Tag: bharat ratna

  • ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೊಡಿ ಅಂತಾ ಪತ್ರ ಬರೆದಿದ್ದೆವು: ಸಿದ್ದರಾಮಯ್ಯ

    ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೊಡಿ ಅಂತಾ ಪತ್ರ ಬರೆದಿದ್ದೆವು: ಸಿದ್ದರಾಮಯ್ಯ

    – ಎಲ್‌.ಕೆ.ಅಡ್ವಾಣಿಗೆ ಭಾರತ ರತ್ನ ಕೊಡಲಿ ಬಿಡಿ ಪಾಪ, ಬೇಡ ಎಂದವರ‍್ಯಾರು?

    ದಾವಣಗೆರೆ: ಎಲ್‌.ಕೆ.ಅಡ್ವಾಣಿ (L.K.Advani) ಅವರಿಗೆ ‘ಭಾರತ ರತ್ನ’ (Bharat Ratna) ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ (Shivakumara Swamiji) ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದರು.

    ದಾವಣಗೆರೆಯಲ್ಲಿ ನಡೆಯುತ್ತಿರುವ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಭಾಗಿಯಾಗಿದ್ದಾರೆ. ಇದಕ್ಕೂ ಮುನ್ನ, ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಎಲ್‌ಕೆ ಅಡ್ವಾಣಿಗೆ ಭಾರತ ರತ್ನ : ನರೇಂದ್ರ ಮೋದಿ ಘೋಷಣೆ

    ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಗುತ್ತೆದಾರರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರೇ ಬಂದು ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಹೆಬ್ಬಾಳ್ಕರ್ ಪುತ್ರನಿಗೆ ಟಿಕೆಟ್ ಕೇಳಿರೋ ವಿಚಾರವಾಗಿ ಮಾತನಾಡಿ, ಅವರು ಕೇಳಲಿ ಬಿಡಿ. ಅವರು ಆಕಾಂಕ್ಷಿ. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚಾಗಿದೆ. ಲೋಕಸಭಾ ಚುನಾವಣೆ ಕುರಿತಂತೆ ಯಾರು ಗೆಲ್ತಾರೆ ಅಂತಾ ಸರ್ವೇ ಇನ್ನೂ ಆಗ್ತಾ ಇದೆ. ಕಾಂಗ್ರೆಸ್ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಯಾರಿಗೆ ನೀಡಬೇಕು ಅಂತಾ ನಿರ್ಧಾರ ಮಾಡ್ತೀವಿ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ

  • ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ

    ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ

    ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ (Karpoori Thakur) ಅವರಿಗೆ ಮಂಗಳವಾರ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮರಣೋತ್ತರವಾಗಿ ರಾಷ್ಟ್ರದ ಅತ್ಯುನ್ನತ ಗೌರವವಾದ ಭಾರತ ರತ್ನ (Bharat Ratna) ಪ್ರದಾನ ಮಾಡಿದರು.

    ಕರ್ಪೂರಿ ಠಾಕೂರ್ 1988 ರ ಫೆಬ್ರವರಿ 17 ರಂದು ನಿಧನರಾದರು. ಅವರ ಮರಣದ 35 ವರ್ಷಗಳ ನಂತರ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ: Bharat Jodo Nyay Yatra: ಅಸ್ಸಾಂನಲ್ಲಿ ಹೆಜ್ಜೆ ಹೆಜ್ಜೆಗೂ ಅಡ್ಡಿ – ಕೈ ಕಾರ್ಯಕರ್ತರು, ಪೊಲೀಸರ ನಡುವೆ ಘರ್ಷಣೆ

    ರಾಜ್ಯದಲ್ಲಿ ಜನನಾಯಕ ಎಂದೇ ಖ್ಯಾತರಾಗಿದ್ದ ಕರ್ಪೂರಿ ಠಾಕೂರ್ ಅವರು ಅಲ್ಪಾವಧಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಡಿಸೆಂಬರ್ 1970 ರಿಂದ ಜೂನ್ 1971 ರವರೆಗೆ ಮತ್ತು ಡಿಸೆಂಬರ್ 1977 ರಿಂದ ಏಪ್ರಿಲ್ 1979 ರ ವರೆಗೆ ಸಿಎಂ ಆಗಿದ್ದರು.

    ರಾಜ್ಯದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗೆ ಕೇಂದ್ರದ ಮಾನ್ಯತೆ ಸಿಕ್ಕಿದೆ. ಠಾಕೂರ್‌ ಅವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕು ಎಂಬುದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ದೀರ್ಘಕಾಲದ ಬೇಡಿಕೆಯಾಗಿತ್ತು. ಇದನ್ನೂ ಓದಿ: ರಾಮಲಲ್ಲಾನಿಗೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಗುಜರಾತ್ ವ್ಯಾಪಾರಿ!

  • ಮನೀಶ್ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು: ಅರವಿಂದ್ ಕೇಜ್ರಿವಾಲ್

    ಮನೀಶ್ ಸಿಸೋಡಿಯಾ ಭಾರತ ರತ್ನಕ್ಕೆ ಅರ್ಹರು: ಅರವಿಂದ್ ಕೇಜ್ರಿವಾಲ್

    ನವದೆಹಲಿ: ಮನೀಶ್ ಸಿಸೋಡಿಯಾ ಅವರು ದೆಹಲಿಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಮಾಡಿದ ಎಲ್ಲ ಕೆಲಸಗಳಿಂದ ಅವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.

    ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಸೋಡಿಯಾ ಗುಣಮಟ್ಟದ ಸರ್ಕಾರಿ ಶಾಲೆಗಳನ್ನು ರೂಪಿಸಿ ಪವಾಡ ಮೆರೆದಿದ್ದಾರೆ. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು. ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಅವರ ಕೈಗೆ ಕೊಡಬೇಕು. ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆದಿದೆ. ಇದು ಬಿಜೆಪಿ ಅವರಿಗೇ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಸೇರಿ 8 ಆರೋಪಿಗಳ ವಿರುದ್ಧ ಸಿಬಿಐ ಲುಕ್‌ಔಟ್ ನೋಟಿಸ್

    MANISH SISODIA

    ಅಬಕಾರಿ ತನಿಖೆಯಲ್ಲಿ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಬಹುದು. ಯಾರಿಗೆ ಗೊತ್ತು ನಾನು ಸಹ ಅರೆಸ್ಟ್ ಆಗಬಹುದು. ಇದೆಲ್ಲವೂ ಗುಜರಾತಿನ ಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿರುವ ತಂತ್ರಗಳು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 3-4 ದಿನಗಳಲ್ಲಿ ಸಿಬಿಐ-ಇಡಿ ನನ್ನ ಬಂಧಿಸಬಹುದು, ಯಾವುದಕ್ಕೂ ಹೆದರಲ್ಲ: ಮನೀಶ್ ಸಿಸೋಡಿಯಾ

    ಬಳಿಕ ಮಾತಮಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ನನ್ನ ಗುರು ಹಾಗೂ ಮಾರ್ಗದರ್ಶಕರು. ನಾನು ಸಿಎಂ ಆಗಲು ರಾಜಕೀಯಕ್ಕೆ ಬಂದಿಲ್ಲ. ಸಾರ್ವಜನಿಕರಿಗೆ ಒಳ್ಳೆಯದು ಮಾಡಲು ಬಂದಿದ್ದೇನೆ. ದೆಹಲಿಯಲ್ಲಿ ಕೇಜ್ರಿವಾಲ್ ಅವರು ಮಾಡುವ ಕೆಲಸಗಳನ್ನು ತಡೆಯುವುದಕ್ಕಾಗಿ ಅಬಕಾರಿ ನೀತಿ ತನಿಖೆಯನ್ನು ಮುನ್ನೆಲೆಗೆ ತರಲಾಗಿದೆ ಎಂದು ಕಿಡಿಕಾರಿದ್ದಾರೆ.

    ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ಬೆನ್ನಲ್ಲೇ ಆಮ್ ಅದ್ಮಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರತನ್‌ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ರತನ್‌ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ನವದೆಹಲಿ: ಖ್ಯಾತ ಉದ್ಯಮಿ ರತನ್‌ ಟಾಟಾ ಅವರಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾ ಮಾಡಿದೆ.

    ಒಬ್ಬ ವ್ಯಕ್ತಿಗೆ ಅತ್ಯುನ್ನತ ನಾಗರಿಕ ಗೌರವ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದು ನ್ಯಾಯಾಲಯಕ್ಕೆ ಸಂಬಂಧಿಸಿದ್ದಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಏನಿದು ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ? ಸೈನಿಕರಿಗೆ ಇರೋ ಅಧಿಕಾರ ಏನು? ವಿರೋಧ ಯಾಕೆ?

    ಇದು ಯಾವ ರೀತಿಯ ಮನವಿ? ಭಾರತ ರತ್ನ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ನಿರ್ದೇಶನ ನೀಡಲು ಸಾಧ್ಯವೆ ಎಂದು ಪೀಠ ಪ್ರಶ್ನಿಸಿದೆ.

    ಅರ್ಜಿದಾರರ ಪರ ವಕೀಲರು, ಕನಿಷ್ಠ ಪಕ್ಷ ಸರ್ಕಾರಕ್ಕೆ ಮನವಿ ಮಾಡಬಹುದು ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್‌ ಸಂಘಿ, ಹೋಗಿ ವಿನಂತಿಯನ್ನು ಮಾಡಿ. ನ್ಯಾಯಾಲಯದ ಮೆಟ್ಟಿಲೇರುವ ಪ್ರಶ್ನೆ ಎಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅವಿವಾಹಿತ ಮಗಳು ಪೋಷಕರಿಂದಲೇ ವಿವಾಹದ ವೆಚ್ಚ ಪಡೆಯಬಹುದು: ಹೈಕೋರ್ಟ್

    ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸುವುದಾಗಿ ಹೇಳಿದ ನಂತರ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂತೆಗೆದುಕೊಂಡರು.

    ಅರ್ಜಿದಾರರಾದ ಸಾಮಾಜಿಕ ಕಾರ್ಯಕರ್ತ ರಾಕೇಶ್‌, ರತನ್ ಟಾಟಾ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ನಿಷ್ಕಳಂಕ ಜೀವನವನ್ನು ಹೊಂದಿರುವುದರಿಂದ ಭಾರತ ರತ್ನಕ್ಕೆ ಅರ್ಹರು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

  • ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ: ಸಿದ್ದಲಿಂಗ ಸ್ವಾಮೀಜಿ

    ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ: ಸಿದ್ದಲಿಂಗ ಸ್ವಾಮೀಜಿ

    ತುಮಕೂರು: ಶ್ರೀ ಶಿವಕುಮಾರ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗಸ್ವಾಮಿಜಿಗಳು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶಸ್ತಿ ಕೊಡಿ ಎನ್ನುವ ಮಾತನ್ನು ಯಾರು ಕೂಡಾ ಆಡಬಾರದು. ಅದನ್ನ ಕೇಳಿ ಪಡೆಯುವ ಪ್ರಶ್ನೆ ಇಲ್ಲ. ಅದಾಗಿಯೇ ಬಂದದ್ದು ಅಮೃತಕ್ಕೆ ಸಮಾನ, ಕೇಳಿ ಬಂದಿದ್ದು ವಿಷಕ್ಕೆ ಸಮಾನ ಆದ್ದರಿಂದ ಬಾಯ್ಬಿಟ್ಟು ಕೇಳುವಂತಹ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಶೀಘ್ರವೇ ಕೋವಿಡ್-19 ಕಾಲರ್ ಟ್ಯೂನ್ ಬಂದ್?

    ಯಾರು ಕೇಳಲೇ ಬಾರದು ಅದರ ಬಗ್ಗೆ ಚರ್ಚೆ ಮಾಡಲೇಬಾರದು. ಶ್ರೀಗಳು ಭಾರತ ರತ್ನ ವನ್ನು ಮೀರಿರುವಂತವರು. ಅದು ಬಂದ ಕ್ಷಣಕ್ಕೆ ಅವರ ಗೌರವ ಹೆಚ್ಚುವಂತಹದ್ದಲ್ಲ. ಅದನ್ನ ನಾವು ಯಾರು ನಿರೀಕ್ಷೆ ಮಾಡಬಾರದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಟ್ಟು 48 ಕೇಸ್ – ಬೆಂಗಳೂರು ಸಹಿತ 4 ಜಿಲ್ಲೆಗಳಲ್ಲಿ ಮಾತ್ರ ಕೊರೊನಾ ಪ್ರಕರಣ

  • 2 ಲಕ್ಷ ಕೋಟಿ ಸಾಲ ಮಾಡಿರುವ ಸಿದ್ದರಾಮಯ್ಯಗೆ ಭಾರತ ರತ್ನ ನೀಡಲಿ: ಸಾ.ರಾ ಮಹೇಶ್

    2 ಲಕ್ಷ ಕೋಟಿ ಸಾಲ ಮಾಡಿರುವ ಸಿದ್ದರಾಮಯ್ಯಗೆ ಭಾರತ ರತ್ನ ನೀಡಲಿ: ಸಾ.ರಾ ಮಹೇಶ್

    ಮೈಸೂರು: ಹೆಚ್ಚು ಸಾಲ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಭಾರತ ರತ್ನ ನೀಡಲಿ ಎಂದು ಜೆಡಿಎಸ್ ಶಾಸಕ ಸಾ.ರಾ ಮಹೇಶ್ ವ್ಯಂಗ್ಯವಾಡಿದರು.

    ಕೆ ಆರ್ ನಗರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವರು ರಾಜ್ಯದ ಸಿಎಂ ಆಗಿದ್ದರು. ನಮ್ಮ ಪಕ್ಷದಿಂದಲೇ ಹೊರ ಹೋದ ಹಿರಿಯ ನಾಯಕರೊಬ್ಬರು ನಮಗೆ ಬೆಂಬಲ ನೀಡಲಿಲ್ಲ. ನಮ್ಮ ಮನೆಯಲ್ಲಿಯೇ ತಿಂದು ಮೈ ಬೆಳೆಸಿ ಈಗ ನಮಗೇನೇ ತಿರುಗಿ ನಿಂತಿದ್ದಾರೆ. ಸಿದ್ದರಾಮಯ್ಯ ಅವರು ಬಿಜೆಪಿ ಗೆದ್ದರು ಪರವಾಗಿಲ್ಲ ಜೆಡಿಎಸ್ ಗೆಲ್ಲಬಾರದು ಅಂದಿದ್ದರು. ಆದರೆ ನಮ್ಮ ರಾಜ್ಯದ ಜನ ತುಂಬಾ ಹುಷಾರ್ ಇದ್ದಾರೆ. ಯಾರನ್ನು ಗೆಲ್ಲಿಸಬೇಕು. ಯಾರನ್ನು ಬೀಡಬೇಕು ಅನ್ನುವುದು ಜನತೆಗೆ ತುಂಬಾ ಚೆನ್ನಾಗಿ ಗೋತ್ತಿದೆ ಎಂದರು. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ

    ಯಾರು ಮಾಡದಷ್ಟು ಸಾಲ ಸಿದ್ದರಾಮಯ್ಯ ಮಾಡಿದ್ದಾರೆ. ಅವರು 2 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಹೇಳಿದರು. ರಾಜ್ಯದ ಬಜೆಟ್‍ನಷ್ಟೇ ಅವರು ಸಾಲ ಮಾಡಿದ್ದಾರೆ. ಆದರೂ ಜೆಡಿಎಸ್ ಬಗ್ಗೆ ಅವರು ಮಾತನಾಡುತ್ತಾರೆ. ಇನ್ನು ಮುಂದೆಯಾದರೂ ಅವರು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು. ಇದನ್ನೂ ಓದಿ:  ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲಿಯಂ ಹರ್ಟ್ ಇನ್ನಿಲ್ಲ

  • ಮಾಯಾವತಿ, ಅಸಾದುದ್ದೀನ್ ಓವೈಸಿಗೆ ಭಾರತ ರತ್ನ, ಪದ್ಮವಿಭೂಷಣ ನೀಡಬೇಕು: ಸಂಜಯ್ ರಾವತ್

    ಮಾಯಾವತಿ, ಅಸಾದುದ್ದೀನ್ ಓವೈಸಿಗೆ ಭಾರತ ರತ್ನ, ಪದ್ಮವಿಭೂಷಣ ನೀಡಬೇಕು: ಸಂಜಯ್ ರಾವತ್

    ನವದೆಹಲಿ: ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರಿಗೆ ಪದ್ಮವಿಭೂಷಣ, ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವತ್  ಒತ್ತಾಯಿಸಿದ್ದಾರೆ.

    ಯುಪಿ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಯಾವತಿ, ಅಸಾದುದ್ದೀನ್ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಗೆಲುವಿಗೆ ಆ ಎರಡು ಪಕ್ಷಗಳ ಕೊಡುಗೆ ಮಹತ್ತರವಾಗಿದೆ. ಪದ್ಮವಿಭೂಷಣ, ಭಾರತರತ್ನ ಪ್ರಶಸ್ತಿಗಳನ್ನು ನೀಡಲಾಗುವುದು. ಮಾಯಾವತಿ ಮತ್ತು ಓವೈಸಿ ಕೊಡುಗೆ ನೀಡಿದ್ದರಿಂದ ಬಿಜೆಪಿ ಗೆಲುವು ಸಾಧಿಸಿದೆ. ಆದ್ದರಿಂದ ಇಬ್ಬರೂ ನಾಯಕರಿಗೆ ಪದ್ಮವಿಭೂಷಣ ಮತ್ತು ಭಾರತ ರತ್ನ ನೀಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ : ಯಾಕೆ ಆ ವಿಡಿಯೋ ಹಾಕಿದ್ರು ಮೀರಾ ಜಾಸ್ಮಿನ್? ಅಭಿಮಾನಿ ಅಳಲೇನು ಕೇಳಿ

    ಉತ್ತರ ಪ್ರದೇಶದಲ್ಲಿ ಪ್ರಬಲ ರಾಜಕೀಯ ಪಕ್ಷವೆಂದು ಪರಿಗಣಿಸಲ್ಪಟ್ಟಿರುವ ಬಿಎಸ್‍ಪಿ ಕೇವಲ ಒಂದು ಅಸೆಂಬ್ಲಿ ಸ್ಥಾನವನ್ನು ಮಾತ್ರ ಗೆದ್ದಿದೆ. ಆದರೆ ಎಐಎಂಐಎಂ ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಸಮಾಜವಾದಿ ಪಕ್ಷದ (ಎಸ್‍ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪಕ್ಷವು ತನ್ನ ಮತದಾರರ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಿಸಿಕೊಂಡಿದ್ದಾರೆ ಎಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 255 ಸ್ಥಾನಗಳನ್ನು ಗಳಿಸಿದ ನಂತರ ತನ್ನ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷವನ್ನು ಸೋಲಿಸಿದೆ.

  • ದಿವಂಗತ ನಟ ಎನ್‍ಟಿಆರ್‌ಗೆ ಭಾರತ ರತ್ನ ನೀಡಿ – ಮೆಗಾಸ್ಟಾರ್ ಮನವಿ

    ದಿವಂಗತ ನಟ ಎನ್‍ಟಿಆರ್‌ಗೆ ಭಾರತ ರತ್ನ ನೀಡಿ – ಮೆಗಾಸ್ಟಾರ್ ಮನವಿ

    ಹೈದರಾವಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಯವರು ತೆಲುಗಿನ ಖ್ಯಾತ ದಿವಂಗತ ನಟ ನಂದಮೂರಿ ತಾರಕ ರಾಮರಾವ್‍ರವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿಮಾಡಿದ್ದಾರೆ.

    ತೆಲುಗು ಚಿತ್ರರಂಗ ಬೆಳೆಸಲು ಪ್ರಮುಖ ಪಾತ್ರವಹಿಸಿದ ಎನ್‍ಟಿಆರ್‌ರವರಿಗೆ ಇಂದು 98ನೇ ವರ್ಷದ ಜನುಮ ದಿನ. ದಶಕಗಳ ಕಾಲ ಟಾಲಿವುಡ್‍ನಲ್ಲಿ ಮಿಂಚುವ ಮೂಲಕ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದ ಎನ್‍ಟಿಆರ್‌ರವರು ಆಂಧ್ರ ಪ್ರದೇಶದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

    ಇಂದು ಮೆಗಾಸ್ಟಾರ್ ಚಿರಂಜೀವಿಯವರು ಎನ್‍ಟಿಆರ್‌ರವರ 98ನೇ ವರ್ಷದ ಹುಟ್ಟು ಹಬ್ಬದ ವಿಶೇಷ ದಿನದಂದು ಸ್ಮರಿಸಿಕೊಂಡಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಖ್ಯಾತ ಹಿನ್ನೆಲೆ ಗಾಯಕ ಭೂಪೆನ್ ಹಜಾರಿಕಾರಿಗೆ ಮರಣೋತ್ತರ ನಂತರ ದೇಶದತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿ ನೀಡಲಾಗಿತ್ತು. ಹಾಗೆಯೇ ತೆಲುಗು ರಾಜ್ಯದ ಹೆಮ್ಮೆಯ ನಾಯಕ ನಂದಮೂರಿ ತಾರಕ್ ರಾಮರಾವ್‍ಗೆ ಭಾರತ ರತ್ನ ಕೊಟ್ಟರೆ ಅದು ನಮ್ಮೆಲ್ಲರ ಹೆಮ್ಮೆ. ತಾರಕ್ ರಾಮ್‍ರಾವ್‍ರವರ 100ನೇ ಜನುಮದಿನದ ಸಂದರ್ಭದಲ್ಲಿ ಭಾರತ ರತ್ನ ಗೌರವ ನೀಡಿದರೆ, ಅದು ತೆಲುಗು ಪ್ರಜೆಗಳನ್ನು ಗೌರವಿಸದಂತೆ ಎಂದು ಟ್ವೀಟ್ ಮಾಡಿದ್ದಾರೆ.

    ದಿವಂಗತ ನಟ ನಂದಮೂರಿ ತಾರಕ ರಾಮರಾವ್‍ರವರ ಹುಟ್ಟುಹಬ್ಬದ ಪ್ರಯುಕ್ತ ಸಿನಿ ತಾರೆಯರು ಹಾಗೂ ಅಭಿಮನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.

  • ಭಾರತೀಯನಾಗಿರುವುದೇ ಅದೃಷ್ಟ, ಭಾರತ ರತ್ನ ಅಭಿಯಾನವನ್ನು ದಯವಿಟ್ಟು ನಿಲ್ಲಿಸಿ – ರತನ್‌ ಟಾಟಾ

    ಭಾರತೀಯನಾಗಿರುವುದೇ ಅದೃಷ್ಟ, ಭಾರತ ರತ್ನ ಅಭಿಯಾನವನ್ನು ದಯವಿಟ್ಟು ನಿಲ್ಲಿಸಿ – ರತನ್‌ ಟಾಟಾ

    ಮುಂಬೈ: ನಾನು ಭಾರತೀಯನಾಗಿ ಹುಟ್ಟಿದ್ದಕ್ಕೆ ಅದೃಷ್ಟ ಪಡುತ್ತೇನೆ. ನನ್ನ ಪರವಾಗಿ ಪ್ರಶಸ್ತಿ ನೀಡುವಂತೆ ಅಭಿಯಾನ ನಡೆಸಬೇಡಿ ಎಂದು ಟಾಟಾ ಗ್ರೂಪ್‌ ಮುಖ್ಯಸ್ಥ ರತನ್‌ ಟಾಟಾ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಭಾರತ ರತ್ನ ಗೌರವವನ್ನು ರತನ್‌ ಟಾಟಾ ಅವರಿಗೆ ನೀಡಬೇಕು. ಲಕ್ಷಾಂತರ ಜನರಿಗೆ ಟಾಟಾ ಕಂಪನಿ ಉದ್ಯೋಗ ನೀಡಿದೆ. ಸಾಮಾಜಿಕ ಕಾರ್ಯಕ್ಕೆ ಕೋಟ್ಯಂತರ ರೂ. ಹಣವನ್ನು ಟಾಟಾ ಗ್ರೂಪ್‌ ನೀಡಿದೆ. ಹೀಗಾಗಿ ಭಾರತ ರತ್ನ ಗೌರವಕ್ಕೆ ರತನ್‌ ಟಾಟಾ ಅರ್ಹ ವ್ಯಕ್ತಿ ಎಂದು ಹೇಳಿ #BharatRatnaForRatanTata ಹ್ಯಾಷ್‌ ಟ್ಯಾಗ್‌ ಹಾಕಿ ಅಭಿಯಾನ ನಡೆಸಲಾಗುತ್ತಿದೆ.

    https://twitter.com/RNTata2000/status/1357896316047736832

    ಈ ವಿಚಾರ ತನ್ನ ಗಮನಕ್ಕೆ ಬರುತ್ತಿದ್ದಂತೆ ರತನ್‌ ಟಾಟಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಂದು ವರ್ಗ ವ್ಯಕ್ತಪಡಿಸುತ್ತಿರುವ ಭಾವನೆಯನ್ನು ನಾನು ಗೌರವಿಸುತ್ತೇನೆ. ಹೀಗಿದ್ದರೂ ಪ್ರಶಸ್ತಿ ವಿಚಾರವಾಗಿ ನಡೆಸುತ್ತಿರುವ ಅಭಿಯಾನವನ್ನು ನಿಲ್ಲಿಸಬೇಕೆಂದು ನಾನು ವಿನಯಪೂರ್ವಕವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ. ನಾನು ಭಾರತೀಯನಾಗಿರುವುದು ಅದೃಷ್ಟ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

    ರತನ್‌ ಟಾಟಾ ಅವರ ಈ ಟ್ವೀಟ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 10 ಸಾವಿರಕ್ಕೂ ಹೆಚ್ಚು ಜನ ರೀಟ್ವೀಟ್‌ ಮಾಡಿದ್ದರೆ 69 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ.

    ಯಾರಿಗೋ ಪ್ರಶಸ್ತಿ ಕೊಡುವಾಗ ನಿಮಗೆ ಯಾಕೆ ನೀಡಬಾರದು. ನೀವು ಭಾರತ ರತ್ನಕ್ಕೆ ಅರ್ಹ ವ್ಯಕ್ತಿ. ನಿಮಗೆ ಸಿಗಲೇಬೇಕು ಎಂದು ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

  • ಸಾವರ್ಕರ್​ಗೆ  ಭಾರತರತ್ನ ಕೊಟ್ರೆ, ಸ್ವಾತಂತ್ರ ಯೋಧರಿಗೆ ಗೌರವ ಕೊಟ್ಟಂತೆ – ಸವದಿ

    ಸಾವರ್ಕರ್​ಗೆ  ಭಾರತರತ್ನ ಕೊಟ್ರೆ, ಸ್ವಾತಂತ್ರ ಯೋಧರಿಗೆ ಗೌರವ ಕೊಟ್ಟಂತೆ – ಸವದಿ

    – ಇವತ್ತಲ್ಲ ನಾಳೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬಂದೇ ಬರುತ್ತೆ

    ಕೊಪ್ಪಳ: ಸಾವರ್ಕರ್ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟವರು. ವೀರ ಸಾವರ್ಕರ್ ಗೆ ಭಾರತರತ್ನ ಕೊಟ್ಟರೆ ಸ್ವಾತಂತ್ರ ಯೋಧರಿಗೆ ಗೌರವ ಕೊಟ್ಟಂತೆ ಆಗುತ್ತೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಸಾವರ್ಕರನ್ನು ಹೀಯಾಳಿಸಿದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಿಗೆ ಅವಮಾನ ಮಾಡಿದಂತೆ ಆಗುತ್ತೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದರು.

    ಸಾವರ್ಕರ್ ಗೆ ಭಾರತ ರತ್ನ ಕೊಡುವುದರಲ್ಲಿ ತಪ್ಪಿಲ್ಲ. ಅದರಂತೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡಲು ನಾವು ಸಿದ್ಧರಿದ್ದೇವೆ. ಇವತ್ತಲ್ಲ ನಾಳೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬಂದೇ ಬರುತ್ತೆ. ನಾವು ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಕೂಡ ಸಲ್ಲಿಸುತ್ತೇವೆ. ಅನರ್ಹ ಶಾಸಕರು ಇನ್ನೂ ಪಕ್ಷ ಸೇರ್ಪಡೆ ಆಗಿಲ್ಲ. ಅವರು ಪಕ್ಷ ಸೇರ್ಪಡೆ ಬಳಿಕ ಟಿಕೆಟ್ ನೀಡೋದು ಬಿಡೋದು ತೀರ್ಮಾನವಾಗುತ್ತೆ ಎಂದು ತಿಳಿಸಿದರು.

    ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ. ಕಳೆದ ಚುನಾವಣೆಗಿಂತ ಅಧಿಕ ಸ್ಥಾನ ಬಿಜೆಪಿ ಪಡೆಯಲಿದೆ. ನಾನು ಐದು ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಜನರಿಗೆ ಬಿಜೆಪಿಯ ಬಗ್ಗೆ ನಂಬಿಕೆ ಇದೆ. ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೋ ಭವಿಷ್ಯ ನನಗೆ ಗೊತ್ತಿಲ್ಲ, ಮುಂದೆ ಏನು ಆಗುತ್ತೆ ಕಾದು ನೋಡ್ತೀನಿ ಎಂದು ಹೇಳಿದ್ದಾರೆ.