Tag: bhima river

  • ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

    ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

    – ಭೀಮಾ ನದಿ ಪ್ರವಾಹಕ್ಕೆ ಕೊಚ್ಚಿ ಹೋದ ನಿರ್ಮಾಣ ಹಂತದ ಸೇತುವೆ

    ಕಲಬುರಗಿ: ಮಳೆ ನಿಂತ್ರೂ ಮಳೆ ಹನಿ ನಿಂತಿಲ್ಲ ಎನ್ನೋ ಮಾತಿನಂತೆ ಸದ್ಯ ಭೀಮಾತೀರದಲ್ಲಿ ಪ್ರವಾಹವೇನೋ ಕಡಿಮೆಯಾಗಿದೆ. ಆದ್ರೆ ಪ್ರವಾಹ ತಂದಿಟ್ಟ ಆತಂಕಗಳು ಮಾತ್ರ ಇನ್ನು ಬೆಂಬಿಡದೇ ಅಲ್ಲಿನ ಅನ್ನದಾತರನ್ನು ಕಾಡುತ್ತಿದೆ. ಇದೀಗ ಜೆಡಿಎಸ್ ನಿಯೋಗವು (JDS delegation) ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

    ಹೀಗೆ ಒಂದೆಡೆ ಕಿತ್ತು ಹೋಗಿರುವ ಸೇತುವೆ ಸ್ಲ್ಯಾಬ್‌ಗಳು, ಇನ್ನೊಂದೆಡೆ ಮಳೆ ಹೊಡೆತಕ್ಕೆ ಮಣ್ಣು ಪಾಲಾಗಿರೋ ಪಪ್ಪಾಯ ಹಾಗೂ ಕಲ್ಲಂಗಡಿ ಬೆಳೆಗಳು. ಕಲಬುರಗಿ (Kalaburagi) ಜಿಲ್ಲೆ ಜೇವರ್ಗಿಯಲ್ಲಿ ಈ ಬಾರಿ ಸುರಿದ ಭಾರೀ ಮಳೆ ಹಾಗೂ ಭೀಮಾ ಪ್ರವಾಹದಿಂದಾಗಿ ಜಿಲ್ಲೆಯ ಜನರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಆಗಿದೆ. ಈಗಾಗಲೇ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟರ್‌ಗಿಂತ ಬೆಳೆ ನಾಶವಾಗಿದೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ರಿಲೀಫ್‌| ಜಾಲಿವುಡ್‌ ಸ್ಟುಡಿಯೋಸ್‌ ಓಪನ್‌ಗೆ ಡಿಸಿಎಂ ಸೂಚನೆ – ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್‌

    ಜೇವರ್ಗಿ ಪಟ್ಟಣದ ರೈತ ವಿಷ್ಣು ಮಹೇಂದ್ರಕರ್ಇ ಲಕ್ಷಾಂತರ ರೂ. ಹಣ ಸಾಲ ಮಾಡಿ, 5 ಎಕ್ರೆ ಜಮೀನಿನಲ್ಲಿ ಪಪ್ಪಾಯ ಹಾಗೂ ಕಲ್ಲಂಗಡಿ ಹಣ್ಣು ಬೆಳೆದಿದ್ದು ಫಲ ಕೈಗೆ ಸಿಗುವ ಮೊದಲೇ ನಾಶವಾಗಿದೆ ಎಂದು ಗೋಳಾಡಿದ್ದಾರೆ.

    ಈ ಪ್ರವಾಹದಿಂದ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶ ಹಾಗು ಗ್ರಾಮಗಳು ಜಲಾವೃತದ ಜೊತೆಗೆ, ಜೇವರ್ಗಿಯ ನರಿಬೋಳ ಗ್ರಾಮದಿಂದ ಚಿತ್ತಾಪುರದ ಚಾಮನೂರ ಗ್ರಾಮದ ಮಧ್ಯ ಸಂಪರ್ಕ ಕಲ್ಪಿಸಲು ನಿರ್ಮಾಣವಾಗುತ್ತಿದ್ದ ಬೃಹತ್ ಸೇತುವೆಯ ಸಿಮೆಂಟ್ ಸ್ಲ್ಯಾಬ್ ಸಹ ಭೀಮಾ ನದಿ ನೀರಿನ ಹೊಡೆತಕ್ಕೆ ನೀರು ಪಾಲಾಗಿದೆ. ಸುಮಾರು 36 ಬೃಹತ್ ಸಿಮೆಂಟ್ ಸ್ಲ್ಯಾಬ್‌ಗಳು ಭೀಮಾ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು, ಸೇತುವೆಯ ಕನಸ್ಸು ಕಂಡ ಈ ಎರಡು ತಾಲೂಕಿನ ಜನರ ಆಸೆಗಳಿಗೆ ಭೀಮಾ ಪ್ರವಾಹ ತಣ್ಣೀರೆರೆಚಿದೆ.

    ಇನ್ನೂ ಭೀಮಾ ನದಿ ಪ್ರವಾಹದ ಬಗ್ಗೆ ಸಮೀಕ್ಷಾ ವರದಿ ತರಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸೂಚನೆ ಮೇರೆಗೆ ಜೆಡಿಎಸ್ ನಿಯೋಗ ಸಹ ಇದೀಗ ಕಲಬುರಗಿ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದೆ. ಹೆಚ್‌ಡಿಡಿ ಮೂಲಕ ಕೇಂದ್ರಕ್ಕೂ ಸಹ ನೆರವಿಗೆ ಮನವಿ ಹಾಕಲು ಜೆಡಿಎಸ್ ಪಕ್ಷ ಮುಂದಾಗಿದೆ..

  • ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

    ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

    ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ (Rain) ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ  (Bhima River)ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ (Vijayapura) ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

    ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 8 ಮಂದಿಯನ್ನು ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ಬೋಟ್‌ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ತಾವರಖೇಡ ಗ್ರಾಮವನ್ನು ಭೀಮಾ ನದಿಯ ನೀರು ಸುತ್ತುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ – ಭೀಮಾತೀರದಲ್ಲಿ ಪ್ರವಾಹ ಸ್ಥಿತಿ

    ಕಲಬುರಗಿಯ ಗಾಣಗಾಪೂರದ ಸಂಗಮ ಕ್ಷೇತ್ರ ಜಲಾವೃತಗೊಂಡಿದೆ. ಇತ್ತ ಮಹಾರಾಷ್ಟ್ರದ ಜಲಾಶಯಗಳಿಂದ ನಿರಂತರವಾಗಿ ನೀರು ಬಿಡ್ತಿರೋ ಪರಿಣಾಮ ಭೀಮಾ ನದಿ ಅತ್ಯಂತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೈತರ ಜಮೀನುಗಳಿಗೆ ನೀರು ನುಗ್ಗಿದ್ದು ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಇದನ್ನೂ ಓದಿ: ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

  • ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಪ್ರವಾಹ ಆತಂಕ

    ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಪ್ರವಾಹ ಆತಂಕ

    – ನದಿ ತೀರಕ್ಕೆ ತೆರಳದಂತೆ ಮೈಕ್ ಮೂಲಕ ಡಂಗೂರ

    ಕಲಬುರಗಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ (Ujjani Dam) ಭೀಮಾ ನದಿಗೆ (Bhima River) 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾ ತೀರದಲ್ಲಿ ಪ್ರವಾಹ ಆತಂಕ ಮನೆಮಾಡಿದೆ.

    ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಪರಿಣಾಮ ಅಫಜಲಪುರ, ಜೇವರ್ಗಿ ತಾಲೂಕಿನ ಅನೇಕ ಗ್ರಾಮಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಭೀಮಾತೀರದಲ್ಲಿ ಜಿಲ್ಲಾಡಳಿತ ತೀವ್ರ ಕಟ್ಟೆಚರ ವಹಿಸಿದೆ. ಕ್ಷಣದಿಂದ ಕ್ಷಣಕ್ಕೆ ಭೀಮಾ ನದಿ ಒಳಹರಿವು ಹೆಚ್ಚುತ್ತಿದ್ದು, ನದಿ ತೀರಕ್ಕೆ ಯಾರು ತೆರಳದಂತೆ ಮೈಕ್ ಮೂಲಕ ಡಂಗೂರ ಸಾರಲಾಗಿದೆ. ಸೊನ್ನ ಗ್ರಾಮದಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಡಂಗೂರ ಸಾರಿದ್ದಾರೆ. ಇದನ್ನೂ ಓದಿ: ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

    ಮಂಗಳವಾರ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ದೇವಲ ಗಾಣಗಾಪುರ, ಘತ್ತರಗಿ ಸೇತುವೆ ಹಾಗೂ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆಯಾಗಿದೆ. ಇದನ್ನೂ ಓದಿ: ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು – ಡಿಸಿ ಕಚೇರಿ ಆವರಣದಲ್ಲಿ ಸುರಿದು ಆಕ್ರೋಶ

  • ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    – ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆ
    – ಪ್ರವಾಹದ ಆತಂಕದಲ್ಲಿ ಗ್ರಾಮಸ್ಥರು

    ಕಲಬುರಗಿ: ಮಹಾರಾಷ್ಟ್ರದಲ್ಲಿ (Maharashtra) ವ್ಯಾಪಕ ಮಳೆ (Rain) ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ (Bhima River) 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಪರಿಣಾಮ ದೇವಲ ಗಾಣಗಾಪುರ, ಘತ್ತರಗಿ ಸೇತುವೆ ಹಾಗೂ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆಯಾಗಿದೆ. ಇದನ್ನೂ ಓದಿ: ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಭೀಮಾ ನದಿ ಒಳಹರಿವು ಹೆಚ್ಚುತ್ತಿದ್ದು, ನದಿ ತೀರದ ಗ್ರಾಮಸ್ಥರಲ್ಲಿ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಅಕ್ಕಪಕ್ಕದ ಊರುಗಳಿಗೆ ನದಿ ನೀರು ನುಗ್ಗುವ ಭೀತಿ ಉಂಟಾಗಿದ್ದು, ನದಿ ತೀರದ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರದಿಂದ ಇರುವಂತೆ ಕಲಬುರಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ

  • ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು – ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ

    ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು – ಎದೆಗೆ ಗುಂಡಿಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷನ ಹತ್ಯೆ

    -ಗುಂಡು ಹಾರಿಸಿ, ತಲವಾರ್‌ನಿಂದ ಹಲ್ಲೆ ಮಾಡಿ ಗ್ರಾಮ ಪಂಚಾಯಿತಿ ಎದುರೇ ಕೊಲೆ

    ವಿಜಯಪುರ: ಬೆಳ್ಳಂಬೆಳಗ್ಗೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷನ ಮೇಲೆ ಗುಂಡು ಹಾರಿಸಿ, ತಲವಾರ್‌ನಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಚಡಚಣ (Chadachan) ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ನಿಂಬರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ (Bhimanagouda Biradar) ಎಂದು ಗುರುತಿಸಲಾಗಿದ್ದು, ಭೀಮಾತೀರದ ಮಹಾದೇವ ಸಾಹುಕಾರ್‌ ಭೈರಗೊಂಡ ಅವರ (Mahadeva Bhairagond) ಪರಮಾಪ್ತ, ಬಲಗೈ ಬಂಟನಾಗಿದ್ದರು ಎಂದು ತಿಳಿದುಬಂದಿದೆ.ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    ಬುಧವಾರ (ಸೆ.3) ಬೆಳಗ್ಗೆ ಮೃತ ಭೀಮನಗೌಡ ಅವರು ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್‌ಗೆ ಆಗಮಿಸಿದ್ದರು. ಈ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಬಂದು ಕಟಿಂಗ್ ಮಾಡುವವರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಭೀಮನಗೌಡ ಅವರ ಮೇಲೆ ಫೈರಿಂಗ್ ನಡೆಸಿ, ತಲವಾರ್‌ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

    ಸದ್ಯ ಭೀಮನಗೌಡ ಅವರ ಮೃತದೇಹವನ್ನು ವಿಜಯಪುರದ (Vijayapura) ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಹಳೆಯ ವೈಷಮ್ಯದ ಹಿನ್ನೆಲೆ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ. ಆಪ್ತನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಹಾದೇವ ಭೈರಗೊಂಡ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಚಡಚಣ ಪೊಲೀಸರು (Chadachan) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಹಾಸನ | ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್‌ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ

  • ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

    ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

    – ಅಲ್ಲಲ್ಲಿ ಭೂಕುಸಿತ, ರಸ್ತೆಗುರುಳಿದ ಮರಗಳು

    ಚಿಕ್ಕಮಗಳೂರು/ಯಾದಗಿರಿ/ಶಿವಮೊಗ್ಗ: ರಾಜ್ಯದ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮುಂಗಾರು ಅಬ್ಬರ ಜೋರಾಗಿದೆ. ಭಾರೀ ಮಳೆಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಯಾದಗಿರಿಯಲ್ಲಿ (Yadagiri) ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಭೀಮಾನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಪ್ರವಾಹದ ಭೀತಿ ಎದುರಾಗಿದೆ. ಈ ಮಧ್ಯೆ ಹೈದ್ರಾಬಾದ್ ನಿಜಾಮರ ಆಳ್ವಿಕೆ ಕಾಲಾವಧಿಯಲ್ಲಿ ನಿರ್ಮಾಣವಾಗಿದ್ದ ಸೇತುವೆ ಬಿರುಕು ಬಿಟ್ಟಿದೆ. ಯಾದಗಿರಿಯಿಂದ ಹೈದ್ರಾಬಾದ್‌ಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿ.ಮೀ ವ್ಯಾಪ್ತಿಯ ಸೇತುವೆ ಇದಾಗಿದ್ದು, ಬಿರುಕಿನಿಂದ ಆತಂಕ ಎದುರಾಗಿದೆ.ಇದನ್ನೂ ಓದಿ: ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವು

    ಶಿವಮೊಗ್ಗದಲ್ಲಿ (Shivamogga) ಭಾರೀ ಮಳೆಗೆ ಭೂಕುಸಿತ ಉಂಟಾಗಿದೆ. ಹೊಸನಗರ ತಾಲೂಕಿನ ಕುಂದಗಲ್ ಗ್ರಾಮದಲ್ಲಿ ಸುಮಾರು 200ಮೀ.ನಷ್ಟು ಉದ್ದ, ಒಂದೂವರೆ ಅಡಿಯಷ್ಟು ಆಳ ಭೂಮಿ ಕುಸಿದಿದೆ. ಸಾಗರದ ಕರೂರು ಹೋಬಳಿಯ ಸುಳ್ಳಳ್ಳಿ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಬಂದ್ ಆಗಿದೆ. ಇನ್ನೂ ಆಗುಂಬೆ ಚೆಕ್‌ಪೋಸ್ಟ್ ಬಳಿ ಬೃಹತ್ ಮರ ರಸ್ತೆಗುರುಳಿ, ಕೆಲಹೊತ್ತು ಜನ ಟ್ರಾಫಿಕ್‌ನಲ್ಲಿ ಪರದಾಡಿದರು.

    ಮಲೆನಾಡಿನಲ್ಲಿ ನಿರಂತರ ಮಳೆಯಿಂದ ತುಂಗ-ಭದ್ರಾ-ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಘಟ್ಟ ಪ್ರದೇಶದಲ್ಲಿ ಮಳೆಯಿಂದ ಜಲಪಾತಗಳಿಗೆ ಜೀವಕಳೆ ಬಂದಿದೆ. ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು, ಕುಟುಂಬ ಪಾರಾಗಿದೆ. ತರೀಕೆರೆ ತಾಲೂಕಿನ ಪ್ರವಾಸಿತಾಣ ಕಲ್ಲತ್ತಿಗರಿಯಲ್ಲಿ ನಿಲ್ಲಿಸಿದ ಓಮಿನಿ ಮೇಲೆ ಬೃಹತ್ ಮರ ಬಿದ್ದು ಜಖಂಗೊಂಡಿದೆ.ಇದನ್ನೂ ಓದಿ: ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ

  • Kalaburagi | ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನಾಪತ್ತೆ

    Kalaburagi | ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನಾಪತ್ತೆ

    ಕಲಬುರಗಿ: ಭೀಮಾ ನದಿಯಲ್ಲಿ (Bhima River) ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಜೇವರ್ಗಿ (Jevargi) ತಾಲೂಕಿನ ಸರಡಗಿ ಬ್ರಿಡ್ಜ್‌ನಲ್ಲಿ ನಡೆದಿದೆ.

    ಮಹಾದೇವ್ (20) ನದಿ ಪಾಲಾದ ಯುವಕ. ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: Video Viral | ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ

    ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರಿದಿದೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಉಡುಪಿಯಲ್ಲಿ ಕೊರಗಜ್ಜನ ಪವಾಡ

  • ಕಲಬುರಗಿಯಲ್ಲಿ ಉತ್ತಮ‌ ಮಳೆ – ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

    ಕಲಬುರಗಿಯಲ್ಲಿ ಉತ್ತಮ‌ ಮಳೆ – ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

    ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Kalaburagi Rain) ಜಿಲ್ಲೆಯ ಕಮಲಾಪುರ ತಾಲೂಕಿನ ಹಿಪ್ಪರಗಾ ಗ್ರಾಮದ ಸೇತುವೆ ಮುಳುಗಡೆಯಾಗಿದ್ದು, ಕುದಮೂಡ ಹಾಗೂ ಕಲಕುಟಗಾ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

    ಮಳೆಯಿಂದಾಗಿ ಸೇತುವೆ ಮುಳುಗಡೆ (Bridge Submerged) ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಟ ನಡೆದಿದ್ದು, ಗ್ರಾಮೀಣ ಭಾಗದಲ್ಲಿ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

    ಮಹಾರಾಷ್ಟ್ರದಿಂದ ಭೀಮೆಗೆ ನೀರು
    ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಭೀಮಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಭೀಮೆಗೆ ನೀರು ಬಿಡುಗಡೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಿನ್ನೆಲೆ, ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಾ ಸೇತುವೆ ಮುಳುಗಡೆ ಹಂತಕ್ಕೆ ಬಂದು ತಲುಪಿದೆ.

    ಇನ್ನೂ ಮಹಾರಾಷ್ಟ್ರದಿಂದ ಅಪಾರ ಪ್ರಮಾಣದಲ್ಲಿ ಭೀಮೆಗೆ ನೀರು ಹರಿಬಿಟ್ಟ ಪರಿಣಾಮವಾಗಿ ಭೀಮಾ ನದಿಯ ತಟದ ಜನರಲ್ಲಿ ಪ್ರವಾಹದ ಆತಂಕ ಮನೆಮಾಡಿದೆ.

  • ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

    ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

    ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಭೀಮಾ ನದಿ (Bhima River) ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ಪ್ರವಾಹದ ಆತಂಕ ಶುರುವಾಗಿದ್ದು, ಜಿಲ್ಲಾಡಳಿತ ನದಿಗಿಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

    ಮಹಾರಾಷ್ಟ್ರ (Maharashtra) ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಅತಂಕ ಶುರುವಾಗಿದೆ. ಹೀಗಾಗಿ ಯಾದಗಿರಿ ಜಿಲ್ಲೆಯ ಭೀಮಾ ನದಿಯ ತೀರದ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಭತ್ತಿ ಹೋಗಿದ್ದ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ನದಿಯ ಭೋರ್ಗರೆತ ಹೆಚ್ಚಾಗಿದೆ.ಇದನ್ನೂ ಓದಿ: ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

    ಕಳೆದ ಒಂದು ವಾರದ ಹಿಂದಷ್ಟೇ ಸಂಪೂರ್ಣವಾಗಿ ಬರಿದಾಗಿದ್ದ ಭೀಮೆಯ ಒಡಲು ಭರ್ತಿಯಾಗಿದೆ. ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭೋರ್ಗರೆತ ಹೆಚ್ಚಾಗಿದೆ. ಹೀಗಾಗಿ ಗ್ರಾಮಸ್ಥರಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ. ನದಿಯ ಎಡ ಭಾಗದಲ್ಲಿ ಯಾದಗಿರಿ ತಾಲೂಕಿನ ಹತ್ತಾರು ಹಳ್ಳಿಗಳಿವೆ. ನದಿಯ ಬಲ ಭಾಗದಲ್ಲಿ ವಡಗೇರ ತಾಲೂಕಿನ ಹತ್ತಾರು ಹಳ್ಳಿಗಳ ಜನರಲ್ಲಿ ಪ್ರವಾಹದ ಆತಂಕ ಮನೆ ಮಾಡಿದ್ದು, ಗ್ರಾಮಸ್ಥರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

    ನದಿ ತೀರದ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಕಳೆದ ಎರಡು ದಿನಗಳಿಂದ ನದಿ ತೀರದ ಗ್ರಾಮಸ್ಥರಿಗೆ ಡಂಗೂರ ಹಾಗೂ ಮೈಕ್‌ಗಳ ಮೂಲಕ ಅನೌನ್ಸ್ಮೆಂಟ್ ಮಾಡಿ ನದಿ ದಡಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಸದ್ಯ ನದಿಗೆ ವಡಗೇರ ತಾಲೂಕಿನ ಗುರುಸಣಗಿ ಸೇತುವೆಯಿಂದ ಸುಮಾರು ಮೂರು ಸಾವಿರ ಕ್ಯುಸೆಕ್‌ನಷ್ಟು ನೀರು ಹರಿ ಬಿಡಲಾಗಿದೆ. ಹೀಗಾಗಿ ನದಿ ತೀರಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ ಸಹ ನದಿ ತೀರದಲ್ಲಿ ಮೀನು ಹಿಡಿಯುವ ಕೆಲಸಕ್ಕೆ ಮುಂದಾಗಿ ಹುಚ್ಚಾಟ ಮೆರೆಯುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಭೀಮಾ ನದಿಗೆ ಕಡಿಮೆ ನೀರಿದ್ದ ಸಮಯದಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದರು.ಇದನ್ನೂ ಓದಿ: MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

  • ಮಹಾರಾಷ್ಟ್ರದಲ್ಲಿ ಭೀಕರ ಮಳೆ – ಮೈದುಂಬಿ ಹರಿಯುತ್ತಿರುವ ಭೀಮಾ ನದಿ

    ಮಹಾರಾಷ್ಟ್ರದಲ್ಲಿ ಭೀಕರ ಮಳೆ – ಮೈದುಂಬಿ ಹರಿಯುತ್ತಿರುವ ಭೀಮಾ ನದಿ

    ವಿಜಯಪುರ: ಮಹಾರಾಷ್ಟ್ರದಲ್ಲಿ (Maharashtra) ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಜಿಲ್ಲೆಯ ಭೀಮಾ ನದಿ (Bhima River) ಮೈದುಂಬಿ ಹರಿಯುತ್ತಿದ್ದು, ಜೀವಕಳೆ ಪಡೆದಿದೆ.

    ಪುಣೆಯ (Pune) ನೀರಾ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಬಿಡಲಾಗಿದೆ. ಒಂದು ಕಡೆ ನದಿ ಮೈದುಂಬಿ ಹರಿಯುತ್ತಿದ್ದರೆ, ಇನ್ನೊಂದು ಕಡೆ ರೈತರ ಪಂಪ್‌ಸೆಟ್‌ಗಳು ನೀರಿನಲ್ಲಿ ಮುಳುಗಿ ಸಂಕಷ್ಟ ಎದುರಿಸುವಂತಾಗಿದೆ.ಇದನ್ನೂ ಓದಿ: ಆರ್‌ಸಿಬಿಯಲ್ಲಿರುವ ಅಣ್ಣ ಹುರಿದುಂಬಿಸಿದ್ರು, ನಾನು ನನ್ನ ಆಟವಾಡಿದೆ: ಜಿತೇಶ್‌ ಶರ್ಮಾ

    ವಿಜಯಪುರ (Vijayapura) ಜಿಲ್ಲೆಯ ಚಡಚಣ ತಾಲೂಕಿನ ಹಿಂಗಣಿ ಬ್ಯಾರೇಜ್‌ನ ಐದು ಗೇಟ್‌ಗಳ ಪೈಕಿ ಎರಡು ಗೇಟ್ ಮಾತ್ರ ಓಪನ್ ಮಾಡಿದ್ದು, ರೈತರಿಗೆ ಸಂಕಷ್ಟ ತಂದೊದಗಿದೆ. ಪರಿಣಾಮ ಭೀಮಾ ನದಿಯಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿ, ನೂರಾರು ಪಂಪಸೆಟ್‌ಗಳು ಮುಳುಗಿ ಹೋಗಿವೆ. ಕೆಲ ಪಂಪಸೆಟ್ ಬೋರ್ಡ್ಗಳು ನೀರಲ್ಲಿ ಕೊಚ್ಚಿಹೋಗಿ ರೈತರಿಗೆ ನಷ್ಟವಾಗಿದೆ.

    ಈ ಕುರಿತಂತೆ ಮಹಾರಾಷ್ಟ್ರ ಅಧಿಕಾರಿಗಳು ಹಿಂಗಣಿ ಬ್ಯಾರೇಜ್ ಅಧಿಕಾರಿಗಳಿಗೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದರು. ಆದರೂ ಹಿಂಗಣಿ ಬ್ಯಾರೇಜ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಪಂಪಸೆಟ್‌ಗಳು ನೀರಲ್ಲಿ ಮುಳುಗಿದ ಮೇಲೆ ಎಚ್ಚೆತ್ತ ಅಧಿಕಾರಿಗಳು ಐದು ಗೇಟ್‌ಗಳನ್ನು ಓಪನ್ ಮಾಡಿದ್ದಾರೆ.ಇದನ್ನೂ ಓದಿ: ಸದ್ಯಕ್ಕಿಲ್ಲ ಯೆಲ್ಲೊ ಲೈನ್ ಮೆಟ್ರೋ – ಸಿಗ್ನಲಿಂಗ್ ಸಮಸ್ಯೆಯಿಂದ ದಿನಾಂಕ ಮುಂದೂಡಿದ BMRCL