Tag: bharat jodo yatra

  • ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

    ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

    ನವದೆಹಲಿ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಈಗಾಗಲೇ ಪ್ರಾರಂಭಿಸಿದೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಸುಮಾರು 230 ಜನರು ಪಾಲ್ಗೊಂಡಿದ್ದಾರೆ. ಯಾತ್ರೆಯಲ್ಲಿ ರಾಹುಲ್ ಗಾಂಧಿ ವಿಶ್ರಾಂತಿಯನ್ನು ಎಲ್ಲಿ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಇಲ್ಲಿದೆ.

    ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಸುಮಾರು 60 ಟ್ರಕ್‌ಗಳನ್ನು ಗಣ್ಯರ ವಿಶ್ರಾಂತಿಗಾಗಿಯೇ ಸಜ್ಜುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೂ ಕೂಡಾ ಇವುಗಳಲ್ಲೇ ಒಂದು ಟ್ರಕ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಎನ್ನಲಾಗಿದ್ದು, ಅದರಲ್ಲಿ ಎಲ್ಲಾ ರೀತಿಯ ಅನುಕೂಲಕರ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ.

    ಈ ಬಗ್ಗೆ ಮಾಹಿತಿ ನೀಡಿದ ಪಕ್ಷದ ನಾಯಕ ಜೈರಾಮ್ ರಮೇಶ್, ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ 3,570 ಕಿ.ಮೀ ಸಂಪೂರ್ಣ ದೂರವನ್ನು ರಾಹುಲ್ ಗಾಂಧಿ ಸೇರಿದಂತೆ 119 ಯಾತ್ರಿಗಳು ಕ್ರಮಿಸಲಿದ್ದಾರೆ. ಈ ವೇಳೆ ವಿಶ್ರಾಂತಿಗಾಗಿ ಅತಿಥಿ ಯಾತ್ರಿಗಳು ಸುಸಜ್ಜಿತ ಕಂಟೈನರ್‌ಗಳಲ್ಲಿ ಉಳಿಯಲಿದ್ದಾರೆ ಎಂದಿದ್ದಾರೆ.

    ನಾವು ನಿನ್ನೆಯಿಂದ ಕಂಟೈನರ್‌ಗಳಲ್ಲಿ ಉಳಿದುಕೊಂಡಿದ್ದೇವೆ. ಒಟ್ಟು 60 ಕಂಟೈನರ್‌ಗಳಿದ್ದು, ಇದರಲ್ಲಿ ಸುಮಾರು 230 ಜನರು ತಂಗುತ್ತಿದ್ದಾರೆ. ಕೆಲವು 1 ಹಾಸಿಗೆ, ಕೆಲವು 2 ಹಾಸಿಗೆಗಳು, ಕೆಲವು 4 ಹಾಸಿಗೆಗಳು ಮತ್ತು ಕೆಲವು 12 ಹಾಸಿಗೆಯ ಕಂಟೈನರ್‌ಗಳು ಇವೆ ಎಂದು ತಿಳಿಸಿದ್ದಾರೆ. ಇದ್ನನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ವರದಿಗಳ ಪ್ರಕಾರ ರಾಹುಲ್ ಗಾಂಧಿ ತಮ್ಮ ಯಾತ್ರೆಯಲ್ಲಿ ಖಾಸಗಿ ಬಳಕೆಗೆ ಒಂದು ಟ್ರಕ್ ಅನ್ನು ಹೊಂದಿದ್ದಾರೆ. ಅದರಲ್ಲಿ 2 ಹಾಸಿಗೆಯನ್ನು ಇರಿಸಲಾಗಿದ್ದು, ಹವಾನಿಯಂತ್ರಿತ ವ್ಯವಸ್ಥೆಯೂ ಇದೆ ಎನ್ನಲಾಗಿದೆ.

    ರಾಹುಲ್ ಗಾಂಧಿಯನ್ನು ಹೊರತುಪಡಿಸಿ ಇತರ ನಾಯಕರುಗಳಿಗೆ 6 ಅಥವಾ 12 ಹಾಸಿಗೆಗಳಿರುವ ಟ್ರಕ್‌ಗಳನ್ನು ನೀಡಲಾಗಿದೆ. ಎಲ್ಲಾ ಟ್ರಕ್‌ಗಳಲ್ಲೂ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ ಎನ್ನಲಾಗಿದ್ದರೂ ಹೆಚ್ಚಿನವುಗಳಲ್ಲಿ ಶೌಚಾಲಯಗಳನ್ನು ಜೋಡಿಸಲಾಗಿದೆ ಎನ್ನಲಾಗಿದೆ.

    ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದ ಕಡೆಗೆ ಸಾಗಲಿದ್ದು, 3,500 ಕಿ.ಮೀ ದೂರವನ್ನು ಕ್ರಮಿಸಲಿದೆ. 150 ದಿನಗಳಲ್ಲಿ ಇದು 12 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳನ್ನು ಹಾದುಹೋಗಲಿದೆ. ಇದ್ನನೂ ಓದಿ: ನಾನೇನು ಮಾಡ್ಬೇಕು ಎಂಬುದನ್ನು ಕ್ಲಿಯರ್ ಆಗಿ ನಿರ್ಧರಿಸಿದ್ದೇನೆ: ರಾಹುಲ್ ಗಾಂಧಿ

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ನವದೆಹಲಿ: ಕಾಂಗ್ರೆಸ್ (Congress) ತಮಿಳುನಾಡಿನಿಂದ ಭಾರತ್ ಜೋಡೋ ಯಾತ್ರೆ (Bharat Jodo Yatra) ಆರಂಭಿಸಿದೆ. ಈ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಧರಿಸಿದ್ದ ಬರೋಬ್ಬರಿ 41,000 ರೂ.ನ ಬರ್ಬೆರ್ರಿ (Burberry t-shirt) ಟೀಶರ್ಟ್ ಕುರಿತಾಗಿ ಬಿಜೆಪಿ (BJP) ವ್ಯಂಗ್ಯವಾಡಿದೆ.

    ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಬಿಳಿ ಬಣ್ಣದ ಟೀಶರ್ಟ್ ಧರಿಸಿರುವ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಭಾರತ್ ದೇಕೋ ಎಂದು ಅಡಿಬರಹ ನೀಡಿದೆ.

    ಈ ಟ್ವೀಟ್‍ಗೆ ಟಕ್ಕರ್ ನೀಡಿರುವ ಕಾಂಗ್ರೆಸ್, ಭಾರತ್ ಜೋಡೋ ಯಾತ್ರೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಮಾತನಾಡಿದ್ದೇವೆ. ಬಿಜೆಪಿ ಬಟ್ಟೆ ಬಗ್ಗೆ ಮಾತನಾಡುತ್ತಿದೆ. ಮೋದಿಜಿಯವರ (Narendra Modi) 10 ಲಕ್ಷ ಬೆಲೆಯ ಸೂಟು, 1.5 ಲಕ್ಷ ಬೆಲೆಯ ಕನ್ನಡಕದ ಬಗ್ಗೆಯೂ ಚರ್ಚೆಯಾಗಲಿ ಎಂದು ಕಾಂಗ್ರೆಸ್ ಬರೆದುಕೊಂಡಿದೆ. ಇದನ್ನೂ ಓದಿ: ನಾನೇನು ಮಾಡ್ಬೇಕು ಎಂಬುದನ್ನು ಕ್ಲಿಯರ್ ಆಗಿ ನಿರ್ಧರಿಸಿದ್ದೇನೆ: ರಾಹುಲ್ ಗಾಂಧಿ

    ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆಯ ಮೂರನೇ ದಿನವಾದ ಇಂದು ತಮಿಳುನಾಡಿನ ನಾಗರ್ಕೋಯಿಲ್‍ನಲ್ಲಿ ಆರಂಭಗೊಂಡಿತು. ರಾಹುಲ್ ಗಾಂಧಿ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಿನ್ನೆ ಸುಮಾರು 13 ಕಿಮೀ ವ್ಯಾಪ್ತಿಯನ್ನು ಕ್ರಮಿಸಿದ್ದ ಕಾಂಗ್ರೆಸ್ ಯಾತ್ರೆಯು ತಮಿಳುನಾಡಿನ ಸುಚಿಂದ್ರಂನಲ್ಲಿರುವ 101 ವರ್ಷಗಳ ಹಳೆಯದಾದ ಶಾಲೆಯಲ್ಲಿ ಕೊನೆಗೊಳಿಸಲಾಯಿತು. ಆ ಬಳಿಕ ರಾಹುಲ್ ಗಾಂಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದನ್ನೂ ಓದಿ: ಬೆಂಗಳೂರಿನ ಕೆಟ್ಟ ಪರಿಸ್ಥಿತಿಗೆ ಬಿಜೆಪಿಯೇ ಕಾರಣ: ಸಿದ್ದರಾಮಯ್ಯ ಕಿಡಿ

    ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದು, ಯಾತ್ರೆಯು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯು 3,500 ಕಿ.ಮೀ ದೂರವನ್ನು ಕ್ರಮಿಸುತ್ತಿದ್ದು 12 ರಾಜ್ಯಗಳನ್ನು ಹಾದುಹೋಗಲಿದೆ.

    Live Tv
    [brid partner=56869869 player=32851 video=960834 autoplay=true]

  • ದ್ವೇಷ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ; ದೇಶವನ್ನು ಕಳೆದುಕೊಳ್ಳಲು ಬಯಸಲ್ಲ – ರಾಹುಲ್ ಗಾಂಧಿ

    ದ್ವೇಷ ರಾಜಕಾರಣಕ್ಕೆ ತಂದೆಯನ್ನು ಕಳೆದುಕೊಂಡೆ; ದೇಶವನ್ನು ಕಳೆದುಕೊಳ್ಳಲು ಬಯಸಲ್ಲ – ರಾಹುಲ್ ಗಾಂಧಿ

    ಚೆನ್ನೈ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಚಾಲನೆ ಸಿಕ್ಕಿದೆ. ಈ ವೇಳೆ ತಂದೆ ರಾಜೀವ್ ಗಾಂಧಿಯನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, ದ್ವೇಷ ಹಾಗೂ ವಿಭಜನೆ ರಾಜಕೀಯದ ಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ ಎಂದು ಹೇಳಿದರು.

    ಭಾರತ್ ಜೋಡೋ ಆರಂಭಿಸುವುದಕ್ಕೂ ಮುನ್ನ ರಾಹುಲ್ ಗಾಂಧಿ ಶ್ರೀಪೆರಂಬೂರ್‌ನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಸ್ಮಾರಕದ ಆವರಣದಲ್ಲಿ ಗಿಡ ನೆಟ್ಟು, ತಂದೆಯನ್ನು ಸ್ಮರಿಸಿದರು. ಈ ವೇಳೆ ರಾಹುಲ್‌ಗೆ ಡಿಕೆಶಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ಸಾಥ್ ನೀಡಿದರು.

    ಇದರ ಫೋಟೋಗಳನ್ನು ಟ್ವೀಟ್ ಮಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ವಿಭಜನೆ ರಾಜಕೀಯದ ಕಾರಣ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ನಾನು ನನ್ನ ದೇಶವನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಆಸೆ ಭಯವನ್ನು ಸೋಲಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿ ಇದ್ದರೆ ಏನು ಬೇಕಿದ್ದರೂ ಮಾಡಬಹುದು ಎಂದರು. ಇದನ್ನೂ ಓದಿ: ಇಂದು 606 ಕೇಸ್ – 6 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

    ಭಾರತ್ ಜೋಡೋ ಯಾತ್ರೆಯನ್ನು ಉದ್ಘಾಟಿಸಿದ ಬಳಿಕ ಗಾಂಧಿ ಸ್ಮಾರಕಕ್ಕೆ ನಮಿಸಿದ ರಾಹುಲ್ ಗಾಂಧಿ ಬಳಿಕ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶ ವಿಭಜನೆ ರಾಜಕೀಯ, ಮತೋನ್ಮಾದ, ನಿರುದ್ಯೋಗ, ಹಣದುಬ್ಬರ, ಅಸಮಾನತೆ ವಿರುದ್ಧ ದನಿ ಎತ್ತುವುದು, ಇದರ ವಿರುದ್ಧ ದೇಶದ ಜನರನ್ನೂ ಒಗ್ಗೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದರು.

    ಇಂದಿನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಗಾಂಧಿ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಭೂಪೇಶ್ ಭಘಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

    ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸುದೀರ್ಘ ಯಾತ್ರೆ ಕಾಶ್ಮೀರದವರೆಗೂ ಎಂದರೆ 3,750 ಕಿ.ಮೀ ದೂರ ಸಾಗಲಿದೆ. ಈ ಯಾತ್ರೆ 12 ರಾಜ್ಯಗಳಲ್ಲಿ 150 ದಿನ ನಡೆಯಲಿದೆ. ನಿತ್ಯ 25 ಕಿ.ಮೀ ಈ ಪಾದಯಾತ್ರೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತ್‌ ಜೋಡೋ ಯಾತ್ರೆಯನ್ನು ಪಾಕಿಸ್ತಾನದಿಂದ ಆರಂಭಿಸಬೇಕಿತ್ತು: ಹಿಮಾಂತ ಬಿಸ್ವಾ ಶರ್ಮಾ

    ಭಾರತ್‌ ಜೋಡೋ ಯಾತ್ರೆಯನ್ನು ಪಾಕಿಸ್ತಾನದಿಂದ ಆರಂಭಿಸಬೇಕಿತ್ತು: ಹಿಮಾಂತ ಬಿಸ್ವಾ ಶರ್ಮಾ

    ದಿಸ್ಪುರ್‌: ಭಾರತ್‌ ಜೋಡೋ ಯಾತ್ರೆಯನ್ನು(Bharat Jodo Yatra )ಕಾಂಗ್ರೆಸ್‌ ಪಾಕಿಸ್ತಾನದಿಂದ ಆರಂಭಿಸಬೇಕಿತ್ತು ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ(Himanta Biswa Sarma) ಹೇಳಿದ್ದಾರೆ.

    ಕಾಂಗ್ರೆಸ್‌(Congress) ಭಾರತ್‌ ಜೋಡೋ ಯಾತ್ರೆಯನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 1947ರಲ್ಲಿ ಕಾಂಗ್ರೆಸ್‌ ಅವಧಿಯಲ್ಲಿ ಭಾರತ ವಿಭಜನೆಯಾಯಿತು. ಹೀಗಾಗಿ ಭಾರತದಲ್ಲಿ ಈ ಅಭಿಯಾನವನ್ನು ಆರಂಭಿಸುವ ಬದಲು ರಾಹುಲ್‌ ಗಾಂಧಿ ಪಾಕಿಸ್ತಾನದಲ್ಲಿ ಆರಂಭಿಸಿದರೆ ಉತ್ತಮವಾಗಿರುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ಭಾರತ ಈಗ ಒಗ್ಗಟ್ಟಾಗಿದೆ. ಭಾರತದಲ್ಲಿ ಈ ಯಾತ್ರೆಯನ್ನು ಕೈಗೊಂಡರೆ ಏನು ಪ್ರಯೋಜನವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    150 ದಿನಗಳ ಕಾಲ ನಡೆಯಲಿರುವ ಭಾರತ್‌ ಜೋಡೋ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಕನ್ಯಾಕುಮಾರಿಯಿಂದ ಶ್ರೀನಗರದವರೆಗೆ 3,570 ಕಿ.ಮೀ ಪಾದಯಾತ್ರೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

    ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

    ಬೆಂಗಳೂರು: ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ `ಭಾರತ್ ಜೋಡೋ’ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದು ಬಿಜೆಪಿ ಕುಟುಕಿದೆ.

    ʼಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್‌ ಜೋಡೋʼ ಯಾತ್ರೆ ಕೈಗೊಳ್ಳುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಕಾಂಗ್ರೆಸ್‌ ಯಾತ್ರೆ ಕುರಿತು ʼ#ಕಾಂಗ್ರೆಸ್‌ಛೋಡೋʼ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬಿಜೆಪಿ ಸರಣಿ ಟ್ವೀಟ್‌ ಮೂಲಕ ವ್ಯಂಗ್ಯವಾಡಿದೆ.

    ಟ್ವೀಟ್‌ನಲ್ಲಿ ಏನಿದೆ?
    ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು. ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ. ಎಷ್ಟೊಂದು ನಾಟಕ ಮಾಡುವಿರಿ?

    ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.

    ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?

    ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ. ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?

    ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ G23 ನಾಯಕರ ಪಾತ್ರವೇನು? ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ? ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

    ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?

  • ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ

    ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ

    ನವದೆಹಲಿ: ಎಲ್ಲೆಡೆ ಸೋಲುಗಳಿಂದ ಬಸವಳಿದಿರುವ ಕಾಂಗ್ರೆಸ್ ಪಕ್ಷಕ್ಕೆ ಪುನರ್‌ವೈಭವ ತಂದುಕೊಡಲು ಉದಯಪುರದಲ್ಲಿ ಮೂರು ದಿನಗಳ ಕಾಲ ನಡೆದ ನವಸಂಕಲ್ಪ ಚಿಂತನಾ ಶಿಬಿರದಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

    ಮೋದಿ ಸರ್ಕಾರದ ಹುಳುಕು ಬಯಲು ಮಾಡುವ ಜೊತೆಗೆ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲು ‘ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್ ಜೋಡೋ’ ಯಾತ್ರೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ: ರಾಹುಲ್ ಗಾಂಧಿ

    ಗಾಂಧಿ ಜಯಂತಿಯಂದು ಅಂದರೆ ಅಕ್ಟೋಬರ್ 2ರಂದು ಪಾದಯಾತ್ರೆಗೆ ಚಾಲನೆ ಸಿಗಲಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಅಕ್ಟೋಬರ್‌ನಿಂದ ಒಂದು ವರ್ಷದಷ್ಟು ಸುದೀರ್ಘ ಮತ್ತು ಬೃಹತ್ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಅಗತ್ಯ ಪ್ರದೇಶಗಳಲ್ಲಿ ಜನತಾ ದರ್ಬಾರ್ ಹೆಸರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ.

    ಮತ್ತೆ ಪುಟಿದೇಳ್ತೀವಿ ಎಂದು ಸೋನಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಶತಮಾನದ ಹಳೆಯ ಪಕ್ಷ ಜನರೊಂದಿಗೆ ಸಂಪರ್ಕ ಕಡಿತಗೊಂಡಿರೋದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ‘ಜನರೊಂದಿಗೆ ನಮ್ಮ ಸಂಪರ್ಕದ ಕೊಂಡಿ ಕಳಚಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಅದನ್ನು ನಾವು ಪುನಶ್ಚೇತನಗೊಳಿಸಿ, ಬಲಪಡಿಸಬೇಕು. ಇದಕ್ಕೆ ಯಾವುದೇ ಅಡ್ಡದಾರಿಯಿಲ್ಲ. ಕಠಿಣ ಪರಿಶ್ರಮವೊಂದೇ ಮಾರ್ಗ. ಪಕ್ಷವನ್ನು ತಳಮಟ್ಟದಿಂದ ಆಕ್ರಮಣಕಾರಿಯಾಗಿ ಬದಲಿಸಿದಾಗ ಮಾತ್ರ ಆರ್‌ಎಸ್‌ಎಸ್ ಎದುರಿಸಲು ಸಾಧ್ಯ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಪಂಡಿತನ ಮೇಲಿನ ದಾಳಿಯಲ್ಲ, ಅದು ಕಾಶ್ಮೀರದ ಆತ್ಮದ ಮೇಲಿನ ದಾಳಿ: ಫಾರೂಕ್ ಅಬ್ದುಲ್ಲಾ

    ಬಿಜೆಪಿಯ ದ್ವೇಷ ಸಿದ್ಧಾಂತದ ವಿರುದ್ಧ ಪ್ರಾದೇಶಿಕ ಪಕ್ಷಗಳಿಗೆ ಕಾಂಗ್ರೆಸ್ ಪಕ್ಷದಂತೆ ಹೋರಾಡುವುದು ಸಾಧ್ಯವಿಲ್ಲ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಪಕ್ಷ `ಒಂದು ಕುಟುಂಬ, ಒಂದು ಟಿಕೆಟ್’ ನಿರ್ಣಯದ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡಿದೆ. ಆ ಪಕ್ಷದ್ದು ಧೃತರಾಷ್ಟç ಮೋಹ. ಉತ್ತರ ಪ್ರದೇಶ ಚುನಾವಣೆಯಲ್ಲಿ ವಂಶವಾದದ ವಿರುದ್ಧ ಮೋದಿ ಗಟ್ಟಿಯಾಗಿ ನಿಂತರು. ಆ ರೀತಿಯ ಧೈರ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆಯಾ ಎಂದು ಬಿಜೆಪಿ ಪ್ರಶ್ನಿಸಿದೆ. ತಾಕತ್ತಿದ್ರೆ ಆಂತರಿಕ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದೆ.