Tag: Bharat Jodo Padayatra

  • ಭಾರತ್ ಜೋಡೋ ಪಾದಯಾತ್ರೆ – ಕೈ-ಕೈ ಹಿಡಿದು ಹೆಜ್ಜೆ ಹಾಕಿದ ರಾಹುಲ್, ರಮ್ಯಾ

    ಭಾರತ್ ಜೋಡೋ ಪಾದಯಾತ್ರೆ – ಕೈ-ಕೈ ಹಿಡಿದು ಹೆಜ್ಜೆ ಹಾಕಿದ ರಾಹುಲ್, ರಮ್ಯಾ

    ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಭರದಿಂದ ಸಾಗುತ್ತಿದೆ. ಈ ನಡುವೆ ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ರಮ್ಯಾ(Ramya), ರಾಹುಲ್ ಗಾಂಧಿ (Rahul Gandhi) ಕೈ ಹಿಡಿದುಕೊಂಡು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ.

    ಕರ್ನಾಟಕದಲ್ಲಿ ಕೊನೆಯ ಹಂತ ತಲುಪಿರುವ ಭಾರತ್ ಜೋಡೋ ಪಾದಯಾತ್ರೆ (Bharat Jodo Padayatra) ಇಂದು ರಾಯಚೂರು (Raichuru) ಪ್ರವೇಶಿಸಿದೆ. ಇಂದು ಊಟದ ನಂತರ ಯಾತ್ರೆ ಪ್ರಾರಂಭಿಸಿದ ರಾಹುಲ್ ಗಾಂಧಿಯವರಿಗೆ ಮಾಜಿ ಸಂಸದೆ, ನಟಿ ರಮ್ಯಾ ಸಾಥ್ ನೀಡಿದರು. ವಿಶೇಷವೆಂದರೆ ಪಾದಯಾತ್ರೆಯಲ್ಲಿ ರಾಹುಲ್ ಹಾಗೂ ರಮ್ಯಾ ಮಾತನಾಡುತ್ತಾ ಕೈ, ಕೈ ಹಿಡಿದು ಜೊತೆಯಾಗಿ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ದಶಪಥ ಹೆದ್ದಾರಿ ಅವೈಜ್ಞಾನಿಕ ಗಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು

    ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು. ಅಲ್ಲದೇ ಯಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಕನ್ಯಾಕುಮಾರಿಯಿಂದ ಭಾರತ್ ಜೋಡೋ ಪಾದಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಅವರು ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಿದ್ದಾರೆ. ಕರ್ನಾಟಕದಿಂದ ಇನ್ನೂ ಕಾಶ್ಮೀರದವರೆಗೂ ಈ ಯಾತ್ರೆ ಮುಂದುವರಿಯಲಿದೆ. ಇದನ್ನೂ ಓದಿ: ಬುದ್ಧಿವಂತರು ಯಾವಾಗಲು ಏಕಾಂಗಿಯಾಗಿಯೇ ಕೆಲಸ ಮಾಡ್ತಾರೆ.. ಯಾಕೆ ಗೊತ್ತಾ?

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಗಾಂಧಿಯಿಂದ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ: ಬಿ.ವೈ.ವಿಜಯೇಂದ್ರ

    ರಾಹುಲ್ ಗಾಂಧಿಯಿಂದ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ: ಬಿ.ವೈ.ವಿಜಯೇಂದ್ರ

    ಬೀದರ್ : ಈ ದೇಶದಲ್ಲಿ ಕಾಂಗ್ರೆಸ್ (Congress) ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಇಂದು ರಾಹುಲ್ ಗಾಂಧಿ (Rahul Gandhi) ಮೂಲಕ ಮತ್ತೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆಯ (Bharat Jodo Padayatra) ವಿರುದ್ಧ ಬಿ.ವೈ. ವಿಜಯೇಂದ್ರ (B.Y. Vijayendra) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಬೀದರ್ ಜಿಲ್ಲೆಯ ಚಿಟ್ಟಗುಪ್ಪಾ ತಾಲೂಕಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತ ಮಾಡಿದ ಕಾಂಗ್ರೆಸ್‍ಗೆ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಆಗಬೇಕು ಎಂದು ಹುಡುಕಲು ಆಗುತ್ತಿಲ್ಲ. ಹೀಗಾಗಿ ಅವರಿಂದ ಭಾರತೀಯ ಜನತಾ ಪಾರ್ಟಿ (BJP) ಹೆದರಿಕೊಳ್ಳುವ ಪ್ರಶ್ನೆಯೇ ಇಲ್ಲ. ಅವರು ಏನೇ ಮಾಡಿದರೂ ಜನರು ಕಾಂಗ್ರೆಸ್ ಪಕ್ಷವನ್ನು ಮರೆತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸೇರಿದಂತೆ ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಪಿಎಫ್‍ಐಯನ್ನು 3 ವರ್ಷಗಳ ಹಿಂದೆಯೇ ಬ್ಯಾನ್ ಮಾಡಬಹುದಿತ್ತು ಮಾಡಿಲ್ಲ, ಈಗ ಚುನಾವಣೆ ಗಿಮಿಕ್: ಪ್ರಜ್ವಲ್ ರೇವಣ್ಣ

    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಹಾಗೂ ಡಿಕೆಶಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ. ಇದೇ ವೇಳೆ ಪೇ ಸಿಎಂ (PAY cm) ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಅದೇ ತಿರುಗು ಬಾಣವಾಗುತ್ತದೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಮನೆದೇವತೆ ಸವದತ್ತಿ ಶ್ರೀರೇಣುಕಾ ಯಲ್ಲಮ್ಮ ದರ್ಶನ ಪಡೆದ ಸಿಎಂ ಧರ್ಮಪತ್ನಿ!

    Live Tv
    [brid partner=56869869 player=32851 video=960834 autoplay=true]