Tag: Bharthinagar Police

  • ಬಿಕ್ಲು ಶಿವ ಕೊಲೆ ಕೇಸ್; ಬಂಧಿತ ಹಂತಕರ ಮೇಲೆ ರೌಡಿಶೀಟ್‌ ತೆರೆದ ಪೊಲೀಸರು

    ಬಿಕ್ಲು ಶಿವ ಕೊಲೆ ಕೇಸ್; ಬಂಧಿತ ಹಂತಕರ ಮೇಲೆ ರೌಡಿಶೀಟ್‌ ತೆರೆದ ಪೊಲೀಸರು

    ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಮಾಡಿ ಬಂಧನವಾಗಿರುವ ಹಂತಕರ ವಿರುದ್ಧ ಪೊಲೀಸರು ರೌಡಿಶೀಟ್‌ ತೆರೆದಿದ್ದಾರೆ.

    ಬಂಧಿತ 17 ಮಂದಿ ಆರೋಪಿಗಳಲ್ಲಿ 9 ಮಂದಿ ವಿರುದ್ಧ ರೌಡಿಶೀಟ್‌ ತೆರೆಯಲಾಗಿದೆ. ಕಿಂಗ್‌ಪಿನ್ ಕಿರಣ್, ಮದನ್, ವಿಮಲ್, ಪ್ರದೀಪ್, ಪ್ಯಾಟ್ರಿಕ್, ಸ್ಯಾಮ್ಯುಯೆಲ್, ಸೇರಿ 9 ಮಂದಿಯ ವಿರುದ್ಧ ರೌಡಿ ಪಟ್ಟಿಯನ್ನ ಭಾರತಿ ನಗರ ಪೊಲೀಸರು ತೆರೆದಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

    ಕೊಲೆ ಕೇಸ್ ಸೇರಿದಂತೆ ಬಂಧಿತರ ಮೇಲೆ ಹಲವು ಕೇಸ್‌ಗಳು ಇರುವುದು ತನಿಖೆಯ ವೇಳೆ ಪತ್ತೆಯಾಗಿದ್ದರಿಂದ ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ.‌ ಸದ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಜಗ್ಗ ಅಲಿಯಾಸ್ ಜಗದೀಶ್‌, ಬಿಕ್ಲು ಶಿವನ ಕೊಲೆ ಬಳಿಕ ತಲೆಮರಿಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಆತ ಬಂಧನವಾದ ಬಳಿಕ ಆತನ ಮೇಲೆಯು ಕೂಡ ರೌಡಿ ಪಟ್ಟಿ ತೆರೆಯಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಆರೋಪಿ ವಿರುದ್ಧ ನಗರದ ಇಂದಿರಾನಗರ, ಜೆಬಿ ನಗರ, ಜೆಪಿ ನಗರ, ಕೆ.ಆರ್ ಪುರ ಸೇರಿದಂತೆ ಹಲವು ಕಡೆ ಪ್ರಕರಣಗಳಿದ್ದು, ಕೆಲವೊಂದು ಕೇಸ್‌ಗಳು ಟ್ರಯಲ್‌ನಲ್ಲಿರುವ ಕಾರಣ ಕೊಲೆ ಕೇಸ್‌ನಲ್ಲಿ ಎ1 ಆರೋಪಿಯಾಗಿರುವ ಜಗ್ಗನ ಮೇಲೆ ಮತ್ತೆ ರೌಡಿ ಪಟ್ಟಿ ತೆರೆಯಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ – ಆರೋಪಿ ಜಗ್ಗ ದುಬೈಗೆ ಎಸ್ಕೇಪ್

  • ಬಿಕ್ಲು ಶಿವ ಕೊಲೆ ಕೇಸ್‌ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

    ಬಿಕ್ಲು ಶಿವ ಕೊಲೆ ಕೇಸ್‌ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

    ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva Murder case) 5ನೇ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ (Byrathi Basavaraj) ಇಂದು 2ನೇ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

    ಈ ನಡುವೆ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಶುಕ್ರವಾರವೇ (ಜು.18) ಹೈಕೋರ್ಟ್‌ಗೆ (Karnataka Highcourt) ಅರ್ಜಿ ಸಲ್ಲಿಸಿದ್ದರು. ಶನಿವಾರ (ಜು.19) ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಇಂದಿಗೆ ಮುಂದೂಡಿಕೆ ಮಾಡಿತ್ತು. ಇದನ್ನೂ ಓದಿ: ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ – ಓವರ್ ಸ್ಪೀಡ್‌ನಿಂದ ಡಿವೈಡರ್‌ಗೆ ಡಿಕ್ಕಿ; ಓರ್ವ ಸಾವು

    ಈಗಾಗಲೇ ಈ ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳು ಅರೆಸ್ಟ್ ಆಗಿದ್ದು, ಇವರಲ್ಲಿ ಹಲವರು ಬೈರತಿ ಬಸವರಾಜ್‌ಗೆ ಆಪ್ತರು ಎನ್ನಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ‌‌. ನಡುವೆ ಜಗದೀಶ್ ಪತ್ತೆಯಾಗದ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನು ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್, ಬೇಕರಿಗೆ ನುಗ್ಗಿದ ಲಾರಿ – ಮೂವರು ಸಾವು, ಐವರಿಗೆ ಗಾಯ

    ಸತತ ಮೂರುವರೆಗಂಟೆ ಗ್ರಿಲ್‌
    ಇನ್ನೂ ಕಳೆದ ಶನಿವಾರ ಭಾರತಿನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ಮಾಜಿ ಸಚಿವ ಬೈರತಿ ಬಸವರಾಜ್‌ ಸತತ ಮೂರುವರೆಗಂಟೆಗಳ ಕಾಲ ವಿಚಾರನೆ ಎದುರಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಕರೆದಿದ್ರು, ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೀನಿ. ಇದರಲ್ಲಿ ನನ್ನ ಪಾತ್ರ ಇಲ್ಲ ಅಂತಾ ಹೇಳಿದ್ದೇನೆ. ನನಗೂ ಕೊಲೆಗೂ ಸಂಬಂಧವಿಲ್ಲ, ಯಾವ ಜಗ್ಗನೂ ನನಗೆ ಗೊತ್ತಿಲ್ಲ. ಬುಧವಾರ ಮತ್ತೆ ವಿಚಾರಣೆಗೆ ಬರಬೇಕೆಂದು ಹೇಳಿದ್ದಾರೆ. ಬರುತ್ತೇನೆ. ತನಿಖೆಗೆ ಎಲ್ಲ ರೀತಿಯಿಂದಲೂ ಸಹಕಾರ ಕೊಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

  • ಕೊಲೆ ಕೇಸಲ್ಲಿ ಮೂರೂವರೆ ಗಂಟೆ ಪೊಲೀಸರಿಂದ ಗ್ರಿಲ್ – ಹೊರ ಬರ್ತಿದ್ದಂತೆ ಬೆಂಬಲಿಗರಿಂದ ಜೈಕಾರ

    ಕೊಲೆ ಕೇಸಲ್ಲಿ ಮೂರೂವರೆ ಗಂಟೆ ಪೊಲೀಸರಿಂದ ಗ್ರಿಲ್ – ಹೊರ ಬರ್ತಿದ್ದಂತೆ ಬೆಂಬಲಿಗರಿಂದ ಜೈಕಾರ

    – ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗಲು ಸೂಚನೆ
    – ಕೊಲೆಗೂ ನನಗೂ ಸಂಬಂಧವಿಲ್ಲ ಎಂದ ಮಾಜಿ ಸಚಿವ

    ಬೆಂಗಳೂರು: ರೌಡಿಶೀಟರ್ ಬಿಕ್ಲಶಿವ ಕೊಲೆ ಪ್ರಕರಣದಲ್ಲಿ (Murder Case) ಎ5 ಆರೋಪಿ ಆಗಿರುವ ಕೆ.ಆರ್‌ ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ (Byrathi Basavaraj) ಭಾರತಿನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಸತತ ಮೂರುವರೆಗಂಟೆಗಳ ಕಾಲ ವಿಚಾರಣೆ ಎದುರಿಸಿದರು.

    ಬಂಧನ ಭೀತಿಯಿಂದ ಮಧ್ಯಾಹ್ನದವರೆಗೂ ವಿಚಾರಣೆಗೆ ಬಂದಿರಲಿಲ್ಲ. ಹೆಚ್ಚಿನ ಪೊಲೀಸ್ ಭದ್ರತೆಯೊಂದಿಗೆ ತನಿಖಾಧಿಕಾರಿ (Investigation Officer) ಕಾದು ಕುಳಿತಿದ್ದರು. ಮಧ್ಯಾಹ್ನ 2:30ರ ಸುಮಾರಿಗೆ ಬಂದ ಮಾಜಿ ಸಚಿವರಿಗೆ ಸುಮಾರು ಮೂರುವರೆ ಗಂಟೆಗಳ ಕಾಲ ತನಿಖಾಧಿಕಾರಿ ಗ್ರಿಲ್ ಮಾಡಿದರು. 100ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಾರೆ ಅಂತ ತಿಳಿದು ಬಂದಿದೆ.

    ಅಲ್ಲದೇ ಬುಧವಾರ ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. ವಿಚಾರಣೆ ಬಳಿಕ ಮಾತಾಡಿದ ಬಸವರಾಜ್, ನನ್ನ ಪಾತ್ರ ಇಲ್ಲ ಅಂತ ಹೇಳಿದ್ದೇನೆ. ಬುಧವಾರ ಬರೋಕೆ ಹೇಳಿದ್ದಾರೆ, ಬರ್ತೇನೆ ಅಂದರು. ಇನ್ನೂ ಬೈರತಿ ಬಸರವಾಜ್‌ರನ್ನ ರಾಜಕೀಯವಾಗಿ ಮುಗಿಸೋ ಷಡ್ಯಂತ್ರ ಅಂತ ಬಿಜೆಪಿಗರು ಆರೋಪಿಸಿದ್ರೆ, ದೂರಿನಲ್ಲಿ ಇವರ ಹೆಸರಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು

    ಬೈರತಿ ಬಸವರಾಜ್‌ ಹೇಳಿದ್ದೇನು?
    ಇನ್ನೂ ಸತತ ಮೂರುವರೆಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬೈರತಿ ಬಸವರಾಜ್‌, ಭಾರತಿ ನಗರ ಠಾಣೆಯಿಂದ ಹೊರ ಬರುತ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದನ್ನೂ ಓದಿ: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

    ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಕರೆದಿದ್ರು, ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೀನಿ. ಇದರಲ್ಲಿ ನನ್ನ ಪಾತ್ರ ಇಲ್ಲ ಅಂತಾ ಹೇಳಿದ್ದೇನೆ. ನನಗೂ ಕೊಲೆಗೂ ಸಂಬಂಧವಿಲ್ಲ, ಯಾವ ಜಗ್ಗನೂ ನನಗೆ ಗೊತ್ತಿಲ್ಲ. ಬುಧವಾರ ಮತ್ತೆ ವಿಚಾರಣೆಗೆ ಬರಬೇಕೆಂದು ಹೇಳಿದ್ದಾರೆ. ಬರುತ್ತೇನೆ. ತನಿಖೆಗೆ ಎಲ್ಲ ರೀತಿಯಿಂದಲೂ ಸಹಕಾರ ಕೊಡುತ್ತೇನೆ ಎಂದು ಹೇಳಿದರು.

    ವಿಚಾರಣೆ ಮುಗಿಸಿ ಹೊರಬರ್ತಿದ್ದಂತೆ ಬೆಂಬಲಿಗರು ಜೈಕಾರ ಕೂಗಿ ಸಂಭ್ರಮಿಸಿದರು. ಇದನ್ನೂ ಓದಿ: ಅಪ್ರಾಪ್ತನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ – ಇಬ್ಬರು ಬಾಲಕರು ಅರೆಸ್ಟ್‌