Tag: Bharat Band

  • ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್

    ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್

    ಚಿಕ್ಕಬಳ್ಳಾಪುರ: ಭಾರತ್ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಗ್ಗೆ ರೈತರು ಪ್ರತಿಭಟನೆ ಧರಣಿ ಪಂಜಿನ ಮೆರವಣಿಗೆ ನಡೆಸುತ್ತಿದ್ರೂ ಸಹ ಕೆಎಸ್‌ಆರ್‌ಟಿಸಿ ಬಸ್ಸುಗಳು ಮಾತ್ರ ಎಂದಿನಂತೆ ಸಂಚಾರ ಆರಂಭಿಸಿವೆ.

    ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಕೆಎಸ್‌ಆರ್‌ಟಿಸಿ  ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ಎಂದಿನಂತೆ ಬಂದು ತಮ್ಮ ಪ್ರಯಾಣವನ್ನು ಮಾಡುತ್ತಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಗಳಿಗೆ ಬಂದ್ ನ ಬಿಸಿ ಇಲ್ಲವಾಗಿದೆ. ಇದನ್ನೂ ಓದಿ: ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ

    ಬೆಳಗ್ಗೆ 07 ಗಂಟೆಯವರೆಗೆ ಆರಂಭವಾಗಬೇಕಾದ 18 ಮಾರ್ಗಗಳ ಬಸ್ ಸಂಚಾರ ಎಂದಿನಂತೆ ಆರಂಭವಾಗಿದೆ. ಯಾವುದೇ ವ್ಯತ್ಯಾಸವಿಲ್ಲ ಎಂದು ಕೆಎಸ್‌ಆರ್‌ಟಿಸಿ ಡಿ.ಸಿ ಹಿಮವರ್ಧನ್ ನಾಯ್ಡು ಪಬ್ಲಿಕ್ ಟಿವಿ ಗೆ ತಿಳಿಸಿದ್ದಾರೆ.

    ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಎಂದಿನಂತೆ ಸಾರ್ವಜನಿಕರಿಗೆ ಸೇವೆ ಒದಗಿಸುವ ಸಲುವಾಗಿ ಬಸ್ ಸಂಚಾರ ಆರಂಭಿಸಲಾಗಿದೆ. ಆದರೆ ಬಂದ್ ಹಿನ್ನೆಲೆ ಪ್ರಯಾಣಿಕರ ಕೊರತೆ ಕಾಣುತ್ತಿದೆ. ಬಂದ್ ಎಂಬ ಕಾರಣಕ್ಕೆ ಎಂದಿನಂತೆ ಬಸ್ ನಿಲ್ದಾಣಗಳತ್ತ ಪ್ರಯಾಣಿಕರು ಬರ್ತಿಲ್ಲ. ಆದರೂ ನಾವು ಎಂದಿನಂತೆ ಬಸ್ ಸಂಚಾರ ಆರಂಭಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ತರಕಾರಿ ಸುರಿದು ರೈತರ ಆಕ್ರೋಶ – ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ

    ಮುಂಜಾಗ್ರತ ಕ್ರಮವಾಗಿ ಬಸ್ ನಿಲ್ದಾಣದ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬಸ್ ಗಳಿಗೆ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಸಹ ಮಾಡಲಾಗಿದೆ.

  • ರೈತರು ನೀಡಿರುವ ಭಾರತ್ ಬಂದ್‍ಗೆ ಬೆಂಬಲವಿಲ್ಲ: ಶ್ರೀರಾಮುಲು

    ರೈತರು ನೀಡಿರುವ ಭಾರತ್ ಬಂದ್‍ಗೆ ಬೆಂಬಲವಿಲ್ಲ: ಶ್ರೀರಾಮುಲು

    -ಯಥಾಸ್ಥಿತಿ ಬಸ್ ಸಂಚಾರ

    ಚಿಕ್ಕೋಡಿ: ದೇಶವ್ಯಾಪಿ ರೈತರು ನೀಡಿರುವ ಭಾರತ್ ಬಂದ್‍ಗೆ ಬೆಂಬಲವಿಲ್ಲ, ಎಂದಿನಂತೆ ರಾಜ್ಯದ ಎಲ್ಲಕಡೆಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಾರಿಗೆ ಬಸ್‍ಗಳು ಸಂಚಾರ ನಡೆಸಲಿವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.

    ಚಿಕ್ಕೋಡಿ ಪಟ್ಟಣದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಶೀಲಾನ್ಯಾಸ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಬೆಳೆಯುವ ಸಲುವಾಗಿ ಕಾಂಗ್ರೆಸ್ ಪಕ್ಷ ಸ್ವಾರ್ಥದ ರಾಜಕಾರಣ ಮಾಡುತ್ತಿದ್ದು, ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ರೈತರು ನೀಡಿರುವ ಭಾರತ ಬಂದ್‍ಗೆ ಸಾರಿಗೆ ಇಲಾಖೆ ಮತ್ತು ಸರ್ಕಾರದಿಂದ ಬೆಂಬಲವಿಲ್ಲ. ರಾಜ್ಯದ ಎಲ್ಲ ಕಡೆಗೂ ಸಾರಿಗೆ ಬಸ್‍ಗಳು ಸಂಚಾರ ನಡೆಸಲಿವೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಯಥಾಸ್ಥಿತಿಯಲ್ಲಿ ಬಸ್‍ಗಳನ್ನು ಆರಂಭಿಸಲಾಗುವುದು ಎಂದರು. ಇದನ್ನೂ ಓದಿ:  ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ರೈತರ ಹೆಸರು ಇಟ್ಟುಕೊಂಡು ತಮ್ಮ ಸ್ವಾರ್ಥಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಸರ್ಕಾರ ಮತ್ತು ಸಾರಿಗೆ ಇಲಾಖೆಯಿಂದ ಯಾವುದೇ ಕಾರಣಕ್ಕೂ ರೈತರು ಕರೆ ನೀಡಿದ್ದ ಬಂದ್ ಬೆಂಬಲಕ್ಕೆ ಸಹಕಾರವಿಲ್ಲ. ಸೆಪ್ಟೆಂಬರ್ 27ರದಂದು ಸಾರ್ವಜನಿಕ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಮೋದಿ ಸರ್ಕಾರದ ರೈತರಪರವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕರು ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ದೇಶ,ರಾಜ್ಯದಲ್ಲಿ ಮಾಡುತ್ತಿದ್ದಾರೆ. ಅಸಲಿ ರೈತರ ಬಿಜೆಪಿ ಜೊತೆಗೆ ಇದ್ದಾರೆ. ಬಿಳಿ ಬಟ್ಟೆ ಹಾಕಿ ರಾಜಕಾರಣ ಮಾಡುತ್ತಿರುವ ರೈತರು ನಿಜವಾದ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

  • ಕರ್ನಾಟಕ ಬಂದ್‍ಗೆ ನೈತಿಕತೆ ಬೆಂಬಲ ಕೊಡಿ: ಕೋಡಿಹಳ್ಳಿ ಚಂದ್ರಶೇಖರ್

    ಕರ್ನಾಟಕ ಬಂದ್‍ಗೆ ನೈತಿಕತೆ ಬೆಂಬಲ ಕೊಡಿ: ಕೋಡಿಹಳ್ಳಿ ಚಂದ್ರಶೇಖರ್

    ಬೆಂಗಳೂರು: ಸೋಮವಾರ ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದೆ. ಕೇಂದ್ರ ಸರ್ಕಾರದ ಖಾಸಗೀಕರಣದ ನೀತಿ ರೈತರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಭಾರತ್ ಬಂದ್ ನಡೆಯುತ್ತಿದೆ. ಇದನ್ನೂ ಓದಿ: ಖಾದಿ ಉತ್ಪನ್ನ ಖರೀದಿಸುವಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಎಂಟಿಬಿ ನಾಗರಾಜ್ ಮನವಿ

     kodihalli chandrashekar

    ಕರ್ನಾಟಕದಲ್ಲೂ ರೈತ ನಾಯಕರು ಬಂದ್‍ಗೆ ಬೆಂಬಲ ಸೂಚಿಸಿದ್ದು, ಸೋಮವಾರ ಸಂಪೂರ್ಣ ಬಂದ್ ಮಾಡಲು ಸಜ್ಜಾಗಿದ್ದಾರೆ. ಆದರೇ ರಾಜ್ಯದಲ್ಲಿ ಸಾಕಷ್ಟು ಸಂಘ ಸಂಸ್ಥೆಗಳು ಬಂದ್‍ಗೆ ನೈತಿಕ ಬೆಂಬಲವನ್ನು ಸೂಚಿಸಿದ್ದಾರೆ. ನೈತಿಕ ಬೆಂಬಲದಿಂದ ಬಂದ್ ಯಶಸ್ವಿಯಾಗುವುದಿಲ್ಲ ಅಂತ ಮನಗಂಡ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಂಗಳೂರಿನ ನಾನಾ ಕಡೆ ಭೇಟಿ ನೀಡಿ ಬಂದ್‍ಗೆ ಬೆಂಬಲ ನೀಡಿ ಎಂದು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: 90 ವರ್ಷದ ಅಜ್ಜಿ ಕಾರ್ ಡ್ರೈವಿಂಗ್ -ಪ್ರಯತ್ನ ಶ್ಲಾಘಿಸಿದ ಸಿಎಂ

     kodihalli chandrashekar

    ಬೆಳ್ಳಂಬೆಳಗ್ಗೆಯೇ ಕೆಆರ್ ಪುರಂನ ಮಾರುಕಟ್ಟೆಗೆ ಭೇಟಿ ನೀಡಿದ ಕೋಡಿ ಹಳ್ಳಿ ಚಂದ್ರಶೇಖರ್ ಅವರು, ಅಲ್ಲಿನ ವ್ಯಾಪರಿಗಳೊಂದಿಗೆ ಸಭೆ ಮಾಡಿ ಬಂದ್ ಮಾಡುತ್ತಿರುವ ಉದ್ದೇಶವೇನು ಎಂಬುವುದರ ಬಗ್ಗೆ ತಿಳಿಸಿದ್ದಾರೆ. ಜೊತೆಗೆ ನೈತಿಕ ಬೆಂಬಲ ಆಗುವುದಿಲ್ಲ. ನೈತಿಕತೆಯ ಬೆಂಬಲ ಬೇಕು. ಎಲ್ಲರೂ ಸೋಮವಾರ ಬಂದ್‍ಗೆ ಸಹಕಾರ ನೀಡಬೇಕು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

  • ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

    ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

    ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

    ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ದೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ

    ಕಾರ್ಪೋರೇಟ್ ಕುಳಗಳಿಗಷ್ಟೇ ಅಪಾರ ಲಾಭ ತಂದು ಕೊಡುವ ಕರಾಳ ಕೃಷಿ ಕಾಯ್ದೆಗಳು ಕೇವಲ ರೈತರಿಗಷ್ಟೇ ಅಲ್ಲ, ಒಟ್ಟು ದೇಶಕ್ಕೆ ಮಾರಕವಾಗಿದೆ. ಈ ನಿಟ್ಟಿನಲ್ಲಿ, ದೇಶದ ಜೀವಾಳವಾಗಿರುವ ಕೃಷಿಕ ವರ್ಗವು ಮಳೆ ಬಿಸಿಲನ್ನು ಲೆಕ್ಕಿಸದೇ ಮುನ್ನಡೆಸುತ್ತಿರುವ ಹೋರಾಟದೊಂದಿಗೆ ಕೈಜೋಡಿಸುವುದು ಪ್ರತಿಯೋರ್ವ ನಾಗರಿಕನ ಹೊಣೆಗಾರಿಕೆಯಾಗಿರುತ್ತದೆ. ಒಕ್ಕೂಟ ಸರ್ಕಾರದ ಜನವಿರೋಧಿ, ಕೃಷಿಕ ವಿರೋಧಿ ನೀತಿಗಳ ವಿರುದ್ಧ ನಡೆಯುವ ರೈತರ ಎಲ್ಲಾ ರೀತಿಯ ಹೋರಾಟಗಳೊಂದಿಗೆ ಪಾಪ್ಯುಲರ್ ಫ್ರಂಟ್ ಐಕಮತ್ಯವನ್ನು ವ್ಯಕ್ತಪಡಿಸುತ್ತದೆ ಎಂದು ಯಾಸಿರ್ ಹಸನ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಏರಿಕೆ ಆಯ್ತು ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳು

  • ಭಾರತ್ ಬಂದ್: ಪಿಎಸ್‍ಐ ಪರೀಕ್ಷೆಗಳು ಮುಂದೂಡಿಕೆ

    ಭಾರತ್ ಬಂದ್: ಪಿಎಸ್‍ಐ ಪರೀಕ್ಷೆಗಳು ಮುಂದೂಡಿಕೆ

    ಹುಬ್ಬಳ್ಳಿ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಕರೆ ನೀಡಿದ ಹಿನ್ನಲೆಯಲ್ಲಿ ಜ.7ರಿಂದ 28ರವರೆಗೆ ನಡೆಯಬೇಕಾಗಿದ್ದ ಪಿಎಸ್‍ಐ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಪರೀಕ್ಷೆಯನ್ನ ಮುಂದೂಡಲಾಗಿದೆ.

    ಅರ್ಹ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು ದಿನಾಂಕ ಜ.07 ರಿಂದ ಜ.28 ರವರೆಗೂ ನಿಗದಿಪಡಿಸಲಾಗಿತ್ತು. ಆದರೆ ಜ.8ರಂದು ಭಾರತ ಬಂದ್ ಘೋಷಣೆಯಾಗಿರುವುದರಿಂದ ಸದರಿ ದಿನಾಂಕದಂದು ಇಟಿ/ಪಿಎಸ್‍ಟಿ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಲು ತೊಂದರೆಯುಂಟಾಗುವ ಸಾಧ್ಯತೆ ಇರುವ ಕಾರಣ ಪರೀಕ್ಷೆಯನ್ನು ಜ.13ರಂದು ನಿಗದಿಪಡಿಸಲಾಗಿದೆ. ಸದರಿ ಆದೇಶದಂತೆ ಇಟಿ/ಪಿಎಸ್‍ಟಿ ಪರೀಕ್ಷೆಗೆ ಹಾಜರಾಗುವಂತೆ ಹುಬ್ಬಳ್ಳಿ ಧಾರವಾಡ ಪೊಲೀಸ ಆಯುಕ್ತ ಆರ್.ದಿಲೀಪ್ ತಿಳಿಸಿದ್ದಾರೆ.

  • ತೈಲ ಬೆಲೆ ಏರಿಸಬೇಕು ಎಂದ ಆಪ್ ಕಾರ್ಯಕರ್ತನಿಗೆ ಮುಖಂಡನಿಂದ ಕಪಾಳಮೋಕ್ಷ – ವಿಡಿಯೋ ನೋಡಿ

    ತೈಲ ಬೆಲೆ ಏರಿಸಬೇಕು ಎಂದ ಆಪ್ ಕಾರ್ಯಕರ್ತನಿಗೆ ಮುಖಂಡನಿಂದ ಕಪಾಳಮೋಕ್ಷ – ವಿಡಿಯೋ ನೋಡಿ

    ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ವೇಳೆ ತಪ್ಪಾಗಿ ತೈಲ ಬೆಲೆ ಏರಿಸಬೇಕು ಎಂದು ಘೋಷಣೆ ಕೂಗಿದ ಎಎಪಿ ಕಾರ್ಯಕರ್ತನಿಗೆ ಮುಖಂಡರೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ.

    ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಮ್ ಆದ್ಮಿ ಪಕ್ಷದಿಂದ ತೈಲ ಬೆಲೆ ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತನೊಬ್ಬ ತೈಲ ಬೆಲೆ ಏರಿಸಲೇಬೇಕು ಎಂದು ಘೋಷಣೆಯನ್ನು ಕೂಗಿದ್ದಾರೆ. ಇದರಿಂದ ಆಕ್ರೋಶಗೊಂಡು ಅಲ್ಲೆ ಇದ್ದ ಮುಖಂಡ ಸದಾನಂದ್ ಬಾಮನೆ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

    ದೇಶದೆಲ್ಲೆಡೆ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಬೆಳಗಾವಿಯಲ್ಲೂ ಬಂದ್ ಗೆ ಕರೆ ನೀಡಿದ್ದರು. ಈ ವೇಳೆ ಕಾರ್ಯಕರ್ತ ತೈಲ ಬೆಲೆ ಇಳಿಸಬೇಕು ಎಂದು ಹೇಳುವ ಬದಲು ತೈಲ ಬೆಲೆ ಏರಿಸಬೇಕು ಎಂದು ಕೂಗಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv