Tag: bhavani revanna

  • ಹಾಸನಾಂಬೆ ದರ್ಶನಕ್ಕೆ ಆಗಮಿಸಿದ ರೇವಣ್ಣ ದಂಪತಿ – ಕಾರು ತಡೆದಿದ್ದಕ್ಕೆ ಫುಲ್ ಗರಂ

    ಹಾಸನಾಂಬೆ ದರ್ಶನಕ್ಕೆ ಆಗಮಿಸಿದ ರೇವಣ್ಣ ದಂಪತಿ – ಕಾರು ತಡೆದಿದ್ದಕ್ಕೆ ಫುಲ್ ಗರಂ

    – ಪ್ರಜ್ವಲ್, ಸೂರಜ್, ನಿಖಿಲ್, ಹೆಚ್‌ಡಿಕೆ ಹೆಸರಿನಲ್ಲಿ ಅರ್ಚನೆ

    ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ (H D Revanna) ದಂಪತಿ ಹಾಸನಾಂಬೆಯ ದೇವಾಯಲಕ್ಕೆ (Hasanambe Temple) ಭೇಟಿ ನೀಡಿ, ದೇವಿ ದರ್ಶನ ಪಡೆದಿದ್ದಾರೆ. ಶಿಷ್ಟಾಚಾರ ಪಾಲನೆ ಅಧಿಕಾರಿಗಳ ಗಮನಕ್ಕೆ ತಾರದೇ ರೇವಣ್ಣ ನೇರವಾಗಿ ದೇಗುಲಕ್ಕೆ ಆಗಮಿಸಿದ್ದಾರೆ.

    ಮಾಜಿ ಪ್ರಧಾನಿ ಕುಟುಂಬದ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಹೊಂದಿರುವ ರೇವಣ್ಣ ಅವರು ತಮ್ಮದೇ ಕಾರಿನಲ್ಲಿ ತಮ್ಮದೇ ಭದ್ರತಾ ವ್ಯವಸ್ಥೆಯೊಂದಿಗೆ ದೇವಿ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ಅವರ ಕಾರನ್ನ ತಡೆದ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ರೇವಣ್ಣ ಗರಂ ಆಗಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ

    ಪತ್ನಿ ಭವಾನಿ ರೇವಣ್ಣ ಜೊತೆ ಸಾವಿರ ರೂ. ಟಿಕೆಟ್ ಪಡೆದು ನೇರ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಬಳಿಕ ಅರ್ಧ ಗಂಟೆಗೂ ಹೆಚ್ಚು ಕಾಲ ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ.ದೇವೇಗೌಡರು, ಚೆನ್ನಮ್ಮ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸೂರಜ್ ರೇವಣ್ಣ, ಪ್ರಜ್ವಲ್ ರೇವಣ್ಣ ಸೇರಿ ಕುಟುಂಬ ಸದಸ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.

    ಬ್ಯಾಹ್ಮಿ, ಕೌಮಾರಿ, ಮಹೇಶ್ವರಿ ಮೂರು ದೇವರ ಮೇಲಿದ್ದ ಕುಂಕುಮ ಕೇಳಿ ಪಡೆದ ರೇವಣ್ಣ, ಪ್ರತ್ಯೇಕವಾಗಿ ಬಾಕ್ಸ್ನಲ್ಲಿ ಕುಂಕುಮ, ದೇವರ ಮೇಲಿದ್ದ ಹೂವು ಕೊಂಡೊಯ್ದರು. ಈ ವೇಳೆ ರೇವಣ್ಣ ದಂಪತಿಗೆ ಹಾಸನ ಮಹಾನಗರ ಪಾಲಿಕೆ ಮೇಯರ್ ಗಿರೀಶ್ ಸಾಥ್ ನೀಡಿದ್ದಾರೆ.

  • 10 ತಿಂಗಳ ಬಳಿಕ ಹಾಸನಕ್ಕೆ ಎಂಟ್ರಿ – ಭವಾನಿ ರೇವಣ್ಣಗೆ ಹೂಮಳೆ, ಆರತಿ ಬೆಳಗಿ ಸ್ವಾಗತ

    10 ತಿಂಗಳ ಬಳಿಕ ಹಾಸನಕ್ಕೆ ಎಂಟ್ರಿ – ಭವಾನಿ ರೇವಣ್ಣಗೆ ಹೂಮಳೆ, ಆರತಿ ಬೆಳಗಿ ಸ್ವಾಗತ

    ಹಾಸನ: ಕೆ.ಆರ್.ನಗರ (K R Nagar) ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ (Bhavani Revanna) 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ.

    ಹಾಸನಕ್ಕೆ (Hassan) ಬರುತ್ತಿದ್ದಂತೆ ಜಿಲ್ಲೆಯ ಗಡಿಭಾಗ ಹಿರಿಸಾವೆ, ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ಜೆಡಿಎಸ್‌ ಕಾರ್ಯಕರ್ತರು ಭವಾನಿ ರೇವಣ್ಣ ಅವರನ್ನು ಸ್ವಾಗತಿಸಿದ್ದಾರೆ. ಹೂಮಳೆ ಸುರಿಸಿ, ಆರತಿ ಬೆಳಗಿ ಬರಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಿ, ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.

    ಮೂರು ದಿನಗಳ ಹಿಂದೆಯಷ್ಟೇ ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಸಿಸಲು ಭವಾನಿ ರೇವಣ್ಣಗೆ ಹೈಕೋರ್ಟ್‌ ರಿಲೀಫ್ ನೀಡಿತ್ತು.  ಇದನ್ನೂ ಓದಿ: ಭವಾನಿ ರೇವಣ್ಣಗೆ ʻಹೈʼ ರಿಲೀಫ್ – ಮೈಸೂರು, ಹಾಸನ ಪ್ರವೇಶಿಸಲು ಕೋರ್ಟ್‌ ಅಸ್ತು

    ಈ ಹಿಂದೆ ಭವಾನಿ ರೇವಣ್ಣ ಅವರು ಮೈಸೂರು (Mysuru) ಮತ್ತು ಹಾಸನ (Hassan) ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಹೈಕೋರ್ಟ್(HighCourt) ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಸುತ್ತಳತೆಯಲ್ಲಿ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಹೊಸ ಷರತ್ತು ವಿಧಿಸಿದೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಈಗ ಬೇಕಿದೆ ಹನುಮನ ಶ್ರೀರಕ್ಷೆ – ನಿತ್ಯ ಹನುಮಾನ್ ಚಾಲಿಸ ಪಠಿಸುತ್ತಿರೋ ಪ್ರಜ್ವಲ್ ರೇವಣ್ಣ

    ಏನು ಪ್ರಕರಣ?
    ತನ್ನ ತಾಯಿ ಕಣ್ಮರೆಯಾಗಿದ್ದಾರೆಂದು ಸಂತ್ರಸ್ತೆ ಪುತ್ರ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಮಾಜಿ ಸಚಿವ ಹೆಚ್‌.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ನಡೆಸಿದ್ದ ಪೊಲೀಸರು, ಹೆಚ್.ಡಿ.ರೇವಣ್ಣ (H D Revanna) ಅವರಿಗೆ ಸಂಬಂಧಿಸಿದ್ದೆಂದು ಹೇಳಲಾದ ತೋಟದ ಮನೆಯೊಂದರಿಂದ ಆಕೆಯನ್ನು ರಕ್ಷಿಸಿದ್ದರು. ಅಪಹರಣಕ್ಕೆ ಭವಾನಿ ರೇವಣ್ಣ ಅವರ ಕಾರು ಬಳಕೆಯಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಭವಾನಿ ರೇವಣ್ಣ ಹಾಗೂ ಅವರ ಕಾರು ಚಾಲಕ ಅಜಿತ್ ವಿರುದ್ಧವೂ ದೂರು ದಾಖಲಾಗಿತ್ತು.

    ದೂರು ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಆದ್ರೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿತ್ತು.  ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾ – ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣ

  • ಭವಾನಿ ರೇವಣ್ಣಗೆ ʻಹೈʼ ರಿಲೀಫ್ – ಮೈಸೂರು, ಹಾಸನ ಪ್ರವೇಶಿಸಲು ಕೋರ್ಟ್‌ ಅಸ್ತು

    ಭವಾನಿ ರೇವಣ್ಣಗೆ ʻಹೈʼ ರಿಲೀಫ್ – ಮೈಸೂರು, ಹಾಸನ ಪ್ರವೇಶಿಸಲು ಕೋರ್ಟ್‌ ಅಸ್ತು

    – ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಜಾಗ ಪ್ರವೇಶಿಸದಂತೆ ಷರತ್ತು

    ಬೆಂಗಳೂರು: ಕೆ.ಆರ್.ನಗರ(K R Nagar) ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ(Bhavani Revanna) ಅವರಿಗೆ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದ್ದು, ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡಿದೆ.

    ಭವಾನಿ ರೇವಣ್ಣ ಅವರು ಮೈಸೂರು(Mysuru) ಮತ್ತು ಹಾಸನ(Hassan) ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಹೈಕೋರ್ಟ್(HighCourt) ಈ ಹಿಂದೆ ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಸುತ್ತಳತೆಯಲ್ಲಿ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಹೊಸ ಷರತ್ತು ವಿಧಿಸಿದೆ. ಇದನ್ನೂ ಓದಿ: ಬೆಳಗಾವಿ, ಕಲಬುರಗಿಯಲ್ಲಿ ತಾಪಮಾನ ಹೆಚ್ಚಳ; ನರೇಗಾ ಕಾರ್ಮಿಕರಿಗೆ 30% ಕೆಲಸದ ಪ್ರಮಾಣ ಕಡಿತ: ಪ್ರಿಯಾಂಕ್ ಖರ್ಗೆ

    ಏನಿದು ಪ್ರಕರಣ?
    ತನ್ನ ತಾಯಿ ಕಣ್ಮರೆಯಾಗಿದ್ದಾರೆಂದು ಸಂತ್ರಸ್ತೆ ಪುತ್ರ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಮಾಜಿ ಸಚಿವ ಹೆಚ್‌.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ಇದನ್ನೂ ಓದಿ: ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ ನ್ಯಾಷನಲ್‌ ಕ್ರಶ್‌ – ಈ ನಟನೊಂದಿಗೆ ರಶ್ಮಿಕಾ ಸೆಲೆಬ್ರೇಷನ್‌!

    ದೂರಿನನ್ವಯ ತನಿಖೆ ನಡೆಸಿದ್ದ ಪೊಲೀಸರು, ಹೆಚ್.ಡಿ.ರೇವಣ್ಣ(H D Revanna) ಅವರಿಗೆ ಸಂಬಂಧಿಸಿದ್ದೆಂದು ಹೇಳಲಾದ ತೋಟದ ಮನೆಯೊಂದರಿಂದ ಆಕೆಯನ್ನು ರಕ್ಷಿಸಿದ್ದರು. ಅಪಹರಣಕ್ಕೆ ಭವಾನಿ ರೇವಣ್ಣ ಅವರ ಕಾರು ಬಳಕೆಯಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಭವಾನಿ ರೇವಣ್ಣ ಹಾಗೂ ಅವರ ಕಾರು ಚಾಲಕ ಅಜಿತ್ ವಿರುದ್ಧವೂ ದೂರು ದಾಖಲಾಗಿತ್ತು. ಇದನ್ನೂ ಓದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ – ನ್ಯಾಯಾಂಗ ತನಿಖೆಗೆ ಹೈಕೋರ್ಟ್‌ ಆದೇಶ

    ದೂರು ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಆದ್ರೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿತ್ತು.

  • ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

    ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದ ಸುಪ್ರೀಂ

    – ರೇವಣ್ಣ ಪತ್ನಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಹೈಕೋರ್ಟ್‌ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌  

    ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ (Bhavani Revanna) ರಿಲೀಫ್‌ ಸಿಕ್ಕಿದೆ. ಭವಾನಿ ಅವರ ಜಾಮೀನು ಅರ್ಜಿ ವಜಾ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

    ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ.

    ಈಗಾಗಲೇ ಚಾರ್ಜ್‌ಶೀಟ್ ಫೈಲ್ ಆಗಿದೆ. ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣ್ತಿಲ್ಲ ಎಂದು ಕೋರ್ಟ್‌ ತಿಳಿಸಿದೆ.

    ಆರೋಪಿ ಮಹಿಳೆ ಪ್ರಕರಣದಲ್ಲಿ ನೇರ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಆಗಿದ್ದಾರೆ. ಸಂತ್ರಸ್ತೆಯ ಅಪಹರಣದಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದಷ್ಟೆ ವಾದ ಎಂದು ತನಿಖೆಯ ಅಗತ್ಯತೆಯನ್ನು ಎಸ್‌ಐಟಿ ಪರ ವಕೀಲರು ಒತ್ತಿ ಹೇಳಿದರು.

    ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಚಾರ್ಜ್‌ಶೀಟ್ ಫೈಲ್ ಮಾಡಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ ಎಂದು ಜಾಮೀನು ರದ್ದು ಮಾಡಲು ಕೋರ್ಟ್‌ ನಿರಾಕರಿದೆ.

  • ಪ್ರಜ್ವಲ್‌ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್‌ ಪ್ರಶ್ನೆ

    ಪ್ರಜ್ವಲ್‌ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್‌ ಪ್ರಶ್ನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಭವಾನಿ ರೇವಣ್ಣ ಅವರನ್ನು ಎಳೆದು ತಂದಿದ್ದು ಸರಿಯೇ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಅವರು ಕಾಂಗ್ರೆಸ್‌ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.

    ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬರೆದ ಪತ್ರವನ್ನು ಉಲ್ಲೇಖಿಸಿ ಕಾಂಗ್ರೆಸ್‌ ಮಾಡುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿ, ನಾನು ಸಿಎಂ ಪತ್ನಿಯವರ ಪತ್ರ ನೋಡಿದ್ದೇನೆ. ಯಾರೂ ಸಹ ಸುಖಾಸುಮ್ಮನೇ ಕುಟುಂಬದ ಹೆಸರನ್ನು ತರಬಾರದು. ಆದರೆ ಕಾಂಗ್ರೆಸ್ ಭವಾನಿ ರೇವಣ್ಣ ಹೆಸರು ತಂದಿದ್ದರು. ಆಗ ಅವರಿಗೆ ಅದು ಸರಿ ಅನ್ನಿಸಿತ್ತಾ ಎಂದು ಮರು ಪ್ರಶ್ನೆ ಹಾಕಿ ತಿರುಗೇಟು ನೀಡಿದರು. ಇದನ್ನೂ ಓದಿ: ಅಂದು ಹುಬ್ಲೋಟ್‌ ವಾಚ್‌, ಇಂದು ಮುಡಾ ಸೈಟ್‌ಗಳು! – ಭಾರೀ ಚರ್ಚೆಗೆ ಗ್ರಾಸವಾಗಿದ್ದ ಗಿಫ್ಟ್‌

     

    ಸೈಟ್ ವಾಪಸ್ ಕೊಟ್ಟಿದ್ದು ತುಂಬಾ ತಡವಾಗಿದೆ. ಇಷ್ಟು ದಿನ ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದರು. ಈಗ ಯೂ ಟರ್ನ್ ಹೊಡೆದು ಸೈಟ್‌ ವಾಪಸ್‌ ನೀಡಿದ್ದಾರೆ. ರಾಜ್ಯದ ಜನತೆಗೆ ಈಗ ಎಲ್ಲವೂ ಅರ್ಥವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಟ ಗೋವಿಂದ ಕಾಲಿಗೆ ಗುಂಡೇಟು – ಆಸ್ಪತ್ರೆಗೆ ದಾಖಲು : ಆಗಿದ್ದೇನು?

    ಮೂಡಾ ಕೇಸ್ ಹಾಕಿದ್ದು ರಾಜಕೀಯ ಪಕ್ಷಗಳಲ್ಲ. ಮೂಡಾ ಅಕ್ರಮದ ಬಗ್ಗೆ ಮೊದಲು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗಿತ್ತು. ತಪ್ಪು ಮಾಡಿಲ್ಲ ಅಂದಮೇಲೆ ಯಾಕೆ ಸೈಟ್ ವಾಪಸ್ ಕೊಟ್ಟಿದ್ದೀರಿ. ಸೈಟ್ ಇಟ್ಟುಕೊಂಡು ಕಾನೂನು ಹೋರಾಟ ಎದುರಿಸಬೇಕಿತ್ತು ಎಂದು ತಿಳಿಸಿದರು.

     

    ಬಿಜೆಪಿ ಸಿಎಂ ವಿರುದ್ಧ ಹೋರಾಟ ಮುಂದುವರೆಸುತ್ತದೆ. ನಮ್ಮ ಹೋರಾಟದಿಂದಲೇ ವಾಲ್ಮೀಕಿ ಹಗರಣ ಅಂತ್ಯಕ್ಕೆ ಬಂದು ನಿಂತಿದೆ. ಸಿಎಂ ಈಗಲಾದ್ರೂ ರಾಜೀನಾಮೆ ಕೊಡಬೇಕು. ಒಂದು ವೇಳೆ ಈಗ ರಾಜೀನಾಮೆ ನೀಡದೇ ಇದ್ದರೆ ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

     

  • ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್‌ – ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್‌ – ರೇವಣ್ಣ, ಭವಾನಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಕೆ.ಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರೊಂದಿಗೆ ಪತ್ನಿ ಭವಾನಿ ರೇವಣ್ಣ (Bhavani Revanna) ಅವರನ್ನೂ ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

    ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಸೇರಿ 7 ಆರೋಪಿಗಳ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ (ACMM Court) ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಅಲ್ಲದೇ ಭವಾನಿ ರೇವಣ್ಣರನ್ನ 8ನೇ ಆರೋಪಿಯಾಗಿ ಹೆಸರಿಸಲಾಗಿದೆ. ಇದನ್ನೂ ಓದಿ: Paris Olympics | ಭಾರತಕ್ಕೆ ಮೂರನೇ ಪದಕ- ಕಂಚು ಗೆದ್ದ ಸ್ವಪ್ನಿಲ್

    ರೇವಣ್ಣ ವಿರುದ್ಧ ಎಫ್‌ಐಆರ್‌ ರದ್ದು ಕೋರಿರುವ ಹಾಗೂ ರೇವಣ್ಣ ಜಾಮೀನು ರದ್ದಿಗೆ ಕೋರಿದ್ದ ಎರಡೂ ಅರ್ಜಿಗಳನ್ನು ಏಕಕಾಲಕಕ್ಕೆ ಹೈಕೋರ್ಟ್‌ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಎಸ್‌ಐಟಿ ಪರ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದರು. ಸದ್ಯ ಜಾಮೀನು ರದ್ದು ಕೋರಿರುವ ಸಂಬಂಧ ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಎಫ್‌ಐಆರ್‌ ರದ್ದು ಕೋರಿರುವ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 8ಕ್ಕೆ ಕೋರ್ಟ್‌ ಮುಂದೂಡಿದೆ. ಇದನ್ನೂ ಓದಿ: ಎರಡು ಭಾಗಗಳಲ್ಲಿ ಬರಲಿದೆ ‘ಹಾಯ್ ನಾನ್ನಾ’ ಡೈರೆಕ್ಟರ್‌ ಜೊತೆಗಿನ ಜ್ಯೂ.ಎನ್‌ಟಿಆರ್‌ ಹೊಸ ಸಿನಿಮಾ

    ದೋಷಾರೋಪ ಪಟ್ಟಿಯಲ್ಲಿರುವ ಅಂಶಗಳೇನು?
    ಎಸ್‌ಐಟಿ ಅಧಿಕಾರಿಗಳ ತಂಡ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದೆ. ಪ್ರಕರಣದ ಆರೋಪಿಗಳಾದ ರೇವಣ್ಣ ಮತ್ತು ಭವಾನಿ ಅಣತಿಯ ಮೇರೆಗೆ ಸಂತ್ರಸ್ತೆಯ ಅಪಹರಣ ನಡೆದಿದೆ. ರೇವಣ್ಣ ಏಪ್ರಿಲ್ 23ರಂದು ಸಂತ್ರಸ್ತೆಯನ್ನು ಹೊಳೆನರಸೀಪುರಕ್ಕೆ ಕರೆದು ಬೆದರಿಕೆ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಪೊಲೀಸರ ಕೈಗೆ ಸಿಗಬಾರದು ಅಂತ ಬೆದರಿಕೆ ಹಾಕಿದ್ದಾರೆ. ಅದಾದ ಬಳಿಕ ಏ.26ರಂದೇ ಸತೀಶ್ ಬಾಬು ಅವರ ಮೂಲಕ ಸಂತ್ರಸ್ತೆಯನ್ನ ಅಪಹರಣ ಮಾಡಿಸಿದ್ದಾರೆ ಎಸ್‌ಐಟಿ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ʻ9 ಮಕ್ಕಳು ನೀರಲ್ಲಿ ಕೊಚ್ಚಿ ಹೋದ್ರು, ಮನೆ ನೆಲಸಮ ಆಗೋಯ್ತು, ದೊಡ್ಡ ಮನಸ್ಸು ಮಾಡಿ ಸಹಾಯ ಮಾಡಿ ಸಾಹೇಬ್ರೆʼ

    ಮಹಿಳೆಯನ್ನ ಅಪಹರಿಸಿ 7ನೇ ಆರೋಪಿ ಮನೆಯಲ್ಲಿ ಇರಿಸಲಾಗಿತ್ತು. ಆಕೆಗೂ ಆರೋಪಿಗೂ ಯಾವುದೇ ಸಂಬಂಧ ಇರಲಿಲ್ಲ. ಪೊಲೀಸರು ಆ ಸ್ಥಳದಲ್ಲಿ ಮಹಜರ್‌ ನಡೆಸಿದಾಗ, ಆಕೆಯ ಕೂದಲು ದೊರೆತಿದೆ. 7ನೇ ಆರೋಪಿ ಈ ಹಿಂದೆ ರೇವಣ್ಣ ಅವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಭವಾನಿ ಅವರು ಕೀರ್ತಿ ಮತ್ತು ಮನು ಜೊತೆಯಲ್ಲಿ ಮಾತನಾಡಿದ್ದರು. ಆರೋಪಿಗಳ ಜೊತೆ ಭವಾನಿ ಮಾತನಾಡಿರೋದಕ್ಕೆ 22 ಆಡಿಯೋ ಕ್ಲಿಪ್ಪಿಂಗ್‌ಗಳು ಸಿಕ್ಕಿದೆ. ಫೋನ್‌ನಲ್ಲಿಯೇ ಭವಾನಿ ಅವರು ನಿರಂತರವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

  • ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಅರ್ಜಿ – ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

    ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಅರ್ಜಿ – ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

    ನವದೆಹಲಿ: ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾ. ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ವಿಚಾರಣೆ ನಡೆಸಿತು‌.

    ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು‌. ವಿಚಾರಣೆ ವೇಳೆ ಭವಾನಿ ರೇವಣ್ಣ ಅವರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಯಾವುದೇ ಕಾರಣವಿದೆಯೇ ಎಂದು ಪೀಠ ಕೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, ಪುತ್ರ ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಭಾಗಿಯಾಗಿದ್ದಾರೆ. ಮಹಿಳೆ ದೂರು ನೀಡುವುದನ್ನು ತಡೆಯಲು ಈ ರೀತಿ ಮಾಡಲಾಗಿದೆ ಎನ್ನಲಾಗಿದೆ. ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಈ ಅಂಶವನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

    ಹೈಕೋರ್ಟ್ ಜಾಮೀನು ನೀಡಿರುವುದು ಅತ್ಯಂತ ದುರದೃಷ್ಟಕರ ವಿಚಾರಣಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಏಕೆ ತಿರಸ್ಕರಿಸಿದೆ ಎಂಬುದನ್ನು ಹೈಕೋರ್ಟ್ ಪರಿಗಣಿಸಲಿಲ್ಲ. ಇದು ಸ್ಪಷ್ಟ ಬೆದರಿಕೆಯ ಪ್ರಕರಣವಾಗಿದೆ. ಭವಾನಿ ರೇವಣ್ಣ ಸಾಕ್ಷಿಯನ್ನು ಸೆರೆಯಲ್ಲಿಟ್ಟಿದ್ದರು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಸೂರ್ಯಕಾಂತ್, ಆರೋಪಗಳು ಗಂಭೀರವಾಗಿವೆ. ಭವಾನಿ ರೇವಣ್ಣ ಅವರು ವಿಚಾರಣೆ ಎದುರಿಸಬಹುದು. ಆದರೆ ಜಾಮೀನು ರದ್ದುಗೊಳಿಸಲು ಏನಾದರೂ ಕಾರಣವಿದೆಯೇ ಎಂದು ಪ್ರಶ್ನಿಸಿದರು‌.

    ಸಾಕ್ಷಿಯನ್ನು ಅಕ್ರಮ ಬಂಧನದಲ್ಲಿಟ್ಟುಕೊಂಡು ಹಣದ ಆಮಿಷ ಒಡ್ಡಲಾಗಿದೆ ಎನ್ನಲಾಗಿದೆ. ಬೆದರಿಸುವ ಪ್ರಯತ್ನವೂ ನಡೆದಿದೆ‌. ನ್ಯಾಯಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ ಎಂದರು. ಇದಕ್ಕೆ ಉತ್ತರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಹೈಕೋರ್ಟ್ ದೂರಿನಲ್ಲಿ ಭವಾನಿ ರೇವಣ್ಣ ಹೆಸರಿಲ್ಲ ಎಂದು ಹೇಳಿದೆ. ನಾವು ಮಹಿಳೆಯ ಸ್ವಾತಂತ್ರ್ಯದ ಪ್ರಶ್ನೆಯನ್ನು ಮಾತ್ರ ಪರಿಗಣಿಸುತ್ತಿದ್ದೇವೆ. ಇದನ್ನು ರಾಜಕೀಯ ಮಾಡಬೇಡಿ ಎಂದರು.

    ಕಪಿಲ್ ಸಿಬಲ್ ವಾದಿಸಿ, ನಾವು ರಾಜಕೀಯವನ್ನು ಬಿಟ್ಟುಬಿಡೋಣ ನಮಗೂ ರಾಜಕೀಯ ಬೇಡ. ಆದರೆ ಹೈಕೋರ್ಟ್ ಆದೇಶವನ್ನು ನೋಡಿ. ಕುಟುಂಬದ ನಿರ್ದೇಶನದ ಮೇಲೆ ಈ ಕಿಡ್ನ್ಯಾಪ್ ನಡೆದಿದೆ ಎಂದು ಹೇಳಿದರು. ಸಿಬಲ್ ವಾದ ಆಲಿಸಿದ ಬಳಿಕ ಭವಾನಿ ರೇವಣ್ಣ ಪರ ವಾದ ಆಲಿಸುವ ಸಲುವಾಗಿ ಅವರಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಲಾಯಿತು.ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ – ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ

  • ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

    ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

    ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ (Parappana Agrahara) ಆಗಮಿಸಿದ್ದಾರೆ.

    ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಈಗ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ (Bhavani Revanna) ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್‌ಡಿ ರೇವಣ್ಣ ಆಗಮಿಸಿದ್ದಾರೆ.

     

    ಮಂಗಳವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಣ್ಣ, ನಾನು ಸದ್ಯಕ್ಕೆ ಪ್ರಜ್ವಲ್ (Prajwal Revanna) ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೆ ಕೊಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದಿದ್ದರು. ಇದನ್ನೂ ಓದಿ: ಇನ್ಮುಂದೆ ಹಳದಿ ಹಕ್ಕಿಯ ಚಿಲಿಪಿಲಿ ಕೇಳಲ್ಲ – ಬಾಗಿಲು ಹಾಕಿತು ಕೂ

    ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ್ದ ಅವರು, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

    ಎಂತೆಂಥವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು (HD Devegowda) ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಹೇಳಿದ್ದರು.

     

  • ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ

    ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ

    ಬೆಂಗಳೂರು: ಜೈಲಿನಲ್ಲಿರುವ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ನೋಡಲು ಭವಾನಿ ರೇವಣ್ಣ (Bhavani Revanna) ಆಗಮಿಸಿದ್ದಾರೆ.

    ಪರಪ್ಪನ ಅಗ್ರಹಾರದತ್ತ ಬಂದ ಭವಾನಿ ಅವರು ಕ್ಯಾಮೆರಾ ಕಾಣುತ್ತಿದ್ದಂತೆಯೇ ಕೈಯಿಂದ ಮುಖ ಮುಚ್ಚಿಕೊಂಡಿದ್ದಾರೆ. ಕಾರ್ ಡ್ರೈವರ್ ಮತ್ತು ಪಿಎ ಜೊತೆಗೆ ಆಗಮಿಸಿದ್ದಾರೆ.

    ಪೆನ್‍ಡ್ರೈವ್ (Pendrive Case) ವಿಚಾರ ಬಯಲಾಗುತ್ತಿದ್ದಂತೆಯೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ಆ ಬಳಿಕ ಎಸ್‍ಐಟಿ ಹಲವು ಬಾರಿ ನೋಟಿಸ್ ಕೊಟ್ಟರೂ ಪ್ರಜ್ವಲ್ ಕ್ಯಾರೇ ಎಂದಿರಲಿಲ್ಲ. ಈ ನಡುವೆ ಅಜ್ಞಾತವಾಸದಂದಲೇ ವಿಡಿಯೋವೊಂದನ್ನು ಮಾಡಿ ಒಂದು ವಾರ ಸಮಯ ಕೋಡಿ ನಾನೇ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಆದರೆ ಆ ವೇಳೆಯೂ ಪ್ರಜ್ವಲ್ ಹಾಜರಾಗಿರಲಿಲ್ಲ. ಇದನ್ನೂ ಓದಿ: ವಕೀಲ ದೇವರಾಜೇ ಗೌಡಗೆ ಜಾಮೀನು ಮಂಜೂರು

    ಬಳಿಕ ಕೆಲ ದಿನಗಳ ನಂತರ ಪ್ರಜ್ವಲ್ ಹಿಂದಿರುಗಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಎಸ್‍ಐಟಿಯವರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ತನಿಖೆಯ ಭಾಗವಾಗಿ ಸ್ಥಳಮಹಜರು ನಡೆಸಿ ಕೋರ್ಟ್‍ಗೆ ಹಾಜರು ಪಡಿಸಿದ್ದು, ಇದೀಗ ಪರಪ್ಪನ ಅಗ್ರಹರ ಸೇರಿದ್ದಾರೆ.

  • ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?

    ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?

    ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಇಡೀ ಕುಟುಂಬ (HD Revanna family) ಈಗ ಕಾನೂನು ಕಟ್ಟಳೆಯಲ್ಲಿ ಸಿಲುಕಿದೆ.

    ಕೆಲ ದಿನಗಳ ಹಿಂದೆಯಷ್ಟೇ ಪ್ರಜ್ವಲ್ ರೇವಣ್ಣ (Prajwal Revanna) ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಎಂಬ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಬಂಧನಕ್ಕೆ ಒಳಗಾಗಿದ್ದರು. ಆ ಬಳಿಕ ಪ್ರಜ್ವಲ್ ರೇವಣ್ಣ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದರು. ಈ ಬೆನ್ನಲ್ಲೇ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೂ ಎಸ್‌ಐಟಿ ನೋಟಿಸ್ ಕೊಟ್ಟು ಬಂಧನಕ್ಕೆ ಮುಂದಾಗಿತ್ತು. ಅಷ್ಟರಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರೇವಣ್ಣ (Suraj Revanna) ಅವರ ಬಂಧನವಾಗಿದೆ.

    ಯಾರ ವಿರುದ್ಧ ಏನು ಪ್ರಕರಣ?
    ರೇವಣ್ಣ, ಮಾಜಿ ಸಚಿವ
    ಆರೋಪ: ಕೆ.ಆರ್.ನಗರ ಮೂಲದ ಅತ್ಯಾಚಾರ ಸಂತ್ರಸ್ತೆ ಅಪಹರಣ
    ಜೈಲು ಶಿಕ್ಷೆ ಬಳಿಕ ಜಾಮೀನು

    ಭವಾನಿ, ರೇವಣ್ಣ ಪತ್ನಿ
    ಆರೋಪ: ಕೆ.ಆರ್.ನಗರ ಮೂಲದ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ
    ಎಸ್‌ಐಟಿ ನೋಟಿಸ್ ಬಳಿಕ ನಿರೀಕ್ಷಣಾ ಜಾಮೀನು

    ಪ್ರಜ್ವಲ್, ರೇವಣ್ಣ 2ನೇ ಮಗ
    ಆರೋಪ: ಅತ್ಯಾಚಾರ, ಲೈಂಗಿಕ ದೌರ್ಜನ್ಯ
    ಜೈಲು; ಸದ್ಯಕ್ಕೆ ಎಸ್‌ಐಟಿ ವಿಚಾರಣೆ

    ಸೂರಜ್, ರೇವಣ್ಣ ಮೊದಲ ಮಗ
    ಆರೋಪ: ಅಸಹಜ ಲೈಂಗಿಕ ದೌರ್ಜನ್ಯ
    ಹಾಸನ ಸೆನ್ ಪೊಲೀಸರಿಂದ ಬಂಧನ, ಸಿಐಡಿ ತನಿಖೆಗೆ ಕೇಸ್ ವರ್ಗ

    ರೇವಣ್ಣ ಕುಟುಂಬದ ಮೇಲೆ ಕಾನೂನು ಅಸ್ತ್ರ
    ರೇವಣ್ಣ – ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ, ಕೆ.ಆರ್ ನಗರ ಪ್ರವೇಶ ಮಾಡುವಂತೆ ಇಲ್ಲ
    ಭವಾನಿ – ನಿರೀಕ್ಷಣಾ ಜಾಮೀನು – ಮೈಸೂರು ಹಾಸನ ಪ್ರವೇಶ ಇಲ್ಲ
    ಪ್ರಜ್ವಲ್ – 3 ಅತ್ಯಾಚಾರ ಪ್ರಕರಣ – ಸದ್ಯ ಸೋಮವಾರದ ವರೆಗೆ ಪೊಲೀಸ್ ಕಸ್ಟಡಿ – ಬಳಿಕ ಜೈಲು ಸಾಧ್ಯತೆ
    ಸೂರಜ್ – ಜಾಮೀನು ರಹಿತ ಪ್ರಕರಣದಲ್ಲಿ ಅರೆಸ್ಟ್, ತನಿಖೆ ಪ್ರಗತಿಯಲ್ಲಿದೆ.