Tag: Bhajarangdal

  • ಸಾಗರದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಅಟ್ಯಾಕ್- ಆರೋಪಿ ಬಂಧನಕ್ಕೆ ಪ್ರೊಟೆಸ್ಟ್

    ಸಾಗರದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಅಟ್ಯಾಕ್- ಆರೋಪಿ ಬಂಧನಕ್ಕೆ ಪ್ರೊಟೆಸ್ಟ್

    ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡುವ ಯತ್ನ ಮಾಡಲಾಗುತ್ತಿದೆಯಾ ಎಂಬ ಅನುಮಾನವೊಂದು ಎದ್ದಿದೆ.

    ಸಾಗರದಲ್ಲಿ ಭಜರಂಗದಳ (Bhajarangdal) ಕಾರ್ಯಕರ್ತನ ಮೇಲೆ ದಾಳಿ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ರೀತಿಯಲ್ಲೇ ದುಷ್ಕರ್ಮಿ ಸಮೀರ್ ಎಂಬಾತ ಸುನೀಲ್ ಮೇಲೆ ತಲ್ವಾರ್‍ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆದರೆ ಕೂದಲೆಳೆ ಅಂತರದಲ್ಲಿ ಭಜರಂಗದಳದ ಸುನೀಲ್ ಪಾರಾಗಿದ್ದಾರೆ.

    ಶಿವಮೊಗ್ಗದಲ್ಲಿ ಭಾನುವಾರ ನಡೆದ ಶೌರ್ಯ ಸಂಚಲನದಲ್ಲಿ ಸುನೀಲ್ (sunil) ಭಾಗಿಯಾಗಿದಲ್ರು. ಈ ವೇಳೆ ಸುನೀಲ್‍ಗಾಗಿ ಕಾದು ಕುಳಿತು ಸಮೀರ್ ದಾಳಿ ನಡೆಸಲು ಯತ್ನಿಸಿದ್ದಾನೆ. ಇದನ್ನೂ ಓದಿ: ಮಲಗಿದ್ದ ನಾಯಿಯ ಮೇಲೆ ಕಾರ್ ಹತ್ತಿಸಿ ವಿಕೃತಿ ಮೆರೆದ ಭೂಪ

    ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ ಪ್ರಕರಣ ಸಂಬಂಧ ಸಾಗರಟೌನ್ ಠಾಣೆಯ ಮುಂಭಾಗ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಜಿಹಾದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ ಸಮೀರ್ ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ. ಪ್ರತಿಭಟನಾಕಾರರನ್ನ ಸಮಾಧಾನ ಪಡಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶರಣ್‌ ಪಂಪ್‌ವೆಲ್‌ ವಿರುದ್ಧ ಅಪಪ್ರಚಾರ – ಕ್ರಮಕ್ಕೆ ವಿಎಚ್‌ಪಿ ಮನವಿ

    ಶರಣ್‌ ಪಂಪ್‌ವೆಲ್‌ ವಿರುದ್ಧ ಅಪಪ್ರಚಾರ – ಕ್ರಮಕ್ಕೆ ವಿಎಚ್‌ಪಿ ಮನವಿ

    ಮಂಗಳೂರು: ವಿಶ್ವ ಹಿಂದೂ ಪರಿಷತ್‌ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಿರಾಧಾರ ಅಪಪ್ರಚಾರ ಮಾಡುತ್ತಿದ್ದಾರೆ. ಈ ರೀತಿ ಸುಳ್ಳು ಆರೋಪ ಮಾಡುವವರ ವಿರುದ್ಧ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಮಂಗಳೂರು ಘಟಕ ವತಿಯಿಂದ ಸಹಾಯಕ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

    ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮೂಲಕ ಅನಗತ್ಯ ವಿಷಯಗಳನ್ನು ಸೇರಿಸಿ  ಶರಣ್ ಪಂಪವೆಲ್ ಮೇಲೆ ನಿರಾಧಾರ ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವ ವಿಷಯ ಬಹಳ ಖೇದಕರ. ಇದರ ಹಿಂದಿರುವ ಕಿಡಿಕೇಡಿಗಳನ್ನು ಪತ್ತೆ ಹಚ್ಚಿ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ವಿಷಯ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಎಂದು ಮನವಿ ಮಾಡಿದ್ದಾರೆ.

    ವಿಭಾಗ ಭಜರಂಗದಳ ಸಂಚಾಲಕ್ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷರಾದ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ, ಜಿಲ್ಲಾ ಗೋರಕ್ಷಾ ಪ್ರಮುಖ್ ಪ್ರದೀಪ್ ಪಂಪವೆಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.