Tag: bidar

  • RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್

    RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್

    ಬೀದರ್: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ (Education Department) ನೋಟಿಸ್ ನೀಡಿದೆ.

    ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು ಅ.7 ಮತ್ತು ಅ.13ರಂದು ಔರಾದ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆ ದಲಿತ ಸೇನೆ ಮುಖಂಡರು ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅ.27ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಮೂಲ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ

    ದೂರು ಸಲ್ಲಿಸಿದ ಮರುದಿನವೇ ನಾಲ್ಕು ಜನ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ನೀಡಿದ್ದಾರೆ. ಸರ್ಕಾರಿ ನೌಕರರು ರಾಜಕೀಯ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ. ನೀವು ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿರುವ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಸರ್ಕಾರದ ಸೇವಾ ನಿಬಂಧನೆಗೆ ವಿರುದ್ಧವಾಗಿ ಕರ್ತವ್ಯ ಮಾಡಿದ್ದೀರಿ. ಹೀಗಾಗಿ ಖುದ್ದಾಗಿ ಕಚೇರಿಗೆ ಬಂದು ಹೇಳಿಕೆ ನೀಡಿ, ಇಲ್ಲದಿದ್ರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ನೋಟಿಸ್ ಉಲ್ಲೇಖಿಸಿದ್ದಾರೆ.

  • ಬ್ರಿಮ್ಸ್ ವೈದ್ಯರಿಗೆ 9 ತಿಂಗಳಿಂದ ನೋ ಸ್ಯಾಲರಿ – ಇತ್ತ ನೋಟಿಸ್ ನೀಡದೇ 40 ವೈದ್ಯರು ಕೆಲಸದಿಂದ ವಜಾ

    ಬ್ರಿಮ್ಸ್ ವೈದ್ಯರಿಗೆ 9 ತಿಂಗಳಿಂದ ನೋ ಸ್ಯಾಲರಿ – ಇತ್ತ ನೋಟಿಸ್ ನೀಡದೇ 40 ವೈದ್ಯರು ಕೆಲಸದಿಂದ ವಜಾ

    ಬೀದರ್: ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕಳೆದ 7-8 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರಿಗೆ ಕಳೆದ 9 ತಿಂಗಳಿನಿಂದ ಸಂಬಳ ನೀಡಿಲ್ಲ, ಇದೀಗ ನೋಟಿಸ್ ನೀಡದೇ ಏಕಾಏಕಿ ವಜಾಗೊಳಿಸಿದ್ದಾರೆ.

    ಕೋವಿಡ್ ಸಮಯದಲ್ಲಿ ಗುತ್ತಿಗೆ ವೈದ್ಯರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಕೆಲಸ ಮಾಡಿದ್ದರು. ಅದರಂತೆ ಪ್ರತಿ ವರ್ಷವೂ ಅವರ ಗುತ್ತಿಗೆ ಮುಗಿದ ಮೇಲೆ ಮತ್ತೆ ಗುತ್ತಿಗೆಯನ್ನು ಎಂದಿನಂತೆ ಮುಂದುವರಿಸುತ್ತಿದ್ದರು. ಆದರೆ ಈ ಬಾರಿ 9 ತಿಂಗಳ ಸಂಬಳವನ್ನೂ ನೀಡದೇ ಏಕಾಏಕಿ 40 ವೈದ್ಯರನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಇದರಿಂದ ವೈದ್ಯರು ಅಕ್ಷರಶಃ ಕಂಗಾಲಾಗಿದ್ದಾರೆ.ಇದನ್ನೂ ಓದಿ: Dharmasthala Case | ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ, ಈ ತಿಂಗಳೊಳಗೆ ವರದಿ: ಪರಮೇಶ್ವರ್

    ಈಗಾಗಲೇ ಕೆಲವು ವೈದ್ಯರು ಕರ್ತವ್ಯ ಬಿಡುಗಡೆ ಪತ್ರ ತೆಗೆದುಕೊಂಡಿದ್ದು, ಇನ್ನೂ ಕೆಲ ವೈದ್ಯರು ಬಿಡುಗಡೆ ಪತ್ರ ತೆಗೆದುಕೊಳ್ಳದೇ ಬ್ರಿಮ್ಸ್ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ನಮ್ಮಗೆ ಬರೋಬ್ಬರಿ 9 ತಿಂಗಳಿಂದ ಸಂಬಳ ನೀಡಿಲ್ಲ, ಜೊತೆಗೆ ಈಗ ಯಾರಿಗೂ ಹೇಳದೇ, ಕೇಳದೇ ನಮ್ಮನ್ನ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ವೈದ್ಯರು ಕಿಡಿಕಾರಿದ್ದಾರೆ.ಇದನ್ನೂ ಓದಿ: ದೆಹಲಿಯಿಂದ ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್‌

  • ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

    ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

    ಬೀದರ್‌: ನಗರದ ಪ್ರಮುಖ ರಸ್ತೆಗಳು ಕತ್ತಲ್ಲನಿಂದ ಕೂಡಿ ಜನ್ರಿಗೆ ತೊಂದರೆಯಾಗಬಾರದು ಹಾಗೂ ಸುಂದರವಾಗಿ ಕಾಣಬೇಕು ಎಂದು ಕೋಟಿ ಕೋಟಿ ಅನುದಾನದಲ್ಲಿ ಬಟರ್ ಫ್ಲೈ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಆದ್ರೆ ವಿಮಾನ ನಿಲ್ದಾಣ ಟು ಬುಡಾ ಕಮಾನ್ ವರೆಗೆ ಯಾವುದೇ ಬಟರ್ ಫ್ಲೈ ಬೀದಿ ದೀಪಗಳನ್ನು (Butterfly Road Light) ಹಾಕದೇ, ಹಾಕಿದ್ದೆವೆ ಎಂದು ಕೋಟ್ಯಂತರ ಹಣ ಗೋಲ್ಮಾಲ್ ಮಾಡಲಾಗಿದೆ.

    ದಾಖಲೆಗಳ ಪ್ರಕಾರ ಎಲ್ಲಾ ಬೀದಿ ದೀಪಗಳನ್ನು ಅಳವಡಿಸಿಲಾಗಿದೆ ಎಂದು ಅನುದಾನ ಕೂಡಾ ಬಿಡುಗಡೆಯಾಗಿದೆ. ಆದ್ರೆ ಒಂದು ವರ್ಷವಾದ್ರೂ ಲೈಟ್ ಪೋಲ್‌ ಹಾಕದೇ ಇರೋದು ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್ ನಲ್ಲಿ ಬಹಿರಂಗವಾಗಿದೆ.

    ಬೀದರ್ ನಗರ ಅಂದವಾಗಿ ಮತ್ತು ಕತ್ತಲು ಮುಕ್ತವಾಗಲಿ ಎಂದು ಕೋಟಿ ಕೋಟಿ ಅನುದಾನದಲ್ಲಿ ಮಾಡಿದ ಬಟರ್ ಪ್ಲೈಯ್ ದೀಪಗಳ ಅಳವಡಿಕೆಯಲ್ಲಿ ಮಹಾ ಗೋಲ್ಮಾಲ್ ನಡೆದಿದೆ ಎಂಬುದು ಬೆಳಕಿಗೆ ಬಂದಿದೆ ಹೌದು ಬೀದರ್ ನಗರಸಭೆಯಿಂದ ಅಳವಡಿಸಿದ ಬಟರ್ ಫ್ಲೈ ಬೀದಿ ದೀಪಗಳಲ್ಲಿ ಬರೋಬ್ಬರಿ 73 ಲಕ್ಷ ಹಣ ಬಿಡುಗಡೆ ಆಗಿದೆ. ಆದರೆ ಯಾವುದೇ ಬೀದಿ ದೀಪಗಳನ್ನ ಅಳವಡಿಕೆ ಮಾಡದೇ ಹಣವನ್ನು ದುರುಪಯೋಗ ಮಾಡಿಕೊಂಡಿರುವುದು ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗವಾಗಿದೆ.

    2023 ಮತ್ತು 2024ನೇ ಸಾಲಿನ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ಬೀದರ್ ಹೊರ ವಲಯದ ವಿಮಾನ ನಿಲ್ದಾಣದಿಂದ ಬುಡಾ ಕಮಾನ್ ವರೆಗೆ ಬಟರ್ ಫ್ಲೈ ಸ್ಟ್ರೀಟ್ ಲೈಟ್ ಪೋಲ್‌ಗಳನ್ನ ಅಳವಡಿಸಲು ಬರೋಬ್ಬರಿ 73 ಲಕ್ಷ ಹಣ ಬಿಡುಗಡೆ ಮಾಡಲಾಗಿದೆ. ಆದ್ರೆ 2 ಕಿಮೀ ದೂರದ ಈ ರಾಜ್ಯ ಹೆದ್ದಾರಿಯಲ್ಲಿ ಒಂದು ವರ್ಷಗಳೇ ಕಳೆದ್ರೂ ಒಂದೇ ಒಂದು ಬಟರ್ ಫ್ಲೈ ಬೀದಿ ದೀಪಗಳನ್ನು ಅಳವಡಿಸದೇ ಲಕ್ಷಾಂತರ ರೂ ಹಣವನ್ನ ಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ನಾವು ಈ ಪೋಲ್‌ಗಳನ್ನ ಬೇರೆ ಕಡೆ ಹಾಕಿದ್ದೆವೆ ಎಂದು ಹೇಳಲಾಗುತ್ತಿದೆ. ಗುತ್ತಿಗೆದಾರರು, ಅಧಿಕಾರಿಗಳು ಮತ್ತು ಜನಪ್ರತಿನಿಗಳು ಸೇರಿಕೊಂಡು ಗೋಲ್ಮಾಲ್ ಮಾಡಲೇಂದೆ ಇಂದು ಬಟರ್ ಫ್ಲೈ ಬೀದಿ ಕಾಮಗಾರಿ ಕೈಗೆತ್ತುಕೊಂಡಿದ್ದಾರೆ ಎಂಬುದು ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗವಾಗಿದೆ.

    ಇನ್ನು ಪೌರಾಡಳಿತ ಸಚಿವ ರಹೀಂಖಾನ್ ಅವರ ನಿವಾಸದ ಬಳಿಯೇ ಈ ರಸ್ತೆ ಇದ್ದು ಸಚಿವರು ಈ ಬಗ್ಗೆ ಗಮನ ಹರಿಸದೇ ಇರೋದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಮನೆಯ ಪಕ್ಕದಲ್ಲೇ ಇರುವ ನಗರದ ಪ್ರಮುಖ ರಸ್ತೆಯಲ್ಲಿ ಬೀದಿ ದೀಪಗಳು ಹಾಗೂ ಪೋಲ್‌ಗಳನ್ನ ಹಾಕದೇ ಹಾಕಿದ್ದೆವೆ ಎಂದು 73 ಲಕ್ಷ ಹಣ ಗುಳಂ ಮಾಡಿದ್ದಾರೆ. ಇದು ಸಚಿವರ ಗಮಕ್ಕೆ ಬಂದಿಲ್ವಾ ಎಂಬುದು ಪ್ರತಿಯೊಬ್ಬರಿಗೂ ಪ್ರಶ್ನೆ ಕಾಡತೊಡಗಿದೆ.

    ಇನ್ನೂ ನಗರದಲ್ಲಿ ಸ್ಟ್ರೀಟ್‌ಲೈಟ್‌ಗಳ ದುರಸ್ತಿ ಮಾಡುತ್ತಿವೆ ಎಂದು 15 ಲಕ್ಷ ಹಾಗೂ ಇನ್ನಿತರ ಕಾಮಗಾರಿ ಹೆಸರಿನಲ್ಲಿ ಕೋಟಿ ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ನಗರಸಭೆಯಿಂದ ಈಗಾ ಮಹಾನಗರ ಪಾಲಿಕೆಯಾಗಿದ್ದು, ಆದ್ರು ಅಭಿವೃದ್ಧಿ ಹೆಸರಿನಲ್ಲಿ ಇಲ್ಲಿನ ಅದಿಕಾರಿಗಳು ಕೋಟಿ ಕೋಟಿ ಹಣವನ್ನು ನುಂಗಿ ನೀರುಕುಡಿಯುತ್ತಿದ್ದಾರೆ. ಇನ್ನು ಈ ಬಗ್ಗೆ ಕಾಮಗಾರಿಯ ಇಂಜಿನಿಯರ್‌ಗೆ ಪ್ರಶ್ನೆ ಮಾಡಿದಾಗ ಮುಂದಿನ ಸಾರಿ ಇದನ್ನು ಸರಿಪಡುಸುತ್ತೆವೆ ಎಂದು ಬಟರ್ ಪ್ಲೈಯ್ ಬೀದಿ ದೀಪಗಳ ಗೋಲ್ಮಾಲ್‌ನ್ನು ಪರೋಕ್ಷವಾಗಿ ಒಪ್ಪಿಕೊಂಡ್ರು.

  • ವಿವಾಹಿತೆ ಜೊತೆ ಅಕ್ರಮ ಸಂಬಂಧ ಶಂಕೆ – ಕೈ, ಕಾಲು ಕಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್

    ವಿವಾಹಿತೆ ಜೊತೆ ಅಕ್ರಮ ಸಂಬಂಧ ಶಂಕೆ – ಕೈ, ಕಾಲು ಕಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್

    – ಹಲ್ಲೆಗೊಂಡ ಯುವಕ ಸಾವು, ಆರೋಪಿಗಳು ಅರೆಸ್ಟ್

    ಬೀದರ್: ಯುವಕನೊಬ್ಬ ವಿವಾಹಿತೆಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಆತನ ಕೈ-ಕಾಲು ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೀದರ್ (Bidar) ಜಿಲ್ಲೆ ಔರಾದ್ (Aurad) ತಾಲೂಕಿನ ನಾಗನಪಲ್ಲಿ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮೃತ ಯುವಕನನ್ನು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆ ಗೌಣಗಾಂವ್ ಗ್ರಾಮದ ವಿಷ್ಣು (27) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಲಕ್ಷದ್ವೀಪ ಸಮೀಪ ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

    ಮೃತ ವಿಷ್ಣು ಕಳೆದ ಒಂದು ವರ್ಷದಿಂದ ನಾಗನಪಲ್ಲಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಅ.21ರಂದು ತನ್ನ ಇಬ್ಬರು ಸ್ನೇಹಿತರೊಂದಿಗೆ ಮಹಿಳೆಯ ಮನೆಗೆ ಹೋಗಿದ್ದ ವೇಳೆ ಮಹಿಳೆಯ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಯುವಕನ ಕೈ-ಕಾಲು ಕಟ್ಟಿ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಹಲ್ಲೆ ನಡೆಸಿರುವುದು ಗೊತ್ತಾಗಿದೆ.

    ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಥಳಿಸಿರುವುದಾಗಿ ಮೃತ ವಿಷ್ಣು ತಾಯಿ ಲಕ್ಷ್ಮೀಯಿಂದ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಅಕ್ರಮ ಸಂಬಂಧ ಶಂಕೆಯಿರುವ ಮಹಿಳೆ ಪೂಜಾ ಎಂಬಾಕೆಯಿಂದ ಪ್ರತಿದೂರು ದಾಖಲಾಗಿದೆ.

    ಸದ್ಯ ಹಲ್ಲೆ ನಡೆಸಿದ ಮಹಿಳೆಯ ತಂದೆ ಅಶೋಕ್ & ಮಹಿಳೆಯ ಸಹೋದರ ಗಜಾನನ ಇಬ್ಬರನ್ನು ಚಿಂತಾಕಿ ಪೊಲೀಸರು ಬಂಧಿಸಿದ್ದಾರೆ.ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ‘ಮೋಂಥಾ’ ಸೈಕ್ಲೋನ್ ಅಬ್ಬರ – ಚೆನ್ನೈನಲ್ಲಿ ಭಾರೀ ಮಳೆ ಸಾಧ್ಯತೆ

  • ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ

    ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ

    ಬೆಂಗಳೂರು/ಬೀದರ್: ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT Bengaluru) ಮತ್ತು ಬೀದರ್ (Bidar) ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಗಳ ಅವಧಿಯನ್ನು ವಿಸ್ತರಿಸಿದೆ.

    ರೈಲು ಸಂಖ್ಯೆ 06539 :
    ಇದೇ ಅಕ್ಟೋಬರ್ 31ರವರೆಗೆ ಬೆಂಗಳೂರಿನಿಂದ ಬೀದರ್‌ಗೆ ಸಂಚರಿಸಲು ನಿಗದಿಯಾಗಿದ್ದ ರೈಲನ್ನು ಇದೇ ನವೆಂಬರ್ 2ರಿಂದ ಡಿಸೆಂಬರ್ 28ರವರೆಗೆ ವಿಸ್ತರಿಸಲಾಗಿದೆ.ಇದನ್ನೂ ಓದಿ: PUBLiC TV Explainer| ಅಮೆರಿಕ Vs ಚೀನಾ – ಏನಿದು ಗೋಲ್ಡ್‌ ಬಾಂಬ್‌? ವಿಶ್ವದ ಮೇಲೆ ಪರಿಣಾಮ ಏನು?

    ರೈಲು ಸಂಖ್ಯೆ 06540:
    ಅದೇ ರೀತಿ ಇದೇ ನವೆಂಬರ್ 1ರವರೆಗೆ ಬೀದರ್‌ನಿಂದ ಎಸ್‌ಎಂವಿಟಿ ಬೆಂಗಳೂರಿಗೆ ಪ್ರತಿ ಶನಿವಾರ ಮತ್ತು ಸೋಮವಾರ ಸಂಚರಿಸಲು ನಿಗದಿಯಾಗಿದ್ದ ರೈಲನ್ನು ಇದೇ ನವೆಂಬರ್ 3ರಿಂದ ಡಿಸೆಂಬರ್ 29ರವರೆಗೆ ವಿಸ್ತರಿಸಲಾಗಿದೆ. ಈ ವಿಸ್ತೃತ ಅವಧಿಯಲ್ಲಿ ಎರಡೂ ದಿಕ್ಕುಗಳಲ್ಲಿ ತಲಾ 17 ಟ್ರಿಪ್‌ಗಳು ಕಾರ್ಯಾಚರಣೆ ಮಾಡಲಾಗುತ್ತದೆ. ಈ ವಿಶೇಷ ರೈಲುಗಳು ಈಗಿರುವ ನಿಲುಗಡೆಗಳು, ವೇಳಾಪಟ್ಟಿ ಮತ್ತು ಬೋಗಿಗಳ ಸಂಯೋಜನೆಯಲ್ಲಿಯೇ ಸಂಚಾರ ಮುಂದುವರಿಸಲಿವೆ.

  • ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಗೇಟ್‌ಪಾಸ್‌

    ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಗೇಟ್‌ಪಾಸ್‌

    ಬೀದರ್‌: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.

    ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ತಂದೆ ಅಶೋಕ ಕುಮಾರ್‌ ಅವರನ್ನು ಕೆಲಸದಿಂದ ತಾಲೂಕು ಆಡಳಿತ ಬಿಡುಗಡೆಗೊಳಿಸಿದೆ. ಇದನ್ನೂ ಓದಿ:  ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ

     

    ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಸಿಬ್ಬಂದಿ ಪ್ರಮೋದ್ ಭಾಗಿಯಾಗಿದ್ದು ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದೆ.

    ಬಸವಕಲ್ಯಾಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಸುಮಾರು 20ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಡೆದ ಪಥಸಂಚಲನದಲ್ಲಿಹಲವು ಸರ್ಕಾರಿ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಿದ್ದಾರೆ.

  • ಬಸವಕಲ್ಯಾಣದಲ್ಲಿ ನಡೆದಿದ್ದ RSS ಪಥಸಂಚಲನದಲ್ಲಿ GST ಆಫೀಸರ್ ಭಾಗಿ – ವಿಡಿಯೋ ವೈರಲ್

    ಬಸವಕಲ್ಯಾಣದಲ್ಲಿ ನಡೆದಿದ್ದ RSS ಪಥಸಂಚಲನದಲ್ಲಿ GST ಆಫೀಸರ್ ಭಾಗಿ – ವಿಡಿಯೋ ವೈರಲ್

    ಬೀದರ್: ಬಸವಕಲ್ಯಾಣದಲ್ಲಿ ನಡೆದಿದ್ದ ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಜಿಎಸ್‌ಟಿ ಆಫೀಸರ್ (GST Officer)  ಭಾಗಿಯಾಗಿರುವ ವಿಡಿಯೋ ಭಾರೀ ವೈರಲ್ ಆಗಿದೆ.

    ಕಲಬುರಗಿ (Kalaburagi) ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ಅ.14ರಂದು ಬಸವಕಲ್ಯಾಣದಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಗಣವೇಶ ಧರಿಸಿ ಜಿಎಸ್‌ಟಿ ಆಫೀಸರ್ ಭಾಗವಹಿಸಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಇದನ್ನೂ ಓದಿ: ಮೊದಲ ದಿನ ಸಾಧ್ಯವಾಗದ ಹಾಸನಾಂಬೆ ದರ್ಶನ – ಇಂದು ಮತ್ತೆ ದೇವಾಲಯಕ್ಕೆ ಬಂದ ಸುಳ್ಯ ಶಾಸಕಿ

    ಆರ್‌ಎಸ್‌ಎಸ್‌ನ 100ನೇ ವರ್ಷದ ಸಂಭ್ರಮಾಚರಣೆ ಹಿನ್ನಲೆ ಪಥಸಂಚಲನ ನಡೆದಿದ್ದು, ಈ ಪಥಸಂಚಲನದಲ್ಲಿ ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಭಾಗವಹಿಸಿದ್ದರು. ಪಥಸಂಚಲನವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ್ದು, ಇದೇ ಪಥಸಂಚಲನದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಹಾಗು ಪಿಡಿಓಗಳು ಕೂಡಾ ಭಾಗಿಯಾಗಿದ್ದರು ಎನ್ನಲಾಗುತ್ತಿದೆ.

     

  • ಬೀದರ್ | ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣ ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

    ಬೀದರ್ | ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣ ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

    ಬೀದರ್: ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

    ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಟಸಾಂಗ್ವಿ ಗ್ರಾಮದ ಬಳಿ ಈ ಘಟನೆ ನಡೆದಿದೆ. 1.60 ಲಕ್ಷ ರೂ. ಬಸ್‌ನಲ್ಲೇ ಬಿಟ್ಟು ಹೋದ ವಿಷಯ ತಿಳಿದು ಕರ್ತವ್ಯ ನಿರತ ಸಾರಿಗೆ ಬಸ್ ನಿರ್ವಾಹಕರಾದ ಸಿದ್ರಾಮ್ ಮತ್ತು ಚಾಲಕರಾದ ಹನೀಪ್ ಗ್ರಾಮಕ್ಕೆ ಹೋಗಿ ಹಣದ ಚೀಲ ಮರಳಿಸಿ ಮಾನವೀಯತೆ ಮೆರೆದಿದ್ದಾರೆ.ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

    ಗ್ರಾಮಕ್ಕೆ ತೆರಳಿ ವಯೋವೃದ್ಧನಿಗೆ ಹಣ ವಾಪಸ್ ನೀಡಿದ ನಿರ್ವಾಹಕ ಮತ್ತು ಚಾಲಕನ ಪ್ರಾಮಾಣಿಕತೆಗೆ ಜಿಲ್ಲೆಯ ಜನರು ಶ್ಲಾಘಿಸಿದ್ದಾರೆ.

  • ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಬೀದರ್‌ನ ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ

    ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಬೀದರ್‌ನ ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ

    – ಫ್ಯಾಕ್ಟರಿಗಳಿಂದ ಕುತ್ತು; ಬೋರ್‌ವೇಲ್‌ನಲ್ಲಿ ಕೆಮಿಕಲ್ ನೀರು

    ಬೀದರ್‌: ಬೇಸಿಗೆ ಬಂದ್ರೆ ಸಾಕು ಕುಗ್ರಾಮಗಳಲ್ಲಿ ನೀರಿನ (Water) ಸಮಸ್ಯೆಯಾಗೋದು ಸಾಮಾನ್ಯ. ಆದ್ರೆ ಬೀದರ್‌ನ ಕುಗ್ರಾಮದಲ್ಲಿ ಮಳೆಗಾಲ ಮುಗಿದ ಬೆನ್ನಲ್ಲೇ ಹನಿ ಹನಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮದಲ್ಲಿರುವ ಏಕೈಕ ಕುಡಿಯುವ ನೀರಿನ ಬೋರ್ ವೆಲ್‌ನಿಂದ ಕೆಮಿಕಲ್ ನೀರು (Chemical water) ಬರುತ್ತಿದೆ.

    ಹೌದು. ಬೀದರ್ (Bidar) ತಾಲೂಕಿನ ಕಮಲಾಪೂರ್ ಗ್ರಾಮದಲ್ಲಿ ಜನರು ಕುಡಿಯುವ ಹನಿ ನೀರಿಗಾಗಿ ಹಾಹಾಕಾರ ಪಡುತ್ತಿದ್ದಾರೆ. ಇಡೀ ಗ್ರಾಮಕ್ಕೆ ಇರುವ ಏಕೈಕ ಬೋರ್‌ವೆಲ್‌ ಮುಂದೆ ಗಂಟೆಗಟ್ಟಲೇ ನಿಲ್ಲಬೇಕಿದೆ. ಈ ಬೋರ್ವೆಲ್‌ನಿಂದ ಕೆಮಿಕಲ್ ಯುಕ್ತ ನೀರು ಬರುತ್ತಿದ್ದು ಗ್ರಾಮದ ಜನ ಈ ನೀರನ್ನೇ ಕುಡಿಯುವ ಅನಿವಾರ್ಯತೆ ಬಂದೊದಗಿದೆ.

    ಕೆಮಿಕಲ್ ನೀರು ಕುಡಿದು ಜನ್ರು ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದು, ಕೆಮಿಕಲ್ ಫ್ಯಾಕ್ಟರಿ ಮಾಲೀಕರಿಗೆ ಮತ್ತು ಅಧಿಕಾರಿಗಳಿಗೆ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಯಾಕೆಂದ್ರೆ ಕೊಳ್ಳಾರ ಕೆಮಿಕಲ್ ಫ್ಯಾಕ್ಟರಿಗಳಿಂದ ಪ್ರತಿದಿನ ಗ್ರಾಮದ ಪಕ್ಕದ ಕೆರೆಗೆ ಕೆಮಿಕಲ್ ಸೇರುತ್ತಿದೆ. ಈ ಮೂಲಕ ಗ್ರಾಮದ ಬೋರ್ವೆಲ್‌ಗಳಲ್ಲಿ ಕೆಮಿಕಲ್ ಮಿಶ್ರಿತ ನೀರು ಬರುತ್ತಿದೆ. ಈ ಕೆಮಿಕಲ್ ನೀರನ್ನು ಅನಿವಾರ್ಯವಾಗಿ ಕುಡಿಯುತ್ತಿರುವ ಗ್ರಾಮಸ್ಥರು ಪ್ರತಿದಿನ ಸತ್ತು ಬದುಕುತ್ತಿದ್ದಾರೆ. ಇನ್ನು ಕೆಲವರು 2 ಕಿಲೋ ಮೀಟರ್ ದೂರದ ಗ್ರಾಮಗಳಿಗೆ ಹೋಗಿ 30 ರೂಪಾಯಿ ಕೊಟ್ಟು ಫಿಲ್ಟರ್ ನೀರು ತಂದು ಕುಡಿಯುತ್ತಿದ್ದಾರೆ.

    ಕೋಟಿ ಕೋಟಿ ಅನುದಾನದಲ್ಲಿ ಜೆಜೆಎಂ ಕಾಮಗಾರಿಯಲ್ಲಿ ಗ್ರಾಮದ ಪ್ರತಿಯೊಂದು ಮನೆಗಳಲ್ಲಿ ನಲ್ಲಿಗಳನ್ನು ಹಾಕಲಾಗಿದೆ. ಆದ್ರೆ ಐದಾರು ವರ್ಷಗಳಿಂದ ಈ ನಲ್ಲಿಗಳಲ್ಲಿ ಒಂದು ಹನಿ ನೀರು ಬಂದಿಲ್ಲ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕೋಟಿ ಕೋಟಿ ಹಣ ಗುಳುಂ ಮಾಡಿದ್ದಾರೆ. 40 ವರ್ಷಗಳ ಹಿಂದೇ ಕಾರಂಜಾ ಜಲಾಶಯ ನಿರ್ಮಾಣಕ್ಕಾಗಿ ಜನ್ರು ತಮ್ಮ ಗ್ರಾಮವನ್ನೇ ಬಿಟ್ಟು ಇಲ್ಲಿಗೆ ಬಂದಿದ್ದಾರೆ. ಆದ್ರೆ ಇಲ್ಲಿ ಯಾವುದೇ ಮೂಲಭೂತ ಸೌಕರ್ಯ ನೀಡದೆ ನಿರ್ಲಕ್ಷಿಸಲಾಗಿದೆ.

  • ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಬೀದರ್: ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೀದರ್ (Bidar) ಪೊಲೀಸರು ಅರೆಸ್ಟ್ ಮಾಡಿ, 45 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದಾರೆ.

    ಬೀದರ್ (Bidar) ನಗರದ ಕೆಇಬಿ ಫಂಕ್ಷನ್ ಹಾಲ್ ಬಳಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ. ಈ ವೇಳೆ ಬೀದರ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 25 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಈ ವೇಳೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

    ಇನ್ನೂ ಬೀದರ್‌ನಿಂದ ಮನ್ನಾಏಖೇಳಿಗೆ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೋರ್ವ ಗಾಂಜಾ ಸಾಗಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಮೀನಕೇರಾ ಕ್ರಾಸ್ ಬಳಿ ದಾಳಿ ನಡೆಸಿದ್ದು, 20 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈ ಕುರಿತು ಗಾಂಧಿಗಂಜ್ ಮತ್ತು ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್