Tag: Bhuvaneshwara

  • 24 ವರ್ಷಗಳ ನಂತ್ರ ಅಧಿಕಾರ ಕಳೆದುಕೊಂಡ ಬಿಜೆಡಿ- ನವೀನ್ ಪಟ್ನಾಯಕ್ ರಾಜೀನಾಮೆ

    24 ವರ್ಷಗಳ ನಂತ್ರ ಅಧಿಕಾರ ಕಳೆದುಕೊಂಡ ಬಿಜೆಡಿ- ನವೀನ್ ಪಟ್ನಾಯಕ್ ರಾಜೀನಾಮೆ

    ಭುವನೇಶ್ವರ: ಬಿಜೆಪಿ ವಿರುದ್ಧ ಸೋಲಿನ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ರಾಜೀನಾಮೆ ಸಲ್ಲಿಸಿದ್ದಾರೆ.

    ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ (Governor Raghubar Das) ಅವರನ್ನು ಭೇಟಿ ಮಾಡಿದರು. ಬಳಿಕ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ನೀಡಿದರು. ಇದನ್ನೂ ಓದಿ: ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ನಿತೀಶ್‌ ಕುಮಾರ್‌, ತೇಜಸ್ವಿ ಯಾದವ್‌

    ಜೂನ್ 4 (ನಿನ್ನೆ) ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿತು. ನವೀನ್ ಪಟ್ನಾಯಕ್ ಅವರ ಬಿಜೆಡಿ 51 ಸ್ಥಾನಗಳನ್ನು ಗೆದ್ದು 24 ವರ್ಷಗಳ ನಂತರ ಅಧಿಕಾರವನ್ನು ಕಳೆದುಕೊಂಡಿತು. ಪ್ರಮುಖ ಪ್ರತಿಸ್ಪರ್ಧಿ ಬಿಜೆಪಿ 71 ಸ್ಥಾನಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದೆ. ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿದೆ.

    2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 9, ಸಿಪಿಐ (ಎಂ) ಒಂದು ಸ್ಥಾನದಲ್ಲಿ ಗೆಲುವು ಕಂಡಿತ್ತು.

  • 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

    300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

    ಬೆಂಗಳೂರು: ಒಡಿಶಾ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲಿಸಿದ್ದೇನೆ. ಯಾರೂ ಕನ್ನಡಿಗರು ಇಲ್ಲ ಎಂದು ಸಚಿವ ಸಂತೋಷ್ ಲಾಡ್ (Santhosh Lad) ತಿಳಿಸಿದ್ದಾರೆ.

    ರೈಲು ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಎರಡ್ಮೂರು ಶವಗಾರ, ನಾಲ್ಕು ಆಸ್ಪತ್ರೆಗಳಲ್ಲಿ ಹುಡುಕಾಟ ಮಾಡಿದ್ದು, ನಾಲ್ಕು ಆಸ್ಪತ್ರೆಗಳಲ್ಲಿ 750 ಗಾಯಾಳು ರೋಗಿಗಳನ್ನು ಮಾತನಾಡಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

    ನಂತರ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 750 ಗಾಯಾಳುಗಳಲ್ಲಿ ಯಾರೂ ಕನ್ನಡಿಗರು ಇಲ್ಲ. 300ಕ್ಕೂ ಹೆಚ್ಚು ಡೆಡ್‌ಬಾಡಿಗಳನ್ನು ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಗರಿಲ್ಲ. ಕನ್ನಡಿಗರು ಸೇಫ್ ಆಗಿದ್ದಾರೆ. 110 ಜನ ಕಳಸದವರು ವಾಪಾಸ್ ಆಗುತ್ತಿದ್ದಾರೆ. ಪುರಿ ಜಗನ್ನಾಥ ದರ್ಶನಕ್ಕೆ (Puri Jagannatha Temple) ಬಂದವರಿಗೆ ಟಿಕೆಟ್ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದೇವರ ದಯೆಯಿಂದ ನಾವು ಕೋರಮಂಡಲ್ ಎಕ್ಸ್‌ಪ್ರೆಸ್ ಹತ್ತಲಿಲ್ಲ – ಬೆಂಗಳೂರಿಗೆ ಬಂದಿಳಿದ ವಾಲಿಬಾಲ್ ಕೋಚ್ ಪ್ರತಿಕ್ರಿಯೆ

    ಒಡಿಶಾದ ಪುರಿ ಜಗನ್ನಾಥ ದರ್ಶನಕ್ಕೆ ತೆರಳಿದ್ದ 12 ಯಾತ್ರಿಗಳು ವಾಪಸ್ಸಾಗಲು ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದು, ಸಂತೋಷ್ ಲಾಡ್ ಯಾತ್ರಿಗಳನ್ನು ವಾಪಸ್ ಕರೆತರುವ ಸಲುವಾಗಿ ಬೆಂಗಳೂರಿಗೆ (Bengaluru) ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಭುವನೇಶ್ವರದಿಂದ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದು, ಯಾತ್ರಿಗಳು ಇಂದು (ಭಾನುವಾರ) ಸಂಜೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

  • ಬರೋಬ್ಬರಿ 9 ವರ್ಷಗಳ ಬಳಿಕ ದೇಗುಲದಲ್ಲಿ ಕದ್ದ ಆಭರಣ ವಾಪಸ್ ನೀಡಿದ ಕಳ್ಳ!

    ಬರೋಬ್ಬರಿ 9 ವರ್ಷಗಳ ಬಳಿಕ ದೇಗುಲದಲ್ಲಿ ಕದ್ದ ಆಭರಣ ವಾಪಸ್ ನೀಡಿದ ಕಳ್ಳ!

    ಭುವನೇಶ್ವರ: ಕಳ್ಳನೊಬ್ಬ ದೇಗುಲದಿಂದ ಆಭರಣ (Ornaments) ಗಳನ್ನು ಕದ್ದು ಬರೋಬ್ಬರಿ 9 ವರ್ಷಗಳ ಬಳಿಕ ಅದನ್ನು ವಾಪಸ್ ಮಾಡಿದ ಪ್ರಸಂಗವೊಂದು ಭುವನೇಶ್ವರದ ಹೊರವಲಯದಲ್ಲಿರುವ ಗೋಪಿನಾಥಪುರದಲ್ಲಿ ನಡೆದಿದೆ.

    ಹೌದು. ಕಳ್ಳನೊಬ್ಬ ದೇವಸ್ಥಾನದಿಂದ ಕೆಲವು ಆಭರಣಗಳನ್ನು ಕದಿದ್ದನು. ಇದಾದ 9 ವರ್ಷಗಳ ನಂತರ ಇದೀಗ ಆತ ಕದ್ದ ಮಾಲನ್ನು ಹಿಂದಿರುಗಿಸಿದ್ದಾನೆ. ಈ ಘಟನೆಯ ನಂತರ ಇದೀಗ ದೇಗುಲದ ಸ್ಥಳೀಯ ನಿವಾಸಿಗಳಲ್ಲಿ ದೇವರ ಮೇಲಿದ್ದ ಭಕ್ತಿ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ. ಕಳ್ಳನು ದೇವಾಲಯದ ಅರ್ಚಕನಿಗೆ 200 ರೂಪಾಯಿಯ ದಕ್ಷಿಣೆ (ದೇಣಿಗೆ) ಮತ್ತು ಮಾಡಿದ ತಪ್ಪಿಗೆ ದಂಡವಾಗಿ 100 ರೂಪಾಯಿಯನ್ನು ಸಹ ಬಿಟ್ಟು ಹೋಗಿದ್ದಾನೆ.

    ವರದಿಗಳ ಪ್ರಕಾರ, 2014 ರಲ್ಲಿ ಗೋಪಿನಾಥಪುರ ದೇವಸ್ಥಾನದಲ್ಲಿ ಕಳ್ಳತನವಾಗಿತ್ತು. ಯಜ್ಞದ ವೇಳೆ ಅರ್ಚಕರು ಸಮೀಪದ ದೇವಸ್ಥಾನಕ್ಕೆ ಹೋಗಿದ್ದಾಗ  ಕಳ್ಳರು ರಾಧಾ-ಕೃಷ್ಣರ ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದರು ಎಂದು ಸ್ಥಳೀಯ ನಿವಾಸಿ ಶಶಿಭೂಷಣ ಮೊಹಾಂತಿ ತಿಳಿಸಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದು ಹತ್ಯೆ

    ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ಇತ್ತ ಎಲ್ಲಾ ಕಡೆ ಹುಡುಕಿದರೂ ಗ್ರಾಮಸ್ಥರಿಗೆ ಕಳ್ಳನ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಅಲ್ಲದೆ ಕಳ್ಳತನವಾದ ಆಭರಣಗಳು ಕೂಡ ಪತ್ತೆಯಾಗಲಿಲ್ಲ. ಹೀಗಾಗಿ ಕಳವಾದ ಸೊತ್ತನ್ನು ಮರಳಿ ಪಡೆದೇ ಪಡೆಯುತ್ತೇವೆ ಎಂದು ಗ್ರಾಮದ ಜನ ನಂಬಿದ್ದರು. ಇದೀಗ ದೇಗುಲದ ಆಭರಣಗಳನ್ನು ವಾಪಸ್ ಪಡೆದಿರುವುದು ಪವಾಡ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ.

     

  • ಔತಣ ಕೂಟದಲ್ಲಿ ಮಟನ್ ಊಟ ಇರಲಿಲ್ಲವೆಂದು ವಧು ಬದಲು ಬೇರೊಬ್ಬಳಿಗೆ ತಾಳಿ ಕಟ್ಟಿದ!

    ಔತಣ ಕೂಟದಲ್ಲಿ ಮಟನ್ ಊಟ ಇರಲಿಲ್ಲವೆಂದು ವಧು ಬದಲು ಬೇರೊಬ್ಬಳಿಗೆ ತಾಳಿ ಕಟ್ಟಿದ!

    ಭುವನೇಶ್ವರ: ಇತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಿಚಾರಗಳಿಗೆ ಮದುವೆಗಳು ಮರಿಯುತ್ತಿದೆ. ಅಂತೆಯೇ ಇದೀಗ ಒಡಿಶಾದಲ್ಲಿ ಕೂಡ ಇಂತದ್ದೇ ಇಂದು ವಿಚಿತ್ರ ಘಟನೆ ನಡೆದಿದೆ.

    ಔತಣ ಕೂಟದಲ್ಲಿ ಮಟನ್ ಊಟ ಹಾಕಿಸಿಲ್ಲವೆಂದು ಸಿಟ್ಟಿಗೆದ್ದ ವರ, ವಧುವಿನ ಬದಲು ಬೇರೊಬ್ಬಳಿಗೆ ತಾಳಿ ಕಟ್ಟುವ ಮೂಲಕ ಸೇಡು ತೀರಿಸಿಕೊಂಡಿದ್ದಾನೆ. ಇದನ್ನೂ ಓದಿ: ಬೆದರಿಸಿ ಹಣ ನೀಡದೇ ಮಟನ್ ಬಿರಿಯಾನಿ ಕಟ್ಟಿಸಿಕೊಂಡ ಪೊಲೀಸರು!

    ಈ ಘಟನೆ ಮನತಿರಾ ಎಂಬ ಗ್ರಾಮದಲ್ಲಿ ನಡೆದಿದೆ. ರಮಾಕಾಂತ್ ಪತ್ರಾ ಎಂಬ ವರ ಸಿಟ್ಟಿನಿಂದ ಬೇರೊಬ್ಬಳಿಗೆ ತಾಳಿ ಕಟ್ಟುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಮದುವೆ ಶಾಸ್ತ್ರಕ್ಕೂ ಮುನ್ನ ಔತಣ ಕೂಡ ಏರ್ಪಡಿಸಲಾಗಿತ್ತು. ವರನ ಕಡೆಯವರು ಈ ಔತಣ ಕೂಟದಲ್ಲಿ ಮಟನ್ ಊಟ ತಯಾರು ಮಾಡುವಂತೆ ವಧುವಿನ ಕಡೆಯವರಿಗೆ ತಿಳಿಸಿದ್ದರು. ಆದರೆ ಕಾರಣಾಂತರಗಳಿಂದ ಅವರು ಮಟನ್ ಊಟ ರೆಡಿ ಮಾಡಿರಲಿಲ್ಲ. ಹೀಗಾಗಿ ವರ ಅಲ್ಲಿಯೇ ಮದುವೆ ಕ್ಯಾನ್ಸಲ್ ಮಾಡಿದ್ದಾನೆ. ಇದನ್ನೂ ಓದಿ: ಪತ್ರಿಕೆ ಓದಲು ತಡವರಿಸಿದ ವರ – ಮದುವೆ ಮುರಿದುಕೊಂಡ ವಧು

    ಇತ್ತ ವರನ ವಥ್ನೆ ನೋಡಿದ ವಧುವಿನ ಕಡೆಯವರು ಪರಿ ಪರಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಆದರೆ ವರ ಮಾತ್ರ ಯಾವುದೇ ಕಾರಣಕ್ಕೂ ಮದುವೆಗೆ ಒಪ್ಪದೆ ಅಲ್ಲಿಂದ ಹೊರಟಿದ್ದಾನೆ. ಅಲ್ಲದೆ ಅದೇ ಗ್ರಾಮದ ಯುವತಿಯೊಬ್ಬಳ ಜೊತೆ ಮದುವೆಯಾಗಿದ್ದಾನೆ. ಆದರೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

  • ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಕಸದ ಬುಟ್ಟಿಯಲ್ಲಿ 8ರ ಬಾಲಕಿ ಪತ್ತೆ- ಅತ್ಯಾಚಾರ ನಡೆದಿರುವ ಶಂಕೆ

    ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಕಸದ ಬುಟ್ಟಿಯಲ್ಲಿ 8ರ ಬಾಲಕಿ ಪತ್ತೆ- ಅತ್ಯಾಚಾರ ನಡೆದಿರುವ ಶಂಕೆ

    ಭುವನೇಶ್ವರ: 8 ವರ್ಷದ ಬಾಲಕಿಯೊಬ್ಬಳು ಕಸದ ಬುಟ್ಟಿಯಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಅತ್ಯಾಚಾರಗೈದು ಈ ರೀತಿ ಎಸೆದು ಹೋಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಒಡಿಶಾದ ಅಂಗುಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಕಸದ ರಾಶಿಯ ಮೇಲೆ ಪತ್ತೆಯಾಗಿದ್ದಾಳೆ. ಬಾಲಕಿ ದೇಹದ ಮೇಲೆ ಹಲವು ಗಾಯಗಳಾಗಿದ್ದು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಅನುಮಾನ ಹುಟ್ಟಿಕೊಂಡಿದೆ.

    ಕಸದ ರಾಶಿಯಲ್ಲಿ ಬಿದ್ದಿದ್ದ ಬಾಲಕಿಯನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ ನಂತರ ಅತ್ಯಾಚಾರವೆಸಗಿ ಕಸದ ಬುಟ್ಟಿಗೆ ಎಸೆದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ ಎಂದು ಶಂಕಿಸಲಾಗಿದೆ. ಈಗಾಗಲೇ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ವರದಿ ಬಂದ ಬಳಿಕ ಈ ಬಗ್ಗೆ ಸ್ಪಷ್ಟವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶನಿವಾರ ರಾತ್ರಿ ಬಾಲಕಿ ಕುಟುಂಬದವರ ಜೊತೆ ಮನೆಯಲ್ಲಿ ಮಲಗಿದ್ದಳು. ಆದರೆ ಸ್ಪಲ್ಪ ಹೊತ್ತಿನ ಬಳಿಕ ಆಕೆ ಕಾಣೆಯಾಗಿದ್ದಳು. ಈ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿ, ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಮರುದಿನ ಆಕೆ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಕಸದ ರಾಶಿಯಲ್ಲಿ ಪತ್ತೆಯಾಗಿದ್ದಾಳೆ.

    ಪೊಲೀಸರು ಪ್ರಾಥಮಿಕ ಹಂತದ ತನಿಖೆ ನಡೆಸಿದ್ದು, ಹಲವು ವಿಚಾರದ ಬಗ್ಗೆ ತಿಳಿದು ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ವೈದ್ಯಕೀಯ ವರದಿ ಬಂದ ಬಳಿಕ ಶಂಕೆ ನಿಜವಾದಲ್ಲಿ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಬಾಲಕಿ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ನಾವು ವಿಧಿವಿಜ್ಞಾನ ತಂಡವನ್ನು ಘಟನಾ ಸ್ಥಳಕ್ಕೆ ಪರಿಶೀಲನೆಗಾಗಿ ಕಳುಹಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.