Tag: bhima naik

  • ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರು: ಕಾಂಗ್ರೆಸ್ ಶಾಸಕ

    ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರು: ಕಾಂಗ್ರೆಸ್ ಶಾಸಕ

    ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಿಂಗಾಯಿತ ಸಮುದಾಯದ ಪ್ರಶ್ನಾತೀತ ನಾಯಕರು. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಗೆಯಬಾರದು. ಅವರು ಸಿಎಂ ಆಗಿ ಮುಂದುವರಿದರೆ ಅದು ಕಾಂಗ್ರೆಸ್ ಪಕ್ಷಕ್ಕೂ ಅನುಕೂಲ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಹೇಳಿದರು.

    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಎರಡು ವರ್ಷದಲ್ಲಿ ಹಗರಿಬೊಮ್ಮನಹಳ್ಳಿ ಕೇತ್ರಕ್ಕೆ 10 ಕೋಟಿ ರೂ. ಬಂದಿದೆ. ಅನುದಾನದಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ಆದರೆ ಸಿದ್ದರಾಮಯ್ಯ ಅವರ ಸರ್ಕಾರ ರಚನೆಯಾದ ಸಂದರ್ಭದಲ್ಲಿ 167 ಭರವಸೆಗಳನ್ನು ಈಡೇರಿಸದರು ಎಂದರು.

    ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾದಿಂದ ಮೃತಪಟ್ಟವರ ಡೆತ್ ಸರ್ಟಿಫಿಕೇಟ್ ಸಿಗುತ್ತಿಲ್ಲ. ಕೊರೊನಾ ಸಮಯದಲ್ಲಿ ಸಾಕಷ್ಟು ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಅದು ಯಾರಿಗೆ ತಲುಪಿದ? ಕಾಂಗ್ರೆಸ್ ಪಕ್ಷದ ಶಾಸಕರು ಇರೋ ಕ್ಷೇತ್ರಗಳಿಗೆ ಅನುದಾನ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ಎಲ್ಲರಿಗೂ ಅನುಕೂಲವಾಗಿತ್ತು ಎಂದರು.

  • ತಾಯಿಗೆ ಚಿಕಿತ್ಸೆ ಕೊಡಿಸಲು ಹಣವಿಲ್ಲದೆ ಯುವತಿಯ ಪರದಾಟ- ಶಾಸಕ ಭೀಮಾ ನಾಯಕ್ ಸಹಾಯ

    ತಾಯಿಗೆ ಚಿಕಿತ್ಸೆ ಕೊಡಿಸಲು ಹಣವಿಲ್ಲದೆ ಯುವತಿಯ ಪರದಾಟ- ಶಾಸಕ ಭೀಮಾ ನಾಯಕ್ ಸಹಾಯ

    ಬಳ್ಳಾರಿ: ಲಾಕ್‍ಡೌನ್‍ನಿಂದಾಗಿ ಬಹುತೇಕ ಬಡ ಕುಟುಂಬಗಳು ದಿಕ್ಕು ಕಾಣದೆ ಶೋಚನೀಯ ಸ್ಥಿತಿಗೆ ಬಂದು ತಲುಪಿವೆ. ಇದೀಗ ಜಿಲ್ಲೆಯಲ್ಲಿ ಯುವತಿಯೊಬ್ಬಳು ತನ್ನ ತಾಯಿಯನ್ನು ಆಸ್ಪತ್ರೆಗೆ ಸೇರಿಸಲಾಗದ ಪರಿಸ್ಥಿತಿಯಲ್ಲಿ ಟಿಕ್‍ಟಾಕ್ ವಿಡಿಯೋ ಮೊರೆಹೋಗಿದ್ದಾಳೆ. ತಕ್ಷಣ ಯುವತಿಗೆ ಸ್ಪಂದಿಸಿದ ಶಾಸಕರೊಬ್ಬರು ಸಹಾಯ ಮಾಡಿದ್ದಾರೆ.

    ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ಪಟ್ಟಣದ ನಿವಾಸಿ ಜೋತಿ ಕಟ್ಟಿಮನಿ ತಾಯಿಗೆ ಕಳೆದ ಎರಡು ವರ್ಷಗಳಿಂದ ಪಾರ್ಶ್ವವಾಯು ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದಾರೆ. ಅಲ್ಲದೇ ಕಳೆದ 15 ದಿನಗಳ ಹಿಂದೆ ತಂದೆಯೂ ಅನಾರೋಗ್ಯದ ಹಿನ್ನೆಲೆಯಲ್ಲಿ ಸಾವಿಗೀಡಾದ್ದಾರೆ. ಹೀಗಾಗಿ ತನ್ನ ತಾಯಿಯನ್ನು ಉಳಿಸಿಕೊಳ್ಳುವ ಹಂಬಲದಿಂದ ಟಿಕ್‍ಟಾಕ್ ವಿಡಿಯೋ ಮೂಲಕ ತನ್ನ ಅಸಹಾಯಕತೆ ತೋಡಿಕೊಂಡಿದ್ದಳು.

    ಯುವತಿಯ ಅಸಹಾಯಕತೆಯ ವಿಡಿಯೋ ಸ್ಥಳೀಯ ಶಾಸಕರಾದ ಭೀಮಾ ನಾಯಕ್ ಗಮನಕ್ಕೆ ಬಂದಿದೆ. ತಕ್ಷಣ ಭೀಮಾ ನಾಯಕ್ ತಹಶೀಲ್ದಾರ್ ಆಶಪ್ಪ ಪೂಜಾರಿಗೆ ಯುವತಿಯ ಮನೆಗೆ ಭೇಟಿ ನೀಡುವಂತೆ ಆದೇಶ ಮಾಡಿದ್ದಾರೆ. ಶಾಸಕರು ಮಾತಿನಂತೆ ತಹಶೀಲ್ದಾರ್ ಯುವತಿಯ ಸಹಾಯಕ್ಕೆ ಬಂದಿದ್ದು, ಯುವತಿಯ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಅಷ್ಟೇ ಅಲ್ಲದೇ ಒಂದು ತಿಂಗಳಿಗೆ ಮನೆಗೆ ಬೇಕಾಗುವ ಅಗತ್ಯ ವಸ್ತುಗಳನ್ನು ಶಾಸಕರು ನೀಡಿದ್ದಾರೆ. ಇತ್ತೀಚೆಗಷ್ಟೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಪವಿತ್ರ ಅರಭಾವಿ ಕೂಡ ತಾಯಿ ಔಷಧಿಗಾಗಿ ಟಿಕ್‍ಟಾಕ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಳು. ಈ ಬಗ್ಗೆ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದು, ಪವಿತ್ರ ತಾಯಿಗೆ ಔಷಧಿ ತಲುಪಿಸಿದ್ದರು.

  • ಇಂದು ಕೆಎಂಎಫ್ ಅಧ್ಯಕ್ಷ ಪಟ್ಟಕ್ಕೆ ಚುನಾವಣೆ – ರೇವಣ್ಣಗೆ ಗದ್ದುಗೆ ಪಕ್ಕಾ

    ಇಂದು ಕೆಎಂಎಫ್ ಅಧ್ಯಕ್ಷ ಪಟ್ಟಕ್ಕೆ ಚುನಾವಣೆ – ರೇವಣ್ಣಗೆ ಗದ್ದುಗೆ ಪಕ್ಕಾ

    ಬೆಳಗಾವಿ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇತ್ತ ದೋಸ್ತಿ ನಾಯಕರ ಮೈತ್ರಿಗೆ ಕೊನೆಯ ಮೊಳೆ ಬಿದ್ದಿದೆ. ಅಧಿಕಾರದಾಹಿ ಎಚ್.ಡಿ ರೇವಣ್ಣ ಕೆಎಂಎಫ್ ಅಧ್ಯಕ್ಷರಾಗಲು ಮೈತ್ರಿಯನ್ನೇ ಮುರಿದು ಬಿಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾಲಾಗಬೇಕಿದ್ದ ಕೆಎಂಎಫ್ ಅಧ್ಯಕ್ಷ ಪಟ್ಟ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಕೈ ತಪ್ಪುವುದು ಬಹುತೇಕ ಖಚಿತವಾಗಿದೆ.

    ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಇದಕ್ಕಾಗಿಯೇ ಮಾಜಿ ಸಚಿವ ರೇವಣ್ಣ ಅವರು ನಾಲ್ವರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನ ಹೈಜಾಕ್ ಮಾಡಿ ತಮ್ಮತ್ತ ಸೆಳೆದುಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿವಕುಮಾರ್ ರೇವಣ್ಣರಿಗೆ ಎಷ್ಟೇ ಮನವೊಲಿಸಿದ್ರು ಪ್ರಯೋಜನವಾಗಿಲ್ಲ ಎಂದು ಹೇಳಲಾಗಿತ್ತು.

    ಕೆಎಂಎಫ್ ಅದ್ಯಕ್ಷ ಚುನಾವಣೆಯಲ್ಲಿ ಐವರು ಕಾಂಗ್ರೆಸ್ ಬೆಂಬಲಿತ, ಮೂವರು ಜೆಡಿಎಸ್, ಓರ್ವ ಬಿಜೆಪಿ ಹಾಗೂ ಮೂವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬೆಂಬಲಿತ ನಿರ್ದೇಶಕರಿದ್ದು ನಾಲ್ವರು ಸರ್ಕಾರದ ನಾಮನಿರ್ದೇಶಿತ ಸದಸ್ಯರಿದ್ದಾರೆ. ಸದ್ಯ ರೇವಣ್ಣ ಬಳಿ 7 ನಿರ್ದೇಶಕರಿದ್ದು, ಐವರು ಮಾತ್ರ ಶಾಸಕ ಭೀಮಾನಾಯ್ಕ್ ಬೆಂಬಲಕ್ಕೆ ನಿಂತಿದ್ದಾರೆ.

    ಇಂದು ನಡೆಯಲಿರುವ ಚುನಾವಣೆಯಲ್ಲಿ ಬಹುತೇಕ ರೇವಣ್ಣ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಹೀಗಾಗಿ ಕೊನೆ ಪ್ರಯತ್ನವಾಗಿ ಸಿದ್ದರಾಮಯ್ಯ, ಇಂದು ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಲಿದ್ದಾರೆ. ಭಾನುವಾರ ರಾತ್ರಿ ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾತಾನಾಡಿದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್, ನಾಮಪತ್ರ ಸಲ್ಲಿಸಲು ನಮ್ ನಾಯಕರು ಹೇಳಿದ್ದಾರೆ. ಹೈಜಾಕ್ ಆದವರು ವಾಪಸ್ ಬರ್ತಾರೆ. ಚುನಾವಣೆಯಲ್ಲಿ ಖಂಡಿತಾ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ರೇವಣ್ಣ ಕೈತಪ್ಪಿದ ಕೆಎಂಎಫ್ ಪಟ್ಟ ಭೀಮಾನಾಯ್ಕ್ ಪಾಲು

    ರೇವಣ್ಣ ಕೈತಪ್ಪಿದ ಕೆಎಂಎಫ್ ಪಟ್ಟ ಭೀಮಾನಾಯ್ಕ್ ಪಾಲು

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಮಂತ್ರಿ ಸ್ಥಾನದ ಜೊತೆಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದರು. ಆದರೆ ಈಗ ಕೆಎಂಎಫ್ ಪಟ್ಟದ ಮೇಲೆ ಕಣ್ಣಿಟ್ಟಿದ್ದ ರೇವಣ್ಣಗೆ ನಿರಾಸೆಯಾಗಿದೆ.

    ಕೆಎಂಎಫ್ ಅಧ್ಯಕ್ಷ ಸ್ಥಾನ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರ ಪಾಲಾಗಿದೆ. ಮೊದಲು ನನಗೆ ಅಸಮಾಧಾನ ಇದ್ದಿದ್ದು ನಿಜ. ಆದರೆ ಈಗ ಅಸಮಾಧಾನ ಇಲ್ಲ. ಕೆಎಂಎಫ್ ಅಧ್ಯಕ್ಷರ ವಿಚಾರದಲ್ಲಿ ರಾಜೀ ಇಲ್ಲ. ಕಾಂಗ್ರೆಸ್ ಅತೀ ಹೆಚ್ಚು ನಿರ್ದೇಶಕರನ್ನ ಹೊಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಬಾರಿ ಕೆಎಂಎಫ್ ವಿಚಾರದಲ್ಲಿ ರಾಜೀ ಇಲ್ಲವೇ ಇಲ್ಲ. ಸರ್ಕಾರ ಉಳಿಸುವ ನಿಟ್ಟಿನಲ್ಲಿ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಸಭೆ) ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಟ್ಟಿಲ್ಲ ಅಂದರೆ ಬೇರೆ ಶಾಸಕರಂತೆ ನನ್ನ ದಾರಿ ನೋಡಿಕೊಳ್ಳುತ್ತೇನೆ ಎಂದು ಭೀಮಾನಾಯ್ಕ್ ಹೇಳಿದ್ದರು.

    ಭೀಮಾನಾಯ್ಕ್ ಮಾತಿಗೆ ಸಿಎಂ ಬೆದರಿದ್ದಾರೆ ಎನ್ನಲಾಗಿದೆ. ಹಾಗಾಗಿ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಅಂದಹಾಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಭೀಮಾನಾಯ್ಕ್ ನಡುವೆ ತೀವ್ರ ಫೈಟ್ ಶುರುವಾಗಿತ್ತು.

    ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಳಿ ರೇವಣ್ಣ ಬೇಡಿಕೆ ಇಟ್ಟಿದ್ದರು. ಎಚ್‍ಡಿಡಿ ಅವರೂ ಕೂಡ ಸಮ್ಮತಿ ಸೂಚಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಭೀಮಾನಾಯ್ಕ್ ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

  • ಸಿದ್ದರಾಮಯ್ಯ ಮಂಜೂರು ಮಾಡಿದ್ದ ಯೋಜನೆಗೆ ಸ್ವಪಕ್ಷೀಯ ಸಚಿವನೇ ಅಡ್ಡಿ

    ಸಿದ್ದರಾಮಯ್ಯ ಮಂಜೂರು ಮಾಡಿದ್ದ ಯೋಜನೆಗೆ ಸ್ವಪಕ್ಷೀಯ ಸಚಿವನೇ ಅಡ್ಡಿ

    ಬಳ್ಳಾರಿ: ಜಿಲ್ಲೆಯಲ್ಲಿ ಸೇಡಿನ ರಾಜಕೀಯ ಆರಂಭವಾಯ್ತಾ ಎನ್ನುವ ಅನುಮಾನವೊಂದು ಮೂಡಿದೆ. ಯಾಕೆಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ ಕಾಮಗಾರಿಗೆ ಸ್ವಪಕ್ಷೀಯ ಸಚಿವನಿಂದಲೇ ಅಡ್ಡಿಯಾಗಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ಮುಜುರಾಯಿ ಸಚಿವ ಪಿಟಿ ಪರಮೇಶ್ವರ್ ನಾಯಕ್ ಹಾಗೂ ಶಾಸಕ ಭೀಮಾ ನಾಯ್ಕೆ ನಡುವೆ ನೀರಾವರಿ ಯೋಜನೆಗಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಮೂಲಕ ಬಳ್ಳಾರಿಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ನಾಯಕರ ಜಗಳ ಬೀದಿಗೆ ಬಂದಿದೆ. ಭೀಮಾ ನಾಯ್ಕ್ ಹೀಗೆ ರೈತ ಸಭೆಯಲ್ಲಿ ಸಚಿವ ಪಿಟಿ ಪರಮೇಶ್ವರ್ ನಾಯ್ಕ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ವಿರುದ್ಧ ಪರಮೇಶ್ವರ್ ನಾಯ್ಕ್ ಸೇಡು ತೀರಿಸಿಕೊಳ್ಳಲು ಹಗರಿಬೊಮ್ಮನಹಳ್ಳಿಯ ಜನರ 50 ವರ್ಷದ ಕನಸಾಗಿರುವ 26 ಹಳ್ಳಿಗೆ ಜೀವನಾಡಿಯಾಗುವ ಮಾಲವಿ ಜಲಾಶಯಕ್ಕೆ ನೀರುಣಿಸುವ ಯೋಜನೆಗೆ ಅಡ್ಡಿ ಪಡಿಸಿದ್ದಾರೆ ಆರೋಪ ಕೇಳಿಬಂದಿದೆ.

    ಅಡ್ಡಿ ಯಾಕೆ?:
    ಕಾಮಗಾರಿ ಕೆಲಸದಲ್ಲಿ ಪರ್ಸೆಂಟೆಜ್ ಸಿಕ್ಕಿಲ್ಲ ಎಂದು ಪಿಟಿಪಿ ಯೋಜನೆಗೆ ಅಡ್ಡಿ ಪಡಿಸುತ್ತಿದ್ದಾರೆ. ನಾಮಫಲಕದಲ್ಲಿ ತನ್ನ ಹೆಸರು ಹಾಕುವಂತೆ ಪಿಟಿಪಿ ಮಸಲತ್ತು ಹಾಕಿದ್ದಾರೆ. ಇವನ್ಯಾವ ಸಚಿವರು ಯೋಜನೆ ಭೂಮಿ ಪೂಜೆ ಮಾಡೋಕೆ? ಎರಡು ವರ್ಷದಿಂದ ಪಿಟಿಪಿ ಕಿರುಕುಳ ಕೊಡುತ್ತಿದ್ದಾನೆ. ಈ ವಿಷಯವನ್ನ ಸಿದ್ದರಾಮಯ್ಯ, ಎಂಬಿ ಪಾಟೀಲ್ ಸೇರಿ ಎಲ್ಲರ ಗಮನಕ್ಕೂ ತಂದಿದ್ದರೂ ಬಗೆ ಹರಿದಿಲ್ಲ. ಈಗ ನನ್ನ ಕೈಯಲ್ಲಿ ತಡಿಯೋಕ್ ಆಗಲ್ಲ, ಒಂದಲ್ಲ ಹತ್ತು ಸಾವಿರ ರೈತರನ್ನ ಸಚಿವನ ಮನೆ ಮುಂದೆ ಸೇರಿಸ್ತೀನಿ ಎಂದು ಪರಮೇಶ್ವರ್ ನಾಯ್ಕ್ ಹೇಳುವ ಮೂಲಕ ರೈತರ ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಯೋಜನೆ ಹಿನ್ನೆಲೆಯೇನು?:
    ಹಗರಿಬೊಮ್ಮನಹಳ್ಳಿ ಕ್ಷೇತ್ರದ 26 ಹಳ್ಳಿಗೆ ನೀರುಣಿಸುವ ಮಾಲವಿ ಜಲಾಶಯಕ್ಕೆ ತುಂಗಭದ್ರಾ ಡ್ಯಾಂ ಹಿನ್ನೀರಿನಿಂದ ನೀರುಣಿಸಲು 153 ಕೋಟಿ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಭೂಮಿ ಪೂಜೆ ಮಾಡಿದ್ದರು. ಆದರೆ ಒಂದೂವರೆ ವರ್ಷವಾದರೂ ಯೋಜನೆ ಪೂರ್ಣವಾಗಿಲ್ಲ. ಯೋಜನೆ ವಿಳಂಬಕ್ಕೆ ಸಚಿವರು ಕಾರಣ ಎಂದು ಶಾಸಕ ಭೀಮಾನಾಯ್ಕ್ ಆರೋಪಿಸುತ್ತಿದ್ದಾರೆ.

    ಮಾಲವಿಗೆ ನೀರೊಯ್ಯಲು ಹೂವಿನಹಡಗಲಿ ಕ್ಷೇತ್ರದ ರಾಜೊಳ್ಳಿಯ ಬಳಿ ಜಾಕ್ವೆಲ್ ಕೂರಿಸಿ, ಪೈಪ್ ಲೈನ್ ಮಾಡಬೇಕು. ಹೀಗಾಗಿ ತನ್ನ ಕ್ಷೇತ್ರದ ರೈತನ ನೆರವಿನಿಂದ ಸಚಿವ ಪಿಟಿಪಿ ಈ ಯೋಜನೆ ಪೂರ್ಣವಾಗಲು ಬಿಡ್ತಿಲ್ಲ ಎಂದು ಭೀಮಾನಾಯಕ್ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.