Tag: bharat jodo yatra

  • ಭಾರತ್ ಜೋಡೋ ಯಾತ್ರೆ ನಡುವೆ ಪೋಸ್ಟರ್ ವಾರ್ – ರಾರಾಜಿಸುತ್ತಿದೆ ರಾಜು, ಕುಟ್ಟಪ್ಪನ ಸ್ವಾಗತ ಪೋಸ್ಟರ್

    ಭಾರತ್ ಜೋಡೋ ಯಾತ್ರೆ ನಡುವೆ ಪೋಸ್ಟರ್ ವಾರ್ – ರಾರಾಜಿಸುತ್ತಿದೆ ರಾಜು, ಕುಟ್ಟಪ್ಪನ ಸ್ವಾಗತ ಪೋಸ್ಟರ್

    ತುಮಕೂರು: ಬಿಜೆಪಿ (BJP)-ಕಾಂಗ್ರೆಸ್ (Congress) ನಡುವೆ ಪೋಸ್ಟರ್ (Poster)  ವಾರ್ ಶುರುವಾಗಿದೆ. ಕಾಂಗ್ರೆಸ್‍ನ ಪೇ ಸಿಎಂ ಅಭಿಯಾನಕ್ಕೆ ಬಿಜೆಪಿ, ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ (Bharat Jodo Yatra) ಪಾದಯಾತ್ರೆಯಲ್ಲಿ ಪೋಸ್ಟರ್ ವಾರ್ ಶುರು ಮಾಡಿದ್ದು, ಮತ್ತೊಂದು ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದೆ.

    ರಾಜ್ಯದಲ್ಲಿ ಪೋಸ್ಟರ್ ವಾರ್ ದಿನೇ ದಿನೇ ದೊಡ್ಡದಾಗುತ್ತಿದೆ. ಕಾಂಗ್ರೆಸ್‍ನ ಪೇ ಸಿಎಂ (PayCm) ಅಭಿಯಾನಕ್ಕೆ ಬಿಜೆಪಿ ಟಕ್ಕರ್ ಕೊಡುವ ಕೆಲಸ ನಿರಂತರವಾಗಿ ಮಾಡುತ್ತಿದೆ. ರಾಹುಲ್‍ಗಾಂಧಿ ಯಾತ್ರೆಯಲ್ಲಿ ಕಾಂಗ್ರೆಸ್ ವಿರೋಧಿ ಪೋಸ್ಟರ್‌ಗಳು ಮಂಡ್ಯ ಬಳಿಕ ಚಿಕ್ಕನಾಯಕನಹಳ್ಳಿಯಲ್ಲೂ ರಾರಾಜಿಸುತ್ತಿವೆ. ಸಿದ್ದರಾಮಯ್ಯರನ್ನು (Siddaramaiah)  ಹಿಂದೂ ವಿರೋಧಿ ಎಂದು ಬಿಂಬಿಸಲಾಗಿದೆ. ರಾಜು, ಕುಟ್ಟಪ್ಪನ ಸ್ವಾಗತದ ರೀತಿಯ ಪೋಸ್ಟರ್ ಹಾಕಲಾಗಿದೆ. ಸಿದ್ದರಾಮಯ್ಯನವರೇ ನಾನು ರಾಜು, ಕಾಂಗ್ರೆಸ್‍ನಿಂದಲೇ ನನ್ನ ಕೊಲೆ ಆಗಿದ್ದು. ಪಿಎಫ್‍ಐ (PFI), ಎಸ್‍ಡಿಪಿಐ (SDPI) ಮೇಲಿನ ನಿಮ್ಮ ಪ್ರೀತಿಗೆ ಅವರ ಮೇಲಿನ ಪ್ರಕರಣಗಳನ್ನು ಕೈಬಿಟ್ಟಿದ್ದಕ್ಕೆ ನಾನು ಕೊಲೆಯಾದೆ. ಈ ಹೆಗ್ಗಳಿಕೆ ನಿಮಗೇ ಸಲ್ಲಲಿ ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ರಾಹುಲ್‌ಗಾಂಧಿ ಪೋಸ್ಟರ್‌ಗೆ `ಚಪ್ಪಲಿ ಎಸೆಯಿರಿ’ ಆಂದೋಲನಕ್ಕೆ ಕರೆ ಕೊಟ್ಟ ಬಿಜೆಪಿ ನಾಯಕ

    ಬಿಜೆಪಿಯ ಪೋಸ್ಟರ್ ಕೀಟಲೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಹೇಡಿಗಳು ಮಾಡುವ ಕೃತ್ಯ ಎಂದು ಟೀಕಿಸಿದ್ದಾರೆ. ಮಾಜಿ ಡಿಸಿಎಂ ಪರಮೇಶ್ವರ್ ಕೂಡ ಕಿಡಿಕಾರಿದ್ದು, ಬಿಜೆಪಿಗೆ ಭಾರತ್ ಜೋಡೋ ಪಾದಯಾತ್ರೆ ನೋಡಿ ಭಯ ಶುರುವಾಗಿದೆ. ಹೀಗಾಗಿ ಇಂತಹ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

    Live Tv
    [brid partner=56869869 player=32851 video=960834 autoplay=true]

  • BJP ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣರ ನಡುವೆ ಜಗಳ ತಂದಿಡುತ್ತಿದೆ: ಸುರ್ಜೇವಾಲಾ ಕಿಡಿ

    BJP ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣರ ನಡುವೆ ಜಗಳ ತಂದಿಡುತ್ತಿದೆ: ಸುರ್ಜೇವಾಲಾ ಕಿಡಿ

    ದಾವಣಗೆರೆ: ಬಿಜೆಪಿ (BJP) ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣ ಸೇರಿದಂತೆ ಎಲ್ಲ ವರ್ಗದ ಜನರ ನಡುವೆ ಜಗಳ ತಂದಿಡುತ್ತಿದೆ. ಜನರ ಭಾವನೆಗಳನ್ನು ಮುರಿಯುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಕಿಡಿಕಾರಿದ್ದಾರೆ.

    ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯಂತೆ ಬಿಜೆಪಿ ಸರ್ಕಾರ (BJP Government) ಆಡಳಿತ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

    ಬಿಜೆಪಿಯವರು ಕಾಂಗ್ರೆಸ್ (Congress) ವಿರುದ್ಧ ಮಾಡಿದ ಎಲ್ಲಾ ಅಪಪ್ರಚಾರಗಳು ಬಿದ್ದು ಹೋಗಿವೆ. 75 ವರ್ಷಗಳ ಇತಿಹಾಸದಲ್ಲಿ ಯಾರೊಬ್ಬರೂ 3,570 ಕಿ.ಮೀ ಪಾದಯಾತ್ರೆ ಮಾಡಿರಲಿಲ್ಲ, ಆದರೆ ರಾಹುಲ್ ಗಾಂಧಿ (Rahul Gandhi) ಮಾಡುತ್ತಿದ್ದಾರೆ. ಆರ್ಥಿಕ ಮುಗ್ಗಟ್ಟು, ನಿರುದ್ಯೋಗ, ಭ್ರಷ್ಟಾಚಾರ, ಕೋಮು ಗಲಭೆಗಳ ವಿರುದ್ಧ ರಾಹುಲ್ ಗಾಂಧಿ ಅವರು ಈ ಪಾದಯಾತ್ರೆ ಮಾಡುತ್ತಿದ್ದಾರೆ. ಯಾತ್ರೆ (Bharat Jodo Yatra) ವೇಳೆ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಈವರೆಗೆ 3 ಕೋಟಿ ಜನ ಪಾಲ್ಗೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: BJPಯಿಂದ ಟಿಪ್ಪು ಪರಂಪರೆ ಅಳಿಸಲು ಸಾಧ್ಯವೇ ಇಲ್ಲ: ಓವೈಸಿ

    ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಮಧ್ಯಮ ವರ್ಗದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ ಬಿಜೆಪಿ ದೇಶದ ಶೇ.54 ರಷ್ಟು ಆಸ್ತಿಯನ್ನ ಕೇವಲ 9 ಜನರ ಕೈಗೆ ಕೊಟ್ಟಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅ.22 ರಿಂದ 2 ದಿನಗಳ ಹೊಯ್ಸಳ ಸಾಹಿತ್ಯೋತ್ಸವ – ಎಸ್.ಎಲ್.ಭೈರಪ್ಪರಿಂದ ಉದ್ಘಾಟನೆ

    ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatra) ಕಾಂಗ್ರೆಸ್ ಪಕ್ಷ ಅಂದ್ರೆ ಏನು ಅನ್ನೋದು ಬಿಜೆಪಿಗೆ ಮನವರಿಕೆಯಾಗಿದೆ. ಈಗ ರಾಜ್ಯದಲ್ಲಿ ಪಿಎಸ್‌ಐ (PSI) ಹಗರಣದಿಂದಾಗಿ ಡಿಜಿಪಿ ಜೈಲಿನಲ್ಲಿದ್ದಾರೆ. ಪಿಎಸ್‌ಐ ಹಗರಣ ನಡೆದಾಗ ಇದೇ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಗೃಹಮಂತ್ರಿಯಾಗಿದ್ದರು. ಕೆಪಿಎಸ್‌ಸಿ (KPSC) ಸಹ ಭ್ರಷ್ಟಾಚಾರದಲ್ಲಿದೆ. ಡಿಡಿಸಿ ಬ್ಯಾಂಕ್‌ನಲ್ಲಿ (DCC Bank) ಉದ್ಯೋಗ ಹಣಕ್ಕಾಗಿ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ದ್ವಿಗುಣವಾಗಿದ್ದರೂ ಯೋಚನೆ ಮಾಡದ ಬಿಜೆಪಿಯವರು ಭ್ರಷ್ಟಾಚಾರವನ್ನೇ ಲೀಗಲ್ ಮಾಡಿಕೊಂಡಿದ್ದಾರೆ. ಅದರಲ್ಲೂ ಇಡೀ ದೇಶದಲ್ಲೇ ಕರ್ನಾಟಕ ಸಿಎಂ ಅತಿ ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಗಲಭೆಗಳನ್ನು ಸೃಷ್ಠಿ ಮಾಡುತ್ತಾರೆ, ಈ ಗಲಭೆಗಳಿಂದ ಯುವಕರ ಮೇಲೆ ನೇರ ಪರಿಣಾಮ ಬೀರುತ್ತಿದೆ. ಜಾತಿ-ಧರ್ಮಗಳ ನಡುವೆ ಕಾಂಟ್ರವರ್ಸಿ ಮಾಡುತ್ತಿದ್ದು, ಕರ್ನಾಟಕದಲ್ಲಿರುವ ಕಂಪನಿಗಳು ಹೈದರಾಬಾದ್‌ಗೆ ಎತ್ತಂಗಡಿ ಆಗುತ್ತಿವೆ. ಇದರಿಂದ ಬಂಡವಾಳದ ಹರಿವು ಕಡಿಮೆಯಾಗಲಿದೆ. ಈ ಎಲ್ಲದರ ವಿರುದ್ಧವಾಗಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್‍ನವರು ನಿಷ್ಪಪ್ರಯೋಜಕ, ಅಪ್ರಯೋಜಕ ಅಂತ ನಾವು ಹೇಳೋದಿಲ್ಲ: ಪ್ರಹ್ಲಾದ್ ಜೋಶಿ ಲೇವಡಿ

    ಕಾಂಗ್ರೆಸ್‍ನವರು ನಿಷ್ಪಪ್ರಯೋಜಕ, ಅಪ್ರಯೋಜಕ ಅಂತ ನಾವು ಹೇಳೋದಿಲ್ಲ: ಪ್ರಹ್ಲಾದ್ ಜೋಶಿ ಲೇವಡಿ

    ಹುಬ್ಬಳ್ಳಿ: ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatra) ರಾಹುಲ್ ಗಾಂಧಿ (Rahul Gandhi) ಮತ್ತು ಸಿದ್ದರಾಮಯ್ಯ (Siddaramaiah) ಆರೋಗ್ಯ ಸುಧಾರಿಸಿದೆ. ಕಾಂಗ್ರೆಸ್ ಅವರನ್ನ ನಿಷ್ಪಪ್ರಯೋಜಕ, ಅಪ್ರಯೋಜಕ, ಬುದ್ಧಿ ಇಲ್ಲದವರು ಅಂತ ನಾವು ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಲೇವಡಿ ಮಾಡಿದ್ದಾರೆ.

    rahul siddaramaiah dks

    ನನ್ನ ವಿರುದ್ಧ ಅಪಪ್ರಚಾರಕ್ಕೆ ಕೋಟಿ, ಕೋಟಿ ಖರ್ಚು ಮಾಡುತ್ತಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ರಾಹುಲ್ ಗಾಂಧಿ ವಿರುದ್ಧ ನಾವ್ಯಾಕೆ ಖರ್ಚು ಮಾಡಬೇಕು. ಇದು ಜನರಿಗೂ ಗೊತ್ತಾಗಿದೆ ಅವರ ಪಕ್ಷದವರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಒಕ್ಕಲಿಗ ಮತ ಸೆಳೆಯಲು JDS ಮೇಲೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್

    ಕಾಂಗ್ರೆಸ್ (Congress) ವಿರೋಧ ಪಕ್ಷದಲ್ಲಿ ಕುರುವುದಕ್ಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26, 27 ರಾಜ್ಯಗಳಲ್ಲಿ ಅವರದೇ ಅಧಿಕಾರವಿತ್ತು. ಆದರೆ ಈಗ ಕೇವಲ ಎರಡು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಇದಲ್ಲದೆ ರಾಜಸ್ಥಾನದಲ್ಲೂ ಇದೀಗ ಅಲುಗಾಡುತ್ತಿದೆ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದಾರೆ. ಉತ್ತರ ಪ್ರದೇಶದಲ್ಲಿ ಒಂದು ಸೀಟ್ ಗೆದ್ದಿಲ್ಲ. 398 ಸೀಟ್‍ನಲ್ಲಿ 388 ಸೀಟ್‍ನಲ್ಲಿ ಡಿಪಾಸೀಟ್ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದ ಹಿರಿಯ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ ನಿಧನ

    Live Tv
    [brid partner=56869869 player=32851 video=960834 autoplay=true]

  • ಒಕ್ಕಲಿಗ ಮತ ಸೆಳೆಯಲು JDS ಮೇಲೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್

    ಒಕ್ಕಲಿಗ ಮತ ಸೆಳೆಯಲು JDS ಮೇಲೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್

    ಮಂಡ್ಯ: ಒಂದು ಕಡೆ ರಾಹುಲ್ ಗಾಂಧಿಯ (Rahul Gandhi) ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatra) ಮಂಡ್ಯ (Mandya) ಜಿಲ್ಲಾ ಕಾಂಗ್ರೆಸ್‍ಗೆ  (Congress) ಹೊಸ ಹುಮ್ಮಸ್ಸು ಮೂಡಿದ್ದು, ಒಕ್ಕಲಿಗ ಮತ ಬ್ಯಾಂಕ್ ಅನ್ನು ತನ್ನತ್ತ ಸೆಳೆದು ಜೆಡಿಎಸ್ (JDS) ಕೋಟೆಯನ್ನು ಛಿದ್ರ ಮಾಡುವ ತಂತ್ರವನ್ನು ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ (N. Chaluvaraya Swamy) ಹೆಣೆಯಲು ಮುಂದಾಗಿದ್ದಾರೆ.

    ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಕ್ಕರೆ ನಾಡಿನಲ್ಲಿ ಮೂರು ದಿನ ಸಂಚರಿಸಿದ್ದು, ಹೋದ ಕಡೆಯಲೆಲ್ಲ ಅಭೂತ ಪೂರ್ವ ಬೆಂಬಲ ಸಿಕ್ಕಿದೆ. ಯಾತ್ರೆಯಲ್ಲಿ ಜನಸಾಗರಕ್ಕೆ ರಾಹುಲ್ ಸೇರಿದಂತೆ ರಾಜ್ಯ ನಾಯಕರ ದಂಗಾಗಿದ್ದಾರೆ. ಇದೇ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲಾ ಕಾಂಗ್ರೆಸ್ ಹೊಸ ಹುಮ್ಮಸ್ಸು ಮೂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋತಿದ್ದ ಕಾಂಗ್ರೆಸ್‍ಗೆ ಮತ್ತೆ ಪುಟಿದೇಳುವ ಆತ್ಮವಿಶ್ವಾಸ ಮೂಡಿದೆ. ಇದನ್ನೂ ಓದಿ: ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್

    ಈ ಯಾತ್ರೆಯಿಂದ ಒಂದು ರೀತಿ ಕಾಂಗ್ರೆಸ್‍ಗೆ ಬೂಸ್ಟರ್ ಡೋಸ್ ಲಸಿಕೆ ಸಿಕ್ಕಂತಾಗಿದ್ದು, ಮುಂದಿನ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕೈದು ಸ್ಥಾನ ಗೆಲ್ಲುವ ವಿಶ್ವಾಸ ಕಾಂಗ್ರೆಸ್ ನಾಯಕರಲ್ಲಿ ಮೂಡಿದೆ. ಇದರ ಪ್ಲಾನ್ ವರ್ಕೌಟ್ ಆಗಬೇಕು ಅಂದ್ರೆ ಒಕ್ಕಲಿಗರ ಮತಗಳನ್ನು ತನ್ನತ್ತ ಸೆಳೆಯಲೇ ಬೇಕಿರುವ ಅನಿವಾರ್ಯತೆ ಕೂಡ ಕಾಂಗ್ರೆಸ್‍ಗೆ ಇದೆ. ಇದನ್ನೂ ಓದಿ: ಕಾಂಡೋಮ್‍ಗಳನ್ನು ಹೆಚ್ಚಾಗಿ ಬಳಸ್ತಿರೋದು ನಾವು – ಭಾಗವತ್‍ಗೆ ಓವೈಸಿ ತಿರುಗೇಟು

    ಹಾಗಾಗಿ ಚೆಲುವರಾಯಸ್ವಾಮಿ ಸದಾ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ (DeveGowda) ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamy) ಮೇಲೆ ಫುಲ್ ಸಾಫ್ಟ್‌ ಕಾರ್ನರ್ ಹೊಂದಿದ್ದಾರೆ. ಮಂಡ್ಯದಲ್ಲಿ ಒಕ್ಕಲಿಗರು ದೇವೇಗೌಡರನ್ನು ಮರೆಯಲ್ಲ ಎಂಬ ಮಾಜಿ ಸಿಎಂ ಹೆಚ್‍ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೆಲುವರಾಯಸ್ವಾಮಿ, ದೇವೇಗೌಡರು ನಮ್ಮ ನಾಯಕರೇ, ನಾನು ಅವರ ಬಗ್ಗೆ ಲಘುವಾಗಿ ಮಾತನಾಡಲ್ಲ. ಕುಮಾರಸ್ವಾಮಿಯವರು ಮಾಜಿ ಮುಖ್ಯಮಂತ್ರಿಗಳು. ಅವರು ಕೂಡ ದೊಡ್ಡವರು. ಅವರ ಬಗ್ಗೆ ಮಾತಾಡೋದು ಬೇಡ ಎನ್ನುವ ಜೆಡಿಎಸ್ ನಾಯಕರ ವಿರುದ್ಧ ಮಾತನಾಡಲು ಹಿಂದೇಟು ಹಾಕ್ತಿದ್ದಾರೆ. ಅಲ್ಲದೇ ನಮ್ಮ ಜಿಲ್ಲೆಯ ಜನರ ಮೇಲೆ ನಂಬಿಕೆ ಇದೆ. ತಮ್ಮ ಮಕ್ಕಳನ್ನು ಜಿಲ್ಲೆಯ ಜನರು ಪ್ರೀತಿಸುತ್ತಾರೆ ಎನ್ನುವ ಮೂಲಕ ಜಿಲ್ಲೆಯ ಒಕ್ಕಲಿಗರು ನನ್ನ ನಾಯಕತ್ವದ ಪಕ್ಷವನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಸಾಫ್ಟ್‌ ಮಾತುಗಳಿಂದ ಇದ್ದರಷ್ಟೇ ಒಕ್ಕಲಿಗರು ಕಾಂಗ್ರೆಸ್ ಬೆಂಬಲಿಸುತ್ತಾರೆ ಎಂಬ ಸೂಕ್ಷ್ಮತೆ ಅರಿತಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕಚ್ಚಾಟ ಬಿಡಿ, ಎಲೆಕ್ಷನ್ ಗೆಲ್ಲಿಸಿ – ಮುಂದಿನ ಸಿಎಂ ಚರ್ಚೆಗೆ ಬ್ರೇಕ್ ಹಾಕಿದ ರಾಗಾ

    ಕಚ್ಚಾಟ ಬಿಡಿ, ಎಲೆಕ್ಷನ್ ಗೆಲ್ಲಿಸಿ – ಮುಂದಿನ ಸಿಎಂ ಚರ್ಚೆಗೆ ಬ್ರೇಕ್ ಹಾಕಿದ ರಾಗಾ

    ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ಒಳಗೆ ನಡೆಯುತ್ತಿರೋ ಮುಂದಿನ ಸಿಎಂ ಚರ್ಚೆಗೆ ರಾಹುಲ್ ಗಾಂಧಿ (Rahul Gandhi) ತೆರೆ ಎಳೆದಿದ್ದಾರೆ. ಚುನಾವಣೆ ಗೆದ್ದ ಬಳಿಕವೇ ಮುಂದಿನ ಸಿಎಂ (Chief Minister) ಆಯ್ಕೆ ಬಗ್ಗೆ ನಿರ್ಧಾರ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲ, ಸಂಘರ್ಷ ಬದಿಗಿಟ್ಟು ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಎಂದು ರಾಜ್ಯನಾಯಕರಿಗೆ ರಾಹುಲ್ ಗಾಂಧಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ತುರುವೇಕೆರೆ ತಾಲ್ಲೂಕಿನ ಅರಕರೆಪಾಳ್ಯದಲ್ಲಿ ಮಾಧ್ಯಮದವರೊಂದಿಗೆ ನಡೆದ ಸಂವಾದದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಅವರು, ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar), ಜಿ.ಪರಮೇಶ್ವರ್ ಸಮ್ಮುಖದಲ್ಲೇ ರಾಹುಲ್ ಗಾಂಧಿ ಖಡಕ್ ಸಂದೇಶ ರವಾನಿಸಿದ್ದಾರೆ. ಮುಂದಿನ ಸಿಎಂ ಜಟಾಪಟಿಗೆ ರಾಹುಲ್ ತೆರೆ ಎಳೆಯುವ ಕಸರತ್ತು ನಡೆಸಿದ್ದಾರೆ. ಮುಂದಿನ ಸಿಎಂ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಈಗ ನಡೀತಿರೋ ಮುಂದಿನ ಸಿಎಂ ವಿಚಾರ ಪಕ್ಷದ ವ್ಯವಸ್ಥೆಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಮುಂದಿನ ಚುನಾವಣೆಯಲ್ಲಿ (Election) ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ಗೆದ್ದ ಬಳಿಕವೇ ಮುಂದಿನ ಸಿಎಂ ಯಾರು ಅಂತ ನಿರ್ಧಾರವಾಗಲಿದೆ ಎಂದಿದ್ದಾರೆ. ಗೆದ್ದ ಬಳಿಕ ಮುಂದಿನ ಸಿಎಂ ಆಯ್ಕೆ ಬಗ್ಗೆ ಪಕ್ಷದ ಪದ್ಧತಿಯಂತೆ ಚರ್ಚಿಸಿ ನಿರ್ಧರಿಸಲಾಗುವುದು ಅಂತ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ.

    ಅಷ್ಟೇ ಅಲ್ಲ ಪಕ್ಷದಲ್ಲಿ ನಡೆಯುತ್ತಿರುವ ನಾನಾ ನೀನಾ ಸಂಘರ್ಷಕ್ಕೂ ತೆರೆ ಎಳೆಯಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಸಂಘರ್ಷ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಿ. ಒಗ್ಗಟ್ಟು ಕಾಯ್ದುಕೊಂಡು, ಭಿನ್ನಾಭಿಪ್ರಾಯ ಮರೆತು ಎಲ್ಲರೂ ಚುನಾವಣೆಗೆ ಕೆಲಸ ಮಾಡಲೇಬೇಕಾಗುತ್ತದೆ ಎಂದು ರಾಹುಲ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: ಟಿಪ್ಪು ಹೆಸರೇ ಗೊಂದಲದಲ್ಲಿದೆ, ಹಾಗಾಗಿ ಟ್ರೈನ್‌ನ ಹೆಸರು ಬದಲಿಸಿದ್ದೇವೆ: ನಳೀನ್ ಕುಮಾರ್ ಕಟೀಲ್

    ಇನ್ನು ಯಾರೇ ಎಐಸಿಸಿ ಅಧ್ಯಕ್ಷರಾದರೂ ಗಾಂಧಿ ಕುಟುಂಬದಲ್ಲಿ ರಿಮೋಟ್ ಕಂಟ್ರೋಲ್ ಇರುತ್ತೆ ಎಂಬ ಆರೋಪವನ್ನು ತಳ್ಳಿಹಾಕಿದ ರಾಹುಲ್, ಎಐಸಿಸಿ ಚುನಾವಣೆ ಬಗ್ಗೆ ನಾನು ಯಾವುದೇ ಹೇಳಿಕೆ ಕೊಡಲ್ಲ. ನಾಮಪತ್ರ ಸಲ್ಲಿಸಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರು  ಮತ್ತು ಶಶಿ ತರೂರ್ ಅವರು ಇಬ್ಬರಿಗೂ ಪಕ್ಷದಲ್ಲಿ ಉನ್ನತ ಹುದ್ದೆಗಳಿವೆ, ಗೌರವ ಇದೆ. ಇವರಿಬ್ಬರಲ್ಲಿ ಯಾರೇ ಗೆದ್ದರೂ ಅವರು ನಮ್ಮ ರಿಮೋಟ್ ಕಂಟ್ರೋಲ್ ಆಗಿರ್ತಾರೆ ಅಂತ ನನಗೆ ಅನಿಸಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

    ಮ್ಯಾಜಿಕ್ ನಂಬರ್ ಬರದಿದ್ರೆ ಜೆಡಿಎಸ್ (JDS) ಜತೆ ಮೈತ್ರಿನಾ ಎಂದು ಕೇಳಿದ ಪ್ರಶ್ನೆಗೆ, ಇದರ ಬಗ್ಗೆ ಸಿದ್ದರಾಮಯ್ಯ, ಡಿಕೆಶಿಯೇ ಉತ್ತರ ಕೊಡ್ತಾರೆ. ಚುನಾವಣೆಯಲ್ಲಿ ನಾವೇ ಗೆಲ್ತೇವೆ ಅಂತ ಜಾರಿಕೊಂಡ್ರು. ಕೈ ನಾಯಕರು ಬೇಲ್ ಮೇಲಿದ್ದಾರೆ ಎಂಬ ಬಿಜೆಪಿ (BJP) ಆರೋಪಕ್ಕೆ, ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ. ಇದರಿಂದಲೇ ಸರ್ಕಾರಗಳನ್ನು ಬೀಳಿಸುವ ರಾಜಕಾರಣ ಮಾಡ್ತಿದೆ. ಇದೇ ಎಲ್ಲ ಸಮಸ್ಯೆಗಳಿಗೂ ಕಾರಣ ಅಂತ ತಿರುಗೇಟು ನೀಡಿದರು. ಇದನ್ನೂ ಓದಿ: `ಕೆಲವೇ ಕ್ಷಣಗಳಲ್ಲಿ ವಿಧಾನಸೌಧ ಬ್ಲಾಸ್ಟ್’ – ಬೆದರಿಕೆ ಕರೆ ಮಾಡಿದ್ದ ಟೆಕ್ಕಿ ಅರೆಸ್ಟ್

    ಭಾರತ್ ಜೋಡೋ ಯಾತ್ರೆ ಇಂದು ತುಮಕೂರು ಪ್ರವೇಶಿಸಿದ್ದು, 7ನೇ ದಿನ ಮುಗಿಸಿದೆ. ರಾಹುಲ್ ಗೆ ಪರಮೇಶ್ವರ್, ಕೆ.ಎನ್ ರಾಜಣ್ಣ ಸೇರಿ ಹಲವು ತುಮಕೂರು ಕೈ ನಾಯಕರು ಸಾಥ್ ಕೊಟ್ಟಿದ್ರು. ಮಧ್ಯಾಹ್ನದ ಹೊತ್ತಿಗೆ ಡಿಕೆಶಿ ಬಂದು ಸೇರಿಕೊಂಡರು. ತುರುವೇಕೆರೆಯಲ್ಲಿ ಪಾದಯಾತ್ರೆಗೆ ಭಾರೀ ಜನಸ್ತೋಮ ಜಮಾಯಿಸಿತ್ತು. ಒಟ್ಟಿನಲ್ಲಿ ರಾಹುಲ್ ಗಾಂಧಿ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಯನ್ನಷ್ಟೇ ನಡೆಸ್ತಿಲ್ಲ. ಯಾತ್ರೆಯ ಜತೆಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಜೋಡಿಸುವ ಕೆಲಸವನ್ನು ಸಹ ಮಾಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • RSS ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು, ಸಾವರ್ಕರ್ ಸ್ಟೈಫಂಡ್ ಪಡೆಯುತ್ತಿದ್ದರು: ರಾಗಾ

    RSS ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು, ಸಾವರ್ಕರ್ ಸ್ಟೈಫಂಡ್ ಪಡೆಯುತ್ತಿದ್ದರು: ರಾಗಾ

    ತುಮಕೂರು: ಇತಿಹಾಸ ನೋಡಿದರೆ ಬಿಜೆಪಿ (BJP), ಆರ್‌ಎಸ್‌ಎಸ್‌ (RSS) ಎಲ್ಲಿಯೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯೇ ಆಗಿಲ್ಲ. ಆರ್‌ಎಸ್‌ಎಸ್‌ ಬ್ರಿಟಿಷರಿಗೆ  (British) ಸಹಾಯ ಮಾಡ್ತಾ ಇತ್ತು. ಸಾವರ್ಕರ್ (Savarkar) ಸ್ಟೈಫಂಡ್ ಪಡೆದುಕೊಳ್ಳುತ್ತಿದ್ದರು. ಭಾರತವನ್ನು (India) ಒಡೆಯುತ್ತಿರುವುದು ಆರ್‌ಎಸ್‌ಎಸ್‌ ಮತ್ತು ಬಿಜೆಪಿ. ಲಕ್ಷಾಂತರ ಮಂದಿ ಭಾರತ್ ಜೋಡೋ ಯಾತ್ರೆ (Bharat Jodo Yatra) ಮಾಡ್ತಾ ಇದ್ದಾರೆ. ನಾವು ದ್ವೇಷ ಹರಡುವ ಎಲ್ಲರ ವಿರುದ್ಧವೂ ಹೋರಾಡುತ್ತೇವೆ ಎಂದು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ತುರುವೇಕೆರೆಯ ಅರಳಿಕೆರೆ ಪಾಳ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಲ್ಲ. ಪತ್ರಕರ್ತರು ಪ್ರಶ್ನೆ ಕೇಳಲು ಅವಕಾಶವೇ ಇಲ್ಲ. ಇಲ್ಲಿಯವರೆಗೆ ಒಂದೇ ಒಂದು ಸುದ್ದಿಗೋಷ್ಠಿ ಮೋದಿ (Narendra Modi) ಮಾಡಿಲ್ಲ. ಆದ್ರೆ ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದೆ. ಹಾಗಾಗಿ ಈ ಸುದ್ದಿಗೋಷ್ಠಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್‌ಗೆ ಒಡೆಯರ್ ಎಕ್ಸ್‌ಪ್ರೆಸ್ ಬೋರ್ಡ್ ನೇತಾಕಿದ ರೈಲ್ವೆ ಇಲಾಖೆ

    ಚುನಾವಣೆಯಲ್ಲಿ ಕಾಂಗ್ರೆಸ್‍ನವರು ಎಲ್ಲರೂ ಒಗ್ಗಟ್ಟು ಕಾಯ್ದುಕೊಳ್ಳಬೇಕು. ಭಿನ್ನಾಭಿಪ್ರಾಯ ಮರೆತು ಎಲ್ಲರೂ ಚುನಾವಣೆಗೆ ಕೆಲಸ ಮಾಡಲೇಬೇಕಾಗುತ್ತದೆ. ಮ್ಯಾಜಿಕ್ ನಂಬರ್ ಬರದಿದ್ದರೆ, ಜೆಡಿಎಸ್ ಜೊತೆಗಿನ ಒಪ್ಪಂದದ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚೆ ಮಾಡಬೇಕಾಗುತ್ತದೆ. ಕರ್ನಾಟಕದಲ್ಲಿ ಅದರ ಅಗತ್ಯವೇ ಬೀಳುವುದಿಲ್ಲ. ಯಾರ ಸಹಾಯವೂ ಇಲ್ಲದೇ ನಾವು ಚುನಾವಣೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 60 ಸಾವಿರ ಹಸುಗಳನ್ನು ಬಲಿ ಪಡೆದ ಲಂಪಿ ವೈರಸ್ ಕರ್ನಾಟಕಕ್ಕೆ ಎಂಟ್ರಿ

    ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಚುನಾವಣೆ ಕುರಿತಾಗಿ ಮಾತನಾಡಿ, ಗಾಂಧಿ ಕುಟುಂಬ ಹೊರತುಪಡಿಸಿ ಯಾರೇ ಅಧ್ಯಕ್ಷರಾದರೂ ಏನೂ ಸಮಸ್ಯೆ ಆಗುವುದಿಲ್ಲ. ಎಲ್ಲರೂ ಕಾಂಗ್ರೆಸ್ ಪಕ್ಷದವರೇ. ಭಾರತ್ ಜೋಡೋ ಯಾತ್ರೆಗೆ ರಾಜಕೀಯ ಅಂಶವೂ ಸೇರಿದೆ ರಾಜಕೀಯ ಸ್ಪರ್ಶವೂ ಯಾತ್ರೆಗೆ ಇರಬಹುದು. ಯಾಕೆಂದರೆ ಬಹಳಷ್ಟು ಮಂದಿ ರಾಜಕಾರಣಿಗಳು ಯಾತ್ರೆಯಲ್ಲಿದ್ದಾರೆ. ಆದ್ರೆ ನನ್ನ ಮಟ್ಟಿಗೆ ಇದು ಭಾರತ ಜೋಡಿಸುವ ಉದ್ದೇಶದ ಯಾತ್ರೆ. ಜನರ ಬಳಿ ನಡೆದುಕೊಂಡು ಹೋಗುವುದು ಬೇರೆ, ಕಾರಿನಲ್ಲಿ ಹೋಗೋದು ಬೇರೆ. ನನಗೆ ನಡೆದುಕೊಂಡು ಹೋಗುವುದೇ ಇಷ್ಟ. ಯಾತ್ರೆ ಈಗ 31ನೇ ದಿನಕ್ಕೆ ಕಾಲಿಟ್ಟಿದೆ. ಎಷ್ಟು ದಿನ ಅನ್ನೋದು ಮುಖ್ಯ ಅಲ್ಲ. ಜನರ ಬಳಿ ನಡೆದು ಹೋದಾಗ ಅವರ ಮಾತುಗಳಿಗೆ ಕಿವಿಯಾಗಬಹುದು. ಅವರ ಸಮಸ್ಯೆ ಕೇಳಬಹುದು. ಯಾತ್ರೆಗೆ ಅದ್ಭುತ ಸಹಕಾರ, ಬೆಂಬಲ ಸಿಗುತ್ತಿದೆ. ಪ್ರತಿಯೊಬ್ಬರೂ ವೈಯಕ್ತಿಕವಾಗಿ ಬೆಂಬಲ ಕೊಡ್ತಿರೋದು ಗುಂಪು ಬೆಂಬಲಕ್ಕಿಂತ ದೊಡ್ಡದು ಎಂದು ಸಂತಸ ವ್ಯಕ್ತಪಡಿಸಿದರು.

    ಕರ್ನಾಟಕದಲ್ಲಿ (Karnataka) ಮುಂದಿನ ಸಿಎಂ ಯಾರು ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಒಂದು ತಂಡವಾಗಿದ್ದೇವೆ. ಕರ್ನಾಟಕದಲ್ಲಿ ಉತ್ತಮ ನಾಯಕರಿದ್ದಾರೆ. ಚುನಾವಣೆ ಗೆದ್ದ ಮೇಲೆ ಮುಂದಿನ ಸಿಎಂ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಈ ಪ್ರಶ್ನೆ ಈಗಲೇ ಉದ್ಭವಿಸಲ್ಲ. ಈಗ ಈ ಪ್ರಶ್ನೆ ನಮ್ಮ ಪಕ್ಷದ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸಬಹುದು. ಹೀಗಾಗಿ ಪಕ್ಷದ ಪದ್ಧತಿಯಂತೆ ಪಕ್ಷ ಗೆದ್ದ ಬಳಿಕ ನಿರ್ಧಾರ ಮಾಡಲಾಗುತ್ತದೆ. ನಮ್ಮಲ್ಲಿ ನಾಯಕರ ಕೊರತೆ ಇಲ್ಲ. ಬುದ್ಧಿವಂತ ನಾಯಕರು ನಮ್ಮಲ್ಲಿ ಇದ್ದಾರೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆ – ಮಹಿಳೆಗೆ ಮಾಸ್ಕ್ ತೊಡಿಸಿದ ರಾಗಾ

    ಭಾರತ್ ಜೋಡೋ ಯಾತ್ರೆ – ಮಹಿಳೆಗೆ ಮಾಸ್ಕ್ ತೊಡಿಸಿದ ರಾಗಾ

    ಮಂಡ್ಯ: ಕಾಂಗ್ರೆಸ್ (Congress) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಕರ್ನಾಟಕದಲ್ಲಿ ಇಂದು 6ನೇ ದಿನದಲ್ಲಿದ್ದು, ಅದ್ದೂರಿಯಾಗಿ ಸಾಗುತ್ತಿದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ (Rahul Gandh) ಅವರು ಯಾತ್ರೆಯ ವೇಳೆ ಅಲ್ಲಲ್ಲಿ ಸಣ್ಣ ಪುಟ್ಟ ಕೆಲಸಗಳಿಂದ ಗಮನ ಸೆಳೆಯುತ್ತಲೇ ಇದ್ದಾರೆ. ಇಂದು ರಾಗಾ ಮಹಿಳೆಯೊಬ್ಬರಿಗೆ (Woman) ಮಾಸ್ಕ್ (Mask) ತೊಡಿಸಿ ಸುದ್ದಿಯಾಗಿದ್ದಾರೆ.

    ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಮಂಡ್ಯ (Mandya) ಜಿಲ್ಲೆಯ ನಾಗಮಂಗಲದ ಬಲ್ಲೇನಹಳ್ಳಿ ಗೇಟ್‌ನಿಂದ ಇಂದು ಪಾದಯಾತ್ರೆ ಪ್ರಾರಂಭವಾಗಿದೆ. ಈ ವೇಳೆ ರಾಹುಲ್ ಗಾಂಧಿಯನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ಬಳಿಕ ರಾಗಾ ಪುಟಾಣಿ ಮಕ್ಕಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಆರ್‌ಬಿಐನಿಂದ ಶೀಘ್ರದಲ್ಲೇ ಪ್ರಾಯೋಗಿಕವಾಗಿ ಡಿಜಿಟಲ್ ಕರೆನ್ಸಿ ಬಿಡುಗಡೆ

    ಇದೇ ವೇಳೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು ರಾಹುಲ್ ಗಾಂಧಿ ಕಡೆಗೆ ಓಡೋಡಿ ಬಂದಿದ್ದಾರೆ. ರಾಹುಲ್ ಗಾಂಧಿ ಅವರ ಕೈ ಮುಟ್ಟಿ ನಮಸ್ಕಾರ ಮಾಡಿದ ಬಳಿಕ ಮಹಿಳೆ ತಮ್ಮ ಮಾಸ್ಕ್ ಅನ್ನು ಸರಿಯಾಗಿ ಹಾಕಿಕೊಳ್ಳಲು ಪ್ರಯತ್ನಿಸಿದ್ದಾರೆ. ಆಗ ರಾಹುಲ್ ಗಾಂಧಿ ತಾವೇ ಆ ಮಹಿಳೆಗೆ ಮಾಸ್ಕ್ ಅನ್ನು ಸರಿಯಾಗಿ ಧರಿಸಲು ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಇಂದು ಸಂಜೆ ರಾಹುಲ್ ಗಾಂಧಿ ಅವರು ಅಂಚೆಬೂನಹಳ್ಳಿಯಿಂದ ಬೆಳ್ಳೂರಿಗೆ ಬಂದು ಬಳಿಕ ಆದಿಚುಂಚನಗಿರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್

    ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್-ಸಿದ್ದು ರನ್ನಿಂಗ್ ರೇಸ್

    ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ (Rahul Gandhi), ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಕೈ ಹಿಡಿದುಕೊಂಡು ಅವರೊಂದಿಗೆ ಓಡಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    ಹೌದು, ಭಾರತ್ ಜೋಡೋ ಯಾತ್ರೆ ವೇಳೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುತ್ತಾರೆ. ಕಾಂಗ್ರೆಸ್ (Congress) ನಾಯಕರ ಸುತ್ತ ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ. ಈ ವೇಳೆ ಇದ್ದಕ್ಕಿದ್ದಂತೆ ಎಲ್ಲರೂ ಆಶ್ಚರ್ಯ ಪಡುವ ರೀತಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಎಡಗೈಯನ್ನು ಹಿಡಿದುಕೊಂಡು ಓಡಲು ಆರಂಭಿಸುತ್ತಾರೆ. ಸಿದ್ದರಾಮಯ್ಯ ಅವರು ಕೂಡ ರಾಹುಲ್ ಗಾಂಧಿ ಸಮವಾಗಿ ಓಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಗಂಡನನ್ನು ಕೊಲೆ ಮಾಡುವುದಾಗಿ ಹೆದರಿಸಿ ವೃದ್ಧೆ ಮೇಲೆ 1 ವರ್ಷ ನಿರಂತರ ಅತ್ಯಾಚಾರ

    ಕರ್ನಾಟಕದಲ್ಲಿ (Karnataka) ಸೆಪ್ಟೆಂಬರ್ 30 ರಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯು ಅಕ್ಟೋಬರ್ 21 ರವರೆಗೂ ಮುಂದುವರಿಯಲಿದೆ. ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಮಧ್ಯೆ ಭಿನ್ನಾಭಿಪ್ರಾಯವಿದ್ದರೂ, ಇಬ್ಬರೂ ಒಟ್ಟಾಗಿ ರಾಹುಲ್ ಗಾಂಧಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಸಾಥ್ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಪಾದಯಾತ್ರೆ ಪ್ರವೇಶಿಸುತ್ತಿದ್ದಂತೆಯೇ ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕೈ ಹಿಡಿದುಕೊಂಡು ನಗಾರಿ ಬಾರಿಸುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಜಪ ಮಾಡಿದರು.

    ಈ ಹಿಂದೆ ದಾವಣಗೆರೆಯ (Davangere) ಅಮೃತ ಮಹೋತ್ಸವದಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ಅಪ್ಪಿಕೊಳ್ಳುವಂತೆ ಹೇಳಿ ಒಗ್ಗಟ್ಟು ಪ್ರದರ್ಶಿಸಿದ್ದರು. ಇದನ್ನೂ ಓದಿ: ಜಿಮ್‍ಗಳಲ್ಲಿನ ಪ್ರೊಟೀನ್ ಪೌಡರ್‌ನಿಂದ ಸೈಡ್ ಎಫೆಕ್ಟ್- ಸಾಂಪಲ್ಸ್ ಲ್ಯಾಬ್‍ಗೆ ಕೊಟ್ಟ ಆರೋಗ್ಯ ಇಲಾಖೆ

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆ – ಮಂಡ್ಯದಲ್ಲಿ ಕಾಣಿಸಿಕೊಂಡಿತು ಸಾವರ್ಕರ್ ಫೋಟೋ

    ಭಾರತ್ ಜೋಡೋ ಯಾತ್ರೆ – ಮಂಡ್ಯದಲ್ಲಿ ಕಾಣಿಸಿಕೊಂಡಿತು ಸಾವರ್ಕರ್ ಫೋಟೋ

    ಮಂಡ್ಯ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ (Savarkar) ಅವರನ್ನು ಎಂದಿಗೂ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಾದಿಸುವ ಕಾಂಗ್ರೆಸ್ (Congress) ಮತ್ತೊಮ್ಮೆ ಗೊಂದಲಕ್ಕೆ ಸಿಲುಕಿಕೊಂಡಿದೆ. ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಪೋಸ್ಟರ್‌ನಲ್ಲಿ (Poster) ಮತ್ತೊಮ್ಮೆ ಸಾವರ್ಕರ್ ಫೋಟೋ ಕಾಣಿಸಿಕೊಂಡಿದೆ. ಆದರೆ ಇದು ದುಷ್ಕರ್ಮಿಗಳ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜೋಡೋ ಯಾತ್ರೆ ಇದೀಗ ಕರ್ನಾಟಕದ ಮಂಡ್ಯ (Mandya) ಜಿಲ್ಲೆಯನ್ನು ತಲುಪಿದೆ. ಆದರೆ ಅಲ್ಲಿ ಈ ಯಾತ್ರೆಗೆ ಸಂಬಂಧಪಟ್ಟ ಒಂದು ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ ಕಾಣಿಸಿಕೊಂಡಿದೆ. ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋಗಳೂ ಕಂಡುಬಂದಿವೆ.

    ಈ ಪೋಸ್ಟರ್ ಶಾಂತಿನಗರ ಶಾಸಕ ಹ್ಯಾರಿಸ್‌ಗೆ ಸೇರಿದ್ದು ಎಂದು ಸುದ್ದಿ ಹಬ್ಬುತ್ತಲೇ ಅವರು ಮಾತನಾಡಿ, ಇದು ಕೆಲ ಕಿಡಿಗೇಡಿಗಳ ಕೃತ್ಯ, ನಾವು ಮಾಡಿರುವುದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲೆಯಲ್ಲಿ ದೂರು ದಾಖಲಿಸುವುದಾಗಿಯೂ ಹ್ಯಾರಿಸ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜದ ಫೋಟೋ- ಸ್ಟೇಟಸ್ ಹಾಕಿದ್ದ 8 ಮಂದಿ ವಿರುದ್ಧ ಪ್ರಕರಣ

    ಇದಕ್ಕೂ ಮೊದಲು ಸೆಪ್ಟೆಂಬರ್ 21 ರಂದು ಕೇರಳದಲ್ಲಿ ಭಾರತ್ ಜೋಡೋ ಯಾತ್ರೆಯ ಪೋಸ್ಟರ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳ ಸಾಲಿನಲ್ಲಿ ಸಾವರ್ಕರ್ ಫೋಟೋ ಕೂಡಾ ಕಾಣಿಸಿಕೊಂಡಿತ್ತು. ಬಳಿಕ ಅದು ಪ್ರಿಂಟಿಂಗ್ ಮಿಸ್ಟೇಕ್ ಎಂದು ಸ್ಪಷ್ಟನೆ ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಅದರ ಮೇಲೆ ಮಹಾತ್ಮಾ ಗಾಂಧೀಜಿಯವರ ಫೋಟೋ ಅಂಟಿಸಿ ಸಾವರ್ಕರ್ ಫೋಟೋವನ್ನು ಮುಚ್ಚಿ ಹಾಕಿದ್ದರು. ಇದನ್ನೂ ಓದಿ: ದಸರಾ ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ – 9 ಜನರ ವಿರುದ್ಧ ಎಫ್‌ಐಆರ್

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    ಮಂಡ್ಯ: ನಿರುದ್ಯೋಗ ಹೆಚ್ಚಿಸುವ, ಬೆಲೆ ಏರಿಕೆ ಮಾಡುವ ಸರ್ಕಾರ ಬೇಡ. ಈ ಬಿಜೆಪಿ (BJP) ಸರ್ಕಾರ ದಲಿತರ (Dalits) ವಿರೋಧಿ , ದ್ವೇಷ ಹಬ್ಬಿಸುವ ಸರ್ಕಾರ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಕಿಡಿಕಾರಿದ್ದಾರೆ.

    ಭಾರತ್ ಜೋಡೋ ಪಾದಯಾತ್ರೆ (Bharat Jodo Yatra) ಹಿನ್ನೆಲೆ ಇಂದು ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬ್ರಹ್ಮ ದೇವರಹಳ್ಳಿಗೆ ಬಂದು ತಲುಪಿದ ರಾಹುಲ್ ಗಾಂಧಿ ಜನರನ್ನುದ್ದೇಶಿಸಿ ಮಾತನಾಡಿರು. ಈ ವೇಳೆ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ನಡೆಸುವುದು ಸುಲಭವಲ್ಲ. ದೇಶದಲ್ಲಿ ದ್ವೇಷ ಹಬ್ಬಿಸುವ ಪ್ರಯತ್ನಗಳು ನಡೆಯುತ್ತಿವೆ. ದ್ವೇಷ ಹಬ್ಬಿಸುವುದು ದೇಶಕ್ಕೆ ದ್ರೋಹ ಬಗೆದಂತೆ. ನಾವು ದ್ವೇಷ, ಹಿಂಸೆಯನ್ನು ಸಹಿಸಲ್ಲ ಎಂದರು.

    ನಾನು ರೈತ ಮಹಿಳೆಯರ ಜತೆ ಸಂವಾದ ನಡೆಸಿದೆ. ಅವರ ಪುರುಷರು ಬೆಳೆ ಸಾಲ ಮಾಡಿ ಸಂಕಷ್ಟಕ್ಕೆ ಒಳಗಾದ ವ್ಯಥೆ ಹೇಳಿದರು. ಆ ರೈತ ಮಹಿಳೆಯರ ಪತಿಯಂದಿರು ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡರು. ರೈತರ ನೋವು ಎಂಥದ್ದು ಅಂತ ಯೋಚಿಸುತ್ತಿದ್ದೆ. ಕುಟುಂಬದವರ ಜೊತೆಗೂ ಸಾಲದ ಬಗ್ಗೆ ಹೇಳಲಾಗದ ಪರಿಸ್ಥಿತಿ ಅವರಿಗೆ ಇತ್ತು. ಆ ರೈತರು ಶೇ.24 ಬಡ್ಡಿಗೆ ಸಾಲ ಪಡೆದಿದ್ದರು. ನಮ್ಮ ದೇಶದಲ್ಲಿ ಶೇ.6 ಬಡ್ಡಿಯಲ್ಲಿ ಶ್ರೀಮಂತರಿಗೆ ಸಾಲ ಸಿಗುತ್ತಿದೆ. ಆದರೆ ರೈತರಿಗೆ ಶೇ.24 ರಷ್ಟು ಬಡ್ಡಿಯಲ್ಲಿ ಸಾಲ ಕೊಡಲಾಗುತ್ತಿದೆ. ಇದು ನಮ್ಮ ದೇಶದ ಈಗಿನ ಸ್ಥಿತಿ. 3 ರೈತ ವಿರೋಧಿ ಕಾಯ್ದೆಗಳನ್ನು ಇನ್ನೂ ರಾಜ್ಯದಲ್ಲಿ ವಜಾ ಮಾಡಿಲ್ಲ ಎಂದು ವಾಗ್ವಾದ ನಡೆಸಿದರು.

    ನೋಟು ಅಮಾನ್ಯೀಕರಣ, ಜಿಎಸ್‌ಟಿಯಿಂದ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಇವತ್ತು 2 ಭಾರತಗಳನ್ನು ಸೃಷ್ಟಿಸಲಾಗಿದೆ. ಒಂದು ಭಾರತ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಶಾಂತಿಯಿಂದ ಪಾದಯಾತ್ರೆ ಮಾಡುತ್ತಿದೆ. ಇನ್ನೊಂದು ಭಾರತ ಶ್ರೀಮಂತರಿಂದ ತುಂಬಿದೆ. ಶ್ರೀಮಂತರ, ಉದ್ಯಮಿಗಳ ಭಾರತಕ್ಕೆ ದೇಶದ ಯುವಕರಿಗೆ ಇನ್ನೂ ಉದ್ಯೋಗ ಕೊಡಲು ಆಗಿಲ್ಲ. ಅತ್ಯಂತ ಶ್ರೀಮಂತ ಉದ್ಯಮಿಯೂ ಭಾರತದವರೇ ಆಗಿದ್ದಾರೆ. ಅತ್ಯಂತ ಬಡತನವೂ ಭಾರತದಲ್ಲೇ ಇದೆ. ಬೆಲೆ ಏರಿಕೆ ದೇಶದ ಜನರನ್ನು ಕಿತ್ತು ತಿನ್ನುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಳೆ ಇಡಿ ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡ್ತೀವಿ – ಡಿಕೆಶಿ

    ನಮಗೆ ಬೇಕಾಗಿರುವುದು ದ್ವೇಷ ಹಬ್ಬಿಸುವ, ನಿರುದ್ಯೋಗ ಹೆಚ್ಚಿಸುವ, ಬೆಲೆ ಏರಿಕೆ ಇರುವ ದೇಶ ಅಲ್ಲ. ಬಿಜೆಪಿ ಸರ್ಕಾರ ದಲಿತರ ವಿರೋಧಿಯಾಗಿದೆ. ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗವನ್ನು ಸಿದ್ದರಾಮಯ್ಯ ಸಿಎಂ ಇದ್ದಾಗ ರಚಿಸಿದ್ದರು. ಎಸ್‌ಟಿ ಮೀಸಲಾತಿ ಶೇ.3 ರಿಂದ ಶೇ.7 ಹೆಚ್ಚಿಸುವ, ಎಸ್‌ಸಿ ಮೀಸಲಾತಿ ಶೇ.15 ರಿಂದ ಶೇ.17 ಕ್ಕೆ ಏರಿಸುವ ಶಿಫಾರಸು ಮಾಡಲಾಯ್ತು. ಮೂರೂವರೆ ವರ್ಷವಾದರೂ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿ ಮಾಡಿಲ್ಲ. ಬಿಜೆಪಿ ಕೂಡಲೇ ಈ ವರದಿ ಜಾರಿ ಮಾಡಲು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

    ಇಂದು ಬೆಳಗ್ಗೆ ಪಾಂಡವಪುರದ ಬೆಳ್ಳಾಲೆಯಿಂದ ಆರಂಭವಾಗಿದ್ದ ಭಾರತ್ ಜೋಡೋ ಪಾದಯಾತ್ರೆ ಸುಮಾರು 18 ಕಿ.ಮೀ ಸಾಗಿ ಬಂದು, ನಾಗಮಂಗಲ ತಾಲೂಕಿನ ಬ್ರಹ್ಮ ದೇವರಹಳ್ಳಿಗೆ ಬಂದು ತಲುಪಿದೆ. ರಾಹುಲ್ ಗಾಂಧಿ ಅವರು ಇಂದು ರಾತ್ರಿ ಬ್ರಹ್ಮದೇವನಹಳ್ಳಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]