Tag: Bhaskar Rao

  • ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

    ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

    ಬೆಂಗಳೂರು: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ (Bhaskar Rao) ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ (Alok Kumar) ವಿರುದ್ಧದ ಇಲಾಖಾ ತನಿಖೆ ಆದೇಶವನ್ನ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದು ಮಾಡಿದೆ.

    ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ಭಾರೀ ಹಿನ್ನೆಡೆಯಾಗಿದೆ. 2018-19 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಿದ್ದಾಗ ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಅಯುಕ್ತರಾಗಿದ್ದರು. ಈ ವೇಳೆ ಎಡಿಜಿಪಿ ಭಾಸ್ಕರ್ ರಾವ್ ಫೋನ್ ಟ್ಯಾಪಿಂಗ್ ಮಾಡಿದ್ದ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ಸಿಬಿಐ ತನಿಖೆಯಾಗಿ 2024 ರಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿತ್ತು. ಇದನ್ನೂ ಓದಿ: ನಂಜೇಗೌಡಗೆ ತಾತ್ಕಾಲಿಕ ರಿಲೀಫ್‌ – ಶಾಸಕ ಸ್ಥಾನದಿಂದ ಅಸಿಂಧುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ತಡೆ

    ಕಳೆದ ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣವನ್ನ ಇಲಾಖಾ ತನಿಖೆಗೆ ಆದೇಶಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಅಲೋಕ್‌ ಕುಮಾರ್ ಸಿಎಟಿ ಮೊರೆ ಹೋಗಿದ್ದರು. ಇಬ್ಬರು ನ್ಯಾಯಾಧೀಶರ ನಡುವೆ ವಿಭಿನ್ನ ತೀರ್ಪು ಬಂದ ಹಿನ್ನೆಲೆ, ಸಿಎಟಿ ಚೇರ್‌ಮನ್ ನ್ಯಾಯಮೂರ್ತಿ ರಣಜೀತ್‌ರಿಗೆ ಕೇಸ್ ವರ್ಗಾವಣೆಯಾಗಿತ್ತು. ಡಿಜಿಪಿ ಹುದ್ದೆಗೆ ಬಡ್ತಿ ತಡೆಯಲು ಅಲೋಕ್ ವಿರುದ್ಧ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ ಅಂತಾ ಅಲೋಕ್ ಕುಮಾರ್ ಪರ ವಕೀಲರು ವಾದ ಮಂಡಿಸಿದ್ದರು.

    ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಸರ್ಕಾರದ ಇಲಾಖಾ ತನಿಖೆ ಆದೇಶ ರದ್ದುಗೊಳಿಸಿ‌ ಆದೇಶ ಹೊರಡಿಸಿದ್ದಾರೆ. ಹಾಗೆಯೇ, ಅಲೋಕ್ ಕುಮಾರ್‌ಗೆ ಸಲ್ಲಬೇಕಾದ ಬಡ್ತಿ ಸವಲತ್ತುಗಳನ್ನ ನೀಡುವಂತೆ ಸಹ ಆದೇಶಿಸಿದ್ದಾರೆ. ಇದನ್ನೂ ಓದಿ: GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

  • ದಯಾನಂದ್ ಮೇಲೆ ಕೋಪ ಬಂದಿದ್ದರೆ ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು: ಭಾಸ್ಕರ್ ರಾವ್

    ದಯಾನಂದ್ ಮೇಲೆ ಕೋಪ ಬಂದಿದ್ದರೆ ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು: ಭಾಸ್ಕರ್ ರಾವ್

    ಸಿದ್ದರಾಮಯ್ಯ ವೀಕ್ ಮುಖ್ಯಮಂತ್ರಿ: ನಿವೃತ್ತ ಪೊಲೀಸ್ ಅಧಿಕಾರಿ ವಾಗ್ದಾಳಿ

    ಮೈಸೂರು: ದಯಾನಂದ್ (B.Dayananda) ಮೇಲೆ ಕೋಪ ಬಂದಿದ್ದರೆ ವರ್ಗಾವಣೆ ಮಾಡಬಹುದಿತ್ತು. ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಸರ್ಕಾರದ ವಿರುದ್ಧ ಗುಡುಗಿದರು.

    ಸಿದ್ದರಾಮಯ್ಯ ವೀಕ್, ಅಸಹಾಯಕ ಮುಖ್ಯಮಂತ್ರಿ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಬಹಳ ಸ್ಟ್ರಾಂಗ್ ಇದ್ರು. ಈಗ ಸಂಪೂರ್ಣವಾಗಿ ಕಳೆದು ಹೋಗಿದ್ದಾರೆ. ಇಡೀ ಪ್ರಕರಣದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಿದೆ. ತಪ್ಪು ಮಾಡಿರುವವರೇ ಇವರು. ಕೇಂದ್ರ ಸರ್ಕಾರ ಕೊಟ್ಟ ಕಾನೂನನ್ನು ದುರುಪಯೋಗಪಡಿಸಿಕೊಂಡು ಐಎಎಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

    ಇದು ದಯಾನಂದ್‌ಗೆ ಸೀಮಿತವಾದ ವಿಚಾರವಲ್ಲ. ಇಡೀ ಪೊಲೀಸ್ ಇಲಾಖೆ ಮಾಡಿದ ಕಗ್ಗೊಲೆ. ಪೊಲೀಸರ ನೈತಿಕ ಸ್ಥೈರ್ಯವನ್ನೇ ಸಿದ್ದರಾಮಯ್ಯ ಕುಗ್ಗಿಸಿದ್ದಾರೆ. ಹೀಗೆ ಎಷ್ಟು ಜನರ ಮೇಲೆ ಕ್ರಮ ತೆಗೆದುಕೊಳ್ಳುತ್ತಾ ಹೋಗುತ್ತೀರಾ? ತೀರಾ ಅವಮಾನಕರ ರೀತಿಯಲ್ಲಿ ದಯಾನಂದ್ ಅವರನ್ನ ನಡೆಸಿಕೊಂಡಿದ್ದೀರಾ. ಅವರ ಮೇಲೆ ನಿಮಗೆ ಕೋಪ ಬಂದಿದ್ದರೆ ವರ್ಗಾವಣೆ ಮಾಡಬಹುದಿತ್ತು, ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು. ಅದನ್ನ ಬಿಟ್ಟು ಅಮಾನತು ಮಾಡಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಐಪಿಎಲ್ ಏನು ರಾಜ್ಯ ಮತ್ತು ದೇಶದ ಪಂದ್ಯಾವಳಿನಾ? ಅದೊಂದು ಕ್ಲಬ್ ಪಂದ್ಯ ಅಷ್ಟೇ. ಅದಕ್ಕೆ ಡಿ.ಕೆ.ಶಿವಕುಮಾರ್ ಹೋಗಿದ್ದೇನು, ಮುತ್ತಿಕಿದ್ದೇನು, ಬಾವುಟ ಹಿಡಿದಿದ್ದೇನು. ಇದೆಲ್ಲಾ ಮುಖ್ಯಮಂತ್ರಿಗೆ ಗೊತ್ತಾಗಲಿಲ್ವಾ? ಕಾಂಗ್ರೆಸ್ ಹೈಕಮಾಂಡ್ ಬಿಗಿಯಾಗಿದ್ರೆ ಈ ಸಿಎಂ, ಡಿಸಿಎಂ, ಗೃಹ ಸಚಿವರನ್ನ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಗೋವಿಂದರಾಜ್ ವಿರುದ್ಧ ಕ್ರಮ – ಅಷ್ಟಾದ್ರೂ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ: ಹೆಚ್‍ಡಿಕೆ ವ್ಯಂಗ್ಯ

    ಯಾವುದೊ ಆಫ್ರಿಕಾ ದೇಶದಲ್ಲಿ ಹೆಣಗಳನ್ನ ಹೊತ್ತುಕೊಂಡು ಹೋದ ರೀತಿಯಲ್ಲಿ ಬೆಂಗಳೂರಿನಲ್ಲಿ ಹೊತ್ತಿಕೊಂಡು ಹೋಗಲಾಗಿದೆ ಎಂದು ಟೀಕಿಸಿದರು.

  • ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶ

    ಅತ್ಯಂತ ಕರಾಳ ದಿನ, ಡಿಸಿಎಂ ಅಪರಾಧಿ ಅನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್‌ ರಾವ್‌ ಆಕ್ರೋಶ

    ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stadium Stampede Case) ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ (B Dayananda) ಅವರನ್ನು ಅಮಾನತು ಮಾಡಿದ್ದಕ್ಕೆ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ (Bhaskar Rao) ಕಿಡಿಕಾರಿದ್ದಾರೆ.

    ಎಕ್ಸ್‌ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಮಾನತು ಕರ್ನಾಟಕ ಪೊಲೀಸ್ (Karnataka Police) ಇತಿಹಾಸದಲ್ಲಿ ಅತ್ಯಂತ ಕರಾಳ ದಿನ ಎಂದು ಪೋಸ್ಟ್‌ ಮಾಡಿದ್ದಾರೆ.


    ಪೋಸ್ಟ್‌ನಲ್ಲಿ ಏನಿದೆ?
    ಸಿದ್ದರಾಮಯ್ಯ (Siddaramaiah) ಅವರು ಭಯಗೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿರುವುದು ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಸತ್ಯ ಹೇಳಿದ್ದಕ್ಕೆ ಅವರಿಗೆ ಶಿಕ್ಷೆಯ ರೂಪದಲ್ಲಿ ಬಹುಮಾನ ನೀಡಿದ್ದಾರೆ. ಇದನ್ನೂ ಓದಿ: Stampede Case | ಸಿಎಂ ಸೂಚನೆ ಬೆನ್ನಲ್ಲೇ ನಾಲ್ವರು ಅರೆಸ್ಟ್‌, ಉಳಿದವರು ಎಸ್ಕೇಪ್‌

    ದಯಾನಂದ್‌ ಮತ್ತು ಅವರ ತಂಡ ಬೆಂಗಳೂರನ್ನು ಸುರಕ್ಷಿತವಾಗಿಡಲು ಇಡೀ ರಾತ್ರಿ ಶ್ರಮಿಸಿತ್ತು. ಸಾವಿನ ಪರೇಡ್‌ ನಡೆಸಲು ಕಾರಣರಾದ ಉಪಮುಖ್ಯಮಂತ್ರಿಯೇ ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿ ಎಂದು ಕರ್ನಾಟಕದ ಎಲ್ಲರಿಗೂ ತಿಳಿದಿದೆ.

    ಯಾವುದೇ ಮುಖ್ಯಮಂತ್ರಿ ಇಷ್ಟು ಅಸಹಾಯಕ, ಹೇಡಿಯಾಗಲು ಸಾಧ್ಯವಿಲ್ಲ. ಸರ್ಕಾರದ ಕೈಗೆ ರಕ್ತ ಅಂಟಿಕೊಂಡಿದ್ದು ಈಗ ನಿಯಂತ್ರಣವನ್ನು ಕಳೆದುಕೊಂಡಿದ್ದು ಅಪಾಯದಲ್ಲಿದೆ.

  • ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಜಮೀರ್ ನೇರ ಕಾರಣ: ಭಾಸ್ಕರ್ ರಾವ್

    ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಜಮೀರ್ ನೇರ ಕಾರಣ: ಭಾಸ್ಕರ್ ರಾವ್

    ಬೆಂಗಳೂರು: ಚಾಮರಾಜಪೇಟೆಯಲ್ಲಿ (Chamrajpet) ಹಸು ಕೆಚ್ಚಲು ಕೊಯ್ದ ಪ್ರಕರಣದಕ್ಕೆ ಸಚಿವ ಜಮೀರ್ ಅಹ್ಮದ್ (Zameer Ahmed) ನೇರ ಕಾರಣ ಎಂದು ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ (Bhaskar Rao) ಆರೋಪ ಮಾಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲಿಯೂ ಆಗದಿರುವ ಘಟನೆ ನಿನ್ನೆ ಆಗಿದೆ. ಇದೊಂದು ಷಡ್ಯಂತ್ರ. ಚಾಮರಾಜಪೇಟೆಯಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ಹಿಂದೂಗಳನ್ನ ಓಡಿಸಲು ಷಡ್ಯಂತ್ರ. ಸಚಿವ ಜಮೀರ್ ಮೂರು ಹಸು ಕೊಡಿಸುತ್ತೇನೆ ಎಂದಿದ್ದಾರೆ. ಅವರಿಗೆ ಭಾವನೆಯೇ ಇಲ್ಲ, ಅದೇನು ಆಟದ ವಸ್ತುವಾ? ತಾಳ್ಮೆಯಿಂದ ಇರುವ ಕಾರಣ ರಕ್ತಪಾತ ಆಗಿಲ್ಲ. ರಾಜ್ಯ ಸರ್ಕಾರದ ಅದೃಷ್ಟ ಇದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಕ್ಸಲರ ಶರಣಾಗತಿಗೆ ದನಕಾಯೋ ವೃದ್ಧೆಯ ಮಧ್ಯಸ್ಥಿಕೆ

    2,227 ಹಸುಗಳು ಆ ಭಾಗದಲ್ಲಿವೆ. ಪಶು ಆಸ್ಪತ್ರೆ ಡೆಮಾಲಿಷ್ ಮಾಡಿ ಸ್ಕೂಲ್ ಕಟ್ಟಲು ಹೊರಟಿದ್ದಾರೆ. ಬೇರೆ ಕಡೆಯಲ್ಲಿ ಸ್ಕೂಲ್ ಕಟ್ಟಲಿ. ಮದರಸ ಎದುರು ಅಲ್ಲಿ ಹಸುಗಳನ್ನು ಕಟ್ಟುತ್ತಾರೆ. ಘಟನೆಗೆ ಸಚಿವ ಜಮೀರ್ ಅಹ್ಮದ್ ನೇರ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ:  ಜ.26 ರಂದು ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ – ಬೆದರಿಕೆ ಕರೆ, ಆರೋಪಿ ಅರೆಸ್ಟ್‌

    ಜಮೀರ್ ಕೊಡುವ ಹಣದ ಹಿಂದೆ ಕಾಂಗ್ರೆಸ್‌ನವರು ಹೋಗುತ್ತಾರೆ ಅಷ್ಟೇ. ಪ್ರಕರಣ ಮುಚ್ಚಿಹಾಕಲು ಬಿಹಾರ್ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಡ್ರಗ್ಸ್ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಮುಸ್ಲಿಂ ಯುವಕರಿಗೆ ಕೆಲಸ ಇಲ್ಲ ಕಾರ್ಯ ಇಲ್ಲ. ಜಮೀರ್ ಅಹ್ಮದ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಂ ಸಮುದಾಯದವರೇ ಮೆಚ್ಚೋದಿಲ್ಲ. ಜಮೀರ್ ಕ್ರಿಯೇಟ್ ಮಾಡುತ್ತಿರೋ ಕೆಲಸದಿಂದ ಜಮೀರ್ ಶ್ರೀಮಂತ ಆಗುತ್ತಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಒಳ್ಳೆಯವರಿದ್ದಾರೆ. ಆದರೆ ನಾಯಕತ್ವ ಪ್ರಶ್ನಿಸುತ್ತಿದ್ದೇನೆ. ಎಫ್‌ಐಆರ್ ಕೂಡ ಸರಿಯಾಗಿ ಹಾಕಿಲ್ಲ. ಅಮಾಯಕನನ್ನ ಕರೆದು ತಂದು ಕೂರಿಸಿದ್ದಾರೆ. ಹಸು ಸಾಕಿದವರನ್ನು ಓಡಿಸಲು, ಪಶು ಆಸ್ಪತ್ರೆ ಕಬಳಿಸಲು ಈ ತಂತ್ರ ಅಷ್ಟೇ. ಸಾವಿರ ಗೋವನ್ನು ತಂದು ಕೊಟ್ಟರೂ ಮಾಡಿದ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತಿರುಪತಿ ಲಡ್ಡು ಕೇಂದ್ರದಲ್ಲಿ ಅಗ್ನಿ ಅವಘಡ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ


    ಜಮೀರ್ ಅಹ್ಮದ್‌ಗೆ ಬಾಲ ಬಿಚ್ಚೋಕೆ ಕಾರಣ ಸಿದ್ದರಾಮಯ್ಯ. ಕಲ್ಲು ಎಸೆಯೋರು, ಬೆಂಕಿ ಹಚ್ಚುವ ಮುಸ್ಲಿಂ ಹುಡುಗರನ್ನು ರೆಡಿ ಮಾಡುತ್ತಿದ್ದಾರೆ. ಇದು ಕ್ರಿಯೆಟ್ ಮಾಡುತ್ತಿರೋದು ಜಮೀರ್ ಅಹ್ಮದ್. ಹಿಂದೂ ವಿರೋಧವಾಗಿ ಮಾಡುತ್ತಿದ್ದಾರೆ. ಈ ಘಟನೆ ಬಸವನಗುಡಿ ಬಿಟಿಎಂ ಜಯನಗರದಲ್ಲಿ ಮಾಡೋಕೆ ಆಗುತ್ತಾ? ಚಾಮರಾಜ ಪೇಟೆಯಲ್ಲಿ ಮಾತ್ರ ಸಾಧ್ಯ. ನಾನು ಸಮುದಾಯದ ಬಗ್ಗೆ ಮಾತನಾಡುತ್ತಿಲ್ಲ. ಆ ಸಮುದಾಯದ ಲೀಡರ್ ಬಗ್ಗೆ ಮಾತಾಡುತ್ತಿದ್ದೇನೆ. ಪ್ರಕರಣದಲ್ಲಿ ಈಗ ಬಂಧನ ಆದವನು ಬಿಹಾರಿ. ಅವನು ಹುಚ್ಚ. ಅವನಿಗೂ ಇದಕ್ಕೂ ಸಂಬಂಧ ಇಲ್ಲ. ಅಮಾಯಕನ ಕರ್ಕೊಂಡು ಬಂದಿದ್ದಾರೆ. ಈ ಆಸ್ಪತ್ರೆ ಕಬ್ಜ ಮಾಡಬೇಕು ಎಂದು ಹೀಗೆ ಮಾಡಿದ್ದಾರೆ ಎಂದರು.
    ಇದನ್ನೂ ಓದಿ: ವಿಜಯಪುರ| ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ


    ಯಾಕೆ 153 ಅಡಿ ಕೇಸ್ ಹಾಕಿಲ್ಲ. ಇದು ಕಮ್ಯುನಲ್ ಆಕ್ಟ್ ಅಡಿ ಆಗಬೇಕಾದ ಕೇಸ್. ಆ ಆಸ್ಪತ್ರೆ ಮುಂದುವರಿಯಬೇಕು. ಚಾಮರಾಜಪೇಟೆಯಲ್ಲಿ ಬಡತನ ಇದೆ. ಸಿದ್ದರಾಮಯ್ಯ ಮಾಡುತ್ತಿರೋದು ರಾಜಕೀಯ. ಕೂಡಲೇ ನಿಜವಾದ ಆರೋಪಿಯನ್ನು ಬಂಧಿಸಬೇಕು. ಸಿಸಿ ಟಿವಿ ಹಾಕಬೇಕು. ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ. ಮುಂದೆ ಅನಾಹುತ ಆದರೆ ಅದಕ್ಕೆ ಕಾರಣ ಸರ್ಕಾರ ಆಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
    ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಇಲ್ಲ – ಸುರ್ಜೇವಾಲ

    ಜಮೀರ್ ಹಣದಲ್ಲಿ ಹಸು ಕೊಡಿಸೋದು ಬೇಡ. ಸರ್ಕಾರ ಹಣ ಕೊಡಬೇಕು. ಇದು ಸರ್ಕಾರದ ವೈಫಲ್ಯ. ಜಮೀರ್ ಹಣ ಕೊಡೋಕೆ ಆಟದ ವಸ್ತು ಅಲ್ಲ. 1,000 ಹಸು ಕೊಟ್ಟರೂ ಅವರ ಪಾಪ ಕಡಿಮೆ ಆಗಲ್ಲ. ಜಮೀರ್ ಬ್ರಿಗೇಡ್ ಇದಕ್ಕೆಲ್ಲ ಕಾರಣ ಎಂದು ಆರೋಪಿಸಿದರು.
    ಇದನ್ನೂ ಓದಿ: ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

  • ಪ್ರತಿದಿನ ಪೊಲೀಸ್ ಅಧಿಕಾರಿಗಳು ಕಲೆಕ್ಷನ್ ಮಾಡ್ಲೇಬೇಕು: ಭಾಸ್ಕರ್ ರಾವ್ ಬೇಸರ

    ಪ್ರತಿದಿನ ಪೊಲೀಸ್ ಅಧಿಕಾರಿಗಳು ಕಲೆಕ್ಷನ್ ಮಾಡ್ಲೇಬೇಕು: ಭಾಸ್ಕರ್ ರಾವ್ ಬೇಸರ

    – ಸಿಎಂ, ಗೃಹ ಸಚಿವರ ಒತ್ತಡದಲ್ಲೇ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ: ಮಾಜಿ ಐಪಿಎಸ್ ಅಧಿಕಾರಿ

    ಕೊಪ್ಪಳ: ಪ್ರತಿದಿನ ಪೊಲೀಸ್ ಅಧಿಕಾರಿಗಳು ಕಲೆಕ್ಷನ್ ಮಾಡ್ಲೇಬೇಕು. ಬೆಂಗಳೂರಲ್ಲಿ ಪ್ರತಿದಿನ ಕಲೆಕ್ಷನ್ ದುಡ್ಡು ಬಂದಿಲ್ಲ ಅಂದ್ರೆ ಸಂಜೆಗೆ ಪೊಲೀಸರು ವಿಲಿವಿಲಿ ಆಗಿ ಬಿಡ್ತಾರೆ ಎಂದು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಬೇಸರ ಹೊರಹಾಕಿದ್ದಾರೆ.

    ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಅವರು ಮಾತನಾಡಿದರು. ಈ ವೇಳೆ ಪಿಎಸ್‍ಐ ಪರಶುರಾಮ್ (PSI Parashuram) ಸಾವಿನ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರದಲ್ಲಿ ಎಲ್ಲಾ ಅಧಿಕಾರಿಗಳು ಒತ್ತಡದಲ್ಲೇ ಕೆಲಸ ಮಾಡಬೇಕು. ಸಿಎಂ ಹಾಗೂ ಗೃಹ ಸಚಿವರ ಒತ್ತಡದಲ್ಲೇ ಕೆಲಸ ಮಾಡ್ತಿದ್ದಾರೆ. ಮೊದಲು ಶಾಸಕರು ಹಾಗೂ ಸಚಿವರು ವರ್ಗಾವಣೆ ವಿಚಾರವಾಗಿ ಮನವಿ ಮಾಡ್ತಿದ್ರು. ಈಗ ಅದು ದಂಧೆಯಾಗಿ ಬದಲಾಗಿದೆ ಎಂದು ಆರೋಪಿಸಿದ್ದಾರೆ.

    ಈ ಬೆಳವಣಿಗೆಯನ್ನು ಸಣ್ಣಪುಟ್ಟವರು ಕಂಟ್ರೋಲ್ ಮಾಡೋಕೆ ಆಗಲ್ಲ. ದೊಡ್ಡವರಿಂದಲೇ ಎಲ್ಲಾ ಕಂಟ್ರೋಲ್ ಮಾಡಬೇಕು. ಈಗ ಒಂದು ರೂಟ್ ಮ್ಯಾಪ್ ಹಾಕಲಾಗಿದೆ. ಇಲಾಖೆಯಲ್ಲಿ ದಿನದ ವಸೂಲಿ ಶುರುವಾಗಿದೆ. ಪ್ರತಿ ದಿನ ಪೊಲೀಸ್ ಅಧಿಕಾರಿಗಳು ಕಲೆಕ್ಷನ್ ಮಾಡಲೇಬೇಕು. ಈ ವ್ಯವಸ್ಥೆ ನಾನು ಇದ್ದಾಗಲೂ ಇತ್ತೂ, ಈಗಲೂ ಇದೆ. ಮುಂದೇನು ಇರಲಿದೆ ಎಂದು ಕಿಡಿಕಾರಿದ್ದಾರೆ.

  • ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಮೂರು ಪಲ್ಟಿ –  ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಪಾರು

    ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಮೂರು ಪಲ್ಟಿ – ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಪಾರು

    ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ (Bhaskar Rao) ಅವರು ಕಾರು ಅಪಘಾತದಿಂದ ಪಾರಾಗಿದ್ದಾರೆ.

    ಆಂಧ್ರಪ್ರದೇಶದಲ್ಲಿ ಇವರಿದ್ದ ಕಾರು ಅಪಘಾತವಾಗಿದ್ದು (Accident) ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏ.23 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಅಪಘಾತ ಸಂಭವಿಸಿದ್ದು ಇಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಘಟನೆ ವಿವರಿಸಿದ್ದಾರೆ. ಅಷ್ಟೇ ಅಲ್ಲದೇ ನಮಗೆ ಸರ್ವಿಸ್‌ ರಸ್ತೆಗಳು ಮತ್ತು ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳ ಅಗತ್ಯವಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿಗೆ ಮನವಿ ಮಾಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಏಪ್ರಿಲ್ 23 ರಂದು ಟಯೋಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್‌ನಲ್ಲಿ ಅನಂತಪುರ ಮತ್ತು ಕದ್ರಿ (ಆಂಧ್ರಪ್ರದೇಶ) ನಡುವೆ ಚಾಲನೆ ಮಾಡುವಾಗ ರಸ್ತೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಹೆದ್ದಾರಿಯಲ್ಲಿ ಯಾವುದೇ ಎಚ್ಚರಿಕೆ ಫಲಕಗಳಿಲ್ಲದ ಕಾರಣ ಟಿಪ್ಪರಿಗೆ ಮುಖಾಮುಖಿ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

    ನಮ್ಮ ಕಾರು ಮೂರು ಬಾರಿ ಪಲ್ಟಿಯಾಗಿದ್ದು ನಾವೆಲ್ಲರೂ ಅಪಾಯದಿಂದ ಪಾರಾಗಿದ್ದೇವೆ. ವೆಂಕಿ ತೀವ್ರವಾಗಿ ಗಾಯಗೊಂಡಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ನನ್ನ ಪಕ್ಕೆಲುಬುಗಳು ಮುರಿದಿದ್ದು, ಸೀಟ್‌ಬೆಲ್ಟ್ ಮತ್ತು ಏರ್‌ಬ್ಯಾಗ್‌ಗಳು ನಮ್ಮನ್ನು ಉಳಿಸಿದೆ. ಅಪಘಾತವಾದ ನಂತರ ನಮ್ಮನ್ನು ಕಾರಿನಿಂದ ಹೊರಗೆ ಎಳೆದು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆಂಧ್ರಪ್ರದೇಶ ಸರ್ಕಾರದ ಆರೋಗ್ಯ ಕೇಂದ್ರವನ್ನು ಮೆಚ್ಚಲೇಬೇಕು. ಅಂಬುಲೆನ್ಸ್‌ ಮೂಲಕ ನನ್ನನ್ನು ಅನಂತಪುರಕ್ಕೆ ದಾಖಲಿಸಲಾಯಿತು. ಉತ್ತಮ ಕೆಲಸ ಮಾಡಿದ್ದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ.

    40 ವರ್ಷಗಳಿಂದ ನಾನು ವಾಹನ ಚಲಾಯಿಸುತ್ತಿದ್ದರೂ ಅಪಘಾತ ಸಂಭವಿಸಿದೆ. ಅತ್ಯುತ್ತಮ ಹೆದ್ದಾರಿಗಳ ಜೊತೆಗೆ ನಮಗೆ ಸರ್ವಿಸ್‌ ರಸ್ತೆಗಳು ಮತ್ತು ಅತ್ಯುತ್ತಮ ಟ್ರಾಮಾ ಕೇರ್ ಕೇಂದ್ರಗಳ ಅಗತ್ಯವಿದೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ಈ ಅಪಘಾತದ ತನಿಖೆ ನಡೆಸುವಂತೆ ಟಯೋಟಾ ಕಂಪನಿಗೆ ವಿನಂತಿಸಿದ್ದಾರೆ.

     

  • ಸನಾತನ ಧರ್ಮ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷ ಸೇರಿದ್ದೇನೆ: ಭಾಸ್ಕರ್‌ ರಾವ್‌

    ಸನಾತನ ಧರ್ಮ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷ ಸೇರಿದ್ದೇನೆ: ಭಾಸ್ಕರ್‌ ರಾವ್‌

    ಬೆಂಗಳೂರು: ಸನಾತನ ಧರ್ಮಕ್ಕೆ ಸೇರಿದ ಪಕ್ಷ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷವನ್ನು ಸೇರಿದ್ದೇನೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ (Bhaskar Rao) ಹೇಳಿದ್ದಾರೆ.

    ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ ಅವರಿಗೆ ಧ್ವಜ ನೀಡಿ, ಶಾಲು ಹಾಕಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel)  ಪಕ್ಷಕ್ಕೆ ಸ್ವಾಗತಿಸಿದರು.

    ಈ ವೇಳೆ ಮಾತನಾಡಿದ ಅವರು, ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದ ವ್ಯಕ್ತಿ. ಆಮ್ ಆದ್ಮಿ ಪಕ್ಷದಲ್ಲಿ (Aam Aadmi Party) ಒಂದು ವರ್ಷ ಇದ್ದರೂ ಅದು ರಾಜ್ಯದಲ್ಲಿ ಬೆಳೆಯುವ ಸಾಧ್ಯತೆ ಕಡಿಮೆ ಅನಿಸಿತು. ಮೋದಿಜಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್, ಯಡಿಯೂರಪ್ಪ, ಕಟೀಲ್, ಪ್ರಹ್ಲಾದ್‌ ಜೋಶಿ ಅವರ ಪಕ್ಷದ ಜೊತೆ ಇರಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮಗಳಿಗೆ ಸಹಕರಿಸುವೆ. ಅಖಂಡ ಭಾರತವನ್ನು ಗಟ್ಟಿಯಾಗಿ ಇಡಲು ಇದೊಂದೇ ಪಕ್ಷದಿಂದ ಸಾಧ್ಯ ಎಂದರು.

    ಪಕ್ಷ ಕಟ್ಟುವಾಗ ಯುವಕರು, ಮಹಿಳೆಯರಿಗೆ ಆದ್ಯತೆ ಕೊಡುವುದು ಖುಷಿ ಕೊಟ್ಟಿದೆ. ಪಕ್ಷದ ಮುಖಂಡರ ಮಾರ್ಗದರ್ಶನದಂತೆ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಡಹಗಲೇ ಕೊಲೆ – ಯುಪಿ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಆಪ್ತನ ಮನೆ ನೆಲಸಮ

    ನಳಿನ್‍ಕುಮಾರ್ ಕಟೀಲ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮತ್ತು ಜನಬೆಂಬಲ ಕಾಣುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಕ್ಷ ಗಟ್ಟಿ ಮಾಡಿ ರಾಜಕಾರಣದ ಮೂಲಕ ಸೇವೆ ಮಾಡಲು ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಭಾಸ್ಕರ್ ರಾವ್ ಅವರು ನಿವೃತ್ತಿ ಬಳಿಕ ಆಪ್ ಸೇರಿ ಇದೀಗ ಕಲ್ಯಾಣ ಕರ್ನಾಟಕದ ಉದ್ದೇಶದಿಂದ ಪಕ್ಷ ಸೇರಿದ್ದಾರೆ. ಅವರ ಸಹವರ್ತಿಗಳನ್ನೂ ಸ್ವಾಗತಿಸುವೆ ಎಂದರು.

    ಆಮ್ ಆದ್ಮಿ ಪಕ್ಷದ ರಾಜ್ಯ ಸಹಕಾರ್ಯದರ್ಶಿ ವಿಜಯ್ ಶಾಸ್ತ್ರಿಮಠ್, ಮಾಜಿ ಮುಖ್ಯವಕ್ತಾರ ಶರತ್ ಖಾದ್ರಿ, ಸಮಾಜಸೇವಕ ಶಿವಶರ್ಮ, ಬಸವನಗುಡಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಆರ್ಯನ್, ಅಂಜನ್‌ ರಾವ್‌, ಬೆಂಗಳೂರು ಮಹಾನಗರದ ಪ್ರಧಾನ ಕಾರ್ಯದರ್ಶಿ ದಿಲೀಪ್ ಗೌಡ ಅವರು ಆಪ್ ತೊರೆದು ಬಿಜೆಪಿ ಸೇರಿದರು.

  • ಎಎಪಿಗೆ ಗುಡ್‌ಬೈ; ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ

    ಎಎಪಿಗೆ ಗುಡ್‌ಬೈ; ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ

    ಬೆಂಗಳೂರು: ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ (Bhaskar Rao) ಅವರು ಆಮ್‌ ಆದ್ಮಿ ಪಕ್ಷ (AAP) ತೊರೆದು ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ಬಿಜೆಪಿ (BJP) ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಿದರು.

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಭಾಸ್ಕರ್ ರಾವ್ ಜೊತೆ ಅವರ ಬೆಂಬಲಿಗರು ಬಿಜೆಪಿ ಸೇರಿದರು. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಬಾಡೂಟ ಪಾಲಿಟಿಕ್ಸ್

    ನಂತರ ಮಾತನಾಡಿದ ಭಾಸ್ಕರ್‌ ರಾವ್‌, ಎಎಪಿ‌ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಅದು ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ, ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ ಬಿಜೆಪಿ ಸೇರಿದ್ದೇನೆ. ಬಾಲ್ಯದಿಂದಲೂ ಸನಾತನ ಧರ್ಮ, ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ. ಹಾಗಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ತಿಳಿಸಿದರು.

    ನನ್ನ ವಯಸ್ಸನ್ನು ವೇಸ್ಟ್ ಮಾಡದೇ ಬಿಜೆಪಿ ಸೇರಬೇಕೆಂದು ಪಕ್ಷಕ್ಕೆ ಬಂದಿದ್ದೇನೆ. ಎಲ್ಲೆಲ್ಲಿ ನನ್ನ ಅವಶ್ಯಕತೆ ಇದೆ, ಅಲ್ಲಿ ನಾನು ತೊಡಗಿಸಿಕೊಂಡು ಕೆಲಸ ಮಾಡುತ್ತೇನೆ. ಭಾರತ ಸಮೃದ್ಧವಾಗಿ ಗಟ್ಟಿಯಾಗಬೇಕು. ಬಿಜೆಪಿಯಿಂದ ಮಾತ್ರ ಅದು ಸಾಧ್ಯ. ಬೇರೆ ಯಾವ ಪಕ್ಷಗಳಿಂದಲೂ ಸಾಧ್ಯವಿಲ್ಲ. ಇಲ್ಲಿ ಸಿಗುವ ಅವಕಾಶ ನೋಡಿ ಖುಷಿ ಆಗುತ್ತದೆ. ರಾಜ್ಯದ ನಾಯಕರ ಮಾರ್ಗದರ್ಶನದಲ್ಲಿ ಏನೇ ಕೆಲಸ ಕೊಟ್ರು ಮಾಡಿಕೊಂಡು ಹೋಗ್ತೀನಿ. ಇಲ್ಲಿ ಅತ್ಯಂತ ಅನುಭವಿ ರಾಜಕಾರಣಿಗಳು ಇದ್ದಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷದಲ್ಲಿ ಕೆಲಸ ಮಾಡಿಕೊಂಡು ಹೋಗ್ತೀನಿ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಯುವತಿಯ ಬರ್ಬರ ಹತ್ಯೆ- 16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ!

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಭಾಸ್ಕರ್ ರಾವ್ ಅವರು ನಿವೃತ್ತಿ ನಂತರ ಆಪ್ ಸೇರಿ ರಾಜಕೀಯ ಅನುಭವ ಪಡೆದಿದ್ದಾರೆ. ಡಬಲ್ ಇಂಜಿನ್ ಸರ್ಕಾರದಿಂದ ಕಲ್ಯಾಣ ಕರ್ನಾಟಕ ಸಾಧ್ಯ ಎಂದು ಪಕ್ಷಕ್ಕೆ ಬಂದಿದ್ದಾರೆ. ಇವತ್ತು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಬೇರೆ ಬೇರೆ ನಾಯಕರು ಇನ್ನೂ ಬಿಜೆಪಿ ಸೇರಲು ರೆಡಿ ಆಗಿದ್ದಾರೆ. ಅವರ ಆಡಳಿತಾತ್ಮಕ ಅನುಭವಗಳನ್ನು ಪಾರ್ಟಿ ಸ್ವೀಕಾರ ಮಾಡುತ್ತದೆ. ಅವರಿಗೆ ಪಕ್ಷದಲ್ಲಿ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

  • ಆಪ್‌ಗೆ ಶಾಕ್‌- ಬಿಜೆಪಿ ಸೇರಲಿದ್ದಾರೆ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌

    ಆಪ್‌ಗೆ ಶಾಕ್‌- ಬಿಜೆಪಿ ಸೇರಲಿದ್ದಾರೆ ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌

    ಬೆಂಗಳೂರು: ಆಪ್ (AAP) ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ, ಬೆಂಗಳೂರು ನಗರದ ಮಾಜಿ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ (Bhaskar Rao) ಬುಧವಾರ ಬಿಜೆಪಿ ಸೇರಲಿದ್ದಾರೆ.

    ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Delhi CM Arvind Kejriwal) ಮಾರ್ಚ್‌ 4 ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಪಕ್ಷಕ್ಕೆ ಶಾಕಿಂಗ್‌ ಎಂಬಂತೆ ಭಾಸ್ಕರ್‌ ರಾವ್‌ ಕಮಲ ಧ್ವಜ ಹಿಡಿಯಲಿದ್ದಾರೆ.

    ಮಂಗಳವಾರ ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟಿದ್ದ ಭಾಸ್ಕರ್ ರಾವ್ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ ಅಣ್ಣಾಮಲೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಜೊತೆ ಚರ್ಚಿಸಿದ್ದರು. ಇದಾದ ಬಳಿಕ ಸಚಿವ ಆರ್ ಅಶೋಕ್ ಜೊತೆಗೂ ಪದ್ಮನಾಭನಗರದಲ್ಲಿ ಭಾಸ್ಕರ್ ರಾವ್ ಮಾತುಕತೆ ನಡೆಸಿದ್ದರು.

    ಮಾತುಕತೆಯ ಬಳಿಕ ಭಾಸ್ಕರ್ ರಾವ್ ಸೇರ್ಪಡೆ ಬಗ್ಗೆ ಬಿಜೆಪಿ ನಾಯಕರು ವರಿಷ್ಠರ ಗಮನಕ್ಕೆ ತಂದಿದ್ದರು. ಭಾಸ್ಕರ್ ರಾವ್ ಪಕ್ಷ ಸೇರ್ಪಡೆಗೆ ಹೈಕಮಾಂಡ್ ಅನುಮತಿ ನೀಡಿದೆ.  ಇದನ್ನೂ ಓದಿ: 14 ಕಡೆ ಕುಕ್ಕರ್ ಬ್ಲಾಸ್ಟ್ ಆಗಿದೆ, ತಗೊಳೋ ಮುನ್ನ ಎಚ್ಚರ: ರಮೇಶ್ ಜಾರಕಿಹೊಳಿ

    ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಹುದ್ದೆಗೆ ಭಾಸ್ಕರ್‌ ರಾವ್‌ ರಾಜೀನಾಮೆ ನೀಡಿ 2022ರ ಏಪ್ರಿಲ್‌ನಲ್ಲಿ ಆಪ್‌ ಪಕ್ಷವನ್ನು ಸೇರ್ಪಡೆಯಾಗಿದ್ದರು. ಆಪ್‌ನಿಂದ ಬಸವನಗುಡಿ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು.

  • ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ಹಿಡಿಯಲು ನೈತಿಕತೆಯಿಲ್ಲ: ಭಾಸ್ಕರ್ ರಾವ್

    ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ ಹಿಡಿಯಲು ನೈತಿಕತೆಯಿಲ್ಲ: ಭಾಸ್ಕರ್ ರಾವ್

    ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಗೆ (BJP) ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯೋದಕ್ಕೆ ಯಾವ ನೈತಿಕತೆಯೂ ಇಲ್ಲ. 40 ಪರ್ಸೆಂಟ್‍ನಲ್ಲಿ ಈಗಿನ ಸರ್ಕಾರ ಮುಳುಗಿದೆ. ಇದನ್ನು ಪ್ರಶ್ನೆ ಮಾಡೋಕೆ ಕಾಂಗ್ರೆಸ್‍ಗೂ (Congress) ಹಕ್ಕಿಲ್ಲ. ಭ್ರಷ್ಟಾಚಾರ ಅವರದ್ದೇ ಕೂಸು ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಾರ್ಟಿ ಉಪಾಧ್ಯಕ್ಷ ಭಾಸ್ಕರ್ ರಾವ್ (Bhaskar Rao) ಹರಿಹಾಯ್ದರು.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂದು ಭಾರತೀಯ ಜನತಾ ಪಾರ್ಟಿಯವರ ಬಳಿ ಇರುವಷ್ಟು ಹಣ ಯಾರ ಬಳಿನೂ ಇಲ್ಲ. ಹಣದಲ್ಲಿ ನಾವು ಅವರಿಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಆದರೆ ನಮ್ಮಲ್ಲಿ ಪ್ರಾಮಾಣಿಕತೆ ಇದೆ. ಒಳ್ಳೆತನದಿಂದ ನಾವು ಜನರ ಮನಸ್ಸು ಗೆಲ್ಲುತ್ತೇವೆ ಎಂದು ತಿಳಿಸಿದರು.

    ಇಡಿ (ED), ಸಿಬಿಐಗೆ ಒಳಗಾದವರನ್ನು ನಮ್ಮ ಪಾರ್ಟಿಗೆ ಕರೆದುಕೊಳ್ಳಲ್ಲ. ನಾವು ಡಾಕ್ಟರ್, ವಕೀಲರನ್ನ ಪಕ್ಷಕ್ಕೆ ಕರೆದುಕೊಳ್ಳುತ್ತೇವೆ. ಈ ಮೂಲಕ 2023 ರ ಚುನಾವಣೆಯಲ್ಲಿ ಎಲ್ಲ ಕಡೆ ಸ್ಪರ್ಧೆ ಮಾಡುತ್ತೇವೆ. ಕರ್ನಾಟಕ (Karnataka) ಚುನಾವಣೆಗೆ (Election) ನಮ್ಮ ನಾಯಕರು ಬರ್ತಾರೆ. ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ಬಹಳ ಟಫ್‍ಯಿದೆ. ನಾವು ಗುಜರಾತ್‍ನಲ್ಲಿ (Gujarat) ಗೆದ್ರೆ ನ್ಯಾಷನಲ್ ಪಾರ್ಟಿ ಆಗುತ್ತೇವೆ. ಈ ಹಿನ್ನೆಲೆಯಲ್ಲಿ ನಾವು ಗುಜರಾತ್‍ನಲ್ಲಿ ಗೆದ್ದೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

    Congress

    ಪಿಎಸ್‍ಐ (PSI) ಹಗರಣ ವಿಚಾರವಾಗಿ ಮಾತನಾಡಿದ ಅವರು, ಇವರು ಕಂಪ್ಯೂಟರ್ ಸಿಸ್ಟಮ್ ಹಾಳು ಮಾಡಿದ್ದಾರೆ. ಇವರೇ ನೈತಿಕವಾಗಿ ಕುಸಿದಿದ್ದಾರೆ. ಯಾವ ಸಿಸ್ಟಮ್ ಬಂದ್ರೆ ಏನೂ. ಇದನ್ನು ತಗೀತಾ ಹೋದ್ರೆ ಹಿಂದಿನ ಸರ್ಕಾರದಲ್ಲೂ ಇದೆ. ಇದೀಗ ಶಿಕ್ಷಣ ನೇಮಕಾತಿ ಹಗರಣ ಹೊರಬಂದಿದೆ. ಪರೀಕ್ಷೆ ವ್ಯವಸ್ಥೆ ಬದಲಾಗಬೇಕಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕಾಂತಾರ ಎಫೆಕ್ಟ್- ದೈವನರ್ತಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

    Live Tv
    [brid partner=56869869 player=32851 video=960834 autoplay=true]