Tag: Bharati Vishnuvardhan

  • ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

    ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

    ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು (Vishnu Memorial) ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಈ ಹಿಂದೆ ವಿಷ್ಣುವರ್ಧನ್ (Vishnuvardhan) ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

    ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆಚ್ಚಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಯುತವಾಗಿ ಆಯೋಜಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ನಟ ಡಾ. ವಿಷ್ಣುವರ್ಧನ್ ಮನೆ ಹೇಗಿದೆ? ‘ವಲ್ಮೀಕ’ ವಿಶೇಷ

    ಚುಕ್ಕಿ ರೋಗ ತಡೆಗೆ ಕ್ರಮ
    ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.

    ಶೃಂಗೇರಿಯಲ್ಲಿ ಆಸ್ಪತ್ರೆ
    ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಸ್ಥಳದ ಸಮಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.

    Live Tv
    [brid partner=56869869 player=32851 video=960834 autoplay=true]

  • ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ಸಾಹಸ ಸಿಂಹ ವಿಷ್ಣುವರ್ಧನ್ ಮನೆ ಗೃಹಪ್ರವೇಶ: ನಾನಾ ಗಣ್ಯರು ಭಾಗಿ

    ನ್ನಡದ ಹೆಸರಾಂತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಹೊಸ ಮನೆ ಗೃಹ ಪ್ರವೇಶ ಇಂದು ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್, ನಟ ಜಗ್ಗೇಶ್ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಗೃಹ ಪ್ರವೇಶದ ಪೂಜೆಗೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, ‘ಸಾಹಸಸಿಂಹ ನಮ್ಮ ಅಚ್ಚುಮೆಚ್ಚಿನ ನಟ. ವಿಷ್ಣುವರ್ಧನ್ ಮನೆ ತುಂಬಾ ಸುಂದರವಾಗಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕದ ಕೆಲಸಗಳು ನಡೀತಿವೆ. ಸದ್ಯದಲ್ಲೇ ವಿಷ್ಣು ಸ್ಮಾರಕದ ಉದ್ಘಾಟನೆ ಸಮಾರಂಭವಾಗುತ್ತೆ. ವಿಷ್ಣು ನಮ್ಮೆಲ್ಲರಿಗೂ ಮಾದರಿ ವ್ಯಕ್ತಿತ್ವ. ವಿಷ್ಣು ಘನತೆಯನ್ನ ಎತ್ತಿಹಿಡಿಯೋ ಮ್ಯೂಸಿಯಂ ಮಾಡ್ತೀವಿ’ ಎಂದರು. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಜಗ್ಗೇಶ್ ಕೂಡ ಮಾತನಾಡಿ, ‘ವಿಷ್ಣುಮನೆಗೆ ಒಂದು ಬ್ಯುಟಿಫುಲ್ ಕಥೆಯಿದೆ. ವಿಷ್ಣು ಅವರಿಗೆ ಮೊದಲು ಯಾರೋ ಭಯ ಹುಟ್ಟಿಸಿದ್ರು. ಜಯನಗರದ ಮನೆ ವಿಷ್ಣು ಸರ್ ಗೆ ಪ್ರಿಯವಾದ ಜಾಗ. ಮನೆಯಲ್ಲಿ ಒಂದೊಂದು ಜಾಗವು ಕಾಡುತ್ತೆ. ಭಾವನೆಗಳನ್ನ ಕೆದಕುತ್ತೆ. ಇದು ಮನೆಯಲ್ಲ, ನಮ್ಮ ಪಾಲಿಗೆ ದೇವಸ್ಥಾನ. ಅನಿರುದ್ದ್ ವಿಷ್ಣುವರ್ಧನ್ ಮಗನ ಸಮಾನ. ಅನಿರುದ್ದ್ ಪರವಾಗಿ ಈಗಲೂ ನಿಲ್ಲಬೇಕು’ ಎಂದರು.

    ಗೃಹ ಪ್ರವೇಶದ ಸಮಾರಂಭಕ್ಕೆ ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಅನೇಕರು ಹಾಜರಿದ್ದರು. ಬೆಳಗ್ಗೆಯಿಂದಲೇ ಪೂಜೆ, ಹೋಮ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಗಳು ನಡೆದಿವೆ. ಮುಂದಿನ ತಿಂಗಳು ವಿಷ್ಣು ಸ್ಮಾರಕ ಕೂಡ ಉದ್ಘಾಟನೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ಅರ್ಪಣೆ – ಭಾರತಿ ವಿಷ್ಣುವರ್ಧನ್

    ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ಅರ್ಪಣೆ – ಭಾರತಿ ವಿಷ್ಣುವರ್ಧನ್

    ಮೈಸೂರು: ಜಿಲ್ಲೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕವನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಅರ್ಪಣೆ ಮಾಡುತ್ತಿದ್ದೇವೆ. ವಿಷ್ಣುವರ್ಧನ್ ಕನಸು ಕೂಡ ಇದೆ ಆಗಿತ್ತು ಎಂದು ಹಿರಿಯ ನಟಿ, ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

    ಮೈಸೂರಿನ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕ ಪ್ರದೇಶವನ್ನು ಭಾರತಿ ವಿಷ್ಣುವರ್ಧನ್ ವೀಕ್ಷಿಸಿದರು. ಸುಮಾರು 5 ಎಕರೆ ವ್ಯಾಪ್ತಿಯ 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದೆ. ಕಳೆದ 10 ವರ್ಷದಿಂದ ಈ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಪುನಃ ಆರಂಭವಾಗಿರುವ ಕಾಮಗಾರಿಯನ್ನು ನೋಡಲು ಬಂದ ಭಾರತಿ ಅವರು ಸ್ಥಳೀಯರು ಹಾಗೂ ಅಧಿಕಾರಿಗಳ ಜೊತೆ ಸ್ಮಾರಕ ನಿರ್ಮಾಣದ ಕುರಿತು ಮಾಹಿತಿ ಪಡೆದರು.

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 11 ಕೋಟಿ ವೆಚ್ಚದಲ್ಲಿ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣವಾಗುತ್ತಿದೆ. ಸರ್ಕಾರದಿಂದ ಈ ಹಣ ಹಂತ ಹಂತವಾಗಿ ಬಿಡುಗಡೆ ಆಗಲಿದೆ. ಮೊದಲು ನಾವು ಈ ಜಾಗದಲ್ಲಿದ್ದವರಿಗೆ ಮಾನವೀಯತೆಯಿಂದ ಹಣ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಸ್ಥಳೀಯರು ಇಂದು ಆಗೋದಿಲ್ಲ ಹೋರಾಟ ಮಾಡುತ್ತೀವಿ ಎಂದರು. ಆದರೆ ಈಗ ಇದು ಸರ್ಕಾರದ ಜಾಗವಾಗಿದೆ. ಹಾಗಾಗಿ ಈಗ ಅವರಿಗೆ ಮಾನವೀಯತೆಯಿಂದ ಹಣ ಕೊಡುವ ಅವಶ್ಯಕತೆ ಇಲ್ಲ. ನಾವು ಕೊಡೋದಿಲ್ಲ, ಸರ್ಕಾರವೂ ಕೊಡಲ್ಲ. ಈ ಸ್ಮಾರಕ ಅಭಿಮಾನಿಗಳು ಹಾಗೂ ವಿಷ್ಣು ಅವರಿಗೆ ಅರ್ಪಿಸುತ್ತೇವೆ. ವಿಷ್ಣುವರ್ಧನ್ ಅವರ ಕನಸು ಕೂಡ ಇದೆ ಆಗಿತ್ತು ಎಂದು ಹೇಳಿದ್ದಾರೆ.

    ಈ ವೇಳೆ ಮಾತನಾಡಿದ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಮಾತನಾಡಿ, ಮೈಸೂರಿನಲ್ಲಿ ಸ್ಮಾರಕ ಆಗ್ತಿರೋದು ತುಂಬಾನೇ ಖುಷಿಯಾಗಿದೆ. ಅಪ್ಪಾಜಿಯವರ ಕನಸು ಕೂಡ ಇದೇ ಆಗಿತ್ತು. ಇದು ಕೇವಲ ಸ್ಮಾರಕವಲ್ಲ, ಇದೊಂದು ರಾಜ್ಯದ ಮಾಡೆಲ್. ರಂಗ ತರಬೇತಿಯಿಂದ ಹಿಡಿದು ಸಿನಿಮಾಗೆ ಸಂಬಂಧಿಸಿದ ಎಲ್ಲ ರೀತಿಯ ಟ್ರೈನಿಂಗ್ ಇಲ್ಲಿ ಇರುತ್ತದೆ. ದಕ್ಷಿಣ ಭಾರತದಲ್ಲಿ ಇದೊಂದು ಉತ್ತಮವಾದ ಮ್ಯೂಸಿಯಂ ಆಗಬೇಕಿದೆ. 10 ವರ್ಷಗಳ ಕಾಲ ನಡೆದ ಹೋರಾಟದ ಫಲ ಇಂದು ದೊರಕಿದೆ. ಎರಡು ವರ್ಷದಲ್ಲಿ ಸ್ಮಾರಕ ಹಾಗೂ ಮ್ಯೂಸಿಯಂ ಮುಕ್ತಾಯವಾಗಲಿದೆ ಎಂದು ತಿಳಿಸಿದರು.