬರುತ್ತಾರೆ ಎಂಬ ದೃಷ್ಟಿಯಿಂದ ಆಗಸ್ಟ್ 15 ರಂದು ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ನಿರ್ಮಾಪಕಿ ಗೀತಾ ಶಿವರಾಜಕುಮಾರ್ ತಿಳಿಸಿದರು.
ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸ್, ಅವಿನಾಶ್ , ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. “ಭೈರತಿ ರಣಗಲ್” ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ.
ಮಫ್ತಿ ಸಿನಿಮಾದ ಪಾತ್ರವೊಂದರ ಹೆಸರನ್ನು ಇಟ್ಟುಕೊಂಡು ನಿರ್ದೇಶಕ ನರ್ತನ್ (Narthan) ‘ಭೈರತಿ ರಣಗಲ್’ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮುಹೂರ್ತ ಕೂಡ ನೆಡೆದಿತ್ತು. ಇಂದಿನಿಂದ ಚಿತ್ರೀಕರಣ (Shooting) ಆರಂಭಿಸಿದ್ದಾರೆ ನರ್ತನ್. ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ (Shivaraj Kumar) ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ.
ಮಫ್ತಿ ಸಿನಿಮಾದಲ್ಲಿ ಶಿವರಾಜ್ ಕುಮಾರ್, ಭೈರತಿ ರಣಗಲ್ (Bhairati Rangal) ಹೆಸರಿನ ಪಾತ್ರ ಮಾಡಿದ್ದರು. ಮಫ್ತಿ ಸಿನಿಮಾ ಹಿಟ್ ಕೂಡ ಆಗಿತ್ತು. ಇದೀಗ ಆ ಪಾತ್ರವನ್ನಿಟ್ಟುಕೊಂಡು ನರ್ತನ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾವನ್ನು ಸ್ವತಃ ಶಿವರಾಜ್ ಕುಮಾರ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗುತ್ತಿದೆ. ಇದನ್ನೂ ಓದಿ:ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್
ಈ ನಡುವೆ ಶಿವರಾಜ್ ಕುಮಾರ್ ಮತ್ತು ರಜನಿಕಾಂತ್ ಕಾಂಬಿನೇಷನ್ ನ ಜೈಲರ್ ಸಿನಿಮಾ ರಿಲೀಸ್ ಆಗುತ್ತಿದ್ದು, ದಕ್ಷಿಣದ ಹೆಸರಾಂತ ಸ್ಟಾರ್ ನಟರೇ ಈ ಸಿನಿಮಾದಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಟ್ಟು ಹತ್ತು ನಿಮಿಷಗಳ ಕಾಲ ತೆರೆಯ ಮೇಲೆ ಕಾಣಲಿದ್ದಾರಂತೆ. ಹತ್ತು ನಿಮಿಷವಿದ್ದರೂ ಕಥೆಗೆ ಮತ್ತೊಂದು ತೂಕವನ್ನು ಕೊಡುವಂತ ಪಾತ್ರ ಅದಾಗಿದೆಯಂತೆ. ಅಷ್ಟರ ಮಟ್ಟಿಗೆ ಪಾತ್ರ ಪವರ್ ಫುಲ್ ಆಗಿದೆ ಎನ್ನುವುದು ಶಿವಣ್ಣ ಮಾತು.
‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್ ದಿಗ್ಗಜರು ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.
ಶಿವರಾಜ್ ಕುಮಾರ್ (Shivraj Kumar) ನಟನೆಯ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ (Bhairati Rangal) ಸಿನಿಮಾಗೆ ಮೇ 26ರಂದು ಚಾಲನೆ ನೀಡಲಾಗಿದೆ. ಸಿನಿಮಾ ಶೂಟಿಂಗ್ ಸಿದ್ಧತೆಯ ಬೆನ್ನಲ್ಲೇ ಈ ಚಿತ್ರಕ್ಕೆ ನಾಯಕಿ ಯಾರಿರಬಹುದು ಎನ್ನುವ ಕುತೂಹಲ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
ನರ್ತನ್ (Narthan) ನಿರ್ದೇಶನದ ಮಫ್ತಿ ಸಕ್ಸಸ್ ನಂತರ ಈ ಚಿತ್ರದ ಸೀಕ್ವೇಲ್ ಭೈರತಿ ರಣಗಲ್ ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಶಿವಣ್ಣಗೆ ನಾಯಕಿಯಾಗುವ ಆ ಲಕ್ಕಿ ನಟಿ ಯಾರು ಎಂಬುದಕ್ಕೆ ಸುಳಿವು ಸಿಕ್ಕಿದ್ದು, ಶಿವಣ್ಣ ಜೊತೆ ತಮನ್ನಾ ಭಾಟಿಯಾ ಡ್ಯುಯೇಟ್ ಹಾಡೋದಕ್ಕೆ ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಭೈರತಿ ರಣಗಲ್ ಚಿತ್ರದಲ್ಲಿ ನಾಯಕಿ ಪಾತ್ರಕ್ಕೂ ಸಾಕಷ್ಟು ಪ್ರಾಮುಖ್ಯತೆ ಇದ್ದು, ಮಿಲ್ಕಿ ಬ್ಯೂಟಿ ತಮನ್ನಾರನ್ನ (Tamannaah Bhatia) ಚಿತ್ರತಂಡ ಫೈನಲ್ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ
ನಿನ್ನೆ ಶುಕ್ರವಾರ (ಮೇ 26) ನಡೆದ ಚಿತ್ರದ ಪ್ರೆಸ್ ಮೀಟ್ ನಲ್ಲಿ, ನಾಯಕಿಯ ಆಯ್ಕೆ ಬಗ್ಗೆ ನಿರ್ದೇಶನ ನರ್ತನ್ ರಿಯಾಕ್ಟ್ ಮಾಡಿದ್ದರು. ನಮಗೆ ಶಿವಣ್ಣ ಅವರ ಡೇಟ್ ತುಂಬಾ ಮುಖ್ಯ. ಆ ಡೇಟು ಪ್ಲಸ್ ರೇಟು ಮ್ಯಾಚ್ ಆದರೆ ಯಾರಾದರೂ ಓಕೆ ಅಂತಾ ನಗುತ್ತಾ ನಿರ್ದೇಶಕ ನರ್ತನ್ ಪ್ರತಿಕ್ರಿಯೆ ನೀಡಿದ್ದರು. ಬಳಿಕ ಶಿವಣ್ಣ ಮಾತನಾಡಿ, ನಾಯಕಿಯ ಪಾತ್ರಕ್ಕೆ ಯಾರು ಸೂಟ್ ಆಗುತ್ತಾರೋ ಅವರೇ ಹಾಕಿಕೊಳ್ತೀವಿ. ಅದಕ್ಕೆ ಕನ್ನಡ ನಟಿ ಪರಭಾಷಾ ನಟಿ ಎಂಬುದು ಇಲ್ಲ. ಆ ಪಾತ್ರಕ್ಕೆ ಹೊಂದುವಂತಹ ನಟಿಯನ್ನ ಆಯ್ಕೆ ಮಾಡ್ತೀವಿ ಅಂತಾ ತಿಳಿಸಿದ್ದರು. ಕನ್ನಡದ ನಟಿಯನ್ನ ಹಾಕಬಾರದು ಅಂತಾ ಏನಿಲ್ಲ. ನಮ್ಮ ಭಾಷೆಯ ನಟಿ ಸೂಟ್ ಆಗುತ್ತಾರೆ ಅಂದರೆ ಚಿತ್ರಕ್ಕೆ ಹಾಕಿಕೊಳ್ಳಲು ಯಾವುದೇ ಬೇಸರವಿಲ್ಲ. ಆದರೆ ನಾಯಕಿಯ ಪಾತ್ರಕ್ಕೆ ಪ್ರಾಮುಖ್ಯತೆ ಇದೆ. ಅದೊಂದು ಪ್ರಬುದ್ಧ ಪಾತ್ರ ಎಂದು ಹೇಳಿದ್ದರು.
ಈ ಬೆನ್ನಲ್ಲೇ ತಮನ್ನಾ ಅವರು ಶಿವಣ್ಣಗೆ ಜೋಡಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ ಅಷ್ಟಕ್ಕೂ ಈ ವಿಚಾರ ನಿಜಾನಾ? ಅಥವಾ ಗಾಳಿಸುದ್ದಿ ನಾ? ಎಂಬುದನ್ನ ಚಿತ್ರತಂಡವೇ ಸ್ಪಷ್ಟಪಡಿಸಬೇಕಿದೆ. ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿರುವ ಪ್ರಕಾರ ಬಹುತೇಕ ತಮನ್ನಾ ಅವರೇ ಆಗಲಿದ್ದಾರೆ ಎನ್ನಲಾಗುತ್ತಿದೆ.
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ (Geeta) ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ (Narthan) ನಿರ್ದೇಶನದ, ಶಿವರಾಜಕುಮಾರ್ ((Shivaraj Kumar)) ನಾಯಕರಾಗಿ ನಟಿಸುತ್ತಿರುವ ‘ಭೈರತಿ ರಣಗಲ್’ (Bhairati Rangal) ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.
ಮಫ್ತಿ ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಇದು ಮಫ್ತಿ ಚಿತ್ರದ ಪ್ರೀಕ್ವೆಲ್. ಮಫ್ತಿ ಚಿತ್ರದಲ್ಲಿ ಮಧ್ಯಾಂತರದ ನಂತರ ಈ ಪಾತ್ರ ಬರುತ್ತದೆ. ಇಲ್ಲಿ ಭೈರತಿ ರಣಗಲ್ ಆಗಿದ್ದು ಹೇಗೆ ಎಂದು ತಿಳಿಯುತ್ತದೆ. ಶಿವರಾಜಕುಮಾರ್ ಅವರು ಈ ಚಿತ್ರದ ನಾಯಕರಾಗಲು ಒಪ್ಪಿರುವುದು ಹಾಗೂ ಗೀತಾ ಶಿವರಾಜಕುಮಾರ್ ಅವರು ನಿರ್ಮಾಣ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ. ರವಿ ಬಸ್ರೂರ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಅವರ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಇಂದು ಮುಹೂರ್ತ ನೆರವೇರಿದೆ ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ನಿರ್ದೇಶಕ ನರ್ತನ್ ತಿಳಿಸಿದರು.
ಮಫ್ತಿ ಚಿತ್ರದ ಭೈರತಿ ರಣಗಲ್ ನನಗೆ ಇಷ್ಟವಾದ ಪಾತ್ರ. ಈ ಚಿತ್ರವನ್ನು ನಮ್ಮ ಸಂಸ್ಥೆಯಿಂದ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರದ ಪ್ರಾರಂಭಕ್ಕೆ ಸಮಯ ಈಗ ಕೂಡಿ ಬಂದಿದೆ. ಮಫ್ತಿ ಬಂದು ಆರು ವರ್ಷಗಳಾಗಿದೆ. ಈಗಲೂ ನಾನು ಹಾಗೆ ಇದ್ದೀನಿ. ಹಾಗಾಗಿ ಈ ಪಾತ್ರ ಮಾಡಲು ಅನುಕೂಲವಾಗುತ್ತದೆ. ಪ್ರೀಕ್ವೆಲ್ ಆಗಿರುವುದರಿಂದ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತೇನೆ. ನರ್ತನ್ ಕಥೆ ಚಿನ್ನಾಗಿ ಮಾಡಿಕೊಂಡಿದ್ದಾರೆ ಎಂದರು ನಾಯಕ ಶಿವರಾಜಕುಮಾರ್. ಇದನ್ನೂ ಓದಿ:ಈ ಕಾರಣಕ್ಕಾಗಿ ಯಶ್ ಸಿನಿಮಾ ಕೈ ಬಿಟ್ಟರು: ನಿರ್ದೇಶಕ ನರ್ತನ್
ಭೈರತಿ ರಣಗಲ್ ಚಿತ್ರವನ್ನು ನಮ್ಮ ಗೀತಾ ಪಿಕ್ಚರ್ಸ್ ಮೂಲಕ ನಿರ್ಮಾಣ ಮಾಡಬೇಕೆಂದು ಮೊದಲೆ ನಿರ್ಧಾರವಾಗಿತ್ತು. ಈಗ ಚಿತ್ರ ಆರಂಭವಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ಗೀತಾ ಶಿವರಾಜಕುಮಾರ್. ನಿವೇದಿತಾ ಶಿವರಾಜಕುಮಾರ್, ಕೆ.ಪಿ.ಶ್ರೀಕಾಂತ್, ಛಾಯಾಗ್ರಹಕ ನವೀನ್ ಕುಮಾರ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವೇದ ಸಿನಿಮಾ ನಂತರ ಶಿವರಾಜ್ ಕುಮಾರ್ ಬ್ಯಾನರ್ ನಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿತ್ತು. ‘ಭೈರತಿ ರಣಗಲ್’ ಹೆಸರಿನಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇಂದು ಬೆಂಗಳೂರಿನಲ್ಲಿ ಚಾಲನೆ ಸಿಕ್ಕಿದೆ. ನಿರ್ದೇಶಕ ನರ್ತನ್, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಹಲವರು ಮುಹೂರ್ತ (Muhurta) ಸಮಾರಂಭದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ‘ನರ್ತನ್ ನಿರ್ದೇಶನ ಅಂದರೆ, ಸೈಲೆನ್ಸ್ ಅಲ್ಲಿ ವೈಯಲೆನ್ಸ್ ಇರುತ್ತದೆ. ಇದು ಸಸ್ಪೆನ್ಸ್ ಅಂಶಗಳನ್ನು ಹೊಂದಿರುವಂತಹ ಸಿನಿಮಾ. ಶಿವಣ್ಣನಿಗೆ 61 ವರ್ಷ ವಯಸ್ಸಾದರೂ ಇನ್ನೂ ಯುದ್ಧಕ್ಕೆ ಕಳುಹಿಸ್ತಾನೆ ಇದ್ದಾರೆ. ಈ ಸಿನಿಮಾವನ್ನು ಗೀತಾ ಪಿಕ್ಚರ್ಸ್ ನಲ್ಲಿ ಮಾಡಬೇಕು ಎನ್ನುವುದು ಹಲವು ದಿನಗಳ ಹಿಂದಿನ ನಿರ್ಧಾರವಾಗಿತ್ತು. ಈಗ ಅದಕ್ಕೆ ಚಾಲನೆ ಸಿಕ್ಕಿದೆ’ ಎಂದರು. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ
ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ (Geeta Pictures) ನಿರ್ಮಾಣವಾಗುತ್ತಿರುವ 2ನೇ ಸಿನಿಮಾವಿದು. ಶಿವರಾಜ್ ಕುಮಾರ್ (Shivraj Kumar) ಮತ್ತು ನಿರ್ದೇಶಕ ನರ್ತನ್ (Narthan) ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಐದು ವರ್ಷಗಳ ನಂತರ ಮಫ್ತಿ (Mufti) ಸಿನಿಮಾದ ಭೈರತಿ ರಣಗಲ್ (Bhairati Rangal) ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು.
ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.
ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.
ಮಫ್ತಿ (Mufti) ಸಿನಿಮಾದ ನಂತರ ನರ್ತನ್ (Nartan) ಮೆಗಾ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲಿದ್ದಾರೆ ಎಂದು ಅನೇಕ ಬಾರಿ ಸುದ್ದಿ ಆಯಿತು. ಈ ಸಿನಿಮಾಗೆ ಯಶ್ ಹೀರೋ ಎಂದೂ ಹೇಳಲಾಯಿತು. ಈ ಚಿತ್ರಕ್ಕಾಗಿ ನರ್ತನ್ ಬರೋಬ್ಬರಿ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂತು. ಆನಂತರ ಯಶ್ ಇವರ ಚಿತ್ರದಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ಹೊರ ಬಿದ್ದಿತು.
ಈ ನೋವಿನ ವಿಚಾರ ಆಚೆ ಬರುತ್ತಿದ್ದಂತೆಯೇ ನರ್ತನ್ ಮತ್ತೆ ಸದ್ದು ಮಾಡಿದರು. ಅದು ಮತ್ತೊಂದು ಮೆಗಾ ಸಿನಿಮಾದ ವಿಷಯಕ್ಕಾಗಿ. ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ವಿಷಯ ಗಾಂಧಿನಗರದ ಗಲ್ಲಿ ಗಲ್ಲಿಗಳಲ್ಲಿ ಕೇಳಿ ಬಂದಿತ್ತು. ಈ ವಿಷಯ ಕೂಡ ಸುಳ್ಳಾಗಲಿದೆ ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿತ್ತು. ಆದರೆ, ಅದು ನಿಜವಾಗಿದೆ. ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ಸೌತ್‌ನಷ್ಟು ಶಿಸ್ತಿಲ್ಲ: ಕಾಜಲ್ ಅಗರ್‌ವಾಲ್
ಹೌದು, ನರ್ತನ್ ಟಾಲಿವುಡ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ಪ್ರಶಾಂತ್ ನೀಲ್, ಎ.ಹರ್ಷ ನಂತರ ಮತ್ತೋರ್ವ ನಿರ್ದೇಶಕ ಟಾಲಿವುಡ್ ಸ್ಟಾರ್ ನಟನಿಗೆ ಚಿತ್ರವೊಂದನ್ನು ಮಾಡುತ್ತಿದ್ದಾರೆ. ಇದು ಪಕ್ಕಾ ಮಾಹಿತಿ ಎಂದು ಸ್ವತಃ ನರ್ತನ್ ಅವರೇ ಹಂಚಿಕೊಂಡಿದ್ದಾರೆ. ಆದರೆ, ಆ ಸಿನಿಮಾ ಯಾವಾಗ ಬರುತ್ತದೆ ಎಂದು ಮಾತ್ರ ಹೇಳಿಕೊಂಡಿಲ್ಲ.
ಸದ್ಯ ಭೈರತಿ ರಣಗಲ್ (Bhairati Rangal) ಸಿನಿಮಾದ ಕೆಲಸದಲ್ಲಿ ನರ್ತನ್ ಬ್ಯುಸಿಯಾಗಿದ್ದಾರೆ. ಮೇ ತಿಂಗಳಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಶಿವರಾಜ್ ಕುಮಾರ್ (Shivraj Kumar) ಮತ್ತು ನರ್ತನ್ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಲಿದೆ. ಈ ಸಿನಿಮಾವನ್ನು ಸ್ವತಃ ಶಿವಣ್ಣ ಅವರೇ ತಮ್ಮ ಬ್ಯಾನರ್ ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ನಂತರ ರಾಮ್ ಚರಣ್ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರಂತೆ ನರ್ತನ್.
ಮಫ್ತಿ (Mufti,) ಸಿನಿಮಾದ ನಂತರ ನಿರ್ದೇಶಕ ನರ್ತನ್ (Narthan) ಹಾಗೂ ನಟ ಶಿವರಾಜ್ ಕುಮಾರ್ (Shivraj Kumar) ಮತ್ತೆ ಒಂದಾಗಿದ್ದು, ಈ ಬಾರಿ ಜೋಡಿಯು ಪ್ಯಾನ್ ಇಂಡಿಯಾ (Pan India) ಸಿನಿಮಾವನ್ನು ಮಾಡಲಿದೆ. ‘ಭೈರತಿ ರಣಗಲ್’ (Bhairati Rangal) ಹೆಸರಿನಲ್ಲಿ ಈ ಸಿನಿಮಾ ಹಲವು ಭಾಷೆಗಳಲ್ಲಿ ಮೂಡಿ ಬರುತ್ತಿದ್ದು, ಸಿನಿಮಾದ ಟೈಟಲ್ ಡಿಸೈನ್ ಅನ್ನು ಮಾರ್ಚ್ 5ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.
ಗೀತಾ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ನರ್ತನ್ ಈ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಐದು ವರ್ಷಗಳ ನಂತರ ಮಫ್ತಿ ಸಿನಿಮಾದ ಭೈರತಿ ರಣಗಲ್ ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್
ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.
ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಸೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.
ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.
LIVE TV
[brid partner=56869869 player=32851 video=960834 autoplay=true]
ಗೀತಾ ಪಿಕ್ಚರ್ಸ್ ತನ್ನ ಎರಡನೇ ಸಿನಿಮಾ ಘೋಷಣೆ ಮಾಡಿದ್ದು, ಶಿವರಾಜ್ ಕುಮಾರ್ (Shivraj Kumar) ಮತ್ತು ನಿರ್ದೇಶಕ ನರ್ತನ್ (Narthan) ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಐದು ವರ್ಷಗಳ ನಂತರ ಮಫ್ತಿ (Mufti) ಸಿನಿಮಾದ ಭೈರತಿ ರಣಗಲ್ (Bhairati Rangal) ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು.
ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.
ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಶೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.
ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.
LIVE TV
[brid partner=56869869 player=32851 video=960834 autoplay=true]