Tag: Bhairava

  • ‘ಕಲ್ಕಿ’  ಸಿನಿಮಾದ ಭೈರವ ಆಂಥಮ್ ರಿಲೀಸ್: ಕುಣಿದ ಪ್ರಭಾಸ್ ಫ್ಯಾನ್ಸ್

    ‘ಕಲ್ಕಿ’ ಸಿನಿಮಾದ ಭೈರವ ಆಂಥಮ್ ರಿಲೀಸ್: ಕುಣಿದ ಪ್ರಭಾಸ್ ಫ್ಯಾನ್ಸ್

    ಪ್ರಭಾಸ್‌ (Prabhas), ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki) ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ಅವರು ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

    ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

     

    ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

  • ‘ಕಲ್ಕಿ’ಯಲ್ಲಿ ಭೈರವನ ಅವತಾರವೆತ್ತಿದ ನಟ ಪ್ರಭಾಸ್

    ‘ಕಲ್ಕಿ’ಯಲ್ಲಿ ಭೈರವನ ಅವತಾರವೆತ್ತಿದ ನಟ ಪ್ರಭಾಸ್

    ಪ್ರಭಾಸ್ (Prabhas) ನಟನೆಯ ಕಲ್ಕಿ ಸಿನಿಮಾದ ಮತ್ತೊಂದು ಪೋಸ್ಟರ್ (Poster) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪ್ರಭಾಸ್ ಭೈರವ (Bhairava) ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಜುಟ್ಟು ಬಿಟ್ಟುಕೊಂಡು ಸ್ಟೈಲಿಶ್ ಆಗಿ ಕಂಡಿದ್ದಾರೆ ಪ್ರಭಾಸ್. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಕಲ್ಕಿ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ರಾಜಮೌಳಿಯೂ (Rajamouli) ಪಾತ್ರ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಿನಿಮಾದಲ್ಲಿ ಅವರು ಮಹತ್ವದ ಪಾತ್ರವೊಂದನ್ನು ನಿರ್ವಹಿಸಿದ್ದು, ಅದು ವಿಜ್ಞಾನಿ (Scientist) ಪಾತ್ರವಾಗಿದೆಯಂತೆ. ಅಧಿಕೃತವಾಗಿ ಚಿತ್ರತಂಡ ಯಾವುದೇ ಮಾಹಿತಿ ಹಂಚಿಕೊಳ್ಳದೇ ಇದ್ದರೂ, ಇಂಥದ್ದೊಂದು ಸುದ್ದಿಯಂತೂ ಸಖತ್ ಜೋರಾಗಿಯೇ ಕೇಳಿ ಬರುತ್ತಿದೆ.

    ಪ್ರತಿ ಹಂತದಲ್ಲೂ ನಾನಾ ರೀತಿಯ ಸುದ್ದಿಗಳನ್ನು ಮಾಡುತ್ತಲೇ ಬರುತ್ತಿದೆ ಚಿತ್ರತಂಡ. ಮೊನ್ನೆಯಷ್ಟೇ ನಟ ಅಮಿತಾಭ್ ಬಚ್ಚನ್  (Amitabh Bachchan) ಅವರ ಹುಟ್ಟು ಹಬ್ಬದ (Birthday) ದಿನದಂದು ಕಲ್ಕಿ ಸಿನಿಮಾ ಟೀಮ್ ಅಮಿತಾಭ್ ಬಚ್ಚನ್ ಪಾತ್ರದ ಫಸ್ಟ್ ಲುಕ್(First Look)  ರಿಲೀಸ್ ಮಾಡಿತ್ತು. ವಿಚಿತ್ರ ವೇಷದಲ್ಲಿ ಅಮಿತಾಭ್ ಕಾಣಿಸಿಕೊಂಡಿದ್ದು ಪಾತ್ರದ ಬಗ್ಗೆ ಕುತೂಹಲ ಮೂಡಿಸಿತ್ತು.

    ಈ ನಡುವೆ ಕಲ್ಕಿ (Kalki) ಸಿನಿಮಾದ ಫೋಟೋವೊಂದು ಲೀಕ್ ಆಗಿತ್ತು. ಸಿನಿಮಾದ ಪ್ರಮುಖ ಗೆಟಪ್ ಒಳಗೊಂಡಿದ್ದ ಆ ಫೋಟೋವನ್ನು ಯಾರು ಲೀಕ್ ಮಾಡಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಲೆಕೆಡಿಸಿಕೊಂಡಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ಹೀಗೆ ಪಾತ್ರಗಳ ಬಗ್ಗೆ ರಿವಿಲ್ ಮಾಡುತ್ತಿರುವುದು ಕೋಪ ತರಿಸಿತ್ತು. ಇದೀಗ ನಿರ್ಮಾಪಕರು ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ.

     

    ಕಲ್ಕಿ ಸಿನಿಮಾದ ವಿಎಫ್ಎಕ್ಷ್  ಮಾಡುತ್ತಿರುವ ಸಂಸ್ಥೆಯೇ ಫೋಟೋವನ್ನು ಲೀಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ಮಾಪಕರು ಪೊಲೀಸ್ ಮೊರೆ ಹೋಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

  • ವಾರಿಯರ್ ಧ್ವನಿಯಲ್ಲಿ ‘ಭೈರವ’ ಚಿತ್ರದ ಮೊದಲ ಹಾಡು

    ವಾರಿಯರ್ ಧ್ವನಿಯಲ್ಲಿ ‘ಭೈರವ’ ಚಿತ್ರದ ಮೊದಲ ಹಾಡು

    ಭೈರವ (Bhairava) ಸಿನಿಮಾದ ಮೊದಲ ಹಾಡು (Song) ರಿಲೀಸ್ ಆಗಿದೆ.  ಸಾಯಿ ಸರ್ವೇಶ್ ಸಾಹಿತ್ಯ, ಚೇತನ್ ಕೃಷ್ಣ ಸಂಗೀತ ಹೊಂದಿರುವ ‘ಹೇ ಮಂದಾರ’ ಹಾಡಿಗೆ ಅಜಯ್ ವಾರಿಯರ್ (Ajay Warrier) ಧ್ವನಿಯಾಗಿದ್ದಾರೆ. ಉತ್ತರ ಪ್ರದೇಶದ ಸುಂದರ ಸ್ಥಳಗಳಲ್ಲಿ ಚಿತ್ರೀಕರಣಗೊಂಡ ಹಾಡಿಗೆ ಬಿ. ಧನಂಜಯ್ ಅವರು ನೃತ್ಯ ಸಂಯೋಜನೆವಿದೆ. ವಿಸಿಕ ಫಿಲಂಸ್ ಹಾಗೂ ಹನಿ ಚೌದ್ರಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಹಾಗೂ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿರುವ ಭೈರವ ಚಿತ್ರ ಇದೀಗ ತಮ್ಮ ಮೊದಲ ಹಾಡನ್ನು ಬಿಡುಗಡೆಗೊಳಿಸಿ ಸಿನಿ ರಸಿಕರಿಗೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ.

    ಹನಿ ಚೌದ್ರಿ ಹಾಗೂ  ಶ್ರೀನಿವಾಸ್ ಬೆಟ್ಟದಪುರ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ಚರಣ್ ಸುವರ್ಣ (Charan Suvarna) ಬರೆದಿರುವ ಕಥೆಗೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ರಾಮ್ ತೇಜ ಅವರು ವಹಿಸಿದ್ದಾರೆ. ಚಿತ್ರದ ಮುಖ್ಯ ಭೂಮಿಯಲ್ಲಿ ಕಮರೊಟ್ಟು ಚೆಕ್ ಪೋಸ್ಟ್ ಖ್ಯಾತಿಯ ಸನತ್, ಒಂದು ಮೊಟ್ಟೆಯ ಕಥೆ ಖ್ಯಾತಿಯ ಶೈಲಾಶ್ರೀ ಮುಲ್ಕಿ ಹಾಗೂ ಬನ್- ಟಿ ಖ್ಯಾತಿಯ ಉಮೇಶ್ ಸಕ್ಕರೆನಾಡು ಹಾಗು ಇನ್ನೂ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

    ಉತ್ತರ ಪ್ರದೇಶದ ಗೋವಿಂದಪುರಿ, ಹರಿದ್ವಾರ, ರಿಷಿಕೇಶ್, ಕಾಶಿ, ಬೆಂಗಳೂರು ಇನ್ನು ಹಲವು ವಿಭಿನ್ನ ಸ್ಥಳಗಳಲ್ಲಿ ಚಿತ್ರವು ಚಿತ್ರೀಕರಣ ಗೊಂಡಿದೆ ಎಂದು ಚಿತ್ರದ ನಿರ್ದೇಶಕ ರಾಮ್ ತೇಜ ಹೇಳಿದ್ದಾರೆ. ಚಿತ್ರದ ಕಥೆಯನ್ನು ಎಲ್ಲೂ ಬಿಟ್ಟುಕೊಡದೆ ಚಿತ್ರದ ಬಗ್ಗೆ ಕುತೂಹಲವನ್ನು ಹಾಗೆ ಕಾಯ್ದಿರಿಸಿದ್ದಾರೆ.

     

    ಸದ್ಯ ಈ ಚಿತ್ರದ ಮೊದಲ ಹಾಡನ್ನು ಖ್ಯಾತ ನಿರ್ದೇಶಕರುಗಳಾದ ದಿನಕರ್ ತೂಗುದೀಪ್, ಭರ್ಜರಿ ಚೇತನ್ ಕುಮಾರ್, ಹಾಗೂ ಗರಡಿ ಚಿತ್ರದ ನಾಯಕರಾದ ಸೂರ್ಯ, ವಸಿಷ್ಠ ಸಿಂಹ ಹಾಗೂ ವಿಕ್ರಂ ರವಿಚಂದ್ರನ್, ಜಾಯಿದ್ ಖಾನ್, ಸೋನಲ್ ಮಾಂತೇರೋ, ಧರ್ಮಣ್ಣ ಕಡೂರ್ ಬಿಡುಗಡೆ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]