Tag: Bhupendra Patel

  • ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    – ನೂತನ ಡಿಸಿಎಂ ಆಗಿ ಹರ್ಷ ಸಾಂಘ್ವಿ ಪ್ರಮಾಣ ಸ್ವೀಕಾರ

    ಗಾಂಧಿನಗರ: ಗುಜರಾತ್‌ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ (Rivaba Jadeja) ಸೇರಿ 26 ಸಚಿವರೂ ಪ್ರಮಾಣ ಸ್ವೀಕಾರ ಮಾಡಿದರು.

    ಭೂಪೇಂದ್ರ ಪಟೇಲ್‌ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಕೆಲವರಿಗೆ, ವಿಪಕ್ಷಗಳಿಂದ ಬಿಜೆಪಿ ಸೇರ್ಪಡೆಯಾದ ಕೆಲ ನಾಯಕರನ್ನ ಗುರುತಿಸಿ ಸಚಿವ ಸ್ಥಾನ ನೀಡಿರುವುದು ಹಿರಿಯ ನಾಯಕರ ಮೆಚ್ಚುಗೆಗೂ ಪಾತ್ರವಾಗಿದೆ.

    2027ರ ವಿಧಾನಸಭಾ ಚುನಾವಣೆಯನ್ನ ಗುರಿಯಾಗಿಟ್ಟು ಸಮುದಾಯದ ನಾಯಕರು, ಕಾರ್ಯಕರ್ತರ ಮೇಲೆ ಹಿಡಿತ ಸಾಧಿಸುವ ನಾಯಕರನ್ನ ಸಂಪುಟಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಪಾಟಿದಾರ್ ಸಮುದಾಯದ ಆರು ಮಂದಿ, ಪರಿಶಿಷ್ಟ ಜಾತಿಯಿಂದ ಮೂವರು, ಆದಿವಾಸಿ ಸಮುದಾಯದ ನಾಲ್ವರು, ಕ್ಷತ್ರಿಯ ಸಮುದಾಯದ ಇಬ್ಬರು, ಒಬಿಸಿ ಸಮುದಾಯದ ಎಂಟು ಮಂದಿ ಹಾಗೂ ಬ್ರಾಹ್ಮಣ ಮತ್ತು ಜೈನ ಸಮುದಾಯ ತಲಾ ಒಬ್ಬೊಬ್ಬರಿಗೆ ಸಚಿವ ಸ್ಥಾನ ನೀಡಲಾಯಿತು.

    ಸಮುದಾಯವಾರು ನಾಯಕರ ಪಟ್ಟಿ
    * ಪಾಟಿದಾರ್ ಸಮುದಾಯದಿಂದ: ಕೌಶಿಕ್ ವೆಕಾರಿಯಾ, ಪ್ರಫುಲ್ ಪನ್ಸಾರಿಯಾ, ಕಾಂತಿ ಅಮೃತಿಯಾ, ರಿಷಿಕೇಶ್ ಪಟೇಲ್, ಜಿತುಭಾಯ್ ವಘಾನಿ ಮತ್ತು ಕಮಲೇಶ್ ಪಟೇಲ್.
    * ಪರಿಶಿಷ್ಟ ಜಾತಿಯಿಂದ: ಮನೀಶಾ ವಕೀಲ್, ಪ್ರದ್ಯುಮ್ನ ವಾಜಾ ಮತ್ತು ದರ್ಶನ್ ವಘೇಲಾ.
    * ಆದಿವಾಸಿ ಸಮುದಾಯದಿಂದ: ರಮೇಶ ಕಾಟಾರ, ಪಿ.ಸಿ. ಬರಂದ, ಜೈರಾಮ್ ಗಮಿತ್ ಮತ್ತು ನರೇಶ್ ಪಟೇಲ್.
    * ಕ್ಷತ್ರಿಯ ಸಮುದಾಯದಿಂದ: ರಿವಾಬಾ ಜಡೇಜಾ ಮತ್ತು ಸಂಜಯ್‌ಸಿನ್ಹ್ ಮಹಿದಾ.
    * ಒಬಿಸಿ ಸಮುದಾಯದಿಂದ: ಕುನ್ವರ್ಜಿ ಬವಲಿಯಾ, ಅರ್ಜುನ್ ಮೊದ್ವಾಡಿಯಾ, ಪರ್ಷೋತ್ತಮ್ ಸೋಲಂಕಿ, ತ್ರಿಕಮ್ ಛಂಗಾ, ಪ್ರವೀಣ್ ಮಾಲಿ, ಸ್ವರೂಪ್ಜಿ ಠಾಕೋರ್, ಈಶ್ವರಸಿನ್ಹ್ ಪಟೇಲ್ ಮತ್ತು ರಾಮನ್ ಸೋಲಂಕಿ.
    * ಬ್ರಾಹ್ಮಣ ಸಮುದಾಯದಿಂದ: ಕನುಭಾಯಿ ದೇಸಾಯಿ
    * ಜೈನ (ಲಘುಮತಿ) ಸಮುದಾಯದಿಂದ: ಹರ್ಷ ಸಾಂಘ್ವಿ

  • ಗುಜರಾತ್‌ ಸಿಎಂ ಹೊರತು ಪಡಿಸಿ ಎಲ್ಲಾ 16 ಸಚಿವರ ರಾಜೀನಾಮೆ

    ಗುಜರಾತ್‌ ಸಿಎಂ ಹೊರತು ಪಡಿಸಿ ಎಲ್ಲಾ 16 ಸಚಿವರ ರಾಜೀನಾಮೆ

    ಗಾಂಧಿನಗರ: ಅಚ್ಚರಿಯ ಬೆಳವಣಿಗೆಯಲ್ಲಿ ಗುಜರಾತ್‌ (Gujarat) ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಹೊರತುಪಡಿಸಿ ಎಲ್ಲಾ 16 ಸಚಿವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

    ಬಿಜೆಪಿ (BJP) ಪಕ್ಷವು ಎಲ್ಲಾ 16 ಸಚಿವರ ರಾಜೀನಾಮೆಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಪಟೇಲ್ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಶುಕ್ರವಾರ ಬೆಳಿಗ್ಗೆ 11:30 ಕ್ಕೆ ಭೂಪೇಂದ್ರ ಪಟೇಲ್ ಅವರ ಸಚಿವ ಸಂಪುಟ ಪುನರ್‌ಚನೆ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿ ಸಚಿವರಿಂದ ರಾಜೀನಾಮೆಗಳನ್ನು ತೆಗೆದುಕೊಳ್ಳಲಾಗಿದೆ.  ಇದನ್ನೂ ಓದಿ:  ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜ್ಯಪಾಲ ಆಚಾರ್ಯ ದೇವವ್ರತ್‌ಜಿ ಅವರು ಸಂಪುಟದ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಗುಜರಾತ್‌ ಸಚಿವ ಸಂಪುಟದಲ್ಲಿ ಸಿಎಂ ಪಟೇಲ್ ಸೇರಿದಂತೆ 17 ಮಂದಿ ಸಚಿವರಿದ್ದರು. ಇವರಲ್ಲಿ ಎಂಟು ಮಂದಿ ಕ್ಯಾಬಿನೆಟ್ ದರ್ಜೆಯ ಮಂತ್ರಿಗಳಾಗಿದ್ದರೆ, ಇತರರು ರಾಜ್ಯ ಸಚಿವರಾಗಿದ್ದರು.  ಇದನ್ನೂ ಓದಿ:  ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌| ಇನ್ನೂ ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

    ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಬುಡಕಟ್ಟು ಶಾಸಕರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಲು ಬಿಜೆಪಿ ಮುಂದಾಗಿದೆ. ಆಪ್‌ ಬುಡಕಟ್ಟು ಜನರನ್ನು ಸೆಳೆಯುತ್ತಿರುವ ಕಾರಣ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ.

    ಹೊಸ ಸಂಪುಟವು 23 ಸದಸ್ಯರನ್ನು ಹೊಂದುವ ಸಾಧ್ಯತೆಯಿದೆ. ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಮಾಡಿ ಹೊಸ ಸಂಪುಟ ರಚನೆಗೆ ಬಿಜೆಪಿ ಈಗ ಕೈಹಾಕಿದೆ. 182 ಸದಸ್ಯರ ವಿಧಾನಸಭೆಯನ್ನು ಹೊಂದಿರುವ ಗುಜರಾತ್‌ನಲ್ಲಿ ಗರಿಷ್ಠ 27 ಮಂತ್ರಿಗಳಿರಬಹುದು. ಹೊಸ ಸಂಪುಟದಲ್ಲಿ ಯುವ ಮತ್ತು ಮಹಿಳಾ ನಾಯಕಿಯರಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆಯುವ ಸಾಧ್ಯತೆಯಿದೆ.

  • ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

    ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

    -ನಾಲ್ವರು ಎಂಜಿನಿಯರ್‌ಗಳ ಅಮಾನತು

    ಗಾಂಧಿನಗರ: ಗುಜರಾತ್‌ನ (Gujarat) ವಡೋದರಾ (Vadodara) ಜಿಲ್ಲೆಯಲ್ಲಿ ನಡೆದ ಸೇತುವೆ ದುರಂತದಲ್ಲಿ (Bridge Collapse) ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆಂದು ವಡೋದರಾ ಡಿಸಿ ಅನಿಲ್ ಧಮೇಲಿಯಾ ಮಾಹಿತಿ ನೀಡಿದ್ದಾರೆ.

    ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪಡೆಗಳು 4 ಕಿ.ಮೀ. ಕೆಳಭಾಗದವರೆಗೆ ಶೋಧಕಾರ್ಯ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನಾ ಸ್ಥಳದಲ್ಲಿ ಎರಡು ವಾಹನಗಳು ಕೆಸರಿನಲ್ಲಿ ಸಿಲುಕಿಕೊಂಡಿವೆ. ಆ ವಾಹನಗಳ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆಯಾಗುತ್ತಿರುವ ಕಾರಣ ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಡಿಸಿ ಹೇಳಿದ್ದಾರೆ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

    ಇನ್ನೂ ಸೇತುವೆ ಮೇಲೆ ತೂಗಾಡುತ್ತಿರುವ ಟ್ರಕ್ ಕುರಿತು ಮಾತನಾಡಿ, ಅದು ಖಾಲಿ ಟ್ಯಾಂಕರ್ ಆಗಿದ್ದು, ಅದನ್ನು ಸರಿಸಿದರೆ ಮತ್ತಷ್ಟು ಸೇತುವೆ ಕುಸಿದು ಬೀಳಲಿದೆ. ಸೇತುವೆ ಕೆಳಗಡೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಟ್ಯಾಂಕರನ್ನು ಅಲ್ಲೇ ಉಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

    ಘಟನೆ ಬಳಿಕ ಆರ್&ಬಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಆದೇಶ ಹೊರಡಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿರುವ ಎಲ್ಲಾ ಸೇತುವೆಗಳ ಸುರಕ್ಷತಾ ಪರಿಶೀಲನೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಹಠಾತ್‌ ಸಾವು| 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದರು: ದಿನೇಶ್‌

  • 2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

    2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

    ಗಾಂಧೀನಗರ: ಕಳೆದ 2 ತಿಂಗಳಿಂದ ನನ್ನ ಅವಳಿ ಮಕ್ಕಳು ಕಾಣೆಯಾಗಿದ್ದಾರೆಂದು ಗುಜರಾತ್‌ (Gujarat) ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ವ್ಯಕ್ತಿಯೊಬ್ಬ ಪತ್ರ ಬರೆದಿರುವ ಘಟನೆ ನಡೆದಿದೆ.

    ವಡೋದರ (Vadodara) ನಿವಾಸಿ ಚಿಮನ್‌ ಎಂಬಾತನ ಮಕ್ಕಳಾದ ಪದವಿ ಓದುತ್ತಿರುವ ಶೀತಲಾ ಹಾಗೂ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ಸರಿಕಾ ಕಾಣೆಯಾಗಿರುವ ಅವಳಿ ಸಹೋದರಿಯರು. ಎಂದಿನಂತೆ ಕಾಲೇಜಿಗೆ ಹೋಗಿದ್ದ ಇಬ್ಬರು ಸಹೋದರಿಯರು ಫೆ.17 ರಿಂದ ನಾಪತ್ತೆಯಾಗಿದ್ದಾರೆ. ಮಕ್ಕಳಿಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದ ತಂದೆ ಕೊನೆಗೆ ಸಯಾಜಿಗಂಜ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ನಿಷೇಧಿತ ಪಿಎಫ್‍ಐನ ಇಬ್ಬರು ಮುಖಂಡರ ಬಂಧನ

    ಆದರೆ, 25 ದಿನಗಳು ಕಳೆದರೂ ಪೊಲೀಸರಿಂದ ಯಾವುದೇ ತೃಪ್ತಿಕರ ಉತ್ತರ ಸಿಗದ ಕಾರಣ ಚಿಮನ್‌ ನಂತರ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಿದರು. ಪ್ರಕರಣವನ್ನು ವಡೋದರಾ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಯಿತು.

    51 ದಿನಗಳು ಕಳೆದರೂ ಅವರ ಇಬ್ಬರು ಪುತ್ರಿಯರ ಗುರುತು ಪತ್ತೆಯಾಗದ ಕಾರಣ ಹತಾಶರಾದ ಚಿಮನ್ ಈಗ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಮತ್ತು ಗೃಹ ಸಚಿವ ಹರ್ಷ ಶಾಂಘ್ವಿಗೆ (Harsh Shanghvi) ಪತ್ರ ಬರೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಸಹೋದರಿಯರ ವಾಟ್ಸ್‌ ಆ್ಯಪ್ ಚಾಟ್‌ಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಭೇಟೆ – ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

    ನನ್ನ ಇಬ್ಬರು ಮಕ್ಕಳ ಬಗ್ಗೆ ಇನ್ನೂ ಕುರುಹು ಸಿಕ್ಕಿಲ್ಲ. ಅವರ ಬಗ್ಗೆ ಪೊಲೀಸರಿಂದ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲೇ ಕಾಲ ಕಳೆಯುತ್ತಿದ್ದೇನೆ. ನಿತ್ಯ ಆತಂಕದಿಂದಲೇ ದಿನ ದೂಡುತ್ತಿದ್ದೇನೆ ಎಂದು ನಾಪತ್ತೆಯಾಗಿರುವ ಸಹೋದರಿಯರ ತಂದೆ ನೊಂದು ನುಡಿದಿದ್ದಾರೆ.

  • 200 ಸಂತರ ಸಮ್ಮುಖದಲ್ಲಿ ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

    200 ಸಂತರ ಸಮ್ಮುಖದಲ್ಲಿ ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

    ಗಾಂಧಿನಗರ: ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ (Gujarat) ಪ್ರಚಂಡ ಬಹುಮತ ಪಡೆದಿರುವ ಬಿಜೆಪಿ (BJP) ಇಂದು ಏಳನೇ ಬಾರಿಗೆ ಸರ್ಕಾರ ರಚಿಸಲಿದೆ.

    ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ (Bhupendra Patel) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ (CM) ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್‍ನ 18ನೇ ಮುಖ್ಯಮಂತ್ರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಲಿದ್ದಾರೆ. ಸಿಎಂ ಜೊತೆ ಇಂದು ಒಟ್ಟು 25 ಮಂದಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುಜರಾತ್ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆಲುವು ಸಾಧಿಸಿತ್ತು. ಇದನ್ನೂ ಓದಿ: ಒಂದೇ ದಿನ 10 ಜನರಿಗೆ ಕಡಿದ ಹುಚ್ಚುನಾಯಿ

    ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ಕೆಲ ಕೇಂದ್ರ ಸಚಿವರು ಭಾಗಿ ಆಗಲಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು, ಮಾಜಿ ಸಿಎಂ ಯಡಿಯೂರಪ್ಪ ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಗುಜರಾತ್ ಚುನಾವಣೆ ವೇಳೆ ಅಬ್ಬರದ ಪ್ರಚಾರದ ಮೂಲಕ ಗಮನಸೆಳೆದ ಬಿ.ಎಲ್ ಸಂತೋಷ್ ಸೇರಿದಂತೆ ಹಲವು ಸಂಸದರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಪ್ರಧಾನಿ ಸೇರಿದಂತೆ ವಿವಿಐಪಿಗಳಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಗುಜರಾತ್‌ಗೆ ಪ್ರಯಾಣ ಬೆಳೆಸಿದ್ದು, ಸಿಎಂ ಜೊತೆ ಸಚಿವ ಬಿಸಿ ನಾಗೇಶ್ ಹಾಗೂ ಭೈರತಿ ಬಸವರಾಜ್ ತೆರಳಿದ್ದಾರೆ. ಇದನ್ನೂ ಓದಿ: ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

    ಈ ಬಾರಿ ಚುನಾವಣೆಯಲ್ಲಿ ಶೇಕಡಾ 10ರಷ್ಟು ಸ್ಥಾನಗಳನ್ನು ಗೆಲ್ಲದ ಕಾಂಗ್ರೆಸ್ ಅಧಿಕೃತ ವಿಪಕ್ಷ ಸ್ಥಾನವನ್ನು ಕಳೆದುಕೊಂಡಿದೆ. ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಫಲವಾದ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಸಕಾಂಗ ಪಕ್ಷದ ನಾಯಕನಾಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣವಚನ

    ಶಾಸಕಾಂಗ ಪಕ್ಷದ ನಾಯಕನಾಗಿ ಭೂಪೇಂದ್ರ ಪಟೇಲ್ ಆಯ್ಕೆ- ಸೋಮವಾರ ಪ್ರಮಾಣವಚನ

    ಅಹಮದಾಬಾದ್: ಗುಜರಾತ್‍ (Gujarat) ನಲ್ಲಿ ಬಹುಮತ ಪಡೆದ ಹಿನ್ನೆಲೆ ಬಿಜೆಪಿ (BJP) ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಭೂಪೇಂದ್ರ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಚುನಾಯಿತ ಹೊಸ ಶಾಸಕರು ಹೈಕಮಾಂಡ್ ವೀಕ್ಷಕರ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.

    ಭೂಪೇಂದ್ರ ಪಟೇಲ್ (Bhupendra Patel) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (AmitShah), ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J.P Nadda) ಸೇರಿ ಹಲವು ನಾಯಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸಿಎಂ, ತಜ್ಞರ ಜೊತೆಗೆ ಚರ್ಚಿಸಿದ ಬಳಿಕವಷ್ಟೆ ಸಲಾಂ ಆರತಿ ಹೆಸರು ಬದಲಾವಣೆ: ಶಶಿಕಲಾ ಜೊಲ್ಲೆ

    ಭೂಪೇಂದ್ರ ಪಟೇಲ್ ಜೊತೆಗೆ ಹಲವು ಪ್ರಮುಖ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ (Hardik Patel), ಓಬಿಸಿ ನಾಯಕ ಅಲ್ಪೇಶ್ ಠಾಕೂರ್, ಕ್ರಿಕೆಟಗ ರವಿಂದ್ರ ಜಡೇಜಾ ಪತ್ನಿ ರಿವಾನಾ ಸಂಪುಟ ಸೇರುವುದು ಖಚಿತ ಎನ್ನಲಾಗುತ್ತಿದೆ. 182 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದಿತ್ತು.

    Live Tv
    [brid partner=56869869 player=32851 video=960834 autoplay=true]

  • ಡಿ.12ರಂದು ಮೋದಿ ಸ್ಟೇಡಿಯಂನಲ್ಲಿ ಪ್ರಮಾಣವಚನ – ಮೋದಿ, ಶಾ ಭಾಗಿ

    ಡಿ.12ರಂದು ಮೋದಿ ಸ್ಟೇಡಿಯಂನಲ್ಲಿ ಪ್ರಮಾಣವಚನ – ಮೋದಿ, ಶಾ ಭಾಗಿ

    ಗಾಂಧಿನಗರ: ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಬಿಜೆಪಿ (BJP) ನಾಯಕ ಭೂಪೇಂದ್ರ ಪಟೇಲ್ (Bhupendra Patel) ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್. ಪಾಟೀಲ್ ತಿಳಿಸಿದರು.

    ಈಗಾಗಲೇ ಗುಜರಾತ್‍ನಲ್ಲಿ (Gujarat) ಬಹುತೇಕ ಕ್ಷೇತ್ರಗಳ ಚುನಾವಣೆ (Election) ಪಕ್ಕಾ ಆಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಸಿದ್ಧವಾಗಿದೆ. ಸತತ 7ನೇ ಬಾರಿಗೆ ಬಿಜೆಪಿ ಸರ್ಕಾರ ರಚಿಸುವ ಮೂಲಕ ದಾಖಲೆಯನ್ನು ನಿರ್ಮಾಣ ಮಾಡಲಿದೆ. ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇದೀಗ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, 1.92 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಡಿಸೆಂಬರ್ 12ರಂದು ಮಧ್ಯಾಹ್ನ 2 ಗಂಟೆಗೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಭಾರತೀಯ ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ, 182 ಸದಸ್ಯ ಬಲದ ಗುಜರಾತ್‍ನಲ್ಲಿ ವಿಧಾನಸಭೆಯಲ್ಲಿ ಬಿಜೆಪಿ 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಬಿಜೆಪಿಯ ಚುನಾವಣಾ ಫಲಿತಾಂಶವು ಹಿಂದಿನ ಚುನಾವಣೆಯ ಫಲಿತಾಂಶಗಳನ್ನು ಮೀರಿದೆ. ಇದನ್ನೂ ಓದಿ: ಜಾಮ್‍ನಗರದಲ್ಲಿ ಅರಳಿದ ಕಮಲ- ಜಡೇಜಾ ಪತ್ನಿಗೆ ಭರ್ಜರಿ ಜಯ

    ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮಾತನಾಡಿ, ಗುಜರಾತ್ ಚುನಾವಣೆಯ ಫಲಿತಾಂಶಗಳು ಸಾಕಷ್ಟು ಸ್ಪಷ್ಟವಾಗಿವೆ. ಜನರು ಗುಜರಾತ್‍ನಲ್ಲಿ ಅಭಿವೃದ್ಧಿಯ ಪಯಣವನ್ನು ಮುಂದುವರಿಸಲು ಮನಸ್ಸು ಮಾಡಿದ್ದಾರೆ. ನಾವು ಜನರ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇವೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಜನರ ಸೇವೆಗೆ ಬದ್ಧರಾಗಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಾತ್‍ನಲ್ಲಿ ನಿರೀಕ್ಷೆಯಂತೆ ಸ್ಥಾನಗಳು ಬಂದಿಲ್ಲ: ಪ್ರಿಯಾಂಕ್ ಖರ್ಗೆ

    Live Tv
    [brid partner=56869869 player=32851 video=960834 autoplay=true]

  • ಏಕರೂಪ ನಾಗರಿಕ ಸಂಹಿತೆ ಜಾರಿ, 20 ಲಕ್ಷ ಉದ್ಯೋಗ ಸೃಷ್ಟಿ – ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರವಸೆ

    ಏಕರೂಪ ನಾಗರಿಕ ಸಂಹಿತೆ ಜಾರಿ, 20 ಲಕ್ಷ ಉದ್ಯೋಗ ಸೃಷ್ಟಿ – ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರವಸೆ

    ಗಾಂಧೀನಗರ: ಬಿಜೆಪಿ (BJP) ಅಧಿಕಾರಕ್ಕೆ ಬಂದಲ್ಲಿ ಮುಂದಿನ ಐದು ವರ್ಷದಲ್ಲಿ 20 ಲಕ್ಷ ಉದ್ಯೋಗಗಳು ಸೃಷ್ಟಿಸಿ, ರಾಜ್ಯದ ಆರ್ಥಿಕತೆಯನ್ನು ಒಂದು ಟ್ರಿಲಿಯನ್‌ನತ್ತ ಕೊಂಡೊಯ್ಯಲಾಗುವುದು ಮತ್ತು ಏಕರೂಪದ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದೆ.

    ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly polls) ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಸಿಎಂ ಭೂಪೇಂದ್ರ ಪಟೇಲ್ (Bhupendra Patel) ಸಮ್ಮುಖದಲ್ಲಿ ‘ಸಂಕಲ್ಪ ಪತ್ರ’ ಚುನಾವಣಾ ಪ್ರಣಾಳಿಕೆ (Manifesto) ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಜೆ.ಪಿ ನಡ್ಡಾ ಮಹಿಳೆಯರನ್ನು ಸ್ವಾವಲಂಬಿ ಮಾಡುವುದು ನಮ್ಮ ಗುರಿ ಎಂದರು. ಇದನ್ನೂ ಓದಿ: ಜಡೇಜಾ ಟೀಂ ಇಂಡಿಯಾ ಪರ ಆಡಲು ಅನ್‍ಫಿಟ್ – ಬಿಜೆಪಿ ಪರ ಪ್ರಚಾರಕ್ಕೆ ಫಿಟ್

    ಸಂಕಲ್ಪ ಪತ್ರದಲ್ಲಿ ಪ್ರಧಾನ ಮಂತ್ರಿ ಆರೋಗ್ಯ ವಿಮೆ ಯೋಜನೆಯನ್ನು 5 ರಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು, ನೀರಾವರಿ ಯೋಜನೆಯಲ್ಲಿ 25 ಸಾವಿರ ಕೋಟಿ ವರೆಗೆ ಹೂಡಿಕೆ ಮಾಡಲಾಗುವುದು, 25 ಬಿರ್ಸಾ ಮುಂಡಾ ವಸತಿ ಶಾಲೆಗಳನ್ನು ತೆರೆಯಲಾಗುವುದು. 5 ವರ್ಷದಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು, 2ಸಿ ಫುಡ್ ಪಾರ್ಕ್ ಸ್ಥಾಪಿಸಲಾಗುವುದು, 5 ವರ್ಷಗಳಲ್ಲಿ ಮಹಿಳೆಯರಿಗೆ 1 ಲಕ್ಷ ಉದ್ಯೋಗ ನೀಡಲಾಗುವುದು, ಏಕರೂಪ ನಾಗರಿಕ ಸಂಹಿತೆ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದೆ.

    ಶ್ರಮಿಕ್ ಕ್ರೆಡಿಟ್ ಕಾರ್ಡ್‍ನಲ್ಲಿ 2 ಲಕ್ಷದವರೆಗೆ ಸಾಲ, ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟಿ ನೀಡಲಾಗುವುದು, ಕೃಷಿ ಮೂಲಸೌಕರ್ಯ ನಿಧಿಯಡಿ 10 ಸಾವಿರ ಕೋಟಿ ರೂ. ಗುಜರಾತ್‍ನಲ್ಲಿ ವಿನಿಯೋಗಿಸಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಇದನ್ನೂ ಓದಿ: ಓಷನ್‍ಸ್ಯಾಟ್, 8 ಇತರೆ ಉಪಗ್ರಹಗಳನ್ನು ಹೊತ್ತ PSLV-C54 ರಾಕೆಟ್ ಉಡಾಯಿಸಿದ ಇಸ್ರೋ

    ಡಿಸೆಂಬರ್ 01 ಮತ್ತು 05 ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ತವರು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವ ಪ್ರಯತ್ನದಲ್ಲಿದ್ದಾರೆ. ಇತ್ತ ಕಾಂಗ್ರೆಸ್ ಅಧಿಕಾರಕ್ಕೆ ಹೋರಾಟ ಆರಂಭಿಸಿದ್ದು, ಮೊದಲ ಬಾರಿಗೆ ಆಪ್ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಡಿಸೆಂಬರ್ 08 ರಂದು ಫಲಿತಾಂಶ ಪ್ರಕಟವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ತವರೂರಿನಲ್ಲಿ ಮುಂದಿನ 7 ದಿನ ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ಹಾಕಲ್ಲ

    ಮೋದಿ ತವರೂರಿನಲ್ಲಿ ಮುಂದಿನ 7 ದಿನ ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ಹಾಕಲ್ಲ

    ಗಾಂಧಿನಗರ: ದೀಪಾವಳಿ (Deepavali) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ತವರೂರು ಗುಜರಾತ್‍ನಲ್ಲಿ (Gujarat) ಅ.21 ರಿಂದ 27ರ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದರೂ (Traffic Violation) ಸಾರ್ವಜನಿಕರಿಗೆ ದಂಡ ಪ್ರಯೋಗಿಸದಂತೆ ಗುಜರಾತ್ ಸಿಎಂ ಭೊಪೇಂದ್ರ ಪಟೇಲ್ (Bhupendra Patel) ಸೂಚಿಸಿದ್ದಾರೆ.

    ಅ.21 ರಿಂದ 27 ರವರೆಗೆ 7 ದಿನಗಳ ಕಾಲ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೂ ಪೊಲೀಸರು (Police) ದಂಡ (Fine) ಹಾಕಬೇಡಿ ಎಂದು ಸರ್ಕಾರ ಸೂಚಿಸಿದೆ. ಈ ಮೂಲಕ ಜನಪರ ಕಾಳಜಿ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹಿಂದೂ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಇಸ್ಲಾಂಗೆ ಮತಾಂತರ – ಆರೋಪಿ ಪರವಾಗಿಯೇ ತೀರ್ಪು ಕೊಟ್ಟ ಕೋರ್ಟ್

    ಈ ಬಗ್ಗೆ ಮಾತನಾಡಿರುವ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ (Harsh Sanghavi), ಪೊಲೀಸರು 7 ದಿನ ದಂಡ ವಿಧಿಸಲ್ಲ ಎಂದು ಸಾರ್ವಜನಿಕರು ಸಂಚಾರ ನಿಯಮವನ್ನು ಉಲ್ಲಂಘಿಸಬೇಡಿ. ಪೊಲೀಸರು ದಂಡ ವಿಧಿಸಲ್ಲ ಎಂದರೇ ಸಾರ್ವಜನಿಕರು ಟ್ರಾಫಿಕ್ ನಿಯಮಗಳನ್ನು ಅನುಸರಿಸಬಾರದೆಂದಲ್ಲ. ನೀವು ತಪ್ಪು ಮಾಡಿದರೂ 7 ದಿನ ದಂಡ ಪಾವತಿಸದೆ ತೆರಳಲು ಪೊಲೀಸರು ಅವಕಾಶ ಕೊಡುತ್ತಾರೆ ಅಷ್ಟೇ ಎಂದಿದ್ದಾರೆ. ಇದನ್ನೂ ಓದಿ: ಆಮೆ ಕರಿ ಸರಿಯಾಗಿ ಮಾಡಿಲ್ಲವೆಂದು ಪತ್ನಿಯನ್ನೇ ಕೊಂದು ಹಿತ್ತಲಲ್ಲಿ ಹೂತು ಹಾಕಿದ

    ಇದೀಗ ಗುಜರಾತ್ ಸರ್ಕಾರದ ಈ ನಿರ್ಧಾರಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದ್ದು, ಇದೆಲ್ಲ ಈ ವರ್ಷಾಂತ್ಯಕ್ಕೆ ನಡೆಯಲಿರುವ ಚುನಾವಣೆಯ ಗಿಮಿಕ್ ಎಂಬ ಮಾತು ಕೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಚಾಂಪಿಯನ್ ತಂಡವನ್ನು ಗೌರವಿಸಿದ ಗುಜರಾತ್ ಸರ್ಕಾರ – ಹಾರ್ದಿಕ್ ಪಾಂಡ್ಯಗೆ ವಿಶೇಷ ಉಡುಗೊರೆ

    ಚಾಂಪಿಯನ್ ತಂಡವನ್ನು ಗೌರವಿಸಿದ ಗುಜರಾತ್ ಸರ್ಕಾರ – ಹಾರ್ದಿಕ್ ಪಾಂಡ್ಯಗೆ ವಿಶೇಷ ಉಡುಗೊರೆ

    ಅಹಮದಾಬಾದ್: ಗುಜರಾತ್ ಟೈಟಾನ್ಸ್ ತನ್ನ ಚೊಚ್ಚಲ ಋತುವಿನಲ್ಲಿಯೇ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾನುವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಳಗ ರಾಜಸ್ಥಾನ ವಿರುದ್ಧ ಏಳು ವಿಕೆಟ್‍ಗಳ ಜಯ ಸಾಧಿಸಿ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿತ್ತು.

    ಈ ಅದ್ಭುತ ಗೆಲುವಿನ ನಂತರ ಗುಜರಾತ್ ಸಿಎಂ ಭೂಪೇಂದ್ರ್ ಪಟೇಲ್ ಗುಜರಾತ್ ಟೈಟಾನ್ಸ್ ಆಟಗಾರರನ್ನು ಭೇಟಿ ಮಾಡಿದರು. ಈ ವೇಳೆ ಸಿಎಂ ಪಟೇಲ್ ಇಡೀ ತಂಡವನ್ನು ಸನ್ಮಾನಿಸಿದರು. ಇದರೊಂದಿಗೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ನೆನಪಿನ ಸ್ಮರಣಿಕೆ ನೀಡಿ ಗೌರವಿಸಿದರು. ಇದನ್ನೂ ಓದಿ: ಗುಜರಾತ್‌ಗೆ ಐಪಿಎಲ್‌ ಟ್ರೋಫಿ – ಯಾವ ಆಟಗಾರರಿಗೆ ಏನು ಪ್ರಶಸ್ತಿ?

    ಗುಜರಾತ್ ಟೈಟಾನ್ಸ್ ತಂಡ ವಿಶೇಷ ರೀತಿಯಲ್ಲಿ ಟ್ರೋಫಿ ಗೆದ್ದು ಸಂಭ್ರಮಿಸಿದೆ. ತಂಡದ ಆಟಗಾರರು ಅಹಮದಾಬಾದ್‍ನಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು. ಈ ರೋಡ್ ಶೋ ಓಸ್ಮಾನ್‍ಪುರ ರಿವರ್‌ಫ್ರಂಟ್‌ನಿಂದ ಪ್ರಾರಂಭವಾಗಿ ವಿಶ್ವಕುಂಜ್ ರಿವರ್‌ಫ್ರಂಟ್‌ಗೆ ಕೊನೆಗೊಂಡಿತು. ಇದನ್ನೂ ಓದಿ: ಪಾಂಡ್ಯ ಪರಾಕ್ರಮ – ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆದ್ದ ಗುಜರಾತ್

    ಬಿಸಿಸಿಐ, ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಕೆಲಸ ಮಾಡಿದ ಪಿಚ್ ಕ್ಯುರೇಟರ್‌ಗಳು ಮತ್ತು ಗ್ರೌಂಡ್ ಸ್ಟಾಂಪ್‍ಗಳಿಗೆ 1.25 ಕೋಟಿ ರೂ. ಬಹುಮಾನ ಮೊತ್ತವನ್ನು ನೀಡುವುದಾಗಿ ಸೋಮವಾರ ಘೋಷಿಸಿದೆ.

    ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ಕೇವಲ ಒಂಬತ್ತು ವಿಕೆಟ್‍ಗೆ 130 ರನ್ ಗಳಿಸಿತು. ರಾಜಸ್ಥಾನ ಪರ ಜೋಸ್ ಬಟ್ಲರ್ ಗರಿಷ್ಠ 39 ಮತ್ತು ಯಶಸ್ವಿ ಜೈಸ್ವಾಲ್ 22 ರನ್ ಗಳಿಸಿದರು. ಗುಜರಾತ್ ಟೈಟಾನ್ಸ್ ಪರ ಹಾರ್ದಿಕ್ ಪಾಂಡ್ಯ 17 ರನ್ ನೀಡಿ ಮೂರು ವಿಕೆಟ್ ಪಡೆದಿದ್ದರು.

    ರಾಜಸ್ಥಾನ ನೀಡಿದ 131 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ 11 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ನಷ್ಟಕ್ಕೆ 133 ರನ್ ಹೊಡೆದು 7 ವಿಕೆಟ್‍ಗಳ ಜಯವನ್ನು ಸಾಧಿಸಿತು.

    ತಂಡದ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಜೋಸ್ ಬಟ್ಲರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಐಪಿಎಲ್ ಫೈನಲ್‍ನಲ್ಲಿ ನಾಯಕರೊಬ್ಬರು ಈ ಪ್ರಶಸ್ತಿ ಗೆದ್ದಿರುವುದು ಇದು ಮೂರನೇ ಬಾರಿ. ಈ ಹಿಂದೆ ಅನಿಲ್ ಕುಂಬ್ಳೆ (2009) ಮತ್ತು ರೋಹಿತ್ ಶರ್ಮಾ (2015) ಮಾತ್ರ ಈ ಸಾಧನೆಗೈದಿದ್ದರು.