ತುಮಕೂರು: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ದಣಿದಿದ್ದ ರಾಹುಲ್ ಗಾಂಧಿಗೆ (Rahul Gandhi) ಸೌತೆಕಾಯಿ (Cucumber) ನೀಡಿ ದಣಿವಾರಿಸಿದ್ದ ಅಜ್ಜಿಯೊಬ್ಬರು (Old Woman) ನಿಧನವಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಚಿಕ್ಕನಾಯಕನಹಳ್ಳಿಯ (Chikkanayakanahalli) ಶಾರದಮ್ಮ (78) ನಿಧನರಾದ ಅಜ್ಜಿ. 2022ರ ಅಕ್ಟೋಬರ್‌ನಲ್ಲಿ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಭಾರತ್ ಜೋಡೋ ಯಾತ್ರೆ ಹೊರಟಿದ್ದ ಸಂದರ್ಭ ರಾಹುಲ್ ಗಾಂಧಿಗೆ ಫುಟ್‌ಪಾತ್ ವ್ಯಾಪಾರಿಯಾಗಿದ್ದ ಈ ಅಜ್ಜಿ ಸೌತೆಕಾಯಿಯನ್ನು ನೀಡಿ ದಣಿವಾರಿಸಿದ್ದರು. ಇದನ್ನೂ ಓದಿ: ಸುರಂಗದೊಳಗೆ ಸಿಲುಕಿ 10 ದಿನ – ಪೈಪ್ ಮೂಲಕ ಕ್ಯಾಮೆರಾ ಕಳುಹಿಸಿ ಕಾರ್ಮಿಕರ ಮೊದಲ ವೀಡಿಯೋ ಸೆರೆ
ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ಬಳಿಕ, ಲೋಕಸಭಾ ಚುನಾವಣೆಗೂ (Lok Sabha Elections) ಮುನ್ನವೇ ಕಾಂಗ್ರೆಸ್ 2ನೇ ಹಂತದ ಭಾರತ್ ಜೋಡೋ ಯಾತ್ರೆ (Bharat Jodo Yatra) ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಡಿಸೆಂಬರ್ ತಿಂಗಳಿಂದ ಫೆಬ್ರವರಿ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲೇ 2ನೇ ಹಂತದ ಭಾರತ್ ಜೋಡೊ ಮುಂದುವರಿಯಲಿದ್ದು, ಹೈಬ್ರಿಡ್ ಮೋಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಕಾರ್ಯಕ್ರದಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ಅಥವಾ ವಾಹನಗಳನ್ನು ಬಳಸಬಹುದಾಗಿದೆ. ಆದ್ರೆ ರಾಹುಲ್ ಗಾಂಧಿ ಈ ಮೊದಲಿನಂತೆ ಕಾಲ್ನಡಿಗೆಯಲ್ಲೇ ಯಾತ್ರೆ ಮಾಡಲಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಘೋಷಣೆ – ರಾಜ್ಯ ಬಿಜೆಪಿ ಶಾಸಕರಿಗೆ ಹೈಕಮಾಂಡ್ ಜವಾಬ್ದಾರಿ ಹಂಚಿಕೆ
ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು ಸೆಪ್ಟೆಂಬರ್ 7, 2022 ರಿಂದ ಜನವರಿ 2023ರವರೆಗೂ ನಡೆಯಿತು. ತಮಿಳುನಾಡಿನ (TamilNadu) ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಸರಿಸುಮಾರು 4,080 ಕಿಮೀ ಗಳಷ್ಟು ದೂರ ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆಯನ್ನ ಮುಕ್ತಾಯಗೊಳಿಸಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ
ಯಾತ್ರೆಯು 12 ರಾಜ್ಯಗಳ 75 ಜಿಲ್ಲೆಗಳ ಮೂಲಕ 126 ದಿನಗಳಲ್ಲಿ ಸಾಗಿತು, ಇದು ಭಾರತದ ಸುದೀರ್ಘ ಪಾದಯಾತ್ರೆಯಾಗಿದೆ. ಕಾಂಗ್ರೆಸ್ ನಾಯಕರು ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಇತರರು ಆಯಾ ರಾಜ್ಯಗಳಲ್ಲಿ ತಳಮಟ್ಟದ ಜನಸಂಖ್ಯೆಯೊಂದಿಗೆ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಜನಾಂದೋಲನದ ಪ್ರಾಥಮಿಕ ಉದ್ದೇಶವು ಕಾಂಗ್ರೆಸ್‌ನಿಂದ ಪ್ರಚಾರ ಮಾಡಲ್ಪಟ್ಟಿದೆ. ಜನರ ಜೊತೆಗೆ ರಾಹುಲ್ ಗಾಂಧಿ ಅವರೂ ಸಹ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಿದ್ದರು. ಕೇಂದ್ರ ಸರ್ಕಾರದ ಆಡಳಿತ, ಬಿಜೆಪಿ ವಿಭಜಕ ರಾಜಕೀಯದ ವಿರುದ್ಧ ಭಾರತವನ್ನು ಒಂದುಗೂಡಿಸುವುದು. ನಿರುದ್ಯೋಗ ಮತ್ತು ಅಸಮಾನತೆಯಂತಹ ಇತರ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಬಗ್ಗೆ ರಾಹುಲ್ ಗಾಂಧಿ ಚರ್ಚಿಸಿದ್ದರು.
ಕಳೆದ ಸೆಪ್ಟೆಂಬರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪಕ್ಷವು 2ನೇ ಹಂತದ ಭಾರತ್ ಜೋಡೋ ಯಾತ್ರೆ ಯೋಜಿಸುತ್ತಿದೆ. ಯೋಜನೆಯು ನಿರ್ಮಾಣ ಹಂತದಲ್ಲಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ರಾಹುಲ್ ಗಾಂಧಿ ಅವರನ್ನು ಪೂರ್ವದಿಂದ ಪಶ್ಚಿಮಕ್ಕೆ ಮತ್ತೊಂದು ಭಾರತ್ ಜೋಡೋ ಯಾತ್ರೆ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ
ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ದೇವರೊಂದಿಗೆ (God) ಚರ್ಚೆಗೆ ಕೂರಿಸಿದರೆ, ಅವರು ಬ್ರಹ್ಮಾಂಡ ಕಾರ್ಯನಿರ್ವಹಿಸುವ ಬಗ್ಗೆ ಮಾಡುವ ವಿವರಣೆಗೆ ದೇವರು ನಾನೇನು ಸೃಷ್ಠಿ ಮಾಡಿದ್ದೇನೆ ಎಂಬ ಗೊಂದಲಕ್ಕೊಳಗಾಗುತ್ತಾನೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ವ್ಯಂಗ್ಯವಾಡಿದ್ದಾರೆ.
ಬುಧವಾರ ಸ್ಯಾನ್ ಫ್ರಾನ್ಸಿಸ್ಕೋದ (San Francisco) ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಗರು (BJP) ವಿಜ್ಞಾನಿಗಳಿಗೆ ವಿಜ್ಞಾನವನ್ನು ವಿವರಿಸುತ್ತಾರೆ. ಇತಿಹಾಸಕಾರರಿಗೆ ಇತಿಹಾಸವನ್ನು ವಿವರಿಸುತ್ತಾರೆ. ಅಲ್ಲದೆ ಸೈನ್ಯ ಹಾಗೂ ವಾಯುಪಡೆಗೂ ಪಾಠ ಮಾಡಲು ಹೋಗುತ್ತಾರೆ. ಆದರೆ ಅವರಿಗೆ ಅದ್ಯಾವುದರ ಬಗ್ಗೆಯೂ ತಿಳುವಳಿಕೆ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು
ದೇಶದಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಸೇರಿಕೊಂಡು ಸಂವಿಧಾನದ ಮೇಲೆ ದಾಳಿ ನಡೆಸುತ್ತಿವೆ. ಭಾರತ್ ಜೋಡೋ (Bharat Jodo Yatra) ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿತ್ತು. ಅಲ್ಲದೆ ಜನರಿಗೆ ಬೆದರಿಕೆ ಹಾಕುವ ಮೂಲಕ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿತ್ತು. ಆದರೂ ಇದರಿಂದ ಏನೂ ಪ್ರಯೋಜನವಾಗಲಿಲ್ಲ. ಯಾತ್ರೆಯ ಪ್ರಭಾವ ಇನ್ನೂ ಹೆಚ್ಚಾಯಿತು ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆಯು ವಾತ್ಸಲ್ಯ, ಗೌರವ ಮತ್ತು ನಮ್ರತೆಯ ಮನೋಭಾವದಿಂದ ಆರಂಭಗೊಂಡಿತು. ಗುರುನಾನಕ್, ಗುರು ಬಸವಣ್ಣ, ನಾರಾಯಣ ಗುರು ಸೇರಿದಂತೆ ಎಲ್ಲಾ ಆಧ್ಯಾತ್ಮಿಕ ನಾಯಕರ ಇತಿಹಾಸ ಓದಬೇಕು. ಅವರು ಸಹ ಇದೇ ರೀತಿಯಲ್ಲಿ ರಾಷ್ಟ್ರವನ್ನು ಒಂದುಗೂಡಿಸಿದ್ದರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಜಾತಿಯತೆಯ ವಿಚಾರಗಳನ್ನು ಉಲ್ಲೇಖಿಸಿದ ಅವರು, ಜಾತಿ ಸಮಾಜದಲ್ಲಿ ವಿಕಿರಣದಂತೆ ಹಬ್ಬಿದೆ. ಜಾತಿ ತಾರತಮ್ಯ ಇನ್ನೂ ಉಳಿದುಕೊಂಡಿದೆ. ಈ ನಿಟ್ಟಿನಲ್ಲಿ ನ್ಯಾಯ್ (Nyuntam Aay Yojana) ಹಾಗೂ ನರೇಗಾ (NAREGA) ಯೋಜನೆಗಳು ಬಡವರಿಗೆ ಮತ್ತು ತುಳಿತಕ್ಕೊಳಗಾದವರಿಗೆ ಆರ್ಥಿಕ ನ್ಯಾಯ ಒದಗಿಸಲು ಸಹಾಯ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!
ಬೆಂಗಳೂರು: ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್‍ನಲ್ಲಿ (Congress) ಈಗ ಮುಖ್ಯಮತ್ರಿ ಪಟ್ಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಬಳಿ ಸಿಎಂ ಹುದ್ದೆ ನನಗೆ ನೀಡುವಂತೆ ಡಿಕೆ ಶಿವಕುಮಾರ್ ಪಟ್ಟು ಹಿಡಿದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಡಿಕೆಶಿ ವಾದ ಏನು?
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ನನ್ನ ಶ್ರಮ ಎಲ್ಲರಿಗೂ ಗೊತ್ತಿದೆ. ಅಲ್ಲದೆ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಮುಖ್ಯಮಂತ್ರಿ ಮಾಡುವ ಪದ್ಧತಿಯಿದೆ. ಅದರಂತೆ ನನ್ನನ್ನು ಮುಖ್ಯಮಂತ್ರಿ ಮಾಡುವುದು ಸರಿಯಾದ ನಿರ್ಧಾರ. ಇದನ್ನೂ ಓದಿ: ಡಿಕೆಶಿಗೆ ಒಲಿಯುತ್ತಾ ಸಿಎಂ ಪಟ್ಟ? – ಕಾಲಜ್ಞಾನಿ ಗುರೂಜಿಯಿಂದ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಕಷ್ಟ ಅನುಭವಿಸುವಾಗ ಎಲ್ಲರೂ ಪಕ್ಷವನ್ನು ಕೈ ಬಿಟ್ಟು ನಡೆದರು. ಆಗ ನಾನು ಪಕ್ಷದ ನೇತೃತ್ವವನ್ನು ವಹಿಸಿಕೊಂಡು ಮುನ್ನೆಡೆಸಿಕೊಂಡು ಹೋಗಿದ್ದೇನೆ. ಅಲ್ಲದೇ ಭಾರತ್ ಜೋಡೋ (Bharat Jodo Yatra), ಮೇಕೆ ದಾಟು (Mekedatu) ಸೇರಿದಂತೆ ಪಕ್ಷದ ಹಲವು ಕಾರ್ಯಕ್ರಮಗಳಿಗೆ ನನ್ನ ಕೈಯಿಂದ ಹಣ ಹಾಕಿ ಯಶಸ್ವಿ ಮಾಡಿದ್ದೇನೆ.
ಚುನಾವಣೆಯಲ್ಲಿ ಅಭ್ಯರ್ಥಿಗಳ ಆರ್ಥಿಕ ಸಂಕಷ್ಟ ನೋಡಿ ಏನು ಮಾಡಬೇಕೋ ಅದನ್ನ ಮಾಡಿದ್ದೇನೆ. ಐಟಿ, ಇಡಿ ಹಾಗೂ ಸಿಬಿಐ ಸಂಕಷ್ಟದ ನಡುವೆ ಪಕ್ಷದ ಅಭ್ಯರ್ಥಿಗಳಿಗೆ ಹಣ ಹೊಂದಿಸಿ ಕೊಡಲು ನನ್ನ ವೈಯುಕ್ತಿಕ ಆಸ್ತಿಗಳನ್ನು ಅಡವಿಟ್ಟಿದ್ದೇನೆ. ನಾನು ಅಷ್ಟೆಲ್ಲ ಶ್ರಮಪಟ್ಟು ವೈಯಕ್ತಿಕ ಹಿತಾಸಕ್ತಿಯನ್ನು ತೊರೆದಿದ್ದರ ಫಲವಾಗಿ ಪಕ್ಷ ಅಧಿಕಾರಕ್ಕೆ ಬಂದಿದೆ. ಈಗ ನನ್ನ ಶ್ರಮಕ್ಕೆ ಪ್ರತಿ ಫಲ ಕೇಳುತ್ತಿದ್ದೇನೆ ಅಷ್ಟೇ ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ನನ್ನನ್ನ ಬಿಜೆಪಿಯಿಂದ ಸಿ.ಟಿ.ರವಿ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು: ಎಂ.ಪಿ. ಕುಮಾರಸ್ವಾಮಿ
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ (Congress) ಯುವ ನಾಯಕ ರಾಹುಲ್ ಗಾಂಧಿ (Rahul Gandhi) ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ (Bharat Jodo Yatra) ಈ ಬಾರಿಯ ವಿಧಾನಸಭೆ ಚುನಾವಣೆ ಮೇಲೆ ಸಾಕಷ್ಟು ಪ್ರಭಾವ ಬೀರಿದೆಯಾ? ಹೌದೆನ್ನುತ್ತಿವೆ ಕಾಂಗ್ರೆಸ್ ಪಕ್ಷದ ಗೆಲುವಿನ ಯಾದಿ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯು ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಹಾದು ಹೋಗಿದ್ದು, ಏಳೂ ಜಿಲ್ಲೆಯ ಅಭ್ಯರ್ಥಿಗಳ ವೋಟಿನ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಹೀಗಾಗಿಯೇ ಅನೇಕ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.
ಬಳ್ಳಾರಿ ಕ್ಷೇತ್ರ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ, ಮೈಸೂರಿನ ನರಸಿಂಹರಾಜ ಹಾಗೂ ವರುಣಾ ಕ್ಷೇತ್ರ, ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ 2018ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಿದ್ದರು. ಈ ಬಾರಿಯೂ ಅವರು ಸಲೀಸಾಗಿ ತಮ್ಮ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದಾರೆ. ಅಲ್ಲದೇ, ಹೆಚ್ಚಿನ ಅಂತರದಿಂದಲೂ ಅವರೆಲ್ಲ ಗೆಲುವು ಸಾಧಿಸಿದ್ದಾರೆ.
ಉಳಿದಂತೆ 2018ರಲ್ಲಿ ಬಿಜೆಪಿ (BJP) ಗೆದ್ದಿದ್ದ ಹಲವು ಕ್ಷೇತ್ರಗಳನ್ನು ಈ ಬಾರಿ ಭಾರತ್ ಜೋಡೋ ಯಾತ್ರೆ ಪ್ರಭಾವ ಕಸಿದುಕೊಂಡಿದೆ. ಬಳ್ಳಾರಿ ಸಿಟಿ ಕಳೆದ ಸಲ ಬಿಜೆಪಿ ಗೆದ್ದಿದ್ದರೆ, ಈ ಬಾರಿ ಕಾಂಗ್ರೆಸ್ ಗೆಲುವಿನ ಬಾವುಟ ಹಾರಿಸಿದೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಈ ಬಾರಿ ಕಾಂಗ್ರೆಸ್ ಆ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿತ್ತು. ಈ ಬಾರಿ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆದ್ದಿತ್ತು. ಈ ಬಾರಿ ಕಾಂಗ್ರೆಸ್ ಗೆದ್ದಿದೆ.
ಭಾರತ್ ಜೋಡೋ ಯಾತ್ರೆ ಪ್ರಭಾವಕ್ಕೆ ಜೆಡಿಎಸ್ (JDS) ಪಕ್ಷದ ಕೆಲ ಅಭ್ಯರ್ಥಿಗಳು ಕೂಡ ತಲೆಬಾಗಿದ್ದಾರೆ. 2018ರಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ, ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಗೆದ್ದು ಬೀಗಿತ್ತು. ಈ ಬಾರಿ ಮೂರು ಕ್ಷೇತ್ರಗಳನ್ನೂ ಕಾಂಗ್ರೆಸ್ ವಶಪಡಿಸಿಕೊಂಡಿದೆ. ಇದಕ್ಕೆ ಭಾರತ್ ಜೋಡೋ ಯಾತ್ರೆಯೂ ಕಾರಣವೆಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಅಲ್ಲದೇ, ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಸಿರಾ ಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಬಾರಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದು ಬೀಗಿದೆ.
ಭಾರತ್ ಜೋಡೋ ಯಾತ್ರೆ ಪಯಣಿಸಿದ ಈ ಇಪ್ಪತ್ತು ಕ್ಷೇತ್ರಗಳಲ್ಲಿ 2018ರಲ್ಲಿ ಕಾಂಗ್ರೆಸ್ 5, ಜೆಡಿಎಸ್ 6 ಹಾಗೂ ಬಿಜೆಪಿ 9 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. 2023ರಲ್ಲಿ ಕಾಂಗ್ರೆಸ್ 15, ಜೆಡಿಎಸ್ 3 ಹಾಗೂ ಬಿಜೆಪಿ 2 ಸ್ಥಾನಗಳನ್ನು ಪಡೆದುಕೊಂಡಿದೆ. ಜೆಡಿಎಸ್ ಮೂರು ಸ್ಥಾನಗಳನ್ನು ಕಳೆದುಕೊಂಡಿದ್ದರೆ, ಬಿಜೆಪಿ ಏಳು ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಕಾಂಗ್ರೆಸ್ ಹತ್ತು ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ.
ದಿಸ್ಪುರ್: ಭಾರತೀಯ ಯುವ ಕಾಂಗ್ರೆಸ್ (Indian Youth Congress ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ (Srinivas BV) ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ತನ್ನ ಲಿಂಗದ ಬಗ್ಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಐವೈಸಿ ಅಸ್ಸಾಂ ಘಟಕದ ಮುಖ್ಯಸ್ಥೆ ಅಂಗಿತಾ ದತ್ತಾ (Angkita Dutta) ಆರೋಪಿಸಿದ್ದಾರೆ.
ಶ್ರೀನಿವಾಸ್ ವಿರುದ್ಧ ದೂರುಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಹಾಗೂ ಅವರ ಸಹೋದರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ವಿರುದ್ಧ ಸಹ ದತ್ತಾ ಅವರು ಸರಣಿ ಟ್ವೀಟ್‍ಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್
ಅಸ್ಸಾಂನ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದ ಅಂಜನ್ ದತ್ತಾ ಅವರ ಪುತ್ರಿಯಾಗಿರುವ ಅಂಗಿತಾ ದತ್ತಾ ಅವರ ಈ ಆರೋಪ ಈಗ ಯುವ ಕಾಂಗ್ರೆಸ್‍ನಲ್ಲಿ ಬಿರುಗಾಳಿ ಎಬ್ಬಿಸಿದೆ.
ಶ್ರೀನಿವಾಸ್ ಬಿ.ವಿ, ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಮತ್ತು ನನ್ನ ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಪಕ್ಷದ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದೆ. ಆದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ದತ್ತಾ ಅವರು ದೂರಿದ್ದಾರೆ. ಅಲ್ಲದೆ ಅವರು ತಮ್ಮ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಟ್ವೀಟ್ ಮಾಡಿ ಟ್ಯಾಗ್ ಮಾಡಿದ್ದಾರೆ.
ಕಿರುಕುಳ ನೀಡಿದ ಶ್ರೀನಿವಾಸ್ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಹಲವಾರು ತಿಂಗಳಿಂದ ಸುಮ್ಮನಿದ್ದೆ. ಆದರೂ ಈ ಬಗ್ಗೆ ಯಾರು ಕ್ರಮಕ್ಕೆ ಮುಂದಾಗುತ್ತಿಲ್ಲ. ನಿರಂತರವಾಗಿ ಕಿರುಕುಳ ನೀಡುವ ಒಬ್ಬ ಕಾಮುಕ ಹಾಗೂ ಕೋಮುವಾದಿಯನ್ನು ಹೇಗೆ ಸಹಿಸುವುದು? ಪ್ರಿಯಾಂಕಾ ಗಾಂಧಿಯವರ ಮಹಿಳೆಯರ ಪರ ನಿಲುವುಗಳು ಈಗ ಏನಾಯಿತು? ಪಕ್ಷದ ಭಾರತ್ ಜೋಡೋ (Bharat Jodo Yatra) ಯಾತ್ರೆಯ ಸಂದರ್ಭದಲ್ಲಿ ಜಮ್ಮುವಿನಲ್ಲಿ (Jammu) ರಾಹುಲ್ ಗಾಂಧಿ ಅವರನ್ನು ಸಂಪರ್ಕಿಸಿದ್ದೆ ಅವರ ಮೇಲೆ ಬಹಳ ನಂಬಿಕೆ ಇತ್ತು. ಆದರೆ ಗಮನಕ್ಕೆ ತಂದು ಹಲವು ತಿಂಗಳು ಕಳೆದರೂ ಈ ಬಗ್ಗೆ ವಿಚಾರಣೆ ಆಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಮಹಿಳಾ ನಾಯಕಿಯಾದ ನಾನೇ ಕಿರುಕುಳಕ್ಕೆ ಒಳಗಾಗಿದ್ದು, ಕಾಂಗ್ರೆಸ್ ಸೇರಲು ಮಹಿಳೆಯರನ್ನು ಹೇಗೆ ಪ್ರೋತ್ಸಾಹಿಸಬೇಕು? ಇದು ಸುರಕ್ಷಿತ ಸ್ಥಳವೇ? ಎಂದು ಪ್ರಶ್ನಿಸಿದ್ದಾರೆ.
ಹಿಂದಿನ ಅಧ್ಯಕ್ಷ ಕೇಶವ್ ಕುಮಾರ್ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಾಗ ಅವರನ್ನು ತೆಗೆದುಹಾಕಲು ಒತ್ತಾಯಿಸಲಾಯಿತು. ಈಗ ಆರು ತಿಂಗಳಿಂದ ಶ್ರೀನಿವಾಸ್ ಅವರಿಂದ ಮಾನಸಿಕ ಕಿರುಕುಳ ಮತ್ತು ತಾರತಮ್ಯಕ್ಕೆ ಒಳಗಾಗಿದ್ದರೂ, ನನಗೆ ಮೌನವಾಗಿರಲು ಹೇಳಲಾಗಿದೆ ಮತ್ತು ಯಾವುದೇ ವಿಚಾರಣೆಯನ್ನು ಪ್ರಾರಂಭಿಸಿಲ್ಲ. ಶ್ರೀನಿವಾಸ್ ಬಹಳ ಪ್ರಭಾವಶಾಲಿ ವ್ಯಕ್ತಿ, ದೊಡ್ಡ ನಾಯಕರ ಕೃಪೆ ಹೊಂದಿದ್ದಾರೆ ಎಂದು ಅಸಮಧಾನ ಹೊರ ಹಾಕಿದ್ದಾರೆ.
ಶ್ರೀನಿವಾಸ್ ವಿರುದ್ಧ ಕ್ಷುಲ್ಲಕ ಆರೋಪ ಮಾಡಲಾಗಿದೆ. ಅವರ ವಿರುದ್ಧ ಮಾನಹಾನಿ ಹಾಗೂ ಅಸಂಸದೀಯ ಪದಗಳನ್ನು ಬಳಕೆ ಮಾಡಲಾಗಿದೆ. ಅದಕ್ಕಾಗಿ ದತ್ತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪಕ್ಷದ ಕಾನೂನು ವಿಭಾಗ ಟ್ವೀಟ್‍ನಲ್ಲಿ ತಿಳಿಸಿದೆ.
ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಶ್ರೀನಿವಾಸ್ ವಿರುದ್ಧ ದತ್ತಾ ಅವರ ಸರಣಿ ಟ್ವೀಟ್ ಬಳಸಿ, ಮಹಿಳೆಯರಿಗೆ ಕಿರುಕುಳ ನೀಡುವುದು ಕಾಂಗ್ರೆಸ್‍ನಲ್ಲಿ ಸರ್ವೇಸಾಮಾನ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatra) ಹೆದರಿ ಸಂಸದ ಸ್ಥಾನ ಅನರ್ಹಗೊಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರಿನಲ್ಲಿ (Gauribidanur) ಶಾಸಕ ಎನ್.ಎಚ್ ಶಿವಶಂಕರ ರೆಡ್ಡಿಯವರ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ಜೋಡೋ ಯಾತ್ರೆ ನಂತರ ರಾಹುಲ್ ಗಾಂಧಿ ವರ್ಚಸ್ಸು ಜಾಸ್ತಿ ಆಗಿತ್ತು. ಹಾಗಾಗಿ ಅವರಿದ್ದರೆ ಟೀಕೆ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಸದಸ್ಯತ್ವ ತೆಗೆದಿದ್ದಾರೆ ಎಂದು ಗುಡುಗಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ (Rahul Gandhi) ಬದಲು ರಾಜೀವ್ ಗಾಂಧಿ ಎಂದು ಬಾಯಿ ತಪ್ಪಿದರು. ಇದನ್ನೂ ಓದಿ: ದಶಪಥ ಹೆದ್ದಾರಿ ಟೋಲ್‍ನಲ್ಲಿ ತಾಂತ್ರಿಕ ಸಮಸ್ಯೆ, ಫಾಸ್ಟ್ ಟ್ಯಾಗ್ ನಲ್ಲಿ ಪದೇ ಪದೆ ಹಣ ಕಡಿತ
ದೇಶದಲ್ಲಿ ಮಲ್ಯ-ಮೋದಿ ದೇಶದ ದುಡ್ಡು ಕೊಳ್ಳೆ ಹೊಡೆದು ಹೋಗಿದ್ದಾರೆ. ಅವರನ್ನು ಕಳ್ಳರು ಅನ್ನೋದು ತಪ್ಪಾ? ಅದಕ್ಕಾಗಿ ಸದಸ್ಯ ಸ್ಥಾನದಿಂದ ತೆಗೆದು ಹಾಕಿದ್ದು ಸರಿಯೇ? ಟೀಕೆ ಮಾಡುವವರನ್ನ ಮುಗಿಸೋ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಪ್ರಧಾನಿ ರಾಜ್ಯಕ್ಕೆ ಭೇಟಿ ವಿಚಾರವಾಗಿ, ಪ್ರವಾಹ ಬಂದಾಗ, ಕೊರೋನಾ ಕಾಲದಲ್ಲಿ ರಾಜ್ಯಕ್ಕೆ ಮೋದಿ ಬಂದಿರಲಿಲ್ಲ. ವೋಟಿಗಾಗಿ ಈಗ ಬರುತ್ತಿದ್ದಾರೆ, ಜನರಿಗೆ ಇದು ಅರ್ಥ ಆಗಲಿದೆ. ಮೋದಿ 100 ಸಲ ಬಂದರೂ ಏನೂ ಆಗುವುದಿಲ್ಲ ಎಂದಿದ್ದಾರೆ.
ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಪ್ರಸ್ತಾಪಿಸಿದ್ದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಕೋರಿ ಕಾಂಗ್ರೆಸ್ (Congress) ಸಂಸದ ರಾಹುಲ್ ಗಾಂಧಿ (Rahul Gandhi) ನೋಟಿಸ್ ನೀಡಲು ಹೋದಾಗ ದೆಹಲಿ ಪೊಲೀಸರು 3 ಗಂಟೆಗಳ ಕಾಲ ಕಾದ ಘಟನೆ ನಡೆದಿದೆ.
ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಲೈಂಗಿಕ ಕಿರುಕುಳದ ಸಂತ್ರಸ್ತರ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು (Delhi Police), ನಿಮ್ಮನ್ನು ಸಂಪರ್ಕಿಸಿದ ಸಂತ್ರಸ್ತರ ಬಗ್ಗೆ ಮಾಹಿತಿ ನೀಡಿ, ನಾವು ಅವರಿಗೆ ಭದ್ರತೆಯನ್ನು ನೀಡುತ್ತೇವೆ ಎನ್ನುವ ನೋಟಿಸ್ ನೀಡಲು ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. 3 ಗಂಟೆಗಳ ಕಾಲ ಕಾಯುತ್ತಿದ್ದರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿದೆ.
ಇದಾದ ಬಳಿಕ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್ ನೀಡಿದ್ದರು. ಆ ವೇಳೆಯೂ ಒಂದೂವರೆ ಗಂಟೆಗಳ ನಂತರ ಸ್ವತಃ ರಾಹುಲ್ ಗಾಂಧಿ ಅವರೇ ನೋಟಿಸ್ ಅನ್ನು ಪಡೆದರು.
ಘಟನೆಯೇನು?: ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ, ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು. ಈ ವೇಳೆ ಹುಡುಗಿಯೊಬ್ಬಳು ಬಂದು ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ತಿಳಿಸಿದ್ದಳು. ಈ ವೇಳೆ ಪೊಲೀಸರಿಗೆ ಕರೆ ಮಾಡಲೇ ಎಂದು ಕೇಳಿದ್ದಕ್ಕೆ, ಪೊಲೀಸರಿಗೆ ಕರೆ ಮಾಡಬೇಡಿ, ಆಗ ನನಗೆ ಅವಮಾನವಾಗುತ್ತದೆ ಎಂದು ಹೇಳಿದ್ದಳು ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಹಿತಿ ಕೋರಿ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಉರಿಗೌಡ, ನಂಜೇಗೌಡ ಟಿಪ್ಪುವನ್ನ ಕೊಂದಿರೋದು ಸತ್ಯ – ಸಿ.ಟಿ ರವಿ
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಅದಾನಿ – ಹಿಂಡೆನ್ ಬರ್ಗ್ ಕುರಿತು ರಾಹುಲ್ ಗಾಂಧಿ ಅವರು ಕೇಳುವ ಪ್ರಶ್ನೆಯಿಂದ ಸರ್ಕಾರ ತಲ್ಲಣಗೊಂಡಿದೆ. ಅದಕ್ಕಾಗಿ ಭಾರತ್ ಜೋಡೋ ಯಾತ್ರೆ ಮುಗಿದ 45 ದಿನಗಳ ನಂತರ ದೆಹಲಿ ಪೊಲೀಸರು ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿ ಅವರನ್ನು ಭೇಟಿ ಆಗಿದ್ದಾರೆ. ಈ ವೇಳೆ ಹಿಂಸಾಚಾರದ ಬಗ್ಗೆ ಮಾತನಾಡಿ, ಮಹಿಳೆಯ ವಿವರವನ್ನು ಕೇಳಿದ್ದಾರೆ ಎಂದು ಕಿಡಿಕಾರಿದ್ದಾರೆ. ನೋಟಿಸ್‍ಗೆ ಕಾನೂನು ಪ್ರಕಾರ ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುವುದಾಗಿ ಕಾಂಗ್ರೆಸ್ ತಿಳಿಸಿದೆ. ಇದನ್ನೂ ಓದಿ:ನಾನು ಪೂಜಾರಿ ಅಷ್ಟೇ, ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ: ಡಿಕೆಶಿ
ಶಿವಮೊಗ್ಗ: ಅಭಿವೃದ್ಧಿ ಅಂದ್ರೆ ಬೊಜ್ಜು ಕಡಿಮೆ ಮಾಡಿಕೊಳ್ಳಲು ಭಾರತ್ ಜೋಡೋ ಹೆಸರಲ್ಲಿ ವಾಕಿಂಗ್ ಮಾಡಿದಂತಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದರು.
ಶಿವಮೊಗ್ಗದಲ್ಲಿ ನಡೆದ ಯುವ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ತೇಜಸ್ವಿಸೂರ್ಯ (Tejasvi Surya), ಕಾಂಗ್ರೆಸ್ ಶಂಕುಸ್ಥಾಪನೆ ಮಾಡಿದ್ದ ಒಂದೇ ಒಂದು ಯೋಜನೆಗಳು ಅವರು ಈವರೆಗೂ ಉದ್ಘಾಟಿಸಿಲ್ಲ. ಅಭಿವೃದ್ಧಿ ಎಂದರೆ ಬೊಜ್ಜು ಕಡಿಮೆ ಮಾಡಿಕೊಳ್ಳಲು ಭಾರತ್ ಜೋಡೋ (Bharat Jodo Yatra) ಹೆಸರಿನಲ್ಲಿ ವಾಕಿಂಗ್ ಮಾಡಿದ ಹಾಗಲ್ಲ. ಅಭಿವೃದ್ಧಿ ಎಂದರೆ ಪ್ರಧಾನಿ ಮೋದಿ ಮಾಡುತ್ತಿರುವುದಾಗಿದೆ ಎಂದರು. ಇದನ್ನೂ ಓದಿ: Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ
ನಮ್ಮ ಅನೇಕ ಕಾರ್ಯಕರ್ತರ ಹತ್ಯೆ ಹಾಗೂ ಅವರ ಮೇಲೆ ಹಲ್ಲೆಗಳು ನಡೆದಿವೆ. 738 ಪುಟಗಳ ವರದಿ ಸಿದ್ಧಪಡಿಸಿ ಹರ್ಷ ಹತ್ಯೆ ಮಾಡಿದವರು ಜೈಲಿನಿಂದ ಹೊರಗೆ ಬರಬಾರದೆಂದು ಕೆಲಸ ಮಾಡಿದ್ದೇವೆ. ಅದೇ ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ ಹರ್ಷ ಹತ್ಯೆ ಮಾಡಿದವರು ಈವರೆಗೆ ಹೊರಗೆ ಬರುತ್ತಿದ್ದರು. ಇವಿಎಂ ಯಂತ್ರ ಸರಿಯಿಲ್ಲ ಎಂದು ಈಗ ಕಾಂಗ್ರೆಸ್‍ನವರು ಶುರು ಮಾಡಿಕೊಂಡಿದ್ದಾರೆ. ಆದರೆ ಅವರ ಸೋಲಾಗುತ್ತಿರುವುದು ಇವಿಎಂ (EVM) ಮಿಷನ್ ನಿಂದಲ್ಲ ಅವರ ಕಾರ್ಯಕರ್ತರಿಂದಾಗಿ ಅವರ ಸೋಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗಕ್ಕೆ (Shivamogga) ಬಂದಾಗಲೆಲ್ಲಾ ಖುಷಿಯಾಗುತ್ತೆ. ಇಲ್ಲಿನ ಯುವ ಮೋರ್ಚಾ ಸಂಘಟನೆ ಸಧೃಢವಾಗಿದೆ. ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಪಕ್ಷಗಳ ಕಚೇರಿಗಳಿಗೆ ಈಗ ಸುಣ್ಣ, ಬಣ್ಣ ಬಳಿಯುತ್ತಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಬ್ಯಾನರ್, ಬಂಟಿಂಗ್ಸ್ ಹಾಕಿಸುತ್ತಿದ್ದಾರೆ. ಚುನಾವಣೆ ಬಂದಾಗ ಪಂಚರತ್ನ ಯಾತ್ರೆ ಬರುವ ಪಕ್ಷ ನಮ್ಮದಲ್ಲ. ನಮ್ಮದು ಪಂಚ ವರ್ಷಗಳು ಕೂಡ ಸಧೃಢ ಎಂಬುದನ್ನು ತೋರಿಸಿ ಕೊಟ್ಟಿದೆ. ಕೋವಿಡ್ ಇರಲಿ ಬಿಡಲಿ ನಮ್ಮ ಕಚೇರಿ ಎಲ್ಲರಿಗೂ ತೆರದಿದೆ ಎಂದು ಹೇಳಿದರು. ಇದನ್ನೂ ಓದಿ: ಧಾರವಾಡ ಜಿಲ್ಲಾಡಳಿತದಿಂದ ಪ್ರಧಾನಿ ಮೋದಿಗೆ ತೊಟ್ಟಿಲು ಗಿಫ್ಟ್
ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ ಉತ್ತರ) ಭಾರತ್ ಜೋಡೋ ಯಾತ್ರೆ (Bharat Jodo Yatra) ಮೂಲಕ ದೇಶದ ಗಮನ ಸೆಳೆದಿದ್ದ ಕಾಂಗ್ರೆಸ್ (Congress) ಈಗ ಪೂರ್ವದಿಂದ ಪಶ್ಚಿಮಕ್ಕೆ (East to West) ಮತ್ತೊಂದು ಯಾತ್ರೆ ಕೈಗೊಳ್ಳಲು ಪ್ಲಾನ್ ಮಾಡಿದೆ.
ಕಾಂಗ್ರೆಸ್‌ನ ಮತ್ತೊಂದು ಯಾತ್ರೆ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಮಾಹಿತಿ ಹಂಚಿಕೊಂಡಿದ್ದಾರೆ. ಸಾಕಷ್ಟು ಉತ್ಸಾಹ ಮತ್ತು ಶಕ್ತಿ ಇದೆ. ವೈಯಕ್ತಿಕವಾಗಿ ಇದು ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಆದರೆ ಪೂರ್ವದಿಂದ ಪಶ್ಚಿಮಕ್ಕೆ ಕೈಗೊಳ್ಳುವ ಯಾತ್ರೆಯ ಸ್ವರೂಪವು, ದಕ್ಷಿಣದಿಂದ ಉತ್ತರಕ್ಕೆ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆಯ ಸ್ವರೂಪಕ್ಕಿಂತ ಭಿನ್ನವಾಗಿರಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನಗೀಗ 52 ವಯಸ್ಸು.. ಈಗಲೂ ಸ್ವಂತ ಮನೆಯೇ ಇಲ್ಲ: ರಾಹುಲ್ ಗಾಂಧಿ
ಪೂರ್ವದಿಂದ ಪಶ್ಚಿಮಕ್ಕೆ ಕೈಗೊಳ್ಳುವ ಯಾತ್ರೆಯು ಬಹುಶಃ ಅರುಣಾಚಲ ಪ್ರದೇಶದ ಪಾಸಿಘಾಟ್‌ನಿಂದ ಗುಜರಾತ್‌ನ ಪೋರಬಂದರ್‌ವರೆಗೆ ನಡೆಯಬಹುದು ಎಂದು ಜೈರಾಮ್ ಸುಳಿವು ಕೊಟ್ಟಿದ್ದಾರೆ.
ಈ ಮಾರ್ಗದಲ್ಲಿ ಕಾಡುಗಳು, ನದಿಗಳು ಹೆಚ್ಚಾಗಿವೆ. ಪ್ರಮುಖವಾಗಿ ಇದು ಪಾದಯಾತ್ರೆಯಾಗಲಿದೆ. ಹೊಸ ಯಾತ್ರೆಯ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಂಡ ಜೈರಾಮ್ ರಮೇಶ್, ಮುಂಬರುವ ಏಪ್ರಿಲ್ ಮತ್ತು ನವೆಂಬರ್‌ನಲ್ಲಿ ರಾಜ್ಯಗಳಿಗೆ ಚುನಾವಣೆಗಳು ನಡೆಯಬಹುದು. ಹೀಗಾಗಿ ಜೂನ್‌ಗಿಂತ ಮೊದಲು ಅಥವಾ ನವೆಂಬರ್‌ಗಿಂತ ಮೊದಲು ಯಾತ್ರೆಯನ್ನು ಕೈಗೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಈ ವರ್ಷದಲ್ಲೇ ಮೋದಿ ಪಾಕಿಸ್ತಾನವನ್ನ ಸಂಕಷ್ಟದಿಂದ ಪಾರು ಮಾಡ್ತಾರೆ – RAW ಮಾಜಿ ನಿರ್ದೇಶಕ
ಈ ಯಾತ್ರೆಯು ಭಾರತ್ ಜೋಡೋ ಯಾತ್ರೆಗಿಂತ ಕಡಿಮೆ ಅವಧಿಯದ್ದಾಗಿದ್ದು, ಮುಂದಿನ ಕೆಲವು ವಾರಗಳಲ್ಲಿ ಈ ಬಗ್ಗೆ ಹೆಚ್ಚಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.