Tag: bharat jodo nyay yatre

  • ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿಯುತ್ತಾ ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆ?

    ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿಯುತ್ತಾ ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆ?

    ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣೆಯ (Loksabha Elections 2024) ಕಾವು ರಂಗೇರಿದೆ. ಶುಕ್ರವಾರ ಮೊದಲ ಹಂತದ ಚುನಾವಣೆ ನಡೆಯಲಿದ್ದು, 14 ಕ್ಷೇತ್ರದಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಈ ನಡುವೆ ಕಾಂಗ್ರೆಸ್ ದೇಶದ ಜನರ ಸಮಸ್ಯೆಗಳನ್ನು ಆಲಿಸಲೆಂದು ವಿಭಿನ್ನವಾಗಿ ಯಾತ್ರೆಗಳನ್ನು ಕೈಗೊಂಡಿತ್ತು. ಈ ಯಾತ್ರೆಯಿಂದ ಕರ್ನಾಟಕದಲ್ಲಿ ಯಶಸ್ಸು ಸಿಕ್ಕಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಈ ಯಾತ್ರೆಗಳು ಕೈ ಹಿಡಿಯುತ್ತಾ ಎಂಬುದರ ಬಗ್ಗೆ ನೋಡೋಣ..

    ಹೌದು. ಕಳೆದ 10 ವರ್ಷಗಳಿಂದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಹವಾ ಇದೆ. ಹೀಗಾಗಿ ಹೇಗಾದರೂ ಮಾಡಿ ಮೋದಿಯನ್ನು ಹವಾವನ್ನು ಕಡಿಮೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ (Congress) ಪಣತೊಟ್ಟಿದೆ. ಅದಕ್ಕಾಗಿ ಸಾಕಷ್ಟು ಬಾರಿ ಮೋದಿ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಿದೆ. ಆದರೆ ಕಾಂಗ್ರೆಸ್‍ನ ಪ್ರಯತ್ನಗಳು ಕೈಗೂಡಲಿಲ್ಲ. ಬಿಜೆಪಿ ವೈಫಲ್ಯಗಳ ಬಗ್ಗೆ ಹೇಳಿಕೊಂಡರೂ ಯಾವುದೇ ಫಲಪ್ರದವಾಗಲಿಲ್ಲ. ದೇಶದಲ್ಲಿ ಮೋದಿ ಅಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಕಾಣಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಯ ಮೊರೆ ಹೋಯಿತು.

    ಅಂತೆಯೇ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಹೆಸರಿನಲ್ಲಿ ಪಾದಯಾತ್ರೆ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಮಾಡಿತ್ತು. ಇದು ಕಾಂಗ್ರೆಸ್ ಪಕ್ಷದ ಇಮೇಜ್ ವೃದ್ಧಿಗೆ ಸಹಕಾರಿಯಾಗಿದೆ. ಆದರೆ ಇದು ಮತಗಳಾಗಿ ಪರಿವರ್ತನೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

    ಪಾದಯಾತ್ರೆಯಿಂದಾಗಿ ಎಲ್ಲೋ ಮೂಲೆಯಲ್ಲಿ ಬೆಚ್ಚಗೆ ಮಲಗಿದ್ದ ಕಾರ್ಯಕರ್ತರು ಮೈಕೊಡವಿ ನಿಂತಿದ್ದು ಸಹಜ. ಯಾಕೆಂದರೆ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ (Rahul Gandhi) ಜೊತೆ ಪಕ್ಷದ ಇತರ ನಾಯಕರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಜೊತೆಗೆ ಯಾತ್ರೆಯ ವೇಳೆ ಅಲ್ಲಲ್ಲಿ ಸಂವಾದ, ಚರ್ಚೆಗಳ ಮೂಲಕ ಜನಸಾಮಾನ್ಯರ ಕಷ್ಟಗಳನ್ನು ಅರಿತುಕೊಳ್ಳಲು ಸಾಧ್ಯವಾಯಿತು. ಕಾಂಗ್ರೆಸ್‍ನಿಂದ ಇದೊಂದು ಹೊಸ ಪ್ರಯತ್ನವೇ ಸರಿ. ಇದನ್ನೂ ಓದಿ: ಲೋಸಮರದ ಹೊತ್ತಲ್ಲೇ ‘ಕೈ’ಗೆ ಶಾಕ್- ಬಿಜೆಪಿ ಸೇರಿದ ಡಾ.ಶುಶ್ರುತ್ ಗೌಡ

    ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatre) ಕರ್ನಾಟಕ್ಕೆ ಸ್ವಲ್ಪ ಮಟ್ಟಿನ ಪರಿಣಾಮ ಬೀರಿದೆ ಎಂದು ತಪ್ಪಾಗಲಾರದು. ಕೇರಳದಿಂದ ಚಾಮರಾಜನಗರ, ಮೈಸೂರು ಮಂಡ್ಯ, ತುಮಕೂರು ಚಿತ್ರದುರ್ಗ ಹಾಗೂ ಬಳ್ಳಾರಿ ಮೂಲಕ ಈ ಪಾದಯಾತ್ರೆ ಹಾದುಹೋಗಿದೆ. ಈ ಯಾತ್ರೆ ಎಲ್ಲಾ ಜಿಲ್ಲೆಗಳಿಗೆ ಹೋಗದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಒಟ್ಟುಗೂಡಿಸುವ ಮೂಲಕ ಹುರಿದುಂಬಿಸುವ ಕೆಲಸ ಮಾಡಿತ್ತು. ಅಲ್ಲದೇ ಮಂಡ್ಯದ ಪಾಂಡವಪುರದಲ್ಲಿ ಸ್ವತಃ ಸೋನಿಯಾ ಗಾಂಧಿಯವರೇ ಬಂದು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಜನರನ್ನು ಮತ್ತಷ್ಟು ಹುರಿದುಂಬಿಸಿದರು. ಒಟ್ಟಿನಲ್ಲಿ ಯಾತ್ರೆಯನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡ ಪರಿಣಾಮ 2023ರ ವಿಧಾನಸಭಾ ಚುನಾವಣೆಯಲ್ಲಿ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಯಿತು.

    ದ್ವೇಷದ ಅಂಗಡಿಯಲ್ಲಿ ಪ್ರೀತಿ ಹಂಚುವ ವ್ಯಾಖ್ಯಾನ, ಇದು ಸರ್ವಜನಾಂಗದ ಶಾಂತಿಯ ತೋಟ ಎಂದು ಬಿಜೆಪಿಯ ವಿರುದ್ಧ ಭ್ರಷ್ಟಾಚಾರ, ಕೋಮುದ್ರೋಹಿ ವಿಚಾರಗಳನ್ನು ಬಳಸಿಕೊಂಡರು. ಒಟ್ಟಿನಲ್ಲಿ 2023ರಲ್ಲಿ ಪಕ್ಷದ ಸಂಘಟನೆಗೆ ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದ್ದು ನಿಜ. ಕರ್ನಾಟಕ, ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೂಡ ಸ್ವಲ್ಪ ಮಟ್ಟಿಗೆ ಲಾಭವಾಯಿತು.

    ಉತ್ತರ ಭಾರರತದಲ್ಲಿಯೂ ಕಾರ್ಯಕರ್ತರನ್ನು ಮರುಸಂಘಟಿಸಲು ಈ ಯಾತ್ರೆ ಸಹಕಾರಿಯಾಗಿದೆ ಅಂತಾನೇ ಹೇಳಬಹುದು. ಆದರೆ ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆಗಳಲ್ಲಿ ಕೈಹಿಡಿದಿಲ್ಲ. ಇಡೀ ದೇಶದ ಮತದಾರರ ಮೇಲೆ ಪರಿಣಾಮ ಬೀರಿ ಅವುಗಳನ್ನು ಮತಗಳನ್ನಾಗಿ ಪರಿವರ್ತಿಸುವವಲ್ಲಿ ಭಾರತ್ ಜೋಡ್ ಯಾತ್ರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ. ಮಲಗಿದ್ದ ಬಹುತೇಕ ಕಾರ್ಯಕರ್ತರು ಎದ್ದು ಬೀದಿಗೆ ಬರುವಂತೆ ಮಾಡಿದ್ದು ಮಾತ್ರ ಇತಿಹಾಸ. ಇದು ಕಾಂಗ್ರೆಸ್‍ನ ಹೊಸ ಮೈಲಿಗಲ್ಲು, ಈ ಮೂಲಕ ಪಕ್ಷ ಇತಿಹಾಸ ನಿರ್ಮಿಸಿರುವುದು ಸುಳ್ಳಲ್ಲ. ಒಟ್ಟಿನಲ್ಲಿ ರಾಹುಲ್ ಗಾಂಧಿ ವರ್ಚಸ್ಸನ್ನು ಈ ಯಾತ್ರೆ ಹೆಚ್ಚಿಸಿದೆ ಎಂಬ ವಿಶ್ಲೇಷಣೆ ಬಂದಿದೆ.

    ಎರಡೇ ಪಾದಯಾತ್ರೆ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ (Bharat Jodo Nyay Yatre) ಈಶಾನ್ಯ ರಾಜ್ಯಗಳಲ್ಲಿ ಪ್ರತಿರೋಧಗಳು ವ್ಯಕ್ತವಾಯಿತು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸಹಕಾರ ದೊರೆಯದೆ ಪಕ್ಷಕ್ಕೆ ಸ್ವಲ್ಪ ಇರಿಸುಮುರುಸಾಯಿತು. ಆದರೆ ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ನಿರಿಕ್ಷಿತ ಬೆಂಬಲ ದೊರೆಯದಿದ್ದರೂ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಬೆಂಬಲವಾಗಿ ನಿಂತಿದ್ದು, ಸ್ವಲ್ಪ ನಿರಾಳವಾಗುವಂತೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಸಿಕ್ಕಿದಂತಾಗಿದೆ.

    ಬಿಹಾರದಲ್ಲಿ ಆರ್ ಜೆಡಿ, ಯುಪಿಯಲ್ಲಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ (Akhilesh Yadav) ಬೆಂಬಲ ಸ್ವಲ್ಪ ಮಟ್ಟಿಗೆ ಸಹಕಾರಿಯಾಯಿತು. ಆದರೆ ಗುಜರಾತ್ ಸೇರಿದಂತೆ ಹಲವೆಡೆ ನಿರೀಕ್ಷಿತ ಬೆಂಬಲ ಪಡೆಯುವಲ್ಲಿ ವಿಫಲವಾಯಿತು. ಹಲವಾರು ವಿಚಾರಗಳು ನ್ಯಾಯಯಾತ್ರೆಯ ಮೂಲಕ ಬಿಂಬಿಸಲು ಪ್ರಯತ್ನಿಸಿದರೂ ನಿರೀಕ್ಷಿತ ಜನಬೆಂಬಲ ಪಡೆಯುವಲ್ಲಿ ಕಾಂಗ್ರೆಸ್‍ಗೆ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಲಿಲ್ಲ.

    ಒಟ್ಟಿನಲ್ಲಿ ಲೋಕಸಭಾ ಚುನಾವಣೆಯ ಪ್ರಣಾಳಿಕೆ ರಚಿಸಲು ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯ ಅನುಭವಗಳು ನೆರವಾಗಿವೆ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ. ಪಾದಯಾತ್ರೆಯ ವೇಳೆ ಜನರ ಕೊಟ್ಟ ಸಲಹೆಗಳನ್ನೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿದೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಕೈ ಹಿಡಿದಿರುವ ಕಾಂಗ್ರೆಸ್ ಯಾತ್ರೆ ಇಡೀ ದೇಶದಲ್ಲಿ ಕೈ ಹಿಡಿಯುತ್ತಾ ಎಂಬುದನ್ನು ಕಾದುನೋಡಬೇಕಿದೆ.

  • ಇವಿಎಂ, ಇಡಿ, ಸಿಬಿಐ, ಐಟಿ ಇಲಾಖೆಯಲ್ಲಿ ರಾಜನ ಆತ್ಮ ನೆಲೆಸಿದೆ- ಮೋದಿ ವಿರುದ್ಧ ರಾಗಾ ವಾಗ್ದಾಳಿ

    ಇವಿಎಂ, ಇಡಿ, ಸಿಬಿಐ, ಐಟಿ ಇಲಾಖೆಯಲ್ಲಿ ರಾಜನ ಆತ್ಮ ನೆಲೆಸಿದೆ- ಮೋದಿ ವಿರುದ್ಧ ರಾಗಾ ವಾಗ್ದಾಳಿ

    ಮುಂಬೈ: ಭಾರತ್ ಜೋಡೋ ನ್ಯಾಯ್ ಯಾತ್ರೆಯ  (Bharat Jodo Nyay Yatre) ಸಮಾರೋಪದಲ್ಲಿ ಎನ್ ಡಿಎ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು.

    ರಾಜಾ ಅವರ ಆತ್ಮ ಇವಿಎಂ, ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳಲ್ಲಿ ನೆಲೆಸಿದೆ. ಈ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಬೆದರಿಸಲಾಗುತ್ತಿದೆ. ಒಂದೋ ನಮ್ಮೊಂದಿಗೆ ಬನ್ನಿ ಇಲ್ಲವೇ ಜೈಲಿಗೆ ಹೋಗಲು ಸಿದ್ಧರಾಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ರಾಗಾ ಕಿಡಿಕಾರಿದರು.

    ಪ್ರಧಾನಿ ನರೇಂದ್ರ ಮೋದಿ (Narendra Modi) ಕೇವಲ ಮುಖವಾಡ. ಬಾಲಿವುಡ್ ನಟರಿಗೆ ಪಾತ್ರ ನೀಡಿ ಅದಕ್ಕೆ ತಕ್ಕಂತೆ ನಟಿಸಬೇಕು. ಅದೇ ರೀತಿ ಮೋದಿಗೆ ಪಾತ್ರ ಸಿಕ್ಕಿದೆ. ಪ್ರಧಾನಿ ಮೋದಿ 56 ಇಂಚಿನ ಎದೆಯ ವ್ಯಕ್ತಿಯಲ್ಲ, ಪೊಳ್ಳು ವ್ಯಕ್ತಿ. ಇಡಿ ಮತ್ತು ಇತರ ತನಿಖಾ ಸಂಸ್ಥೆಗಳ ಭಯದಿಂದ ಜನರು ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಗಾಂಧಿ ಹೇಳಿದರು.

    ಕಾಂಗ್ರೆಸ್ ತೊರೆಯುವ ಮೊದಲು ಸೋನಿಯಾ ಗಾಂಧಿಗೆ (Sonia Gandhi) ಕರೆ ಮಾಡಿ, ಶಕ್ತಿಯ ವಿರುದ್ಧ ಹೋರಾಡಲು ನನಗೆ ಧೈರ್ಯವಿಲ್ಲ ಎಂದು ಅಳುತ್ತಾ ಹೇಳಿದರು. ನನಗೆ ಜೈಲಿಗೆ ಹೋಗಲು ಇಷ್ಟವಿಲ್ಲ ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಬೇರ್ಪಡುತ್ತಿದ್ದೇನೆ ಅಶೋಕ್ ಚವಾಣ್ ಹೆಸರು ಹೇಳದೇ ರಾಹುಲ್‌ ಉದಾಹರಣೆಯೊಂದನ್ನು ನೀಡಿದರು.

    ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ಸೇರಿದಂತೆ ದೇಶದ ಸಂವಹನ ವ್ಯವಸ್ಥೆಯು ದೇಶದ ಕೈಯಲ್ಲಿಲ್ಲದ ಕಾರಣ ನಾವು ಈ ಯಾತ್ರೆಯನ್ನು ಕೈಗೊಳ್ಳಬೇಕಾಯಿತು. ನಿರುದ್ಯೋಗ, ಹಿಂಸಾಚಾರ, ಹಣದುಬ್ಬರ, ರೈತರ ಸಮಸ್ಯೆಗಳಂತಹ ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳು ಅಲ್ಲ. ದೇಶದ ಗಮನ ಸೆಳೆಯಲು ನಾವು 4,000 ಕಿ.ಮೀ ನಡೆಯಬೇಕಿತ್ತು ಎಂದು ಗಾಂಧಿ ಹೇಳಿದರು.

    ಈ ಮೆಗಾ ರ್ಯಾಲಿಯಲ್ಲಿ ಭಾರತ ಮೈತ್ರಿಕೂಟದ ಎಲ್ಲಾ ನಾಯಕರು ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಈ ವೇಳೆ ಎನ್‌ಸಿಪಿ ನಾಯಕ ಶರದ್ ಪವಾರ್, ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಎಎಪಿ ನಾಯಕ ಸೌರಭ್ ಭಾರದ್ವಾಜ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

  • ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ 30 ಲಕ್ಷ ಸರ್ಕಾರಿ ಉದ್ಯೋಗ- ಯುವಕರಿಗೆ ರಾಗಾ ಗ್ಯಾರಂಟಿ

    ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ 30 ಲಕ್ಷ ಸರ್ಕಾರಿ ಉದ್ಯೋಗ- ಯುವಕರಿಗೆ ರಾಗಾ ಗ್ಯಾರಂಟಿ

    ಜೈಪುರ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಘೋಷಿಸಿದ್ದಾರೆ.

    ರಾಜಸ್ಥಾನದ ಬನ್ಸ್ವಾರಾದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆ (Bharat Jodo Nyay Yatre) ಅಂಗವಾಗಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯುವಕರು, ಬಡವರು ಮತ್ತು ಇತರ ವರ್ಗಗಳಿಗೆ ಪಕ್ಷದ ಉದ್ದೇಶಿತ ಕಾರ್ಯಕ್ರಮಗಳ ಬಗ್ಗೆ ಉಲ್ಲೇಖಿಸಿದರು.

    ಕಾಂಗ್ರೆಸ್ ಪಕ್ಷವು (Congress Party) ಯುವಕರಿಗಾಗಿ ಏನು ಮಾಡಲು ಹೊರಟಿದೆ ಅಂದರೆ ಮೊದಲನೆಯದಾಗಿ, ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ತುಂಬಿಲ್ಲ. ಬಿಜೆಪಿಯವರು ಅದನ್ನೂ ತುಂಬುವುದಿಲ್ಲ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಮಾಡುವ ಮೊದಲ ಕೆಲಸವೆಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವುದಾಗಿದೆ ಎಂದರು.

    ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಘೋಷಿಸಿದರು. ಈ ಶಿಷ್ಯವೇತನದ ಅಡಿಯಲ್ಲಿ ಯುವಕರಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ತರಬೇತಿ ಸಮಯದಲ್ಲಿ ರೂ.1 ಲಕ್ಷ ಸ್ಟೈಫಂಡ್ ನೀಡಲಾಗುವುದು ಎಂದರು. ಇದನ್ನೂ ಓದಿ: ನರೇಂದ್ರ ಮೋದಿ ಮುಂದಿನ 10 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ಮಾಡ್ತಾರೆ: ಅಮಿತ್‌ ಶಾ

    ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ‘ಯುವ ರೋಶನಿ’ ಅಡಿಯಲ್ಲಿ ಜಿಲ್ಲೆಗಳಲ್ಲಿ ಸ್ಟಾರ್ಟ್‌ಅಪ್‌ ಆರಂಭಿಸುವುದಾಗಿ ಭರವಸೆ ನೀಡಿದರು. ಸಣ್ಣ ಉದ್ಯಮಗಳನ್ನು ಪ್ರಾರಂಭಿಸಲು ಬಯಸುವ ಯುವಕರನ್ನು ಬೆಂಬಲಿಸಲು ನಾವು 5000 ಕೋಟಿ ರೂಪಾಯಿಗಳ ಆರಂಭಿಕ ನಿಧಿಯನ್ನು ರಚಿಸುತ್ತೇವೆ. ಈ ಸ್ಟಾರ್ಟಪ್ ದೇಶದ ಪ್ರತಿಯೊಂದು ಜಿಲ್ಲೆಗೂ ತಲುಪಲಿದೆ. ಜೊತೆಗೆ ಪೇಪರ್ ಸೋರಿಕೆ ಬಗ್ಗೆ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಪೇಪರ್ ಸೋರಿಕೆ ಪ್ರಕರಣಗಳನ್ನು ತಡೆಯಲು ಕಾಂಗ್ರೆಸ್ ಕಾನೂನು ತರಲಿದೆ ಎಂದು ರಾಹುಲ್ ಹೇಳಿದರು.

    ರೈತರಿಗೂ ಭರವಸೆ: ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾತನಾಡಿ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಯನ್ನು ನೀಡುತ್ತದೆ. ನೀರು ಮತ್ತು ಅರಣ್ಯಕ್ಕಾಗಿ ಆದಿವಾಸಿಗಳ ಹೋರಾಟ ನಮ್ಮ ಹೋರಾಟವಾಗಿದೆ. ನಿಮ್ಮೊಂದಿಗೆ ನಾವಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಬಡವರ ಪರ ಕಾಳಜಿ ವಹಿಸುವ ಕೆಲಸ ಮಾಡಿದೆ ಎಂದರು.

  • ನೀವು ಜೈಶ್ರೀರಾಮ್‌ ಜಪಿಸುತ್ತಾ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ಬಯಸುತ್ತಾರೆ: ರಾಗಾ ಟೀಕೆ

    ನೀವು ಜೈಶ್ರೀರಾಮ್‌ ಜಪಿಸುತ್ತಾ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ಬಯಸುತ್ತಾರೆ: ರಾಗಾ ಟೀಕೆ

    ಭೋಪಾಲ್:‌ ನೀವು ಜೈಶ್ರೀರಾಮ್‌ ಜಪಿಸುತ್ತಾ ಹಸಿವಿನಿಂದ ಸಾಯಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಬಯಸುತ್ತಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಟೀಕಿಸಿದ್ದಾರೆ.

    ಜೈ ಶ್ರೀರಾಮ್ ಕೂಗಿದ ಬಿಜೆಪಿ ಕಾರ್ಯಕರ್ತರು: ಇಂದು ಮಧ್ಯಪ್ರದೇಶದ (Madhya Pradesh) ಸಾರಂಗ್‌ಪುರದಿಂದ ಪುನರಾರಂಭಗೊಂಡ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ (Bharat Jodo Nyay Yatre) ಮಾತನಾಡುತ್ತಾ, ದೇಶದಲ್ಲಿ ನಿರುದ್ಯೋಗದ ಬಗ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದಾರೆ. ರಾಹುಲ್‌ ಗಾಂಧಿಯನ್ನು ಬಿಜೆಪಿ ಕಾರ್ಯಕರ್ತರು ಮೋದಿ.. ಮೋದಿ.. ಮತ್ತು ಜೈ ಶ್ರೀರಾಮ್ (Jai Shree Ram) ಘೋಷಣೆಗಳನ್ನು ಕೂಗುವ ಮೂಲಕ ಸ್ವಾಗತಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕನಿಗೆ ಆಲೂಗೆಡ್ಡೆಯನ್ನು ನೀಡಿ, ಬದಲಾಗಿ ಚಿನ್ನ ನೀಡುವಂತೆ ಕೇಳಿಕೊಂಡ ಪ್ರಸಂಗವೂ ನಡೆಯಿತು.

    ಬಿಜೆಪಿ ಕಾರ್ಯಕರ್ತರ ಘೋಷಣೆಗಳನ್ನು ಸ್ವಾಗತಿಸಿದ ರಾಹುಲ್ (Rahul Gandhi), ನಿರುದ್ಯೋಗದ ವಿರುದ್ಧ ಪ್ರಧಾನಿಯನ್ನು ಟೀಕಿಸಿದರು. ಯುವ ನಿರುದ್ಯೋಗಿಗಳು ಸೋಶಿಯಲ್‌ ಮೀಡಿಯಾದಲ್ಲಿ ದಿನವಿಡೀ ರೀಲ್‌ಗಳನ್ನು ನೋಡುತ್ತಿರುತ್ತಾರೆ ಎಂದು ಹೇಳಿದರು. ನೀವು ದಿನವಿಡೀ ನಿಮ್ಮ ಫೋನ್‌ಗಳನ್ನು ನೋಡಬೇಕು, ಜೈ ಶ್ರೀ ರಾಮ್ ಎಂದು ಜಪಿಸಬೇಕು. ಜೊತೆಗೆ ಹಸಿವಿನಿಂದ ಸಾಯಬೇಕು ಎಂದು ಪ್ರಧಾನಿ ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

    ಇದೇ ವೇಳೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಗ್ನಿವೀರ್ ಯೋಜನೆ ಕುರಿತು ಪ್ರತಿಕ್ರಿಯಿಸಿ, ಹಿಂದೆ ಸಶಸ್ತ್ರ ಪಡೆಗಳು ಯುವಕರಿಗೆ ಒಂದೆರಡು ಗ್ಯಾರಂಟಿಗಳನ್ನು ನೀಡುತ್ತಿದ್ದವು. ಮೊದಲನೆಯದಾಗಿ ಯುವಕರಿಗೆ ಪಿಂಚಣಿ ಹಾಗೂ ಎರಡನೆಯದಾಗಿ ಒಂದು ವೇಳೆ ಪ್ರಾಣ ಕಳೆದುಕೊಂಡರೂ ಗೌರವ ಸಿಗುತ್ತಿತ್ತು. ಆದರೆ ಈಗ ಅಗ್ನಿವೀರ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಅಡಿಯಲ್ಲಿ ನಾಲ್ಕು ಜನರನ್ನು ಸೇರ್ಪಡೆಗೊಳಿಸಲಾಗುವುದು. ಈ ನಾಲ್ವರಲ್ಲಿ ಮೂವರು ರಿಲೀವ್ ಆಗುತ್ತಾರೆ. ಈ ಮೂರು ಜನರು SC, ST ಮತ್ತು OBC ಆಗಿರುತ್ತಾರೆ ಎಂದು ಅವರು ಹೇಳಿದರು.

    ಮೂರು ದಿನಗಳಲ್ಲಿ ಇದು ಎರಡನೇ ಬಾರಿಗೆ ರಾಹುಲ್ ಗಾಂಧಿ ನಿರುದ್ಯೋಗದ ಬಗ್ಗೆ ಪ್ರಧಾನಿಯನ್ನು ಟೀಕಿಸಿದ್ದಾರೆ. ಭಾನುವಾರ ಗ್ವಾಲಿಯರ್‌ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಗಾ, ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತದಲ್ಲಿ ನಿರುದ್ಯೋಗ ದುಪ್ಪಟ್ಟು ಇದೆ. ದೇಶದಲ್ಲಿ ನಿರುದ್ಯೋಗಿ ಯುವಕರ ಸಂಖ್ಯೆ ಬಾಂಗ್ಲಾದೇಶ ಮತ್ತು ಭೂತಾನ್‌ಗಿಂತಲೂ ಜಾಸ್ತಿ ಇದೆ. ಭಾರತದ ನಿರುದ್ಯೋಗವು ಕಳೆದ 40 ವರ್ಷಗಳಲ್ಲಿ ಅತ್ಯಧಿಕವಾಗಿದೆ ಎಂದು ಅವರು ಹೇಳಿದರು.

  • ರಾಹುಲ್‌ ಗಾಂಧಿ ಮೇಲೆ‌ ಅಸ್ಸಾಂನಲ್ಲಿ ಎಫ್‌ಐಆರ್- ಅಮಿತ್‌ ಶಾಗೆ ಖರ್ಗೆ ಪತ್ರ

    ರಾಹುಲ್‌ ಗಾಂಧಿ ಮೇಲೆ‌ ಅಸ್ಸಾಂನಲ್ಲಿ ಎಫ್‌ಐಆರ್- ಅಮಿತ್‌ ಶಾಗೆ ಖರ್ಗೆ ಪತ್ರ

    ನವದೆಹಲಿ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ನ್ಯಾಯ್ ಯಾತ್ರೆ (Bharat Jodo Nyay Yatre) ವೇಳೆ ಅಸ್ಸಾಂನಲ್ಲಿ ಉಂಟಾಗಿರುವ ಗದ್ದಲದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ಯಾತ್ರೆ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು, ದಾಳಿಕೋರರಿಗೆ ಪೊಲೀಸ್ ರಕ್ಷಣೆ ಸಿಗುತ್ತದೆ. ಹೀಗಾಗಿ ನೀವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಎಂದು ಪತ್ರದಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರು (Mallikarjun Kharge) ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲೇನಿದೆ..?: ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಅಗತ್ಯ ಭದ್ರತೆ ನೀಡುತ್ತಿಲ್ಲ. ಬಿಜೆಪಿ ಕಾರ್ಯಕರ್ತರು (BJP Activist) ಯಾತ್ರೆಯ ಮೇಲೆ ದಾಳಿ ಮಾಡುತ್ತಿದ್ದಾರೆ. ಅಸ್ಸಾಂ ಪೊಲೀಸರು ದಾಳಿಕೋರರಿಗೆ ರಕ್ಷಣೆ ನೀಡುತ್ತಿದ್ದಾರೆ. ಅಲ್ಲದೆ ಜನವರಿ 21 ರಂದು ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದ ಯಾತ್ರೆಯ ಮೇಲೆ ದಾಳಿ ನಡೆಸಲಾಯಿತು. ಸ್ಥಳೀಯ ಎಸ್ಪಿಯವರು ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ನ ಸೋಶಿಯಲ್ ಮೀಡಿಯಾ ತಂಡದ ಮೇಲೆ ದಾಳಿ ಮಾಡಿದರು. ಅಲ್ಲದೇ ನಮ್ಮ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌ (Jairam Ramesh) ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಅವರ ಕಾರಿನ ಮೇಲೆ ದಾಳಿ ಮಾಡಲಾಗಿದೆ ಎಂದು ಎರಡು ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತರು ಅಸ್ಸಾಂ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೂಪೇನ್ ಬೋರಾ ಅವರ ಮೇಲೆಯೂ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಅವರು ಗಾಯಗೊಂಡರು. ಮರುದಿನ ಜನವರಿ 22 ರಂದು ನಾಗಾಂವ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ಬೆಂಗಾವಲು ಪಡೆಯನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆಯೂ ಅಸ್ಸಾಂ ಪೊಲೀಸರು ಬಿಜೆಪಿ ಕಾರ್ಯಕರ್ತರ ರಕ್ಷಣೆಯನ್ನು ಮುಂದುವರಿಸಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಜ.31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅವಧಿ ಅಂತ್ಯ

    ಭದ್ರತೆ ಒದಗಿಸಿ: ಈ ವಿಚಾರದಲ್ಲಿ ಗೃಹ ಸಚಿವ ಅಮಿತ್‌ ಶಾ (Amitshah) ಅವರು ಕೂಡಲೇ ಮಧ್ಯ ಪ್ರವೇಶಿಸಿ ಭದ್ರತೆ ಒದಗಿಸಬೇಕು ಎಂದು ಖರ್ಗೆ ಮನವಿ ಮಾಡಿದರು. ನ್ಯಾಯ್‌ ಯಾತ್ರೆಯಲ್ಲಿ ನಡೆದ ಹಲ್ಲೆ ಮತ್ತು ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ದಾಳಿಕೋರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ, ಕ್ರಮವೂ ಕೈಗೊಂಡಿಲ್ಲ. ನಾವು ಯಾತ್ರೆಯನ್ನು ಮುಂದುವರಿಸುತ್ತಿದ್ದೇವೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್‌ನ ಯಾವುದೇ ಸದಸ್ಯರಿಗೆ ನೋವಾಗದಂತೆ ನೀವು (ಅಮಿತ್‌ ಶಾ) ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಜೊತೆಗೆ ಅಸ್ಸಾಂ ಸಿಎಂ ಹಾಗೂ ಪೊಲೀಸ್‌ ನಿರ್ದೇಶಕರಾಗಿ ಅಹಿತರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿರ್ದೇಶನ ನೀಡುವಂತೆ ಕೇಳಿಕೊಂಡಿದ್ದಾರೆ.

    ಜನವರಿ 23 ರಂದು ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಗುವಾಹಟಿಗೆ ಹೋಗದಂತೆ ತಡೆಯಲಾಯಿತು. ಆದರೂ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಬ್ಯಾರಿಕೇಡ್ ಅನ್ನು ಮುರಿದಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಸಿಎಂ ಆದೇಶದ ಮೇರೆಗೆ ಅಸ್ಸಾಂ ಪೊಲೀಸರು ಸರ್ಕಾರಿ ಆಸ್ತಿ ಹಾನಿ ಮತ್ತು ಜನರನ್ನು ಪ್ರಚೋದಿಸಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

  • 60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ

    60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ

    ಕೋಲಾರ : ಈ ದೇಶಕ್ಕೆ 60 ವರ್ಷಗಳಿಂದ ಕಾಂಗ್ರೆಸ್ ನವರು (Congress) ಅನ್ಯಾಯ ಮಾಡಿದ್ದಾರೆ. ಈಗ ನ್ಯಾಯ ಕೇಳಲು ಯಾತ್ರೆ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ (MP Muniswamy) ಕಾಂಗ್ರೆಸ್ ನ್ಯಾಯ ಯಾತ್ರೆ ಕುರಿತು ವ್ಯಂಗ್ಯವಾಡಿದ್ದಾರೆ.

    ಈ ಸಂಬಂಧ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಅನ್ಯಾಯ ಮಾಡಿಕೊಂಡಿದ್ದ ಇವರು ಜನರ ಬಳಿ ಹೋದಷ್ಟು ಇವರು ಮಾಡಿರುವ ಅನ್ಯಾಯವನ್ನ ಜನರೇ ಬಿಚ್ಚಿ ಹೇಳುತ್ತಾರೆ. ಅಲ್ಲದೆ ಇವರಿಗೆ ನ್ಯಾಯ ಎಂದು ಹೇಳುವುದಕ್ಕೆ ಅರ್ಹತೆ ಇಲ್ಲ. ಹೀಗಿರುವಾಗ ಇವರ ನ್ಯಾಯ ಏನು ಎಂದು ಪ್ರಶ್ನೆ ಮಾಡಿದ್ರು.

    ಜಮ್ಮು-ಕಾಶ್ಮೀರ, ಚೀನಾ ಸೇರಿದಂತೆ ಎಮೆರ್ಜೆನ್ಸಿ ಸಮಯದಲ್ಲಿ ಏನು ಮಾಡಿದ್ದೀರಿ ಎಂದು ಜನರಿಗೆ ತಿಳಿದಿದೆ. ಜೊತೆಗೆ ಅಯೋಧ್ಯೆ ರಾಮಮಂದಿರ (Ayodhya Ram Mandir) ಕಟ್ಟುವ ವಿಚಾರದಲ್ಲಿ ಡಿ.ಸಿ ಅವರನ್ನ ಹೇಗೆ ನಡೆಸಿಕೊಂಡು ಎತ್ತಂಗಡಿ ಮಾಡಿದ್ರು ಎಂದು ಮರುಪ್ರಶ್ನೆ ಹಾಕಿದರು.

    ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್, ಶ್ಯಾಮ್ ಪ್ರಸಾದ್ ಮುಖರ್ಜಿ ಇವರ ಹತ್ಯೆ ಯಾರು ಮಾಡಿದ್ದಾರೆಂದು ಗೊತ್ತಿದೆ. ಇದೆಲ್ಲವನ್ನ ನೋಡಿದಾಗ ಈ ದೇಶಕ್ಕೆ ಕಾಂಗ್ರೆಸ್ ನವರು ಎಷ್ಟು ಅನ್ಯಾಯ ಮಾಡಿದ್ದಾರೆಂದು ತಿಳಿಯುತ್ತದೆ. ನೀವು ಎಷ್ಟೇ ಪಾದ ಯಾತ್ರೆಗಳನ್ನ ಮಾಡಿದ್ರು ನಿಮ್ಮ ಪಾಪದ ಕೊಡ ತುಂಬಿರುವ ಪರಿಣಾಮ ಏನೇ ಮಾಡಿದ್ರೂ ಕಳೆದ ಪಂಚ ರಾಜ್ಯ ಚುನಾವಣೆಗಿಂತಲೂ ಇನ್ನೂ ನೆಲ ಕಚ್ಚುತ್ತೀರಿ ಎಂದು ವಾಗ್ದಾಳಿ ನಡೆಸಿದ್ರು.

    ಭಾರತ ದೇಶದಲ್ಲಿ ಎಲ್ಲಾ ಜಾತಿಯ ಜನರು ಕಾಂಗ್ರೆಸ್‌ನ ತಿರಸ್ಕಾರ ಮಾಡಿದ್ದಾರೆ. ಕರ್ನಾಟದಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮೂರೇ ತಿಂಗಳಲ್ಲಿ ಜನ ವಿರೋಧಿ ಸರ್ಕಾರ ಎನಿಸಿಕೊಂಡಿದೆ. ಎಲ್ಲೇ ಹೋದರೂ ಕಾಂಗ್ರೆಸ್ ಪಕ್ಷಕ್ಕೆ ಜನರು ಛೀ.. ಥೂ ಎಂದು ಚೀಮಾರಿ ಹಾಕುತ್ತಿದ್ದಾರೆ ಎಂದು ಹೇಳಿದ್ರು.