Tag: Bharatanatyam

  • 7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

    7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

    ಮಂಗಳೂರು: ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ (Remona Evette Pereira) 7 ದಿನಗಳ ಕಾಲ 170 ಗಂಟೆ ಭರತನಾಟ್ಯ (Bharatanatyam) ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ (Golden Book of World Records) ದಾಖಲೆ ಮಾಡಿದ್ದಾರೆ.

    ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ಮಾಡಿದ್ದು, ಪ್ರದರ್ಶನದ ಪ್ರತಿ ದಿನ ರಾತ್ರಿ ಒಂದು ಗಂಟೆ ಹಾಗೂ ಮೂರು ಗಂಟೆಗೊಮ್ಮೆ 15 ನಿಮಿಷಗಳ ಕಾಲ ಮಾತ್ರ ವಿರಾಮ ಇರಲಿದೆ. ಈ ಸಮಯದಲ್ಲಿ ಕನಿಷ್ಟ ಪ್ರಮಾಣದ ಆಹಾರ ಸೇವಿಸುತ್ತಾಳೆ ರೆಮೋನಾ. ನಿರಂತರ ವೈದ್ಯರ ಸಲಹೆ, ಫಿಸಿಯೋಥೆರಪಿ ಆರೈಕೆಯೊಂದಿಗೆ ಈ ಪ್ರದರ್ಶನ ನಡೆಸಿದ್ದಾಳೆ. ಇದನ್ನೂ ಓದಿ: ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

    ಭರತನಾಟ್ಯದ ವಿವಿಧ ಪ್ರಕಾರಗಳಾದ ಅಲರಿಪ್ಪು ಜತಿಸ್ವರ, ವರ್ಣ, ಪದವರ್ಣ, ತಿಲ್ಲಾನಗಳೊಂದಿಗೆ ಲಘು ಶಾಸ್ತ್ರೀಯ, ದೇವರನಾಮಗಳಿಗೆ ಭರತನಾಟ್ಯ ಪ್ರದರ್ಶನ ನೀಡಿದ್ದಾಳೆ ರೆಮೋನಾ. ಈ ಹಿಂದೆ ಮಹಾರಾಷ್ಟ್ರದ ಸೃಷ್ಟಿ ಸುಧೀರ್ ಜಗತಾಪ್ ಎಂಬ 16 ವರ್ಷದ ಬಾಲಕಿ ನಿರಂತರ 127 ಗಂಟೆ ಕಥಕ್ ನೃತ್ಯ ಪ್ರದರ್ಶನ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದಳು. ಇದೀಗ ರೆಮೋನಾ ಈ ದಾಖಲೆಯನ್ನು ಮುರಿದು 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಮಾಡಿದ್ದಾಳೆ. ಈಕೆಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನ ಏಷ್ಯಾದ ಮುಖ್ಯಸ್ಥ ಡಾ.ಮನೀಶ್ ವಿಷ್ನೋಯಿ ಅವರು ನೂತನ ದಾಖಲೆಯ ಪ್ರಮಾಣ ಪತ್ರ ಹಸ್ತಾಂತರಿಸಿದ್ದಾರೆ.  ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

  • ನೃತ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪುಟಾಣಿಗಳು

    ನೃತ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಪುಟಾಣಿಗಳು

    ಮಡಿಕೇರಿ: ಇತ್ತೀಚೆಗೆ ಕರ್ನಾಟಕ ಸ್ಪೋರ್ಟ್ಸ್ ಡಾನ್ಸ್ ಫೆಡರೇಷನ್, ನ್ಯಾಷನಲ್ ಡಾನ್ಸ್ ಚಾಂಪಿಯನ್‍ಶಿಪ್ ಅಸೋಸಿಯೇಶನ್ ವತಿಯಿಂದ ನಡೆದ ರಾಜ್ಯ ಮಟ್ಟದ ಕಿರಿಯರ ವಿಭಾಗದ ಭರತನಾಟ್ಯ ಸ್ಪರ್ಧೆಯಲ್ಲಿ ಕೊಡಗಿನ ಭೂಮಿಕಾ ಕಾವೇರಪ್ಪ ಹಾಗೂ ತನಿಷಾ ಕಾವೇರಪ್ಪ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತಿ ಕಾವಡಿ ಗ್ರಾಮದ ಪುಟಾಣಿಗಳು ಕುಟ್ಟಂಡ ನಂದ ಅಪ್ಪಯ್ಯ ಅವರ ಮೊಮ್ಮಕ್ಕಳಾಗಿದ್ದು, ಪುಟ್ಟ ವಯಸ್ಸಿನಿಂದಲೂ ಭರತನಾಟ್ಯದಲ್ಲಿ ಹೆಚ್ಚು ಆಸಕ್ತಿಯಿಂದ ಅಭ್ಯಾಸ ಮಾಡಿದ್ದಾರೆ. ಅಮ್ಮತಿ ಗ್ರಾಮದ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಗುರು ವಿಧೂಷಿ ಹೇಮಾವತಿ ಕಾಂತರಾಜ್ ಅವರಲ್ಲಿ ಶಿಕ್ಷಣ ಪಡೆದಿದ್ದಾರೆ. ತಮ್ಮ ಗ್ರಾಮದ ಪುಟಾಣಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುವುದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಯಕ್ಷಗಾನ, ಭರತನಾಟ್ಯದಲ್ಲಿ ಪ್ರವೀಣೆ, ಕಿತ್ತು ತಿನ್ನೋ ಬಡತನ- ಉಡುಪಿಯ ನಿಶಾಗೆ ಬೇಕಿದೆ ಭರತನಾಟ್ಯ ಕಾಸ್ಟ್ಯೂಮ್

    ಯಕ್ಷಗಾನ, ಭರತನಾಟ್ಯದಲ್ಲಿ ಪ್ರವೀಣೆ, ಕಿತ್ತು ತಿನ್ನೋ ಬಡತನ- ಉಡುಪಿಯ ನಿಶಾಗೆ ಬೇಕಿದೆ ಭರತನಾಟ್ಯ ಕಾಸ್ಟ್ಯೂಮ್

    ಉಡುಪಿ: ಈಕೆ ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿರುವ ಹುಡುಗಿ. ಯಕ್ಷಗಾನ ಹಾಗೂ ಭರತನಾಟ್ಯದಲ್ಲಿ ಚಿಕ್ಕಂದಿನಲ್ಲೇ ಪರಿಣತಿ ಪಡೆದಾಕೆ. ಇಷ್ಟೆಲ್ಲಾ ಇದ್ರೂ ಆಕೆಯ ಮನೆಯಲ್ಲಿ ಮಾತ್ರ ಕಿತ್ತು ತಿನ್ನುವ ಬಡತನ. ಇದರಿಂದ ಭರತನಾಟ್ಯಮತ್ತು ಕಲೆಯನ್ನು ಮುಂದುವರಿಸಲಾಗದ ಸ್ಥಿತಿ ಆಕೆಯದ್ದು. ಉಡುಪಿಯ ಕೋಟದಿಂದ ಬಂದಿರುವ ನಿಶಾ ಇದೀಗ ಬೆಳಕಿನ ನಿರೀಕ್ಷೆಯಲ್ಲಿದ್ದಾಳೆ.

    ನಿಶಾ ಉಡುಪಿ ಜಿಲ್ಲೆಯಲ್ಲಿನ ಜ್ಞಾನಪೀಠ ಪ್ರಶಸ್ತಿ ವಿಜೇತ ಕೋಟ ಶಿವರಾಮ ಕಾರಂತರ ಊರಿನವಳು. ಈಕೆ ತಾಯಿಯ ಹೊಟ್ಟೆಯಲ್ಲಿ ಹುಟ್ಟುತ್ತಲೇ ನೋವುಂಡವಳು. ನಿಶಾಳ ತಾಯಿ ಶಾರದಾಗೆ ಎರಡೂ ಕಿಡ್ನಿ ಫೇಲಾಗಿತ್ತು. ತನ್ನ ದೊಡ್ಡಮ್ಮ ಕಿಡ್ನಿ ನೀಡಿ ನಿಶಾಳ ಅಮ್ಮನನ್ನು ಬದುಕಿಸಿದ್ದರು. ದೊಡ್ಡಮ್ಮ, ಅಜ್ಜಿ, ಮಾವ ಸೇರಿ ಮನೆಯಲ್ಲಿ ಒಟ್ಟು ಏಳು ಜನ. ಎಲ್ಲರನ್ನು ಸಾಕುವ ಜವಾಬ್ದಾರಿ ನಿಶಾಳ ಅಪ್ಪ ರಾಘುವಿನ ಹೆಗಲ ಮೇಲಿದೆ. ಮೇಸ್ತ್ರಿ ಕೆಲಸ ಮಾಡುವ ರಾಘುವಿಗೆ ಸಂಸಾರ ಸಾಗರವನ್ನು ಹೊತ್ತು ಈಜಲು ಕಷ್ಟವಾಗುತ್ತಿದೆ. ಒಟ್ಟಿನಲ್ಲಿ ನಿಶಾ ಚಿಕ್ಕಂದಿನಿಂದಲೇ ಕಷ್ಟದ ಜೊತೆಯಾಗಿ ಬೆಳೆದವಳು.

    ನಿಶಾ ಕೋಟ ವಿವೇಕ ಬಾಲಕಿಯರ ಹೈಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿನಿ. ಓದಿನಲ್ಲಿ ಶಾಲೆಗೆ ಮುಂದಿರುವ ಈಕೆ ಯಕ್ಷಗಾನ, ಭರತನಾಟ್ಯದಲ್ಲಿ ಪ್ರವೀಣೆ. ತನ್ನ ತಂಡದ ಜೊತೆ ಅಲ್ಲಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಾಳೆ. ಭರತನಾಟ್ಯ ಕ್ಲಾಸಿಗೆ ತಿಂಗಳಿಗೆ 300 ರೂಪಾಯಿ ಫೀಸ್ ಕೊಡೋದಕ್ಕೂ ಈಕೆಗೆ ಕಷ್ಟವಾಗುತ್ತಿದೆ. ಭರತನಾಟ್ಯ ಕಾರ್ಯಕ್ರಮಗಳಿದ್ದರೆ ನಿಶಾ ಬಳಿ ಸರಿಯಾದ ಕಾಸ್ಟ್ಯೂಮ್‍ಗಳಿಲ್ಲ. ವಿಶೇಷ ದಿನಗಳಲ್ಲಿ ತೊಡಲು ಒಳ್ಳೆಯ ಬಟ್ಟೆಗಳಿಲ್ಲ. ಹೀಗಾಗಿ ಬೆಳಕು ಕಾರ್ಯಕ್ರಮದ ಮೂಲಕ ನಿಶಾ ಸಹಾಯ ಅಪೇಕ್ಷಿಸಿದ್ದಾಳೆ.

    ಎಷ್ಟೇ ಬಡತನ ಇದ್ರೂ ಈಕೆಯಲ್ಲಿರುವ ಪ್ರತಿಭೆಗೆ ಕೊರತೆಯಾಗಿಲ್ಲ. ವಿದ್ಯೆಗೆ ಹಣ ಅಡ್ಡಿಯಾಗಿಲ್ಲ. ಇಷ್ಟರವರೆಗೆ ಹೇಗೋ ಆಗಿದೆ. ಮುಂದೆ ಪಿಯೂಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳಬೇಕು. ವರ್ಷಕ್ಕೆ 15 ಸಾವಿರ ರೂಪಾಯಿ ಫೀಸ್ ಕಟ್ಟಬೇಕು. ಎಂಬಿಬಿಎಸ್ ಮಾಡಿ ವೈದ್ಯೆಯಾಗಬೇಕು ಅನ್ನೋ ಕನಸು ಇಟ್ಟುಕೊಂಡಿದ್ದಾಳೆ ನಿಶಾ.