Tag: bidar

  • ರಾಜ್ಯಮಟ್ಟದ ಬಸವ ಸಂಸ್ಕೃತಿ ಅಭಿಯಾನಕ್ಕೆ ಈಶ್ವರ್ ಖಂಡ್ರೆ ಚಾಲನೆ

    ರಾಜ್ಯಮಟ್ಟದ ಬಸವ ಸಂಸ್ಕೃತಿ ಅಭಿಯಾನಕ್ಕೆ ಈಶ್ವರ್ ಖಂಡ್ರೆ ಚಾಲನೆ

    ಬೀದರ್: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ಚಾಲನೆ ನೀಡಿದರು.

    ಬೀದರ್ (Bidar) ನಗರದ ಬಸವೇಶ್ವರ ವೃತದಲ್ಲಿ ಬಲೂನ್ ಹಾರಿಸುವ ಮೂಲಕ ಬಸವ ಸಂಸ್ಕೃತಿ ಅಭಿಯಾನಕ್ಕೆ ಚಾಲನೆ ನೀಡಿದರು. ಇದೇ ವೇಳೆ ವಿಶೇಷವಾಗಿ ನಿರ್ಮಿಸಲಾಗಿದ್ದ ಬಸವಣ್ಣನ ಮೂರ್ತಿಯ ರಥ, ಇಷ್ಟಲಿಂಗ ರಥ, ರುದ್ರಾಕ್ಷಿ ರಥ, ವಿಭೂತಿ ರಥಗಳಿಗೆ ಚಾಲನೆ ನೀಡುವ ಮೂಲಕ ಸಾಂಸ್ಕೃತಿಕ ನಡಿಗೆಗೆ ಚಾಲನೆ ನೀಡಿದರು.ಇದನ್ನೂ ಓದಿ: PUBLiC TV Impact | ಸರ್ಕಾರದ ದುಡ್ಡನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದ ಪಿಡಿಓ ಅಮಾನತು

    ಬಸವ ಪರಂಪರೆಯ ಸಮವಸ್ತ್ರಗಳಲ್ಲಿ ನಗರದ ಬಸವೇಶ್ವರ ವೃತ್ತದಿಂದ ಗುಂಪಾವರೆಗೆ ಬೃಹತ್ ಬಸವ ಸಾಂಸ್ಕೃತಿಕ ನಡಿಗೆ ನಡೆಯಿತು. ಈ ವೇಳೆ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಕೂಡಾ ಭಾಗಿಯಾಗಿದ್ದರು.

    ಮಾಜಿ ಸಚಿವ ರಾಜಶೇಖರ ಪಾಟೀಲ್, ಸಿರಿಗೇರಿ ಶ್ರೀಗಳು, ನಿಜಗುಣಾನಂದ ಸ್ವಾಮೀಜಿ, ಬಸವಲಿಂಗ ಪಟ್ಟದೇವರು ಸೇರಿದಂತೆ ಪ್ರಮುಖ ಸ್ವಾಮೀಜಿಗಳು, ಸಾವಿರಾರು ಬಸವ ಅನುಯಾಯಿಗಳು ಬಸವ ಸಂಸ್ಕೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಇದನ್ನೂ ಓದಿ: ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ 2 ಕೋಟಿ ಸಾಲ ಕೊಟ್ಟಿದ್ದರು: ಜಮೀರ್‌

  • ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀಠ

    ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀಠ

    ಬೀದರ್: ಕೋರ್ಟ್‌ಗೆ ಹಾಜರಾಗಲು ಪದೇ ಪದೇ ಸಮಯ ಕೇಳುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್‌ನ (Karnataka Highcourt) ಕಲಬುರಗಿ ಪೀಠ (Kalaburagi Bench) ಔರಾದ್ (Aurad) ಶಾಸಕ ಪ್ರಭು ಚೌಹಾಣ್‌ಗೆ  (Prabhu Chauhan) 1 ಲಕ್ಷ ರೂ. ದಂಡ ವಿಧಿಸಿದೆ.

    ಶಾಸಕ ಪ್ರಭು ಚೌಹಾಣ್ ವಿರುದ್ಧ ಜಾತಿ ವಿವಾದಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೀಠದಲ್ಲಿ ವ್ಯಕ್ತಿಯೊಬ್ಬರು ದಾವೆ ಹೂಡಿದ್ದರು. ಈ ಸಂಬಂಧ ಕೋರ್ಟ್‌ಗೆ ಹಾಜರಾಗಲು ಚೌಹಾಣ್ ಪರ ವಕೀಲರು ಪದೇ ಪದೇ ಸಮಯ ಕೇಳುತ್ತಿರುವ ಹಿನ್ನೆಲೆ ದಂಡ ವಿಧಿಸಲಾಗಿದೆ.ಇದನ್ನೂ ಓದಿ: ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಸವಾರಿ

    ಕಳೆದ ಬಾರಿಯೂ ಕೋರ್ಟ್‌ಗೆ ಹಾಜರಾಗದೆ ಚೌಹಾಣ್ ಪರ ವಕೀಲರು ಸಮಯ ಕೇಳಿದ್ದರು. ಈ ಬಾರಿಯೂ ಮತ್ತೆ ಸಮಯ ಕೇಳಿದ್ದಕ್ಕೆ 1 ಲಕ್ಷ ದಂಡ ರೂ. ವಿಧಿಸಿ, ಸೆ.8ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ಬೀದರ್‌ನ (Bidar) ಕಮಲ ನಗರ ತಾಲೂಕಿನ ನಿವಾಸಿ ನರಸಿಂಗ್ ಎಂಬುವವರು ಶಾಸಕ ಪ್ರಭು ಚೌಹಾಣ್ ಪರಿಶಿಷ್ಟ ಜಾತಿಯವರಲ್ಲ, ಅವರು ಪರಿಶಿಷ್ಟ ಪಂಗಡದವರು ಎಂದು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದಲ್ಲಿ ದಾವೆ ಹೂಡಿದ್ದರು.

    ಚೌಹಾಣ್ ಅವರು ಮೂಲತಃ ಮಹಾರಾಷ್ಟ್ರದಲ್ಲಿ (Maharashtra) ಜನಿಸಿದ್ದು, ಕರ್ನಾಟಕ (Karnataka) ನಿವಾಸಿಯಲ್ಲ. ಅವರು ಮಹಾರಾಷ್ಟ್ರದಲ್ಲಿ ಲಂಬಾಣಿ ಪರಿಶಿಷ್ಟ ಪಂಗಡಕ್ಕೆ (ST) ಸೇರಿದವರಾಗಿದ್ದಾರೆ. ಹೀಗಾಗಿ ಶಾಸಕ ಚೌಹಾಣ್ ಅವರ ಎಸ್ಸಿ (SC) ಜಾತಿ ಪ್ರಮಾಣ ಪತ್ರ ರದ್ದುಗೊಳಿಸಬೇಕು ಎಂದು ಉಲ್ಲೇಖಿಸಿದ್ದರು.ಇದನ್ನೂ ಓದಿ: ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ ಭವಿಷ್ಯ ಇಂದು ನಿರ್ಧಾರ

     

  • ನಟ ವಿಷ್ಣುವರ್ಧನ್ ಸಮಾಧಿ ಎಲ್ಲಿ ಮಾಡಬೇಕು ಅಂತಾ ಸರ್ಕಾರ ನಿರ್ಧರಿಸುತ್ತೆ: ಈಶ್ವರ್ ಖಂಡ್ರೆ

    ನಟ ವಿಷ್ಣುವರ್ಧನ್ ಸಮಾಧಿ ಎಲ್ಲಿ ಮಾಡಬೇಕು ಅಂತಾ ಸರ್ಕಾರ ನಿರ್ಧರಿಸುತ್ತೆ: ಈಶ್ವರ್ ಖಂಡ್ರೆ

    ಬೀದರ್: ವಿಷ್ಣುವರ್ಧನ್ ಓರ್ವ ಮೇರು ನಟ. ಹೀಗಾಗಿ ಅವರ ಸಮಾಧಿ ಎಲ್ಲಿ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ನಿಯಮ, ಕಾಯ್ದೆ, ಕಾನೂನುಗಳ ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ನಟ ವಿಷ್ಣುವರ್ಧನ್ ಸಮಾಧಿ ಎಲ್ಲಿ, ಯಾವ ರೀತಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡುತ್ತಾರೆ ಎಂದರು.ಇದನ್ನೂ ಓದಿ: ಬಾನು ಮುಷ್ತಾಕ್ ದೇವಿ ಪೂಜೆ ಮಾಡಿದ್ರೆ ಫತ್ವಾ ಇನ್‌ಸ್ಟಿಟ್ಯೂಷನ್‌ ಅನುಮತಿ ಪಡೆಯಬೇಕು:ಮಕ್ಸೂದ್ ಇಮ್ರಾನ್

    ನಮ್ಮ ಅಧಿಕಾರಿಗಳು ಡಿಸಿಗೆ ಪತ್ರ ಬರೆದಿದ್ದಾರೆ, ಇದು ರೋಟಿನ್ ಕೆಲಸವಾಗಿದ್ದು, ಪ್ರಗತಿ ಪರಿಶೀಲನೆ ಮಾಡುವಾಗ ಎಲ್ಲಾ ವಿಷಯಗಳು ಚರ್ಚೆಗೆ ಬರುತ್ತವೆ. ಸಮಯ ತಕ್ಕಂತೆ ನಾನು ಸೂಚನೆ ಹಾಗೂ ಆದೇಶಗಳನ್ನು ಕೊಡುತ್ತಿದ್ದು, ಬೆಂಗಳೂರಿಗೆ ಹೋಗಿ ವಿಷ್ಣು ಸಮಾಧಿ ಜಾಗದ ವಿವಾದದ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

    ಯಾವುದು ಅರಣ್ಯ ಭೂಮಿ ಅದು ಉಳಿದೇ ಉಳಿಯುತ್ತದೆ. HMT ಜಾಗ ಅಂತ ಯಾರಿಗೆ ಗೊತ್ತಿತ್ತಾ? ನನ್ನ ಗಮಕ್ಕೆ ಬಂದ ತಕ್ಷಣ ನಾನು ವಾಪಸ್ ಪಡೆದಿದ್ದೇನೆ ಎಂದು ತಿಳಿಸಿದರು.ಇದನ್ನೂ ಓದಿ: ಇಲಿ ಗಣೇಶನ ವಾಹನವಾಗಿದ್ದು ಹೇಗೆ?

  • ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

    ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

    ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಔರಾದ್ ತಾಲೂಕಿನ ಎಕಂಬಾ ಗ್ರಾಮದಲ್ಲಿರುವ ಕೆರೆ ಹೊಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

    ಗ್ರಾಮದ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಚಿಟ್ಟವಾಡಿ ಬಳಿ ರಸ್ತೆಯ ಮೇಲೆ ಮೊಣಕಾಲುದ್ದ ನೀರು ನಿಂತಿವೆ. ಬೀದರ್‌ನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೀದರ್‌ನಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಮಳೆ ನೀರು ಮನೆಗೆ ನುಗ್ಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರುಪಾಲಾಗಿದೆ. ಯಾದಗಿರಿಯಲ್ಲಿ ನೀರಿನಲ್ಲಿ ಸಿಲುಕಿದ್ದ ಹಸುವೊಂದನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಹಿನ್ನಲೆ ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೆ ಜಿಲ್ಲಾಡಳಿತ ರಜೆಘೋಷಿಸಿದೆ.

    ಉಡುಪಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಹೊನ್ನಾವರದ ಗೇರುಸೊಪ್ಪ ಹಾಗೂ ಲಿಂಗನಮಕ್ಕಿ ಆಣೆಕಟ್ಟಿನಿಂದ ನೀರು ಬಿಡುಗಡೆ ಮಾಡಲಾಗಿದೆ.

    ಗೇರುಸೊಪ್ಪ ಆಣೆಕಟ್ಟಿನಿಂದ 13,192 ಕ್ಯೂಸೆಕ್, ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜೋಗ ಜಲಪಾತ ಕಣ್ಮನ ಸೆಳೀತಿದೆ.

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  (IMD) ಮುನ್ಸೂಚನೆ ನೀಡಿದೆ.

    ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

    ಬೀದರ್ ಜಿಲ್ಲೆಗೆ ಮುಂದಿನ 3 ದಿನ ಯೆಲ್ಲೋ ಅಲರ್ಟ್:
    ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇಂದು ಕೂಡು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಬ್ಬರದ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಜಮೀನುಗಳು ಜಲಾವೃತಗೊಂಡು, ರಾಶಿಗೆ ಬಂದಿದ್ದ ಬೆಳೆ ಹಾಳಾಗುವ ಭೀತಿಯಲ್ಲಿ ಅನ್ನದಾತರು ಪರದಾಡುವಂತಾಗಿದೆ.ಇದನ್ನೂ ಓದಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ನನಗೂ ಬೈರತಿ ಬಸವರಾಜ್‌ಗೂ ಸಂಬಂಧವಿಲ್ಲ ಎಂದ ಎ1 ಜಗ್ಗ

  • ಗಡಿಜಿಲ್ಲೆ ಬೀದರ್‌ನಲ್ಲಿ ನಿರಂತರ ಮಳೆ – ನೂರಾರು ಎಕರೆ ಬೆಳೆ ನೀರುಪಾಲು

    ಗಡಿಜಿಲ್ಲೆ ಬೀದರ್‌ನಲ್ಲಿ ನಿರಂತರ ಮಳೆ – ನೂರಾರು ಎಕರೆ ಬೆಳೆ ನೀರುಪಾಲು

    ಬೀದರ್: ಕಳೆದ ಕೆಲ ದಿನಗಳಿಂದ ಗಡಿಜಿಲ್ಲೆ ಬೀದರ್‌ನಲ್ಲಿ (Bidar) ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆ ನೀರುಪಾಲಾಗಿದೆ.

    ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು, ತೊಗರಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.ಇದನ್ನೂ ಓದಿ:ಬಿಹಾರ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ

    ಜಮೀನಿನಲ್ಲಿ 3 ರಿಂದ 4 ಅಡಿ ನೀರು ನಿಂತಿದ್ದು, ಇಡೀ ಜಮೀನು ಅಕ್ಷರಶಃ ಕೆರೆಯಂತಾಗಿವೆ. ಪರಿಣಾಮ ನೀರಿನಲ್ಲಿ ಮುಳುಗಡೆಯಾದ ಬೆಳೆಗಳು ಕೊಳೆತು ಹೋಗಿವೆ. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿತ್ತು. ಈವರೆಗೂ ಮಳೆ ಕಡಿಮೆಯಾಗದೇ ಜಿಲ್ಲೆಯ ಜನರು ಪರದಾಡುವಂತಾಗಿದೆ.

    ಸಾಲ ಮಾಡಿ, ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಬಿತ್ತನೆ ಮಾಡಿದ್ದ ಬೆಳೆ, ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಇದರಿಂದ ರೈತರು ಕಣ್ಣೀರು ಹಾಕುತ್ತಿದ್ದು, ಯಾವ ಶಾಸಕರು, ಅಧಿಕಾರಿಗಳು ನಮಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಇನ್ಶೂರೆನ್ಸ್ ಕಟ್ಟಿದ್ರು ಯಾವುದೇ ಪ್ರಯೋಜನವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ – ಆಸ್ಪತ್ರೆಗೆ ಮಧು ಬಂಗಾರಪ್ಪ ಭೇಟಿ

  • ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ದುರಂತ ಅಂತ್ಯ

    ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ದುರಂತ ಅಂತ್ಯ

    ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ.

    ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಮೃತರು.ಇದನ್ನೂ ಓದಿ:  1+ 1 = 3 ಎಂದರು ನಟಿ ಪರಿಣಿತಿ ಚೋಪ್ರಾ

    ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಹಾಲಿನ ಗೂಡ್ಸ್ ಗಾಡಿ ಟಿವಿಎಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಅಂಗವಿಕಲರ ಬಗ್ಗೆ ತಮಾಷೆ – ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳಿಗೆ ಸುಪ್ರೀಂ ತರಾಟೆ

  • ಬೀದರ್ `ಕೈ’ ನಾಯಕರಿಂದ ಖಂಡ್ರೆ ವಿರುದ್ಧ ಸಿಎಂ, ಡಿಸಿಎಂಗೆ ದೂರು

    ಬೀದರ್ `ಕೈ’ ನಾಯಕರಿಂದ ಖಂಡ್ರೆ ವಿರುದ್ಧ ಸಿಎಂ, ಡಿಸಿಎಂಗೆ ದೂರು

    ಬೆಂಗಳೂರು/ಬೀದರ್: ಬಿಜೆಪಿ ನಾಯಕರೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಬೀದರ್ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ.ಇದನ್ನೂ ಓದಿ: ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧ್ಯಕ್ಷ ಇಬ್ಬರನ್ನು ಬದಲಿಸಿ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮ್ನಾಬಾದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದ್ದಾರೆ.

    ಜಿಲ್ಲೆಯಲ್ಲಿ ಬಿಜೆಪಿ ಮನಃಸ್ಥಿತಿಯ ಅಧಿಕಾರಿಗಳು ಇದ್ದಾರೆ, ಹೀಗಾಗಿ ಅವರನ್ನು ಬದಲಿಸಿ ಎಂದು ಮನವಿ ಮಾಡಿ, ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

  • ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು

    ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು

    ಬೀದರ್: ಅತ್ಯಾಚಾರ ಆರೋಪ ಹೊತ್ತು ಬಂಧನ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರನಿಗೆ ಹೈಕೋರ್ಟ್ (High Court) ಜಾಮೀನು ಮಂಜೂರು ಮಾಡಿದೆ.

    ಬೀದರ್ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪ್ರತೀಕ್ ಚೌಹಾಣ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ವಾದ-ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, 2 ಲಕ್ಷ ರೂ. ಬಾಂಡ್ ಶ್ಯೂರಿಟಿ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಜೊತೆಗೆ ಪೊಲೀಸರು ಪ್ರಭು ಚೌಹಾಣ್ ಪುತ್ರನನ್ನು ಬಂಧನ ಮಾಡುವಂತಿಲ್ಲ ಎಂದು ಸೂಚಿಸಿದೆ.ಇದನ್ನೂ ಓದಿ: ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

    ಇನ್ನೂ ಈಗಾಗಲೇ ಬೀದರ್‌ನ ಮಹಿಳಾ ಠಾಣೆಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಅತ್ಯಾಚಾರ ಕೇಸ್ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

    ಬಿಜೆಪಿ ಶಾಸಕರ ಪುತ್ರನ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಕೇಸ್ ದಾಖಲಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.ಇದನ್ನೂ ಓದಿ: ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ

  • ಬೀದರ್‌ನಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ – ಇತ್ತ ಬ್ರಿಮ್ಸ್‌ನಲ್ಲಿ ಫ್ರೀ ಇಂಜೆಕ್ಷನ್ ಕೊಡದೇ ದೋಖಾ

    ಬೀದರ್‌ನಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ – ಇತ್ತ ಬ್ರಿಮ್ಸ್‌ನಲ್ಲಿ ಫ್ರೀ ಇಂಜೆಕ್ಷನ್ ಕೊಡದೇ ದೋಖಾ

    ಬೀದರ್: ಗಡಿಜಿಲ್ಲೆ ಬೀದರ್‌ನಲ್ಲಿ (Bidar) ಬೀದಿ ಹಾಗೂ ಹುಚ್ಚು ನಾಯಿಗಳ ಹಾವಳಿ ಮಿತಿಮೀರಿದೆ. ಇದರಿಂದ ಮಕ್ಕಳು, ಜನರು ಮನೆಯಿಂದ ಹೊರಬರಲು ಭಯ ಬೀಳುತ್ತಿದ್ದಾರೆ. ಆದರೆ ಇತ್ತ ಬ್ರಿಮ್ಸ್‌ನಲ್ಲಿ ಉಚಿತ ರೇಬಿಸ್ ಇಂಜೆಕ್ಷನ್ (Rabies Injection) ನೀಡದೇ ವೈದ್ಯರು ಜನರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಕಳೆದ ಕೆಲವು ದಿನಗಳಲ್ಲೇ ಮಕ್ಕಳು ಹಾಗೂ ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿವೆ. ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮನ್ನಾಎಖೆಳ್ಳಿ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಹತ್ತಾರು ಮಕ್ಕಳಿಗೆ ಬೀದಿ ನಾಯಿಗಳು, ಮುಖ, ಕೈ, ಕಾಲು, ಬೆನ್ನು ಸೇರಿದಂತೆ ಇಡೀ ದೇಹವೇ ರಕ್ತ ಮಯವಾಗುವಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಸದ್ಯ ಮಕ್ಕಳಿಗೆ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನುಳಿದ ಮಕ್ಕಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜೊತೆಗೆ ಬೀದರ್ ನಗರದ ಮೈಲೂರಿನ ಐದಾರು ಜನರಿಗೆ ಬೀದಿ ನಾಯಿಗಳು ಗಂಭೀರವಾಗಿ ಕಚ್ಚಿ ಗಾಯಗೊಳಿಸಿವೆ. ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ನಮ್ಮ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳಿಸಲು ನಮಗೆ ಭಯವಾಗುತ್ತಿದೆ. ಅಲ್ಲದೇ ಬ್ರಿಮ್ಸ್‌ಗೆ ಬಂದ್ರೆ ರೇಬಿಸ್ ಇಂಜೆಕ್ಷನ್ ನೀಡ್ತಿಲ್ಲ. ನಾವೇ 2 ಸಾವಿರ ರೂ. ಖರ್ಚು ಮಾಡಿ ಹೊರಗಡೆಯಿಂದ ತಂದು ಕೊಟ್ಟಿದ್ದೇವೆ ಎಂದು ಮಗುವಿನ ತಾಯಿಯೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.ಇದನ್ನೂ ಓದಿ: ದೆಹಲಿಯಲ್ಲಿ ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳಕ್ಕೆ ಬ್ರೇಕ್‌ – ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರೀ ದಂಡ!

    ಇದೊಂದು ಕಡೆಯಾದ್ರೆ, ಮತ್ತೊಂದು ಕಡೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಉಚಿತವಾಗಿ ನೀಡಬೇಕಿದ್ದ ರೇಬಿಸ್ ಇಂಜೆಕ್ಷನ್ ಕೊಡದೇ ಜನ್ರಿಗೆ ವಂಚಿಸುತ್ತಿದ್ದಾರೆ. ಮನ್ನಾಎಖೆಳ್ಳಿ ಗ್ರಾಮದಲ್ಲಿ ಓರ್ವ ಮಗುವಿಗೆ ಹುಚ್ಚು ನಾಯಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿತ್ತು. ಈ ವೇಳೆ ಬ್ರಿಮ್ಸ್ ವೈದ್ಯಾಧಿಕಾರಿಗಳು ಮಗುವಿಗೆ ತುರ್ತು ರೇಬಿಸ್ ಇಂಜೆಕ್ಷನ್ ಕೊಡಬೇಕಿತ್ತು. ಆದರೆ ನಮ್ಮ ಬಳಿ ಇಲ್ಲಾ ಹೊರಗಡೆಯಿಂದ ತನ್ನಿ ಎಂದು ಬೇರೆ ಕಡೆಯಿಂದ ತರಿಸಿದ್ದಾರೆ.

    ಇನ್ನು ಓಲ್ಡ್ ಸಿಟಿ, ಚಿದ್ರಿ, ಮೈಲೂರು, ಗುಂಪಾ ಸೇರಿದಂತೆ ಬೀದರ್ ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ರೂ, ನಗರಸಭೆ ಮಾತ್ರ ಕೈಕಟ್ಟಿ ಕುಳಿತಿದೆ. ಬೀದಿ ನಾಯಿಗಳನ್ನು ಹಿಡಿಯಲು ಪ್ರತಿ ವರ್ಷ 10 ರಿಂದ 20 ಲಕ್ಷ ರೂ. ಖರ್ಚು ಮಾಡ್ತಾರೆ. ಆದ್ರೆ ಈ ಬಾರಿ ಬೀದಿ ನಾಯಿಗಳ ಹಾವಳಿಗೆ ಮಾತ್ರ ಕಡಿವಾಣ ಬಿದ್ದಿಲ್ಲ. ನಾಲ್ಕು ನಾಯಿಗಳನ್ನು ಹಿಡಿದಂತೆ ಮಾಡಿ ಆಮೇಲೆ ಡಾಗ್ ಕ್ಯಾಚರ್ಸ್ ನಾಪತ್ತೆಯಾಗುತ್ತಿದ್ದಾರೆ. ನಗರಸಭೆಯ ಅಧಿಕಾರಿಗಳು ಇದನ್ನ ಗಮನಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ.

    ದೆಹಲಿಯಲ್ಲಿ ಬೀದಿ ನಾಯಿ ಹಾವಳಿಗೆ ಶೀಘ್ರವೇ ಬ್ರೇಕ್ ಹಾಕಿ ಎಂದು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಅದೇ ರೀತಿ ಚಾಟಿ ಬೀಸಿದ್ರೆ ಮಾತ್ರ ಬೀದರ್‌ನಲ್ಲೂ ಅಧಿಕಾರಿಗಳು ಎಚ್ಚರಗೊಳ್ತಾರೆ. ಈ ಮೂಲಕ ಬ್ರಿಮ್ಸ್‌ನಲ್ಲಿ ರೇಬಿಸ್ ಚುಚ್ಚುಮದ್ದು ಕಳ್ಳಾಟಕ್ಕೆ ಬ್ರೇಕ್ ಹಾಕುವ ಜೊತೆಗೆ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.ಇದನ್ನೂ ಓದಿ: ವಿದೇಶಗಳಲ್ಲೂ ಪೊಲೀಸ್ ಸ್ಟೇಷನ್‌ – 53 ದೇಶಗಳಲ್ಲಿ ಚೀನಾದ ಕುತಂತ್ರ!