Tag: Bhole Baba

  • ಹತ್ರಾಸ್‌ನ ಸತ್ಸಂಗದಲ್ಲಿ ಕಾಲ್ತುಳಿತದಿಂದ 121 ಸಾವು ಪ್ರಕರಣ; 3,200 ಪುಟಗಳ ಈ ಚಾರ್ಜ್‌ ಶೀಟ್‌ ಸಲ್ಲಿಕೆ

    ಹತ್ರಾಸ್‌ನ ಸತ್ಸಂಗದಲ್ಲಿ ಕಾಲ್ತುಳಿತದಿಂದ 121 ಸಾವು ಪ್ರಕರಣ; 3,200 ಪುಟಗಳ ಈ ಚಾರ್ಜ್‌ ಶೀಟ್‌ ಸಲ್ಲಿಕೆ

    ಲಕ್ನೋ: ಹತ್ರಾಸ್‌ನ ಸಿಕಂದರರಾವ್‌ನಲ್ಲಿ ನಡೆದ ಸತ್ಸಂಗದಲ್ಲಿ ಕಾಲ್ತುಳಿತದಲ್ಲಿ (Hathras Stampede) 121 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ (Chargesheet) ಸಲ್ಲಿಸಿದ್ದಾರೆ. 3,200 ಪುಟಗಳ ಈ ಚಾರ್ಜ್ ಶೀಟ್ ನಲ್ಲಿ 11 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಿದೆ.

    ಘಟನೆಯ ಬಳಿಕ ಪೊಲೀಸರು (UP Police) ಪ್ರಮುಖ ಆರೋಪಿಗಳಾದ ದೇವ್ ಪ್ರಕಾಶ್ ಮಧುಕರ್, ಮೇಘ್‌ ಸಿಂಗ್, ಮುಖೇಶ್ ಕುಮಾರ್, ಮಂಜು ದೇವಿ, ಮಂಜು ಯಾದವ್, ರಾಮ್ ಲಾಡೆಟೆ, ಉಪೇಂದ್ರ ಸಿಂಗ್, ಸಂಜು ಕುಮಾರ್, ರಾಮ್ ಪ್ರಕಾಶ್ ಶಾಕ್ಯಾ, ದುರ್ವೇಶ್ ಕುಮಾರ್ ಮತ್ತು ದಲ್ವೀರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಈ ಪೈಕಿ ಮಹಿಳಾ ಮಂಜು ದೇವಿ ಮತ್ತು ಮಂಜು ಯಾದವ್ ಅವರ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಅನುಮೋದನೆ ನೀಡಿದೆ. ಇದನ್ನೂ ಓದಿ: Japan| ಏರ್‌ಪೋರ್ಟ್‌ ಬಳಿ 2ನೇ ಮಹಾಯುದ್ಧದ ಕಾಲದ ಬಾಂಬ್ ಸ್ಫೋಟ – ವಿಮಾನ ಹಾರಾಟ ರದ್ದು

    ಜುಲೈ 2 ರಂದು, ಸಿಕಂದರರಾವ್‌ನ ಫುಲ್ರೈ ಮುಗಲ್‌ಗರ್ಹಿ ಗ್ರಾಮದಲ್ಲಿ ನಾರಾಯಣ ಸಕರ್ ಹರಿ ಭೋಲೆ ಬಾಬಾ ಅಲಿಯಾಸ್ ಸೂರಜ್‌ಪಾಲ್ ಅವರ ಸತ್ಸಂಗದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದರು. ಸತ್ಸಂಗದಲ್ಲಿ 80,000 ಜನರ ಬದಲಿಗೆ 2.5 ಲಕ್ಷ ಜನರನ್ನು ಒಟ್ಟುಗೂಡಿಸಿ ಪೋಲಿಸರ ಷರತ್ತನ್ನು ಉಲ್ಲಂಘಿಸಲಾಗಿತ್ತು. ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಭದ್ರಕೋಟೆಯೇ ಛಿದ್ರ – ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ

    ಈ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ನಾರಾಯಣ್ ಸಕರ್ ಹರಿ ಬಾಬಾ ಅಲಿಯಾಸ್ ಸೂರಜ್‌ಪಾಲ್ ಹೆಸರು ಇರಲಿಲ್ಲ. ಸದ್ಯ ಬಂಧಿತ ಆರೋಪಿಗಳ ವಿರುದ್ಧವೇ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದ್ದು, ಮಾಹಿತಿಗಳ ಪ್ರಕಾರ ಅದರಲ್ಲಿ ಬಾಬಾ ಹೆಸರು ಇಲ್ಲ ಎಂದು ಪೋಲಿಸ್ ಮೂಲಗಳು ಹೇಳಿವೆ. ಇದನ್ನೂ ಓದಿ: ಇರಾನ್‌ನಿಂದ ಕ್ಷಿಪಣಿ ದಾಳಿ – ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು, ಟರ್ಕಿಯಲ್ಲಿ ಲ್ಯಾಂಡಿಂಗ್‌

  • ಹತ್ರಾಸ್ ಕಾಲ್ತುಳಿತ ಪ್ರಕರಣ: ದೆಹಲಿ ಪೊಲೀಸರಿಗೆ ಶರಣಾದ ಪ್ರಮುಖ ಆರೋಪಿ

    ಹತ್ರಾಸ್ ಕಾಲ್ತುಳಿತ ಪ್ರಕರಣ: ದೆಹಲಿ ಪೊಲೀಸರಿಗೆ ಶರಣಾದ ಪ್ರಮುಖ ಆರೋಪಿ

    ನವದೆಹಲಿ: ಜುಲೈ 2 ರಂದು ಉತ್ತರ ಪ್ರದೇಶದ (Uttar Pradesh) ಹತ್ರಾಸ್‍ನಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣದ (Hathras Stampede) ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

    ಪೊಲೀಸರಿಗೆ ಶರಣಾದ ಮಧುಕರ್ ಸತ್ಸಂಗದ ಮುಖ್ಯ ಸೇವಾದಾರನಾಗಿದ್ದ. ಈತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್‍ನ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‍ಐಆರ್‍ನಲ್ಲಿ ಹೆಸರಿಸಲಾದ ಏಕೈಕ ಆರೋಪಿಯಾಗಿದ್ದಾನೆ. ಆತ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವೇಳೆ ದೆಹಲಿಯ ಪೊಲೀಸರು, ಎಸ್‍ಐಟಿ ಮತ್ತು ಎಸ್‍ಟಿಎಫ್‍ಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಆತನ ಪರ ವಕೀಲರು ವೀಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜನತಾ ದರ್ಶನ – ಅಧಿಕಾರಿಗಳು ಗೈರು; ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

    ಮಧುಕರ್ ಯಾವುದೇ ತಪ್ಪು ಮಾಡದ ಕಾರಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಅಪರಾಧವೇನು? ವಿಚಾರಣೆ ವೇಳೆ ಆತನಿಗಿರುವ ಹೃದಯ ಸಮಸ್ಯೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಳ್ಳಬೇಕು. ಆತನಿಂದ ಏನು ತಪ್ಪಾಗಿಲ್ಲ ಎಂದು ಆರೋಪಿ ಪರ ವಕೀಲರು ಹೇಳಿಕೊಂಡಿದ್ದಾರೆ.

    ಇದಕ್ಕೂ ಮುನ್ನ ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು. ಇನ್ನೂ ಈ ಪ್ರಕರಣ ಸಂಬಂಧ ಗುರುವಾರ ಭೋಲೆ ಬಾಬಾನ (Bhole Baba) ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟು- ಪ್ರಯಾಣಿಕರು 12 ಗಂಟೆ ವಿಮಾನದಲ್ಲೇ ಲಾಕ್

  • Hathras Tragedy: ಇಬ್ಬರು ಮಹಿಳೆಯರು ಸೇರಿ ಸತ್ಸಂಗ ಸಂಘಟನಾ ಸಮಿತಿಯ 6 ಮಂದಿ ಅರೆಸ್ಟ್‌

    Hathras Tragedy: ಇಬ್ಬರು ಮಹಿಳೆಯರು ಸೇರಿ ಸತ್ಸಂಗ ಸಂಘಟನಾ ಸಮಿತಿಯ 6 ಮಂದಿ ಅರೆಸ್ಟ್‌

    ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿ 121 ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು (UP Police) ಗುರುವಾರ ತಿಳಿಸಿದ್ದಾರೆ.

    ಸತ್ಸಂಗ ಕಾರ್ಯಕ್ರಮ ಸಂಘಟನಾ ಸಮಿತಿಯ 6 ಮಂದಿ ಸದಸ್ಯರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ (ಜು.2) ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ (Bhole Baba aka Narayan Saakar Hari) ಪ್ರವಚನ ಕಾರ್ಯಕ್ರಮದ ನಂತರ ಕಾಲ್ತುಳಿತ ಸಂಭವಿಸಿ 121 ಮಂದಿ ಸಾವನ್ನಪ್ಪಿದ್ದರು. 31 ಮಂದಿ ಗಾಯಗೊಂಡಿದ್ದರು.

    ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಸೇರಿ 6 ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಂಘಟನಾ ಸಮಿತಿಯ ಸದಸ್ಯರಾಗಿದ್ದು, ಸೇವಾದಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಅಲಿಗಢ್ ಇನ್ಸ್‌ಪೆಕ್ಟರ್ ಜನರಲ್ ಶಲಭ್ ಮಾಥುರ್ ಹೇಳಿದ್ದಾರೆ. ಇದನ್ನೂ ಓದಿ: ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್‌ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ

    ಪ್ರಮುಖ ಆರೋಪಿ ಸುಳಿವು ಕೊಟ್ಟರೆ 1 ಲಕ್ಷ ರೂ. ಬಹುಮಾನ:
    ಎಫ್‌ಐಆರ್‌ನಲ್ಲಿ ಮುಖ್ಯ ಸೇವಾದಾರ ದೇವಪ್ರಕಾಶ್ ಮಧುಕರ್‌ನನ್ನ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಈತ ನಾಪತ್ತೆಯಾಗಿದ್ದು, ಮಧುಕರ್‌ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಅಲ್ಲದೇ ಕೋರ್ಟ್‌ ಜಾಮೀನು ರಹಿತ ಬಂಧನ ವಾರಂಟ್‌ ಜಾರಿಗೊಳಿಸಿದೆ ಎಂದೂ ತಿಳಿಸಿದ್ದಾರೆ. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

    ಕಾಲ್ತುಳಿತ ಸಂಭವಿಸಿದ್ದು ಹೇಗೆ?
    ಸತ್ಸಂಗ (Satsang) ಕಾರ್ಯಕ್ರಮ ಮುಗಿದ ಬಳಿಕ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಕಾರು ಹತ್ತಿದ್ದಾರೆ. ಕಾರು ಮುಂದಕ್ಕೆ ಹೋಗುತ್ತಿದ್ದಂತೆ ಚಕ್ರದ ಧೂಳನ್ನು ಸಂಗ್ರಹಿಸಲು ಅನುಯಾಯಿಗಳು ಮುಗಿಬಿದ್ದಿದ್ದಾರೆ. ಭಾರೀ ಸಂಖ್ಯೆಯಲ್ಲಿದ್ದ ಅನುಯಾಯಿಗಳು ಧೂಳು ಸಂಗ್ರಹಿಸಲು ಓಡಿದ ಪರಿಣಾಮ ಪುರುಷರು, ಮಹಿಳೆಯರು ಮತ್ತು ಮಕ್ಕಳು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಜನರು ಓಡಿದ್ದರಿಂದ ಸಾವು, ನೋವಿನ ಸಂಖ್ಯೆ ಹೆಚ್ಚಾಗಿದೆ.

    ಸಿಎಂ ಯೋಗಿ ಆದಿತ್ಯನಾಥ್‌ ಅವರ ಸೂಚನೆ ನಂತರ ಪ್ರಕರಣಕ್ಕೆ ಸಂಬಂಧಿಸಿದ 6 ಮಂದಿಯನ್ನ ಬಂಧಿಸಲಾಗಿದೆ. ಅಗತ್ಯವಿದ್ದರೆ, ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅವರನ್ನೂ ಸಹ ವಿಚಾರಣೆಗೆ ಒಳಪಡಿಸಬಹುದು. ಸದ್ಯಕ್ಕೆ ಅವರ ಹೆಸರು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: MUDA Site Allotment Scam | ನನಗೆ 62 ಕೋಟಿ ಕೊಡಬೇಕು: ಸಿಎಂ