Tag: Bhavana Ramanna

  • ನಟಿ ಭಾವನಾ ರಾಮಣ್ಣ ಮಗು ನಿಧನ

    ನಟಿ ಭಾವನಾ ರಾಮಣ್ಣ ಮಗು ನಿಧನ

    ಐವಿಎಫ್‌ ಮೂಲಕ 40ನೇ ವಯಸ್ಸಿನಲ್ಲಿ ಗರ್ಭಿಣಿಯಾಗಿ ಅವಳಿ ಮಕ್ಕಳಿಗೆ ಜನ್ಮ ನೀಡುವ ಖುಷಿಯಲ್ಲಿದ್ದ ನಟಿ ಭಾವನಾ ರಾಮಣ್ಣಗೆ (Bhavana Ramanna) ಆಘಾತವೂ ಆಗಿದೆ. ಹೆಣ್ಣು ಮಗುವಿಗೆ ಜನ್ಮ ನೀಡಿ ನಟಿ ಆರೋಗ್ಯವಾಗಿದ್ದರೆ, ಮತ್ತೊಂದು ಮಗು ಹುಟ್ಟಿದಾಗಲೇ ತೀರಿಕೊಂಡಿದೆ.

    ನಟಿ ಭಾವನ ರಾಮಣ್ಣಗೆ ಎರಡು ವಾರಗಳ ಹಿಂದೆ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ ತಾಯಿಯದ ನಟಿ ಭಾವನಾ ಅವರು ಸದ್ಯ ಆರೋಗ್ಯವಾಗಿದ್ದಾರೆ. ಆದ್ರೆ ಒಂದು ಮಗು ನಿಧನವಾಗಿದೆ.

    ಐವಿಎಫ್ (IVF) ಮೂಲಕ ತಾಯಿ ಆದ ನಟಿ ಭಾವನ ಅವರು ಇತ್ತೀಚೆಗೆ ಸೀಮಂತ ಮಾಡಿಸಿಕೊಂಡಿದ್ದರು. ವೈದ್ಯರ ಸೂಚನೆಯಂತೆ ಹೆರಿಗೆ ಮಾಡಲಾಗಿದ್ದು, ಒಂದು ಮಗುವಿನಲ್ಲಿ 7 ತಿಂಗಳ ನಂತರ ಸಮಸ್ಯೆ ಕಾಣಿಸಿಕೊಂಡ ಕಾರಣ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿದೆ. ಸದ್ಯ ಒಂದು ಮಗು, ತಾಯಿ ಇಬ್ಬರು ಕ್ಷೇಮವಾಗಿದ್ದು, ಮತ್ತೊಂದು ಮಗು ಹುಟ್ಟಿದಾಗಲೇ ತೀರಿಕೊಂಡಿದೆ.

    40ನೇ ವಯಸ್ಸಿನಲ್ಲಿ ಗರ್ಭಿಣಿಯಾಗಿದ್ದ ನಟಿ
    ನಟಿ ಭಾವನಾ ರಾಮಣ್ಣ, ತಮ್ಮ ಬಾಲ್ಯದಿಂದಲೂ ಮಕ್ಕಳ ಜೊತೆಗಿರುವುದನ್ನು ಇಷ್ಟಪಡುತ್ತಿದ್ದರು. ಆದರೆ, ತಮ್ಮ 20ನೇ ವಯಸ್ಸಿನಲ್ಲಿ ತಾಯಿಯಾಗುವ ಯೋಚನೆ ಗಂಭೀರವಾಗಿ ತಟ್ಟಿರಲಿಲ್ಲ. 30ನೇ ವಯಸ್ಸಿನಲ್ಲಿ ಪ್ರೀತಿಯ ಆಕಾಂಕ್ಷೆಯಿದ್ದರೂ, ತಾಯಿಯಾಗುವ ಬಗ್ಗೆ ಯೋಚನೆ ಮಾಡಿರಲಿಲ್ಲ. “ನಾನು ಯಾವಾಗಲೂ ಮಕ್ಕಳ ಸುತ್ತಲಿರುವ ವಾತಾವರಣದಲ್ಲಿ ಬೆಳೆದೆ. ನನ್ನ ತಂದೆ-ತಾಯಿ, ಮೂವರು ಸಹೋದರ-ಸಹೋದರಿಯರು, ಸಂಬಂಧಿಕರು ಮತ್ತು ಸ್ನೇಹಿತರ ಜೊತೆ ತುಂಬಿದ ಮನೆಯಲ್ಲಿ ಬೆಳೆದೆ. ಆದರೆ 40 ತಲುಪಿದಾಗ ತಾಯಿಯಾಗಬೇಕೆಂಬ ಕರೆಯನ್ನು ತಡೆಯಲಾಗಲಿಲ್ಲ” ಎಂದು ಹೇಳಿಕೊಂಡಿದ್ದರು.

    ಭಾವನಾ ರಾಮಣ್ಣ ಸಿನಿ ಜರ್ನಿ
    ನಂದಿನಿ ರಾಮಣ್ಣ ಎಂಬ ಮೂಲ ಹೆಸರಿನ ಭಾವನಾ, ಕನ್ನಡ ಚಿತ್ರರಂಗದಲ್ಲಿ ತಮ್ಮ ಅಭಿನಯ ಮತ್ತು ಭರನಾಟ್ಯ ಕೌಶಲ್ಯಕ್ಕೆ ಹೆಸರಾಗಿದ್ದಾರೆ. ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಭಾವನಾ, ʻಚಂದ್ರಮುಖಿ ಪ್ರಾಣಸಖಿʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದರು. ಭಾವನಾ ʻನೀ ಮುಡಿದ ಮಲ್ಲಿಗೆʼ, ʻಕ್ಷಾಮʼ, ʻಭಾಗೀರಥಿʼ ಸಿನಿಮಾಗಾಗಿ ಮೂರು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಟಿಯಾಗಿ ಮಾತ್ರವಲ್ಲ, ರಾಜಕೀಯ ಮತ್ತು ಸಾಮಾಜಿಕ ಕಾರ್ಯಗಳಲ್ಲೂ ಅವರು ತೊಡಗಿಕೊಂಡಿದ್ದಾರೆ. ಸದ್ಯ ಭಾವನಾ ರಾಮಣ್ಣ ಅವರ ಈ ನಿರ್ಧಾರಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

  • ನಟಿ ಭಾವನಾ ರಾಮಣ್ಣ ಸೀಮಂತ ಶಾಸ್ತ್ರ

    ನಟಿ ಭಾವನಾ ರಾಮಣ್ಣ ಸೀಮಂತ ಶಾಸ್ತ್ರ

    ನಟಿ ಭಾವನಾ ರಾಮಣ್ಣ (Bhavana Ramanna) ಅಮ್ಮನಾಗುತ್ತಿರುವ ಸಂತಸದಲ್ಲಿದ್ದಾರೆ. ಇದೀಗ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದು ಸೀಮಂತ ಶಾಸ್ತ್ರ ನಡೆದಿದೆ. ಅವರ ನಿವಾಸದಲ್ಲೇ ಸೀಮಂತ ನಡೆದಿದ್ದು ಆಪ್ತರನ್ನಷ್ಟೇ ಆಹ್ವಾನಿಸಿದ್ದರು.

    ಐವಿಎಫ್ (IVF) ಮೂಲಕ ಗರ್ಭಿಣಿಯಾಗಿರುವ ಭಾವನಾ ಅವಳಿ ಮಕ್ಕಳಿಗೆ ಶೀಘ್ರದಲ್ಲೇ ಜನ್ಮ ನೀಡಲಿದ್ದಾರೆ. ಸೀಮಂತಕ್ಕೆ (Seemantha) ಭವನಾ ಹಸಿರು ಬಣ್ಣದ ಸೀರೆ ಧರಿಸಿದ್ದರು. ಈ ಕಾರ್ಯಕ್ರಮಕ್ಕೆ ಸಿನಿಮಾ ಉದ್ಯಮದ ಕೆಲವೇ ಆಪ್ತರು, ಕುಟುಂಬಸ್ಥರು ಹಾಗೂ ಸ್ನೇಹಿತೆಯರನ್ನು ಮಾತ್ರ ಭಾವನಾ ಆಹ್ವಾನಿಸಿದ್ದರು.

    ಸರಳವಾಗಿ ನಡೆದರೂ ಸಂಪ್ರದಾಯದ ಪ್ರಕಾರ ಸೀಮಂತ ನಡೆದಿದೆ. ಮತ್ತೈದೆಯರು ಭಾವನಾಗೆ ಮಡಿಲು ತುಂಬುವ ಶಾಸ್ತ್ರ ಮಾಡಿ ಸಿಹಿ ತಿನ್ನಿಸಿದ್ದಾರೆ. ಹಳದಿ ಮಿಶ್ರಿತ ಹೂವಿಂದ ಅಲಂಕೃತ ಜಾಗದ ಮುಂದೆ ಭಾವನಾ ಕುಳಿತು ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ: `ನನ್ನ ಮಕ್ಕಳಿಗೆ ತಂದೆ ಇಲ್ಲದಿರಬಹುದು’…ಅಮ್ಮನಾಗುತ್ತಿರುವ ನಟಿ ಭಾವನಾ ಮೊದಲ ಮಾತು

    ತುಂಬು ಗರ್ಭಿಣಿಯ ನಿವಾಸದ ಸಿಂಗಾರದಲ್ಲಿ ವೀಣಾ ಸಮೇತ ಶಾರದಾದೇವಿಯ ವಿಗ್ರಹ ಸೊಗಸಾಗಿ ಗೋಚರಿಸುತ್ತಿದೆ.

  • ಹೆಣ್ಣು ಯಾವ ಬಟ್ಟೆ ಹಾಕ್ಬೇಕು, ಹೇಗೆ ತಾಯಿ ಆಗ್ಬೇಕು ಅನ್ನೋದು ಅವಳ ಆಯ್ಕೆ – ಭಾವನರನ್ನು ಬೆಂಬಲಿಸಿದ ರಾಗಿಣಿ

    ಹೆಣ್ಣು ಯಾವ ಬಟ್ಟೆ ಹಾಕ್ಬೇಕು, ಹೇಗೆ ತಾಯಿ ಆಗ್ಬೇಕು ಅನ್ನೋದು ಅವಳ ಆಯ್ಕೆ – ಭಾವನರನ್ನು ಬೆಂಬಲಿಸಿದ ರಾಗಿಣಿ

    ದಾವಣಗೆರೆ: ಹೆಣ್ಣು ಯಾವ ಬಟ್ಟೆ ಹಾಕ್ಬೇಕು, ಹೇಗೆ ತಾಯಿ ಆಗ್ಬೇಕು ಅನ್ನೋದು ಅವಳ ಆಯ್ಕೆ ಎಂದು ನಟಿ ರಾಗಿಣಿ ದ್ವಿವೇದಿ (Ragini Dwivedi) ಹೇಳಿದ್ದಾರೆ. ಈ ಮೂಲಕ ನಟಿ ಭಾವನ ರಾಮಣ್ಣ (Bhavana Ramanna) ಅವರು ಐವಿಎಫ್ ತಂತ್ರಜ್ಞಾನದಿಂದ ಗರ್ಭಿಣಿ ಆಗಿರುವುದಕ್ಕೆ ಬೆಂಬಲ ಸೂಚಿಸಿದ್ದಾರೆ.

    ಗುರುಪೂರ್ಣಿಮೆ ಹಿನ್ನೆಲೆ ಸೊಕ್ಕೆ ಗ್ರಾಮದ ಶಿರಡಿ ಸಾಯಿಬಾಬಾ ಮಂದಿರಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರತಿಯೊಂದು ಹೆಣ್ಣಿಗೂ ಯಾವ ರೀತಿ ಜೀವನ ಮಾಡಬೇಕು ಎನ್ನುವ ಹಕ್ಕಿದೆ. ಯಾವ ಕೆಲಸ ಮಾಡಬೇಕು, ಯಾವ ಬಟ್ಟೆ ಹಾಕಬೇಕು, ಹೇಗೆ ತಾಯಿ ಆಗಬೇಕು ಎನ್ನುವುದು ಆಕೆಯ ಆಯ್ಕೆ. ತಾಯ್ತನ ಎನ್ನುವುದು ಒಂದು ರೀತಿಯ ಅದ್ಭುತವಾದ ಕೆಲಸ. ಅದು ಹಾಗೇ ಮಾಡಬೇಕು, ಇದನ್ನು ಹೀಗೆ ಮಾಡಬೇಕು ಎನ್ನುವುದು ತಪ್ಪು ಎಂದಿದ್ದಾರೆ. ಇದನ್ನೂ ಓದಿ: ಬೆಟ್ಟಿಂಗ್‌ ಆ್ಯಪ್ ಹಗರಣ ಪ್ರಕರಣ; ಪ್ರಣೀತಾ, ಪ್ರಕಾಶ್‌ ರಾಜ್‌, ದೇವರಕೊಂಡ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ED ಕೇಸ್‌

    ಭಾವನ ಅಮ್ಮ ಆಗುತ್ತಿದ್ದಾರೆ. ಈ ವಿಚಾರದಲ್ಲಿ ಅವರಿಗೆ ತುಂಬಾ ಖುಷಿ ಇದೆ. ಅದನ್ನು ಜಡ್ಜ್ ಮಾಡಿ, ಟ್ರೋಲ್ ಮಾಡಿ ನೆಗೆಟಿವ್ ಕಾಮೆಂಟ್ ಮಾಡೋದು ತುಂಬಾ ತಪ್ಪು. ಕೂಡಲೇ ಈ ರೀತಿ ನೆಗೆಟಿವ್ ಕಾಮೆಂಟ್ ಮಾಡೋದು ನಿಲ್ಲಿಸಲಿ. ಯಾರೂ ನೆಗೆಟಿವ್ ಕಾಮೆಂಟ್ ಮಾಡದಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

    ಜಗಳೂರು (Jagaluru) ತಾಲೂಕಿನ ಸೊಕ್ಕೆ ಗ್ರಾಮದ ಸಾಯಿಬಾಬಾ ಮಂದಿರಕ್ಕೆ 2ನೇ ವರ್ಷದ ಗುರುಪೂರ್ಣಿಮಾ ಕಾರ್ಯಕ್ರಮದಲ್ಲಿ ರಾಗಿಣಿ ಭಾಗಿಯಾಗಿದ್ದರು. ಕಾಡುಸಿದ್ದೇಶ್ವರ ಮಠ ನೊಣವಿನಕೆರೆ ಶಿವಯೋಗೀಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ಕಾರ್ಯಕ್ರಮ ನೆರವೇರಿತು. ಇದನ್ನೂ ಓದಿ: ರಾಮಾಯಣದಲ್ಲಿ ಯಶ್ ಪಾತ್ರ ಬರೀ 15 ನಿಮಿಷ?

  • ರಶ್ಮಿಕಾ ಕನ್ನಡದವಳಲ್ಲ ಅಂದ್ರು ಅವಳನ್ನ ನಾವ್ ಬಿಡೋಲ್ಲ: ಭಾವನಾ ರಾಮಣ್ಣ

    ರಶ್ಮಿಕಾ ಕನ್ನಡದವಳಲ್ಲ ಅಂದ್ರು ಅವಳನ್ನ ನಾವ್ ಬಿಡೋಲ್ಲ: ಭಾವನಾ ರಾಮಣ್ಣ

    ನಟಿ ರಶ್ಮಿಕಾ (Rashmika Mandanna) ಏನೇ ಹೇಳಲಿ, ನಮಗೆ ಅವಳು ಕನ್ನಡದವಳು. ಅವಳ ಬಗ್ಗೆ ಹೆಮ್ಮೆ ಇದೆ. ಜನ ಎಲ್ಲರನ್ನೂ ಕನ್ನಡದವರು ಅಂತಾನೇ ಕರೆಯೋದು ಎಂದು ಭಾವನಾ ರಾಮಣ್ಣ (Bhavana Ramanna) ಹೇಳಿದ್ದಾರೆ.

    ರಶ್ಮಿಕಾ ಅವರು, ಕೊಡವ ಸಮಾಜದಿಂದ ಬಂದ ಮೊದಲ ನಟಿ ಎಂದು ಇತ್ತೀಚೆಗೆ ಹೇಳಿದ್ದರು. ಈ ವಿಚಾರವಾಗಿ `ಪಬ್ಲಿಕ್ ಟಿವಿ’ಗೆ ಪ್ರತಿಕ್ರಿಯೆ ನೀಡಿದ ಭಾವನ ಅವರು, ರಶ್ಮಿಕಾ ಸಾಧನೆ ಖಂಡಿತಾ ಇದೆ. ಅವಳು ಕನ್ನಡದವಳಲ್ಲ ಅಂದ್ರೂ ಅವ್ರನ್ನ ನಾವ್ ಬಿಡೋದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

    ನಟಿ ಭಾವನಾ ರಾಮಣ್ಣ ಕೃತಕ ಗರ್ಭಧಾರಣೆ ಮೂಲಕ ಮಗು ಪಡೆಯಲು ಮುಂದಾಗಿದ್ದಾರೆ. ಇದೀಗ ಆರು ತಿಂಗಳ ಗರ್ಭಿಣಿ ಆಗಿರುವ ಭಾವನ ತಾಯಿ ಆಗೋದು ಪ್ರತಿಯೊಬ್ಬ ಹೆಣ್ಣಿನ ಜನ್ಮಸಿದ್ಧ ಹಕ್ಕು, ಮಕ್ಕಳನ್ನ ಪಡೆಯುವುದಕ್ಕಾಗಿಯೇ ಮದುವೆ ಆಗಬೇಕಿಲ್ಲ. ಮನೆ, ಸಂಸಾರ, ಮಕ್ಕಳು ಅನ್ನೋದಕ್ಕೆ ಅಷ್ಟೇ ಹೆಣ್ಣು ಸೀಮಿತವಾಗದೇ ಎಲ್ಲಾ ವರ್ಗದಲ್ಲೂ ಮಹಿಳೆ ಸಬಲರಾಗಿ ಬೆಳೆದಿದ್ದಾರೆ. ಒಬ್ಬಂಟಿ ಜೀವನ ನಡೆಸುವ ಮಹಿಳೆಯರಿಗೆ ಕಲಾವಿದರಿಗೆ ಈ ಪ್ರಕ್ರಿಯೆ ನೆರವಾಗಲಿದೆ ಎಂದಿದ್ದಾರೆ.

    ಸ್ವಾಭಾವಿಕವಾಗಿ ಮಕ್ಕಳನ್ನ ಪಡೆಯೋದು ಬೇರೆ. ಆದ್ರೆ ಈ ಪ್ರಕ್ರಿಯೆಗೆ ಒಳಪಡಬೇಕಾದ್ರೆ ನಾನು ಕೂಡಾ ಸಾಕಷ್ಟು ಮಾನಸಿಕವಾಗಿ ಯೋಚನೆ ಮಾಡಿದ್ದೀನಿ. ನಾನು ಮದುವೆ ಯಾಕ್ ಆಗ್ಲಿಲ್ಲ ಅನ್ನೋದಕ್ಕೆ ಕಾರಣಗಳು ಸಾಕಷ್ಟಿವೆ. ಆದ್ರೆ ಈ ವಿಚಾರ ಅಂತಾ ಬಂದಾಗ ಕುಟುಂಬಸ್ಥರು ಸ್ನೇಹಿತರು ಸಲಹೆಗಳನ್ನ ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೊಡವ ಕಮ್ಯೂನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್ – ರಶ್ಮಿಕಾ ಮತ್ತೊಂದು ಯಡವಟ್ಟು 

  • ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ ಬೇಡ- ‘ಫೈರ್’ ಸಂಸ್ಥೆ ವಿರುದ್ಧ ಭಾವನಾ ಗರಂ

    ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ ಬೇಡ- ‘ಫೈರ್’ ಸಂಸ್ಥೆ ವಿರುದ್ಧ ಭಾವನಾ ಗರಂ

    ಮಾಲಿವುಡ್‌ನಲ್ಲಿ ಹೇಮಾ ಸಮಿತಿ ವರದಿ ಹೊರಬಿದ್ದ ಬಳಿಕ ಚಿತ್ರರಂಗ ಅಲ್ಲೋಲ ಕಲ್ಲೋಲ ಆಗಿದೆ. ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ರಚಿಸಲು ಇಂದು (ಸೆ.16) ಫಿಲ್ಮ್ ಚೇಂಬರ್ ಸಭೆ ಆಯೋಜಿಸಿದೆ. ಈ ಮೀಟಿಂಗ್‌ನಲ್ಲಿ ಭಾಗಿಯಾದ ಭಾವನಾ ರಾಮಣ್ಣ (Bhavan Ramanna) ಫೈರ್ ಸಂಸ್ಥೆ ವಿರುದ್ಧ ರಾಂಗ್ ಆಗಿದ್ದಾರೆ. ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ ಬೇಡ, ಆ ಕೂಗು ನಮ್ಮ ಇಂಡಸ್ಟ್ರಿಯಲ್ಲಿ ಕೇಳಿ ಬಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ:7 ತಿಂಗಳ ಹಿಂದಷ್ಟೇ ನಾನು ಬ್ರೇಕಪ್ ಮಾಡಿಕೊಂಡೆ: ಮೃಣಾಲ್ ಠಾಕೂರ್

    ಮಹಿಳಾ ಆಯೋಗದ ಹಾಗೂ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಮಾನ ಮನಸ್ಕರು ಗ್ರೂಪ್ ಮಾಡ್ಕೊಂಡು, ಅದಕ್ಕೆ `ಫೈರ್’ ಎಂದು ಹೆಸರಿಟ್ಟು ಸಂಸ್ಥೆ ಎಂದು ಬಿಂಬಿಸಿದ್ದಾರೆ. ಕಾಸ್ಟಿಂಗ್ ಕೌಚ್‌ನ ಆ ಕೂಗು ನಮ್ಮ ಇಂಡಸ್ಟ್ರಿಯಲ್ಲಿ ಕೇಳಿ ಬಂದಿಲ್ಲ. ಹೆಣ್ಣು ಅಂದಾಗ ಸಮಸ್ಯೆಗಳು ಬರೋದು ಸಹಜನೇ, ಸಿನಿಮಾರಂಗ ಅಂದ್ಮೇಲೆ ಅದು ಇದ್ದೇ ಇರುತ್ತೆ. ಇನ್ನೂ 100 ಮದುವೆಯಲ್ಲಿ 10 ಮದುವೆ ಉಳಿದರೆ ಹೆಚ್ಚಾಗಿದೆ. ಬೇರೇ ರೀತಿಯ ಅಭಿಪ್ರಾಯಗಳಿಂದ ಹೀಗೆ ಆಗುತ್ತಿದೆ. ಚಿತ್ರರಂಗದಲ್ಲೂ ಹಾಗೆ ಅಲ್ಲಿ ಕೆಟ್ಟದ್ದು ಇದೆ ಅಂದರೆ ಅಲ್ಲಿ ಕೆಲಸ ಮಾಡಲು ಹೋಗಬೇಡಿ ಎಂದಿದ್ದಾರೆ.

    ವಾಣಿಜ್ಯ ಮಂಡಳಿ, ಕಲಾವಿದರ ಸಂಘ, ನಿರ್ಮಾಪಕರ ಸಂಘ ಇದೆ ಅಲ್ಲಿ ಸಮಸ್ಯೆ ಬಂದು ಹೇಳಬಹುದು. ಅದಕ್ಕಾಗಿ ಬೇರೆ ಸಂಘ ಮಾಡಬೇಕು ಅಂತ ಏನಿಲ್ಲ ಎಂದಿದ್ದಾರೆ. `ಫೈರ್’ ಸಂಸ್ಥೆ ಅವರ ಮಾತು ಕೇಳಬೇಡಿ, ಅವರ ಈ ಚಿತ್ರರಂಗದವರಲ್ಲ ಅಂತಾ ಹೇಳೋಕೆ ಹೊರಟಿದ್ದಾರೆ. ಈ ವೇಳೆ, ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ ಬೇಡ, ಆ ಕೂಗು ನಮ್ಮ ಇಂಡಸ್ಟ್ರಿಯಲ್ಲಿ ಕೇಳಿ ಬಂದಿಲ್ಲ ಎಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ನಡೆಯುತ್ತಿಲ್ಲ. ಇಲ್ಲಿ ಹೇಮಾ ಕಮಿಟಿಯಂತೆ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ ಭಾವನಾ ರಾಮಣ್ಣ.

    ಅಂದಹಾಗೆ, ಫಿಲ್ಮ್ ಚೇಂಬರ್ ಸಭೆಯಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಮ್ ಸುರೇಶ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮ ಚೌಧರಿ, ರಾಕ್‌ಲೈನ್ ವೆಂಕಟೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕರ್, ಸಾರಾ ಗೋವಿಂದ್, ಪ್ರಮೀಳಾ ಜೋಷಾಯ್, ಭಾವನಾ, ನೀತು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

  • ಕೆಎಂಹೆಚ್‌ ಕಪ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

    ಕೆಎಂಹೆಚ್‌ ಕಪ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

    ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘದಿಂದ ಕ್ರಿಕೆಟ್ ಟೂರ್ನಿ ಆಯೋಜನೆ

    ಇದೇ ಮೊದಲ ಬಾರಿಗೆ ತಂತ್ರಜ್ಞರಿಗಾಗಿ ‘ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘ’ದಿಂದ ಆಯೋಜಿಸಲಾಗಿರುವ ಕೆಎಂಹೆಚ್‌ಕಪ್ (KMH) ಕ್ರಿಕೆಟ್ ಟೂರ್ನಿ ಲೋಗೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಟೂರ್ನಿಯ ರಾಯಭಾರಿ ಆಗಿರುವ ನಟಿ ಭಾವನಾ ರಾಮಣ್ಣ (Bhavana Ramanna) ಲೋಗೊ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮುಖಂಡರಾದ ದಿನೇಶ್, ಸಂಘದ ಅಧ್ಯಕ್ಷರಾದ ಎಸ್.ಬಾಬು ಧರ್ಮೇಂದ್ರ ಹಾಗೂ ಕಾರ್ಯದರ್ಶಿ ದಿನೇಶ್ ಆಚಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ:ಕನಸಿನಲ್ಲೂ ಯಾರಿಗೂ ಕೇಡು ಬಯಸೋರು ಅಲ್ಲ- ದರ್ಶನ್ ಪರ ನಿಂತ ತೆಲುಗು ನಟ ನಾಗ ಶೌರ್ಯ

    ಕರ್ನಾಟಕ ರಾಜ್ಯ ಚಲನಚಿತ್ರ ವರ್ಣಾಲಂಕಾರ ಮತ್ತು ಕೇಶಾಲಂಕಾರ ಕಲಾವಿದರ ಸಂಘಕ್ಕೆ ಮೂವತ್ತೈದು ವರ್ಷಗಳ ಇತಿಹಾಸವಿದೆ. ಅನೇಕ ಹಿರಿಯರು ಈ ಸಂಘವನ್ನು ಕಟ್ಟಿ ಬೆಳೆಸಿದ್ದಾರೆ. ಇದೇ ಮೊದಲ ಬಾರಿಗೆ ನಮ್ಮ ಸಂಘದ ವತಿಯಿಂದ ಕೆಎಂಹೆಚ್‌ಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಸದಾ ನಮ್ಮ ಸಂಘದ ಜೊತೆಯಿರುವ ನಟಿ ಭಾವನಾ ರಾಮಣ್ಣ ಈ ಟೂರ್ನಿಯ ರಾಯಭಾರಿಯಾಗಿದ್ದಾರೆ. ಜುಲೈ 20 ಹಾಗೂ 21 ಶನಿವಾರ ಹಾಗೂ ಭಾನುವಾರ ವಿಜಯನಗರದ ಬಿ.ಜಿ.ಎಸ್ ಮೈದಾನದಲ್ಲಿ ಈ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಬೆಳಗ್ಗೆ 8 ರಿಂದ ರಾತ್ರಿ 8ವರೆಗೂ ಪಂದ್ಯಗಳು ನಡೆಯುತ್ತದೆ. ನಾಕೌಟ್ ಪಂದ್ಯಗಳು ಆರು ಓವರ್ ಇರುತ್ತದೆ. ಫೈನಲ್ ಪಂದ್ಯ ಎಂಟು ಓವರ್ ನದಾಗಿರುತ್ತದೆ. ಗೆದ್ದ ಮೊದಲ ತಂಡಕ್ಕೆ 49,999 ರೂಪಾಯಿ ಹಾಗೂ ರನ್ನರ್ ತಂಡಕ್ಕೆ 24,999 ರೂಪಾಯಿ ಬಹುಮಾನ ನೀಡಲಾಗುವುದು.

    ಟೂರ್ನಿಯಲ್ಲಿ ಭಾಗವಹಿಸುವ ತಂಡಕ್ಕೆ ಹತ್ತುಸಾವಿರ ಪ್ರವೇಶದರವಿರುತ್ತದೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಒಳಪಡುವ ಹನ್ನೆರಡು ಸಂಘಗಳು ಹಾಗೂ ಮಾಧ್ಯಮದ ಮಿತ್ರರು ಈ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಹದಿನಾಲ್ಕು ತಂಡಗಳು ಟೂರ್ನಿಯಲ್ಲಿ ಭಾಗಿಯಾಗಲಿದೆ ಎಂದು ಸಂಘದ ಅಧ್ಯಕ್ಷರಾದ ಬಾಬು ಧರ್ಮೇಂದ್ರ ತಿಳಿಸಿದರು.

    ತಮ್ಮ ಮೊದಲ ಚಿತ್ರಕ್ಕೆ ಮೇಕಪ್ ಮಾಡಿದ ವೆಂಕಟೇಶ್ ಅವರನ್ನು ನೆನಪಿಸಿಕೊಂಡು ಮಾತು ಆರಂಭಿಸಿದ ಭಾವನಾ ರಾಮಣ್ಣ, ನಾನು ನಟಿಸುವ ಎಲ್ಲಾ ಚಿತ್ರಗಳ ನಿರ್ಮಾಪಕರಿಗೆ ಹೇಳುವುದು ಮೇಕಪ್ ಹಾಗೂ ಕೇಶಾಲಂಕಾರಕ್ಕೆ ಈ ಸಂಘದ ಸದಸ್ಯರೆ ಇರಲಿ ಎಂದು. ಈಗ ಸಾಕಷ್ಟು ಜನರು ಸಮಾಜಿಕ ಜಾಲತಾಣಗಳಲ್ಲಿ ಮೇಕಪ್ ಕುರಿತು ಪ್ರಮೋಷನ್ ಮಾಡಿಕೊಳ್ಳುತ್ತಾರೆ. ಅದರಿಂದ ಇವರಿಗೆ ಸ್ವಲ್ಪ ತೊಂದರೆಯಾಗುತ್ತಿದೆ. ಇನ್ನೂ ಈ ಟೂರ್ನಿಯ ಬಗ್ಗೆ ಹೇಳಬೇಕೆಂದರೆ, ಹೆಚ್ಚಾಗಿ ಕಲಾವಿದರು ಕ್ರಿಕೆಟ್ ಆಡುತ್ತೇವೆ. ತಂತ್ರಜ್ಞರು ಆಡುವುದು ಕಡಿಮೆ. ಕಾರ್ಮಿಕರು ಹಾಗೂ ತಂತ್ರಜ್ಞರಿಗಾಗಿ ಆಯೋಜಿಸಿರುವ ಈ ಕ್ರಿಕೆಟ್ ಟೂರ್ನಿಯ ರಾಯಭಾರಿಯಾಗಿದ್ದು ಖುಷಿಯಾಗಿದೆ. ಟೂರ್ನಿ ಯಶಸ್ವಿಯಾಗಲಿ ಎಂದರು.

  • ತ.ರಾ.ಸು ‘ಹಂಸಗೀತೆ’ಗೆ ಹೆಜ್ಜೆ ಹಾಕಲಿದ್ದಾರೆ ನಟಿ ಭಾವನಾ

    ತ.ರಾ.ಸು ‘ಹಂಸಗೀತೆ’ಗೆ ಹೆಜ್ಜೆ ಹಾಕಲಿದ್ದಾರೆ ನಟಿ ಭಾವನಾ

    ಚಂದ್ರಮುಖಿ ಪ್ರಾಣಸಖಿ ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ (Bhavana Ramanna) ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ (Hamsageete) ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ ಹಂಸಗೀತೆಯನ್ನು  ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ತಾವು ಚಿತ್ರರಂಗಕ್ಕೆ ಬರಲು ಕಾರಣರಾದವರನ್ನು ನೆನೆದು ಭಾವುಕರಾಗಿ ಮಾತು ಆರಂಭಿಸಿದ ಭಾವನ, ಹಿಂದೆ ತಮ್ಮ ಹೋಮ್ ಟೌನ್  ಬ್ಯಾನರ್ ನಲ್ಲಿ ನಿರುತ್ತರ ಚಿತ್ರವನ್ನು ನಿರ್ಮಿಸಿದ್ದನ್ನು ನೆನಪಿಸಿಕೊಂಡರು. ಮುಂದೆ ಕೂಡ ಚಿತ್ರ ನಿರ್ಮಿಸುವ ಆಸೆ ಇದೆ ಎಂದರು.  ಹೂವು ಫೌಂಡೇಶನ್ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವದಾಗಿಯೂ ಭಾವನ ಹೇಳಿದರು. ನಂತರ ಹಂಸಗೀತೆ ನೃತ್ಯ ಕಾವ್ಯದ ಬಗ್ಗೆ ಭಾವನ ಮಾಹಿತಿ ನೀಡಿದರು.  ತ.ರಾ.ಸು ಅವರ ಹಂಸಗೀತೆಯ ಬಗ್ಗೆ ಇವತ್ತಿನ ಪೀಳಿಗೆಗೆ ತಿಳಿಸಿಕೊಡಬೇಕು. ಹಾಗಾಗಿ ಈ ಪ್ರಯತ್ನ ಮಾಡುತ್ತಿದ್ದೇನೆ. ಜನವರಿ 30ರ ಸಂಜೆ 6.30ಕ್ಕೆ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವೀಣಾ ಮೂರ್ತಿ ಅವರ ನೃತ್ಯ ನಿರ್ದೇಶನದಲ್ಲಿ ಈ ನೃತ್ಯಕಾವ್ಯ ಮೂಡಿಬರಲಿದೆ.

    ಭಾವನ ಅವರೆ ಒಂದುವರೆ ಗಂಟೆಗಳ ಕಾಲ ನಡೆಸಿಕೊಡುವ ಏಕ ವ್ಯಕ್ತಿ ಪ್ರದರ್ಶನದ ಈ ನೃತ್ಯ ಕಾವ್ಯದಲ್ಲಿ ಹಾಡು, ನೃತ್ಯ ಹಾಗೂ ಸಂಭಾಷಣೆಗಳು ಇರುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ ಅವರು ಇದರಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.

    ಚಿತ್ರರಂಗದಿಂದ ಗುರುಗಳಾದ ಡಾ.ಬರಗೂರು ರಾಮಚಂದ್ರಪ್ಪ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತಾರಾ ಅನುರಾಧ ಅವರನ್ನೂ ಆಹ್ವಾನಿಸಿರುವುದಾಗಿ ಭಾವನಾ ರಾಮಣ್ಣ ತಿಳಿಸಿದ್ದಾರೆ. ಇದು ಮೊದಲ ಪ್ರಯತ್ನ. ಮುಂದೆ ಬೇರೆಬೇರೆ ಕಡೆಗಳಲ್ಲೂ ಈ ನೃತ್ಯಕಾವ್ಯವನ್ನು ಮಾಡುವ ಯೋಜನೆಯಿದೆ ಎನ್ನುತ್ತಾರೆ ಭಾವನಾ ರಾಮಣ್ಣ.

  • ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ

    ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ

    ರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಾಳೆ ಸಿನಿಮಾ ಪತ್ರಿಕಾ ಛಾಯಾಗ್ರಾಹಕ ಡಿ.ಸಿ ನಾಗೇಶ್ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಪತ್ರಕರ್ತ ಚೇತನ್ ನಾಡಿಗೇರ ಸಂಪಾದನೆ ಮಾಡಿರುವ ‘ಜೀವಬಿಂಬ’ ಪುಸ್ತಕ (Book)  ಲೋಕಾರ್ಪಣೆ ಆಗಲಿದೆ. ಡಿ.ಸಿ ನಾಗೇಶ್ (DC Nagesh) ಕುರಿತಾದ ಪುಸ್ತಕ ಇದಾಗಿದ್ದು, ನಾಗೇಶ್ ಒಡನಾಡಿಗಳು ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಹಲವು ದಶಕಗಳ ಕಾಲ ಸಿನಿಮಾ ಪತ್ರಿಕೋದ್ಯಮದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದವರು ಡಿ.ಸಿ ನಾಗೇಶ್. ಕನ್ನಡದ ಬಹುತೇಕ ನಟ, ನಟಿಯರ ಫೋಟೋಗಳನ್ನು ಸೆರೆ ಹಿಡಿದ ಹೆಗ್ಗಳಿಕೆ ಇವರದ್ದು. ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ ನಾಗೇಶ್, ಹಿರಿಯ ಕಲಾವಿದರ ಜೊತೆ ಒಂದೊಳ್ಳೆ ಬಾಂಧವ್ಯವನ್ನು ಹೊಂದಿದ್ದವರು. ಅಲ್ಲದೇ, ಕಿರಿಯ ಸಿನಿಮಾ ಪತ್ರಕರ್ತರಿಗೆ ಮಾರ್ಗದರ್ಶಕರು ಆಗಿದ್ದವರು. ಕಳೆದ ವರ್ಷವಷ್ಟೇ ಅಗಲಿರುವ ಅವರ ನೆನಪಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಇದನ್ನೂ ಓದಿ: ಕನ್ನಡಕ್ಕೆ ವಿಜಯ್ ಸೇತುಪತಿ: ಇನ್ನೂ ಕನ್ಫರ್ಮ್ ಆಗಿಲ್ಲ ಅಂತಿದೆ ಟೀಮ್

    ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ (Nagabharana), ಹಿರಿಯ ನಟ ದೇವರಾಜ್ (Devaraj), ನಟಿ ಭಾವನಾ ರಾಮಣ್ಣ (Bhavana Ramanna) ಮತ್ತು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಆಗಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ವೆಬ್ ಸೈಟ್ ಕೂಡ ಲೋಕಾರ್ಪಣೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸುರಗಿಯಲ್ಲಿ ಪಡ್ಡೆ ಹುಡುಗ್ರ ಕಣ್ಣರಳುವಂತೆ ಮಾಡಿದ ಭಾವನಾ

    ಸುರಗಿಯಲ್ಲಿ ಪಡ್ಡೆ ಹುಡುಗ್ರ ಕಣ್ಣರಳುವಂತೆ ಮಾಡಿದ ಭಾವನಾ

    ಬೆಂಗಳೂರು: ಭಾವನಾ ರಾಮಣ್ಣ ಚಂದನವನ ಕಂಡ ಮುದ್ದಾದ `ಪ್ರಾಣಸಖಿ’. ಚಂದ್ರಮುಖಿ ಪ್ರಾಣಸಖಿ ಸಿನಿಮಾದಲ್ಲಿ ಹುಡುಗಾಟದ ಹುಡುಗಿಯಾಗಿ ಕರುನಾಡಿನ ಮನೆಮಾತಾದರು. ಸಿನಿಮಾ ಆಯ್ಕೆಯಲ್ಲಿ ತುಂಬಾನೇ ಚೂಸಿಯಾಗಿರುವ ಭಾವನಾ ನಟಿಸಿದ ಸಿನಿಮಾಗಳಲ್ಲಿ ವಿಭಿನ್ನ ಪಾತ್ರವಾಗಿ ಕಾಣಿಸಿಕೊಳ್ಳುವ ಮೂಲಕ ಇಂದಿಗೂ ಬಹುಜನರ ನೆಚ್ಚಿನ ನಟಿಯಾಗಿದ್ದಾರೆ. ಅಪೂರ್ವ ಕಾಸರವಳ್ಳಿ ನಿರ್ದೇಶನದ ‘ನಿರುತ್ತರ’ ಸಿನಿಮಾಗೆ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರುತ್ತರ ನಂತರ ಮತ್ತೊಂದು ವಿಶೇಷ ಕಥೆಯುಳ್ಳ ‘ಸುರಗಿ’ ಚಿತ್ರದ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

    ಅದ್ವೈತ, ಮೈತ್ರಿ, ಅಮರಾವತಿ ಸಿನಿಮಾ ಖ್ಯಾತಿಯ ಜಟ್ಟ ಗಿರಿರಾಜ್ ಸುರಗಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮನು ಹೆಗಡೆ ಮತ್ತು ಧನ್ಯಾ ಬಾಲಕೃಷ್ಣ ನಾಯಕ-ನಾಯಕಿಯಾಗಿ ನಟಿಸಲಿದ್ದಾರೆ. ನಿರ್ಮಾಣದ ಜೊತೆಗೆ ಭಾವನಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದು, ಯಾವ ರೋಲ್ ಎಂಬುವುದನ್ನು ರಿವೀಲ್ ಮಾಡಿಲ್ಲ. ಚಿತ್ರಕ್ಕಾಗಿಯೇ ಭಾವನಾ ಹಾಟ್ ಫೋಟೋ ಶೂಟ್ ಮಾಡಿಸಿದ್ದು, ಪಡ್ಡೆ ಹುಡುಗರು ಕಣ್ಣರಳಿಸಿ ತಮ್ಮತ್ತ ನೋಡುವಂತೆ ಮಾಡಿದ್ದಾರೆ.

    ಸಂಕ್ರಾಂತಿಗೆ ಸುರಗಿ ಮುಹೂರ್ತ ನಡೆಯಲಿದೆ ಎಂದು ಚಿತ್ರತಂಡ ಹೇಳಿದೆ. ಹಾಗಾಗಿ ಮೊದಲ ಹಂತದಲ್ಲಿ ವಿದೇಶಿ ಫೋಟೋಗ್ರಾಫರ್ ಅವರಿಂದ ನಾಯಕ, ನಾಯಕಿಯ ಫೋಟೋ ಶೂಟ್ ಮಾಡಿಸಲಾಗಿದೆ. ಸಿನಿಮಾ ಸೆಟ್ ಏರುವ ಮುನ್ನ ತರಬೇತಿ ನೀಡಲಾಗುವುದು ಎಂದು ಭಾವನಾ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv