Tag: bidadi

  • ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರ – ರೈತರ ಭೂಮಿ ಸ್ವಾಧೀನಕ್ಕೆ ಹೆಚ್‌ಡಿಡಿ ತೀವ್ರ ವಿರೋಧ

    ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರ – ರೈತರ ಭೂಮಿ ಸ್ವಾಧೀನಕ್ಕೆ ಹೆಚ್‌ಡಿಡಿ ತೀವ್ರ ವಿರೋಧ

    – ಸಿಎಂಗೆ ಪತ್ರ ಬರೆದು ಭೂಸ್ವಾಧೀನ ನಿಲ್ಲಿಸಲು ಮಾಜಿ ಪ್ರಧಾನಿ ಒತ್ತಾಯ

    ರಾಮನಗರ: ಬಿಡದಿ (Bidadi) ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್‌ಶಿಪ್ ನಿರ್ಮಾಣ ಸಂಬಂಧ ರೈತರ ಭೂಮಿ ಸ್ವಾಧೀನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H D Devegowda) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ದೇವೇಗೌಡ ಅವರು ಪತ್ರದ ಮೂಲಕ ಭೂಸ್ವಾಧೀನ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

    ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳು:
    ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರ್‌ಗಳಲ್ಲಿರುವ ಸುಮಾರು 10,000 ಎಕ್ರೆ ಜಮೀನನ್ನು ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: Pahalgam Terrorist Attack | ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಭರತ್ ಭೂಷಣ್ ಅಂತ್ಯಕ್ರಿಯೆ

    ಜಿಲ್ಲೆಯ ರಾಮನಗರ (Ramanagara) ಮತ್ತು ಕನಕಪುರ ತಾಲೂಕಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಸಾವಿರಾರು ಎಕ್ರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನಾಗಿ ಸ್ಥಾಪಿಸಿದೆ. ಜಿಲ್ಲೆಯು ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಇದ್ದು, ಇಲ್ಲಿ ಹವವಾರು ಉದ್ಯಮಿಗಳು ಖಾಸಗಿಯಾಗಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ. ಇದನ್ನೂ ಓದಿ: ಕೊಲೆಯಾಗಿದ್ದ ಮಹಿಳೆ ಪತ್ತೆ ಕೇಸ್; 2 ವರ್ಷ ಜೈಲುಶಿಕ್ಷೆ ಅನುಭವಿಸಿ ನಿರಪರಾಧಿಯಾಗಿ ಬಿಡುಗಡೆಯಾದ ಸುರೇಶ್

    ಉಳಿದಂತೆ ಇರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿ ಅವಲಂಬಿತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು, ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಸುತ್ತಮುತ್ತ ಲಕ್ಷಾಂತರ ಮರಗಿಡಗಳನ್ನು ಬೆಳೆಸಿದ್ದಾರೆ. ಇಂತಹ ಪ್ರದೇಶವನ್ನು ಟೌನ್‌ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ. ಇದನ್ನೂ ಓದಿ: ಪಾಕ್ ನಟನ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಬಹಿಷ್ಕಾರ

    ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ಧಕ್ಕೆ ಉಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ. ಇದಲ್ಲದೇ ಕರ್ನಾಟಕ ಹೌಸಿಂಗ್ ಬೋರ್ಡ್ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಗಳು ಬಿಡದಿಯ ಸುತ್ತಮುತ್ತಲೂ ಹಲವಾರು ವಸತಿ ಯೋಜನೆಗಳನ್ನು ರೂಪಿಸಿ, ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    ಬಡ ರೈತರ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್‌ಶಿಪ್ ಯೋಜನೆಗೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಅವರು ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

  • ಬಿಡದಿ ಪಟ್ಟಣದಲ್ಲಿ ಜೆಸಿಬಿಗಳ ಘರ್ಜನೆ – ಅಧಿಕಾರಿಗಳಿಂದ ಫುಟ್‌ಪಾತ್ ಒತ್ತುವರಿ ತೆರವು

    ಬಿಡದಿ ಪಟ್ಟಣದಲ್ಲಿ ಜೆಸಿಬಿಗಳ ಘರ್ಜನೆ – ಅಧಿಕಾರಿಗಳಿಂದ ಫುಟ್‌ಪಾತ್ ಒತ್ತುವರಿ ತೆರವು

    ರಾಮನಗರ: ಬಿಡದಿ (Bidadi) ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳು ಘರ್ಜನೆ ಮಾಡಿದ್ದು, ಪುರಸಭೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫುಟ್‌ಪಾತ್ ಒತ್ತುವರಿ ತೆರವು ಮಾಡಿದ್ದಾರೆ.

    ಬಿಡದಿಯ ಬಿಜಿಎಸ್ ಸರ್ಕಲ್‌ನಿಂದ ಸಿಲ್ಕ್ ಫಾರಂವರೆಗೆ ಫುಟ್‌ಪಾತ್ (Footpath) ಮೇಲೆ ಅಂಗಡಿ ಮಳಿಗೆಗಳ ನಿರ್ಮಾಣ ಮಾಡಿಕೊಂಡು ವ್ಯಾಪಾರ-ವಹಿವಾಟು ನಡೆಸಲಾಗುತ್ತಿತ್ತು. ಇದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಫುಟ್‌ಪಾತ್ ತೆರವು ಮಾಡುವಂತೆ ಅಂಗಡಿ ಮಾಲೀಕರಿಗೆ ಪುರಸಭೆ ನೋಟಿಸ್ ನೀಡಿತ್ತು. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ನೋಟಿಸ್‌ಗೂ ಬಗ್ಗದ ಅಂಗಡಿ ಮಾಲೀಕರಿಗೆ ಇಂದು ಪುರಸಭೆ ಶಾಕ್ ನೀಡಿದ್ದು, ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ಪುರಸಭೆ ಅಧಿಕಾರಿಗಳೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಫುಟ್‌ಪಾತ್ ಒತ್ತುವರಿ ತೆರವು ಮಾಡಿ, ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸಿ, ಅಂಗಡಿ ಮಾಲೀಕರಿಗೆ ಮತ್ತೆ ಒತ್ತುವರಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಸ್ ಕಟರ್ ಬಳಸಿ ಎಟಿಎಂನಿಂದ 18 ಲಕ್ಷ ರೂ. ದೋಚಿದ ಖದೀಮರು

  • 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಯಾರ ಒತ್ತಡ ಅನ್ನೋದು ಗೊತ್ತಿಲ್ಲ: ಪರಮೇಶ್ವರ್

    2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಯಾರ ಒತ್ತಡ ಅನ್ನೋದು ಗೊತ್ತಿಲ್ಲ: ಪರಮೇಶ್ವರ್

    ಬೆಂಗಳೂರು: 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ (Bidadi) 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಬೆಟ್ಟಗುಡ್ಡ ಇದ್ಯಾ? ಗಾಳಿ ಹೆಚ್ಚಾಗಿದ್ಯಾ ಅನ್ನೋದನ್ನು ನೋಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದರು.ಇದನ್ನೂ ಓದಿ: ಬಿಡದಿಯಲ್ಲಿ ವಿಮಾನ‌ ನಿಲ್ದಾಣ ಮಾಡ್ತಿಲ್ಲ, ಅಲ್ಲಿ ಶಿವಕುಮಾರ್ ಲೇಔಟ್ ಮಾಡ್ತಿದ್ದಾರೆ: ಎಂ.ಬಿ.ಪಾಟೀಲ್

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರದಲ್ಲಿ ನಾವು ಏನು ಹೇಳಬೇಕು ಅದನ್ನ ಹೇಳಿದ್ದೇವೆ. ಈ ಹಿಂದೆ ಬಿಡದಿಯಲ್ಲಿ ಆಗಲ್ಲ ಎಂದು ತಾಂತ್ರಿಕ ಸಮಿತಿ ಹೇಳಿತ್ತು. ಆಗ ದೇವನಹಳ್ಳಿಗೆ ಶಿಫ್ಟ್ ಮಾಡಿದ್ದೆವು. ಈಗ ಮತ್ತೆ ಬಿಡದಿ ಭಾಗದಲ್ಲಿ ಆಗುತ್ತಾ? ಇಲ್ಲವಾ? ಏನು ಹೇಳುತ್ತಾರೆ ಎನ್ನುವುದನ್ನು ನೋಡಬೇಕು. ತಾಂತ್ರಿಕವಾಗಿ ಸಮಸ್ಯೆಯಿದ್ದು, ಅದಕ್ಕೆ ಒತ್ತಡ ಹಾಕಿದರೆ ಬದಲಾವಣೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದರು.

    ಎರಡನೇ ವಿಮಾನ ನಿಲ್ದಾಣಕ್ಕೆ ನೆಲಮಂಗಲ, ಬಿಡದಿ ಎರಡು ಸ್ಥಳಗಳನ್ನ ಗುರುತಿಸಿದ್ದಾರೆ. ಟೆಕ್ನಿಕಲ್ ಕಮಿಟಿ ಏನು ರಿಪೋರ್ಟ್ ಕೊಡುತ್ತಾರೆ ನೋಡೋಣ. ಫಿಸಿಬಲಿಟಿ ರಿಪೋರ್ಟ್ ಕೊಟ್ಟ ಬಳಿಕ ಗೊತ್ತಾಗುತ್ತದೆ. ಯಾರ ಒತ್ತಡದ ಬಗ್ಗೆಯೂ ನನಗೆ ಗೊತ್ತಿಲ್ಲ. ಆದರೆ ಹಾಗೆ ಮಾಡಲು ಬರಲ್ಲ ಎಂದು ಹೇಳಿದರು.ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

  • ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

    ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

    ರಾಮನಗರ: ಬಿಡದಿಯ ರೈಲ್ವೆ ನಿಲ್ದಾಣಕ್ಕೆ (Bidadi Railway Station) ಹುಸಿ ಬಾಂಬ್ ಬೆದರಿಕೆಯೊಂದು (Bomb Threat) ಬಂದಿದ್ದು, ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ.

    ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆದಿದೆ. ಇದನ್ನೂ ಓದಿ:  ಎಐ ಸೇವೆಗಾಗಿ ಗೂಗಲ್ ಜೊತೆ ಟಿಟಿಡಿ ಒಪ್ಪಂದ – ವಿಶ್ವದ ಮೊದಲ ಹಿಂದೂ ದೇವಾಲಯವೆಂಬ ಖ್ಯಾತಿಗೆ ತಿರುಪತಿ

    ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಬಿಡದಿ ರೈಲ್ವೆ ನಿಲ್ದಾಣವನ್ನು ಇಂಚಿಂಚೂ ಪರಿಶೀಲನೆ ನಡೆಸಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇರಿಸಲಾಗಿದೆ. ಇದನ್ನೂ ಓದಿ: ಕರೆಂಟ್‌ಗೂ ‘ಟೋಲ್’ ಮಾದರಿ ಶುಲ್ಕ – ಸ್ಮಾರ್ಟ್ ಮೀಟರ್ ಹೆಸರಲ್ಲಿ ಜನರಿಂದ ಲೂಟಿ

  • ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ

    ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ

    – ದೇಶದ್ರೋಹದ ಬರಹದಲ್ಲಿ ಕನ್ನಡಿಗರ ಬಗ್ಗೆಯೂ ಅವಾಚ್ಯ ಪದ ಬಳಕೆ
    – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

    ರಾಮನಗರ: ಇಲ್ಲಿನ ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದೆ.

    ಶೌಚಾಲಯದ ಗೋಡೆ ಮೇಲೆ `ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಬರಹ ಪತ್ತೆಯಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯ ಬರಹ ಬರೆದಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಿಡಿಗೇಡಿಗಳೇ ಈ ಆಕ್ಷೇಪಾರ್ಹ ಬರಹ ಬರೆದಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಬಟ್ಟೆ ಹಾಕೊಂಡು ಬಂದ್ರೆ ಈ ಬೀಚ್‌ಗೆ ನೋ ಎಂಟ್ರಿ – ಎಲ್ಲಿದೆ ‘ನ್ಯೂಡಿಸ್ಟ್‌ ಬೀಚ್‌’; ಯಾಕೆ ಈ ರೂಲ್ಸ್‌?

    ಕಿಡಿಗೇಡಿಗಳ ಕೃತ್ಯವನ್ನ ಕಾರ್ಖಾನೆಯ ಆಡಳಿತ ಮಂಡಳಿ ನೋಟಿಸ್ ಬೋರ್ಡ್‌ನಲ್ಲಿ ಹಾಕಿದ್ದು, ಈ ರೀತಿಯ ಬರವಣಿಗೆ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ಮುಂದುವರೆದು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನ ಪೊಲೀಸರಿಗೆ ಒಪ್ಪಿಸಿ, ಜೈಲು ವಾಸವಾಗುವಂತೆ ಕ್ರಮವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿ ಕೈತೊಳೆದುಕೊಂಡಿದೆ. ಅಲ್ಲದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಸುಮ್ಮನಾಗಿದೆ. ಇದನ್ನೂ ಓದಿ: IPL 2025 | 10 ತಂಡಗಳ ನಾಯಕರ ಹೆಸರು ಫೈನಲ್‌ – 9 ಮಂದಿ ಭಾರತೀಯರದ್ದೇ ಆರ್ಭಟ

    ವಿಚಾರ ತಿಳಿಯುತ್ತಿದ್ದಂತೆಯೇ ಶುಕ್ರವಾರ ರಾತ್ರಿ ಕಾರ್ಖಾನೆಗೆ ದೌಡಾಯಿಸಿದ ಪೊಲೀಸರು, ಬರಹ ಬರೆದ ಶೌಚಾಲಯದ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರಿಂದ ಮಾಹಿತಿ ಪಡೆದು, ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ಮಾಡಿದರು. ಕಾರ್‌ನ ಸೀಟ್‌ಗಳನ್ನ ತಯಾರು ಮಾಡುವ ಕಾರ್ಖಾನೆಯಲ್ಲಿ ಸುಮಾರು 400 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀಕೃಷ್ಣನ ರಥೋತ್ಸವ ಸೇವೆಯಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ ದಂಪತಿ

    ಈ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅನಾಮಧೇಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಶೌಚಾಲಯದಲ್ಲಿ ಪಾಕಿಸ್ತಾನದ ಪರ ಕನ್ನಡಿಗರ ವಿರುದ್ಧವೂ ಅವಹೇಳನ ಬರಹ ಹಿನ್ನೆಲೆ ಕಿಡಿಗೇಡಿಗಳ ಬಂಧನಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು. ಇದು ದೇಶದ್ರೋಹದ ಕೆಲಸ, ಇಂತಹ ಕೃತ್ಯ ಎಸಗಿರುವವರನ್ನ ಗಡಿಪಾರು ಮಾಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಕೈಗಾದಲ್ಲಿ ಉದ್ಯೋಗ ಮಾಹಿತಿ ನೀಡದೇ ಕನ್ನಡಿಗರಿಗೆ ವಂಚನೆ!

    ಕಾರ್ಖಾನೆ ಆಡಳಿತ ಮಂಡಳಿ ಕೇವಲ ನೋಟಿಸ್ ಬೋರ್ಡ್‌ನಲ್ಲಿ ಎಚ್ಚರಿಕೆ ನೀಡಿ ಸುಮ್ಮನಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಡಲು ವಿಳಂಬ ಮಾಡಿದೆ ಎಂದು ಕಿಡಿಕಾರಿದರು. ಅಲ್ಲದೇ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧವೂ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?

    ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರೋಧಿಸಿ ರೈತರ ಸಭೆ – ಬೃಹತ್ ಪಾದಯಾತ್ರೆಗೆ ನಿರ್ಧಾರ

    ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿರೋಧಿಸಿ ರೈತರ ಸಭೆ – ಬೃಹತ್ ಪಾದಯಾತ್ರೆಗೆ ನಿರ್ಧಾರ

    ರಾಮನಗರ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಗ್ರೇಟರ್ ಬೆಂಗಳೂರು (Greater Bengaluru) ಪ್ರಾಧಿಕಾರ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಬೆನ್ನಲ್ಲೇ ಯೋಜನೆಯನ್ನ ವಿರೋಧಿಸಿ ಬಿಡದಿ (Bidadi) ಭಾಗದ ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ರೈತರ ಜಮೀನುಗಳನ್ನು ಕಬಳಿಸುವ ಕೆಲಸ ಆಗುತ್ತಿದೆ ಎಂದು ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬಿಡದಿ ಭಾಗದ 24 ಗ್ರಾಮಗಳನ್ನ ಸೇರ್ಪಡೆ ಮಾಡಿಕೊಂಡಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯ ರೈತರ ವಿರೋಧ ವ್ಯಕ್ತವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ರೈತರನ್ನ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದು, ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. ಇಂದು ಬಿಡದಿ ಸಮೀಪದ ಹೊಸೂರಿನ ಮದ್ದೂರಮ್ಮನ ದೇವಾಲಯದ ಬಳಿ ಸುಮಾರು 500ಕ್ಕೂ ಹೆಚ್ಚು ರೈತರು ಸಭೆ ನಡೆಸಿ ಸರ್ಕಾರದ ನಿಲುವನ್ನ ಖಂಡಿಸಿದ್ದಾರೆ. ಇದನ್ನೂ ಓದಿ: ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ – ಮಾ.15ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

    ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಬಿಡದಿ ಬಳಿ 24 ಗ್ರಾಮಗಳ 9,600 ಎಕರೆ ಪ್ರದೇಶದಲ್ಲಿ ರೈತರು ಮತ್ತು ಸರ್ಕಾರದ ಪಾಲುದಾರಿಕೆಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಪುಟ ಅನುಮೋದನೆ ಪಡೆದಿದೆ. ಈ ಯೋಜನೆಗಾಗಿ ಖಾಸಗಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಳ್ಳಲು ಮುಂದಾಗಿದ್ದು, ಇದರಿಂದ 3,072 ಭೂ ಮಾಲೀಕರು ಜಮೀನು ಕಳೆದುಕೊಳ್ಳಲಿದ್ದಾರೆ. ರೈತರ ಪಾಲುದಾರಿಕೆಯಲ್ಲಿಯೇ ಯೋಜನೆ ಜಾರಿ ಮಾಡುವುದಾಗಿ ಹೇಳುವ ಸರ್ಕಾರ ಈವರೆಗೂ ಯಾವೊಬ್ಬ ರೈತನ ಅಭಿಪ್ರಾಯ ಕೇಳಿಲ್ಲ. ಯೋಜನೆ ಜಾರಿಯಾದರೇ ಈ ಭಾಗದ ಸಾವಿರಾರು ಎಕರೆ ಕೃಷಿ ಭೂಮಿ, ಸುಮಾರು 10 ಲಕ್ಷ ಮರ ಗಿಡಗಳನ್ನು ಕಳೆದುಕೊಳ್ಳುವ ಆತಂಕ ರೈತರಲ್ಲಿ ಎದುರಾಗಿದ್ದು, ಕೃಷಿ ಭೂಮಿಯನ್ನ ರೈತರಿಗೆ ಉಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: 400 ಪ್ರಯಾಣಿಕರಿದ್ದ ಪಾಕ್‌ ರೈಲು ಹೈಜಾಕ್ – 120 ಮಂದಿ ಒತ್ತೆಯಾಳಾಗಿರಿಸಿಕೊಂಡ ಉಗ್ರರು, 6 ಸೈನಿಕರ ಹತ್ಯೆ

    ಇನ್ನೂ ಸರ್ಕಾರ ಗುರುತಿಸಿರುವ ಜಾಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿ. ಇದರ ಮೂಲಕವೇ ಲಕ್ಷಾಂತರ ಮಂದಿ ರೈತರು ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದಿಂದಲೇ ಪ್ರತಿ ದಿನ ಸುಮಾರು 6 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ತೋಟಗಾರಿಕೆ, ರೇಷ್ಮೆ ಮೂಲಕ ರೈತ ಕೂಡ ಪ್ರತಿ ತಿಂಗಳು 50,000 ರೂ.ವರೆಗೂ ಸಂಪಾದನೆ ಮಾಡುತ್ತಿದ್ದಾನೆ. ಈಗ ಏಕಾಏಕಿ ಯೋಜನೆ ಜಾರಿ ಆದರೆ ರೈತರಿಗೆ ಭವಿಷ್ಯದ ಆತಂಕ ಎದುರಾಗಿದೆ. ಹಾಗಾಗಿ ಇಂದು ಸಭೆ ನಡೆಸಿದ ರೈತರು ಬೃಹತ್ ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ಬಿಡದಿಯಿಂದ ರಾಮನಗರದ ಡಿಸಿ ಕಚೇರಿವರೆಗೂ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ ವಿಶ್ವವಿದ್ಯಾಲಯ ಕಾಲೇಜುಗಳನ್ನ ವಿಭಾಗ ಮಾಡ್ಬೇಡಿ- ವಿಧಾನ ಪರಿಷತ್‌ನಲ್ಲಿ ಬಿಜೆಪಿ ಆಗ್ರಹ

    ಒಟ್ಟಾರೆ ಗ್ರೇಟರ್ ಬೆಂಗಳೂರು ಮೂಲಕ ಹೊಸಹೊಸ ಟೌನ್ ಶಿಪ್ ನಿರ್ಮಾಣ ಮಾಡಲು ಚಿಂತಿಸಿರುವ ಸರ್ಕಾರಕ್ಕೆ ರೈತರು ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದು, ಸರ್ಕಾರ ರೈತರ ಮನವೊಲಿಸುತ್ತಾ ಅಥವಾ ಕೃಷಿ ಭೂಮಿಯ ಸ್ವಾಧೀನ ಪ್ರಕ್ರಿಯೆ ಕೈಬಿಡುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ – ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆ?

  • ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂ ಒತ್ತುವರಿ (Land Encroachment) ಆರೋಪ ಹಿನ್ನೆಲೆ ಎರಡನೇ ದಿನವೂ ಸರ್ವೇ (Survey) ಕಾರ್ಯ ಮುಂದುವರಿದಿದೆ.

    ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ತೋಟವನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ರೆವೆನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಸರ್ವೇ ಕಾರ್ಯ ನಡೆಯುತ್ತಿದ್ದು, ಕುಮಾರಸ್ವಾಮಿ ತೋಟ ಹಾಗೂ ಸುತ್ತಮುತ್ತಲಿನ ಜಮೀನುಗಳನ್ನೂ ಸರ್ವೇ ಮಾಡಲಾಗಿದೆ. ಆಧುನಿಕ ಸರ್ವೇ ಉಪಕರಣಗಳ ಮೂಲಕ ಸರ್ವೇ ಕಾರ್ಯ ನಡೆಸಿ ಜಮೀನಿನ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ

    ಕಂದಾಯ ಇಲಾಖೆ ಅಧಿಕಾರಿಗಳ ಸರ್ವೆ ಕಾರ್ಯಕ್ಕೆ ಜಮೀನಿನ ಮೂಲ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಸರಿಯಾದ ರೀತಿಯಲ್ಲಿ ಸರ್ವೇ ಮಾಡುತ್ತಿಲ್ಲ. ಬೇಕಾಬಿಟ್ಟಿ ಸರ್ವೆ ಮಾಡುತ್ತಿದ್ದಾರೆ. ನೋಟಿಸ್ ಕೊಟ್ಟು ಮೂಲ ಮಾಲೀಕರನ್ನು ಸ್ಥಳಕ್ಕೆ ಕರೆಸಿದ್ದಾರೆ. ಆದರೆ ಕುಮಾರಸ್ವಾಮಿ ಅವರ ತೋಟದ ಒಳಗೆ ಸರ್ವೇ ಮಾಡುವಾಗ ನಮ್ಮನ್ನು ಒಳಗೆ ಬಿಟ್ಟಿಲ್ಲ ಎಂದು ಸರ್ವೇ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್

  • Ramanagara| ಬಾಯ್ಲರ್ ಪೈಪ್ ಸ್ಫೋಟ – ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವು

    Ramanagara| ಬಾಯ್ಲರ್ ಪೈಪ್ ಸ್ಫೋಟ – ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವು

    ರಾಮನಗರ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು (Boiler Blast) ಗಾಯಗೊಂಡಿದ್ದ 5 ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

    ಉಮೇಶ್ ಕುಮಾರ್ ಸಿಂಗ್ (32) ಮೃತ ಕಾರ್ಮಿಕ. ಕಳೆದ ಶನಿವಾರ ಬಿಡದಿಯ (Bidadi) ಭೈರಮಂಗಲ ಕ್ರಾಸ್ ಬಳಿ ಇರುವ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಪೈಪ್ ಸ್ಫೋಟಗೊಂಡು ಐದು ಮಂದಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದ್ದು, ಈ ಪೈಕಿ ಇಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸಾಧು ಸಂತರೊಂದಿಗೆ ಸೇರಿಕೊಂಡು ಕ್ರಾಂತಿವೀರ ಬ್ರಿಗೇಡ್ ಶುರು – ಫೆ.4 ರಂದು ಉದ್ಘಾಟನೆ: ಈಶ್ವರಪ್ಪ

    ಒಣ ತ್ಯಾಜ್ಯ ಬರ್ನ್ ಆದ ನಂತರ ಬೂದಿ ಹೊರ ಹೋಗುವ ಬಾಯ್ಲರ್ ಪೈಪ್ ಕಟ್ಟಿಕೊಂಡಿದ್ದ ಪರಿಣಾಮ ಕಾರ್ಮಿಕರು ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಓಪನ್ ಮಾಡಿದ ಕಾರಣ ಅವಘಡ ಸಂಭವಿಸಿದೆ. ಅಲ್ಲದೇ ಇಂದು ಸಂಜೆ ಘಟನಾ ಸ್ಥಳಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಫೆ.5ಕ್ಕೆ ಚುನಾವಣೆ, ಫೆ.8 ರಂದು ಮತ ಎಣಿಕೆ

  • ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

    ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

    ರಾಮನಗರ: ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ವಿಧಿವಶರಾದ ಹಿನ್ನೆಲೆ ಬುಧವಾರ ರಾಮನಗರದಲ್ಲಿ (Ramanagara) ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮಾಹಿತಿ ನೀಡಿದ್ದಾರೆ.

    ಬುಧವಾರ ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿದ್ದು, ಜಿಲ್ಲಾಡಳಿತ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಬಿಡದಿಯ ಬಿಜೆಎಸ್ ಸರ್ಕಲ್, ರಾಮನಗರ ಐಜೂರು ವೃತ್ತ ಹಾಗೂ ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಭಾಗ-1 | ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!

    ಬೆಳಗ್ಗೆ 9:30ಕ್ಕೆ ಬಿಡದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ರಾಮನಗರದ ಐಜೂರು ವೃತ್ತ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಯಿಂಟ್‌ನಲ್ಲೂ 15ರಿಂದ 20 ನಿಮಿಷಗಳು ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಮೈಸೂರು-ಬೆಂಗಳೂರು ಹಳೆ ಹೆದ್ದಾರಿಯಲ್ಲಿ ಎಸ್.ಎಂ.ಕೃಷ್ಣ ಪಾರ್ಥೀವ ಶರೀರ ಸೋಮನಹಳ್ಳಿ ತಲುಪಲಿದೆ. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

  • ಚನ್ನಪಟ್ಟಣ ಉಪಚುನಾವಣೆ; ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್‌ಗಟ್ಟಲೇ ಸೀರೆ, ಪಂಚೆ ಜಪ್ತಿ

    ಚನ್ನಪಟ್ಟಣ ಉಪಚುನಾವಣೆ; ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್‌ಗಟ್ಟಲೇ ಸೀರೆ, ಪಂಚೆ ಜಪ್ತಿ

    – ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಹಿನ್ನೆಲೆ ಚುನಾವಣಾಧಿಕಾರಿಗಳು (Election Officers) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಬಂಡಲ್‌ಗಟ್ಟಲೇ ಸೀರೆ, ಪಂಚೆಗಳನ್ನು ಜಪ್ತಿ ಮಾಡಿದ್ದಾರೆ.

    ಬಿಡದಿಯ (Bidadi) ಹೊಸದೊಡ್ಡಿ ಗ್ರಾಮದ ಬಳಿ ಇರುವ ಗೋಡೌನ್‌ನಲ್ಲಿ ಅಕ್ರಮವಾಗಿ ಸೀರೆ ಮತ್ತು ಪಂಚೆಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಚನ್ನಪಟ್ಟಣ ಮತದಾರರಿಗೆ ಹಂಚಲು ಶೇಖರಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ದಾಖಲೆ ಇಲ್ಲದೇ ಶೇಖರಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಸೀರೆ ಮತ್ತು ಪಂಚೆಯನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಸಾಗಿಸುತ್ತಿದ್ದ ‘ಈರುಳ್ಳಿ ಬಾಂಬ್’‌ ಸ್ಫೋಟಗೊಂಡು ಓರ್ವ ಸಾವು

    ಇನ್ನು ಈ ಕುರಿತು ಚುನಾವಣೆನೀತಿ ಸಂಹಿತೆ ಉಲ್ಲಂಘನೆ ಅಡಿ ದೂರು ದಾಖಲಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಲೀಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: 44 ವರ್ಷಗಳ ನಂಟು ಕಡಿದುಕೊಂಡ ಮುಂಬೈ ಕಾಂಗ್ರೆಸ್ ಮುಖಂಡ – 5 ಬಾರಿ ಕಾರ್ಪೋರೇಟರ್ ಆಗಿದ್ದ ರವಿರಾಜ ಬಿಜೆಪಿ ಸೇರ್ಪಡೆ