ಮಡಿಕೇರಿ: ಬಜರಂಗದಳ ಭಯೋತ್ಪಾದಕ ಸಂಘಟನೆಯಲ್ಲ. ಅದು ಅಲ್-ಖೈದಾವೂ ಅಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಸಿದ್ದರಾಮಯ್ಯ (Siddaramaiah) ವಿರುದ್ಧ ಕಿಡಿಕಾರಿದ್ದಾರೆ.
ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶಿರಂಗಾಲದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ಒಂದು ದೇಶಭಕ್ತ ಸಂಘಟನೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಬಜರಂಗದಳವನ್ನು (Bhajarang Dal) ನಿಷೇಧ ಮಾಡುವುದಾಗಿ ಹೇಳಿದ್ದಾರೆ. ಅವರು ಅವಸಾನ ಹೊಂದುವುದು ಖಚಿತ ಎಂದು ಹರಿಹಾಯ್ದರು. ಇದನ್ನೂ ಓದಿ: ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ
ಬಜರಂಗದಳ ದೇಶಾಭಿಮಾನವನ್ನು ಪಸರಿಸುತ್ತಿರುವ ದೇಶಭಕ್ತರ ಸಂಘಟನೆ. ಅದು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಇಂತಹ ಸಂಘಟನೆಯನ್ನು ನಿಷೇಧಿಸುತ್ತೇವೆ ಎಂದಿರುವ ಸಿದ್ದರಾಮಯ್ಯ ಈ ಬಾರಿ ವರುಣಾದಲ್ಲಿ (Varuna) ಸೋಲುವುದು ಖಚಿತ. ಅಲ್ಲದೇ ಕಾಂಗ್ರೆಸ್ (Congress) 40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಶೋಕಾಸ್ ನೋಟಿಸ್ ಜಾರಿ
ವಿಜಯನಗರ: ಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತು. ಇದೀಗ ಹನುಮಾನ್ ಜನ್ಮಸ್ಥಳದಲ್ಲೇ ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಂಗ್ರೆಸ್ (Congress) ಪ್ರಣಾಳಿಕೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ವಿಜಯನಗರದಲ್ಲಿ (Vijayanagara) ಬಿಜೆಪಿ (BJP) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಹನುಮಂತನ ಜನ್ಮಸ್ಥಾನಕ್ಕೆ ನಾನು ಬಂದಿದ್ದೇನೆ. ನಾನು ಹನುಮಂತನಿಗೆ ಶತ ಪ್ರಣಾಮ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗಬಲಿ ಅಂದರೆ ಹನುಮಂತನನ್ನು ಬೀಗ ಹಾಕಿ ಬಂಧಿಸಲು ಹೊರಟಿದ್ದಾರೆ. ಕಾಂಗ್ರೆಸ್‌ನವರಿಗೆ ಹಿಂದೆ ಶ್ರೀರಾಮನನ್ನು ಕಂಡರೂ ಆಗುತ್ತಿರಲಿಲ್ಲ. ಈಗ ಹನುಮಂತನ ಕಂಡರೂ ಆಗುತ್ತಿಲ್ಲ. ನಮಗೆ ಶ್ರೀರಾಮಚಂದ್ರ ಹಾಗೂ ಹನುಮಂತ ಪೂಜ್ಯರು. ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ. ಇಡೀ ದೇಶದಲ್ಲಿ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಈ ಸಂಕಲ್ಪಕ್ಕೆ ಹನುಮಂತನ ಆಶೀರ್ವಾದ ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳುವ ಮೂಲಕ ಬಜರಂಗದಳವನ್ನು (Bhajarang Dal) ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಸಿಎಂ ಆರ್.ಗುಂಡೂರಾವ್ ಸೋಲಿಸಿದ್ದ ಮಾಜಿ ಸಚಿವ ಜೀವಿಜಯ ಕಾಂಗ್ರೆಸ್‌ಗೆ ರಾಜೀನಾಮೆ
ಕಾಂಗ್ರೆಸ್ ಮೊದಲಿನಿಂದಲೂ ಆಂತಕವಾದಿಗಳ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಭಯೋತ್ಪಾದಕರು ಸತ್ತಾಗ ಅಳುತ್ತಾರೆ. ಸರ್ಜಿಕಲ್ ಸ್ಟೈಕ್ ನಡೆದಾಗ ಭಾರತೀಯ ಸೇನೆಯ ಸಾಮರ್ಥ್ಯದ ಕುರಿತು ಪ್ರಶ್ನೆ ಮಾಡುತ್ತಾರೆ. ಕರ್ನಾಟಕದಲ್ಲಿ ಉಗ್ರ ಕೃತ್ಯ ನಡೆದಾಗ ಕಾಂಗ್ರೆಸ್ ಅವರ ಪರ ನಿಂತಿದೆ. ಆತಂಕವಾದಿಗಳು, ಉಗ್ರವಾದಿಗಳು ಜಾಗೃತವಾಗಿರುವ ಕಡೆ ಅವರನ್ನು ಶಮನಗೊಳಿಸುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು. ಇದನ್ನೂ ಓದಿ: Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ
ಮೋದಿ ಭಾಷಣದ ಹೈಲೈಟ್ಸ್:
ವಿಜಯನಗರ ಜಿಲ್ಲೆ ಅತ್ಯಂತ ಐತಿಹಾಸಿಕ ಸ್ಥಳವಾಗಿದೆ. ಪುರಾಣ, ಇತಿಹಾಸದಲ್ಲೂ ಉಲ್ಲೇಖವಿದೆ. ಇದು ಕರ್ನಾಟಕದ ಅತ್ಯಂತ ಯುವ ಜಿಲ್ಲೆಯಾಗಿದೆ. ವಿಜಯನಗರ ಜಿಲ್ಲೆಯಾಗಿ ಮಾಡಲಾಗಿದೆ. ಇಲ್ಲಿನ ಪ್ರತಿ ಮನೆ ಮನೆಯ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ. ಈಗಾಗಲೇ ವಿಜನಗರ ಜನರು ಬಿಜೆಪಿಯ ಅಭಿವೃದ್ಧಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ವಿಜಯನಗರ ನಿರ್ಧಾರ ಮಾಡಿದ್ದಾರೆ. ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ. ಇದನ್ನೂ ಓದಿ: ಪಂಚಮಸಾಲಿ ಮಠಕ್ಕೆ ರಾಹುಲ್ ಗಾಂಧಿ ಭೇಟಿ
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ (JDS) ಅಧಿಕಾರದಲ್ಲಿದ್ದಾಗ ಕಾಮಗಾರಿಗಳು ವಿಳಂಬವಾಗುತ್ತಿದ್ದವು. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಕಾಮಗಾರಿಗಳ ವೇಗವು ಹೆಚ್ಚಿದೆ. ಮುಂದಿನ 25 ವರ್ಷಗಳಲ್ಲಿ ಕರ್ನಾಟಕವು ಅಭಿವೃದ್ಧಿಯಲ್ಲಿ ಮುಂಚೂಣಿಗೆ ಬರಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ನೇರ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟು ಕೆಲಸ ಮಾಡುತ್ತೇವೆ. 9 ಕೈಗಾರಿಕೆಗಳನ್ನು ಸ್ಥಾಪನೆ ಮಾಡುತ್ತಿದ್ದು, ಚಿತ್ರದುರ್ಗದಲ್ಲೂ ಕೈಗಾರಿಕೆ ಸ್ಥಾಪಿಸಲು ಬಿಜೆಪಿ ಕಟಿಬದ್ಧವಾಗಿದೆ. ಇದನ್ನೂ ಓದಿ: ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್ ಗ್ರೇಟ್ ಎಸ್ಕೇಪ್
ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ.
ಚಿತ್ರದುರ್ಗದ ಭದ್ರತೆಗೆ ಏಳು ಸುತ್ತಿನ ಕೋಟೆ ಇರುವ ಹಾಗೇ ನಾವು ಸಮಾಜಕ್ಕೆ ಭದ್ರತೆ ಒದಗಿಸುತ್ತೇವೆ. ಪಿಎಂ ಆವಾಜ್ ಯೋಜನೆಯಡಿ ಸರ್ವರಿಗೂ ಮನೆ ನಿರ್ಮಾಣ ಮಾಡಿಕೊಡುತ್ತಿದ್ದೇವೆ. ಉಜ್ವಲ ಯೋಜನೆಯಡಿ ಗ್ಯಾಸ್, ಆಯುಷ್ಮನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆ ಮತ್ತು ಉಚಿತವಾಗಿ ಲಸಿಕೆಯನ್ನು ನೀಡಿದ್ದೇವೆ. ಮುದ್ರಾ ಯೋಜನೆಯ ಮೂಲಕ ಆರ್ಥಿಕ ಭದ್ರತೆಯ ಶಕ್ತಿಯನ್ನು ನೀಡಿದ್ದೇವೆ. ಭೀಮಾಜ್ಯೋತಿ, ಸುರಕ್ಷಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಸುಕನ್ಯಾ ಯೋಜನೆಯನ್ನು ನೀಡುವ ಮೂಲಕ ರಕ್ಷಣೆಯನ್ನು ಒದಗಿಸುತ್ತಿದ್ದೇವೆ. ಎಲ್ಲರಿಗೂ ಸಾಮಾಜಿಕ ಭದ್ರತೆ ನೀಡುವ ಮೂಲಕ ಏಳು ಸುತ್ತಿನ ಕೋಟೆಯಂತೆ ಬಿಜೆಪಿ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್- ಜೆಡಿಎಸ್ ಜಿದ್ದಾಜಿದ್ದಿ ಫೈಟ್ – ಶ್ರವಣಬೆಳಗೊಳದಲ್ಲಿ ಯಾರಿಗೆ ಜಯ?
ಬಿಜೆಪಿ ಮಾಡಿದಷ್ಟು ಅಭಿವೃದ್ಧಿಯನ್ನು ಕಾಂಗ್ರೆಸ್ ಕಲ್ಪನೆಯಲ್ಲೂ ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಕೇವಲ 9 ವರ್ಷಗಳಲ್ಲಿ ಡಬಲ್ ಆಗುವಷ್ಟು ಮೆಡಿಕಲ್ ಕಾಲೇಜುಗಳನ್ನು ಪ್ರಾರಂಭಿಸಿದೆ. ಚಿತ್ರದುರ್ಗದಲ್ಲೂ ಮೆಡಿಕಲ್ ಕಾಲೇಜು ಆರಂಭಿಸಿರುವುದು ಇಲ್ಲಿನ ಮಕ್ಕಳು ವೈದ್ಯರಾಗಲು ನೆರವಾಗಿದೆ. ಅಲ್ಲದೇ ಉದ್ಯೋಗ ಗಳಿಸಲು ಅನುಕೂಲ ಮಾಡಿಕೊಟ್ಟಿದೆ. ಕೇಂದ್ರ ಸರ್ಕಾರ ಆದಿವಾಸಿಗಳಿಗೆ ವಿವಿಧ ಯೋಜನೆ ನೀಡಿದ್ದು, ಬಂಜಾರ ಸಮುದಾಯದ ಜನರಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಅಲ್ಲದೇ ಭೂಮಿ ಇಲ್ಲದವರಿಗೆ ಭೂಮಿ ನೀಡಿ ಅವರ ಮಕ್ಕಳಿಗೆ ಶಿಕ್ಷಣ ನೀಡಿದ್ದೇವೆ. ಬಿಜೆಪಿ ಸರ್ಕಾರ ಬಡವರ ಮಕ್ಕಳಿಗಾಗಿ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು ಪರೀಕ್ಷೆಗಳನ್ನು ಸ್ಥಳೀಯ ಭಾಷೆಯಲ್ಲಿ ಬರೆಯುವ ಅವಕಾಶವನ್ನು ಮಾಡಿಕೊಟ್ಟಿದೆ. ರೈತರ ಮಕ್ಕಳಿಗೆ ರೈತರ ನಿಧಿ ಯೋಜನೆಯಡಿ ಸ್ಕಾಲರ್ಶಿಪ್ ನೀಡಲಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಮಕ್ಕಳ ಸಮವಸ್ತ್ರದಲ್ಲೂ ಭ್ರಷ್ಟಾಚಾರ ನಡೆಸಿದ್ದಾರೆ. ಇದನ್ನೂ ಓದಿ: PublicTV Explainer: ಮತ ಪ್ರಮಾಣ ಹೆಚ್ಚಿದ್ದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಏರಿಲ್ಲ ಯಾಕೆ?
ಮಾರುಕಟ್ಟೆಯಲ್ಲಿ ನಾವು ಯಾವುದೇ ವಸ್ತುಗಳನ್ನು ಖರೀದಿಸುವಾಗ ಅದಕ್ಕೆ ಗ್ಯಾರಂಟಿ ಕೊಡಲಾಗುತ್ತದೆ. ಅದಕ್ಕೆ ಇಂತಿಷ್ಟು ಸಮಯ ಎಂದು ನಿಗದಿಯಾಗಿರುತ್ತದೆ. ಇಡೀ ದೇಶದಲ್ಲಿ ಕಾಂಗ್ರೆಸ್‌ನ ಸಮಯ ಮುಗಿದಿದೆ. ಕಾಂಗ್ರೆಸ್ ಕೊಡುವ ಗ್ಯಾರಂಟಿಗೆ ವಾರಂಟಿ ಇಲ್ಲ. ಕಾಂಗ್ರೆಸ್ ಸುಳ್ಳಿನ ಗ್ಯಾರಂಟಿ ಕೊಡುತ್ತಿದೆ. ಗುಜರಾತಲ್ಲಿ ಚುನಾವಣೆ ವೇಳೆ ಮನೆ ಕಟ್ಟಿಕೊಡುವುದಾಗಿ ಸುಳ್ಳು ಭರವಸೆ ನೀಡಿ 500 ರೂ. ತೆಗೆದುಕೊಂಡು ಅದರಲ್ಲೂ ಭ್ರಷ್ಟಾಚಾರ ನಡೆಸಿದ್ದಾರೆ. ಇದನ್ನೂ ಓದಿ: ತಾಕತ್ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ – ಕಾಂಗ್ರೆಸ್‌ಗೆ ಶೋಭಾ ಕರಂದ್ಲಾಜೆ ಸವಾಲು
ಕರ್ನಾಟಕದ ಜನತೆ ಯಾವತ್ತೂ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲ್ಲ. ಅವರು ಸುಳ್ಳಿನ ಗ್ಯಾರಂಟಿ ನೀಡುತ್ತಿದ್ದಾರೆ. ಆ ಯೋಜನೆಗಳನ್ನು ತರಲು ಸಾಧ್ಯವಿಲ್ಲ. ಸಂಪೂರ್ಣ ಅಭಿವೃದ್ಧಿಯನ್ನು ನಿಲ್ಲಿಸಿ ಗ್ಯಾರಂಟಿ ಯೋಜನೆಯನ್ನು ನೀಡಲು ಮುಂದಾಗಬೇಕಾಗುತ್ತದೆ. ಕಾಂಗ್ರೆಸ್‌ನವರು ಜನರ ದಾರಿಯನ್ನು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ತಲುಪ ಅನೇಕ ಯೋಜನೆಗಳು ನಿಲ್ಲುವ ಸಾಧ್ಯತೆಯಿದೆ. ಬಿಜೆಪಿ ಅಭಿವೃದ್ಧಿಯ ಕೆಲಸವನ್ನು ಮಾಡುತ್ತಿದೆ. ಆದರೆ ಕಾಂಗ್ರೆಸ್‌ನ ಉದ್ದೇಶ ಬೇರೆಯಾಗಿದೆ. ಅದು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಇದನ್ನೂ ಓದಿ: ಜೆಡಿಎಸ್‌ನದ್ದು ಅಧಿಕೃತ ಹೊಂದಾಣಿಕೆಯೋ ಅಥವಾ ರಾಜಕೀಯ ವ್ಯಭಿಚಾರವೋ: ಸಿ.ಟಿ.ರವಿ ವ್ಯಂಗ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ (Bajarangdal) ಮುಖಂಡನ ಶವ ಪತ್ತೆಯಾಗಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26)ಯವರ ಮೃತದೇಹ ದೊರೆತಿದೆ. ಪಾಣೆಮಂಗಳೂರು (Panemangaluru) ಹಳೆಯ ಸೇತುವೆಯ ಬಳಿ ಪತ್ತೆಯಾಗಿದೆ.
ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹ ಪತ್ತೆಯಾಗಿದೆ.