Tag: Bhim Army

  • ಭೀಮ್ ಆರ್ಮಿ ಮುಖ್ಯಸ್ಥನ ಮೇಲೆ ದಾಳಿ ಮಾಡಿದ್ದ ನಾಲ್ವರ ಬಂಧನ

    ಭೀಮ್ ಆರ್ಮಿ ಮುಖ್ಯಸ್ಥನ ಮೇಲೆ ದಾಳಿ ಮಾಡಿದ್ದ ನಾಲ್ವರ ಬಂಧನ

    ಲಕ್ನೋ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Bhim Army chief Chandra Shekhar Aazad) ಮೇಲೆ ದಾಳಿ ಮಾಡಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತನರನ್ನು ಹರಿಯಾಣದ ವಿಕಾಸ್ ಹಾಗೂ ಉತ್ತರಪ್ರದೇಶದ ಪ್ರಶಾಂತ್, ಲೋವಿಶ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ. ಇವರನ್ನು ಹರಿಯಾಣ ಹಾಗೂ ಉತ್ತರಪ್ರದೇಶದ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಶಾಂತಿ ಕಾಪಾಡಿ- ಆಸ್ಪತ್ರೆಯಿಂದಲೇ ಬೆಂಬಲಿಗರಿಗೆ ಚಂದ್ರಶೇಖರ್ ಆಜಾದ್ ಸಂದೇಶ

    ಈ ನಾಲ್ವರನ್ನು ಹರಿಯಾಣದ ಅಂಬಾಲ ಜಿಲ್ಲೆಯ ಶಹಜಾದ್‍ಪುರ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಉಪಪೊಲೀಸ್ ಆಯುಕ್ತ ಅಮನ್ ಕುಮಾರ್ ತಿಳಿಸಿದ್ದಾರೆ. ಸದ್ಯ ಬಂಧಿತ ನಾಲ್ವರನ್ನು ಉತ್ತರಪ್ರದೇಶದ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಕೃತ್ಯಕ್ಕೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಶೂಟೌಟ್‍ನಲ್ಲಿ ಗಾಯಗೊಂಡಿರುವ ಭೀಮ್ ಆರ್ಮಿ ಮುಖ್ಯಸ್ಥನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್

    ನಡೆದಿದ್ದೇನು..?: ಚಂದ್ರಶೇಖರ್ ಆಜಾದ್ ಅವರು ಜೂನ್ 28ರಂದು ಸಂಜೆ ಖಾಸಗಿ ಕಾರ್ಯಕ್ರಮ ಮುಗಿಸಿಕೊಂಡು ಸಹೋದರ ಹಾಗೂ ಇತರೆ ಮೂವರ ಜೊತೆ ಕಾರಿನಲ್ಲಿ ಹೊರಟಿದ್ದರು. ಅಂತೆಯೇ ಉತ್ತರಪ್ರದೇಶದ ಸಹರನ್‍ಪುರ ಜಿಲ್ಲೆಯಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದವರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಆಜಾದ್ ಹೊಟ್ಟೆಯ ಭಾಗಕ್ಕೆ ಗುಂಡೇಟು ತಗುಲಿತ್ತು. ಅಲ್ಲದೆ ಗುಂಡುಗಳು ಕಾರಿನ ಸೀಟುಗಳ ಮೇಲೆ ಬಿದ್ದಿವೆ. ದಾಳಿ ನಡೆಸಿದವರು ತಮ್ಮ ಕಾರನ್ನು ಹಿಮ್ಮುಖವಾಗಿ ಚಲಿಸಿಕೊಂಡು ಪರಾರಿಯಾಗಿದ್ದರು. ಗಾಯಗೊಂಡು ಅಪಾಯದಿಂದ ಪಾರಾಗಿದ್ದ ಆಜಾದ್ ಅವರನ್ನು ಕೂಡಲೇ ಸಹರನ್‍ಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶೂಟೌಟ್‍ನಲ್ಲಿ ಗಾಯಗೊಂಡಿರುವ ಭೀಮ್ ಆರ್ಮಿ ಮುಖ್ಯಸ್ಥನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್

    ಶೂಟೌಟ್‍ನಲ್ಲಿ ಗಾಯಗೊಂಡಿರುವ ಭೀಮ್ ಆರ್ಮಿ ಮುಖ್ಯಸ್ಥನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್

    ಲಕ್ನೋ: ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಒಳಗಾಗಿರುವ ಭೀಮ್ ಆರ್ಮಿ (Bhim Army )ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ವಿರುದ್ಧ ಬೆದರಿಕೆ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಅಮೇಥಿಯ ಪೊಲೀಸ್ ವರಿಷ್ಠಾಧಿಕಾರಿ ಎಳಮಾರನ್.ಜಿ ಈ ಬಗ್ಗೆ ಮಾತನಾಡಿ, ಕ್ಷತ್ರಿಯ ಆಫ್ ಅಮೇಥಿ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಆಜಾದ್‍ಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ವಿಮಲೇಶ್ ಸಿಂಗ್ (30) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 506ರ ಐಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೆ ಸಾಮಾನ್ಯನಂತೆ ಮೆಟ್ರೋದಲ್ಲಿ ಬಂದ ಪ್ರಧಾನಿ ಮೋದಿ

    6 ದಿನಗಳ ಹಿಂದೆ ಫೇಸ್‍ಬುಕ್ ಪೋಸ್ಟ್‌ನಲ್ಲಿ ಆಜಾದ್ ಅವರನ್ನು ಅಮೇಥಿಯ ಠಾಕೂರ್‌ಗಳು ಕೊಲ್ಲುತ್ತಾರೆ ಎಂದು ಆರೋಪಿ ಬರೆದುಕೊಂಡಿದ್ದ. ಚಂದ್ರಶೇಖರ್ ಆಜಾದ್ ಮೇಲಿನ ದಾಳಿಯಲ್ಲಿ ಆರೋಪಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಆದರೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅದೇ ಪುಟದಲ್ಲಿ ಮತ್ತೊಂದು ಪೋಸ್ಟ್‌ನಲ್ಲಿ ಆಜಾದ್ ಸೊಂಟಕ್ಕೆ ಗುಂಡು ಹಾರಿಸಲಾಗಿದೆ. ಆದರೆ ಮುಂದಿನ ಬಾರಿ ಅವರು ಬದುಕುಳಿಯುವುದಿಲ್ಲ ಎಂದು ಬರೆಯಲಾಗಿದೆ. ಅಲ್ಲದೇ ಈ ವಿಚಾರದಲ್ಲಿ ಅಮಾಯಕ ರಜಪೂತ್‍ನನ್ನು ಬಂಧಿಸಿದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೀಡಲಾಗಿದೆ.

    ಬುಧವಾರ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್‍ನಲ್ಲಿ ಅಪರಿಚಿತ ದುಷ್ಕರ್ಮಿಗಳು ಆಜಾದ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗುಂಡು ಅವರ ಬೆನ್ನಿಗೆ ತಗುಲಿ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಕರಣ ಸಂಬಂಧ ದಾಳಿಗೆ ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ಚಂದ್ರಶೇಖರ್ ಆಜಾದ್ ಮಾತನಾಡಿ, ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಅವರು ರಾಜ್ಯದಲ್ಲಿ ಅಪರಾಧಗಳನ್ನು ಪೋಷಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್‍ಗಳ ವಿಲೀನ ಪರಿಣಾಮ – ವಿಶ್ವದ ಮೌಲ್ಯಯುತ ಬ್ಯಾಂಕ್ ಆಗಿ ಹೊರಹೊಮ್ಮಿದ HDFC

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

    ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

    ಲಕ್ನೋ: ಭೀಮ್ ಆರ್ಮಿ (Bhim Army) ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ಮೇಲೆ ಗುಂಡಿನ ದಾಳಿ ನಡೆದಿದೆ.

    ಬುಧವಾರ ಸಂಜೆ ಉತ್ತರ ಪ್ರದೇಶದ ಸಹರಾನ್‌ಪುರ (Saharanpur) ಜಿಲ್ಲೆಯಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಆಜಾದ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸಹರಾನ್‌ಪುರ ಎಸ್‌ಎಸ್‌ಪಿ ಡಾ.ವಿಪಿನ್ ತಾಡಾ ಪ್ರತಿಕ್ರಿಯಿಸಿ, ಅಂಬೇಡ್ಕರ್‌ವಾದಿ ಕಾರ್ಯಕರ್ತರ ಬೆಂಗಾವಲು ವಾಹನದ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದುಬಾರಿಯಾದ ಟೊಮೆಟೋ ದರ- ರೈತರು ಫುಲ್ ಖುಷ್

    ಹರ್ಯಾಣ ನೋಂದಣಿ ಸಂಖ್ಯೆಯ ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಬಂದ ನಾಲ್ಕು ಮಂದಿ ಗುಂಡಿನ ದಾಳಿ ನಡೆಸಿದ್ದಾರೆ. ಚಂದ್ರಶೇಖರ್ ಆಜಾದ್ ಅವರು ಆರೋಗ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

     

    ಚಂದ್ರಶೇಖರ್ ಆಜಾದ್ ಅವರು ಫಾರ್ಚೂನರ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಂಡು ಕಾರಿನ ಬಾಗಿಲು ಮತ್ತು ಸೀಟ್‌ ಮೇಲೆ ಬುಲೆಟ್‌ ಗುರುತು ಪತ್ತೆಯಾಗಿದೆ. ದುಷ್ಕರ್ಮಿಗಳು ಹಿಂಭಾಗದಿಂದ ಗುಂಡಿನ ದಾಳಿ ನಡೆಸಿದ್ದಾರೆ.

  • UP Election: ಗೋರಖ್‌ಪುರ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಸ್ಪರ್ಧೆ

    UP Election: ಗೋರಖ್‌ಪುರ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಸ್ಪರ್ಧೆ

    ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರ್ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸ್ಪರ್ಧಿಸಲಿದ್ದಾರೆ.

    ಫೆಬ್ರವರಿ-ಮಾರ್ಚ್ ಅವಧಿಯಲ್ಲಿ ನಡೆಯುವ ಚುನಾವಣೆಯಲ್ಲಿ ಗೋರಖ್‌ಪುರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸುವುದಾಗಿ ದಲಿತ ನಾಯಕ ಚಂದ್ರಶೇಖರ್ ಆಜಾದ್ ತಿಳಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದಲ್ಲಿ ಸ್ಪರ್ಧಿಸಲಿದ್ದಾರೆಂದು ಬಿಜೆಪಿ ಘೋಷಿಸಿತ್ತು. ಅದಾದ ಬಳಿಕ ಭೀಮ್ ಆರ್ಮಿ ಪಕ್ಷ ಆಜಾದ್ ಸ್ಪರ್ಧೆ ವಿಚಾರವನ್ನು ತಿಳಿಸಿದೆ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

    ಯೋಗಿ ಆದಿತ್ಯನಾಥ್ ಅವರು ಮೊದಲ ಬಾರಿಗೆ ಶಾಸಕ ಸ್ಥಾನದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಆದರೆ ಬಿಜೆಪಿಯ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿಯಾಗಿರುತ್ತಾರೆ. ಆದರೆ ಎಸ್‌ಪಿ ಈ ಕ್ಷೇತ್ರದಲ್ಲಿ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ದಲಿತ ನಾಯಕ ಚಂದ್ರಶೇಖರ್ ಆಜಾದ್‌ಗೂ ಕೂಡ ಇದು ಮೊದಲ ಚುನಾವಣೆಯಾಗಿದೆ.

    34 ವಯಸ್ಸಿನ ಆಜಾದ್, 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿ ಸುದ್ದಿಯಾಗಿದ್ದರು. ನಂತರ ಚುನಾವಣೆಯಿಂದ ಹಿಂದೆ ಸರಿದರು. ಆ ಸಮಯದಲ್ಲಿ ತನಗೆ ಯಾವುದೇ ಪಕ್ಷವಿಲ್ಲದ ಕಾರಣ ಮಾಯಾವತಿ ಅವರ ಬಿಎಸ್‌ಪಿ ಹಾಗೂ ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಉತ್ತಮ ಎಂದು ತಿಳಿಸಿದ್ದರು. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

    ಸಿಎಂ ವಿರುದ್ಧ ಗೋರಖ್‌ಪುರದಲ್ಲಿ ಕಣಕ್ಕಿಳಿಯುವ ಸಂಬಂಧ ಪ್ರತಿಕ್ರಿಯಿಸಿರುವ ಆಜಾದ್, ನನಗೆ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಲ್ಲ. ಆದರೆ ಯೋಗಿ ಆದಿತ್ಯನಾಥ್ ಅವರನ್ನು ಸೋಲಿಸುವುದು ಮುಖ್ಯ. ಹೀಗಾಗಿ ಅವರು ಎಲ್ಲೆಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ನಾನೂ ಸ್ಪರ್ಧಿಸುತ್ತೇನೆ ತಿಳಿಸಿದ್ದಾರೆ.

    ಗೋರಖ್‌ಪುರ ಅಥವಾ ಪೂರ್ವ ಉತ್ತರ ಪ್ರದೇಶದಲ್ಲಿ ಭೀಮ್ ಆರ್ಮಿ ಪಕ್ಷ ಯಾವುದೇ ನೆಲೆಯನ್ನು ಹೊಂದಿಲ್ಲ. ಈ ಕ್ಷೇತ್ರ 1989ರಿಂದಲೂ ಬಿಜೆಪಿ ತೆಕ್ಕೆಯಲ್ಲಿದೆ. ಒಮ್ಮೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಹೊರತುಪಡಿಸಿದರೆ, ಇಲ್ಲಿ ಬಿಜೆಪಿ ಪ್ರಬಲವಾಗಿದೆ.

  • ಕೃಷ್ಣನ ಊರಿನಲ್ಲಿ ಇಂದು ‘ರಾವಣ್’ನ ಆರ್ಭಟ

    ಕೃಷ್ಣನ ಊರಿನಲ್ಲಿ ಇಂದು ‘ರಾವಣ್’ನ ಆರ್ಭಟ

    ಉಡುಪಿ: ಕರಾವಳಿಯಲ್ಲಿ ಪೌರತ್ವದ ಕಿಚ್ಚು ಆರುವ ಲಕ್ಷಣಗಳೇ ಕಾಣುತ್ತಿಲ್ಲ. ಎನ್ಆರ್​ಸಿ, ಸಿಎಎ ವಿರುದ್ಧ ಮತ್ತು ಪರ ಪ್ರತಿಭಟನಾ ಸಭೆಗಳು ಖಾಯಾಂ ಆಗಿವೆ. ಈ ನಡುವೆ ಉಡುಪಿಯಲ್ಲಿ ಎನ್ಆರ್​ಸಿ, ಸಿಎಎ ಹೋರಾಟಕ್ಕೆ ಇಂದು ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅಲಿಯಾಸ್ ರಾವಣ್ ಎಂಟ್ರಿ ಕೊಡುತ್ತಿದ್ದಾರೆ.

    ಹೌದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಬಹುಚರ್ಚಿತ ಕಾಯ್ದೆ ಸಿಎಎ. ಕಾಯ್ದೆ ಜಾರಿಯಾದ ದಿನದಿಂದ ದೇಶಾದ್ಯಂತ ಪೌರತ್ವದ ಕಿಚ್ಚು ಹತ್ತಿಕೊಂಡಿದೆ. ಮುಸಲ್ಮಾನ ಸಂಘಟನೆಗಳು , ಪ್ರಗತಿಪರರು, ದಲಿತ ಸಮಿತಿಗಳ ಹಿಂದೆ ಕಾಂಗ್ರೆಸ್ ನಿಂತು ಪ್ರತಿಭಟಿಸುತ್ತಿದೆ. ರಾಜ್ಯದಲ್ಲಿ ಈ ಬಗ್ಗೆ ಅತಿ ಹೆಚ್ಚು ಪ್ರತಿಭಟನೆ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದೀಗ ಮತ್ತೆ ಉಡುಪಿಯಲ್ಲಿ ಸಿಎಎ ವಿರುದ್ಧ ಇಂದು ಜನಾಕ್ರೋಶ ವ್ಯಕ್ತವಾಗಲಿದೆ. ಭೀಮ್ ಆರ್ಮಿ ಹೋರಾಟದ ನಾಯಕ ಚಂದ್ರಶೇಖರ್ ಆಜಾದ್ ಅಲಿಯಾಸ್ ರಾವಣ್ ಉಡುಪಿಗೆ ಬರುತ್ತಿದ್ದಾರೆ. ಉಡುಪಿ ನಗರದ ಕ್ರಿಶ್ಚನ್ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

    ಮುಸ್ಲಿಂ ಒಕ್ಕೂಟ ಮುಖಂಡ ಯಾಸಿನ್ ಮಲ್ಪೆ ಮಾತನಾಡಿ, ದೇಶದ ಜನರ ಭಾವನೆಯನ್ನು ನುಚ್ಚುನೂರು ಮಾಡಿರುವ ಸಿಎಎ ನಮಗೆ ಬೇಡ ಎಂದು ಒತ್ತಾಯಿಸುವ ಸಮಾವೇಶ ಇದು. ಎಲ್ಲಾ ಜಾತಿ, ಎಲ್ಲಾ ಧರ್ಮದ ಜನ ಪಕ್ಷ ಬೇಧ ಬದಿಗಿಟ್ಟು ಬರಲಿದ್ದಾರೆ ಎಂದರು.

    ಸಿಐಎ ಕಾನೂನನ್ನು ವಿರೋಧಿಸಿ ಸುಮಾರು ಇಪ್ಪತ್ತೈದು ಸಾವಿರ ಮಂದಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಸಹಬಾಳ್ವೆ ಸಂಘಟನೆ ಪ್ರತಿಭಟನಾ ಸಭೆಯ ಜವಾಬ್ದಾರಿ ಹೊತ್ತಿದ್ದು, ಸಮಾನ ಮನಸ್ಕ ಸಂಘಟನೆಗಳು ಕೈ ಜೋಡಿಸಿದೆ. ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎರಡು ಎಸ್‍ಪಿ, ಎರಡು ಕೆಎಸ್‌ಆರ್‌ಪಿ, ನಾಲ್ಕು ಡಿಎಆರ್ ಸೇರಿದಂತೆ ಉಡುಪಿ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೆರವಣಿಗೆಗೆ ಪೊಲೀಸರು ಪರವಾನಗಿ ಕೊಟ್ಟಿಲ್ಲ.

    ಪಬ್ಲಿಕ್ ಟಿವಿ ಜೊತೆ ಎಎಸ್‍ಪಿ ಕುಮಾರ ಚಂದ್ರ ಮಾತನಾಡಿ, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆಯಕಟ್ಟಿನ ಜಾಗದಲ್ಲಿ ಸಿಸಿಟಿವಿ ಅಳವಡಿಸಿದ್ದೇವೆ. ಹೊರ ಜಿಲ್ಲೆಯ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡುತ್ತೇವೆ. ಮೆರವಣಿಗೆ ಮಾಡಲು ಪರವಾನಗಿ ಕೊಟ್ಟಿಲ್ಲ ಎಂದು ತಿಳಿಸಿದರು.

    ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ವಿವಾದಾತ್ಮಕ ಭಾಷಣಕ್ಕೆ ಪ್ರಸಿದ್ಧಿ ಹೊಂದಿದವರು. ನೂರಾರು ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡು ಜೈಲಿಗೆ ಹೋದವರು. ಆಜಾದ್ ಮಾತು ಕೇಳಲು ಪ್ರತಿಭಟನಾಕಾರರು ಕಾತರರಾಗಿದ್ದರೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರಧಾನ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಸಮಾವೇಶದಲ್ಲಿ ಮುಸ್ಲಿಂ ಮಹಿಳೆಯರಿಗೆ ಅವಕಾಶ ಕೊಟ್ಟಿಲ್ಲ ಎಂಬುದು ಬಹುಚರ್ಚೆಗೀಡಾಗಿತ್ತು. ಹೀಗಾಗಿ ಉಡುಪಿಯ ಸಮಾವೇಶಕ್ಕೆ ಮುಸ್ಲಿಂ ಮಹಿಳೆಯರನ್ನು ಆಹ್ವಾನಿಸಲಾಗಿದೆ. ಆದ್ದರಿಂದ ಹಲವಾರು ವಿಚಾರಗಳಿಂದ ಉಡುಪಿಯ ಸಿಎಎ ವಿರುದ್ಧದ ಹೋರಾಟ ಕುತೂಹಲದ ಕೇಂದ್ರ ಬಿಂದುವಾಗಿದೆ.