Tag: Bhupendra Patel

  • ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ

    ಗುಜರಾತ್-ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭ

    ಗಾಂಧಿನಗರ: ಕೇಂದ್ರದ `ಉದೇ ದೇಶ್ ಕಾ ಅಮ್ ನಾಗರಿಕ್ (ಉಡಾನ್)’ ಕಾರ್ಯಕ್ರಮದ ಅಡಿಯಲ್ಲಿ ಇದೇ ಮೊದಲ ಬಾರಿಗೆ ಗುಜರಾತ್‌ನ ಜುನಾಗಡ ಜಿಲ್ಲೆಯ ಕೇಶೋಡ್ ಮತ್ತು ಮುಂಬೈ ನಡುವೆ ನಾಗರಿಕ ವಿಮಾನಯಾನಕ್ಕೆ ಚಾಲನೆ ನೀಡಲಾಗಿದೆ. ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ವಿಮಾನ ಯಾನಕ್ಕೆ ಚಾಲನೆ ನೀಡಿದ್ದಾರೆ.

    Capture

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮದೊಂದಿಗೆ ರಾಜ್ಯದ ಅಭಿವೃದ್ಧಿಯನ್ನು ತ್ವರಿತಗೊಳಿಸಲು ಉದ್ದೇಶಿಸಿ ವಿಮಾನ ಸೇವೆ ಪ್ರಾರಂಭಿಸಲಾಗಿದೆ. ಈ ಸೌಲಭ್ಯವು ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸಲು ಸಹಕರಿಸುತ್ತದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಜೊತೆಗೆ ವ್ಯಾಪಾರ ಸಮೃದ್ಧಿಯ ಹೊಸ ಆಯಾಮವನ್ನೂ ನೋಡಬಹುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್

    FLIGHT

    ಇದೇ ವೇಳೆ ಕೇಂದ್ರ ಸಚಿವರು ಹಿರಾಸರ್ ಮತ್ತು ಧೋಲೆರಾದಲ್ಲಿ ಎರಡು ಹೊಸ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವುದಾಗಿ ಘೋಷಿಸಿದರು. ನಾವು ಗುಜರಾತ್‌ಗೆ 5 ಹೊಸ ವಿಮಾನಗಳನ್ನು ನೀಡಿದ್ದು, ಅಹಮದಾಬಾದ್‌ನಿಂದ ಅಮೃತಸರ, ರಾಂಚಿ, ಆಗ್ರಾ, ಪೋರಬಂದರ್‌ನಿಂದ ಮುಂಬೈ, ರಾಜ್‌ಕೋಟ್‌ನಿಂದ ಮುಂಬೈಗೆ ಅವು ಪ್ರಯಾಣಿಸಲಿವೆ. ಇದರೊಂದಿಗೆ 1,405 ಕೋಟಿ ರೂ. ವೆಚ್ಚದಲ್ಲಿ ಹಿರಾಸರ್‌ನಲ್ಲಿ ಮತ್ತು 1305 ಕೋಟಿ ವೆಚ್ಚದಲ್ಲಿ ಧೋಲೇರಾದಲ್ಲಿ ಎರಡು ಹೊಸ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ

    ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಉಪಸ್ಥಿತರಿದ್ದರು.

  • ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ: ಭೂಪೇಂದ್ರ ಪಟೇಲ್

    ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ: ಭೂಪೇಂದ್ರ ಪಟೇಲ್

    ಅಹಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಸರಿಸಾಟಿಯಾದ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ಮುಖ್ಯಮಂತ್ರಿ ಬಿಜೆಪಿಯ ಭೂಪೇಂದ್ರ ಪಟೇಲ್ ಹೇಳಿದ್ದಾರೆ.

    ಉತ್ತರಪ್ರಡೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಜಯಭೇರಿ ಬಾರಿಸಿದ ನಂತರ ಉತ್ಸಾಹದಲ್ಲಿರುವ ಗುಜರಾತ್ ಮುಖ್ಯಮಂತ್ರಿ ಬಿಜೆಪಿಯ ಭೂಪೇಂದ್ರ ಪಟೇಲ್ ರಾಜ್ಯದಲ್ಲಿ ತಮ್ಮ ಪಕ್ಷಕ್ಕೆ ಸರಿಸಾಟಿಯಾಗಿ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನಿಚ್ಚಳ ಗೆಲುವು ದಾಖಲಿಸಲಿದೆ. 5 ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ 4 ರಾಜ್ಯಗಳನ್ನು ಗೆದ್ದುಕೊಂಡಿರುವ ಬಿಜೆಪಿ ಗುಜರಾತ್ ಮೇಲೆ ದೃಷ್ಟಿ ನೆಟ್ಟಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಘೋಷಿಸಿರುವ ಯೋಜನೆಗಳು ಸಮರ್ಥವಾಗಿ ಜನರನ್ನು ತಲುಪಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರದ ಜನಪರ ಕೆಲಸಗಳಿಂದಾಗಿ ಜನರು ಬಿಜೆಪಿ ಸರ್ಕಾರದ ಜೊತೆಗಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಶಂಕರಣ್ಣನ ಬಳಿ ಹೋಗಿ ಮದುವೆ ಆಗ್ತೀರಾ ಎಂದು ಕೇಳಿದ್ದ ಮೇಘನಾ

    ನಾವು ಅಭಿವೃದ್ಧಿ ಮಾಡಿದ್ದೇವೆ ಎಂಬುದು ಜನರಿಗೆ ಇದು ಚೆನ್ನಾಗಿ ತಿಳಿದಿದೆ. ಕೋವಿಡ್-19 ಸಾಂಕ್ರಾಮಿಕದ ಸಮಯವಾಗಲಿ ಅಥವಾ ಇತರ ತುರ್ತು ಸಮಸ್ಯೆಗಳಾಗಲಿ, ಜನರೊಂದಿಗೆ ನಿಂತ ಏಕೈಕ ಪಕ್ಷ ಬಿಜೆಪಿ. ವಾಸ್ತವವೆಂದರೆ ನಾವು ಯಾವುದೇ ಸವಾಲನ್ನು ನಿರೀಕ್ಷಿಸುವುದಿಲ್ಲ. ನಾವು ಕೆಲಸ ಮಾಡುವಾಗ, ಚುನಾವಣಾ ಫಲಿತಾಂಶಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

    bhupendra patel gujarat chief minister

    2021 ರಲ್ಲಿ ನಾನು ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗ, ಗಾಂಧಿನಗರ ಮುನ್ಸಿಪಲ್ ಕಾರ್ಪೋರೆಷನ್‌  ಚುನಾವಣೆಯಲ್ಲಿ ಎಎಪಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಆಗ ಏನಾಯಿತು? 44 ಸ್ಥಾನಗಳಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದಿದೆ. ಅದು ನಾವು ಜನರಿಗಾಗಿ ಮಾಡಿದ ಕೆಲಸಗಳ ಫಲ. ಪ್ರಜಾಪ್ರಭುತ್ವದಲ್ಲಿ, ಯಾವುದೇ ಪಕ್ಷವು ಚುನಾವಣೆಯಲ್ಲಿ ಹೋರಾಡಲು ಎಲ್ಲಿ ಬೇಕಾದರೂ ಹೋಗಬಹುದು. ಆದರೆ ರಾಜ್ಯದ ಜನರ ಸಾಮೂಹಿಕ ಬುದ್ಧಿವಂತಿಕೆಯು ಫಲಿತಾಂಶಗಳನ್ನು ನಿರ್ಧರಿಸುತ್ತದೆ ಎಂದಿದ್ಧಾರೆ.

  • ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ:  ಗುಜರಾತ್‌ ಸಿಎಂ ಸಮರ್ಥನೆ

    ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ: ಗುಜರಾತ್‌ ಸಿಎಂ ಸಮರ್ಥನೆ

    – ಬಿಜೆಪಿ ಸರ್ಕಾರಕ್ಕೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ಅಸಮಾಧಾನ ಇಲ್ಲ

    ಗಾಂಧಿನಗರ: ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧವಿದೆ. ಆದರೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ನಮ್ಮ ಬಿಜೆಪಿ ಸರ್ಕಾರಕ್ಕೆ ಅಸಮಧಾನವಾಗಲೀ, ತೊಂದರೆಯಾಗಲೀ ಇಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.

    ಆನಂದ್ ಜಿಲ್ಲೆಯ ಬಂಧಾನಿ ಗ್ರಾಮದಲ್ಲಿ ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಒಂದಷ್ಟು ಜನರು ಸಸ್ಯಾಹಾರ ತಿನ್ನುತ್ತಾರೆ. ಇನ್ನೊಂದಷ್ಟು ಮಂದಿ ಮಾಂಸಾಹಾರ ಸೇವನೆ ಮಾಡುತ್ತಾರೆ. ಆದರೆ ಯಾರ ಆಹಾರ ಪದ್ಧತಿಯ ಬಗ್ಗೆಯೂ ನಮ್ಮ ಬಿಜೆಪಿ ಸರ್ಕಾರಕ್ಕೆ ಅಸಮಧಾನವಾಗಲೀ, ತೊಂದರೆಯಾಗಲೀ ಇಲ್ಲ. ಆದರೆ ಕೆಲವು ಸ್ಥಳಗಳಲ್ಲಿ ಇರುವ ಆಹಾರ ಮಾರಾಟ ಅಂಗಡಿ, ಕೈಗಾಡಿಗಳನ್ನು ತೆಗೆಯಬೇಕೆಂದು ಬೇಡಿಕೆ ಇದೆ. ಹೀಗಾಗಿ ಈ ಆದೇಶ ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.

    ರಸ್ತೆ ಬದಿಯಲ್ಲಿ ಗಾಡಿಗಳಲ್ಲಿ ಆಹಾರ ತಯಾರಿಸಿ ಮಾರಾಟ ಮಾಡುವ ಅನೇಕರು ಸ್ವಚ್ಛತೆ ನಿರ್ವಹಣೆ ಮಾಡದಿರುವುದು ನಮಗೆ ಆತಂಕ ತಂದಿದೆ. ವಾಹನ ಮತ್ತು ಜನರ ಸಂಚಾರಕ್ಕೆ ಅನಾನೂಕೂಲ ಮಾಡುವ ಕೈಗಾಡಿಗಳನ್ನು ನಿರ್ಬಂಧಿಸುವ ನಿರ್ಧಾರ ತೆಗೆದುಕೊಂಡಿದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಥ್ರೋಬಾಲ್ ಆಡಿ ಗಮನಸೆಳೆದ ನಟಿ ರೋಜಾ

    ಬಿಜೆಪಿ ಅಧಿಕಾರದಲ್ಲಿರುವ ಅಹ್ಮದಾಬಾದ್ ನಗರಾಡಳಿತ ಹೀಗೊಂದು ರೂಲ್ಸ್ ಮಾಡಿದೆ. ರಸ್ತೆ ಬದಿಯಲ್ಲಿ ಮತ್ತು ಶಾಲೆ, ಧಾರ್ಮಿಕ ಸ್ಥಳಗಳಿಂದ 100 ಮೀಟರ್ ಅಂತರದಲ್ಲಿ ಮಾಂಸಾಹಾರ ಮಾರಾಟ ಮಾಡುವಂತಿಲ್ಲ ಎಂದು ಹೇಳಿದೆ. ಅದರ ಬೆನ್ನಲ್ಲೇ ಮುಖ್ಯಮಂತ್ರಿ ಅದನ್ನು ಈ ಹೇಳಿಕೆಗಳ ಮೂಲಕ ಸಮರ್ಥಿಸಿಕೊಂಡಿದ್ದಾರೆ. ಬರೀ ಅಹ್ಮದಾಬಾದ್ ಅಷ್ಟೇ ಅಲ್ಲ, ವಡೋದರ, ರಾಜಕೋಟ್, ಭಾವ್‍ನಗರಗಳಲ್ಲೂ ಸ್ಥಳೀಯ ರಾಜಕೀಯ ಮುಖಂಡರು ಇದೇ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

  • ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‍ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

    ಗುಜರಾತ್ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‍ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ

    ಗಾಂಧಿನಗರ (ಗುಜರಾತ್): ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು.

    ಗಾಂಧಿನಗರದ ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಇಂದು ಮಧ್ಯಾಹ್ನ ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು.  ಇದನ್ನೂ ಓದಿ: ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

    ಬೆಂಗಳೂರಿನಿಂದ ಮುಖ್ಯಮಂತ್ರಿಗಳೊಂದಿಗೆ ತೆರಳಿದ್ದ ಸಚಿವರಾದ ಆರ್. ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್ ಅವರೂ ಕೂಡ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭಾಶಯ ಕೋರಿದ್ದಾರೆ.

    ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಅಚಿವ ಅಮಿತ್ ಷಾ, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರನ್ನು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದರು. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

  • ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

    ಗುಜರಾತ್‍ನ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ

    ­ಅಹಮಾದಾಬಾದ್: ಗುಜರಾತ್‍ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ದೇವರ ಹೆಸರಿನಲ್ಲಿ ಇಂದು ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಚನ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಿದರು.

    ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಶಾಸಕಾಂಗ ಸಭೆಯಲ್ಲಿ ಭೂಪೇಂದ್ರ ಪಟೇಲ್ ಹೆಸರನ್ನು ಆಯ್ಕೆ ಮಾಡಲಾಯಿತ್ತು. ಇಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನರೇಂದ್ರ ಸಿಂಗ್ ತೋಮರ್, ಮನ್ಸೂಕ್ ಮಾಂಡವ್ಯ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಹರಿಯಾಣ ಸಿಎಂ ಮನೋಹರಲಾಲ್ ಕಟ್ಟರ್ ಸೇರಿ ಗುಜರಾತ್ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

    ಭೂಪೇಂದ್ರ ಪಟೇಲ್, ಸಿಎಂ ಹುದ್ದೆಗೆ ಆಯ್ಕೆಯಾದ ಅಚ್ಚರಿಯ ಹೆಸರಾಗಿದ್ದು, 2022 ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಈ ಆಯ್ಕೆ ಮಾಡಿದೆ. ಗುಜರಾತ್‍ನಲ್ಲಿ ಬಹುಸಂಖ್ಯಾತರಾಗಿರುವ ಪಟೇಲ್ ಸಮುದಾಯವನ್ನು ತನ್ನೆಡೆಗೆ ಸೆಳೆಯಲು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ:  ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು

    ಜೈನ್ ಸಮುದಾಯಕ್ಕೆ ಸೇರಿದ್ದ ವಿಜಯ್ ರೂಪಾನಿ ವಿರುದ್ಧ ಆಡಳಿತ ವೈಫಲ್ಯದ ಆರೋಪ ಕೇಳಿ ಬಂದಿತ್ತು. ಕೆಲವು ಶಾಸಕರು ವಿರೋಧವನ್ನು ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಚುನಾವಣಾ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾಯಿಸಲು ಹೈಕಮಾಂಡ್ ತೀರ್ಮಾನಿಸಿತ್ತು. ರೂಪಾನಿ ಜಾಗಕ್ಕೆ ಆನಂದಿಬೇನ್ ಪಟೇಲ್ ಆಪ್ತ ಮತ್ತು ಪಟೇಲ್ ಸಮುದಾಯದ ಕದ್ವ ಉಪಪಂಗಡಕ್ಕೆ ಸೇರಿದ್ದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಯಿತ್ತು. ಈ ಮೂಲಕ ಪಟೇಲ್ ಸಮುದಾಯ ಮತ್ತು ಬಿಜೆಪಿಯಿಂದ ದೂರ ಸರಿಯುತ್ತಿರುವ ಕದ್ವ ಸಮುದಾಯ ಸೆಳೆಯಲು ಬಿಜೆಪಿ ಪ್ರಯತ್ನಿಸಿದೆ. ಇದನ್ನೂ ಓದಿ:  ಮೋದಿ ಸರ್ಕಾರದಿಂದ ಲವ್ ಲೆಟರ್ ಬಂದಿದೆ – ಆಪ್ ನಾಯಕ

    ಭೂಪೇಂದ್ರ ಪಟೇಲ್ 2017 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಘಾಟ್‍ಲೋಡಿಯಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಕ್ಷೇತ್ರವನ್ನು ಆನಂದಿ ಬೆನ್ ಪಟೇಲ್ ಮೊದಲು ಪ್ರತಿನಿಧಿಸಿದ್ದರು. ಕಳೆದ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಶಶಿಕಾಂತ್ ಪಟೇಲ್ ವಿರುದ್ಧ ಸ್ಪರ್ಧಿಸಿದ್ದ ಭೂಪೇಂದ್ರ ಪಟೇಲ್ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದರು. ಭೂಪೇಂದ್ರ ಪಟೇಲ್ ಅವರು ಈ ಹಿಂದೆ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಪೆಟ್ರೋಲ್ ಸುರಿದು ಪತಿಯನ್ನು ಹತ್ಯೆಗೈದು ಚರಂಡಿಗೆ ಶವ ಎಸೆದ್ಳು

    ಅಹಮದಾಬಾದ್‍ನ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ವ್ಯಾಸಂಗ ಮಾಡಿರುವ ಪಟೇಲ್ ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದಿದ್ದಾರೆ. 2017ರ ವಿಧಾನಸಭೆ ಚುನಾವಣೆ ಸಮಯದಲ್ಲಿ 5 ಕೋಟಿಗೂ ಅಧಿಕ ಆಸ್ತಿ ಹೊಂದಿರುವುದಾಗಿ ಪಟೇಲ್ ಘೋಷಿಸಿಕೊಂಡಿದ್ದರು.

  • ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು

    ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು

    ಕೋಲ್ಕತ್ತಾ: ನಾವು ಪೊಲೀಸ್, ಮಾಫಿಯಾಗಳು ಮತ್ತು ಹಣದ ಶಕ್ತಿಯ ವಿರುದ್ಧ ಹೋರಾಡಬೇಕಾಗಿದೆ ಎಂದು ಬಂಗಾಳದ ಬಿಜೆಪಿ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

    ಬಂಗಾಳ ಉಪಚುನಾವಣೆಗೆ ಬಗ್ಗೆ ಸುವೇಂದು ಅಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭವಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ನಾವು ಆಡಳಿತ, ಪೊಲೀಸ್, ಮಾಫಿಯಾಗಳು ಮತ್ತು ಹಣದ ಶಕ್ತಿಯ ವಿರುದ್ಧ ಹೋರಾಡಬೇಕಾಗಿದೆ. ಒಂದು ವೇಳೆ ಈ ಚುನಾವಣೆಯಲ್ಲಿ ಶೇ.60-65ರಷ್ಟು ಮತದಾನ ನಡೆದರೆ ‘ಬಂಗಾಳದ ಮಗಳು’ ಪ್ರಿಯಾಂಕಾ ಟಿಬ್ರೆವಾಲ್ ವಿಜಯಶಾಲಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

    ಬಿಜೆಪಿ ಅಭ್ಯರ್ಥಿ, ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸೆಪ್ಟೆಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ:  ಶ್ರೀಮಂತ ಪಾಟೀಲ್ ಹೇಳಿದ್ದು ಸತ್ಯ, ಎಸಿಬಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಿ :ಡಿಕೆಶಿ

    ಹೊಸದಾಗಿ ನೇಮಕಗೊಂಡ ಗುಜರಾತ್ ಮುಖ್ಯಮಂತ್ರಿ ಕುರಿತು ಮಾತನಾಡಿದ ಅವರು, ಭೂಪೇಂದ್ರ ಪಟೇಲ್ ಅವರು ಗುಜರಾತ್‍ನ ಮುಖ್ಯಮಂತ್ರಿಯಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.

  • ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

    ಭೂಪೇಂದ್ರ ಪಟೇಲ್ ಯಾರು? ಹಿನ್ನೆಲೆ ಏನು?

    ಗಾಂಧಿನಗರ: ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸಲಾಯಿತು.

    ಭೂಪೇಂದ್ರ ಪಾಟೀಲ್ ಯಾರು?
    59 ವರ್ಷದ ಭೂಪೇಂದ್ರ ಪಟೇಲ್ ಪಾಟೀದಾರ್ ಸಮುದಾಯಕ್ಕೆ ಸೇರಿರುವರಾಗಿದ್ದಾರೆ. ಅಹಮದಾಬಾದ್‍ನ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ವ್ಯಾಸಂಗ ಮಾಡಿರುವ ಪಟೇಲ್ ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಇದನ್ನೂ ಓದಿ:  ಮೋದಿ ಆಪ್ತ ಭೂಪೇಂದ್ರ ಪಟೇಲ್ ಗುಜರಾತಿನ ಮುಂದಿನ ಸಿಎಂ

    ಗುಜರಾತ್‍ನ ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರ ಆಪ್ತರಾಗಿದ್ದಾರೆ. ಘಾಟ್‍ಲೋಡಿಯಾ ಕ್ಷೇತ್ರದಿಂದ 2017ರಲ್ಲಿ ಮೊದಲ ಸಾರಿ ಶಾಸಕರಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಈ ಕ್ಷೇತ್ರವನ್ನು ಆನಂದಿ ಬೆನ್ ಪಟೇಲ್ ಪ್ರತಿನಿಧಿಸಿದ್ದರು. ಇದನ್ನೂ ಓದಿ:  ಗಣೇಶ ಹಬ್ಬದ ಸಂಭ್ರಮದಲ್ಲಿ ಕುಚುಕು ಗೆಳೆಯರು

    ಕಳೆದ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಶಶಿಕಾಂತ್ ಪಟೇಲ್ ವಿರುದ್ಧ ಸ್ಪರ್ಧಿಸಿದ್ದ ಭೂಪೇಂದ್ರ ಪಟೇಲ್ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದರು. ಭೂಪೇಂದ್ರ ಪಟೇಲ್ ಅವರು ಈ ಹಿಂದೆ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2017ರ ವಿಧಾನಸಭೆ ಚುನಾವಣೆ ಸಮಯದಲ್ಲಿ 5 ಕೋಟಿಗೂ ಅಧಿಕ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

    ಗುಜರಾತಿನಲ್ಲಿ ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ ಭೂಪೇಂದ್ರ ಪಟೇಲ್ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯು 15 ತಿಂಗಳು ಬಾಕಿ ಇರುವಂತೆ ಬಿಜೆಪಿ ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಕುತೂಹಲ ಕೆರಳಿಸಿದೆ.

  • ಮೋದಿ ಆಪ್ತ ಭೂಪೇಂದ್ರ ಪಟೇಲ್  ಗುಜರಾತಿನ ಮುಂದಿನ ಸಿಎಂ

    ಮೋದಿ ಆಪ್ತ ಭೂಪೇಂದ್ರ ಪಟೇಲ್ ಗುಜರಾತಿನ ಮುಂದಿನ ಸಿಎಂ

    ಗಾಂಧಿನಗರ: ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ ಆಗಿದ್ದಾರೆ.

    ವಿಜಯ್ ರೂಪಾನಿ ರಾಜೀನಾಮೆ ಬಳಿಕ ಬಿಜೆಪಿ ಹೈಕಮಾಂಡ್ ಅಚ್ಚರಿ ಅಭ್ಯರ್ಥಿ ಎಂಬಂತೆ ಪಾಟೀದರ್ ಸಮುದಾಯದ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾಗಿರುವ ಇವರು ಗುಜರಾತಿನ 17 ಮುಖ್ಯಮಂತ್ರಿ ಆಗಲಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಕೆರೆಯಲ್ಲಿ ಪತ್ತೆ 

    2017ರ ಚುನಾವಣೆಯಲ್ಲಿ ಘಟ್ಲೋಡಿಯಾದ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇವರು ದಾಖಲೆಯ 175,652 ಮತಗಳನ್ನು ಪಡೆದಿದ್ದರೆ ಇವರ ಪ್ರತಿಸ್ಪರ್ಧಿ ಎರಡನೇ ಸ್ಥಾನ ಪಡೆದ ಕಾಂಗ್ರೆಸ್ ಅಭ್ಯರ್ಥಿ 57,902 ಮತಗಳನ್ನು ಪಡೆದಿದ್ದರು. ಇದನ್ನೂ ಓದಿ: ಮುಂಬೈ ರೇಪ್, ಮಹಿಳೆ ಸಾವು- ಸೆ.21ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ

    ಕರ್ನಾಟಕದಲ್ಲಿ ಯಡಿಯೂರಪ್ಪನವರ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಈಗ ಗುಜರಾತಿನಲ್ಲೂ ಹೈಕಮಾಂಡ್ ಕ್ಲೀನ್ ಇಮೇಜ್ ಹೊಂದಿರುವ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಿದೆ.