Tag: Bidar police

  • ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

    ಬೀದರ್: ಜಿಲ್ಲೆಯಲ್ಲಿ ಪ್ರತ್ಯೇಕ ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೀದರ್ (Bidar) ಪೊಲೀಸರು ಅರೆಸ್ಟ್ ಮಾಡಿ, 45 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದಾರೆ.

    ಬೀದರ್ (Bidar) ನಗರದ ಕೆಇಬಿ ಫಂಕ್ಷನ್ ಹಾಲ್ ಬಳಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ. ಈ ವೇಳೆ ಬೀದರ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ 25 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಈ ವೇಳೆ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

    ಇನ್ನೂ ಬೀದರ್‌ನಿಂದ ಮನ್ನಾಏಖೇಳಿಗೆ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೋರ್ವ ಗಾಂಜಾ ಸಾಗಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಮೀನಕೇರಾ ಕ್ರಾಸ್ ಬಳಿ ದಾಳಿ ನಡೆಸಿದ್ದು, 20 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈ ಕುರಿತು ಗಾಂಧಿಗಂಜ್ ಮತ್ತು ಮನ್ನಾಏಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

  • ಅಕ್ರಮವಾಗಿ ಸಾಗಿಸುತ್ತಿದ್ದ 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ – ಐವರು ಅರೆಸ್ಟ್

    ಅಕ್ರಮವಾಗಿ ಸಾಗಿಸುತ್ತಿದ್ದ 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ – ಐವರು ಅರೆಸ್ಟ್

    ಬೀದರ್: ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತು ಜಪ್ತಿ ಮಾಡಿ, 5 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ನೆಲಮಂಗಲ | ರೈಲಿಗೆ ಸಿಲುಕಿ 24 ಮೇಕೆಗಳ ದಾರುಣ ಸಾವು, 4 ಲಕ್ಷ ನಷ್ಟ

    ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷಕ್ಕೂ ಅಧಿಕ ಮೌಲ್ಯದ 6 ಕೆ.ಜಿ ಅಕ್ರಮ ಗಾಂಜಾ ಜಪ್ತಿ ಮಾಡಿ, ಮೂವರನ್ನು ಅರೆಸ್ಟ್ ಮಾಡಿದ್ದಾರೆ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆ ಮಾರಾಟ ಮಾಡಲು ಕೂಡಿಸಿಟ್ಟಿದ್ದ 1 ಲಕ್ಷ 29 ಸಾವಿರ ರೂ. ಮೌಲ್ಯದ 584 ನಶೆ ತರಿಸುವ ನಾರ್ಕೋಟಿಕ್ ಸಿರಪ್ ಬಾಟಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಪ್ರದೀಪ (SP Pradeep) ಗುಂಟಿ ಮಾತನಾಡಿ, ಜಪ್ತಿ ಮಾಡಿ ಆರೋಪಿಗಳನ್ನು ಬಂಧಿಸಿದ ಬಳಿಕ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇವುಗಳನ್ನು ನಿಗದಿತ ದರಕ್ಕಿಂತ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಶನಿವಾರ ಬೆಳಗ್ಗೆ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮನಮೋಹನ್ ಸಿಂಗ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

  • ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 43 ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್, ಚಿನ್ನಾಭರಣ ಜಪ್ತಿ

    ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 43 ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್, ಚಿನ್ನಾಭರಣ ಜಪ್ತಿ

    ಬೀದರ್: ಬೀದರ್ ಜಿಲ್ಲಾ ಪೊಲೀಸರು 43 ಲಕ್ಷಕ್ಕೂ ರೂ. ಅಧಿಕ ಮೌಲ್ಯದ ಬೈಕ್, ಚಿನ್ನಾಭರಣ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಿದ್ದು, ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ ಕಳ್ಳರಿಗೆ ಬಿಗ್ ಶಾಕ್ ನೀಡಿದ್ದಾರೆ.ಇದನ್ನೂ ಓದಿ: ಶೂಟಿಂಗ್ ಮುಗಿಸಿದ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ

    35 ಲಕ್ಷ ರೂ. ಅಧಿಕ ಮೌಲ್ಯದ ಬೈಕ್, 5 ಲಕ್ಷ 95 ಸಾವಿರ ರೂ. ಮೌಲ್ಯದ ಚಿನ್ನಧಾಭರಣ, 1 ಲಕ್ಷ 50 ಸಾವಿರ ರೂ. ಮೌಲ್ಯದ ಕಳ್ಳತನವಾಗಿದ್ದ ಕುರಿಗಳು, 21 ಸಾವಿರ ರೂ. ಮೌಲ್ಯ ಬೆಳ್ಳಿ ಹಾಗೂ 40 ಸಾವಿರ ರೂ. ಮೌಲ್ಯದ ನೀರಿನ ಪಂಪಸೆಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಜಿಲ್ಲೆಯಾದ್ಯಂತ 9 ಠಾಣೆಯಲ್ಲಿ ದಾಖಲಾಗಿದ್ದ 20 ಪ್ರಕರಣಗಳಲ್ಲಿ ಒಟ್ಟು 25 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೊದಲ ಬಾರಿಗೆ ಪೊಲೀಸರು 35 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಜಪ್ತಿ ಮಾಡಿದ್ದು, ಈ ಮೂಲಕ ಅಂತರ ರಾಜ್ಯದಿಂದ ಬಂದು ಬೈಕ್ ಕಳ್ಳತನ ಮಾಡುವ ಖದೀಮರಿಗೆ ಬಿಗ್ ಶಾಕ್ ನೀಡಿದ್ದಾರೆ.ಇದನ್ನೂ ಓದಿ: ಹಂಸ ದಮಯಂತಿಯಂತೆ ಪೋಸ್ ಕೊಟ್ಟ ಹರ್ಷಿಕಾ

  • ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

    ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 12 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

    ಬೀದರ್: ನಗರದ ಪೊಲೀಸರು (Bidar Police) ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನವಾಗಿದ್ದ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

    ಭಾಲ್ಕಿ, ಮೇಹಕರ್ ಮತ್ತು ಹುಮ್ನಾಬಾದ್ ಪೊಲೀಸ್ ಠಾಣೆಗಳಲ್ಲಿ ಕಳ್ಳತನದ ವಿವಿಧ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು 11 ಕಳ್ಳತನದ ಪ್ರಕರಣಗಳನ್ನು ಭೇದಿಸಿ ಬಂಗಾರ, ಬೆಳ್ಳಿ (Silver), ದ್ವಿಚಕ್ರ ವಾಹನ ಹಾಗೂ ಎಮ್ಮೆ ಸೇರಿದಂತೆ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: Video | Tharun Sonal Wedding – ತಾಳಿ ಕಟ್ಟುವ ಶುಭ ವೇಳೆ – ದೃಶ್ಯ ಕಣ್ತುಂಬಿಕೊಳ್ಳಿ!

    ಮಂದಿರ ಕಳ್ಳತನ ಪ್ರಕರಣದಲ್ಲಿ 11 ಗ್ರಾಂ ಬೆಳ್ಳಿ ಮತ್ತು 1 ಗ್ರಾಂ ಚಿನ್ನಾಭರಣ (Gold Jewellery) ಹಾಗೂ ತೆಲಂಗಾಣದಲ್ಲಿ ಕಳ್ಳತನವಾಗಿದ್ದ 10 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಎಮ್ಮೆ ಕಳ್ಳತನ ಪ್ರಕರಣ ಭೇದಿಸಿದ ಮೇಹಕರ್ ಠಾಣೆಯ ಪೊಲೀಸರು ಸೂಮಾರು 7 ಲಕ್ಷ ರೂ. ಬೆಲೆಬಾಳುವ ಎಮ್ಮೆ ವಶಕ್ಕೆ ಪಡೆದುಕೊಂಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್‌ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್‌ ವೀಡಿಯೋಗಳು ಪತ್ತೆ!

  • ಅಕ್ರಮವಾಗಿ ಮಾರಾಟ ಮಾಡ್ತಿದ್ದ 1 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ವಶ – ಮೂವರು ಅರೆಸ್ಟ್‌

    – ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ? – ಇದರಿಂದ ಪ್ರಯೋಜನ ಏನು?

    ಬೀದರ್‌: ಕಾಳಸಂತೆಯಲ್ಲಿ ತಿಮಿಂಗಲ ವಾಂತಿ (Ambergris) ಮಾರಾಟ ಮಾಡುತ್ತಿದ್ದ ಖತರ್ನಾಕ್‌ ಗ್ಯಾಂಗ್‌ಗೆ ಹೆಡೆಮುರಿ ಕಟ್ಟಿರುವ ಪೊಲೀಸರು ಸುಮಾರು 1 ಕೋಟಿ ರೂ. ಮೌಲ್ಯದ 980 ಗ್ರಾಂ ನಷ್ಟು ಅಂಬರ್‌ಗ್ರಿಸ್ ವಶಪಡಿಸಿಕೊಂಡಿದ್ದಾರೆ.

    ಭರ್ಜರಿ ಕಾರ್ಯಾಚರಣೆ ಮಾಡಿದ ಬೀದರ್ ಪೊಲೀಸರು (Bidar Police) ಸೌಂದರ್ಯ ವರ್ಧಕ ಹಾಗೂ ಸುಗಂಧ ದ್ರವ್ಯ ತಯಾರಿಸಲು ಬಳಕೆ ಮಾಡುತ್ತಾರೆ. ಹಾಗಾಗಿ ತಿಮಿಂಗಲ ವಾಂತಿಯನ್ನು ಗೋವಾದಿಂದ ಅಕ್ರಮವಾಗಿ ಬೀದರ್‌ಗೆ ತಂದಿದ್ದ ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ಮೂವರು ಆರೋಪಿಗಳನ್ನು ಅರೆಸ್ಟ್ ಬಂಧಿಸಿ ಜೈಲಿಗಟ್ಟಿದ್ದಾರೆ.

    15 ದಿನಗಳಲ್ಲಿ 28 ಕೇಸ್‌:
    ಕಳೆದ 15 ದಿನಗಳಲ್ಲಿ 28 ಕಳ್ಳತನ ಪ್ರಕರಣ ಭೇದಿಸಿದ್ದಾರೆ. ಜಿಲ್ಲೆಯ 13 ಠಾಣೆಗಳಲ್ಲಿ ದಾಖಲಾಗಿದ್ದ ಜಾನುವಾರು ಮತ್ತು ವಿವಿಧ ಸ್ವತ್ತಿನ 28 ಪ್ರಕರಣಗಳನ್ನು ಭೇದಿಸಿ ಅಂತಾರಾಜ್ಯ ಕಳ್ಳರು ಸೇರಿ 28 ಆರೋಪಿಗಳನ್ನ ಬಂಧಿಸಿದ್ದಾರೆ.

    ಒಟ್ಟಾರೆಯಾಗಿ ಬಂಧಿತ ಆರೋಪಿಗಳಿಂದ 53 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಲಾಗಿದೆ. ಅದರಲ್ಲಿ 7.76 ಲಕ್ಷ ನಗದು, 23.91 ಲಕ್ಷ ಮೌಲ್ಯದ 396 ಗ್ರಾಂ ಚಿನ್ನ, 320 ಗ್ರಾಂ ಬೆಳ್ಳಿ, 7 ಜಾನುವಾರು, 6 ಪಂಪ್ ಸೆಟ್, 7 ವಾಹನಗಳು, 16 ಸಾವಿರ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಬೀದರ್‌ ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ಶ್ಲಾಘಿಸಿದ್ದಾರೆ.

    ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ?
    ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.

    ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ. ಆದ್ದರಿಂದ ಇವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್‌ಗ್ರೀಸ್‌ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.

  • ಎಟಿಎಂನಲ್ಲಿ ಹಣ ಕದಿಯಲು ಯತ್ನ – ರೆಡ್ ಹ್ಯಾಂಡ್ ಆಗಿ ಕಳ್ಳನನ್ನು ಹಿಡಿದ ಪೊಲೀಸರು

    ಎಟಿಎಂನಲ್ಲಿ ಹಣ ಕದಿಯಲು ಯತ್ನ – ರೆಡ್ ಹ್ಯಾಂಡ್ ಆಗಿ ಕಳ್ಳನನ್ನು ಹಿಡಿದ ಪೊಲೀಸರು

    ಬೀದರ್: ಎಟಿಎಂ ಒಡೆದು ದರೋಡೆ ಮಾಡಲು ಯತ್ನಿಸಿದ ಕಳ್ಳನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಕಾರ್ಯಚರಣೆ ಯಶಸ್ವಿಗೊಳಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ.

    ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಶಹಾಪುರ ಮಸೀದಿ ಮುಖ್ಯ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್‍ನ ಎಟಿಎಂ ಒಡೆದು ದರೋಡೆ ಮಾಡಲು ಯತ್ನ ಮಾಡಿದ್ದಾನೆ. ಇಂದು ಬೆಳಗ್ಗಿನ ಜಾವ ಎಟಿಎಂಗೆ ನುಗ್ಗಿದ ಕಳ್ಳ ಯಂತ್ರ ಒಡೆಯಲು ತೊಡಿಗಿದ್ದನು. ಎಟಿಎಂ ಯಂತ್ರ ಒಡೆಯುವ ವೇಳೆ ಬ್ಯಾಂಕ್‍ನ ಮುಖ್ಯ ಕಚೇರಿಗೆ ಸಂದೇಶ ರವಾನೆಯಾಗಿದೆ.

    ಸಂದೇಶ ರವಾನೆ ಆಗುತ್ತಿದ್ದಂತೆ ತಕ್ಷಣ ಎಚ್ಚೆತ್ತ ಬ್ಯಾಂಕ್ ಸಿಬ್ಬಂದಿ ನಗರ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಬಂದ ಕೂಡಲೆ ಕಾರ್ಯಪ್ರವರ್ತರಾದ ಸಿಪಿಐ ಮಲ್ಲಿಕಾರ್ಜುನ ಯಾತನೂರ ಹಾಗೂ ಪಿಎಸ್‍ಐ ಸುನಿಲಕುಮಾರ ನೇತೃತ್ವದ ಪೊಲೀಸರ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ಬಸವಕಲ್ಯಾಣ ನಗರ ನಿವಾಸಿ ಶ್ರೀಕಾಂತ ಮಲ್ಲಿಕಾರ್ಜುನ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಲು ಯತ್ನಿಸಿದ ವ್ಯಕ್ತಿ ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಕೊಂಡಿದ್ದಾರೆ.