ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ (Bidar) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.
ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ, ನಿಮ್ಮೂರಿಗೆ ಎಷ್ಟು ನೋಡಿ!
ಬೀದರ್: ಜಿಲ್ಲೆಯ ಬಿಜೆಪಿ ಮುಖಂಡರು ಬೀದರ್‌ನಾದ್ಯಂತ ಸಂಚರಿಸಿ ಅತೀವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿಯನ್ನು ವೀಕ್ಷಿಸಿದರು. ಈ ವೇಳೆ ಶಾಸಕ ಪ್ರಭು ಚವ್ಹಾಣ್ (Prabhu Chauhan) ಬೆಳೆ ಹಾನಿಯ ಬಗ್ಗೆ ವಿವರಣೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ನೇತೃತ್ವದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಯಿತು. ಕೌಠಾ(ಬಿ) ಗ್ರಾಮದಲ್ಲಿ ಹಾನಿಯಾದ ಕೃಷಿಭೂಮಿಗಳಿಗೆ ಟ್ರಾಕ್ಟರ್ ಮೂಲಕ ತೆರಳಿ ಹಾನಿಯ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೆಳೆಹಾನಿಯ ಬಗ್ಗೆ ಶಾಸಕ ಪ್ರಭು ಚವ್ಹಾಣ್ ಅವರು, ಔರಾದ(ಬಿ) ಕ್ಷೇತ್ರದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಪ್ರತಿಯೊಂದು ಗ್ರಾಮದಲ್ಲಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗಿದೆ. ಇಲ್ಲಿನ ಬಹುತೇಕ ರೈತರು ಉಪಜೀವನಕ್ಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ಬೆಳೆದು ನಿಂತಿದ್ದ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ, ಕಬ್ಬು ಸೇರಿದಂತೆ ಎಲ್ಲ ಬೆಳೆಗಳು ಮುಳುಗಡೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಟ್ರಂಪ್ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ
ನಮ್ಮೂರಿನ ಎಲ್ಲ ಕಡೆಗಳಲ್ಲಿ ಬೆಳೆ ನಷ್ಟವಾಗಿದೆ. ನದಿ ತೀರದಲ್ಲಿ ಅತೀ ಹೆಚ್ಚು ಹಾಳಾಗಿದ್ದು, ಎಲ್ಲ ಹೊಲಗಳು ಸಂಪೂರ್ಣ ಮುಳುಗಡೆಯಾಗಿವೆ. ಮಳೆಗಾಲದ ಆರಂಭದಲ್ಲಿ ಎಲ್ಲ ಬೆಳೆಗಳು ಚೆನ್ನಾಗಿದ್ದವು. ಹಾಗಾಗಿ ರೈತರು ಈ ಬಾರೀ ಹೆಚ್ಚಿನ ಲಾಭ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ ಅನಿರೀಕ್ಷಿತವಾಗಿ ಸುರಿದ ಧಾರಾಕಾರ ಮಳೆಗೆ ಎಲ್ಲ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಬೇಗ ಪರಿಹಾರ ಕೊಡಲು ತಾವು ಸಹಕರಿಸಬೇಕು ಎಂದು ಮನವಿ ಮಾಡಿದರು.
ವಿಷಯ ತಿಳಿದು ಸ್ಥಳಕ್ಕೆ ದೌಡಾಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಾಲಕನ ಶವ ರವಾನೆ ಮಾಡಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹುಲಸೂರು, ಭಾಲ್ಕಿ, ಔರಾದ್, ಬೀದರ್ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಲಕ್ಷ ಲಕ್ಷ ಎಕರೆ ಬೆಳೆಗಳು ಮಾಂಜ್ರಾ ಪ್ರವಾಹದ ಪಾಲಾಗಿದೆ. ಬೀದರ್ ತಾಲೂಕಿನ ಹಿಪ್ಪಳಗಾಂವ್ ಗ್ರಾಮದ ಕಲ್ಯಾಣರಾವ್ ಪಾಟೀಲ್, ರಾಮಶೆಟ್ಟಿ ಬಿರಾದರ್ಷ, ಶಿವರಾಜ್ ಬಿರಾದರ್, ಸಂಜುಕುಮಾರ್ ದನ್ಗರ್ ಸೇರಿದಂತೆ 800ಕ್ಕೂ ಅಧಿಕ ಎಕರೆಯಲ್ಲಿ ಬೆಳೆದಿದ್ದ ಬೆಳೆಗಳು ಸರ್ವನಾಶವಾಗಿದೆ.
40 ವರ್ಷದಲ್ಲೇ ಈ ಬಾರಿ ಮಾಂಜ್ರಾ ಪ್ರವಾಹ ಬಂದಿದ್ದು, ನದಿ ದಡದಲ್ಲಿರುವ ಸಾವಿರಾರು ಎಕರೆ ಬೆಳೆಗಳು ಹಾಳಾಗಿದೆ. ಸಿದ್ದರಾಮಯ್ಯ ಮೇಲಿಂದ ಬಂದು ಮೇಲೆಯೇ ಹೋದರು. ಇಷ್ಟೊಂದು ಬೆಳೆ ಹಾನಿಯಾದರೂ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಕ್ಷೇತ್ರದ ಶಾಸಕ ಹಾಗೂ ಸಚಿವ ರಹೀಂಖಾನ್ ಒಂದು ಬಾರಿಯೂ ಬಂದಿಲ್ಲ ಎಂದು ಜಿಲ್ಲೆಯ ರೈತರು ಹಿಡಿಶಾಪ ಹಾಕುತ್ತಿದ್ದಾರೆ.ಇದನ್ನೂ ಓದಿ: ರಾಯಚೂರಿನಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್
ಬೀದರ್: ಅರಬ್ಬಿ ಸಮುದ್ರದಲ್ಲಿ ಶಕ್ತಿ (Shakti) ಚಂಡಮಾರುತದ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ (Bidar) ವರುಣಾರ್ಭಟ ಜೋರಾಗಿದೆ.
ಸೋಮವಾರ (ಅ.6) ಬೆಳಗ್ಗೆಯಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಗುಡುಗು, ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಬೀದರ್, ಹುಮ್ನಾಬಾದ್, ಬಸವ ಕಲ್ಯಾಣ, ಭಾಲ್ಕಿ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.ಇದನ್ನೂ ಓದಿ: ಚಿತ್ರದುರ್ಗ | ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ ಲಾರಿ ಡಿಕ್ಕಿ – ಗಂಭೀರ ಗಾಯ
ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದ್ದು, ಇತ್ತ ಕಚೇರಿ ಕೆಲಸಗಳಿಗೆ ಹೋಗಲು ಜನರು ಕೂಡ ಹೈರಾಣಾಗುತ್ತಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಇಂದು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್/ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ.
ರೈಲಿನ ಮಾಹಿತಿ:
ರೈಲು ಸಂಖ್ಯೆ 07063 ಬೀದರ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅಕ್ಟೋಬರ್ 4ರಂದು (ಶನಿವಾರ) ಬೀದರ್‌ನಿಂದ ಮಧ್ಯಾಹ್ನ 2:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇನ್ನೂ ರೈಲು ಸಂಖ್ಯೆ 07064 ಬೆಂಗಳೂರು ಕಂಟೋನ್ಮೆಂಟ್-ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಇದೇ ಅಕ್ಟೋಬರ್ 5ರಿಂದ (ಭಾನುವಾರ) ರಾತ್ರಿ 10:30ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಮರುದಿನ ಮಧ್ಯಾಹ್ನ 2:40ಕ್ಕೆ ಬೀದರ್ ತಲುಪಲಿದೆ.ಇದನ್ನೂ ಓದಿ: ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ಮಾಡ್ತೇವೆ – ಪರಮೇಶ್ವರ್
ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಕಮಲಾಪುರ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಬೀದರ್: ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿಗೆ (Bengaluru) ಮಾತ್ರ ಸೀಮಿತರಾಗಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.
“ನೆರೆ ಸಂಕಷ್ಠಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”
ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆಯಲ್ಲಿಂದು ಬೀದರ್ ದಕ್ಷಿಣ ಹಾಗೂ ಬೀದರ್ ವಿಧಾನಸಭಾ ಕ್ಷೇತ್ರಗಳ ಮಳೆ ಹಾನಿಗೊಳಗಾದ ವಿವಿಧ ಭಾಗಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೇಳೆ ಹಾನಿ ಪರಿಶೀಲನೆ ನಡೆಸಿ ಸರ್ಕಾರ ಶೀಘ್ರ ಪರಿಹಾರ ಬಿಡುಗಡೆ… pic.twitter.com/IzdoBHOcod
ಬೀದರ್ (Bidar) ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ತಂಡ ನೆರೆ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಿಎಂಗೆ ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ, ಈ ಭಾಗದಲ್ಲಿ ರೈತರ ಬೆಳೆಗಳು ಸಂಪೂರ್ಣವಾಗಿ ಸರ್ವನಾಶವಾಗಿದೆ. ಕಳೆದ ಒಂದು ತಿಂಗಳಿಂದ ಮಳೆಯಾಗಿ ಎಲ್ಲಾ ಬೆಳೆಗಳು ನಾಶವಾಗಿದೆ. ರೈತರ ವಿಚಾರದಲ್ಲಿ ಸಿಎಂ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಇಂತಹ ಸಮಯದಲ್ಲಿ ಸಿಎಂ ಹಾಗೂ ಸಚಿವರ ಹುಡುಗಾಟ ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ
“ನೆರೆ ಸಂಕಷ್ಠಿತ ಅನ್ನದಾತರನ್ನು ಸಂಪೂರ್ಣ ನಿರ್ಲಕ್ಷಿಸಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ”
ನೆರೆ ಪೀಡಿತ ಪ್ರದೇಶಗಳ ಪ್ರವಾಸದ ಹಿನ್ನಲೆಯಲ್ಲಿಂದು ಬೀದರ್ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರದ ನಿಟ್ಟೂರು ಹಾಗೂ ಔರಾದ್ ವಿಧಾನಸಭಾ ಕ್ಷೇತ್ರದ ಸವಳಿಸಂಗಮದಲ್ಲಿ ಮಳೆ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ… pic.twitter.com/pH8jZ1FqNZ
ರಾಜ್ಯ ಸರ್ಕಾರ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಬಿಎಸ್‌ವೈ ಮನೆ ಕಳೆದುಕೊಂಡವರಿಗೆ ಕೇಂದ್ರದ ಕಡೆ ನೋಡದೆ ಪರಿಹಾರ ಕೊಟ್ಟಿದ್ದರು. ಇನ್ನು ತಡಮಾಡದೇ ನೀವು, ನಿಮ್ಮ ಸಚಿವರು ಇಲ್ಲಿಗೆ ಧಾವಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ.
ಹುಲಸೂರು ಇಂದ ಭಾಲ್ಕಿ ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದು ಬೀದರ್ ತಾಲೂಕಿನ ಚಿಲ್ಲರ್ಗಿ ಸೇತುವೆ ಮೇಲೆ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ. ಸೇತುವೆ ಮೇಲೆ ನೀರು ಹರಿದು ಪರಿಣಾಮ ರಸ್ತೆ ಸಂಚಾರ ಬಂದಾಗಿದ್ದು, ಚಿಲ್ಲರ್ಗಿ ಟು ಚಿಮ್ಮಕೋಡ್, ಗಾದಗಿ ರಸ್ತೆ ಸಂಚಾರ ಬಂದಾಗಿದೆ. ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಕೆಲವರು ನೀರು ತುಂಬಿದ ರಸ್ತೆ ಮೇಲೆಯ ನಡೆದುಕೊಂಡು ಸೇತುವೆ ದಾಟುತ್ತಿದ್ದಾರೆ.
ಇನ್ನೂ ಕಮಲನಗರದ ಗ್ರಾಮವೊಂದರಲ್ಲಿ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ದಾಟಲು ಎಮ್ಮೆಗಳು ಪರದಾಡಿವೆ. ಮಾಂಜ್ರಾನದಿಗೆ ಲಕ್ಷ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮಾಂಜ್ರಾನದಿ ದಡದಲ್ಲಿರುವ ಲಕ್ಷಾಂತರ ಎಕರೆ ಜಮೀನುಗಳಲ್ಲಿ ಬೆಳೆದಿದ್ದ ಬೆಳಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಧಾರಾಕಾರ ಮಳೆ ಹಾಗೂ ಮಾಂಜ್ರಾನದಿ ಎಫೆಕ್ಟ್ ಜಿಲ್ಲೆಯ ಜನ್ರ ಜೀವನ ಮೂರಾಬಟ್ಟೆಯಾಗಿದ್ದು ಇಂದು ಕೂಡಾ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ನಾಳೆ ಮಹಾಲಯ ಅಮಾವಾಸ್ಯೆ ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?
ಬೀದರ್: ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ (Rahul Gandhi) ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮತದಾರರ ಹೆಸರು ಡಿಲೀಟ್, ರಾಹುಲ್ ಗಾಂಧಿ ಆರೋಪದ ಬಗ್ಗೆ ಮಾತನಾಡಿದ ಅವರು, ಲೋಕಸಭಾ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಗೆ ಸಾಮಾನ್ಯಜ್ಞಾನ ಇಲ್ಲ. ಕಳ್ಳತನ ಮಾಡುವವರಿಗೆ ಕಳ್ಳತನದ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ (Vote Theft) ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ – 29 ದಿನಗಳಲ್ಲಿ 1.70 ಕೋಟಿ ಸಂಗ್ರಹ
ಮಾಲೂರು ಕಾಂಗ್ರೆಸ್ (Congress) ಶಾಸಕರನ್ನ ಕೋರ್ಟ್ ಅಸಿಂಧೂಗೊಳಿಸಿದ್ದು ಯಾಕೆ? ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು. ಮೋಸ ಮಾಡಿದವರು ಯಾರು? ಕಾಂಗ್ರೆಸ್ ಮೋಸ ಮಾಡಿ 135 ಸ್ಥಾನ ಗೆದ್ದವರು. ಆಳಂದದಲ್ಲಿ ಕಾಂಗ್ರೆಸ್ ಅಭ್ಯರ್ಥಿನೇ ಗೆದ್ದಿದ್ದು. ಸಿದ್ದರಾಮಯ್ಯರ ಕ್ಷೇತ್ರದಲ್ಲೂ ಮನೆ ನಂ. ಸೊನ್ನೆ ಅಂತಲೇ ತೋರಿಸುತ್ತದೆ. 20-25ರ ಮತದಾರರ ಪಟ್ಟಿ ನೋಡಿದ್ರೆ ಈಗಲೂ ಸೊನ್ನೆ ಅಂತಲೇ ಮನೆ ನಂ. ಇದೆ. ಮಹದೇವಪುರದಲ್ಲೂ ರಾಹುಲ್ ಗಾಂಧಿ ಆರೋಪ ಮಾಡಿದರು. ಬಾಡಿಗೆ ಮನೆಯಲ್ಲಿ ಇದ್ದವರು, ಮನೆ ನಂಬರ್ ಎ,ಬಿ,ಸಿ,ಡಿ ಅಂತ ಮಾಡಿರುತ್ತಾರೆ. ಮನೆ ನಂಬರ್ ಸರಿಯಾಗಿ ಫೀಡ್ ಆಗಿರಲ್ಲ, ಡಾಟಾ ಆಪರೇಟರ್ ಸರಿಯಾಗಿ ಫೀಡ್ ಮಾಡಿರಲ್ಲ. ಮನೆ ನಂಬರ್ ಎಬಿಸಿಡಿ ಹಾಕಿದ್ರೆ ತೊಗೊಳಲ್ಲ. ಆಗ ಸೊನ್ನೆ ಹಾಕ್ತಾರೆ ಎಂದರು.
ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ ಎಂದು ಲೇವಡಿ ಮಾಡಿದರು.
ಇನ್ನೂ ಜಾತಿಗಣತಿ ಮೂಲಕ ಸಿಎಂ ಹೊಡೆದಾಡುವ ನೀತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2013ರಲ್ಲಿ ಲಿಂಗಾಯತರು ಮತ್ತು ವೀರಶೈವರನ್ನ ಒಡೆಯುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದರು. ಈಗ ಮತ್ತೆ ಎಲ್ಲಾ ಜಾತಿ, ಉಪಜಾತಿಗಳನ್ನು ಒಡೆಯಲು ಹೊರಟಿದ್ದು, ಒಕ್ಕಲಿಗ, ಲಿಂಗಾಯತ, ಗಾಣಿಗ ಸೇರಿದಂತೆ ಎಲ್ಲವನ್ನು ಕ್ರಿಶ್ಚಿಯನ್ ಎಂದು ಬರೆಸುತ್ತಿದ್ದೀರಿ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ:‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?