Tag: Bidadi Integrated Township

  • ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್.ಅಶೋಕ್

    ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್.ಅಶೋಕ್

    ರಾಮನಗರ: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು (Greater Bengaluru) ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಕಿಡಿಕಾರಿದರು. ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

    ಹೌಸಿಂಗ್ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು ನಿರ್ಮಿಸಿಲ್ಲ. ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆಗಳಲ್ಲೇ ಖಾಲಿ ಇದೆ. ಇಷ್ಟು ಖಾಲಿ ಇರುವಾಗ ಫಲವತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಂಡರೆ ಅದು ರೈತರಿಗೆ ಮಾಡುವ ವಂಚನೆ. ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸ್ವಾಧೀನ ಬೇಡವೆಂದು ರೈತರಿಗೆ ಜಮೀನು ಬಿಟ್ಟಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕುತಂತ್ರ ಮಾಡಿ ಜಮೀನು ಲೂಟಿ ಮಾಡಿ ರಿಯಲ್ ಎಸ್ಟೇಟ್‌ನಿಂದ ಹಣ ಹೊಡೆಯಲು ಪ್ಲಾನ್ ಮಾಡಿದೆ. ರಾಮನಗರದಲ್ಲಿ ಸೈಟು ಬೇಕೆಂದು ಯಾರು ಕೇಳಿದ್ದಾರೆ? ಮಾಡಿರುವ ಸೈಟುಗಳೇ ಖಾಲಿ ಇದೆ. ಇದು ಅಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಸ್ತೆ ಅಪಘಾತ ಸಂತ್ರಸ್ತರ ಚಿಕಿತ್ಸಾ ವೆಚ್ಚ 2.5 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

    ರೈತರ ಹೋರಾಟಕ್ಕೆ ನಾವೆಲ್ಲರೂ ಬೆಂಬಲ ನೀಡಿದ್ದೇವೆ. ಕೂಡಲೇ ಸರ್ಕಾರ ಈ ಸ್ವಾಧೀನ ಕ್ರಮವನ್ನು ಕೈ ಬಿಡಬೇಕು. ಸರ್ಕಾರದಿಂದ ಯಾರಾದರೂ ಬಂದು ರೈತರ ಅಹವಾಲು ಆಲಿಸಬೇಕಿತ್ತು. ರೈತರನ್ನು ಸಮಾಧಾನ ಮಾಡಿ ಮಾತನಾಡಬೇಕಿತ್ತು. ಅದನ್ನು ಬಿಟ್ಟು ದೌರ್ಜನ್ಯ ಮಾಡಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ರೈತರ ಬದುಕಿಗೆ ಕೊಳ್ಳಿ ಇಡುವ ಕೆಲಸ ಬೇಡ ಎಂದರು. ಇದನ್ನೂ ಓದಿ: ವಿಜಯಪುರ-ಚಿಕ್ಕಲಕಿ ಕ್ರಾಸ್‌ವರೆಗೆ ಸಂಚರಿಸುವ ನೂತನ ಬಸ್‌ಗಳಿಗೆ ಚಾಲನೆ

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಡಿನೋಟಿಫಿಕೇಶನ್ ಮಾಡದೆಯೇ ಹಾಗೆಯೇ ಬಿಟ್ಟುಬಿಡಬೇಕು. ಯಾವುದೇ ಸವಲತ್ತು ಬೇಡವೆಂದು ರೈತರು ಹೇಳಿದ್ದಾರೆ. ಬಹುತೇಕ ರೈತರು ಹೀಗೆಯೇ ಇರಲಿ ಎಂದು ಹೇಳಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೈತರ ಮಾತಿಗೆ ಬೆಲೆ ನೀಡಬೇಕು. ಮುಂದೆ ನಮ್ಮ ಸರ್ಕಾರ ಬಂದಾಗ ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ. ಈ ಕುರಿತು ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದೇನೆ. ಇದನ್ನು ಯಾವ ಝೋನ್ ಮಾಡಬೇಕೆಂದು ಸರ್ಕಾರ ರೈತರೊಂದಿಗೆ ಚರ್ಚಿಸಲಿ ಎಂದು ಹೇಳಿದರು. ಇದನ್ನೂ ಓದಿ: 4.8 ಕೋಟಿ ಪತ್ತೆ ಕೇಸ್‌ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌, FIR ರದ್ದು

  • ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

    ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರೋಧಿಸಿ ರೈತರ ಹೋರಾಟ – ಬಿಜೆಪಿ ನಾಯಕರು ಸಾಥ್

    – ಪ್ರತಿಭಟನೆ ವೇಳೆ ರೈತರಿಂದ ವಿಷ ಸೇವನೆಗೆ ಯತ್ನ

    ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ (Bidadi Integrated Township) ವಿರೋಧಿಸಿ ರೈತರ (Farmers) ಅಹೋರಾತ್ರಿ ಧರಣಿ ಮುಂದುವರೆದಿದ್ದು, 5ನೇ ದಿನಕ್ಕೆ ರೈತರ ಹೋರಾಟ ಕಾಲಿಟ್ಟಿದೆ. ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರೋ ಪ್ರತಿಭಟನೆಗೆ ಇಂದು ವಿಪಕ್ಷ ನಾಯಕ ಅಶೋಕ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ ಹಾಗೂ ಸಂಸದ ಡಾ.ಮಂಜುನಾಥ್ ಸಾಥ್ ನೀಡಿದ್ದಾರೆ.

    ಗ್ರಾಮಕ್ಕೆ ಎತ್ತಿನಬಂಡಿಯಲ್ಲಿ ಆಗಮಿಸಿದ ಆರ್.ಅಶೋಕ್ (R Ashok) ರೈತರ ಜೊತೆ ಕೂತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಯಾವುದೇ ಕಾರಣಕ್ಕೂ ಟೌನ್‌ಶಿಪ್ ಯೋಜನೆಗೆ ಕೃಷಿ ಭೂಮಿ ಬಳಕೆ ಮಾಡಬಾರದು. ರೈತರನ್ನ ಒಕ್ಕಲೆಬ್ಬಿಸುವ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ. ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇನೆ. ರೈತರ ಪರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಅಶೋಕ್ ರೈತರಿಗೆ ಭರವಸೆ ನೀಡಿದರು. ಇದನ್ನೂ ಓದಿ:  ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ

    ಇನ್ನೂ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿರುವಾಗಲೇ, ರೈತರು ಭೂಸ್ವಾಧೀನ ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸಿದರು. ಇಬ್ಬರು ರೈತ ಮಹಿಳೆಯರು ಹಾಗೂ ಓರ್ವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಈ ವೇಳೆ ಕೂಡಲೇ ಪೊಲೀಸರು ರೈತರ ಕೈಯಿಂದ ಕ್ರಿಮಿನಾಶಕದ ಬಾಟಲಿಗಳನ್ನ ಕಿತ್ತು ಬಿಸಾಕಿದರು. ವಿಷ ಕುಡಿಯಲು ಯತ್ನಿಸಿದವರನ್ನು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಈ ವೇಳೆ ಯಾರೂ ಆತ್ಮಹತ್ಯೆ ನಿರ್ಧಾರ ಮಾಡಬೇಡಿ, ನಿಮ್ಮ ಭೂಮಿ ಉಳಿಸಿಕೊಡುವ ಕೆಲಸ ನಾವು ಮಾಡುತ್ತೇವೆ ಎಂದು ರೈತರಿಗೆ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಮನವಿ ಮಾಡಿದರು. ಇದನ್ನೂ ಓದಿ: Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ