Tag: bharath

  • ‘ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಐಟಂ ಸಾಂಗ್ ಶೂಟಿಂಗ್

    ‘ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಐಟಂ ಸಾಂಗ್ ಶೂಟಿಂಗ್

    ‘ಮೆಜೆಸ್ಟಿಕ್’ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟ ಚಿತ್ರ. ದಶಕಗಳ‌ ನಂತರ  ಹೊಸ ಕಾನ್ಸೆಪ್ಟ್ ಇಟ್ಟುಕೊಂಡು  ‘ಮೆಜೆಸ್ಟಿಕ್-2’ ಹೆಸರಿನಡಿ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಆಗಿನ ಮೆಜೆಸ್ಟಿಕ್ ನಲ್ಲಿ ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ಹೇಳಿದ್ದರೆ, ಈಗಿನ ಮೆಜೆಸ್ಟಿಕ್-2, ಮೂಲಕ ಅಲ್ಲಿ ನಡೆಯುವ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು, ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ನಿರ್ದೇಶಕ ರಾಮು ಹೇಳ ಹೊರಟಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್  ಅವರ ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ.

    ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ ಹೆಚ್.ಹನುಮಂತಪ್ಪ ಅವರು ನಿರ್ಮಿಸುತ್ತಿರುವ ಈ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಕಲರ್ಫುಲ್ ಸೆಟ್ ನಲ್ಲಿ ನಡೆದಿದೆ.  ಚಿತ್ರದಲ್ಲಿ ನಾಯಕ ದರ್ಶನ್ ಅವರ ಫ್ಯಾನ್  ಆಗಿ ಕಾಣಿಸಿಕೊಂಡಿದ್ದು, ಅವರ ಮೇಲಿನ ಅಭಿಮಾನದಿಂದ  ಮಾಡುತ್ತಿರುವ, ಈಗಿನ ಟ್ರೆಂಡ್ ಗೆ ತಕ್ಕಂತೆ ಲಿರಿಕ್ ಹೆಣೆದಿರುವ ಹಾಡು ಇದಾಗಿದೆ, ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಎಂದು ನಿರ್ದೇಶಕ ರಾಮು ಅವರು  ಬರೆದ ಸಾಹಿತ್ಯಕ್ಕೆ ಗಾಯಕಿ ಮೇಘನಾ ಹಳ್ಳಿಹಾಳ ದನಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಹಾಡಿನ ಚಿತ್ರೀಕರಣದಲ್ಲಿ ಐಟಂ ಡಾನ್ಸರ್ ಹಾಗೂ ನಾಯಕನ ಜೊತೆಗೆ ಸಹ ಕಲಾವಿದರುಗಳೂ ಸಹ  ಭಾಗವಹಿಸಿದ್ದರು. ಸಂತೋಷ್ ಈ ಹಾಡಿಗೆ  ಕೊರಿಯಾಗ್ರಾಫ್ ಮಾಡಿದ್ದಾರೆ.

     

    ಈಗಾಗಲೇ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬೆಂಗಳೂರು ಸುತ್ತಮುತ್ತ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ ಮಾಡಲಾಗಿದೆ. ರೌಡಿಸಂ  ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ “ಮೆಜೆಸ್ಟಿಕ್ 2” ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ.   ಇನ್ನು  ಈ ಚಿತ್ರಕ್ಕೆ  ವಿನು ಮನಸು  ಅವರ ಸಂಗೀತ ನಿರ್ದೇಶನವಿದ್ದು,  ವೀನಸ್ ಮೂರ್ತಿ ಅವರು  ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ.

  • ಇಶಾಗೆ ಡಿವೋರ್ಸ್‌ ಕೊಡಲು ಬೆಂಗಳೂರು ಹುಡುಗಿ ಜೊತೆಗಿನ ಭರತ್‌ ಅಫೇರ್‌ ಕಾರಣ?

    ಇಶಾಗೆ ಡಿವೋರ್ಸ್‌ ಕೊಡಲು ಬೆಂಗಳೂರು ಹುಡುಗಿ ಜೊತೆಗಿನ ಭರತ್‌ ಅಫೇರ್‌ ಕಾರಣ?

    ಬಾಲಿವುಡ್ ನಟ ಧರ್ಮೇಂದ್ರ- ಹೇಮಾ ಮಾಲಿನಿ (Hema Malini) ಪುತ್ರಿ ಇಶಾ ಡಿಯೋಲ್ (Esha Deol) ಅವರು ಉದ್ಯಮಿ ಭರತ್‌ಗೆ ಡಿವೋರ್ಸ್ ನೀಡಿರೋದು ಸದ್ಯ ಭಾರೀ ಚರ್ಚೆಯಾಗುತ್ತಿದೆ. ನಟಿ ಇಶಾಗೆ ಕೈ ಕೊಡಲು ಭರತ್ ವಿವಾಹೇತರ ಸಂಬಂಧವೇ ಕಾರಣ ಎಂಬ ಸುದ್ದಿ ಹರಿದಾಡುತ್ತಿದೆ.

    ಬೆಂಗಳೂರಿನ ಹುಡುಗಿ ಜೊತೆ ಉದ್ಯಮಿ ಭರತ್‌ಗೆ ನಂಟು ಇರುವ ಕಾರಣ, ಇಶಾಗೆ ಡಿವೋರ್ಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ಇಶಾಗೆ 2ನೇ ಮಗು ಆದ್ಮೇಲೆ ಗಂಡ ಮತ್ತು ಹೆಂಡತಿ ನಡುವಿನ ಸಂಬಂಧ ಹದಗೆಟ್ಟಿತ್ತು ಎಂಬ ಸುದ್ದಿ ಖಾಸಗಿ ಪತ್ರಿಕೆಯೊಂದು ಪ್ರಕಟಿಸಿತ್ತು. ಸಾಕಷ್ಟು ಸಮಯದಿಂದ ಇಬ್ಬರು ಬೇರೆ ಬೇರೆಯಾಗಿ ವಾಸಿಸುತ್ತಿದ್ದರು. ಇದೀಗ ಡಿವೋರ್ಸ್ ಬಗ್ಗೆ ಈ ಜೋಡಿ ಅಧಿಕೃತ ಅಪ್‌ಡೇಟ್ ನೀಡಿದ ಬೆನ್ನಲ್ಲೇ ಭರತ್ ಅಫೇರ್ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

    ಇಬ್ಬರ ಡಿವೋರ್ಸ್‌ಗೆ ಉದ್ಯಮಿ ಭರತ್ ಬೆಂಗಳೂರಿನ ಹುಡುಗಿಯೊಬ್ಬಳ ಜೊತೆ ಸಂಬಂಧ ಹೊಂದಿರುವುದು ಎನ್ನಲಾಗಿದೆ. ಈ ವರ್ಷ ಬೆಂಗಳೂರಿನಲ್ಲಿ ಭರತ್, ತಮ್ಮ ಗರ್ಲ್ ಫ್ರೆಂಡ್ ಜೊತೆ ನ್ಯೂ ಇಯರ್ ಪಾರ್ಟಿ ಮಾಡಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಭರತ್ ಅಫೇರ್ ಬಗ್ಗೆ ಅರಿತು ದಾಂಪತ್ಯ ಇಶಾ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:Toxic: ಯಶ್ ಸಿನಿಮಾ ಎಲ್ಲಿಗೆ ಬಂತು? ಇಲ್ಲಿದೆ ಬಿಗ್ ಅಪ್‌ಡೇಟ್

    ಫೆ.6ರಂದು ವಿಚ್ಛೇದನದ ಬಗ್ಗೆ ಇಶಾ ಡಿಯೋಲ್- ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದರು. ಈ ಬಗ್ಗೆ ಖಾಸಗಿ ಪತ್ರಿಕೆಯೊಂದು ವರದಿ ಮಾಡಿತ್ತು. ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿತ್ತು. ಕೆಲ ದಿನಗಳಿಂದ ಇಬ್ಬರ ಡಿವೋರ್ಸ್ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ನಿನ್ನೆ (ಫೆ.6) ಅಧಿಕೃತ ಮಾಹಿತಿ ಹೊರಬಿದ್ದಿತ್ತು.

    2012ರಲ್ಲಿ ಇಶಾ ಡಿಯೋಲ್- ಭರತ್ ತಖ್ತಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2017ರಲ್ಲಿ ಮಗಳು ರಾಧ್ಯಗೆ ಇಶಾ ಡಿಯೋಲ್ ಜನ್ಮ ನೀಡಿದರು. 2019ರಲ್ಲಿ ಎರಡನೇ ಮಗುವನ್ನ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಬರಮಾಡಿಕೊಂಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್- ಭರತ್ ಅಂತ್ಯ ಹಾಡಿದರು.

    ಧೂಮ್, ಜಸ್ಟ್ ಮ್ಯಾರೀಡ್, ನೋ ಎಂಟ್ರಿ, ಡಾರ್ಲಿಂಗ್, ಶಾದಿ ನಂ.1 ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಇಶಾ ನಟಿಸಿದ್ದಾರೆ.

  • ಸಲ್ಮಾನ್ ಅಭಿನಯದ ಭಾರತ್ ಟೀಸರ್ ಔಟ್

    ಸಲ್ಮಾನ್ ಅಭಿನಯದ ಭಾರತ್ ಟೀಸರ್ ಔಟ್

    ಮುಂಬೈ: ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಭಾರತ್ ಸಿನಿಮಾದ ಟೀಸರ್ ಅನ್ನು ಸ್ವಾಂತತ್ರ್ಯೋತ್ಸವ ದಿನದಂದೇ ಬಿಡುಗಡೆ ಮಾಡಲಾಗಿದೆ.

    ಭಾರತ್ ಸಿನಿಮಾವು ಬಾಲಿವುಡ್‍ನ ಖ್ಯಾತ ನಿರ್ದೇಶಕರಾದ ಅಲಿ ಅಬ್ಬಾಸ್ ಜಾಫರ್ ನೇತೃತ್ವದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಚಿತ್ರದಲ್ಲಿ ಸಲ್ಮಾನ್ ಖಾನ್‍ರವರು ಮಾತೃ ದೇಶವನ್ನು ಹುಡುಕುತ್ತಾ ಪ್ರಯಾಣಿಸುವ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತ್ ಸಿನಿಮಾವು 2019ರ ಈದ್ ನಂದು ಬಿಡುಗಡೆಗೊಳ್ಳಲಿದೆ ಎಂದು ತಿಳಿದು ಬಂದಿದೆ.

    ಖುದ್ದು ಸಲ್ಮಾನ್ ಖಾನ್‍ರವರು ಇಂದು ಭಾರತ್ ಸಿನಿಮಾದ ಟೀಸರ್ ಬಿಡುಗಡೆ ಮಾಡಿ, ತಮ್ಮ ಟ್ವಿಟ್ಟರ್ ನಲ್ಲಿ, ಕೆಲವು ಸಂಬಂಧಗಳು ರಕ್ತದಿಂದ ಬಂದಿದ್ದರೆ, ಇನ್ನೂ ಕೆಲವು ಮಣ್ಣಿನಿಂದ ಬಂದಿರುತ್ತವೆ, ಆದರೆ ನಾನೂ ಎರಡನ್ನೂ ಹೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಭಾರತ್ ಸಿನಿಮಾದಲ್ಲಿ, ಮಾಜಿ ವಿಶ್ವಸುಂದರಿ ಕತ್ರಿನಾ ಕೈಫ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ದಿಶಾ ಪಟನಿ, ಸುನಿಲ್ ಗ್ರೋವರ್, ಆಸಿಫ್ ಶೇಕ್ ಮತ್ತು ಟಬೂ ಸಹ ಅಭಿನಯಿಸಿದ್ದಾರೆ. ಚಿತ್ರ ದಕ್ಷಿಣಯ ಕೊರಿಯಾದ ಒಡೇ ಟು ಮೈ ಫಾದರ್ ಚಿತ್ರದ ರಿಮೇಕ್ ಆಗಿದೆ. ಚಿತ್ರದಲ್ಲಿ 1940 ರಲ್ಲಿ ಭಾರತ ವಿಭಜನೆಯಲ್ಲಿ ನಡೆದ ಘಟನೆಯನ್ನು ಆಧರಿಸಿದ್ದು, 70ರ ದಶಕದ ಶೈಲಿಯಲ್ಲಿ ಚಿತ್ರ ತಯಾರಾಗುತ್ತಿದೆ ಎಂದು ಹೇಳಲಾಗಿದೆ.

    ಸಲ್ಮಾನ್ ಖಾನ್ ಜೊತೆ ಮೂರನೇ ಬಾರಿ ಜಾಫರ್ ಚಿತ್ರಕ್ಕೆ ಕೈಜೋಡಿಸಿದ್ದು, ಈ ಮೊದಲು ಬಾಲಿವುಡ್‍ನಲ್ಲಿ ಸದ್ದು ಮಾಡಿದ್ದ ಸುಲ್ತಾನ್ ಹಾಗೂ ಟೈಗರ್ ಜಿಂದಾ ಹೈ ಚಿತ್ರದಲ್ಲಿ ಅಭಿನಯಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

    ನನಗೆ ಹುಡುಗಿ ಸಿಕ್ಕಿಬಿಟ್ಳು- ಸಲ್ಮಾನ್ ಖಾನ್ ಟ್ವೀಟ್ ಒಂದೇ ಗಂಟೆಯಲ್ಲಿ ವೈರಲ್

    ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಮದುವೆ ಬಾಲಿವುಡ್ ಅಂಗಳದಲ್ಲಿ ಬಹುಚರ್ಚಿತ ವಿಷಯ. ಸಲ್ಮಾನ್ ಯಾವಾಗ ಮದುವೆಯಾಗ್ತಾರೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಈ ಹೊತ್ತಲ್ಲೇ ಸಲ್ಮಾನ್, ಮುಜೆ ಲಡ್ಕಿ ಮಿಲ್ ಗಯಿ (ನನಗೆ ಹುಡುಗಿ ಸಿಕ್ಕಿಬಿಟ್ಳು) ಎಂದು 1 ಗಂಟೆ ಹಿಂದಷ್ಟೇ ಟ್ವೀಟ್ ಮಾಡಿದ್ದು, ಈಗಾಗಲೇ ವೈರಲ್ ಆಗಿದೆ. ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ.

    ಆದ್ರೆ ಸಲ್ಮಾನ್ ಖಾನ್ ಮಾತನಾಡುತ್ತಿರುವುದು ಯಾವ ಹುಡುಗಿ ಬಗ್ಗೆ ಅನ್ನೋದು ಸದ್ಯದ ಕುತೂಹಲ. ಅವರು ತಮ್ಮ ಮುಂದಿನ ಸಿನಿಮಾ ಭಾರತ್ ಚಿತ್ರಕ್ಕೆ ಹೀರೋಯಿನ್ ಸಿಕ್ಕಿದ್ದಾಳೆಂದು ಹೇಳುತ್ತಿರಬಹುದು.

    ದೇಶಭಕ್ತಿಯ ಚಿತ್ರವಾದ ಭಾರತ್ 2019ರ ಈದ್‍ಗೆ ಬಿಡುಗಡೆಯಾಗಬೇಕಿದ್ದು, ಅಲಿ ಅಬ್ಬಾಸ್ ಝಫರ್ ನಿರ್ದೇಶನ ಮಾಡ್ತಿದ್ದಾರೆ. ಚಿತ್ರಕ್ಕೆ ನಾಯಕಿ ಅಂತಿಮವಾಗಿರಲಿಲ್ಲ. ಆದರೂ ಕತ್ರೀನಾ ಕೈಫ್ ಅವರನ್ನ ಚಿತ್ರದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ ಅಂತ ವದಂತಿಗಳು ಹರಿದಾಡ್ತಿದೆ.

    ಸಲ್ಮಾನ್ ಖಾನ್ ಮುಂಬೈನಲ್ಲಿ ರೇಸ್ 3 ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಈ ಚಿತ್ರವನ್ನ ರೆಮೋ ಡಿಸೋಜಾ ನಿರ್ದೇಶಿಸುತ್ತಿದ್ದು, ಜಾಕ್ವೆಲೀನ್ ಫರ್ನಾಂಡಿಸ್, ಬಾಬಿ ಡಿಯೋಲ್, ಡೈಸಿ ಶಾಹ್, ಅನಿಲ್ ಕಪೂರ್ ಮುಂತಾದವರು ನಟಿಸಿದ್ದಾರೆ. ಇದೇ ವರ್ಷ ಈದ್‍ಗೆ ರೇಸ್-3 ಚಿತ್ರ ಬಿಡುಗಡೆಯಾಗಲಿದೆ.