Tag: bidar

  • ಲಾಕ್‍ಡೌನ್ ನಡುವೆ ಜನ್‍ಧನ್ ಹಣಕ್ಕಾಗಿ ಮುಗಿಬಿದ್ದ ನೂರಾರು ಮಹಿಳೆಯರು

    ಲಾಕ್‍ಡೌನ್ ನಡುವೆ ಜನ್‍ಧನ್ ಹಣಕ್ಕಾಗಿ ಮುಗಿಬಿದ್ದ ನೂರಾರು ಮಹಿಳೆಯರು

    – ಎಸ್‍ಪಿ ಮನವಿಗೂ ಡೋಂಟ್ ಕೇರ್

    ಬೀದರ್: ಜನರಿಗೆ ಎಷ್ಟೇ ಬುದ್ಧಿ ಹೇಳಿದರೂ ಕೇಳುವ ಸ್ಥಿತಿಯಲ್ಲಿ ಇಲ್ಲ. ಅಕೌಂಟ್‍ಗೆ ಜಮೆಯಾಗಿರುವ ಹಣವನ್ನು ತೆಗೆದುಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರಣ ಬೀದರ್ ನಲ್ಲಿ ನೂಕು ನುಗ್ಗಲು ಉಂಟಾಗಿದೆ.

    ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಮಹಿಳೆಯರ ಜನ್‍ಧನ್ ಅಕೌಂಟ್‍ಗೆ ಹಣ ಹಾಕಿದ್ದಾರೆ. ಆದರೆ ಗಡಿ ಜಿಲ್ಲೆ ಬೀದರ್ ನಲ್ಲಿ ಈ ಹಣವನ್ನು ತೆಗೆದುಕೊಳ್ಳಲು ವೇಳೆ ನೂರಾರು ಮಹಿಳೆಯರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಎಲ್ಲಾ ಮಹಿಳೆಯರು ಗುಂಪು ಗುಂಪಾಗಿ ಬ್ಯಾಂಕ್ ಮುಂದೆ ಜಮಾಯಿಸಿದ್ದರು.

    ಬೀದರ್‍ನ ಬ್ರೀಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿರುವ ಎಸ್.ಬಿ.ಐ ಬ್ಯಾಂಕ್‍ನ ಗ್ರಾಹಕರ ಸೇವಾ ಕೇಂದ್ರದಲ್ಲಿ ಈ ದೃಶ್ಯಗಳು ಕಂಡು ಬಂದಿವೆ. ಸ್ವತಃ ಎಸ್ಪಿ ನಾಗೇಶ್ ಸ್ಥಳಕ್ಕೆ ಬಂದು ಮಹಿಳೆಯರಲ್ಲಿ ಮನವಿ ಮಾಡಿದರೂ ಮಹಿಳೆಯರು ಮಾತ್ರ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಿಲ್ಲ.

    ಬೀದರ್ ನಲ್ಲಿ ಈಗಾಗಲೇ 10 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಹತ್ತು ಪ್ರಕರಣಗಳ ಪೈಕಿ ಓಲ್ಡ್ ಸಿಟಿಯಲ್ಲಿ ಬರೋಬ್ಬರಿ 8 ಪ್ರಕರಣಗಳು ಪತ್ತೆಯಾಗಿವೆ. ಜನ್‍ಧನ್ ಹಣ ತೆಗೆದುಕೊಳ್ಳಲು ಬಂದಿರುವ ಮಹಿಳೆಯರು ಬಹುತೇಕ ಓಲ್ಡ್ ಸಿಟಿಯ ನಿವಾಸಿಗಳಾಗಿದ್ದಾರೆ.

  • ನಾವು ಹೇಳಿದ ಸೌಲಭ್ಯ ಕೊಡ್ಲಿಲ್ಲ ಅಂದ್ರೆ ನಿಮ್ಗೆ ಕೊರೊನಾ ಹಬ್ಬಿಸ್ತೀವಿ –  ಬ್ರಿಮ್ಸ್ ಸಿಬ್ಬಂದಿಗೆ ತಬ್ಲಿಘಿಗಳ ಬೆದರಿಕೆ

    ನಾವು ಹೇಳಿದ ಸೌಲಭ್ಯ ಕೊಡ್ಲಿಲ್ಲ ಅಂದ್ರೆ ನಿಮ್ಗೆ ಕೊರೊನಾ ಹಬ್ಬಿಸ್ತೀವಿ –  ಬ್ರಿಮ್ಸ್ ಸಿಬ್ಬಂದಿಗೆ ತಬ್ಲಿಘಿಗಳ ಬೆದರಿಕೆ

    ಬೀದರ್: ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಗಿಯಾಗಿದ್ದವರು ಉತ್ತರ ಪ್ರದೇಶದ ಐಸೋಲೇಷನ್ ವಾರ್ಡ್‍ಗಳಲ್ಲಿ ಉದ್ಧಟತನ ತೋರಿದ್ದಂತೆಯೇ ರಾಜ್ಯದಲ್ಲೂ ನಡೆದುಕೊಳ್ಳುತ್ತಿದ್ದಾರೆ. ಬೀದರಿನ ಬ್ರೀಮ್ಸ್ ಐಸೋಲೇಷನ್ ವಾರ್ಡ್‍ನಲ್ಲಿರುವ 10 ಜನ ತಬ್ಲಿಘಿ ಸೋಂಕಿತರು, ಮನೆ ಊಟ-ಹೈಫೈ ಕೊಠಡಿ ಬೇಕು ಅಂತ ಕಿರಿಕಿರಿ ಮಾಡುತ್ತಿದ್ದಾರೆ.
    ನಾವು ಹೇಳುವ ಸೌಲಭ್ಯ ಕೊಡ್ಲಿಲ್ಲ ಅಂದ್ರೆ ವೈದ್ಯರು, ಸಿಬ್ಬಂದಿಗೆ ಕೊರೊನಾ ಹಬ್ಬಿಸುತ್ತೇವೆ ಎಂದು ಬೆದರಿಕೆ ಹಾಕ್ತಿದ್ದಾರೆ. ಈ ಜಮಾತ್ ದೂರ್ತರ ವರ್ತನೆಯಿಂದ ವೈದ್ಯ-ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರೆ.
    ಈ ಬಗ್ಗೆ, ಬೀದರ್ ಆರೋಗ್ಯಾಧಿಕಾರಿ ವಿ.ಜಿ. ರೆಡ್ಡಿ ಅವರು ಪಬ್ಲಿಕ್‍ಟಿವಿ ಜೊತೆ ಮಾತನಾಡಿ ಸೋಂಕು ಹರಡುವ ಸಾಧ್ಯತೆಯಿಂದಾಗಿ ಮನೆಯಿಂದ ಊಟ ನೀಡಲು ಸಾಧ್ಯವಿಲ್ಲ. ಎಲ್ಲರಿಗೂ ಆಸ್ಪತ್ರೆಯ ಊಟವನ್ನೇ ನೀಡಲಾಗುತ್ತಿದೆ ಎಂದು ಹೇಳಿದ್ದೇವೆ. ಅಷ್ಟೇ ಅಲ್ಲದೇ ನಮ್ಮ ವೈದ್ಯಕೀಯ ಸಿಬ್ಬಂದಿಗೂ ತಾಳ್ಮೆಯಿಂದ ವರ್ತಿಸುವಂತೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ:  ಮತ್ತೆ ತಬ್ಲಿಘಿಗಳ ಹುಚ್ಚಾಟ – ಗಾಜಿಯಾಬಾದ್ ಬಳಿಕ ಕಾನ್ಪುರ, ಲಕ್ನೋದಿಂದ ದೂರು

  • ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ

    ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ

    ಬೀದರ್: ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೆಚ್.ಆರ್.ಮಹಾದೇವ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕೊರೊನಾ ಮಹಾಮಾರಿಗೆ ಗಡಿ ಜಿಲ್ಲೆ ಬೀದರ್ ತತ್ತರಿಸಿ ಹೋಗಿದೆ. ಜಮಾತ್ ಧಾರ್ಮಿಕ ಕಾರ್ಯಕ್ರಮ ಕಂಟವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿ, ಜಮಾತ್ ಗೆ ಹೋಗಿದ್ದ ಬೀದರ್ ಮೂಲದ 28 ಜನರಲ್ಲಿ 10 ಜನರಿಗೆ ಈಗಾಗಾಲೇ ಕೊರೊನಾ ಸೋಂಕು ಧೃಡ ಪಟ್ಟಿದೆ. ಅನುಮಾವಿದ್ದ ಕಾರಣ ಇನ್ನೊಬ್ಬರ ವರದಿ ಬಾಕಿಯಿದೆ. ಉಳಿದ 17 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ ಮಾಹಿತಿ ನೀಡಿದ್ದಾರೆ.

    ಸೋಂಕಿತರ ಜೊತೆ ಸಂಪರ್ಕದಲ್ಲಿದ್ದ 82 ಜನರನ್ನು ಐಸೋಲೇಷನ್ ವಾಡ್9 ನಲ್ಲಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿರುವವರನ್ನ ಪತ್ತೆ ಹಚ್ಚಲು ಮೂರು ಪ್ರದೇಶದಿಂದ ಒಟ್ಟು 120 ಜನರ ಟೀಂ ಮಾಡಲಾಗಿದೆ. ಈ ಟೀಂ ಪ್ರತಿ ಮನೆಗೆ ಹೋಗಿ ಮಾಹಿತಿಯನ್ನ ಕಲೆ ಹಾಕುತ್ತಿದೆ. ಜಿಲ್ಲೆಯ ಜನರು ಹೆಚ್ಚು ಆತಂಕಪಡುವ ಅಗತ್ಯವಿಲ್ಲ ಎಂದು ಬೀದರ್ ನಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

  • ಜಮಾತ್‍ನಿಂದ ಮರಳಿದ್ದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಕ್ಕೆ ದಾಖಲೆ ಇಲ್ಲ: ಬೀದರ್ ಡಿಸಿ

    ಜಮಾತ್‍ನಿಂದ ಮರಳಿದ್ದ ವೃದ್ಧ ಕೊರೊನಾದಿಂದ ಸಾವನ್ನಪ್ಪಿದ್ದಕ್ಕೆ ದಾಖಲೆ ಇಲ್ಲ: ಬೀದರ್ ಡಿಸಿ

    ಬೀದರ್: ಜಮಾತ್‍ನಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದ ಬೀದರ್ ಮೂಲದ ವೃದ್ಧ ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಬೀದರ್ ಡಿಸಿ ಎಚ್.ಆರ್ ಮಹಾದೇವ್ ಅವರು, ಕೊರೊನಾ ಸೋಂಕು ತಗುಲಿ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲು ಯಾವುದೇ ದಾಖಲೆಗಳಿಲ್ಲ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಅವರಿಗೆ ಎರಡು ಬಾರಿ ನಾವು ಟೆಸ್ಟ್ ಮಾಡಿದ್ದೇವೆ. ಎರಡು ಬಾರಿಯೂ ನೆಗೆಟಿವ್ ಬಂದಿದೆ. ಅವರು ಕೊರೊನಾ ಪಾಸಿಟಿವ್‍ಯಿಂದ ಸಾವನ್ನಪ್ಪಿದ್ದಾರೆ ಎಂಬುದಕ್ಕೆ ನಮ್ಮಲ್ಲಿ ಯಾವುದೇ ದಾಖಲಾತಿ ಇಲ್ಲ. 28 ಜನರ ಮಾದರಿ ತಪಾಸಣೆ ಬಳಿಕವೇ 11 ಮಂದಿಗೆ ಕೊರೊನಾ ಪಾಸಿಟಿವ್ ಇರುವ ವರದಿ ಬಂದಿದೆ ಎಂದು ಮಾಹಿತಿ ನೀಡಿದರು.

    ಸೋಂಕಿತರ ಸಂರ್ಪಕದಲ್ಲಿರುವವರ ಮಾಹಿತಿ ಪಡೆಯಲಾಗುತ್ತಿದೆ. ಸೋಂಕಿತರು ಎಲ್ಲೆಲ್ಲಿ ಓಡಾಡಿದ್ದಾರೆ ಅದರ ಮಾಹಿತಿ ಕೂಡಾ ಪಡೆಯಲಾಗುತ್ತಿದೆ. ಸೋಂಕಿತರ ಸಂಪರ್ಕದಲ್ಲಿ ಇರುವವರಲ್ಲಿ ಸೋಂಕಿತ ಲಕ್ಷಣಗಳು ಕಂಡು ಬಂದಿದೆಯಾ ಎಂದು ನಮ್ಮ ತಂಡ ನಿಗಾ ವಹಿಸುತ್ತಿದೆ. ಇನ್ನು ಎರಡು ದಿನಗಳಲ್ಲಿ ಎಲ್ಲರನ್ನು ಗುರುತಿಸುವ ಕೆಲಸ ಮಾಡುತ್ತೇವೆ. ಲಕ್ಷಣಗಳು ಕಂಡು ಬಂದರೆ ಅವರ ರಕ್ತ ಹಾಗೂ ಗಂಟಲಿನ ಧ್ರವದ ಮಾದರಿಯನ್ನ ಪ್ರಯೋಗಾಲಯಕ್ಕೆ ರವಾನಿಸುತ್ತೇವೆ.

    ಬಸವಕಲ್ಯಾಣ, ಮನ್ನಾಏಖೇಳ್ಳಿ ಹಾಗೂ ಬೀದರ್ ನ ಓಲ್ಡ್ ಸಿಟಿಯನ್ನ 28 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲಾಗಿದೆ. ಲಾಕ್‍ಡೌನ್ ಮತ್ತಷ್ಟು ಬೀಗಿ ಮಾಡುತ್ತೇವೆ. ಆದರೆ ಅಗತ್ಯ ವಸ್ತುಗಳನ್ನ ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿ ಹೇಳಿದರು.

  • ಜಮಾತ್‍ನಿಂದ ಬಂದಿದ್ದ ಬೀದರ್ ವೃದ್ಧ ಸಾವು- ರಾತ್ರೋ ರಾತ್ರಿ ಅಂತ್ಯಕ್ರಿಯೆ

    ಜಮಾತ್‍ನಿಂದ ಬಂದಿದ್ದ ಬೀದರ್ ವೃದ್ಧ ಸಾವು- ರಾತ್ರೋ ರಾತ್ರಿ ಅಂತ್ಯಕ್ರಿಯೆ

    ಬೀದರ್: ಹೈದರಾಬಾದ್‍ನಲ್ಲಿ ಬೀದರ್ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ರಾತ್ರೋ ರಾತ್ರಿ ಅಂತ್ಯಕ್ರಿಯೆ ನಡೆಸಲಾಗಿದೆ. 62 ವಯಸ್ಸಿನ ಬೀದರ್ ಮೂಲದ ವ್ಯಕ್ತಿ ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಮೃತ ವ್ಯಕ್ತಿ ದೆಹಲಿ ಜಮಾತ್‍ನಿಂದ ಬೀದರ್‍ಗೆ ವಾಪಸ್ಸಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮೊದಲ ಎರಡು ವರದಿಗಳು ನೆಗೆಟಿವ್ ಬಂದಿದ್ದರಿಂದ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಮನೆಯಲ್ಲಿ ಮತ್ತೆ ವ್ಯಕ್ತಿಯ ಆರೋಗ್ಯದಲ್ಲಿ ಏರುಪೇರಾದಾಗ ಕುಟುಂಬಸ್ಥರು ವ್ಯಕ್ತಿಯನ್ನು ಹೈದರಾಬಾದ್‍ಗೆ ಕರೆದೊಯ್ದಿದ್ದರು. ಅಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ.

    ಹೀಗಾಗಿ ಮೃತದೇಹವನ್ನು ಮತ್ತೆ ಬೀದರ್ ಗೆ ರವಾನಿಸಿದ್ದು, ಕೊರೊನಾ ನಿಬಂಧನೆಯಂತೆ ಅಂತ್ಯಕ್ರಿಯೆ ನೆರವೇರಸಲಾಗಿದೆ. ಅಂತ್ಯಕ್ರಿಯೆಯ ವೇಳೆ 15 ಮಾತ್ರ ಭಾಗಿಯಾಗಿದ್ದು, ಮೂರನೇ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ.

  • ಬೀದರ್ ಸಂಪೂರ್ಣ ಲಾಕ್‍ಡೌನ್- 11 ಸೋಂಕಿತರು ಯಾರು? ಎಲ್ಲಿಯವರು?

    ಬೀದರ್ ಸಂಪೂರ್ಣ ಲಾಕ್‍ಡೌನ್- 11 ಸೋಂಕಿತರು ಯಾರು? ಎಲ್ಲಿಯವರು?

    – 17 ಶಂಕಿತರ ವರದಿ ಕಾಯ್ತಿರೋ ಜಿಲ್ಲಾಡಳಿತ

    ಬೀದರ್: ಜಿಲ್ಲೆಯ 11 ಜನರಿಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಜಿಲ್ಲೆಯನ್ನ ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗಿದೆ. ನಗರದ ರಸ್ತೆಗಳಲ್ಲಿ ಜನರ ಓಡಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಈ 11 ಜನರು ದೆಹಲಿಯ ನಿಜಾಮುದ್ದೀನ್ ಮರ್ಕಜ್‍ಗೆ ತೆರಳಿದ್ದು, ಇನ್ನು 17 ಮಂದಿಯ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ.

    ದೆಹಲಿಯ ಜಮಾತ್ ಗೆ ಹೋಗಿ ಬಂದವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಎಲ್ಲರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇಂದು ಬೆಳಗಿನ ಜಾವ ಬಂದ ವರದಿಯಲ್ಲಿ ಒಟ್ಟು 11 ಜನರಲ್ಲಿ ಸೋಂಕು ಇರೋದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್ ಮಹದೇವ್ ತಿಳಿಸಿದ್ದಾರೆ.

    ಈ 11 ಜನರ ಪೈಕಿ 9 ಜನರು ನಗರದ ಓಲ್ಡ್ ಸಿಟಿ ನಿವಾಸಿಗಳಾಗಿದ್ದು, ಒಬ್ಬರು ಬಸವಕಲ್ಯಾಣ, ಇನ್ನೊಬ್ಬರು ಚಿಟಗುಪ್ಪ ತಾಲೂಕಿನ ಮನ್ನಾಖೇಳ್ಳಿ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ. ಈ ಸೋಂಕಿತರು ಸುತ್ತಾಡಿದ ಕಡೆ ಹಾಗೂ ಸಂಪರ್ಕಿಸಿರುವ ಜನರನ್ನು ಜಿಲ್ಲಾಡಳಿತ ಶೋಧಿಸುತ್ತದೆ. ಅಲ್ಲದೆ ನಗರದ ಓಲ್ಡ್ ಸಿಟಿ 3 ಕಿ. ಮೀ. ವ್ಯಾಪ್ತಿಯಲ್ಲಿ ಬಂದೋಬಸ್ತ್ ಮಾಡಲಾಗಿದೆ.

  • ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್- 121ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

    ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಪಾಸಿಟಿವ್- 121ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

    ಬೀದರ್: ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

    ಬೀದರ್ ನಿಂದ ಒಟ್ಟು 27 ಜನರು ದೆಹಲಿ ನಿಜಾಮುದ್ದೀನ್ ಮರ್ಕಜ್‍ಗೆ ತೆರಳಿದ್ದರು. 27 ಜನರಲ್ಲಿ 11 ಮಂದಿಗೆ ಕೊರೊನಾ ತಗುಲಿದೆ ಎಂದು ಬೀದರ್ ಜಿಲ್ಲಾಧಿಕಾರಿ ಮಹದೇವ್ ಸ್ಪಷ್ಟಪಡಿಸಿದ್ದಾರೆ.

    ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮೌಲ್ವಿಗಳು ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಿದ್ದಾರೆ. ಪಬ್ಲಿಕ್ ಟಿವಿಗೆ ಲಭ್ಯವಾದ ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯದಿಂದ ದೆಹಲಿಗೆ ಹೋಗಿ ಬಂದವರ ಸಂಖ್ಯೆ 430 ದಾಟುತ್ತದೆ. ದೆಹಲಿಗೆ ಹೋಗಿ ಬಂದವರಿಗೆ ಬಲೆ ಬೀಸಿರುವ ರಾಜ್ಯ ಸರ್ಕಾರ, ಇದುವರೆಗೆ 391 ಮಂದಿಯನ್ನು ಪತ್ತೆ ಹಚ್ಚಿದೆ. ಈ ಪೈಕಿ 200 ಮಂದಿಯನ್ನು ಆಸ್ಪತ್ರೆಗಳಲ್ಲಿ ಇರಿಸಿ ನಿಗಾ ವಹಿಸಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೇನ್ ಮಾಡಲಾಗಿದೆ. ಉಳಿದವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಬುಧವಾರ ತಿಳಿಸಿದ್ದರು.

  • ಲಾಕ್‍ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್

    ಲಾಕ್‍ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್

    ಬೀದರ್: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು 21 ದಿನಗಳ ಕಾಲ ಲಾಕ್‍ಡೌನ್ ಆಗಿದೆ. ಇದೀಗ ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದು ಓಡಾಡುತ್ತಿದ್ದವರ ಸುಮಾರು 213 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಮ್‍ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಆದೇಶ ಹೊರಡಿಸಲಾಗಿದೆ. ಆದರೆ ಕಲಂ 144 ಸಿಆರ್‌ಪಿಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ.

    ಕೊರೊನಾ ವೈರಸ್ ಹರಡದಂತೆ ತಡೆಯಲು ಸಾರ್ವಜನಿಕರು ಮನೆಯಲ್ಲಿಯೇ ಇರಬೇಕು. ಅವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಸುಮ್ಮನೇ ಅನಾವಶ್ಯಕವಾಗಿ ಹೊರಗೆ ಬಂದು ಓಡಾಡಬಾರದು ಎಂದು ಪೊಲೀಸರು ಆದೇಶ ನೀಡಿದ್ದರು. ಹೀಗಾಗಿ ಅನಾವಶ್ಯಕವಾಗಿ ಓಡಾಡಿದವರ 213 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಜರುಗಿಸಲಾಗಿದೆ.

    ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ಎಲ್.ನಾಗೇಶ್ ತಿಳಿಸಿದ್ದಾರೆ.

  • ತಾಲೂಕುಗಳಲ್ಲಿನ ಖಾಸಗಿ ಕ್ಲಿನಿಕ್‍ಗಳನ್ನು ತೆರೆದು ಚಿಕಿತ್ಸೆ ನೀಡಲು ಬೀದರ್ ಡಿಸಿ ಸೂಚನೆ

    ತಾಲೂಕುಗಳಲ್ಲಿನ ಖಾಸಗಿ ಕ್ಲಿನಿಕ್‍ಗಳನ್ನು ತೆರೆದು ಚಿಕಿತ್ಸೆ ನೀಡಲು ಬೀದರ್ ಡಿಸಿ ಸೂಚನೆ

    ಬೀದರ್: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕಗಳು ಮುಚ್ಚಿರುವುದಾಗಿ ತಿಳಿದು ಬಂದಿದ್ದು, ಕೂಡಲೇ ಎಲ್ಲಾ ಖಾಸಗಿ ಕ್ಲಿನಿಕ್‍ಗಳು ತೆರೆದು ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ ಚಿಕಿತ್ಸೆ ಒದಗಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಆರ್ ಮಹಾದೇವ್ ಅವರು ಡಿಎಚ್‍ಓ ಅವರಿಗೆ ಸೂಚಿಸಿದ್ದಾರೆ.

    ಇಂದು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ತಾಲೂಕಿನ ತಹಶೀಲ್ದಾರ್ ಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಡಿಸಿ ವಿಡಿಯೋ ಸಂವಾದ ನಡೆಸಿದರು. ಕೊರೊನಾ ವೈರಾಣು ತೀವ್ರ ಹರಡುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವ ನಿಟ್ಟಿನಲ್ಲಿ ಜನತೆಗೆ ಈಗ ಸಕಾಲಕ್ಕೆ ಚಿಕಿತ್ಸೆ ಕೊಡಬೇಕಿದೆ. ಹೀಗಿದ್ದರೂ ಖಾಸಗಿ ಕ್ಲಿನಿಕ್‍ಗಳು ಮುಚ್ಚಿದಲ್ಲಿ ಅಂತಹ ಕ್ಲಿನಿಕ್‍ಗಳ ಪರವಾನಿಗೆಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ವಿದೇಶ, ಹೊರ ರಾಜ್ಯಗಳಿಂದ ಬಂದು ಹೋಮ್ ಕ್ವಾರಂಟೈನ್ ನಲ್ಲಿ ಇರುವ ಜನರ ಬಗ್ಗೆ ಸರಿಯಾದ ರೀತಿಯಲ್ಲಿ ಗಮನ ಕೊಡಬೇಕು ಎಂದು ಎಲ್ಲಾ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಸಾಮಾನ್ಯ ರೋಗಿಗಳು ಬಂದರೂ ಕೂಡ ಅಂತರ ಕಾಯ್ದುಕೊಂಡು ಅವರಿಗೆ ತಪಾಸಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಎಲ್ಲಾ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

    ಈ ವೇಳೆ ಸಿಇಓ ಗ್ಯಾನೇಂದ್ರಕುಮಾರ್ ಗಂಗವಾರ, ಬೀದರ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ ರೆಡ್ಡಿ, ಬ್ರಿಮ್ಸ್ ನಿರ್ದೇಶಕರಾದ ಡಾ. ಶಿವಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶರಣಬಸಪ್ಪ ಕೋಟಪ್ಪಗೋಳ, ನಗರಸಭೆ ಪೌರಾಯುಕ್ತರಾದ ಬಸಪ್ಪ, ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ. ರತಿಕಾಂತ ಸ್ವಾಮಿ, ಇಂದುಮತಿ ಪಾಟೀಲ್, ಜಿಲ್ಲಾ ಕಣ್ಗಾವಲು ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ಕೃಷ್ಣಾರೆಡ್ಡಿ ಹಾಗೂ ಇತರರು ಉಪಸ್ಥಿತರಿದ್ದರು.

  • ಕುಡಿಯಲು ಮದ್ಯ ಸಿಗದೇ ನಾಲ್ವರು ಆತ್ಮಹತ್ಯೆ

    ಕುಡಿಯಲು ಮದ್ಯ ಸಿಗದೇ ನಾಲ್ವರು ಆತ್ಮಹತ್ಯೆ

    ಬೀದರ್/ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಭಾರತ ಸಂಪೂರ್ಣ ಲಾಕ್‍ಡೌನ್ ಆಗಿದ್ದು, ಹೀಗಾಗಿ ಅಬಕಾರಿ ಇಲಾಖೆ ಕೂಡ ಸಾರಾಯಿ ಬಂದ್ ಮಾಡಿರುವುದರಿಂದ ಕುಡುಕರು ಪರದಾಡುತ್ತಿದ್ದಾರೆ. ಅಲ್ಲದೇ ಕುಡಿಯಲು ಮದ್ಯ ಸಿಗದೇ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕುಡಿಯಲು ಮದ್ಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಬಾವಿಗೆ ಹಾರಿ ಹೋಟೆಲ್ ಕಾರ್ಮಿಕ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಭಾಲ್ಕಿ ಪಟ್ಟಣದ ಕೋಟೆಯ ಝರ ಬಾವಿಗೆ ಹಾರಿ 40 ವರ್ಷದ ಭಾಸ್ಕರ್ ನಸುಕಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂಲತ ಉಡುಪಿ ಜಿಲ್ಲೆಯ ಕುಂದಾಪೂರ ವ್ಯಕ್ತಿಯಾಗಿದ್ದು, ಸುಮಾರು ವರ್ಷಗಳಿಂದ ಬೀದರ್‌ನ ಭಾಲ್ಕಿಯಲ್ಲಿ ವಾಸವಾಗಿದ್ದನು.

    ಭಾಲ್ಕಿ ಪಟ್ಟಣದ ಉಡುಪಿ ಹೋಟೆಲ್‍ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದನು. ಸುದ್ದಿ ತಿಳಿದು ಭಾಲ್ಕಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ.

    ಇತ್ತ ದಕ್ಷಿಣ ಕನ್ನಡದಲ್ಲಿ ಮದ್ಯ ಸಿಗಲಿಲ್ಲ ಅಂತ ಎಣ್ಣೆ ಪ್ರಿಯರಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಡಬ ತಾಲೂಕಿನಲ್ಲಿ ಮದ್ಯ ದೊರೆಯದೇ ಬೇಸರದಿಂದ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಎರಡೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

    ಇನ್ನೂ ಹುಬ್ಬಳ್ಳಿ ಜಿಲ್ಲೆಯ ಹೊಸೂರಿನ ಗಣೇಶ ಪಾರ್ಕಿನಲ್ಲಿ ಧಾರವಾಡ ಮೂಲದ ಉಮೇಶ್ ಹಡಪದ (46) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜ ರಟಗಲ್ ಅವರ ನಿರ್ಮಾಣ ಹಂತದ ಮನೆಯ ವಾಚ್ ಮೆನ್ ಆಗಿ ಉಮೇಶ್ ಕೆಲಸ ಮಾಡುತ್ತಿದ್ದ. ಕಳೆದ ಐದು ದಿನದಿಂದ ಕುಡಿಯಲು ಮದ್ಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ನೇಣಿಗೆ ಶರಣಾಗಿದ್ದಾನೆ.

    ಕಳೆದ 15 ದಿನದ ಹಿಂದೆ ಉಮೇಶ್ ಕೆಲಸಕ್ಕೆ ಸೇರಿಕೊಂಡಿದ್ದನು ಎಂದು ತಿಳಿದು ಬಂದಿದೆ. ಮೂರು ವರ್ಷದಿಂದ ಕುಟುಂಬ ವರ್ಗದವರಿಂದ ಉಮೇಶ್ ದೂರ ಉಳಿದಿದ್ದ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.