Tag: bhiwandi

  • 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ಸಾವು – 12 ಮಂದಿ ರಕ್ಷಣೆ

    3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ಸಾವು – 12 ಮಂದಿ ರಕ್ಷಣೆ

    ಮುಂಬೈ: ಮಹಾರಾಷ್ಟ್ರದ (Maharashtra) ಥಾನೆಯಲ್ಲಿ (Thane) ಶನಿವಾರ 3 ಅಂತಸ್ತಿನ ಕಟ್ಟಡ ಕುಸಿದ (Building Collapse) ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿರುವ ತೆರವು ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ.

    ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್‌ಡಿಆರ್‌ಎಫ್ ಹಾಗೂ ಟಿಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.

    ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 12 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಗಾಯಾಳುಗಳನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ – 9 ಮಂದಿ ಸಾವು

    ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದ್ದಾರೆ. ಘಟನೆಯಲ್ಲಿ ಬದುಕುಳಿದಿರುವ ಇಬ್ಬರು ಮಕ್ಕಳ ಬಗ್ಗೆಯೂ ವಿಚಾರಿಸಿದ್ದಾರೆ. ಸರ್ಕಾರಿ ವೆಚ್ಚದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಕಾವೇರಿ- 229 ಭಾರತೀಯರನ್ನು ಹೊತ್ತ 7ನೇ ವಿಮಾನ ಜೆಡ್ಡಾದಿಂದ ಬೆಂಗಳೂರಿನತ್ತ

  • 40 ವರ್ಷದ ಹಳೆಯದಾದ 3 ಅಂತಸ್ತಿನ ಕಟ್ಟಡ ಕುಸಿತ – 10 ಮಂದಿ ದಾರುಣ ಸಾವು

    40 ವರ್ಷದ ಹಳೆಯದಾದ 3 ಅಂತಸ್ತಿನ ಕಟ್ಟಡ ಕುಸಿತ – 10 ಮಂದಿ ದಾರುಣ ಸಾವು

    – 25 ಮಂದಿ ಸಿಲುಕಿರುವ ಶಂಕೆ

    ಮುಂಬೈ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ಭಿವಾಂಡಿಯಲ್ಲಿ ಇಂದು ಮುಂಜಾನೆ ನಡೆದಿದೆ.

    ಪಟೇಲ್ ಕೌಂಪೌಂಡ್ ಪ್ರದೇಶದಲ್ಲಿರುವ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್‍ಡಿಆರ್‍ಎಫ್(ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ)ಯ ಸಿಬ್ಬಂದಿ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಿದ್ದಾರೆ. ಈ ಮೂಲಕ ಕಟ್ಟಡದ ಅವಶೇಷಗಳಡಿ ಸಿಲುಕಿದ ಐವರನ್ನು ರಕ್ಷಣೆ ಮಾಡಲಾಗಿದ್ದು, 20-25 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

    ಇಂದು ಮುಂಜಾನೆ 3.40ರ ಸುಮಾರಿಗೆ ಕಟ್ಟಡ ಕುಸಿದಿದ್ದು, ಕೂಡಲೇ ಎನ್‍ಡಿಆರ್‍ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ತೆರಳಿದ್ದಾರೆ. ಘಟನೆ ನಡೆದ ಬಳಿಕ ಸುಮಾರು 20 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

    ಈ ಸಂಬಂಧ ಥಾಣೆ ಮುನ್ಸಿಪಲ್ ಕಾರ್ಪೋರೇಷನ್ ವಕ್ತಾರ ಮಾಧ್ಯಮದ ಜೊತೆ ಮಾತನಾಡಿ, ಭಿವಾಂಡಿ ಕಟ್ಟಡ ಕುಸಿತದ ದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ. ಎಂದು ಮಾಹಿತಿ ನೀಡಿದ್ದಾರೆ.

    40 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ನೆಲೆಸಿದ್ದವು ಎಂಬುದಾಗಿ ತಿಳಿದುಬಂದಿದೆ.